Instagram
English
A A A A A
ಕನ್ನಡ ಬೈಬಲ್ (KNCL) 2016
ಪೇತ್ರನು ೨ ೩
ಪ್ರಿಯರೇ, ಈಗ ನಾನು ನಿಮಗೆ ಬರೆಯುತ್ತಿರುವುದು ಎರಡನೆಯ ಪತ್ರ. ಈ ಎರಡು ಪತ್ರಗಳಲ್ಲೂ ನಿಮ್ಮ ನಿರ್ಮಲ ಮನಸ್ಸನ್ನು ಪುನಶ್ಚೇತನಗೊಳಿಸಲು ಪ್ರಯತ್ನಿಸಿದ್ದೇನೆ.
ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ.
ಮೊತ್ತಮೊದಲನೆಯದಾಗಿ ನೀವು ಇದನ್ನು ನೆನಪಿನಲ್ಲಿಡಬೇಕು; ಅಂತ್ಯಕಾಲದಲ್ಲಿ ಕುಚೋದ್ಯಗಾರರು ಕಾಣಿಸಿಕೊಳ್ಳುವರು.
ಇವರು ತಮ್ಮ ದುರಾಶೆಗಳಿಗೆ ಬಲಿಯಾಗಿ, “ಆತನು ಮರಳಿ ಬರುವನು ಎಂಬ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ಮೃತರಾದರು; ಅಂದಿನಿಂದ ಸಮಸ್ತವೂ ಲೋಕಾದಿಯಿಂದಲೂ ಇದ್ದ ಹಾಗೆಯೇ ಇದೆಯಲ್ಲಾ,” ಎಂದು ಅಪಹಾಸ್ಯಮಾಡುವರು.
ಆದರೆ, ಅವರು ಒಂದು ವಿಷಯವನ್ನು ಉದ್ದೇಶಪೂರ್ವಕವಾಗಿ ಮರೆತುಬಿಡುತ್ತಾರೆ. ಅದೇನೆಂದರೆ, ಪ್ರಾರಂಭದಲ್ಲಿದ್ದ ಭೂಮ್ಯಾಕಾಶಗಳು ದೇವರ ವಾಕ್ಯದಿಂದಲೇ ಉಂಟಾದವು. ಜಲದಿಂದ, ಜಲದ ಮೂಲಕ ಭೂಮಿ ಉಂಟಾಯಿತು.
ಜಲಪ್ರಳಯದಿಂದಲೇ ಅಂದಿನ ಜಗತ್ತು ಮುಳುಗಿ ನಾಶವಾಯಿತು.
ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.
ಪ್ರಿಯರೇ, ಮತ್ತೊಂದು ವಿಷಯವನ್ನು ಮರೆಯದಿರಿ: ಪ್ರಭುವಿನ ದೃಷ್ಟಿಯಲ್ಲಿ ಒಂದು ದಿನ ಸಾವಿರ ವರ್ಷಗಳಂತೆಯೂ ಮತ್ತು ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ.
ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.
೧೦
ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.
೧೧
ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ಧರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು.
೧೨
ದೇವರ ಆ ದಿನವನ್ನು ಎದುರುನೋಡುತ್ತಾ ಅದು ಬೇಗನೆ ಬರಲೆಂದು ಹಾರೈಸಬೇಕು. ಆ ದಿನ, ಆಕಾಶಮಂಡಲವು ಅಗ್ನಿಯಿಂದ ಉರಿದುಹೋಗುವುದು; ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಶಾಖದಿಂದ ಕರಗಿಹೋಗುವುವು.
೧೩
ನಾವಾದರೋ, ದೇವರ ವಾಗ್ದಾನದ ಪ್ರಕಾರ ನೀತಿಯ ನೆಲೆಯಾಗಿರುವ ನೂತನ ಆಕಾಶಮಂಡಲವೂ ನೂತನ ಭೂಮಂಡಲವೂ ಬರುವುದನ್ನು ಎದುರು ನೋಡುತ್ತಿರುವೆವು.
೧೪
ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ.
೧೫
ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ.
೧೬
ಆತನು ತನ್ನ ಪತ್ರಗಳಲ್ಲಿ ಈ ವಿಷಯವನ್ನು ಕುರಿತು ಪ್ರಸ್ತಾಪಿಸುವಾಗಲೆಲ್ಲಾ ಹೀಗೆಯೇ ಬೋಧಿಸಿದ್ದಾನೆ. ಅರ್ಥಮಾಡಿಕೊಳ್ಳಲು ಕಠಿಣವಾದ ಕೆಲವು ವಿಷಯಗಳು ಆತನ ಪತ್ರಗಳಲ್ಲಿ ಇವೆ. ಬುದ್ಧಿಹೀನರು ಹಾಗು ಚಂಚಲಚಿತ್ತರು ಪವಿತ್ರಗ್ರಂಥದ ಇತರ ಭಾಗಗಳಿಗೆ ಅಪಾರ್ಥಕಟ್ಟುವಂತೆ ಇವುಗಳಿಗೂ ಕಟ್ಟುತ್ತಾರೆ. ಹೀಗೆ, ತಮ್ಮ ವಿನಾಶವನ್ನು ತಾವೇ ತಂದುಕೊಳ್ಳುತ್ತಾರೆ.
೧೭
ಆದಕಾರಣ ಪ್ರಿಯರೇ, ಈ ವಿಷಯಗಳನ್ನು ಮುಂಚಿತವಾಗಿಯೇ ತಿಳಿದುಕೊಂಡಿರುವ ನೀವು ಎಚ್ಚರಿಕೆಯಿಂದಿರಿ. ದುರ್ಜನರ ದುರ್ಬೋಧನೆಗೆ ಮರುಳಾಗದಿರಿ. ನಿಮ್ಮ ಸ್ಥಿರವಿಶ್ವಾಸವನ್ನು ಬಿಟ್ಟು ಭ್ರಷ್ಟರಾಗದಿರಿ.
೧೮
ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.
ಪೇತ್ರನು ೨ ೩:1
ಪೇತ್ರನು ೨ ೩:2
ಪೇತ್ರನು ೨ ೩:3
ಪೇತ್ರನು ೨ ೩:4
ಪೇತ್ರನು ೨ ೩:5
ಪೇತ್ರನು ೨ ೩:6
ಪೇತ್ರನು ೨ ೩:7
ಪೇತ್ರನು ೨ ೩:8
ಪೇತ್ರನು ೨ ೩:9
ಪೇತ್ರನು ೨ ೩:10
ಪೇತ್ರನು ೨ ೩:11
ಪೇತ್ರನು ೨ ೩:12
ಪೇತ್ರನು ೨ ೩:13
ಪೇತ್ರನು ೨ ೩:14
ಪೇತ್ರನು ೨ ೩:15
ಪೇತ್ರನು ೨ ೩:16
ಪೇತ್ರನು ೨ ೩:17
ಪೇತ್ರನು ೨ ೩:18
ಪೇತ್ರನು ೨ 1 / ಪೇ೨ 1
ಪೇತ್ರನು ೨ 2 / ಪೇ೨ 2
ಪೇತ್ರನು ೨ 3 / ಪೇ೨ 3