೧ |
ಇದಾದ ನಂತರ ಅಳತೆಗೋಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು: “ನೀನೆದ್ದು ದೇವರ ಆಲಯವನ್ನೂ ಬಲಿಪೀಠವನ್ನೂ ಅಳತೆಮಾಡು. ಆಲಯದಲ್ಲಿ ಆರಾಧಿಸುತ್ತಿರುವವರನ್ನು ಲೆಕ್ಕಮಾಡು. |
೨ |
ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು. |
೩ |
ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.” |
೪ |
ಲೋಕಾಧಿಪತಿಯಾದ ದೇವರ ಸಾನ್ನಿಧ್ಯದಲ್ಲಿರುವ ಎರಡು ಓಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳು ಇವರೇ. |
೫ |
ಯಾವನಾದರು ಇವರಿಗೆ ಕೇಡು ಬಗೆದರೆ ಇವರ ಬಾಯಿಯಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ದಹಿಸಿಬಿಡುತ್ತದೆ. ಇವರಿಗೆ ಕೇಡು ಬಗೆಯಬೇಕೆಂದಿರುವವನು ಹೀಗೆಯೇ ಹತನಾಗುತ್ತಾನೆ. |
೬ |
ತಾವು ಪ್ರವಾದನೆ ಮಾಡುವ ದಿನಗಳಲ್ಲಿ ಮಳೆ ಬಾರದಂತೆ ಆಕಾಶವನ್ನು ಮುಚ್ಚಿಬಿಡುವ ಸಾಮರ್ಥ್ಯ ಇವರಿಗಿದೆ. ಇದಲ್ಲದೆ, ಇವರಿಗೆ ಇಷ್ಟಬಂದಾಗಲೆಲ್ಲಾ ನೀರನ್ನು ರಕ್ತವನ್ನಾಗಿ ಪರಿವರ್ತಿಸುವ ಹಾಗು ಸಕಲ ವಿಧವಾದ ಉಪದ್ರವಗಳಿಂದ ಜಗತ್ತನ್ನು ಪೀಡಿಸುವ ಅಧಿಕಾರ ಇವರಿಗೆ ಇರುತ್ತದೆ. |
೭ |
ಇವರ ಸಾಕ್ಷ್ಯನೀಡಿಕೆ ಮುಗಿದ ನಂತರ ಪಾತಾಳಕೂಪದಿಂದ ಮೃಗವೊಂದು ಮೇಲೇರಿಬರುತ್ತದೆ; ಅದು ಇವರೊಡನೆ ಯುದ್ಧಮಾಡಿ, ಜಯಗಳಿಸಿ ಇವರನ್ನು ಕೊಂದುಹಾಕುತ್ತದೆ. |
೮ |
ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು. |
೯ |
ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಜನರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳ ತನಕ ದಿಟ್ಟಿಸಿ ನೋಡುವರು; ಅವುಗಳನ್ನು ಸಮಾಧಿಮಾಡಲು ಬಿಡಲೊಲ್ಲರು. |
೧೦ |
ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು. |
೧೧ |
ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವದಾಯಕ ಉಸಿರು ಬಂದು ಆ ಶವಗಳನ್ನು ಹೊಕ್ಕಾಗ ಅವರು ಎದ್ದುನಿಂತರು. ಇದನ್ನು ಕಂಡವರೆಲ್ಲರೂ ಭಯದಿಂದ ನಡುಗಿದರು. |
೧೨ |
ಅನಂತರ ಆ ಪ್ರವಾದಿಗಳಿಗೆ, “ಮೇಲೇರಿ ಬನ್ನಿ,” ಎಂದು ಸ್ವರ್ಗದಿಂದ ಒಂದು ಮಹಾವಾಣಿ ತಿಳಿಸಿತು. ಶತ್ರುಗಳು ಅವರನ್ನು ನೋಡುತ್ತಿದ್ದಂತೆಯೇ ಅವರು ಮೇಘಾರೂಢರಾಗಿ ಸ್ವರ್ಗಕ್ಕೇರಿದರು. |
೧೩ |
ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು. |
೧೪ |
ಹೀಗೆ ಎರಡನೆಯ ವಿಪತ್ತು ಮುಗಿಯಿತು. ಇಗೋ ಮೂರನೆಯ ವಿಪತ್ತು ಕೂಡಲೇ ಬಂದೆರಗುವುದು. |
೧೫ |
ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು: “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ\. |
೧೬ |
ತರುವಾಯ ದೇವರ ಸಾನ್ನಿಧ್ಯದಲ್ಲಿ ತಮ್ಮ ತಮ್ಮ ಪೀಠಗಳಲ್ಲಿ ಕುಳಿತಿದ್ದ ಇಪ್ಪತ್ನಾಲ್ಕು ಸಭಾಪ್ರಮುಖರು ದೇವರಿಗೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ, |
೧೭ |
“ಪ್ರಭುವೇ, ದೇವನೇ, ಸರ್ವಶಕ್ತನೇ, ಇರುವಾತನೂ ಇದ್ದಾತನೂ ನೀನೇ ಘನಾಧಿಕಾರವನ್ನು ತೋರಿ ನೀ ಆಳುತ್ತಿರುವೆ ಧನ್ಯವಾದಗಳನ್ನು ನಿನಗೆ ಸಲ್ಲಿಸುವೆ. |
೧೮ |
ಕೆರಳಿದವು ವಿಶ್ವ ರಾಷ್ಟ್ರಗಳು ಎರಗಿತು ನಿನ್ನ ಪ್ರಕೋಪವು ಸಮೀಪಿಸಿತು ಮೃತರ ನ್ಯಾಯತೀರ್ಪಿನ ದಿನವು ಬಂದಿದೆ ಸಮಯ ಸನ್ಮಾನಿಸಲು ನಿನ್ನ ದಾಸರನು, ಪ್ರವಾದಿಗಳನು, ದೇವಪ್ರಜೆಗಳನು ನಿನ್ನಲ್ಲಿ ಭಯಭಕುತಿಯುಳ್ಳ ಹಿರಿಯ ಕಿರಿಯರನು. ಇದಿಗೋ ಬಂದಿದೆ ಗಳಿಗೆಯು ಲೋಕನಾಶಕರನ್ನು ವಿನಾಶಗೊಳಿಸಲು\, ಎಂದು ಹಾಡಿದರು. |
೧೯ |
ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.
|
Kannada Bible (KNCL) 2016 |
No Data |
|
|
|
|
|
|
|
|
|
|
ಪ್ರಕಟನೆ ೧೧:1 |
ಪ್ರಕಟನೆ ೧೧:2 |
ಪ್ರಕಟನೆ ೧೧:3 |
ಪ್ರಕಟನೆ ೧೧:4 |
ಪ್ರಕಟನೆ ೧೧:5 |
ಪ್ರಕಟನೆ ೧೧:6 |
ಪ್ರಕಟನೆ ೧೧:7 |
ಪ್ರಕಟನೆ ೧೧:8 |
ಪ್ರಕಟನೆ ೧೧:9 |
ಪ್ರಕಟನೆ ೧೧:10 |
ಪ್ರಕಟನೆ ೧೧:11 |
ಪ್ರಕಟನೆ ೧೧:12 |
ಪ್ರಕಟನೆ ೧೧:13 |
ಪ್ರಕಟನೆ ೧೧:14 |
ಪ್ರಕಟನೆ ೧೧:15 |
ಪ್ರಕಟನೆ ೧೧:16 |
ಪ್ರಕಟನೆ ೧೧:17 |
ಪ್ರಕಟನೆ ೧೧:18 |
ಪ್ರಕಟನೆ ೧೧:19 |
|
|
|
|
|
|
ಪ್ರಕಟನೆ 1 / ಪ್ರಕ 1 |
ಪ್ರಕಟನೆ 2 / ಪ್ರಕ 2 |
ಪ್ರಕಟನೆ 3 / ಪ್ರಕ 3 |
ಪ್ರಕಟನೆ 4 / ಪ್ರಕ 4 |
ಪ್ರಕಟನೆ 5 / ಪ್ರಕ 5 |
ಪ್ರಕಟನೆ 6 / ಪ್ರಕ 6 |
ಪ್ರಕಟನೆ 7 / ಪ್ರಕ 7 |
ಪ್ರಕಟನೆ 8 / ಪ್ರಕ 8 |
ಪ್ರಕಟನೆ 9 / ಪ್ರಕ 9 |
ಪ್ರಕಟನೆ 10 / ಪ್ರಕ 10 |
ಪ್ರಕಟನೆ 11 / ಪ್ರಕ 11 |
ಪ್ರಕಟನೆ 12 / ಪ್ರಕ 12 |
ಪ್ರಕಟನೆ 13 / ಪ್ರಕ 13 |
ಪ್ರಕಟನೆ 14 / ಪ್ರಕ 14 |
ಪ್ರಕಟನೆ 15 / ಪ್ರಕ 15 |
ಪ್ರಕಟನೆ 16 / ಪ್ರಕ 16 |
ಪ್ರಕಟನೆ 17 / ಪ್ರಕ 17 |
ಪ್ರಕಟನೆ 18 / ಪ್ರಕ 18 |
ಪ್ರಕಟನೆ 19 / ಪ್ರಕ 19 |
ಪ್ರಕಟನೆ 20 / ಪ್ರಕ 20 |
ಪ್ರಕಟನೆ 21 / ಪ್ರಕ 21 |
ಪ್ರಕಟನೆ 22 / ಪ್ರಕ 22 |