A A A A A


ಹುಡುಕಿ

ಮತ್ತಾಯನು ೧೯:೧೧
ಅದಕ್ಕೆ ಯೇಸು, “ಇದನ್ನು ಅಂಗೀಕರಿಸಲು ಎಲ್ಲರಿಂದಲೂ ಸಾಧ್ಯವಿಲ್ಲ; ಯಾರಿಗೆ ಅನುಗ್ರಹಿಸಲಾಗಿದೆಯೋ ಅವರಿಂದ ಮಾತ್ರ ಸಾಧ್ಯ.


ಮತ್ತಾಯನು ೨೦:೨೩
ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು,\ ಎಂದು ನುಡಿದರು.


ಮಾರ್ಕನು ೫:೨೩
ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು.


ಮಾರ್ಕನು ೫:೩೪
ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು, ವ್ಯಾಧಿಮುಕ್ತಳಾಗಿ ಆರೋಗ್ಯದಿಂದಿರು,” ಎಂದು ಅನುಗ್ರಹಿಸಿದರು.


ಮಾರ್ಕನು ೧೦:೩೭
“ತಮ್ಮ ಮಹಿಮಾಸ್ಥಾನದಲ್ಲಿ ನಮ್ಮಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ಎಡಗಡೆಯಲ್ಲೂ ಆಸೀನರಾಗುವಂತೆ ಅನುಗ್ರಹಿಸಬೇಕು,” ಎಂದು ತಮ್ಮ ಬಯಕೆಯನ್ನು ತೋಡಿಕೊಂಡರು.


ಮಾರ್ಕನು ೧೦:೪೦
ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು,” ಎಂದು ನುಡಿದರು.


ಮಾರ್ಕನು ೧೩:೧೧
ನಿಮ್ಮನ್ನು ಬಂಧಿಸಿ ನ್ಯಾಯವಿಚಾರಣೆಗೆ ಗುರಿಪಡಿಸಿದಾಗ ಏನು ಹೇಳುವುದು ಎಂದು ಮುಂಚಿತವಾಗಿಯೇ ಚಿಂತಾಕ್ರಾಂತರಾಗದಿರಿ. ಆ ಗಳಿಗೆಯಲ್ಲಿ ನಿಮಗೆ ಅನುಗ್ರಹಿಸಲಾಗುವ ಮಾತುಗಳನ್ನೇ ನುಡಿಯಿರಿ. ಏಕೆಂದರೆ, ಮಾತನಾಡುವವರು ನೀವಲ್ಲ, ಪವಿತ್ರಾತ್ಮ.


ಲೂಕನು ೧:೩೦
ದೂತನು ಆಕೆಗೆ, “ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ;


ಲೂಕನು ೧:೭೧
‘ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ’ II


Luke 11:13
ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


ಪ್ರೇಷಿತರ ೭:೧೦
ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.


ಪ್ರೇಷಿತರ ೧೫:೧೧
ಇಲ್ಲ, ಇದು ಸರಿಯಲ್ಲ. ನಮಗೇ ಆಗಲಿ, ಅವರಿಗೇ ಆಗಲಿ, ಜೀವೋದ್ಧಾರ ದೊರಕುವುದು ಪ್ರಭು ಯೇಸುವಿನ ಅನುಗ್ರಹದಿಂದಲೇ. ಇದೇ ನಮ್ಮ ವಿಶ್ವಾಸ.”


ಪ್ರೇಷಿತರ ೨೦:೩೨
“ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.


ರೋಮನರಿಗೆ ೧:೧
ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್‍ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.


ರೋಮನರಿಗೆ ೧:೫
ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸುಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು.


ರೋಮನರಿಗೆ ೩:೨೪
ಆದರೆ ದೇವರು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಪಾಪವಿಮೋಚನೆಯನ್ನು ದಯಪಾಲಿಸಿ, ತಮ್ಮ ಉಚಿತಾರ್ಥ ಅನುಗ್ರಹದಿಂದ ಅವರನ್ನು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.


ರೋಮನರಿಗೆ ೫:೨
ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.


ರೋಮನರಿಗೆ ೫:೧೫
ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.


ರೋಮನರಿಗೆ ೫:೨೦
ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ, ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು.


ರೋಮನರಿಗೆ ೧೨:೬
ದೇವರು ಅನುಗ್ರಹಿಸಿರುವ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ನಾವು ಹೊಂದಿರುವ ವರವು ಪ್ರವಾದನೆಯ ವರವಾಗಿದ್ದರೆ ನಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅದನ್ನು ಉಪಯೋಗಿಸಬೇಕು.


ರೋಮನರಿಗೆ ೧೬:೨೦
ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ರೋಮನರಿಗೆ ೧೬:೨೪
ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೆಲ್ಲರೊಡನೆ ಇರಲಿ! ಆಮೆನ್.


ಕೊರಿಂಥಿಯರಿಗೆ ೧ ೧:೩
ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸುಕ್ರಿಸ್ತರಿಂದಲೂ ನಿಮಗೆ ಅನುಗ್ರಹ ಮತ್ತು ಶಾಂತಿಸಮಾಧಾನ ಲಭಿಸಲಿ!


ಕೊರಿಂಥಿಯರಿಗೆ ೧ ೬:೧೯
ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ಕೊರಿಂಥಿಯರಿಗೆ ೧ ೧೫:೧೦
ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಕೊರಿಂಥಿಯರಿಗೆ ೧ ೧೬:೨೩
ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೆಲ್ಲರಲ್ಲಿರಲಿ.


ಕೊರಿಂಥಿಯರಿಗೆ ೨ ೧:೧೨
ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ಕೊರಿಂಥಿಯರಿಗೆ ೨ ೯:೧೪
ದೇವರು ನಿಮಗೆ ಅನುಗ್ರಹಿಸಿರುವ ಅತಿಶಯವಾದ ವರಕ್ಕಾಗಿ ಅವರು ಪ್ರೀತಿವಾತ್ಸಲ್ಯದಿಂದ ನಿಮಗೋಸ್ಕರ ಪ್ರಾರ್ಥಿಸುವರು.


ಕೊರಿಂಥಿಯರಿಗೆ ೨ ೧೨:೯
ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.


ಗಲಾತ್ಯರಿಗೆ ೧:೬
ಕ್ರಿಸ್ತಯೇಸುವಿನ ಅನುಗ್ರಹದಿಂದ ನಿಮ್ಮನ್ನು ಕರೆದ ದೇವರನ್ನು ನೀವಿಷ್ಟು ಬೇಗನೆ ತ್ಯಜಿಸಿ, ಬೇರೊಂದು ‘ಶುಭಸಂದೇಶ’ವನ್ನು ಅಂಗೀಕರಿಸುತ್ತಿರುವಿರೆಂದು ಕೇಳಿ ನನಗೆ ಆಶ್ಚರ್ಯವಾಗುತ್ತಿದೆ.


ಗಲಾತ್ಯರಿಗೆ ೧:೧೫
ಆದರೆ, ನಾನಿನ್ನೂ ತಾಯಿಯ ಗರ್ಭದಲ್ಲಿ ಇದ್ದಾಗಲೇ ದೇವರು ನನ್ನನ್ನು ತಮ್ಮ ಅನುಗ್ರಹದಿಂದ ಆರಿಸಿಕೊಂಡು ತಮ್ಮ ಸೇವೆಗೆ ಕರೆದರು.


ಗಲಾತ್ಯರಿಗೆ ೨:೨೧
ದೇವರ ಅನುಗ್ರಹವನ್ನು ನಿರಾಕರಿಸುವಂಥವನು ನಾನಲ್ಲ. ಧರ್ಮಶಾಸ್ತ್ರದ ಮೂಲಕ ದೇವರೊಡನೆ ಸತ್ಸಂಬಂಧವು ದೊರಕುವುದಾದರೆ ಕ್ರಿಸ್ತಯೇಸು ಮರಣಕ್ಕೀಡಾದುದು ನಿರರ್ಥಕವೇ ಸರಿ.


ಗಲಾತ್ಯರಿಗೆ ೪:೭
ಆದ್ದರಿಂದ, ದೇವರ ಅನುಗ್ರಹದಿಂದಲೇ ನೀನು ಇನ್ನು ಮನೆಯಾಳಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ನೀನು ವಾರಸುದಾರನೂ ಹೌದು.


ಗಲಾತ್ಯರಿಗೆ ೬:೧೮
ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೊಡನೆ ಇರಲಿ! ಆಮೆನ್.


ಎಫೆಸಿಯರಿಗೆ ೧:೨
ಪಿತನಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!


ಎಫೆಸಿಯರಿಗೆ ೧:೩
ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಎಫೆಸಿಯರಿಗೆ ೧:೬
ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ಎಫೆಸಿಯರಿಗೆ ೧:೭
ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.


ಎಫೆಸಿಯರಿಗೆ ೨:೭
ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.


ಎಫೆಸಿಯರಿಗೆ ೪:೭
ಆದರೂ ನಮ್ಮಲ್ಲಿ ಪ್ರತಿಯೊಬ್ಬನೂ ಕ್ರಿಸ್ತಯೇಸು ಅನುಗ್ರಹಿಸುವ ಪ್ರಕಾರವೇ ವರಗಳನ್ನು ಪಡೆದಿದ್ದಾನೆ.


ಎಫೆಸಿಯರಿಗೆ ೬:೨೪
ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!


ಫಿಲಿಪಿಯರಿಗೆ ೧:೭
ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.


ಫಿಲಿಪಿಯರಿಗೆ ೩:೯
ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.


ಫಿಲಿಪಿಯರಿಗೆ ೪:೨೩
ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರಲ್ಲಿ ಇರಲಿ!


ಕೊಲೊಸ್ಸೆಯರಿಗೆ ೧:೨
ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಮತ್ತು ಸಹೋದರ ತಿಮೊಥೇಯನು ಬರೆಯುವ ಪತ್ರ. ನಮ್ಮ ತಂದೆಯಾದ ದೇವರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮ್ಮಲ್ಲಿರಲಿ!


ಕೊಲೊಸ್ಸೆಯರಿಗೆ ೧:೮
ಪವಿತ್ರಾತ್ಮ ಅವರು ನಿಮಗೆ ಅನುಗ್ರಹಿಸಿದ ಪ್ರೀತಿಯ ಬಗ್ಗೆ ನಮಗೆ ತಿಳಿಸಿದವನು ಸಹ ಆತನೇ.


ಥೆಸೆಲೋನಿಯರಿಗೆ ೧ ೫:೨೮
ನಮ್ಮ ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹ ನಿಮ್ಮಲ್ಲಿರಲಿ!


ಥೆಸೆಲೋನಿಯರಿಗೆ ೨ ೧:೨
ತಂದೆಯಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!


ಥೆಸೆಲೋನಿಯರಿಗೆ ೨ ೧:೧೨
ಹೀಗೆ ನಿಮ್ಮ ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಮ್ಮ ದೇವರ ಹಾಗು ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ.


ಥೆಸೆಲೋನಿಯರಿಗೆ ೨ ೨:೧೬
ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ಥೆಸೆಲೋನಿಯರಿಗೆ ೨ ೩:೧೮
ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರೊಡನೆ ಇರಲಿ!


ತಿಮೊಥೇಯನಿಗ ೧ ೧:೨
ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ!


ತಿಮೊಥೇಯನಿಗ ೧ ೬:೨೧
ಕೆಲವರು ಇಂಥ ಕಪಟಜ್ಞಾನವನ್ನು ಅವಲಂಬಿಸಿ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ದೇವರ ಅನುಗ್ರಹ ನಿಮ್ಮಲ್ಲಿರಲಿ!


ತಿಮೊಥೇಯನಿಗ ೨ ೧:೧
ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ!


ತಿಮೊಥೇಯನಿಗ ೨ ೧:೯
ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.


ತಿಮೊಥೇಯನಿಗ ೨ ೨:೧
ಪ್ರಿಯ ಪುತ್ರನೇ, ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅನುಗ್ರಹದಲ್ಲಿ ನೀನು ದೃಢನಾಗಿರು.


ತಿಮೊಥೇಯನಿಗ ೨ ೨:೨೫
ಬೋಧನೆಯಲ್ಲಿ ಪ್ರವೀಣನೂ ಕೇಡನ್ನು ಸಹಿಸದವನೂ ವಿರೋಧಿಗಳನ್ನು ತಾಳ್ಮೆಯಿಂದ ತಿದ್ದುವವನೂ ಆಗಿರಬೇಕು. ಆ ವಿರೋಧಿಗಳು ಪಶ್ಚಾತ್ತಾಪಪಟ್ಟು ಸನ್ಮಾರ್ಗವನ್ನು ಹಿಡಿಯುವಂತೆ ದೇವರು ಅವರಿಗೆ ಅನುಗ್ರಹಿಸಬಹುದು.


ತಿಮೊಥೇಯನಿಗ ೨ ೪:೨೨
ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ತೀತನಿಗೆ ೧:೧
ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ‍ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.


ತೀತನಿಗೆ ೨:೧೧
ಎಲ್ಲಾ ಮಾನವರ ಜೀವೋದ್ಧಾರಕ್ಕಾಗಿಯೇ ದೇವರ ಅನುಗ್ರಹವು ಪ್ರಕಟವಾಗಿದೆ.


ತೀತನಿಗೆ ೩:೬
ಪವಿತ್ರಾತ್ಮರನ್ನು ನಮ್ಮ ಉದ್ಧಾರಕ ಯೇಸುಕ್ರಿಸ್ತರ ಮುಖಾಂತರ ದೇವರು ನಮಗೆ ಧಾರಾಳವಾಗಿ ಅನುಗ್ರಹಿಸಿದ್ದಾರೆ.


ತೀತನಿಗೆ ೩:೧೫
ನನ್ನ ಜೊತೆ ಇರುವವರೆಲ್ಲ ನಿನಗೆ ಶುಭಾಶಯಗಳನ್ನು ಕಳಿಸಿದ್ದಾರೆ. ಅಲ್ಲಿ ನಿನ್ನೊಂದಿಗಿರುವ ಕ್ರೈಸ್ತಬಾಂಧವರಿಗೂ ನನ್ನ ವಂದನೆಗಳನ್ನು ಸಲ್ಲಿಸು. ದೇವರ ಅನುಗ್ರಹ ನಿಮ್ಮೆಲ್ಲರಲ್ಲಿ ಇರಲಿ!


ಫಿಲೆಮೋನನಿಗೆ ೧:೧
ನಮ್ಮ ಅತಿಪ್ರಿಯನೂ ಸಹೋದ್ಯೋಗಿಯೂ ಆದ ಫಿಲೆಮೋನನಿಗೂ ನಿನ್ನ ಮನೆಯಲ್ಲಿ ಸಭೆಸೇರುವ ಸಹೋದರರಿಗೂ ಹಾಗು ನಮ್ಮ ಸಹೋದರಿ ಅಪ್ಪಿಯ ಮತ್ತು ಸಹಸೈನಿಕ ಅರ್ಖಿಪ್ಪನಿಗೂ - ಕ್ರಿಸ್ತಯೇಸುವಿಗೋಸ್ಕರ ಸೆರೆಯಾಳಾಗಿರುವ ಪೌಲನೂ ಮತ್ತು ನಮ್ಮ ಸಹೋದರ ತಿಮೊಥೇಯನೂ ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಮತ್ತು ಒಡೆಯರಾದ ಯೇಸುಕ್ರಿಸ್ತರು ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ!


ಫಿಲೆಮೋನನಿಗೆ ೧:೨೫
ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಹಿಬ್ರಿಯರಿಗೆ ೨:೪
ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ಹಿಬ್ರಿಯರಿಗೆ ೪:೧೬
ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.


ಹಿಬ್ರಿಯರಿಗೆ ೯:೧೧
ಆದರೆ ಕ್ರಿಸ್ತಯೇಸು ಈಗಾಗಲೇ ಪ್ರಧಾನಯಾಜಕರಾಗಿ ಬಂದಿದ್ದಾರೆ. ಅವರು ಅನುಗ್ರಹಿಸುವ ಸತ್ಫಲಗಳು ಈಗಾಗಲೇ ನಮಗೆ ದೊರೆತಿವೆ. ಅವರು ಸೇವೆ ಸಲ್ಲಿಸುತ್ತಿರುವ ಗುಡಾರವು ಹಿಂದಿನವುಗಳಿಗಿಂತ ಶ್ರೇಷ್ಠವಾದುದು ಮತ್ತು ಪರಿಪೂರ್ಣವಾದುದು. ಇದು ಕೈಯಿಂದ ಕಟ್ಟಿದ್ದಲ್ಲ. ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿದ್ದಲ್ಲ.


ಹಿಬ್ರಿಯರಿಗೆ ೧೨:೧೫
ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.


ಹಿಬ್ರಿಯರಿಗೆ ೧೩:೨೧
ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಯಕೋಬನು ೪:೬
ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.


ಪೇತ್ರನು ೧ ೫:೧೨
ನನ್ನ ಈ ಪುಟ್ಟ ಪತ್ರವನ್ನು ನಂಬಿಕಸ್ಥ ಸಹೋದರನಾದ ಸಿಲ್ವಾನನ ಸಹಾಯದಿಂದ ನಿಮಗೆ ಬರೆದಿರುತ್ತೇನೆ. ನಿಮ್ಮನ್ನು ಪ್ರೋತ್ಸಾಹಿಸಲೆಂದು ಮತ್ತು ಇದುವೇ ದೇವರ ನಿಜವಾದ ಅನುಗ್ರಹವೆಂದು ಸ್ಪಷ್ಟೀಕರಿಸಲು ಬರೆದಿದ್ದೇನೆ. ಈ ಅನುಗ್ರಹದಲ್ಲಿ ನೀವು ದೃಢವಾಗಿ ನಿಲ್ಲಿರಿ.


ಪೇತ್ರನು ೨ ೧:೪
ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ.


ಪೇತ್ರನು ೨ ೧:೧೧
ನಮ್ಮ ಪ್ರಭು ಹಾಗೂ ಉದ್ಧಾರಕ ಯೇಸುಕ್ರಿಸ್ತರ ಅಮರ ರಾಜ್ಯವನ್ನು ಪ್ರವೇಶಿಸುವ ಭಾಗ್ಯವನ್ನು ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.


ಪೇತ್ರನು ೨ ೩:೧೮
ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.


ಯೊವಾನ್ನನು ೧ ೫:೧೧
ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಆ ಜೀವ ಅವರ ಪುತ್ರನಲ್ಲಿದೆ ಎಂಬುದೇ ಈ ಸಾಕ್ಷ್ಯ.


ಯೊವಾನ್ನನು ೧ ೫:೧೬
ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.


ಯೂದನು ೧:೪
ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಪ್ರಕಟನೆ ೨:೭
ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.


Kannada Bible (KNCL) 2016
No Data