೧ |
ಎದೋಮ್ ನಾಡು ಹಾಗೂ ಚಿನ್ ಮರುಭೂಮಿಯ ಎಲ್ಲೆಯಾಗಿರುವ ಕಾನಾನ್ ನಾಡಿನ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ದೊರಕಿದ ಸೊತ್ತು. |
೨ |
ಅದರ ದಕ್ಷಿಣದ ಎಲ್ಲೆ, ಲವಣ ಸಮುದ್ರದ ತೆಂಕಣ ತುದಿಯಿಂದ ತೊಡಗಿ |
೩ |
ಅಕ್ರಬ್ಬೀಮ್ ಎಂಬ ಕೊಲ್ಲಿಯ ದಕ್ಷಿಣ ಮಾರ್ಗವಾಗಿ ಚಿನ್ ಗೆ ಹೋಗುತ್ತದೆ. |
೪ |
ಅಲ್ಲಿಂದ ಕಾದೇಶ್ ಬರ್ನೇಯದ ದಕ್ಷಿಣ ಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಳ್ಳುತ್ತದೆ. ಅಚ್ಮೋನಿನ ಮೇಲೆ ಈಜಿಪ್ಟಿನ ನದಿಗೆ ಬಂದು ಸಮುದ್ರತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಇದು ಅದರ ತೆಂಕಣ ಎಲ್ಲೆ. |
೫ |
ಜೋರ್ಡನ್ ನದಿಯ ಮುಖದಿಂದ ಲವಣಸಮುದ್ರವೆಲ್ಲ ಅದರ ಪೂರ್ವದಿಕ್ಕಿನ ಎಲ್ಲೆ ಆಗಿದೆ. |
೬ |
ಅದರ ಉತ್ತರ ದಿಕ್ಕಿನ ಎಲ್ಲೆ ಜೋರ್ಡನ್ ನದಿಯು ಲವಣಸಮುದ್ರವನ್ನು ಕೂಡುವ ಸ್ಥಳದಿಂದ ತೊಡಗಿ ಬೇತ್ ಹೊಗ್ಲಾ, ಬೇತ್ ಅರಾಬದ ಉತ್ತರ ಪ್ರಾಂತ್ಯ, ರೂಬೇನನ ಮಗ ಬೋಹನನ ಬಂಡೆ, ಆಕೋರಿನ ಕಣಿವೆ |
೭ |
ಇವುಗಳ ಮೇಲೆ ದೆಬೀರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ನದಿಯ ದಕ್ಷಿಣದಲ್ಲಿರುವ ಅದುಮೀಮಿಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್, ಏನ್ ಷೆಮೆಷ್ ಎನ್ನುವ ಬುಗ್ಗೆ, ಏನ್ ರೋಗೆಲ್ ಇವುಗಳ ಮೇಲೆ |
೮ |
ಬೆನ್ ಹಿನ್ನೋಮನ ಕಣಿವೆಗೆ ಹೊಗುತ್ತದೆ. ಅಲ್ಲಿಂದ ಅದು ಜೆರುಸಲೇಮ್ ನಗರವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲೂ ರೆಫಾಯೀಮ್ ಕಣಿವೆಯ ಉತ್ತರದಲ್ಲೂ ಇರುವ ಬೆಟ್ಟದ ತುದಿಗೆ ಹೋಗುತ್ತದೆ. |
೯ |
ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಪ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ನಗರಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ. |
೧೦ |
ಅಲ್ಲಿಂದ ಪಶ್ಚಿಮದಲ್ಲಿ ಇರುವ ಸೇಯಿರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು |
೧೧ |
ಅಲ್ಲಿಂದ ಉತ್ತರ ದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾಗುಡ್ಡದ ಮೇಲೆ ಯೆಬ್ನೇಲಿಗೆ ಹೋಗಿ ಸಮುದ್ರ ತೀರದಲ್ಲಿ ಮುಗಿಯುತ್ತದೆ. |
೧೨ |
ಮಹಾಸಾಗರದ ತೀರವೇ ಪಶ್ಚಿಮ ಎಲ್ಲೆ, ಯೆಹೂದ ಗೋತ್ರಗಳ ನಾಡಿನ ಸುತ್ತಣ ಎಲ್ಲೆಗಳು ಇವೇ. |
೧೩ |
ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಯೆಫುನ್ನೆಯ ಮಗ ಕಾಲೇಬನಿಗೆ ಯೆಹೂದ ಕುಲದವರ ನಡುವೆ ಅನಾಕನ ತಂದೆ ಆದ ಅರ್ಬನ ನಗರವಾಗಿದ್ದ ಹೆಬ್ರೋನನ್ನು ಕೊಟ್ಟನು. |
೧೪ |
ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು. |
೧೫ |
ಅನಂತರ ಅವನು ಹೊರಟು ಕಿರ್ಯತ್ ಸೇಫೆರ್ ಎನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧಮಾಡಿದನು. |
೧೬ |
ಅವನು, “ಕಿರ್ಯತ್ ಸೇಫೆರದ ಮೇಲೆ ದಾಳಿಮಾಡಿ ಹಿಡಿದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆಮಾಡಿಕೊಡುತ್ತೇನೆ,” ಎಂದನು. |
೧೭ |
ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನಿಯೇಲನು ಅದರ ಮೇಲೆ ದಾಳಿಮಾಡಿ ತೆಗೆದುಕೊಂಡನು. ಅವನಿಗೆ ಕಾಲೇಬನು ತನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಟ್ಟನು. |
೧೮ |
ಆಕೆ ಮನೆ ಸೇರಿದಾಗ ತನ್ನ ತಂದೆಯ ಬಳಿ ಭೂಮಿಯನ್ನು ಕೇಳಬೇಕೆಂದು ಒತ್ನಿಯೇಲನು ಅವಳನ್ನು ಪ್ರೋತ್ಸಾಹಿಸಿದನು. ಅಂತೆಯೇ ಅವಳು ಹೊರಟು ಹೇಸರಗತ್ತೆ ಮೇಲಿಂದ ಇಳಿದದ್ದೇ ಕಾಲೇಬನು, “ನಿನಗೇನು ಬೇಕು?” ಎಂದು ಕೇಳಿದನು. |
೧೯ |
ಅವಳು, “ನನಗೊಂದು ಕೊಡುಗೆ ಬೇಕು. ನನ್ನನ್ನು ಬೆಂಗಾಡಿಗೆ ಕೊಟ್ಟುಬಿಟ್ಟಿದ್ದೀರಲ್ಲವೆ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡಿ,” ಎಂದಳು. ಆಗ ಕಾಲೇಬನು ಅವಳಿಗೆ ಬುಗ್ಗೆಗಳಿದ್ದ ಮೇಲಣ ಹಾಗೂ ಕೆಳಗಣ ಸ್ಥಳಗಳನ್ನು ಕೊಟ್ಟನು. |
೨೦ |
ಯೆಹೂದ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ವಿವರ: |
೨೧ |
ಎದೋಮ್ ಪ್ರಾಂತ್ಯವು ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಎದೆರ್, ಯಾಗೂರ್, |
೨೨ |
ಕೀನಾ, ದೀಮೋನಾ, ಅದಾದಾ, ಕೆದೆಷ್, ಹಾಚೋರ್, ಇತ್ನಾನ್, |
೨೩ |
*** |
೨೪ |
ಜೀಪ್, ಟೆಲೆಮ್, ಬೆಯಾಲೋತ್, |
೨೫ |
ಹಾಚೋರ್ ಹದತ್ತಾ, ಹಾಚೋರ್ ಎಂಬವ |
೨೬ |
ಕಿರ್ಯೋತ್, ಹೆಚ್ರೋನ್, ಅಮಾಮ್, ಶೆಮ, |
೨೭ |
ಮೋಲಾದ, ಹಚರ್ ಗದ್ದಾ, ಹೆಷ್ಮೋನ್, ಬೆತ್ಪೆಲೆಟ್, ಹಚರ್ ಷೂವಾಲ್, |
೨೮ |
ಬೇರ್ಷಬ, ಬಿಜ್ಯೋತ್ಯಾ, |
೨೯ |
ಬಾಲಾ, ಇಯ್ಯೀಮ್, ಎಚೆಮ್, ಎಲ್ಟೋಲದ್, ಕೆಸೀಲ್, ಹೊರ್ಮಾ, |
೩೦ |
*** |
೩೧ |
ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ |
೩೨ |
ಲೆಬಾವೋತ್, ಶಿಲ್ಹೀಮ್, ಆಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಬತ್ತು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. |
೩೩ |
ಇಳಿಜಾರು ಪ್ರದೇಶದಲ್ಲಿ |
೩೪ |
ಎಷ್ಟಾವೋಲ್, ಚೊರ್ಗಾ, ಅಶ್ನಾ, ಜನೋಹ, ಎಂಗನ್ನೀಮ್, |
೩೫ |
ತಪ್ಪೂಹ, ಏನಾಮ್, ಯರ್ಮೂತ್, |
೩೬ |
ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. |
೩೭ |
ಚೆನಾನ್, ಹದಾಷಾ, ಮಿಗ್ದಲ್ಗಾದ್, ದಿಲಾನ್, ಮಿಚ್ಪೆ, ಯೊಕ್ತೇಲ್, |
೩೮ |
*** |
೩೯ |
ಲಾಕೀಷ್, ಬೊಚ್ಕತ್, ಎಗ್ಲೋನ್, |
೪೦ |
ಕಬ್ಬೋನ್, ಲಹ್ಮಾಮ್, ಕಿತ್ಲೀಷ್, ಗೆದೇರೋತ್, ಬೇತ್ ದಾಗೋನ್, ನಾಮಾ, |
೪೧ |
ಮಕ್ಕೇದಾ ಎಂಬ ಹದಿನಾರು ನಗರಗಳು, ಅವುಗಳ ಗ್ರಾಮಗಳು; |
೪೨ |
ಲಿಬ್ನಾ, ಎತೆರ್, ಅಷಾನ್, ಇಫ್ತಾಹ, |
೪೩ |
*** |
೪೪ |
ಆಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ ಎಂಬ ಒಂಬತ್ತು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. |
೪೫ |
ಎಕ್ರೋನ್ ಸಂಸ್ಥಾನ ಮತ್ತು ಅದಕ್ಕೆ ಸೇರಿದ ಗ್ರಾಮ-ನಗರಗಳು; |
೪೬ |
ಎಕ್ರೋನಿನಿಂದ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳು; |
೪೭ |
ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ-ನಗರಗಳು; ಗಾಜಾ ಸಂಸ್ಥಾನ ಹಾಗೂ ಈಜಿಪ್ಟಿನ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲ ಗ್ರಾಮ, ನಗರಗಳು. |
೪೮ |
ಮಲೆನಾಡಿನ ಪ್ರದೇಶದಲ್ಲಿರುವ ಶಾಮೀರ್, ಯತ್ತೀರ್, ಸೋಕೋ, |
೪೯ |
ದನ್ನಾ, ದೆಬೀರ್ ಎಂಬ ಕಿರ್ಯತ್ ಸನ್ನಾ, ಅನಾಬ್, |
೫೦ |
*** |
೫೧ |
ಎಷ್ಟೆಮೊ, ಅನೀಮ್, ಗೊಷೆನ್, ಹೋಲೋನ್, ಗಿಲೋ ಎಂಬ ಹನ್ನೊಂದು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. |
೫೨ |
ಅರಬ್, ದೂಮಾ, ಎಷಾನ್, |
೫೩ |
ಯಾನೂಮ್, ಬೇತ್ ತಪ್ಪೂಹ, ಅಫೇಕಾ, ಹುಮ್ತಾ, ಹೆಬ್ರೋನ್ ಎಂಬ ಕಿರ್ಯತ್ ಅರ್ಬ, ಚಿಯೋರ್ ಎಂಬ ಒಂಬತ್ತು ನಗರಗಳು, ಅವುಗಳ ಗ್ರಾಮಗಳು. |
೫೪ |
*** |
೫೫ |
ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ, |
೫೬ |
ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ನಗರಗಳು ಮತ್ತು ಅವುಗಳ ಗ್ರಾಮಗಳು. |
೫೭ |
*** |
೫೮ |
ಹಲ್ಪೂಲ್, ಬೇತ್ ಚೂರ್, ಗೆದೋರ್, |
೫೯ |
ಮಾರಾತ್, ಬೇತನೋತ್ ಎಲ್ಟೆಕೋನ್ ಎಂಬ ಆರು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು |
೬೦ |
ಕಿರ್ಯಾತ್ಯಾರಿಮ್ ಅನ್ನಿಸಿಕೊಳ್ಳುವ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ನಗರಗಳು ಮತ್ತು ಅವುಗಳ ಗ್ರಾಮಗಳು. |
೬೧ |
ಮರುಭೂಮಿಯಲ್ಲಿರುವ ಬೇತ್ ಅರಾಬಾ, |
೬೨ |
ಮಿದ್ದೀನ್, ಸೆಕಾಕಾ, ನಿಬಾನ್ ಉಪ್ಪಿನಪಟ್ಟಣ, ಏಂಗೇದಿ ಎಂಬ ಆರು ನಗರಗಳು ಮತ್ತು ಅವುಗಳ ಗ್ರಾಮಗಳು. |
೬೩ |
ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಜೆರುಸಲೇಮಿನಲ್ಲೇ ವಾಸವಾಗಿದ್ದಾರೆ.
|
Kannada Bible (KNCL) 2016 |
No Data |