A A A A A
Facebook Instagram Twitter
ಕನ್ನಡ ಬೈಬಲ್ (KNCL) 2016

ಪ್ರಕಟನೆ ೧ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು.
ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.
ಈ ಪ್ರವಾದನಾ ಸಂದೇಶವನ್ನು ಓದುವವನು ಧನ್ಯನು: ಓದಿದ್ದನ್ನು ಕೇಳಿಸಿಕೊಳ್ಳುವವರೂ ಧನ್ಯರು ಮತ್ತು ಈ ಪ್ರವಾದನೆಯಲ್ಲಿ ಲಿಖಿತವಾಗಿರುವುದನ್ನು ಕೈಗೊಂಡು ನಡೆಯುವವರು ಸಹ ಧನ್ಯರು! ಏಕೆಂದರೆ, ಕಾಲ ಸನ್ನಿಹಿತವಾಯಿತು.
ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು
ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ
ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.
ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.
“ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ.
ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.
೧೦
ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.
೧೧
ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”
೧೨
ನನ್ನ ಸಂಗಡ ಮಾತನಾಡುತ್ತಿರುವ ಈ ಶಬ್ದ ಯಾರದೆಂದು ನೋಡಲು ನಾನು ಹಿಂದಕ್ಕೆ ತಿರುಗಿದೆ. ಹಾಗೆ ತಿರುಗಿದಾಗ, ಏಳು ಚಿನ್ನದ ದೀಪಸ್ತಂಭಗಳನ್ನು ಕಂಡೆ.
೧೩
ಆ ದೀಪಸ್ತಂಭಗಳ ನಡುವೆ ‘ನರಪುತ್ರ'ನಂಥ ಒಬ್ಬ ವ್ಯಕ್ತಿಯಿದ್ದರು. ಅವರು ನಿಲುವಂಗಿಯನ್ನು ತೊಟ್ಟಿದ್ದರು. ಅದು ಅವರ ಪಾದಗಳನ್ನು ಮುಟ್ಟುವಷ್ಟು ನೀಳವಾಗಿತ್ತು. ಅಲ್ಲದೆ, ಚಿನ್ನದ ಎದೆಪಟ್ಟಿಯನ್ನು ಕಟ್ಟಿಕೊಂಡಿದ್ದರು.
೧೪
ಅವರ ತಲೆಗೂದಲು ಹಿಮದಂತೆಯೂ ಬಿಳಿಯ ಉಣ್ಣೆಯಂತೆಯೂ ಬಿಳುಪಾಗಿತ್ತು. ಕಣ್ಣುಗಳು ಪ್ರಜ್ವಲಿಸುವ ಬೆಂಕಿಯ ಕೆಂಡದಂತಿದ್ದವು.
೧೫
ಅವರ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆ ಥಳಥಳಿಸುತ್ತಾ ಇದ್ದವು. ಧ್ವನಿ, ಜಲಪಾತದಂತೆ ಭೋರ್ಗರೆಯುತ್ತಿತ್ತು.
೧೬
ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.
೧೭
ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ
೧೮
ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.
೧೯
ಆದುದರಿಂದ ನೀನು ಕಂಡ ಘಟನೆಗಳನ್ನು ಅಂದರೆ, ಈಗ ನಡೆಯುತ್ತಿರುವ ಘಟನೆಗಳನ್ನೂ ಮುಂದೆ ಸಂಭವಿಸಲಿರುವ ಘಟನೆಗಳನ್ನೂ ಕುರಿತು ಬರೆ.
೨೦
ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯವಿಷ್ಟೆ: ಆ ಏಳು ನಕ್ಷತ್ರಗಳು ಏಳು ಸಭೆಗಳ ದೂತರನ್ನು ಸೂಚಿಸುತ್ತವೆ. ಆ ಏಳು ಚಿನ್ನದ ದೀಪಸ್ತಂಭಗಳು ಏಳು ಸಭೆಗಳನ್ನು ಸೂಚಿಸುತ್ತವೆ,” ಎಂದರು.ಪ್ರಕಟನೆ ೧:1
ಪ್ರಕಟನೆ ೧:2
ಪ್ರಕಟನೆ ೧:3
ಪ್ರಕಟನೆ ೧:4
ಪ್ರಕಟನೆ ೧:5
ಪ್ರಕಟನೆ ೧:6
ಪ್ರಕಟನೆ ೧:7
ಪ್ರಕಟನೆ ೧:8
ಪ್ರಕಟನೆ ೧:9
ಪ್ರಕಟನೆ ೧:10
ಪ್ರಕಟನೆ ೧:11
ಪ್ರಕಟನೆ ೧:12
ಪ್ರಕಟನೆ ೧:13
ಪ್ರಕಟನೆ ೧:14
ಪ್ರಕಟನೆ ೧:15
ಪ್ರಕಟನೆ ೧:16
ಪ್ರಕಟನೆ ೧:17
ಪ್ರಕಟನೆ ೧:18
ಪ್ರಕಟನೆ ೧:19
ಪ್ರಕಟನೆ ೧:20


ಪ್ರಕಟನೆ 1 / ಪ್ರಕ 1
ಪ್ರಕಟನೆ 2 / ಪ್ರಕ 2
ಪ್ರಕಟನೆ 3 / ಪ್ರಕ 3
ಪ್ರಕಟನೆ 4 / ಪ್ರಕ 4
ಪ್ರಕಟನೆ 5 / ಪ್ರಕ 5
ಪ್ರಕಟನೆ 6 / ಪ್ರಕ 6
ಪ್ರಕಟನೆ 7 / ಪ್ರಕ 7
ಪ್ರಕಟನೆ 8 / ಪ್ರಕ 8
ಪ್ರಕಟನೆ 9 / ಪ್ರಕ 9
ಪ್ರಕಟನೆ 10 / ಪ್ರಕ 10
ಪ್ರಕಟನೆ 11 / ಪ್ರಕ 11
ಪ್ರಕಟನೆ 12 / ಪ್ರಕ 12
ಪ್ರಕಟನೆ 13 / ಪ್ರಕ 13
ಪ್ರಕಟನೆ 14 / ಪ್ರಕ 14
ಪ್ರಕಟನೆ 15 / ಪ್ರಕ 15
ಪ್ರಕಟನೆ 16 / ಪ್ರಕ 16
ಪ್ರಕಟನೆ 17 / ಪ್ರಕ 17
ಪ್ರಕಟನೆ 18 / ಪ್ರಕ 18
ಪ್ರಕಟನೆ 19 / ಪ್ರಕ 19
ಪ್ರಕಟನೆ 20 / ಪ್ರಕ 20
ಪ್ರಕಟನೆ 21 / ಪ್ರಕ 21
ಪ್ರಕಟನೆ 22 / ಪ್ರಕ 22