೧ |
ಹಾಗಾದರೆ ನಾವು ಏನು ಹೇಳೋಣ? ದೈವಾನುಗ್ರಹವು ಹೆಚ್ಚುವಂತೆ ನಾವು ಪಾಪದಲ್ಲೇ ನೆಲೆಗೊಂಡು ಇರೋಣವೇ? |
೨ |
ಖಂಡಿತವಾಗಿಯೂ ಕೂಡದು. ಪಾಪದ ಪಾಲಿಗೆ ಸತ್ತಿರುವ ನಾವು ಅದರಲ್ಲೇ ಜೀವಿಸುವುದು ಹೇಗೆ ತಾನೆ ಸಾಧ್ಯ? |
೩ |
ಕ್ರಿಸ್ತಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೆ? |
೪ |
ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸಜೀವವನ್ನು ಹೊಂದಿ ಬಾಳುತ್ತೇವೆ. |
೫ |
ಅವರು ಮರಣ ಹೊಂದಿದಂತೆ ನಾವೂ ಅವರೊಂದಿಗೆ ಐಕ್ಯವಾಗಿ ಮರಣವನ್ನು ಹೊಂದುತ್ತೇವೆ. ಅಂತೆಯೇ, ಅವರು ಪುನರುತ್ಥಾನ ಆದಂತೆ ನಾವೂ ಅವರೊಡನೆ ಐಕ್ಯವಾಗಿ ಪುನರುತ್ಥಾನ ಹೊಂದುತ್ತೇವೆ. |
೬ |
ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ. |
೭ |
ಹೀಗೆ ಸತ್ತವನು ಪಾಪಬಂಧದಿಂದ ಬಿಡುಗಡೆಹೊಂದಿದವನು. |
೮ |
ಕ್ರಿಸ್ತಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ ವಿಶ್ವಾಸ. |
೯ |
ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ. |
೧೦ |
ಏಕೆಂದರೆ, ಅವರು ಪಾಪದ ಪಾಲಿಗೆ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ಸತ್ತವರು. ಅವರು ಈಗ ಜೀವಿಸುವುದು ದೇವರಿಗಾಗಿಯೇ. |
೧೧ |
ಅಂತೆಯೇ ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ದೇವರಿಗಾಗಿ ಮಾತ್ರ ಯೇಸುಕ್ರಿಸ್ತರಲ್ಲಿ ಜೀವಿಸುವವರೆಂದೂ ಪರಿಗಣಿಸಿರಿ. |
೧೨ |
ಆದ್ದರಿಂದ ದೈಹಿಕ ದುರಿಚ್ಛೆಗಳಿಗೆ ದಾಸರಾಗಿ ನೀವು ನಡೆಯದಂತೆ, ನಿಮ್ಮ ನಶ್ವರ ಶರೀರಗಳ ಮೇಲೆ ಪಾಪವು ತನ್ನ ದಬ್ಬಾಳಿಕೆಯನ್ನು ಇನ್ನೆಂದಿಗೂ ನಡೆಸದಿರಲಿ. |
೧೩ |
ನಿಮ್ಮ ದೇಹದ ಯಾವುದೇ ಅಂಗವು ದುಷ್ಕೃತ್ಯವನ್ನೆಸಗುವ ಸಾಧನವಾಗುವಂತೆ ಪಾಪದ ಕಾರ್ಯಕ್ಕೆ ಅದನ್ನು ಒಪ್ಪಿಸದಿರಿ. ಬದಲಾಗಿ ಸತ್ತು ಜೀವಕ್ಕೆ ಬಂದವರಂತೆ ದೇವರಿಗೆ ನಿಮ್ಮನ್ನೇ ಸಮರ್ಪಿಸಿಕೊಳ್ಳಿರಿ; ನಿಮ್ಮ ಅಂಗಗಳನ್ನು ಸತ್ಕಾರ್ಯ ಸಾಧನಗಳನ್ನಾಗಿ ದೇವರಿಗೆ ಒಪ್ಪಿಸಿಕೊಡಿರಿ. |
೧೪ |
ಏಕೆಂದರೆ ಪಾಪವು ಇನ್ನೆಂದಿಗೂ ನಿಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗದು; ನೀವಿನ್ನು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ದೈವಾನುಗ್ರಹಕ್ಕೆ ಮಾತ್ರ ಅಧೀನರು. |
೧೫ |
ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರಕ್ಕೆ ಅಧೀನರಾಗಿರದೆ ದೈವಾನುಗ್ರಹಕ್ಕೆ ಅಧೀನರಾಗಿರುವ ನಾವು ಪಾಪಮಾಡುತ್ತಲೆ ಜೀವಿಸೋಣವೆ? ಸರ್ವಥಾ ಇಲ್ಲ. |
೧೬ |
ಯಾರ ಕೈಕೆಳಗೆ ಗುಲಾಮರಾಗಿರಲು ನಿಮ್ಮನ್ನೇ ಒಪ್ಪಿಸಿಕೊಳ್ಳುತ್ತೀರೋ ಅವರಿಗೆ ನೀವು ಶರಣಾಗುತ್ತೀರಿ. ನೀವು ಪಾಪಕ್ಕೆ ಗುಲಾಮರಾದರೆ ಮರಣವೇ ನಿಮಗೆ ಗತಿ; ದೇವರಿಗೆ ಶರಣಾದರೆ ಸತ್ಸಂಬಂಧವೇ ಅದರ ಸತ್ಪರಿಣಾಮ. |
೧೭ |
ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ; |
೧೮ |
ಪಾಪಬಂಧನದಿಂದ ಬಿಡುಗಡೆ ಹೊಂದಿ ದೇವಸಂಬಂಧಕ್ಕೆ ಒಳಗಾದಿರಿ. |
೧೯ |
ಇದನ್ನು ಅರ್ಥಮಾಡಿಕೊಳ್ಳಲು ನೀವು ಅಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ. |
೨೦ |
ನೀವು ಪಾಪಕ್ಕೆ ಗುಲಾಮರಾಗಿದ್ದಾಗ ದೇವಸಂಬಂಧಕ್ಕೆ ಒಳಗಾಗಿರಲಿಲ್ಲ. |
೨೧ |
ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ. |
೨೨ |
ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧಜೀವನ; ಅಂತಿಮವಾಗಿ ಅಮರ ಜೀವನ. |
೨೩ |
ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.
|
Kannada Bible (KNCL) 2016 |
No Data |
|
|
|
|
|
|
|
|
|
|
ರೋಮನರಿಗೆ ೬:1 |
ರೋಮನರಿಗೆ ೬:2 |
ರೋಮನರಿಗೆ ೬:3 |
ರೋಮನರಿಗೆ ೬:4 |
ರೋಮನರಿಗೆ ೬:5 |
ರೋಮನರಿಗೆ ೬:6 |
ರೋಮನರಿಗೆ ೬:7 |
ರೋಮನರಿಗೆ ೬:8 |
ರೋಮನರಿಗೆ ೬:9 |
ರೋಮನರಿಗೆ ೬:10 |
ರೋಮನರಿಗೆ ೬:11 |
ರೋಮನರಿಗೆ ೬:12 |
ರೋಮನರಿಗೆ ೬:13 |
ರೋಮನರಿಗೆ ೬:14 |
ರೋಮನರಿಗೆ ೬:15 |
ರೋಮನರಿಗೆ ೬:16 |
ರೋಮನರಿಗೆ ೬:17 |
ರೋಮನರಿಗೆ ೬:18 |
ರೋಮನರಿಗೆ ೬:19 |
ರೋಮನರಿಗೆ ೬:20 |
ರೋಮನರಿಗೆ ೬:21 |
ರೋಮನರಿಗೆ ೬:22 |
ರೋಮನರಿಗೆ ೬:23 |
|
|
|
|
|
|
ರೋಮನರಿಗೆ 1 / ರೋ 1 |
ರೋಮನರಿಗೆ 2 / ರೋ 2 |
ರೋಮನರಿಗೆ 3 / ರೋ 3 |
ರೋಮನರಿಗೆ 4 / ರೋ 4 |
ರೋಮನರಿಗೆ 5 / ರೋ 5 |
ರೋಮನರಿಗೆ 6 / ರೋ 6 |
ರೋಮನರಿಗೆ 7 / ರೋ 7 |
ರೋಮನರಿಗೆ 8 / ರೋ 8 |
ರೋಮನರಿಗೆ 9 / ರೋ 9 |
ರೋಮನರಿಗೆ 10 / ರೋ 10 |
ರೋಮನರಿಗೆ 11 / ರೋ 11 |
ರೋಮನರಿಗೆ 12 / ರೋ 12 |
ರೋಮನರಿಗೆ 13 / ರೋ 13 |
ರೋಮನರಿಗೆ 14 / ರೋ 14 |
ರೋಮನರಿಗೆ 15 / ರೋ 15 |
ರೋಮನರಿಗೆ 16 / ರೋ 16 |