೧ |
ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಬಂದ ಒಂದು ಮಹಾಶಬ್ದವನ್ನು ಆಲಿಸಿದೆ. ಅದು ದೊಡ್ಡ ಜನಸಮೂಹದ ಆರ್ಭಟದಂತಿತ್ತು. “ಅಲ್ಲೆಲೂಯ! ಜೀವೋದ್ಧಾರವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲುಂಟು. |
೨ |
ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು. |
೩ |
ಅವರು ಮತ್ತೊಮ್ಮೆ, “ಅಲ್ಲೆಲೂಯ! ಅವಳ ದಹನದಿಂದ ಹೊಗೆ ಸತತ ಮೇಲೇರುತಿಹುದು ಒಂದೇಸಮನೆ,” ಎಂದು ಕೂಗಿದರು. |
೪ |
ಆಗ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ನಾಲ್ಕು ಜೀವಿಗಳೂ ಸಿಂಹಾಸನಾರೂಢರಾದ ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. “ಆಮೆನ್, ಅಲ್ಲೆಲೂಯ,” ಎಂದರು. |
೫ |
ಬಳಿಕ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿ: “ದೇವರ ಎಲ್ಲಾ ದಾಸರೇ, ಅವರಲ್ಲಿ ಭಯಭಕ್ತಿಯುಳ್ಳ ಹಿರಿಯಕಿರಿಯರೇ, ನಮ್ಮ ದೇವರನ್ನು ಕೊಂಡಾಡಿ,” ಎಂದು ಹೇಳಿತು. |
೬ |
ತರುವಾಯ ನನಗೆ ಮತ್ತೊಂದು ಧ್ವನಿ ಕೇಳಿಸಿತು. ಅದು ದೊಡ್ಡ, ಜನಸಮೂಹದ ಆರ್ಭಟದಂತೆಯೂ ಭೋರ್ಗರೆಯುವ ಜಲಪ್ರವಾಹದ ಮೊರೆತದಂತೆಯೂ ಭಾರಿ ಗುಡುಗಿನ ಗರ್ಜನೆಯಂತೆಯೂ ಇತ್ತು. ಅದು ಇಂತೆಂದಿತು: “ಅಲ್ಲೆಲೂಯ! ಸರ್ವಶಕ್ತ ನಮ್ಮ ಪ್ರಭು ದೇವ ರಾಜ್ಯವಾಳುತಿಹನಾತ. |
೭ |
ಬಂದಿದೆ ಯಜ್ಞದ ಕುರಿಮರಿಯ ಶುಭ ವಿವಾಹ ಸಿದ್ಧಳಿಹಳು ಮದುಮಗಳು ಶೃಂಗಾರ ಸಹಿತ ಸಂತೋಷಿಸೋಣ, ಸಂಭ್ರಮಿಸೋಣ! ಆತನ ಮಹಿಮೆಯನು ಕೀರ್ತಿಸೋಣ; |
೮ |
ದಿವ್ಯವಾದುವು, ಭವ್ಯವಾದುವು, ಮೌಲ್ಯವಾದುವು, ಆಕೆಗಿತ್ತ ಉಡುಗೆತೊಡುಗೆಗಳು; ಸತ್ಕಾರ್ಯಗಳೇ ದೇವಜನರು ಧರಿಸುವ ಅಮೂಲ್ಯ ಉಡುಗೆತೊಡುಗೆಗಳು.” |
೯ |
ಅನಂತರ ದೇವದೂತನು, “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು. |
೧೦ |
ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ. |
೧೧ |
ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು. |
೧೨ |
ಆತನ ಕಣ್ಣುಗಳು ಬೆಂಕಿಯ ಕೆಂಡಗಳಂತಿವೆ; ತಲೆಯ ಮೇಲೆ ಅನೇಕ ಕಿರೀಟಗಳಿವೆ.ಆತನ ಹೆಸರನ್ನು ಬರೆದಿಟ್ಟಿದೆ; ಅದು ಆತನಿಗೇ ಹೊರತು ಬೇರೆ ಯಾರಿಗೂ ತಿಳಿಯದು. |
೧೩ |
ಆತನು ಧರಿಸಿದ್ದ ಉಡುಪು ರಕ್ತಪ್ರೋಕ್ಷಿತವಾಗಿತ್ತು. ಆತನಿಗೆ ‘ದೇವರ ವಾಕ್ಯ’ ಎಂದು ಹೆಸರು. |
೧೪ |
ಸ್ವರ್ಗದ ಸೈನಿಕರು ಬಿಳಿಯ ಕುದುರೆಗಳನ್ನೇರಿ ಆತನನ್ನು ಹಿಂಬಾಲಿಸಿದರು. ಅವರು ಶುಭ್ರವಾದ ಬಿಳಿಯ ಸಮವಸ್ತ್ರಗಳನ್ನು ಧರಿಸಿದ್ದರು. |
೧೫ |
ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು. |
೧೬ |
ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು. |
೧೭ |
ಅನಂತರ ದೇವದೂತನೊಬ್ಬ ಸೂರ್ಯನ ಮೇಲೆ ನಿಂತಿರುವುದನ್ನು ಕಂಡೆ. ಆತನು ಗಟ್ಟಿಯಾದ ಧ್ವನಿಯಿಂದ ಮಧ್ಯಾಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಹೀಗೆ ಹೇಳಿದನು: “ದೇವರ ದೊಡ್ಡ ಔತಣಕ್ಕೆ ಕೂಡಿಬನ್ನಿ; |
೧೮ |
ರಾಜರುಗಳ ಮಾಂಸವನ್ನು, ಸೇನಾಧಿಪತಿಗಳ ಮಾಂಸವನ್ನು ಮತ್ತು ಪರಾಕ್ರಮಶಾಲಿಗಳ ಮಾಂಸವನ್ನು ತಿನ್ನ ಬನ್ನಿ; ಕುದುರೆಗಳ ಮಾಂಸವನ್ನೂ ರಾವುತರ ಮಾಂಸವನ್ನೂ ಉಣ ಬನ್ನಿ; ಯಜಮಾನರ, ಗುಲಾಮರ, ಚಿಕ್ಕವರ, ದೊಡ್ಡವರ ಈ ಎಲ್ಲಾ ನರಮಾನವರ ಮಾಂಸವನ್ನು ರುಚಿಸ ಬನ್ನಿ,” ಎಂದನು. |
೧೯ |
ಅನಂತರ ಆ ಮೃಗವನ್ನು ಕಂಡೆ. ಕುದುರೆಯ ಮೇಲೆ ಕುಳಿತಿದ್ದಾತನ ಮೇಲೂ ಅವನ ಸೈನ್ಯದ ಮೇಲೂ ಯುದ್ಧಮಾಡುವುದಕ್ಕಾಗಿ, ಆ ಮೃಗವೂ ಭೂಲೋಕದ ರಾಜರೂ ಅವರ ಸೈನ್ಯಗಳೊಡನೆ ಒಟ್ಟಾಗಿ ಸೇರಿಬಂದರು. |
೨೦ |
ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು. |
೨೧ |
ಇನ್ನುಳಿದವರು ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹೊರಟ ಖಡ್ಗದಿಂದ ಹತರಾದರು; ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಆಹಾರವಾದರು.
|
Kannada Bible (KNCL) 2016 |
No Data |
|
|
|
|
|
|
|
|
|
|
ಪ್ರಕಟನೆ ೧೯:1 |
ಪ್ರಕಟನೆ ೧೯:2 |
ಪ್ರಕಟನೆ ೧೯:3 |
ಪ್ರಕಟನೆ ೧೯:4 |
ಪ್ರಕಟನೆ ೧೯:5 |
ಪ್ರಕಟನೆ ೧೯:6 |
ಪ್ರಕಟನೆ ೧೯:7 |
ಪ್ರಕಟನೆ ೧೯:8 |
ಪ್ರಕಟನೆ ೧೯:9 |
ಪ್ರಕಟನೆ ೧೯:10 |
ಪ್ರಕಟನೆ ೧೯:11 |
ಪ್ರಕಟನೆ ೧೯:12 |
ಪ್ರಕಟನೆ ೧೯:13 |
ಪ್ರಕಟನೆ ೧೯:14 |
ಪ್ರಕಟನೆ ೧೯:15 |
ಪ್ರಕಟನೆ ೧೯:16 |
ಪ್ರಕಟನೆ ೧೯:17 |
ಪ್ರಕಟನೆ ೧೯:18 |
ಪ್ರಕಟನೆ ೧೯:19 |
ಪ್ರಕಟನೆ ೧೯:20 |
ಪ್ರಕಟನೆ ೧೯:21 |
|
|
|
|
|
|
ಪ್ರಕಟನೆ 1 / ಪ್ರಕ 1 |
ಪ್ರಕಟನೆ 2 / ಪ್ರಕ 2 |
ಪ್ರಕಟನೆ 3 / ಪ್ರಕ 3 |
ಪ್ರಕಟನೆ 4 / ಪ್ರಕ 4 |
ಪ್ರಕಟನೆ 5 / ಪ್ರಕ 5 |
ಪ್ರಕಟನೆ 6 / ಪ್ರಕ 6 |
ಪ್ರಕಟನೆ 7 / ಪ್ರಕ 7 |
ಪ್ರಕಟನೆ 8 / ಪ್ರಕ 8 |
ಪ್ರಕಟನೆ 9 / ಪ್ರಕ 9 |
ಪ್ರಕಟನೆ 10 / ಪ್ರಕ 10 |
ಪ್ರಕಟನೆ 11 / ಪ್ರಕ 11 |
ಪ್ರಕಟನೆ 12 / ಪ್ರಕ 12 |
ಪ್ರಕಟನೆ 13 / ಪ್ರಕ 13 |
ಪ್ರಕಟನೆ 14 / ಪ್ರಕ 14 |
ಪ್ರಕಟನೆ 15 / ಪ್ರಕ 15 |
ಪ್ರಕಟನೆ 16 / ಪ್ರಕ 16 |
ಪ್ರಕಟನೆ 17 / ಪ್ರಕ 17 |
ಪ್ರಕಟನೆ 18 / ಪ್ರಕ 18 |
ಪ್ರಕಟನೆ 19 / ಪ್ರಕ 19 |
ಪ್ರಕಟನೆ 20 / ಪ್ರಕ 20 |
ಪ್ರಕಟನೆ 21 / ಪ್ರಕ 21 |
ಪ್ರಕಟನೆ 22 / ಪ್ರಕ 22 |