೧ |
ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು. |
೨ |
ಆಗ ದಡದ ಮೇಲಿದ್ದ ಎರಡು ದೋಣಿಗಳು ಯೇಸುವಿನ ಕಣ್ಣಿಗೆ ಬಿದ್ದವು. ಬೆಸ್ತರು ದೋಣಿಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು. |
೩ |
ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು. |
೪ |
ಬೋಧನೆ ಮುಗಿದದ್ದೇ ಸಿಮೋನನಿಗೆ, “ನೀರು ಆಳವಾಗಿರುವ ಸ್ಥಳಕ್ಕೆ ದೋಣಿಯನ್ನು ಹಾಯಿಸಿ, ಮೀನುಬೇಟೆಗೆ ನಿಮ್ಮ ಬಲೆಗಳನ್ನು ಹಾಕಿರಿ,” ಎಂದರು. |
೫ |
ಅದಕ್ಕೆ ಸಿಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ; ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆ ಕೊಟ್ಟು ಬಲೆಗಳನ್ನು ಹಾಕುತ್ತೇವೆ,” ಎಂದನು. |
೬ |
ಬಲೆಗಳನ್ನು ಹಾಕಿದ್ದೇ ಮೀನುಗಳು ರಾಶಿರಾಶಿಯಾಗಿ ಸಿಕ್ಕಿಕೊಂಡವು; ಬಲೆಗಳು ಹರಿದುಹೋಗುವುದರಲ್ಲಿದ್ದವು. |
೭ |
ಆದುದರಿಂದ ಬೇರೆ ದೋಣಿಯಲ್ಲಿದ್ದ ತಮ್ಮ ಸಂಗಡಿಗರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲು ಆರಂಭಿಸಿದವು. |
೮ |
ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು. |
೯ |
ಹಿಡಿದ ಮೀನಿನ ರಾಶಿಯನ್ನು ಕಂಡು ಅವನ ಸಂಗಡಿಗರೆಲ್ಲರೂ ನಿಬ್ಬೆರಗಾಗಿ ಹೋಗಿದ್ದರು. |
೧೦ |
ಸಿಮೋನನ ಪಾಲುಗಾರರಾದ ಜೆಬೆದಾಯನ ಮಕ್ಕಳು - ಯಕೋಬ ಮತ್ತು ಯೊವಾನ್ನರು - ಹಾಗೆಯೇ ಬೆರಗಾಗಿದ್ದರು. ಆಗ ಯೇಸು ಸಿಮೋನನಿಗೆ, “ಹೆದರಬೇಡ, ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ,” ಎಂದರು. |
೧೧ |
ಆ ಬೆಸ್ತರು ದೋಣಿಗಳನ್ನು ದಡಕ್ಕೆ ಸಾಗಿಸಿದ್ದೇ ಎಲ್ಲವನ್ನು ತ್ಯಜಿಸಿಬಿಟ್ಟು ಯೇಸುವನ್ನು ಹಿಂಬಾಲಿಸಿದರು. |
೧೨ |
ಯೇಸುಸ್ವಾಮಿ ಒಂದು ಪಟ್ಟಣದಲ್ಲಿ ಇದ್ದಾಗ, ಮೈಯೆಲ್ಲಾ ಕುಷ್ಠ ಹಿಡಿದಿದ್ದ ರೋಗಿ ಒಬ್ಬನು ಅಲ್ಲಿಗೆ ಬಂದು ಅವರಿಗೆ ಅಡ್ಡಬಿದ್ದು, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿಕೊಂಡನು. |
೧೩ |
ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ; ನಿನಗೆ ಗುಣವಾಗಲಿ,” ಎಂದರು. ತಕ್ಷಣವೇ ಕುಷ್ಠವು ಮಾಯವಾಗಿ ಅವನು ಗುಣಹೊಂದಿದನು. |
೧೪ |
ಇದನ್ನು ಯಾರಿಗೂ ಹೇಳಕೂಡದು ಎಂದು ಯೇಸು ಅವನನ್ನು ಎಚ್ಚರಿಸಿ, “ನೀನು ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ; ನಂತರ ಮೋಶೆ ನಿಯಮಿಸಿರುವ ಪ್ರಕಾರ ನೀನು ಗುಣಹೊಂದಿದ್ದಕ್ಕಾಗಿ ಶುದ್ಧೀಕರಣ ವಿಧಿಯನ್ನು ಅನುಸರಿಸು; ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು. |
೧೫ |
ಯೇಸು ಎಷ್ಟು ಎಚ್ಚರಿಸಿದರೋ ಅಷ್ಟೂ ಅಧಿಕವಾಗಿ ಅವರ ಸುದ್ದಿ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ತಂಡೋಪತಂಡವಾಗಿ ಬರುತ್ತಿದ್ದರು. |
೧೬ |
ಯೇಸುವಾದರೋ ನಿರ್ಜನ ಪ್ರದೇಶಕ್ಕೆ ಹೋಗಿ ಎಂದಿನಂತೆ ಪ್ರಾರ್ಥನೆಯಲ್ಲಿ ಮಗ್ನರಾಗುತ್ತಿದ್ದರು. |
೧೭ |
ಒಮ್ಮೆ ಯೇಸುಸ್ವಾಮಿ ಬೋಧನೆಮಾಡುತ್ತಾ ಇದ್ದಾಗ, ಫರಿಸಾಯರೂ ಧರ್ಮಶಾಸ್ತ್ರಜ್ಞರೂ ಅವರ ಹತ್ತಿರ ಕುಳಿತಿದ್ದರು. ಇವರು ಗಲಿಲೇಯ ಹಾಗೂ ಜುದೇಯ ಪ್ರಾಂತ್ಯದ ಊರೂರುಗಳಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಬಂದಿದ್ದರು. ಗುಣಪಡಿಸುವಂತಹ ದೈವಶಕ್ತಿ ಯೇಸುವಿನಲ್ಲಿತ್ತು. |
೧೮ |
ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅಲ್ಲಿಗೆ ಬಂದರು. ರೋಗಿಯನ್ನು ಒಳಕ್ಕೆ ತೆಗೆದುಕೊಂಡು ಹೋಗಿ ಯೇಸುವಿನ ಮುಂದೆಯೇ ಇಡಬೇಕೆಂದು ಪ್ರಯತ್ನಿಸಿದರು. |
೧೯ |
ಆದರೆ ಜನಸಂದಣಿಯ ನಿಮಿತ್ತ ದಾರಿಮಾಡಲಾಗಲಿಲ್ಲ. ಆಗ ಅವರು ಮನೆಯ ಮೇಲೆ ಹತ್ತಿ, ಹೆಂಚುಗಳನ್ನು ತೆಗೆದು, ಅಲ್ಲಿಂದ ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು. |
೨೦ |
ಯೇಸು ಅವರ ವಿಶ್ವಾಸವನ್ನು ಮೆಚ್ಚಿ, “ತಮ್ಮಾ, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು. |
೨೧ |
ಇದನ್ನು ಕೇಳಿದ ಧರ್ಮಶಾಸ್ತ್ರಿಗಳೂ ಫರಿಸಾಯರೂ, “ದೇವದೂಷಣೆ ಆಡುತ್ತಿರುವ ಇವನಾರು? ದೇವರೊಬ್ಬರನ್ನು ಬಿಟ್ಟರೆ ಪಾಪಗಳನ್ನು ಕ್ಷಮಿಸಿ ಪರಿಹರಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮಲ್ಲೇ ಹೇಳಿಕೊಳ್ಳಲು ಆರಂಭಿಸಿದರು. |
೨೨ |
ಯೇಸು ಅವರ ಆಲೋಚನೆಗಳನ್ನು ಗ್ರಹಿಸಿಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಆಲೋಚಿಸುತ್ತಾ ಇರುವುದೇನು? |
೨೩ |
‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,’ ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ? |
೨೪ |
ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯ ಕಡೆ ನೋಡಿ, “ ‘ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೊರಡು,’ ಎಂದು ನಿನಗೆ ಆಜ್ಞಾಪಿಸುತ್ತೇನೆ” ಎಂದರು. |
೨೫ |
ತಕ್ಷಣವೇ ಅವರೆಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದು, ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೋದನು. |
೨೬ |
ಎಲ್ಲರೂ ನಿಬ್ಬೆರಗಾಗಿ, ‘ನಾವು ಈ ದಿನ ಎಂಥ ಅಪೂರ್ವ ಕಾರ್ಯವನ್ನು ಕಂಡೆವು!’ ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು. |
೨೭ |
ಅನಂತರ ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿದ್ದಾಗ ಲೇವಿ ಎಂಬ ಸುಂಕದವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. |
೨೮ |
ಲೇವಿಯು ಎದ್ದು ಎಲ್ಲವನ್ನೂ ಪರಿತ್ಯಜಿಸಿ, ಯೇಸುವನ್ನು ಹಿಂಬಾಲಿಸಿದನು. |
೨೯ |
ತರುವಾಯ ಆ ಲೇವಿ ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಬಹುಜನ ಸುಂಕದವರೂ ಇತರರೂ ಯೇಸುವಿನ ಪಂಕ್ತಿಯಲ್ಲೇ ಊಟಕ್ಕೆ ಕುಳಿತಿದ್ದರು. |
೩೦ |
ಇದನ್ನು ಕಂಡ ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಧರ್ಮಶಾಸ್ತ್ರಜ್ಞರು ಗೊಣಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬಂದು, “ನೀವು ಸುಂಕದವರ ಮತ್ತು ಪಾಪಿಷ್ಠರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?” ಎಂದು ಪ್ರಶ್ನಿಸಿದರು. |
೩೧ |
ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ವೈದ್ಯನ ಅವಶ್ಯಕತೆಯಿರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ; |
೩೨ |
ನಾನು ಬಂದಿರುವುದು ಧರ್ಮಿಷ್ಠರನ್ನು ಕರೆಯುವುದಕ್ಕಲ್ಲ, ‘ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ, ದೇವರಿಗೆ ಅಭಿಮುಖಿಗಳಾಗಿರಿ’ ಎಂದು ಪಾಪಿಷ್ಠರನ್ನು ಕರೆಯುವುದಕ್ಕೆ,” ಎಂದರು. |
೩೩ |
“ಯೊವಾನ್ನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆ ಮಾಡುತ್ತಾರೆ. ಅದರಂತೆಯೇ, ಫರಿಸಾಯರ ಶಿಷ್ಯರೂ ಮಾಡುತ್ತಾರೆ. ನಿನ್ನ ಶಿಷ್ಯರಾದರೋ ತಿಂದು ಕುಡಿಯುವುದರಲ್ಲಿಯೇ ಇದ್ದಾರೆ,” ಎಂದು ಕೆಲವರು ಮೂದಲಿಸಿದರು. |
೩೪ |
ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿರುವಾಗ ಮದುವೆಯ ಅತಿಥಿಗಳನ್ನು ಉಪವಾಸವಿರಿಸಲಾದೀತೆ? |
೩೫ |
ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು. ಆ ದಿನಗಳು ಬಂದಾಗ ಅವರು ಉಪವಾಸಮಾಡುವರು,” ಎಂದು ಉತ್ತರಕೊಟ್ಟರು. |
೩೬ |
ಮತ್ತೆ ಅವರಿಗೆ ಯೇಸು ಈ ಸಾಮತಿಯನ್ನು ಹೇಳಿದರು: “ಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ. ಹಾಗೆ ಮಾಡಿದ್ದೇ ಆದರೆ ಹೊಸದೂ ಹರುಕಲಾಗಿ, ಹಳೆಯದೂ ಹೊಸ ತೇಪೆಗೆ ಹೊಂದಿಕೆಯಾಗದೆ ಹೋಗುತ್ತದೆ. |
೩೭ |
ಅಂತೆಯೇ, ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಹೊಸ ಮದ್ಯವು ಬುದ್ದಲಿಗಳನ್ನು ಬಿರಿಯುತ್ತದೆ; ಮದ್ಯ ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ. |
೩೮ |
ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು. |
೩೯ |
ಹಳೆ ಮದ್ಯ ಕುಡಿದವನಿಗೆ ಹೊಸದು ರುಚಿಸುವುದಿಲ್ಲ. ಅವನು ಹಳೆಯದೇ ಶ್ರೇಷ್ಠವೆನ್ನುತ್ತಾನೆ,” ಎಂದರು.
|
Kannada Bible (KNCL) 2016 |
No Data |
|
|
|
|
|
|
|
|
|
|
ಲೂಕನು ೫:1 |
ಲೂಕನು ೫:2 |
ಲೂಕನು ೫:3 |
ಲೂಕನು ೫:4 |
ಲೂಕನು ೫:5 |
ಲೂಕನು ೫:6 |
ಲೂಕನು ೫:7 |
ಲೂಕನು ೫:8 |
ಲೂಕನು ೫:9 |
ಲೂಕನು ೫:10 |
ಲೂಕನು ೫:11 |
ಲೂಕನು ೫:12 |
ಲೂಕನು ೫:13 |
ಲೂಕನು ೫:14 |
ಲೂಕನು ೫:15 |
ಲೂಕನು ೫:16 |
ಲೂಕನು ೫:17 |
ಲೂಕನು ೫:18 |
ಲೂಕನು ೫:19 |
ಲೂಕನು ೫:20 |
ಲೂಕನು ೫:21 |
ಲೂಕನು ೫:22 |
ಲೂಕನು ೫:23 |
ಲೂಕನು ೫:24 |
ಲೂಕನು ೫:25 |
ಲೂಕನು ೫:26 |
ಲೂಕನು ೫:27 |
ಲೂಕನು ೫:28 |
ಲೂಕನು ೫:29 |
ಲೂಕನು ೫:30 |
ಲೂಕನು ೫:31 |
ಲೂಕನು ೫:32 |
ಲೂಕನು ೫:33 |
ಲೂಕನು ೫:34 |
ಲೂಕನು ೫:35 |
ಲೂಕನು ೫:36 |
ಲೂಕನು ೫:37 |
ಲೂಕನು ೫:38 |
ಲೂಕನು ೫:39 |
|
|
|
|
|
|
ಲೂಕನು 1 / ಲೂಕ 1 |
ಲೂಕನು 2 / ಲೂಕ 2 |
ಲೂಕನು 3 / ಲೂಕ 3 |
ಲೂಕನು 4 / ಲೂಕ 4 |
ಲೂಕನು 5 / ಲೂಕ 5 |
ಲೂಕನು 6 / ಲೂಕ 6 |
ಲೂಕನು 7 / ಲೂಕ 7 |
ಲೂಕನು 8 / ಲೂಕ 8 |
ಲೂಕನು 9 / ಲೂಕ 9 |
ಲೂಕನು 10 / ಲೂಕ 10 |
ಲೂಕನು 11 / ಲೂಕ 11 |
ಲೂಕನು 12 / ಲೂಕ 12 |
ಲೂಕನು 13 / ಲೂಕ 13 |
ಲೂಕನು 14 / ಲೂಕ 14 |
ಲೂಕನು 15 / ಲೂಕ 15 |
ಲೂಕನು 16 / ಲೂಕ 16 |
ಲೂಕನು 17 / ಲೂಕ 17 |
ಲೂಕನು 18 / ಲೂಕ 18 |
ಲೂಕನು 19 / ಲೂಕ 19 |
ಲೂಕನು 20 / ಲೂಕ 20 |
ಲೂಕನು 21 / ಲೂಕ 21 |
ಲೂಕನು 22 / ಲೂಕ 22 |
ಲೂಕನು 23 / ಲೂಕ 23 |
ಲೂಕನು 24 / ಲೂಕ 24 |