A A A A A
Facebook Instagram Twitter
ಕನ್ನಡ ಬೈಬಲ್ (KNCL) 2016

ತಿಮೊಥೇಯನಿಗ ೧ ೫ಹಿರಿಯರನ್ನು ಗದರಿಸಬೇಡ; ಅವರನ್ನು ತಂದೆಯಂತೆ ಭಾವಿಸಿ ಗೌರವದಿಂದ ತಿಳುವಳಿಕೆ ನೀಡು. ಯುವಕರೊಡನೆ ಸೋದರಭಾವನೆಯಿಂದ ವರ್ತಿಸು.
ವೃದ್ಧೆಯರೊಡನೆ ಮಾತೃಭಾವನೆಯಿಂದ ನಡೆದುಕೋ. ಯುವತಿಯರನ್ನು ಅಕ್ಕತಂಗಿಯರೆಂದು ಪರಿಗಣಿಸಿ, ಪರಿಶುದ್ಧ ಭಾವನೆಯಿಂದ ನಡೆದುಕೋ.
ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು.
ವಿಧವೆಯಾದವಳಿಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ, ಆ ಮಕ್ಕಳು ಮೊತ್ತಮೊದಲು ತಮ್ಮ ಸ್ವಂತ ಕುಟುಂಬಕ್ಕೆ ಸಹಾಯಮಾಡಬೇಕಾದುದು ಅವರ ಧಾರ್ಮಿಕ ಕರ್ತವ್ಯವೆಂಬುದು ಅವರಿಗೆ ತಿಳಿದಿರಲಿ. ಹೀಗೆ ಅವರು ತಮ್ಮ ತಂದೆತಾಯಿಯರಿಗೆ ಪ್ರತ್ಯುಪಕಾರಮಾಡಿದಂತಾಗುತ್ತದೆ. ಅಲ್ಲದೆ, ಇದು ದೇವರ ದೃಷ್ಟಿಯಲ್ಲಿ ಮೆಚ್ಚುಗೆ ಪಡೆದುದು.
ದಿಕ್ಕಿಲ್ಲದೆ ಒಬ್ಬಂಟಿಗಳಾಗಿರುವ ವಿಧವೆ ದೇವರ ಮೇಲೆ ಭರವಸೆಯಿಟ್ಟು ಹಗಲಿರುಳು ಪ್ರಾರ್ಥನೆಗಳಲ್ಲೂ ವಿಜ್ಞಾಪನೆಗಳಲ್ಲೂ ನಿರತಳಾಗಿರುತ್ತಾಳೆ.
ವಿಲಾಸಿಯಾದ ವಿಧವೆಯಾದರೋ ಬದುಕಿದ್ದರೂ ಸತ್ತಂತೆಯೇ.
ವಿಧವೆಯರು ಯಾವ ದೋಷಾರೋಪಣೆಗೂ ಗುರಿಯಾಗದಂತೆ, ಅವರಿಗೆ ಈ ಆಜ್ಞೆಗಳನ್ನು ಕೊಡು.
ಯಾರಾದರೂ ತನ್ನ ಸಂಬಂಧಿಕರನ್ನು, ವಿಶೇಷವಾಗಿ ಸ್ವಂತ ಕುಟುಂಬದವರನ್ನು ಸಂರಕ್ಷಿಸದೆಹೋದರೆ, ಅಂಥವನು ವಿಶ್ವಾಸಭ್ರಷ್ಟನೂ ಅವಿಶ್ವಾಸಿಗಳಿಗಿಂತ ತುಚ್ಛನಾದವನೂ ಆಗಿದ್ದಾನೆ.
ಅರವತ್ತು ವರ್ಷಕ್ಕೆ ಕಡಿಮೆಯಿಲ್ಲದ ವಿಧವೆಯನ್ನು, ವಿಧವೆಯರ ಪಟ್ಟಿಗೆ ಸೇರಿಸಿಕೊಳ್ಳಬಹುದು. ಅಂಥವಳು ಒಂದೇ ಸಾರಿ ಮದುವೆ ಆದವಳಾಗಿರಬೇಕು.
೧೦
ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.
೧೧
ಯೌವನಸ್ಥ ವಿಧವೆಯರನ್ನು ಆ ಪಟ್ಟಿಯಲ್ಲಿ ಸೇರಿಸಬೇಡ. ಏಕೆಂದರೆ, ಯೇಸುಕ್ರಿಸ್ತರಿಂದ ವಿಮುಖರನ್ನಾಗಿಸುವ ಕಾಮನೆಗಳು ಇವರನ್ನು ಮರುಮದುವೆಗೆ ಹುರಿದುಂಬಿಸಬಹುದು.
೧೨
ಹೀಗೆ, ಅವರು ಮೊದಲು ಮಾಡಿದ ವಾಗ್ದಾನವನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗುತ್ತಾರೆ.
೧೩
ಇದಲ್ಲದೆ ಅವರು ಮನೆಮನೆಗಳನ್ನು ಸುತ್ತುತ್ತಾ ಅಲೆದಾಡುತ್ತಾ ಹರಟೆಮಲ್ಲರೂ ಸೋಮಾರಿಗಳೂ ಆಗಬಹುದು. ಇತರರ ವಿಷಯಗಳಲ್ಲಿ ತಲೆಹಾಕಬಹುದು.
೧೪
ಆದ್ದರಿಂದ, ತರುಣಿ ವಿಧವೆಯರು ವಿವಾಹಮಾಡಿಕೊಂಡು, ಮಕ್ಕಳನ್ನು ಹೆತ್ತು ಸಂಸಾರವನ್ನು ನಡೆಸುವುದೇ ಒಳ್ಳೆಯದೆಂದು ನನ್ನ ಭಾವನೆ. ಆಗ ನಮ್ಮನ್ನು ನಿಂದಿಸಲು ವಿರೋಧಿಗಳಿಗೆ ಆಸ್ಪದವಿರುವುದಿಲ್ಲ.
೧೫
ಏಕೆಂದರೆ, ಈಗಾಗಲೇ ಕೆಲವು ವಿಧವೆಯರು ದಾರಿತಪ್ಪಿ ಸೈತಾನನನ್ನು ಹಿಂಬಾಲಿಸಿದ್ದಾರೆ.
೧೬
ಕ್ರೈಸ್ತವಿಶ್ವಾಸಿಯಾದ ಒಬ್ಬ ಮಹಿಳೆಯ ಮನೆಯಲ್ಲಿ ವಿಧವೆಯಿದ್ದರೆ, ಆಕೆಯೇ ಅವರನ್ನು ಸಂರಕ್ಷಿಸಲಿ. ಅವರ ಪೋಷಣೆಯ ಹೊಣೆಯನ್ನು ಧರ್ಮಸಭೆ ವಹಿಸಿಕೊಳ್ಳುವುದು ತಪ್ಪುತ್ತದೆ. ಆಗ ನಿಜವಾಗಿಯೂ ದಿಕ್ಕಿಲ್ಲದ ವಿಧವೆಯರಿಗೆ ಸಭೆ ನೆರವು ನೀಡಲು ಸಾಧ್ಯವಾಗುತ್ತದೆ.
೧೭
ಸರಿಯಾಗಿ ಆಡಳಿತವನ್ನು ನಿರ್ವಹಿಸುತ್ತಿರುವ ಸಭಾಹಿರಿಯರು, ವಿಶೇಷವಾಗಿ ಬೋಧನೆಯಲ್ಲೂ ಉಪದೇಶದಲ್ಲೂ ಶ್ರಮಿಸುತ್ತಿರುವವರು, ಇಮ್ಮಡಿ ಸಂಭಾವನೆಗೆ ಯೋಗ್ಯರು.
೧೮
‘ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬೇಡ’ ಎಂದೂ, ‘ಕಾರ್ಮಿಕನು ಕೂಲಿಗೆ ಅರ್ಹನು’ ಎಂದೂ ಧರ್ಮಶಾಸ್ತ್ರ ಹೇಳುತ್ತದೆಯಲ್ಲವೇ?
೧೯
ಸಭಾಹಿರಿಯರ ವಿರುದ್ಧ ಯಾರಾದರೂ ದೂರು ತಂದರೆ, ಇಬ್ಬರ ಅಥವಾ ಮೂವರ ಸಾಕ್ಷಿ ಇಲ್ಲದೆ ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳಬೇಡ.
೨೦
ಯಾರಾದರೂ ಪಾಪದಲ್ಲಿಯೇ ಮುಂದುವರಿಯುತ್ತಾ ಇದ್ದರೆ, ಅಂಥವರನ್ನು ಬಹಿರಂಗವಾಗಿಯೇ ಖಂಡಿಸು. ಇದು ಇತರರಿಗೂ ಎಚ್ಚರಿಕೆಯಾಗಿರಲಿ.
೨೧
ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.
೨೨
ದೇವರ ಸೇವೆಗೆಂದು ಅವಸರದಿಂದ ಯಾರ ಮೇಲೂ ಹಸ್ತನಿಕ್ಷೇಪ ಮಾಡಿ ದೀಕ್ಷೆ ನೀಡಬೇಡ. ಹಾಗೆ ಮಾಡಿದರೆ, ಅವರ ಪಾಪಗಳಲ್ಲಿ ನೀನೂ ಭಾಗಿಯಾಗುವೆ. ನೀನು ಪರಿಶುದ್ಧನಾಗಿರುವ ಹಾಗೆ ನೋಡಿಕೋ.
೨೩
ಆಗಾಗ್ಗೆ ನೀನು ಅಸ್ವಸ್ಥನಾಗುವುದುಂಟು. ಆದ್ದರಿಂದ ಬರೀ ನೀರನ್ನು ಕುಡಿದರೆ ಸಾಲದು. ನಿನ್ನ ಜೀರ್ಣಶಕ್ತಿಯ ಸುಧಾರಣೆಗಾಗಿ ಸ್ವಲ್ಪ ದ್ರಾಕ್ಷಾರಸವನ್ನೂ ಸೇವಿಸು.
೨೪
ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಟ್ಟಬಯಲಾಗುತ್ತವೆ; ಇನ್ನು ಕೆಲವರ ಪಾಪಗಳು ಮರೆಯಾಗಿದ್ದು ಕ್ರಮೇಣ ಬೆಳಕಿಗೆ ಬರುತ್ತವೆ.
೨೫
ಅಂತೆಯೇ, ಕೆಲವರ ಸತ್ಕಾರ್ಯಗಳು ಎಲ್ಲರಿಗೂ ಬೇಗನೆ ಗೋಚರವಾಗುತ್ತವೆ. ಇನ್ನು ಕೆಲವರ ಸತ್ಕಾರ್ಯಗಳು ಅಗೋಚರವಾಗಿದ್ದರೂ ಸದಾ ಗುಟ್ಟಾಗಿರಲಾರವು.ತಿಮೊಥೇಯನಿಗ ೧ ೫:1
ತಿಮೊಥೇಯನಿಗ ೧ ೫:2
ತಿಮೊಥೇಯನಿಗ ೧ ೫:3
ತಿಮೊಥೇಯನಿಗ ೧ ೫:4
ತಿಮೊಥೇಯನಿಗ ೧ ೫:5
ತಿಮೊಥೇಯನಿಗ ೧ ೫:6
ತಿಮೊಥೇಯನಿಗ ೧ ೫:7
ತಿಮೊಥೇಯನಿಗ ೧ ೫:8
ತಿಮೊಥೇಯನಿಗ ೧ ೫:9
ತಿಮೊಥೇಯನಿಗ ೧ ೫:10
ತಿಮೊಥೇಯನಿಗ ೧ ೫:11
ತಿಮೊಥೇಯನಿಗ ೧ ೫:12
ತಿಮೊಥೇಯನಿಗ ೧ ೫:13
ತಿಮೊಥೇಯನಿಗ ೧ ೫:14
ತಿಮೊಥೇಯನಿಗ ೧ ೫:15
ತಿಮೊಥೇಯನಿಗ ೧ ೫:16
ತಿಮೊಥೇಯನಿಗ ೧ ೫:17
ತಿಮೊಥೇಯನಿಗ ೧ ೫:18
ತಿಮೊಥೇಯನಿಗ ೧ ೫:19
ತಿಮೊಥೇಯನಿಗ ೧ ೫:20
ತಿಮೊಥೇಯನಿಗ ೧ ೫:21
ತಿಮೊಥೇಯನಿಗ ೧ ೫:22
ತಿಮೊಥೇಯನಿಗ ೧ ೫:23
ತಿಮೊಥೇಯನಿಗ ೧ ೫:24
ತಿಮೊಥೇಯನಿಗ ೧ ೫:25


ತಿಮೊಥೇಯನಿಗ ೧ 1 / ತಿಮ೧ 1
ತಿಮೊಥೇಯನಿಗ ೧ 2 / ತಿಮ೧ 2
ತಿಮೊಥೇಯನಿಗ ೧ 3 / ತಿಮ೧ 3
ತಿಮೊಥೇಯನಿಗ ೧ 4 / ತಿಮ೧ 4
ತಿಮೊಥೇಯನಿಗ ೧ 5 / ತಿಮ೧ 5
ತಿಮೊಥೇಯನಿಗ ೧ 6 / ತಿಮ೧ 6