೧ |
ಜೋಸೆಫನ ಚೊಚ್ಚಲ ಮಗ ಮನಸ್ಸೆಯ ವಂಶದವರಿಗೆ ದೊರಕಿದ ಸೊತ್ತಿನ ವಿವರ ಇದು: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆದ ಮಾಕೀರನು ಯುದ್ಧವೀರನು. ಆದ್ದರಿಂದ ಅವನಿಗೆ ಗಿಲ್ಯಾದ, ಬಾಷಾನ ಎಂಬ ಪ್ರಾಂತ್ಯಗಳು ಸಿಕ್ಕಿದವು. |
೨ |
ಜೋಸೆಫನ ಮಗ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶಮೀದಾ, ಎಂಬವರ ವಂಶದವರಿಗೆ ಜೋರ್ಡನಿನ ಈಚೆಕಡೆ ಪಾಲು ಸಿಕ್ಕಿತು. |
೩ |
ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡು ಮಕ್ಕಳು ಆಗಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬವರು ಅವನ ಹೆಣ್ಣುಮಕ್ಕಳು. |
೪ |
ಇವರು ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗ ಯೆಹೋಶುವ ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದಾರಲ್ಲವೆ?” ಎಂದು ಹೇಳಿದರು. ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸೊತ್ತನ್ನು ಪಾಲಾಗಿಕೊಟ್ಟನು. |
೫ |
ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡುಮಕ್ಕಳ ಸಮೇತ ಸೊತ್ತು ದೊರಕಿದ್ದರಿಂದ ಮನಸ್ಸೆಯವರಿಗೆ ಜೋರ್ಡನಿನ ಆಚೆಯಿದ್ದ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲೂ ಹತ್ತುಪಾಲು ಸಿಕ್ಕಿದವು. |
೬ |
ಗಿಲ್ಯಾದ್ ನಾಡು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು. |
೭ |
ಮನಸ್ಸೆಯವರ ಸೊತ್ತಿನ ಎಲ್ಲೆ ಆಶೇರ್ ಊರಿನಿಂದ ತೊಡಗಿ ಶೆಕೆಮಿನ ಪೂರ್ವದಲ್ಲಿ ಇರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ. |
೮ |
ತಪ್ಪೂಹ ನಗರಕ್ಕೆ ಸೇರುವ ಭೂಮಿ ಮನಸ್ಸೆಯವರದು;ಆದರೆ ಅವರ ಸರಹದ್ದಿನಲ್ಲಿರುವ ತಪ್ಪೂಹ ನಗರ ಎಫ್ರಯಿಮ್ಯರದು. |
೯ |
ಅಲ್ಲಿಂದ ಅವರ ಎಲ್ಲೆ ಇಳಿಯುತ್ತಾ ಕಾನಾ ಹಳ್ಳದ ದಕ್ಷಿಣಕ್ಕೆ ಹೋಗುತ್ತದೆ. ಅಲ್ಲಿ ಮನಸ್ಸೆಯವರಿಗೆ ಇರುವಂತೆ ಎಫ್ರಯಿಮ್ಯರಿಗೂ ಕೆಲವು ಪಟ್ಟಣಗಳಿವೆ. ಮನಸ್ಸೆಯವರ ಮುಂದಿನ ಎಲ್ಲೆಯು ಹಳ್ಳದ ಉತ್ತರ ತೀರವನ್ನು ಅನುಸರಿಸಿ ಹೋಗಿ ಸಮುದ್ರದ ದಡದಲ್ಲಿ ಮುಕ್ತಾಯಗೊಳ್ಳುತ್ತದೆ. |
೧೦ |
ಆ ಹಳ್ಳದ ದಕ್ಷಿಣ ತೀರ ಎಫ್ರಯಿಮ್ಯರದು; ಉತ್ತರ ತೀರ ಮನಸ್ಸೆಯವರದು. ಸಮುದ್ರವೇ ಇವರ ಪಶ್ಚಿಮದ ಎಲ್ಲೆ. ಉತ್ತರಕ್ಕೆ ಆಶೇರ ಕುಲದವರ ಪ್ರಾಂತ್ಯವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ನಾಡೂ ಇರುತ್ತವೆ. |
೧೧ |
ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತ್ಯಗಳಲ್ಲಿ ಬೇತ್ ಷೆಯಾನ್, ಇಬ್ಲೆಯಾಮ್, ದೋರ್ ಎಂಬ ನಗರಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ನಗರಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು. |
೧೨ |
ಆದರೆ ಮನಸ್ಸೆಯವರು ಆ ನಗರಗಳ ನಿವಾಸಿಗಳನ್ನು ಹೊರದೂಡಲಾಗಲಿಲ್ಲ. ಕಾನಾನ್ಯರಿಗೆ ಅಲ್ಲೇ ವಾಸಿಸಲು ಅನುಕೂಲವಾಯಿತು. |
೧೩ |
ಇಸ್ರಯೇಲರು ಬಲಗೊಂಡ ಮೇಲೂ ಕಾನಾನ್ಯರನ್ನು ಹೊರದೂಡದೆ ಅವರನ್ನು ಜೀತದಾರರನ್ನಾಗಿಸಿಕೊಂಡರು. |
೧೪ |
ಜೋಸೆಫ್ಯರು ಯೆಹೋಶುವನಿಗೆ, “ನೀವು ಚೀಟುಹಾಕಿ, ನಮಗೆ ಒಂದೇ ಒಂದುಭಾಗವನ್ನು ಕೊಟ್ಟಿದ್ದೀರಿ, ಇದು ಸರಿಯೆ? ಸರ್ವೇಶ್ವರ ಸ್ವಾಮಿ ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿ ನಮ್ಮನ್ನು ಮಹಾಜನಾಂಗವಾಗಿಸಿದ್ದಾರಲ್ಲವೆ?” ಎಂದು ಕೇಳಿಕೊಂಡರು. |
೧೫ |
ಅದಕ್ಕೆ ಯೆಹೋಶುವನು, “ಮಹಾಜನಾಂಗವಾದ ನಿಮಗೆ ಎಫ್ರಯಿಮ್ ಮಲೆನಾಡು ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳ ಮಾಡಿಕೊಳ್ಳಿ,” ಎಂದನು. |
೧೬ |
ಅವರು ಮತ್ತೆ ಯೆಹೋಶುವನಿಗೆ, “ನಮ್ಮ ಮಲೆನಾಡು ನಮಗೆ ಸಾಲುವುದಿಲ್ಲ. ಬೇತ್ ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರು ಕಬ್ಬಿಣದ ರಥವುಳ್ಳವರು,” ಎಂದರು. |
೧೭ |
ಯೆಹೋಶುವನು ಜೋಸೆಫ್ಯರಾದ ಎಫ್ರಯಿಮ್ - ಮನಸ್ಸೆಕುಲದ ಆ ಜನರಿಗೆ, “ನೀವು ಮಹಾಜನಾಂಗ ಹಾಗೂ ಶಕ್ತಿಶಾಲಿಗಳೆಂಬುದೇನೋ ನಿಜ. ನೀವು ಒಂದು ಪಾಲಿಗಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ. |
೧೮ |
ಆಮೇಲೆ ನಾಡನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬಯಲುಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರು ಹಾಗೂ ಕಬ್ಬಿಣದ ರಥಗಳುಳ್ಳವರು. ಆದರೂ ನೀವು ಅವರನ್ನು ಹೊರದೂಡಬಲ್ಲಿರಿ,” ಎಂದು ಉತ್ತರ ಕೊಟ್ಟನು.
|
Kannada Bible (KNCL) 2016 |
No Data |
|
|
|
|
|
|
|
|
|
|
ಯೊಹೋಶುವ ೧೭:1 |
ಯೊಹೋಶುವ ೧೭:2 |
ಯೊಹೋಶುವ ೧೭:3 |
ಯೊಹೋಶುವ ೧೭:4 |
ಯೊಹೋಶುವ ೧೭:5 |
ಯೊಹೋಶುವ ೧೭:6 |
ಯೊಹೋಶುವ ೧೭:7 |
ಯೊಹೋಶುವ ೧೭:8 |
ಯೊಹೋಶುವ ೧೭:9 |
ಯೊಹೋಶುವ ೧೭:10 |
ಯೊಹೋಶುವ ೧೭:11 |
ಯೊಹೋಶುವ ೧೭:12 |
ಯೊಹೋಶುವ ೧೭:13 |
ಯೊಹೋಶುವ ೧೭:14 |
ಯೊಹೋಶುವ ೧೭:15 |
ಯೊಹೋಶುವ ೧೭:16 |
ಯೊಹೋಶುವ ೧೭:17 |
ಯೊಹೋಶುವ ೧೭:18 |
|
|
|
|
|
|
ಯೊಹೋಶುವ 1 / ಯೊಹ 1 |
ಯೊಹೋಶುವ 2 / ಯೊಹ 2 |
ಯೊಹೋಶುವ 3 / ಯೊಹ 3 |
ಯೊಹೋಶುವ 4 / ಯೊಹ 4 |
ಯೊಹೋಶುವ 5 / ಯೊಹ 5 |
ಯೊಹೋಶುವ 6 / ಯೊಹ 6 |
ಯೊಹೋಶುವ 7 / ಯೊಹ 7 |
ಯೊಹೋಶುವ 8 / ಯೊಹ 8 |
ಯೊಹೋಶುವ 9 / ಯೊಹ 9 |
ಯೊಹೋಶುವ 10 / ಯೊಹ 10 |
ಯೊಹೋಶುವ 11 / ಯೊಹ 11 |
ಯೊಹೋಶುವ 12 / ಯೊಹ 12 |
ಯೊಹೋಶುವ 13 / ಯೊಹ 13 |
ಯೊಹೋಶುವ 14 / ಯೊಹ 14 |
ಯೊಹೋಶುವ 15 / ಯೊಹ 15 |
ಯೊಹೋಶುವ 16 / ಯೊಹ 16 |
ಯೊಹೋಶುವ 17 / ಯೊಹ 17 |
ಯೊಹೋಶುವ 18 / ಯೊಹ 18 |
ಯೊಹೋಶುವ 19 / ಯೊಹ 19 |
ಯೊಹೋಶುವ 20 / ಯೊಹ 20 |
ಯೊಹೋಶುವ 21 / ಯೊಹ 21 |
ಯೊಹೋಶುವ 22 / ಯೊಹ 22 |
ಯೊಹೋಶುವ 23 / ಯೊಹ 23 |
ಯೊಹೋಶುವ 24 / ಯೊಹ 24 |