ರೋಮನರಿಗೆ ೧:೧ |
ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.
|
ರೋಮನರಿಗೆ ೧:೩ |
ಈ ಸಂದೇಶ ದೇವರ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರನ್ನು ಕುರಿತಾದುದು. ಮನುಷ್ಯತ್ವದ ಮಟ್ಟಿಗೆ ಯೇಸು ದಾವೀದನ ವಂಶಜರು; ದೈವಿಕ ಪರಿಶುದ್ಧತೆಯ ಮಟ್ಟಿಗೆ ಇವರು ದೇವರ ಶಕ್ತಿಯನ್ನು ವ್ಯಕ್ತಪಡಿಸುವ ದೇವರ ಪುತ್ರ. ಸತ್ತು ಪುನರುತ್ಥಾನ ಹೊಂದಿ ಇದನ್ನು ಖಚಿತಪಡಿಸಿದವರು.
|
ರೋಮನರಿಗೆ ೧:೫ |
ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸುಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು.
|
ರೋಮನರಿಗೆ ೧:೬ |
ಯೇಸುಕ್ರಿಸ್ತರಿಗೆ ಸ್ವಂತದವರಾಗಲು ಕರೆಹೊಂದಿರುವ ನೀವು ಕೂಡ ಈ ಸರ್ವಜನಾಂಗಗಳಲ್ಲಿ ಸೇರಿದ್ದೀರಿ.
|
ರೋಮನರಿಗೆ ೧:೮ |
ಮೊಟ್ಟಮೊದಲನೆಯದಾಗಿ, ನಿಮ್ಮೆಲ್ಲರ ಪರವಾಗಿ ಯೇಸುಕ್ರಿಸ್ತರ ಮುಖಾಂತರ ನಾನು ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಏಕೆಂದರೆ, ನಿಮ್ಮ ವಿಶ್ವಾಸ ಹಾಗು ವಿಧೇಯತೆ ಇಡೀ ಜಗತ್ತಿನಲ್ಲಿ ಪ್ರಖ್ಯಾತವಾಗಿದೆ.
|
ರೋಮನರಿಗೆ ೨:೧೬ |
ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.
|
ರೋಮನರಿಗೆ ೩:೨೨ |
ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
|
ರೋಮನರಿಗೆ ೩:೨೪ |
ಆದರೆ ದೇವರು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಪಾಪವಿಮೋಚನೆಯನ್ನು ದಯಪಾಲಿಸಿ, ತಮ್ಮ ಉಚಿತಾರ್ಥ ಅನುಗ್ರಹದಿಂದ ಅವರನ್ನು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.
|
ರೋಮನರಿಗೆ ೩:೨೫ |
ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು.
|
ರೋಮನರಿಗೆ ೩:೨೬ |
ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯೂ ತಾವು ಸತ್ಯಸ್ವರೂಪರು ಮತ್ತು ನ್ಯಾಯವಂತರು ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಈ ರೀತಿ ಮಾಡಿದರು.
|
ರೋಮನರಿಗೆ ೫:೧ |
ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.
|
ರೋಮನರಿಗೆ ೫:೨ |
ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.
|
ರೋಮನರಿಗೆ ೫:೯ |
ಕ್ರಿಸ್ತಯೇಸುವಿನ ರಕ್ತಧಾರೆಯಿಂದ ನಾವೀಗ ದೇವರೊಡನೆ ಸತ್ಸಂಬಂಧದಲ್ಲಿದ್ದೇವೆ. ಹೀಗಿರಲಾಗಿ, ಬರಲಿರುವ ದೈವಕೋಪಾಗ್ನಿಯಿಂದ ಯೇಸುಕ್ರಿಸ್ತರ ಮುಖಾಂತರವೇ ಪಾರಾಗುತ್ತೇವೆ ಎಂಬುದು ಮತ್ತಷ್ಟು ನಿಶ್ಚಯವಲ್ಲವೆ?
|
ರೋಮನರಿಗೆ ೫:೧೧ |
ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆಪಡುತ್ತೇವೆ.
|
ರೋಮನರಿಗೆ ೫:೧೫ |
ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.
|
ರೋಮನರಿಗೆ ೫:೧೭ |
ಒಬ್ಬ ಮನುಷ್ಯನ ಅಪರಾಧದ ಕಾರಣ, ಒಬ್ಬ ವ್ಯಕ್ತಿಯ ಮುಖಾಂತರ ಮರಣವು ಎಲ್ಲಾ ಮಾನವರ ಮೇಲೆ ದಬ್ಬಾಳಿಕೆ ನಡೆಸಿತು. ಆದರೆ, ಹೇರಳವಾದ ದೈವಾನುಗ್ರಹವನ್ನೂ ದೇವರೊಡನೆ ಸತ್ಸಂಬಂಧವೆಂಬ ಉಚಿತಾರ್ಥ ವರವನ್ನೂ ಪಡೆದವರಾದರೋ ಯೇಸುಕ್ರಿಸ್ತ ಎಂಬ ಮಹಾತ್ಮನ ಮುಖಾಂತರ ಮತ್ತಷ್ಟು ವಿಪುಲವಾಗಿ ಸಜ್ಜೀವವನ್ನು ಪಡೆದು ರಾಜ್ಯವಾಳುತ್ತಾರೆ.
|
ರೋಮನರಿಗೆ ೫:೨೧ |
ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.
|
ರೋಮನರಿಗೆ ೬:೬ |
ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ.
|
ರೋಮನರಿಗೆ ೬:೯ |
ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ.
|
ರೋಮನರಿಗೆ ೬:೧೧ |
ಅಂತೆಯೇ ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ದೇವರಿಗಾಗಿ ಮಾತ್ರ ಯೇಸುಕ್ರಿಸ್ತರಲ್ಲಿ ಜೀವಿಸುವವರೆಂದೂ ಪರಿಗಣಿಸಿರಿ.
|
ರೋಮನರಿಗೆ ೬:೨೩ |
ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.
|
ರೋಮನರಿಗೆ ೭:೨೫ |
ದೇವರೇ; ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಕೃತಜ್ಞತೆ ಸಲ್ಲಲಿ! ನನ್ನಷ್ಟಕ್ಕೆ ನಾನೇ ದೇವರ ನಿಯಮವನ್ನು ಮನಃಪೂರ್ವಕವಾಗಿ ಪಾಲಿಸಲು ಬಯಸುತ್ತೇನೆ. ನನ್ನ ಈ ದೇಹದಲ್ಲಾದರೋ ಪಾಪದ ನಿಯಮಕ್ಕೆ ಬದ್ಧನಾಗಿದ್ದೇನೆ.
|
ರೋಮನರಿಗೆ ೮:೩೭ |
ನಮ್ಮನ್ನು ಪ್ರೀತಿಸಿದ ಯೇಸುಕ್ರಿಸ್ತರ ಮುಖಾಂತರ ಇವೆಲ್ಲವುಗಳಲ್ಲಿಯೂ ನಾವು ಪೂರ್ಣ ಜಯಶಾಲಿಗಳಾಗುತ್ತೇವೆ.
|
ರೋಮನರಿಗೆ ೮:೩೮ |
ಸಾವಾಗಲಿ ಜೀವವಾಗಲಿ, ದೇವದೂತರಾಗಲಿ ದುರಾತ್ಮರಾಗಲಿ, ಈಗಿನ ಸಂತತಿಗಳೇ ಆಗಲಿ, ಭವಿಷ್ಯದ ಆಗುಹೋಗುಗಳೇ ಆಗಲಿ, ಯಾವ ಶಕ್ತಿಗಳೇ ಆಗಲಿ ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ತೋರಿಬಂದ ದೈವಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲಾರವು.
|
ರೋಮನರಿಗೆ ೧೫:೬ |
ಹೀಗೆ ಒಮ್ಮನಸ್ಸಿನಿಂದಲೂ ಒಕ್ಕೊರಲಿನಿಂದಲೂ ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರನ್ನು ಕೊಂಡಾಡುವಂತಾಗಲಿ.
|
ರೋಮನರಿಗೆ ೧೫:೩೦ |
ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲೂ ಪವಿತ್ರಾತ್ಮ ಪ್ರೇರಿತವಾದ ಪ್ರೀತಿಯಿಂದಲೂ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ: ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ ನನ್ನ ಹೋರಾಟದಲ್ಲಿ ಸಹಕರಿಸಿರಿ.
|
ರೋಮನರಿಗೆ ೧೬:೯ |
ಯೇಸುಕ್ರಿಸ್ತರ ಸೇವೆಯಲ್ಲಿ ನನ್ನ ಸಹೋದ್ಯೋಗಿಯಾದ ಉರ್ಬಾನನಿಗೂ ನನ್ನ ಮಿತ್ರ ಸ್ತಾಕುನಿಗೂ ವಂದನೆಗಳು.
|
ರೋಮನರಿಗೆ ೧೬:೨೦ |
ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!
|
ರೋಮನರಿಗೆ ೧೬:೨೪ |
ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೆಲ್ಲರೊಡನೆ ಇರಲಿ! ಆಮೆನ್.
|
ರೋಮನರಿಗೆ ೧೬:೨೬ |
ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.
|
ರೋಮನರಿಗೆ ೧೬:೨೭ |
ಜ್ಞಾನಾಂಬುದಿಯಾದ ಆ ಏಕೈಕ ದೇವರಿಗೆ ಯೇಸುಕ್ರಿಸ್ತರ ಮುಖಾಂತರ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.
|
Kannada Bible (KNCL) 2016 |
No Data |