೧ |
ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ. |
೨ |
ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ. |
೩ |
ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ. |
೪ |
ಪಾಪಮಾಡುವ ಪ್ರತಿಯೊಬ್ಬನೂ ದೇವರ ಆಜ್ಞೆಯನ್ನು ಮೀರುತ್ತಾನೆ. ದೇವರ ಆಜ್ಞೆಯನ್ನು ಉಲ್ಲಂಘಿಸುವುದೇ ಪಾಪ. |
೫ |
ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ. |
೬ |
ಅವರಲ್ಲಿ ನೆಲೆಸಿರುವ ಪ್ರತಿಯೊಬ್ಬನೂ ಪಾಪಮಾಡನು. ಪಾಪಮಾಡುವವನು ಅವರನ್ನು ಕಂಡವನೂ ಅಲ್ಲ, ಅರಿತವನೂ ಅಲ್ಲ. |
೭ |
ಪ್ರಿಯಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವುದಕ್ಕೆ ಯಾರಿಗೂ ಅವಕಾಶ ಕೊಡಬೇಡಿ. ಕ್ರಿಸ್ತಯೇಸು ಸತ್ಯಸ್ವರೂಪಿಯಾಗಿರುವಂತೆಯೇ ಸತ್ಯಕ್ಕನುಸಾರ ನಡೆಯುವ ಪ್ರತಿಯೊಬ್ಬನೂ ಸತ್ಯವಂತನೇ. |
೮ |
ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು. |
೯ |
ದೇವರಿಂದ ಜನಿಸಿದ ಯಾವನೂ ಪಾಪಮಾಡನು. ದೇವರ ಜೀವದ ಕುಡಿ ಅವನಲ್ಲಿರುವುದು. ಅವನು ಪಾಪದಲ್ಲಿ ಜೀವಿಸನು. ಏಕೆಂದರೆ, ಅವನು ದೇವರಿಂದ ಜನಿಸಿದವನು. |
೧೦ |
ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು. |
೧೧ |
ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ ಮೊತ್ತಮೊದಲಿನಿಂದಲೂ ನೀವು ಕೇಳಿದ ಸಂದೇಶ. |
೧೨ |
ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ? |
೧೩ |
ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿ. |
೧೪ |
ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ. |
೧೫ |
ತನ್ನ ಸಹೋದರರನ್ನು ದ್ವೇಷಿಸುವವನು ಕೊಲೆಗಾರನೇ ಹೌದು. ಯಾವ ಕೊಲೆಗಾರನಲ್ಲೂ ನಿತ್ಯಜೀವ ಇರದೆಂದು ನೀವು ಬಲ್ಲಿರಿ. |
೧೬ |
ಕ್ರಿಸ್ತಯೇಸು ನಮಗೋಸ್ಕರ ತಮ್ಮ ಪ್ರಾಣವನ್ನೇ ತೆತ್ತರು. ಇದರಿಂದ ಪ್ರೀತಿ ಎಂತಹುದೆಂದು ನಾವು ಅರಿತುಕೊಂಡೆವು. ನಾವೂ ಕೂಡ ಸಹೋದರರಿಗಾಗಿ ಪ್ರಾಣಾರ್ಪಣೆ ಮಾಡಲು ಬದ್ಧರಾಗಿದ್ದೇವೆ. |
೧೭ |
ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು? |
೧೮ |
ಪ್ರಿಯಮಕ್ಕಳೇ, ನಾವು ಬರಿಯ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರಬಾರದು. ನಮ್ಮ ಪ್ರೀತಿ ಸತ್ಯದಲ್ಲೂ ಕೃತ್ಯದಲ್ಲೂ ವ್ಯಕ್ತವಾಗಬೇಕು. |
೧೯ |
ಹೀಗೆ ನಾವು ಸತ್ಯಕ್ಕೆ ಸೇರಿದವರು ಎಂಬುದು ಮನದಟ್ಟಾಗುವುದಲ್ಲದೆ ದೇವರ ಮುಂದೆ ನಮ್ಮ ಮನಸ್ಸು ನೆಮ್ಮದಿಯಿಂದಿರುತ್ತದೆ. |
೨೦ |
ಯಾವ ವಿಷಯದಲ್ಲಾದರೂ ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸಿದ್ದೇ ಆದರೆ ಎಲ್ಲವನ್ನೂ ಬಲ್ಲ ದೇವರು ನಮ್ಮ ಮನಸ್ಸಾಕ್ಷಿಗಿಂತಲೂ ದೊಡ್ಡವರೆಂಬುದು ನಮಗೆ ತಿಳಿದೇ ಇರುತ್ತದೆ. |
೨೧ |
ಪ್ರಿಯರೇ, ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸದಿದ್ದರೆ, ನಾವು ದೇವರ ಮುಂದೆ ಧೈರ್ಯದಿಂದಿರಲು ಸಾಧ್ಯವಾಗುತ್ತದೆ. |
೨೨ |
ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ ಅವರಿಂದ ಪಡೆಯುತ್ತೇವೆ. |
೨೩ |
ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ. |
೨೪ |
ದೇವರ ಆಜ್ಞೆಯನ್ನು ಪಾಲಿಸುವವನು ಅವರಲ್ಲಿ ನೆಲೆಸಿರುತ್ತಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ದೇವರು ನಮ್ಮಲ್ಲಿ ನೆಲೆಸಿದ್ದಾರೆಂದು ಅವರು ದಯಪಾಲಿಸುವ ಪವಿತ್ರಾತ್ಮರಿಂದಲೇ ತಿಳಿದುಕೊಳ್ಳುತ್ತೇವೆ.
|
Kannada Bible (KNCL) 2016 |
No Data |
|
|
|
|
|
|
|
|
|
|
ಯೊವಾನ್ನನು ೧ ೩:1 |
ಯೊವಾನ್ನನು ೧ ೩:2 |
ಯೊವಾನ್ನನು ೧ ೩:3 |
ಯೊವಾನ್ನನು ೧ ೩:4 |
ಯೊವಾನ್ನನು ೧ ೩:5 |
ಯೊವಾನ್ನನು ೧ ೩:6 |
ಯೊವಾನ್ನನು ೧ ೩:7 |
ಯೊವಾನ್ನನು ೧ ೩:8 |
ಯೊವಾನ್ನನು ೧ ೩:9 |
ಯೊವಾನ್ನನು ೧ ೩:10 |
ಯೊವಾನ್ನನು ೧ ೩:11 |
ಯೊವಾನ್ನನು ೧ ೩:12 |
ಯೊವಾನ್ನನು ೧ ೩:13 |
ಯೊವಾನ್ನನು ೧ ೩:14 |
ಯೊವಾನ್ನನು ೧ ೩:15 |
ಯೊವಾನ್ನನು ೧ ೩:16 |
ಯೊವಾನ್ನನು ೧ ೩:17 |
ಯೊವಾನ್ನನು ೧ ೩:18 |
ಯೊವಾನ್ನನು ೧ ೩:19 |
ಯೊವಾನ್ನನು ೧ ೩:20 |
ಯೊವಾನ್ನನು ೧ ೩:21 |
ಯೊವಾನ್ನನು ೧ ೩:22 |
ಯೊವಾನ್ನನು ೧ ೩:23 |
ಯೊವಾನ್ನನು ೧ ೩:24 |
|
|
|
|
|
|
ಯೊವಾನ್ನನು ೧ 1 / ಯೊ೧ 1 |
ಯೊವಾನ್ನನು ೧ 2 / ಯೊ೧ 2 |
ಯೊವಾನ್ನನು ೧ 3 / ಯೊ೧ 3 |
ಯೊವಾನ್ನನು ೧ 4 / ಯೊ೧ 4 |
ಯೊವಾನ್ನನು ೧ 5 / ಯೊ೧ 5 |