A A A A A
Facebook Instagram Twitter
ಕನ್ನಡ ಬೈಬಲ್ (KNCL) 2016

ತಿಮೊಥೇಯನಿಗ ೧ ೬ದಾಸ್ಯದಲ್ಲಿರುವವರು ತಮ್ಮ ಯಜಮಾನರನ್ನು ಎಲ್ಲಾ ವಿಧದಲ್ಲೂ ಗೌರವಿಸಬೇಕು. ಇಲ್ಲದಿದ್ದರೆ, ದೇವರ ಹೆಸರಿಗೂ ನಮ್ಮ ಬೋಧನೆಗೂ ಕಳಂಕವುಂಟಾಗುತ್ತದೆ.
ಒಂದು ವೇಳೆ ಯಜಮಾನರು ಕ್ರೈಸ್ತವಿಶ್ವಾಸಿಗಳಾಗಿದ್ದರೆ ತಮ್ಮ ಯಜಮಾನರು ಸಹೋದರ ವರ್ಗದವರು ಎಂದು ಉದಾಸೀನ ಮಾಡಬಾರದು. ಬದಲಿಗೆ ಹೆಚ್ಚಿನ ಉತ್ಸಾಹದಿಂದ ಸೇವೆಸಲ್ಲಿಸಬೇಕು. ಏಕೆಂದರೆ, ಅವರ ಸೇವೆಯ ಪ್ರಯೋಜನವನ್ನು ಪಡೆಯುತ್ತಿರುವ ಯಜಮಾನರು, ಕ್ರೈಸ್ತವಿಶ್ವಾಸಿಗಳೂ ಪ್ರೀತಿಗೆ ಪಾತ್ರರಾದವರು. ಈ ವಿಷಯಗಳ ಬಗ್ಗೆ ಆಜ್ಞಾಪೂರ್ವಕವಾಗಿ ಬೋಧಿಸು.
ಯಾರಾದರೂ ನಮ್ಮ ಧಾರ್ಮಿಕ ಉಪದೇಶವನ್ನು ಅನುಸರಿಸದೆ, ಪ್ರಭು ಯೇಸುಕ್ರಿಸ್ತರ ನೈಜ ಬೋಧನೆಯನ್ನು ಒಪ್ಪಿಕೊಳ್ಳದೆ ಭಿನ್ನ ಬೋಧನೆಯನ್ನು ಮಾಡುವುದಾದರೆ, ಅಂಥವನು ಅಹಂಭಾವಿ ಹಾಗೂ ಅಜ್ಞಾನಿಯೇ ಸರಿ.
ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ ಎಡೆಕೊಡುತ್ತವೆ.
ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.
ಇರುವುದರಲ್ಲೇ ಸಂತೃಪ್ತನಾಗಿರುವವನು ಭಕ್ತಿಯಲ್ಲಿ ನಿಜಕ್ಕೂ ಶ್ರೀಮಂತನಾಗಿರುತ್ತಾನೆ.
ಹುಟ್ಟಿದಾಗ ನಾವು ಈ ಲೋಕಕ್ಕೆ ಏನನ್ನೂ ತರಲಿಲ್ಲ; ಸಾಯುವಾಗ ಏನನ್ನೂ ಕೊಂಡು ಒಯ್ಯುವುದಿಲ್ಲ.
ನಮಗೆ ಊಟ, ಬಟ್ಟೆ ಇದ್ದರೆ ಅಷ್ಟೇ ಸಾಕು.
ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ ವಿನಾಶಕ್ಕೂ ಒಯ್ಯುತ್ತವೆ.
೧೦
ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.
೧೧
ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.
೧೨
ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸಪ್ರಮಾಣ ಮಾಡಿರುವೆ.
೧೩
ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:
೧೪
ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಯಾವ ದೋಷಾರೋಪಣೆಗೂ ಎಡೆಗೊಡದೆ ಈ ಕಟ್ಟಳೆಗಳೆಲ್ಲವನ್ನೂ ಪ್ರಾಮಾಣಿಕತೆಯಿಂದ ಅನುಸರಿಸು:
೧೫
ಸೂಕ್ತಕಾಲದಲ್ಲಿ ಕ್ರಿಸ್ತಯೇಸುವನು ಪ್ರತ್ಯಕ್ಷಪಡಿಸುವನು ಪರಮ ದೇವನು. ಆ ದೇವರು ಪರಮಾನಂದನು ಏಕಾಧಿಪತಿ, ರಾಜಾಧಿರಾಜನು ಒಡೆಯರಿಗೆಲ್ಲಾ ಒಡೆಯನು, ಅಮರನು ಅಗಮ್ಯ ಜ್ಯೋತಿಯಲಿ ವಾಸಿಸುವವನು. ಆತನನು ಕಂಡವರಾರೂ ಇಲ್ಲ ಕಾಣಬಲ್ಲವರಾರೂ ಇಲ್ಲ. ಆತನೊಬ್ಬನಿಗೆ ಮಹಿಮೆಯೂ ಗೌರವವೂ ಪ್ರಭುತ್ವವೂ ಸಲ್ಲಲಿ ಎಂದೆಂದಿಗೂ, ಆಮೆನ್.
೧೬
***
೧೭
ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.
೧೮
ಅವರು ಸದ್ಗುಣಶೀಲರಾಗಬೇಕು, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಶ್ರೀಮಂತರಾಗಿರಬೇಕು. ದಾನಶೀಲರೂ ಇತರರೊಂದಿಗೆ ಪಾಲು ಹಂಚಿಕೊಳ್ಳುವವರೂ ಪರೋಪಕಾರಿಗಳೂ ಆಗಿರಬೇಕು.
೧೯
ಹೀಗೆ, ಅವರು ತಮ್ಮ ಭವಿಷ್ಯಜೀವನಕ್ಕೆ ಭದ್ರವಾದ ಬುನಾದಿಯಾಗಬಲ್ಲ ನಿಧಿಯನ್ನು ಕೂಡಿಸಿಕೊಳ್ಳಬೇಕೆಂದು ವಿಧಿಸು. ಆಗ ಅವರು ಶಾಶ್ವತ ಜೀವವನ್ನು ಪಡೆಯುವರು.
೨೦
ಪ್ರಿಯ ತಿಮೊಥೇಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡಿಕೋ. ಪ್ರಾಪಂಚಿಕ ವ್ಯರ್ಥ ಸಂಭಾಷಣೆಗಳಿಂದಲೂ ‘ಜ್ಞಾನಿ'ಗಳೆಂದು ತಪ್ಪಾಗಿ ಕೊಚ್ಚಿಕೊಳ್ಳುವವರ ವಾಗ್ವಾದಗಳಿಂದಲೂ ದೂರವಿರು.
೨೧
ಕೆಲವರು ಇಂಥ ಕಪಟಜ್ಞಾನವನ್ನು ಅವಲಂಬಿಸಿ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ದೇವರ ಅನುಗ್ರಹ ನಿಮ್ಮಲ್ಲಿರಲಿ!ತಿಮೊಥೇಯನಿಗ ೧ ೬:1
ತಿಮೊಥೇಯನಿಗ ೧ ೬:2
ತಿಮೊಥೇಯನಿಗ ೧ ೬:3
ತಿಮೊಥೇಯನಿಗ ೧ ೬:4
ತಿಮೊಥೇಯನಿಗ ೧ ೬:5
ತಿಮೊಥೇಯನಿಗ ೧ ೬:6
ತಿಮೊಥೇಯನಿಗ ೧ ೬:7
ತಿಮೊಥೇಯನಿಗ ೧ ೬:8
ತಿಮೊಥೇಯನಿಗ ೧ ೬:9
ತಿಮೊಥೇಯನಿಗ ೧ ೬:10
ತಿಮೊಥೇಯನಿಗ ೧ ೬:11
ತಿಮೊಥೇಯನಿಗ ೧ ೬:12
ತಿಮೊಥೇಯನಿಗ ೧ ೬:13
ತಿಮೊಥೇಯನಿಗ ೧ ೬:14
ತಿಮೊಥೇಯನಿಗ ೧ ೬:15
ತಿಮೊಥೇಯನಿಗ ೧ ೬:16
ತಿಮೊಥೇಯನಿಗ ೧ ೬:17
ತಿಮೊಥೇಯನಿಗ ೧ ೬:18
ತಿಮೊಥೇಯನಿಗ ೧ ೬:19
ತಿಮೊಥೇಯನಿಗ ೧ ೬:20
ತಿಮೊಥೇಯನಿಗ ೧ ೬:21


ತಿಮೊಥೇಯನಿಗ ೧ 1 / ತಿಮ೧ 1
ತಿಮೊಥೇಯನಿಗ ೧ 2 / ತಿಮ೧ 2
ತಿಮೊಥೇಯನಿಗ ೧ 3 / ತಿಮ೧ 3
ತಿಮೊಥೇಯನಿಗ ೧ 4 / ತಿಮ೧ 4
ತಿಮೊಥೇಯನಿಗ ೧ 5 / ತಿಮ೧ 5
ತಿಮೊಥೇಯನಿಗ ೧ 6 / ತಿಮ೧ 6