೧ |
ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ? |
೨ |
ಹಾಗೆ ಸಿದ್ಧಿಗೆ ತರಲು ಸಾಧ್ಯವಿದ್ದಿದ್ದರೆ ಬಲಿಯರ್ಪಣೆಯು ಎಂದೋ ನಿಂತುಹೋಗುತ್ತಿತ್ತು. ಏಕೆಂದರೆ, ಆಗ ಆರಾಧಕರು ಒಮ್ಮೆಗೇ ಶುದ್ಧಿಹೊಂದಿ ತಾವು ಪಾಪಿಗಳೆಂಬ ಮನವರಿಕೆಯೇ ಇಲ್ಲದೆ ಇರುತ್ತಿದ್ದರು. |
೩ |
ಬದಲಿಗೆ, ಪ್ರತಿವರ್ಷವೂ ಸಮರ್ಪಿಸಲಾಗುವ ಬಲಿಯರ್ಪಣೆಗಳು ಪಾಪನಿವಾರಣೆ ಆಗದ್ದನ್ನು ಜ್ಞಾಪಕಕ್ಕೆ ತರುತ್ತವೆ. |
೪ |
ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ. |
೫ |
ಆದ್ದರಿಂದಲೇ ಭೂಲೋಕಕ್ಕೆ ಬರಲಿದ್ದ ಕ್ರಿಸ್ತಯೇಸು ದೇವರಿಗೆ ಇಂತೆಂದರು: “ಬಲಿಯರ್ಪಣೆಗಳೂ ಕಾಣಿಕೆಗಳೂ ನಿಮಗೆ ಬೇಡವಾದವು ಎಂದೇ ಅಣಿಮಾಡಿ ಕೊಟ್ಟಿರಿ ನನಗೆ ದೇಹವೊಂದನು. |
೬ |
ಸರ್ವಾಂಗ ಹೋಮಗಳೂ ಪಾಪಪರಿಹಾರಕ ಬಲಿಗಳೂ ನಿಮಗೆ ತರಲಿಲ್ಲ ತೃಪ್ತಿಯನು. |
೭ |
ಆಗ ಇಂತೆಂದೆ ನಾನು: ಗ್ರಂಥದ ಸುರುಳಿಯಲಿ ನನ್ನನ್ನು ಕುರಿತು ಬರೆದಿರುವಂತೆ, ಓ ದೇವಾ, ಇಗೋ ನಾ ಬಂದೆ ನಿನ್ನ ಚಿತ್ತವನು ನೆರವೇರಿಸಲೆಂದೇ.” |
೮ |
ಧರ್ಮಶಾಸ್ತ್ರದ ವಿಧಿಗನುಸಾರ ಅರ್ಪಿಸಲಾಗುತ್ತಿದ್ದುವಾದರೂ “ಬಲಿಯರ್ಪಣೆಗಳು, ಕಾಣಿಕೆಗಳು, ದಹನಬಲಿಗಳು ಮತ್ತು ಪಾಪಪರಿಹಾರಕಬಲಿಗಳು ನಿಮಗೆ ಬೇಡವಾದವು; ಇವು ಯಾವುವು ನಿಮಗೆ ತರಲಿಲ್ಲ ತೃಪ್ತಿಯನು,” ಎಂದು ಮೊದಲು ಹೇಳುತ್ತಾರೆ. |
೯ |
ಅನಂತರ, “ಇಗೋ, ನಾ ಬಂದೆ ನಿಮ್ಮ ಚಿತ್ತವನು ನೆರವೇರಿಸಲೆಂದೇ,” ಎನ್ನುತ್ತಾರೆ. ಹೀಗೆ ಹೊಸದನ್ನು ಸ್ಥಾಪಿಸಲು ಹಳೆಯದನ್ನು ರದ್ದುಮಾಡಿದ್ದಾರೆ. |
೧೦ |
ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನೀತರಾಗಿದ್ದೇವೆ. |
೧೧ |
ಪ್ರತಿಯೊಬ್ಬ ಯಾಜಕನು ಅನುದಿನವೂ ತನ್ನ ಸೇವೆಯನ್ನು ನಿರ್ವಹಿಸುತ್ತಾನೆ. ಆದರೆ ಇವುಗಳಿಂದ ಎಂದಿಗೂ ಪಾಪನಿವಾರಣೆ ಆಗದು. |
೧೨ |
ಕ್ರಿಸ್ತಯೇಸು ಪಾಪನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ. |
೧೩ |
ಅವರ ಶತ್ರುಗಳು ತಮ್ಮ ಕಾಲಡಿಗೆ ಬರುವತನಕ ಅಲ್ಲೇ ಕಾದಿರುತ್ತಾರೆ. |
೧೪ |
ತಾವು ಪುನೀತಗೊಳಿಸಿದವರನ್ನು ಒಂದೇ ಒಂದು ಬಲಿಯರ್ಪಣೆಯಿಂದ ಯೇಸು ನಿರಂತರ ಸಿದ್ಧಿಗೆ ತಂದಿದ್ದಾರೆ. |
೧೫ |
ಇದನ್ನು ಕುರಿತು ಪವಿತ್ರಾತ್ಮರು ಕೂಡ ನಮಗೆ ಸಾಕ್ಷಿಕೊಡುತ್ತಾರೆ: |
೧೬ |
“ಆ ದಿನಗಳು ಬಂದಮೇಲೆ ನಾನು ಅವರೊಡನೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು: ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ನಾಟಿಸುವೆನು; ಅವರ ಮನದಲ್ಲಿ ಬರೆಯುವೆನು.” ಎಂದು ಹೇಳಿದ ನಂತರವೇ, |
೧೭ |
“ಅವರ ಪಾಪಗಳನ್ನೂ ತಪ್ಪುನೆಪ್ಪುಗಳನ್ನೂ ನೆನಪಿಗೆ ತಂದುಕೊಳ್ಳೆನು,” ಎಂದಿದ್ದಾರೆ. |
೧೮ |
ಪಾಪಗಳ ಕ್ಷಮಾಪಣೆಯಾದ ಬಳಿಕ ಪಾಪಪರಿಹಾರಕಬಲಿಯ ಅವಶ್ಯಕತೆ ಇಲ್ಲ. |
೧೯ |
ಹೀಗಿರುವಲ್ಲಿ, ಪ್ರಿಯ ಸಹೋದರರೇ, ಯೇಸುಸ್ವಾಮಿ ತಮ್ಮ ದೇಹವೆಂಬ ತೆರೆಯ ಮೂಲಕ ನಮಗೆ ಹೊಸದಾದ ಸಜ್ಜೀವಮಾರ್ಗವನ್ನು ತೆರೆದಿಟ್ಟಿದ್ದಾರೆ. |
೨೦ |
ಅದರ ಮೂಲಕ ಗರ್ಭಗುಡಿಯನ್ನು ಧೈರ್ಯದಿಂದ ಪ್ರವೇಶಿಸುವ ಹಕ್ಕು ಅವರ ರಕ್ತಧಾರೆಯಿಂದಲೇ ನಮಗೆ ದೊರೆತಿದೆ. |
೨೧ |
ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠಯಾಜಕ ನಮಗಿದ್ದಾರೆ. |
೨೨ |
ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ. |
೨೩ |
ಕೊಟ್ಟ ಮಾತನ್ನು ದೇವರು ಮೀರುವುದಿಲ್ಲ. ಆದ್ದರಿಂದ ನಾವು ನಿವೇದಿಸುವ ನಂಬಿಕೆ ನಿರೀಕ್ಷೆಯಲ್ಲಿ ಚಂಚಲರಾಗದೆ ಸದೃಢರಾಗಿರೋಣ. |
೨೪ |
ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ. |
೨೫ |
ಸಭೆ ಸೇರುವ ರೂಢಿಯನ್ನು ಕೆಲವರು ಕೈಬಿಟ್ಟಿದ್ದಾರೆ. ನಾವು ಹಾಗೆ ಮಾಡದಿರೋಣ. ನಿಮಗೆ ತಿಳಿದಿರುವಂತೆ ಪ್ರಭು ಪ್ರತ್ಯಕ್ಷರಾಗುವ ದಿನವು ಸಮೀಪಿಸುತ್ತಿರುವುದರಿಂದ ಮತ್ತಷ್ಟು ಹೆಚ್ಚಾಗಿ ಒಬ್ಬರನ್ನೊಬ್ಬರು ಪ್ರೋತ್ಸಾಹಿಸೋಣ. |
೨೬ |
ನಾವು ಸತ್ಯವನ್ನು ಅರಿತವರಾದ ಮೇಲೂ ಬೇಕುಬೇಕಾಗಿ ಪಾಪಮಾಡುತ್ತಲೇ ಇದ್ದರೆ, ಪಾಪಪರಿಹಾರಕ್ಕೆ ಇನ್ನು ನಮಗೆ ಬೇರೆ ಯಾವ ಬಲಿಯೂ ಇರುವುದಿಲ್ಲ; |
೨೭ |
ಬದಲಿಗೆ, ಅತ್ಯಂತ ಭಯದಿಂದ ಎದುರುನೋಡಬೇಕಾದ ದಂಡನಾತೀರ್ಪು ಹಾಗೂ ದೇವರ ಶತ್ರುಗಳನ್ನು ದಹಿಸುವ ಉಗ್ರಕೋಪಾಗ್ನಿ - ಇವುಗಳು ಮಾತ್ರ ನಮಗೆ ಉಳಿದಿರುತ್ತವೆ. |
೨೮ |
ಮೋಶೆಯ ಆಜ್ಞಾವಿಧಿಗಳನ್ನು ಉಲ್ಲಂಘಿಸಿದವನು, ಇಬ್ಬರು ಅಥವಾ ಮೂವರು ಸಾಕ್ಷಿಗಳು ನೀಡುವ ಸಾಕ್ಷ್ಯದ ಆಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆಗೆ ಗುರಿ ಆಗುತ್ತಾನೆ. |
೨೯ |
ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ! |
೩೦ |
“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ನಾನೇ ಪ್ರತೀಕಾರವನ್ನು ಸಲ್ಲಿಸುವೆನು,” ಎಂದು ಹೇಳಿದವರು ಯಾರೆಂದು ಬಲ್ಲೆವು. ಅಲ್ಲದೆ, “ಸರ್ವೇಶ್ವರ ತಮ್ಮ ಪ್ರಜೆಗಳಿಗೆ ನ್ಯಾಯತೀರ್ಪನ್ನು ನೀಡುವರು,” ಎಂದೂ ಹೇಳಲಾಗಿದೆ. |
೩೧ |
ಜೀವಸ್ವರೂಪರಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಅದೆಷ್ಟು ಭಯಂಕರ! |
೩೨ |
ನಿಮ್ಮ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿ: ನಿಮಗೆ ಜ್ಞಾನೋದಯವಾದ ತರುವಾಯ, ಕಷ್ಟಸಂಕಟಗಳಿಂದ ಕೂಡಿದ ಹೋರಾಟವನ್ನು ಎದುರಿಸಿದಿರಿ! |
೩೩ |
ಕೆಲವೊಮ್ಮೆ ಬಹಿರಂಗವಾಗಿ ಹಿಂಸೆಬಾಧೆಗಳಿಗೂ ನಿಂದೆ ಅವಮಾನಗಳಿಗೂ ಗುರಿಯಾದಿರಿ; ಮತ್ತೆ ಕೆಲವೊಮ್ಮೆ ನಿಮ್ಮಂತೆ ಸಂಕಟಪಡುವವರ ಸಂಗಡ ಸಹಭಾಗಿಗಳಾದಿರಿ; |
೩೪ |
ಸೆರೆಯಾಳುಗಳಿಗೆ ಸಂತಾಪ ತೋರಿಸಿದಿರಿ, ನಿಮ್ಮ ಸೊತ್ತನ್ನು ಸುಲಿಗೆಮಾಡಿದಾಗ ಸಂತೋಷದಿಂದ ಬಿಟ್ಟುಕೊಟ್ಟಿರಿ. ಏಕೆಂದರೆ, ಇದಕ್ಕೂ ಶ್ರೇಷ್ಠವಾದ ಹಾಗೂ ಶಾಶ್ವತವಾದ ಸೊತ್ತು ನಿಮಗಿದೆಯೆಂದು ಚೆನ್ನಾಗಿ ಅರಿತಿದ್ದಿರಿ. |
೩೫ |
ಆ ದೃಢ ನಂಬಿಕೆಯನ್ನು ಕಳೆದುಕೊಳ್ಳಬೇಡಿ; ಅದರ ಪ್ರತಿಫಲ ಮಹತ್ತಾದುದು. |
೩೬ |
ದೇವರ ಚಿತ್ತವನ್ನು ನೆರವೇರಿಸಿ, ಅವರು ವಾಗ್ದಾನಮಾಡಿರುವುದನ್ನು ಪಡೆದುಕೊಳ್ಳುವಂತೆ, ನೀವೂ ದೃಢಮನಸ್ಕರಾಗಿರಬೇಕು. |
೩೭ |
ಏಕೆಂದರೆ: “ಇನ್ನು ಅಲ್ಪ, ಅತ್ಯಲ್ಪ ಕಾಲದಲ್ಲೇ ಬರುವಾತನು ಬಂದೇ ಬರುವನು, ವಿಳಂಬಮಾಡನು. |
೩೮ |
ಸಜ್ಜನರಾದ ನನ್ನ ಭಕ್ತರು ವಿಶ್ವಾಸದಿಂದಲೇ ಬಾಳುವರು ಅವರು ಹಿಂಜರಿದರಾದರೆ ಮೆಚ್ಚೆನು ನಾನವರನು,” ಎನ್ನುತ್ತದೆ ಪವಿತ್ರಗ್ರಂಥ. |
೩೯ |
ಆದರೆ ನಾವು ಹಿಮ್ಮೆಟ್ಟಿ ಹಾಳಾಗುವ ಜನರಲ್ಲ; ವಿಶ್ವಾಸವುಳ್ಳವರಾಗಿ ಜೀವೋದ್ಧಾರವನ್ನು ಪಡೆಯುವವರು.
|
Kannada Bible (KNCL) 2016 |
No Data |
|
|
|
|
|
|
|
|
|
|
ಹಿಬ್ರಿಯರಿಗೆ ೧೦:1 |
ಹಿಬ್ರಿಯರಿಗೆ ೧೦:2 |
ಹಿಬ್ರಿಯರಿಗೆ ೧೦:3 |
ಹಿಬ್ರಿಯರಿಗೆ ೧೦:4 |
ಹಿಬ್ರಿಯರಿಗೆ ೧೦:5 |
ಹಿಬ್ರಿಯರಿಗೆ ೧೦:6 |
ಹಿಬ್ರಿಯರಿಗೆ ೧೦:7 |
ಹಿಬ್ರಿಯರಿಗೆ ೧೦:8 |
ಹಿಬ್ರಿಯರಿಗೆ ೧೦:9 |
ಹಿಬ್ರಿಯರಿಗೆ ೧೦:10 |
ಹಿಬ್ರಿಯರಿಗೆ ೧೦:11 |
ಹಿಬ್ರಿಯರಿಗೆ ೧೦:12 |
ಹಿಬ್ರಿಯರಿಗೆ ೧೦:13 |
ಹಿಬ್ರಿಯರಿಗೆ ೧೦:14 |
ಹಿಬ್ರಿಯರಿಗೆ ೧೦:15 |
ಹಿಬ್ರಿಯರಿಗೆ ೧೦:16 |
ಹಿಬ್ರಿಯರಿಗೆ ೧೦:17 |
ಹಿಬ್ರಿಯರಿಗೆ ೧೦:18 |
ಹಿಬ್ರಿಯರಿಗೆ ೧೦:19 |
ಹಿಬ್ರಿಯರಿಗೆ ೧೦:20 |
ಹಿಬ್ರಿಯರಿಗೆ ೧೦:21 |
ಹಿಬ್ರಿಯರಿಗೆ ೧೦:22 |
ಹಿಬ್ರಿಯರಿಗೆ ೧೦:23 |
ಹಿಬ್ರಿಯರಿಗೆ ೧೦:24 |
ಹಿಬ್ರಿಯರಿಗೆ ೧೦:25 |
ಹಿಬ್ರಿಯರಿಗೆ ೧೦:26 |
ಹಿಬ್ರಿಯರಿಗೆ ೧೦:27 |
ಹಿಬ್ರಿಯರಿಗೆ ೧೦:28 |
ಹಿಬ್ರಿಯರಿಗೆ ೧೦:29 |
ಹಿಬ್ರಿಯರಿಗೆ ೧೦:30 |
ಹಿಬ್ರಿಯರಿಗೆ ೧೦:31 |
ಹಿಬ್ರಿಯರಿಗೆ ೧೦:32 |
ಹಿಬ್ರಿಯರಿಗೆ ೧೦:33 |
ಹಿಬ್ರಿಯರಿಗೆ ೧೦:34 |
ಹಿಬ್ರಿಯರಿಗೆ ೧೦:35 |
ಹಿಬ್ರಿಯರಿಗೆ ೧೦:36 |
ಹಿಬ್ರಿಯರಿಗೆ ೧೦:37 |
ಹಿಬ್ರಿಯರಿಗೆ ೧೦:38 |
ಹಿಬ್ರಿಯರಿಗೆ ೧೦:39 |
|
|
|
|
|
|
ಹಿಬ್ರಿಯರಿಗೆ 1 / ಹಿಬ್ರಿ 1 |
ಹಿಬ್ರಿಯರಿಗೆ 2 / ಹಿಬ್ರಿ 2 |
ಹಿಬ್ರಿಯರಿಗೆ 3 / ಹಿಬ್ರಿ 3 |
ಹಿಬ್ರಿಯರಿಗೆ 4 / ಹಿಬ್ರಿ 4 |
ಹಿಬ್ರಿಯರಿಗೆ 5 / ಹಿಬ್ರಿ 5 |
ಹಿಬ್ರಿಯರಿಗೆ 6 / ಹಿಬ್ರಿ 6 |
ಹಿಬ್ರಿಯರಿಗೆ 7 / ಹಿಬ್ರಿ 7 |
ಹಿಬ್ರಿಯರಿಗೆ 8 / ಹಿಬ್ರಿ 8 |
ಹಿಬ್ರಿಯರಿಗೆ 9 / ಹಿಬ್ರಿ 9 |
ಹಿಬ್ರಿಯರಿಗೆ 10 / ಹಿಬ್ರಿ 10 |
ಹಿಬ್ರಿಯರಿಗೆ 11 / ಹಿಬ್ರಿ 11 |
ಹಿಬ್ರಿಯರಿಗೆ 12 / ಹಿಬ್ರಿ 12 |
ಹಿಬ್ರಿಯರಿಗೆ 13 / ಹಿಬ್ರಿ 13 |