A A A A A


ಹುಡುಕಿ

ಮತ್ತಾಯನು ೫:೬
ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.


ಮತ್ತಾಯನು ೫:೧೦
ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.”


ಮತ್ತಾಯನು ೫:೧೧
“ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು.


ಮತ್ತಾಯನು ೫:೨೧
“ ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.


ಮತ್ತಾಯನು ೫:೨೨
ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.


ಮತ್ತಾಯನು ೫:೨೫
“ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಮಾಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೊಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು!


ಮತ್ತಾಯನು ೧೦:೧೭
ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು.


ಮತ್ತಾಯನು ೧೨:೨೦
ಮುರಿದ ಜೊಂಡಿನಂತಹ ದುರ್ಬಲರಿಗೀತ ದೀನಬಂಧು ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು ನ್ಯಾಯನೀತಿಗೆ ಜಯ ದೊರಕಿಸದೆ ಬಿಡನಿವನು.


ಮತ್ತಾಯನು ೧೯:೨೮
ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಮತ್ತಾಯನು ೨೦:೪
ನೀವೂ ನನ್ನ ದ್ರಾಕ್ಷಿತೋಟಕ್ಕೆ ಹೋಗಿರಿ; ನ್ಯಾಯವಾದ ಕೂಲಿಯನ್ನು ನಿಮಗೆ ಕೊಡುತ್ತೇನೆ,’ ಎಂದ. ಅವರೂ ಹೋದರು.


ಮತ್ತಾಯನು ೨೦:೧೩
ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದಮಾಡಿಕೊಳ್ಳಲಿಲ್ಲವೆ?


ಮತ್ತಾಯನು ೨೩:೨೩
ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.


ಮತ್ತಾಯನು ೨೬:೫೯
ಇತ್ತ ಮುಖ್ಯಯಾಜಕರೂ ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಸುಳ್ಳುಸಾಕ್ಷಿಯನ್ನು ಹುಡುಕುತ್ತಿದ್ದರು.


ಮತ್ತಾಯನು ೨೭:೧೯
ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


ಮಾರ್ಕನು ೬:೧೮
ಈ ಕಾರಣ ಯೊವಾನ್ನನು, “ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು.


ಮಾರ್ಕನು ೧೩:೯
“ನಿಮ್ಮ ವಿಷಯದಲ್ಲೂ ಎಚ್ಚರಿಕೆಯಿಂದಿರಿ. ನಿಮ್ಮನ್ನು ನ್ಯಾಯಸ್ಥಾನಗಳಿಗೆ ಎಳೆಯುವರು; ಪ್ರಾರ್ಥನಾಮಂದಿರಗಳಲ್ಲಿ ಹೊಡೆಯುವರು. ನನ್ನ ನಿಮಿತ್ತ ನೀವು ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಬೇಕಾಗುವುದು. ಅವರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.


ಮಾರ್ಕನು ೧೩:೧೧
ನಿಮ್ಮನ್ನು ಬಂಧಿಸಿ ನ್ಯಾಯವಿಚಾರಣೆಗೆ ಗುರಿಪಡಿಸಿದಾಗ ಏನು ಹೇಳುವುದು ಎಂದು ಮುಂಚಿತವಾಗಿಯೇ ಚಿಂತಾಕ್ರಾಂತರಾಗದಿರಿ. ಆ ಗಳಿಗೆಯಲ್ಲಿ ನಿಮಗೆ ಅನುಗ್ರಹಿಸಲಾಗುವ ಮಾತುಗಳನ್ನೇ ನುಡಿಯಿರಿ. ಏಕೆಂದರೆ, ಮಾತನಾಡುವವರು ನೀವಲ್ಲ, ಪವಿತ್ರಾತ್ಮ.


ಮಾರ್ಕನು ೧೪:೫೫
ಇತ್ತ ಮುಖ್ಯಯಾಜಕರು ಮತ್ತು ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಅವರ ವಿರುದ್ಧ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.


ಮಾರ್ಕನು ೧೫:೧
ಬೆಳಗಾದ ಕೂಡಲೆ, ಮುಖ್ಯಯಾಜಕರೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಹಾಗು ನ್ಯಾಯಸಭೆಯ ಇತರ ಸದಸ್ಯರೂ ಒಟ್ಟುಗೂಡಿ ಸಮಾಲೋಚನೆ ನಡೆಸಿದರು. ಯೇಸುಸ್ವಾಮಿಗೆ ಬೇಡಿಹಾಕಿ ಪಿಲಾತನ ಬಳಿಗೆ ಕರೆದೊಯ್ದು ಆತನ ವಶಕ್ಕೊಪ್ಪಿಸಿದರು.


ಮಾರ್ಕನು ೧೫:೪೩
ತನಗೆ ಕೊಡಿಸಬೇಕೆಂದು ಪಿಲಾತನನ್ನು ಕೇಳಿಕೊಂಡನು. ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದ ಈತನು ಯೆಹೂದ್ಯರ ನ್ಯಾಯಸಭೆಯ ಸನ್ಮಾನಿತ ಸದಸ್ಯನಾಗಿದ್ದನು.


ಲೂಕನು ೧೧:೪೨
“ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು.


ಲೂಕನು ೧೨:೧೧
“ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ.


ಲೂಕನು ೧೨:೧೪
ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು.


ಲೂಕನು ೧೨:೫೭
“ನ್ಯಾಯನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು?


ಲೂಕನು ೧೨:೫೮
ನೀನು ನ್ಯಾಯಾಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯ ಅಧಿಕಾರಿಯ ಕೈಗೊಪ್ಪಿಸಬಹುದು. ಸೆರೆ ಅಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು.


ಲೂಕನು ೧೮:೨
“ಒಂದು ನಗರದಲ್ಲಿ ಒಬ್ಬ ನ್ಯಾಯಾಧೀಶನಿದ್ದ. ಅವನು ದೇವರಿಗೂ ಭಯಪಡುತ್ತಿರಲಿಲ್ಲ; ಮಾನವರಿಗೂ ಲಕ್ಷ್ಯಕೊಡುತ್ತಿರಲಿಲ್ಲ.


ಲೂಕನು ೧೮:೩
ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಅವಳು ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿ ಅನ್ಯಾಯಮಾಡಿದ್ದಾನೆ; ನನಗೆ ನ್ಯಾಯ ದೊರಕಿಸಿಕೊಡಿ,’ ಎಂದು ಕೇಳಿಕೊಳ್ಳುತ್ತಿದ್ದಳು.


ಲೂಕನು ೧೮:೪
ಬಹುಕಾಲ ನ್ಯಾಯಾಧೀಶನು ಅವಳಿಗೆ ಕಿವಿಗೊಡಲೇ ಇಲ್ಲ. ಕೊನೆಗೆ ಅವನು, ‘ನಾನು ದೇವರಿಗೆ ಹೆದರುವವನಲ್ಲ; ಮಾನವರಿಗೆ ಲಕ್ಷ್ಯಕೊಡುವವನೂ ಅಲ್ಲ;


ಲೂಕನು ೧೮:೫
ಇಷ್ಟಾದರೂ ಈ ವಿಧವೆಯ ಕಾಟವನ್ನು ತಪ್ಪಿಸಿಕೊಳ್ಳಲು, ಈಕೆಯ ನ್ಯಾಯ ತೀರಿಸಿಬಿಡುತ್ತೇನೆ. ಇಲ್ಲವಾದರೆ, ಈಕೆ ಪದೇಪದೇ ಬಂದು ನನ್ನ ತಲೆಕೆಡಿಸಿಬಿಟ್ಟಾಳು,’ ಎಂದುಕೊಂಡ.”


ಲೂಕನು ೧೮:೬
ಅನಂತರ ಪ್ರಭು ಯೇಸು, “ಈ ನೀತಿಕೆಟ್ಟ ನ್ಯಾಯಾದೀಶ ಹೇಳಿಕೊಂಡ ಮಾತುಗಳನ್ನು ಕೇಳಿದಿರಲ್ಲವೆ?


ಲೂಕನು ೧೮:೭
ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?


ಲೂಕನು ೧೮:೮
ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.


ಲೂಕನು ೧೮:೧೧
ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ.


ಲೂಕನು ೨೦:೨೦
ಆದುದರಿಂದ ಸೂಕ್ತ ಸಂದರ್ಭ ಹುಡುಕತೊಡಗಿದರು. ಯೇಸುವನ್ನು ರಾಜ್ಯಪಾಲನ ವಶಕ್ಕೂ ನ್ಯಾಯಾಧಿಕಾರಕ್ಕೂ ಒಪ್ಪಿಸುವ ಉದ್ದೇಶದಿಂದ ಗೂಢಚಾರರನ್ನು ಕಳುಹಿಸಿದರು. ಇವರು ನಿಷ್ಕಪಟಿಗಳಂತೆ ನಟಿಸುತ್ತಾ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಪ್ರಯತ್ನಿಸಿದರು.


ಲೂಕನು ೨೦:೨೧
“ಬೋಧಕರೇ, ನೀವು ಹೇಳುವುದು ಹಾಗೂ ಬೋಧಿಸುವುದು ನ್ಯಾಯಬಧ್ಧವಾಗಿಯೇ ಇದೆ. ಮುಖದಾಕ್ಷಿಣ್ಯವಿಲ್ಲದೆ ಸತ್ಯಕ್ಕನುಸಾರವಾಗಿ ಧರ್ಮಮಾರ್ಗವನ್ನು ಬೋಧಿಸುತ್ತೀರಿ. ಇದನ್ನು ನಾವು ಚೆನ್ನಾಗಿ ಬಲ್ಲೆವು.


ಲೂಕನು ೨೨:೩೦
ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಲೂಕನು ೨೨:೬೬
ಅಷ್ಟರಲ್ಲಿ ಬೆಳಗಾಯಿತು. ಪ್ರಜಾಪ್ರಮುಖರೂ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಸಭೆ ಸೇರಿದರು. ಯೇಸುವನ್ನು ತಂದು ನ್ಯಾಯಸಭೆಯ ಮುಂದೆ ನಿಲ್ಲಿಸಿದರು.


ಲೂಕನು ೨೩:೪೧
ನಮಗೇನೋ ಶಿಕ್ಷೆ ನ್ಯಾಯವಾಗಿದೆ, ನಮ್ಮ ಕೃತ್ಯಕ್ಕೆ ತಕ್ಕ ಫಲ ಸಿಕ್ಕಿದೆ; ಇವರಾದರೋ, ನಿರಪರಾಧಿ!” ಎಂದನು.


ಲೂಕನು ೨೩:೫೦
ಅರಿಮತಾಯ ಎಂಬುದು ಜುದೇಯದ ಒಂದು ಪಟ್ಟಣ. ಜೋಸೆಫನು ಇದರ ನಿವಾಸಿ. ಇವನು ಸದ್ಗುಣಶೀಲನು, ಸತ್ಪುರುಷನು ಹಾಗೂ ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದವನು. ಯೆಹೂದ್ಯರ ನ್ಯಾಯಸಭೆಯ ಸದಸ್ಯರಲ್ಲಿ ಇವನೂ ಒಬ್ಬನು. ಆದರೂ ಅವರ ತೀರ್ಪಿಗೂ ಕೃತ್ಯಕ್ಕೂ ಇವನು ಅನುಮತಿಸಿರಲಿಲ್ಲ.


ಯೊವಾನ್ನನು ೫:೩೦
“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪು ಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ಧ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ.


ಯೊವಾನ್ನನು ೭:೨೪
ಬರೀ ತೋರಿಕೆಯಿಂದ ತೀರ್ಪುಕೊಡುವುದು ಸಲ್ಲದು; ನಿಮ್ಮ ತೀರ್ಪು ನ್ಯಾಯಬದ್ಧವಾಗಿರಬೇಕು,” ಎಂದು ಹೇಳಿದರು.


ಯೊವಾನ್ನನು ೧೧:೪೭
ಮುಖ್ಯಯಾಜಕರೂ ಫರಿಸಾಯರೂ ‘ನ್ಯಾಯಸಭೆ’ಯನ್ನು ಕರೆದರು. “ಈಗ ನಾವೇನು ಮಾಡೋಣ? ಈ ಮನುಷ್ಯನು ಎಷ್ಟೋ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ;


ಯೊವಾನ್ನನು ೧೨:೩೧
ಈಗ ಈ ಲೋಕವು ನ್ಯಾಯತೀರ್ಪಿಗೆ ಒಳಗಾಗುವುದು. ಇದೀಗಲೇ ಈ ಲೋಕಾಧಿಪತಿಯನ್ನು ಹೊರದೂಡಲಾಗುವುದು.


ಯೊವಾನ್ನನು ೧೬:೮
ಆ ಪೋಷಕ ಬಂದು ಪಾಪ, ನ್ಯಾಯನೀತಿ, ಮತ್ತು ಅಂತಿಮತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು.


ಯೊವಾನ್ನನು ೧೬:೧೦
ನ್ಯಾಯನೀತಿಯ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ನಾನು ಪಿತನ ಬಳಿಗೆಹೋಗುತ್ತೇನೆ ಮತ್ತು ನೀವು ನನ್ನನ್ನು ಕಾಣಲಾರಿರಿ.


ಯೊವಾನ್ನನು ೧೬:೧೧
ಅಂತಿಮ ತೀರ್ಪಿನ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಇಹದ ಲೋಕಾಧಿಪತಿಗೆ ಈಗಾಗಲೇ ನ್ಯಾಯತೀರ್ಪನ್ನು ಕೊಡಲಾಗಿದೆ.


ಯೊವಾನ್ನನು ೧೯:೧೩
ಅವರ ಆ ಕೂಗನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿದನು. ‘ಹಾಸುಗಲ್ಲು’ ಎಂಬ ಕಟ್ಟೆಯ ಮೇಲಿದ್ದ ನ್ಯಾಯಪೀಠದ ಮೇಲೆ ಕುಳಿತುಕೊಂಡನು. ಯೆಹೂದ್ಯರ ಭಾಷೆಯಲ್ಲಿ ಆ ಸ್ಥಳಕ್ಕೆ ‘ಗಬ್ಬಥ’ ಎಂದು ಹೆಸರು.


ಪ್ರೇಷಿತರ ೫:೨೧
ಅದರಂತೆ ಪ್ರೇಷಿತರು ಮುಂಜಾವದಲ್ಲೇ ದೇವಾಲಯವನ್ನು ಪ್ರವೇಶಿಸಿ ಬೋಧಿಸಲಾರಂಭಿಸಿದರು. ಇತ್ತ ಪ್ರಧಾನಯಾಜಕನೂ ಅವನ ಸಂಗಡಿಗರೂ ಜೊತೆಗೂಡಿ ಯೆಹೂದ್ಯ ಪ್ರಮುಖರನ್ನೊಳಗೊಂಡ ಶ್ರೇಷ್ಠ ನ್ಯಾಯಸಭೆಯನ್ನು ಕರೆದರು. ಅನಂತರ ಪ್ರೇಷಿತರನ್ನು ಆ ಸಭೆಯ ಮುಂದೆ ಕರೆತರುವಂತೆ ಸೆರೆಮನೆಯ ಅಧಿಕಾರಿಗಳಿಗೆ ಆಜ್ಞೆಯಿತ್ತರು.


ಪ್ರೇಷಿತರ ೫:೨೨
ಈ ಅಧಿಕಾರಿಗಳು ಸೆರೆಮನೆಗೆ ಬಂದಾಗ ಅಲ್ಲಿ ಪ್ರೇಷಿತರನ್ನು ಕಾಣಲಿಲ್ಲ. ಹಿಂದಿರುಗಿ ಹೋಗಿ ನ್ಯಾಯಸಭೆಗೆ ಈ ವಿಷಯವನ್ನು ವರದಿಮಾಡಿದರು;


ಪ್ರೇಷಿತರ ೫:೨೭
ಪ್ರೇಷಿತರನ್ನು ಕರೆತಂದು ನ್ಯಾಯಸಭೆಯ ಮುಂದೆ ನಿಲ್ಲಿಸಲಾಯಿತು. ಪ್ರಧಾನಯಾಜಕನು ಅವರನ್ನು ಉದ್ದೇಶಿಸಿ,


ಪ್ರೇಷಿತರ ೫:೪೧
ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.


ಪ್ರೇಷಿತರ ೬:೧೨
ಹೀಗೆ ಜನರನ್ನೂ ಪ್ರಮುಖರನ್ನೂ ನ್ಯಾಯಶಾಸ್ತ್ರಜ್ಞರನ್ನೂ ಪ್ರಚೋದಿಸಿದರು. ಸ್ತೇಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ಎಳೆದು ತರುವಂತೆ ಮಾಡಿದರು.


ಪ್ರೇಷಿತರ ೬:೧೫
ನ್ಯಾಯಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನ ಮುಖವನ್ನೇ ದಿಟ್ಟಿಸಿ ನೋಡಿದರು. ಅದು ದೇವದೂತನ ಮುಖದಂತೆ ಕಂಗೊಳಿಸಿತು.


ಪ್ರೇಷಿತರ ೭:೨೪
ಆಗ ಅವರಲ್ಲಿ ಒಬ್ಬನು ಈಜಿಪ್ಟಿನವನಿಂದ ಅನ್ಯಾಯವಾಗಿ ಹಿಂಸೆಪಡುತ್ತಿರುವುದನ್ನು ಕಂಡನು. ಅವನ ಸಹಾಯಕ್ಕೆ ಹೋಗಿ ಈಜಿಪ್ಟಿನವನನ್ನು ಕೊಂದು ಸೇಡುತೀರಿಸಿದನು.


ಪ್ರೇಷಿತರ ೭:೨೭
ಆಗ ಆಕ್ರಮಣ ಮಾಡುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಮ್ಮ ನ್ಯಾಯತೀರಿಸಲು ನಿನಗೆ ಅಧಿಕಾರವನ್ನು ಕೊಟ್ಟವರು ಯಾರು?


ಪ್ರೇಷಿತರ ೭:೩೫
“ ‘ನಮ್ಮ ನ್ಯಾಯತೀರಿಸುವ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?’ ಎಂದು ಇಸ್ರಯೇಲರಿಂದ ತಿರಸ್ಕೃತನಾದವನೇ ಆ ಮೋಶೆ. ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡ ತಮ್ಮ ದೂತನ ಮೂಲಕ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ನೇಮಿಸಿದ್ದು ಇವನನ್ನೇ.


ಪ್ರೇಷಿತರ ೭:೫೪
ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು.


ಪ್ರೇಷಿತರ ೭:೫೭
ಇದನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಆರ್ಭಟಿಸಿದರು; ಕಿವಿಗಳನ್ನು ಮುಚ್ಚಿಕೊಂಡರು; ಭರದಿಂದ ಅವನತ್ತ ಧಾವಿಸಿದರು.


ಪ್ರೇಷಿತರ ೮:೩೩
ಆತನನ್ನು ಅವಮಾನಪಡಿಸಲಾಯಿತು ನ್ಯಾಯವನ್ನೇ ಆತನಿಗೆ ನಿರಾಕರಿಸಲಾಯಿತು ಆತನ ಸಂತತಿಯ ಮಾತೇ ಎತ್ತದಂತಾಯಿತು. ಇದಕಾರಣ ಆತನ ಭೌತಿಕಜೀವವನ್ನೇ ಮೊಟಕುಗೊಳಿಸಲಾಯಿತು.”


ಪ್ರೇಷಿತರ ೧೦:೪೨
ಮಾನವರಿಗೆ ಶುಭಸಂದೇಶವನ್ನು ಬೋಧಿಸುವಂತೆಯೂ ಜೀವಂತರಿಗೂ ಹಾಗೂ ಮೃತರಿಗೂ ದೇವರೇ ಅವರನ್ನು ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದಾರೆಂದು ರುಜುವಾತುಪಡಿಸುವಂತೆಯೂ ನಮಗೆ ಆಜ್ಞಾಪಿಸಿದ್ದಾರೆ.


ಪ್ರೇಷಿತರ ೧೩:೨೦
ಹೀಗೆ ಸುಮಾರು ನಾನೂರ ಐವತ್ತು ವರ್ಷಗಳು ಕಳೆದವು. ಅನಂತರ ಪ್ರವಾದಿ ಸಮುವೇಲನ ಕಾಲದವರೆಗೆ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಕಳುಹಿಸಿದರು.


ಪ್ರೇಷಿತರ ೧೬:೧೯
ಹಣ ಗಳಿಸುತ್ತಿದ್ದ ಅವಳ ಯಜಮಾನನಿಗೆ ನಿರಾಶೆಯಾಯಿತು. ಅವರು ಪೌಲ ಮತ್ತು ಸೀಲರನ್ನು ಬಂಧಿಸಿ ಸಾರ್ವಜನಿಕ ನ್ಯಾಯಸ್ಥಾನದಲ್ಲಿದ್ದ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.


ಪ್ರೇಷಿತರ ೧೬:೨೦
ಅಲ್ಲಿದ್ದ ರೋಮಿನ ನ್ಯಾಯಾಧಿಪತಿಗಳ ಮುಂದೆ ನಿಲ್ಲಿಸಿ, “ಇವರು ನಮ್ಮ ಪಟ್ಟಣದಲ್ಲಿ ಗಲಭೆ ಎಬ್ಬಿಸುತ್ತಿದ್ದಾರೆ.


ಪ್ರೇಷಿತರ ೧೬:೨೨
ಜನರ ಗುಂಪು ಅವರೊಡನೆ ಸೇರಿ ದೊಂಬಿಮಾಡಿತು. ನ್ಯಾಯಾಧಿಪತಿಗಳು ಪೌಲ ಮತ್ತು ಸೀಲರ ವಸ್ತ್ರಗಳನ್ನು ಕಿತ್ತುಹಾಕಿಸಿ ಛಡಿ ಏಟುಗಳನ್ನು ಕೊಡುವಂತೆ ಆಜ್ಞೆಮಾಡಿದರು.


ಪ್ರೇಷಿತರ ೧೬:೩೫
ಮಾರನೆಯ ಬೆಳಿಗ್ಗೆ ನ್ಯಾಯಾಧಿಪತಿಗಳು ಜವಾನರ ಮುಖಾಂತರ, “ಈ ವ್ಯಕ್ತಿಗಳನ್ನು ಬಿಟ್ಟುಬಿಡು,” ಎಂದು ಹೇಳಿಕಳುಹಿಸಿದರು.


ಪ್ರೇಷಿತರ ೧೬:೩೬
ಸೆರೆಮನೆಯ ಅಧಿಕಾರಿ ಪೌಲನ ಬಳಿಗೆ ಬಂದು, “ನ್ಯಾಯಾಧಿಪತಿಗಳು ನಿಮ್ಮನ್ನು ಬಿಡುಗಡೆಮಾಡುವಂತೆ ಹೇಳಿಕಳುಹಿಸಿದ್ದಾರೆ; ನೀವು ನೆಮ್ಮದಿಯಿಂದ ಹೊರಟುಹೋಗಬಹುದು,” ಎಂದು ವರದಿಮಾಡಿದನು.


ಪ್ರೇಷಿತರ ೧೬:೩೭
ಆದರೆ ಪೌಲನು ಅವರಿಗೆ, “ನಮ್ಮನ್ನು ಶಿಕ್ಷೆಗೊಳಪಡಿಸುವಂಥ ಅಪರಾಧವನ್ನೇನೂ ನಾವು ಮಾಡಿಲ್ಲ. ಅಲ್ಲದೆ ನಾವು ರೋಮಿನ ಪೌರರು, ಆದರೂ ನಮ್ಮನ್ನು ಬಹಿರಂಗವಾಗಿ ಛಡಿಗಳಿಂದ ಹೊಡಿಸಿದ್ದಾರೆ. ಸೆರೆಮನೆಗೆ ತಳ್ಳಿದ್ದಾರೆ; ಈಗ ಗೋಪ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೆಯೆ? ಇಲ್ಲ, ಇದು ಸಾಧ್ಯವಿಲ್ಲ. ನ್ಯಾಯಾಧಿಪತಿಗಳೇ ಖುದ್ದಾಗಿ ಇಲ್ಲಿಗೆ ಬಂದು ನಮ್ಮನ್ನು ಬಿಡುಗಡೆ ಮಾಡಲಿ,” ಎಂದನು.


ಪ್ರೇಷಿತರ ೧೬:೩೮
ಜವಾನರು ಈ ಮಾತುಗಳನ್ನು ನ್ಯಾಯಾಧಿಪತಿಗಳಿಗೆ ವರದಿಮಾಡಿದರು. ಅವರು ಪೌಲ ಮತ್ತು ಸೀಲ ರೋಮಿನ ಪೌರರೆಂದು ಕೇಳಿ ಭಯಪಟ್ಟರು.


ಪ್ರೇಷಿತರ ೧೭:೩೧
ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”


ಪ್ರೇಷಿತರ ೧೮:೧೨
ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.


ಪ್ರೇಷಿತರ ೧೮:೧೪
ಪೌಲನು ಮಾತನಾಡಬೇಕೆಂದಿರುವಾಗ, ಗಲ್ಲಿಯೋ ಯೆಹೂದ್ಯರನ್ನು ಸಂಬೋಧಿಸಿ, “ಯೆಹೂದ್ಯರೇ, ಅನ್ಯಾಯವಾಗಲಿ, ಅಕ್ರಮವಾಗಲಿ ನಡೆದಿದ್ದ ಪಕ್ಷದಲ್ಲಿ, ನಿಮ್ಮ ಅಪಾದನೆಗಳನ್ನು ತಾಳ್ಮೆಯಿಂದ ಕೇಳಬೇಕಾದುದು ಸರಿಯಷ್ಟೆ.


ಪ್ರೇಷಿತರ ೧೮:೧೬
ಅವರನ್ನು ನ್ಯಾಯಸ್ಥಾನದಿಂದ ಹೊರಗಟ್ಟಿದನು.


ಪ್ರೇಷಿತರ ೧೮:೧೭
ಆಗ ಅವರೆಲ್ಲರೂ ಪ್ರಾರ್ಥನಾಮಂದಿರದ ಅಧ್ಯಕ್ಷ ಸೋಸ್ಥೆನನನ್ನು ಬಂಧಿಸಿ, ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋ ಇದೊಂದನ್ನೂ ಲಕ್ಷಿಸಲಿಲ್ಲ.


ಪ್ರೇಷಿತರ ೧೯:೩೮
ದೆಮೆತ್ರಿಯನಿಗೇ ಆಗಲಿ, ಅವನ ಜೊತೆ ಕೆಲಸಗಾರರಿಗೇ ಆಗಲಿ, ಯಾರ ಮೇಲಾದರೂ ಏನಾದರೂ ಆಪಾದನೆ ಇದ್ದರೆ, ಅದಕ್ಕೆ ನ್ಯಾಯಾಲಯಗಳು ತೆರೆದಿವೆ; ರಾಜ್ಯಪಾಲರಿದ್ದಾರೆ; ಅವರು ಅಲ್ಲಿಗೆ ಹೋಗಿ ದೂರು ಕೊಡಲಿ.


ಪ್ರೇಷಿತರ ೨೨:೨೫
ಹೊಡೆಯುವುದಕ್ಕಾಗಿ ಅವನನ್ನು ಬಾರುಗಳಿಂದ ಕಟ್ಟುತ್ತಿದ್ದಾಗ ಪೌಲನು, ಹತ್ತಿರವೇ ನಿಂತಿದ್ದ ಶತಾಧಿಪತಿಯನ್ನು ನೋಡಿ, “ರೋಮಿನ ಪೌರನನ್ನು ಚಾವಟಿಯಿಂದ ಹೊಡೆಯುವುದು, ಅದೂ ವಿಚಾರಣೆಮಾಡದೆ ಹೊಡೆಯಿಸುವುದು, ನ್ಯಾಯಸಮ್ಮತವೋ?” ಎಂದು ಕೇಳಿದನು.


ಪ್ರೇಷಿತರ ೨೨:೩೦
ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು.


ಪ್ರೇಷಿತರ ೨೩:೧
ಪೌಲನು ಆ ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ಬಂಧುಭಾಂದವರೇ, ಈ ದಿನದವರೆಗೂ ನಾನು ದೇವರ ಸಮ್ಮುಖದಲ್ಲಿ ನನ್ನ ಮನಸ್ಸಾಕ್ಷಿಯ ಪ್ರಕಾರ ಬಾಳಿದ್ದೇನೆ,” ಎಂದನು.


ಪ್ರೇಷಿತರ ೨೩:೩
ಪೌಲನು ಅವನಿಗೆ, ‘ಸುಣ್ಣಬಳಿದ ಗೋಡೆ ನೀನು; ದೇವರು ನಿನ್ನನ್ನು ಹೊಡೆಯದೆ ಬಿಡರು; ಧರ್ಮಶಾಸ್ತ್ರದ ಪ್ರಕಾರ ನ್ಯಾಯವಿಚಾರಣೆ ಮಾಡಲು ಕುಳಿತಿರುವ ನೀನು ಅದೇ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ನನ್ನನ್ನು ಹೊಡೆಯುವಂತೆ ಆಜ್ಞಾಪಿಸುತ್ತಿರುವೆಯಾ?” ಎಂದನು.


ಪ್ರೇಷಿತರ ೨೩:೨೦
ಅದಕ್ಕೆ ಆ ಯುವಕನು, “ಯೆಹೂದ್ಯರು ಒಂದುಗೂಡಿ ಒಂದು ತೀರ್ಮಾನ ಕೈಗೊಂಡಿದ್ದಾರೆ. ಅದರ ಪ್ರಕಾರ ಪೌಲನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿ, ಅವನನ್ನು ನಾಳೆ ನ್ಯಾಯಸಭೆಯ ಮುಂದೆ ಹಾಜರುಪಡಿಸುವಂತೆ ಕೇಳಿಕೊಳ್ಳಲಿದ್ದಾರೆ.


ಪ್ರೇಷಿತರ ೨೩:೨೮
ಇವನ ಮೇಲೆ ಅವರು ಹೊರಿಸಿರುವ ಆಪಾದನೆಗಳು ಏನೆಂದು ತಿಳಿದುಕೊಳ್ಳುವ ಉದ್ದೇಶದಿಂದ ನಾನು ಇವನನ್ನು ಅವರ ನ್ಯಾಯಸಭೆಯಲ್ಲಿ ಹಾಜರುಪಡಿಸಿದೆ.


ಪ್ರೇಷಿತರ ೨೪:೧೦
ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ ಮಾತನಾಡುವಂತೆ ಅಪ್ಪಣೆ ಮಾಡಿದನು. ಆಗ ಪೌಲನು ಹೀಗೆಂದನು: “ತಾವು ಅನೇಕ ವರ್ಷಗಳಿಂದ ಈ ನಾಡಿನ ನ್ಯಾಯಾಧೀಶರಾಗಿದ್ದೀರಿ. ಅದನ್ನು ಅರಿತು ನಿರ್ಭಯನಾಗಿ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.


ಪ್ರೇಷಿತರ ೨೪:೨೦
ಅಥವಾ, ನಾನು ನ್ಯಾಯಸಭೆಯ ಮುಂದೆ ನಿಂತಿದ್ದಾಗ ನನ್ನಲ್ಲಿ ಯಾವ ಅಪರಾಧಗಳು ಕಂಡುಬಂದವೆಂದು, ಈ ಜನರೇ ಹೇಳಲಿ.


ಪ್ರೇಷಿತರ ೨೫:೬
ಫೆಸ್ತನು ಅವರೊಂದಿಗೆ ಎಂಟು-ಹತ್ತು ದಿನಗಳನ್ನು ಕಳೆದು, ಸೆಜರೇಯಕ್ಕೆ ಮರಳಿ ಬಂದನು. ಮಾರನೆಯ ದಿನ ಅವನು ನ್ಯಾಯಸ್ಥಾನದಲ್ಲಿ ಕುಳಿತು ಪೌಲನನ್ನು ತನ್ನ ಮುಂದೆ ಕರೆದುತರಬೇಕೆಂದು ಆಜ್ಞಾಪಿಸಿದನು.


ಪ್ರೇಷಿತರ ೨೫:೧೦
ಅದಕ್ಕೆ ಪೌಲನು, “ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ತಮಗೆ ಚೆನ್ನಾಗಿ ತಿಳಿದಿರುವಂತೆ ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.


ಪ್ರೇಷಿತರ ೨೫:೧೭
ಆದುದರಿಂದ ಅವರು ನನ್ನೊಡನೆ ಇಲ್ಲಿಗೆ ಬಂದರು. ನಾನು ತಡಮಾಡದೆ ಮರುದಿನವೇ ನ್ಯಾಯಸ್ಥಾನದಲ್ಲಿ ಕುಳಿತು ಅವನನ್ನು ನನ್ನ ಮುಂದೆ ತರುವಂತೆ ಆಜ್ಞೆಮಾಡಿದೆ.


ರೋಮನರಿಗೆ ೧:೨೯
ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.


ರೋಮನರಿಗೆ ೨:೨
ಇಂಥ ಅಪರಾಧಗಳನ್ನು ಮಾಡುವವರ ಬಗ್ಗೆ ದೇವರು ನೀಡುವ ತೀರ್ಪು ನ್ಯಾಯಬದ್ಧವಾದುದು ಎಂಬುದನ್ನು ನಾವು ಬಲ್ಲೆವು.


ರೋಮನರಿಗೆ ೨:೩
ಹೀಗಿರುವಾಗ, ಇತರರಿಗೆ ಯಾವ ಅಪರಾಧಕ್ಕಾಗಿ ತೀರ್ಪುನೀಡಿದೆಯೋ ಅಂಥ ಅಪರಾಧವನ್ನೇ ನೀನೂ ಮಾಡುತ್ತಿರುವೆಯಲ್ಲಾ! ದೇವರು ಕೊಡುವ ನ್ಯಾಯತೀರ್ಪಿನಿಂದ ನೀನು ಮಾತ್ರ ತಪ್ಪಿಸಿಕೊಳ್ಳುವಿಯೆಂದು ನೆನೆಸುತ್ತೀಯೋ?


ರೋಮನರಿಗೆ ೨:೫
ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ರೋಮನರಿಗೆ ೩:೫
ನಮ್ಮ ಅಕ್ರಮ ನಡತೆ ದೇವರ ನ್ಯಾಯನೀತಿಯನ್ನು ಮತ್ತಷ್ಟು ಸ್ಪಷ್ಟವಾಗಿ ತೋರಿಸುವ ಸಾಧನವಾದರೆ ಆಗ ಏನು ಹೇಳುವುದು? ಆ ಅಕ್ರಮವಾಗಿ ದೇವರು ನಮ್ಮ ಮೇಲೆ ಕೋಪ ಕಾರಿದರೆ ಅದು ಅನ್ಯಾಯವೆಂದು ನಾವು ಹೇಳಬಹುದೆ? (ಮನುಷ್ಯನಿಗೆ ಸಹಜವಾಗಿ ಏಳುವ ಪ್ರಶ್ನೆಯಿದು)


ರೋಮನರಿಗೆ ೩:೬
ಎಂದಿಗೂ ಇಲ್ಲ! ದೇವರು ನ್ಯಾಯವಂತರಲ್ಲದಿದ್ದರೆ ಲೋಕಕ್ಕೆ ನ್ಯಾಯತೀರ್ಪು ಕೊಡಲು ಹೇಗೆ ತಾನೆ ಸಾಧ್ಯ?


ರೋಮನರಿಗೆ ೩:೮
“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” - ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.


ರೋಮನರಿಗೆ ೩:೧೯
ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ರೋಮನರಿಗೆ ೩:೨೬
ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯೂ ತಾವು ಸತ್ಯಸ್ವರೂಪರು ಮತ್ತು ನ್ಯಾಯವಂತರು ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಈ ರೀತಿ ಮಾಡಿದರು.


ರೋಮನರಿಗೆ ೭:೧೨
ಧರ್ಮಶಾಸ್ತ್ರ ಪವಿತ್ರವಾದುದು. ಅಂತೆಯೇ, ಆಜ್ಞೆಯೂ ಪವಿತ್ರವಾದುದು. ನ್ಯಾಯವಾದುದು ಮತ್ತು ಹಿತಕರವಾದುದು.


ರೋಮನರಿಗೆ ೯:೧೪
ಹೀಗಿರಲಾಗಿ, ನಾವು ಏನೆಂದು ಹೇಳೋಣ? ದೇವರಲ್ಲಿ ಅನ್ಯಾಯವಿದೆಯೆಂದು ಹೇಳೋಣವೆ? ಎಂದಿಗೂ ಅಲ್ಲ.


ರೋಮನರಿಗೆ ೧೪:೧೦
ಹೀಗಿರುವಲ್ಲಿ ಸಸ್ಯಾಹಾರಿಯೇ, ನೀನು ನಿನ್ನ ಸಹೋದರನನ್ನು ದೋಷಿಯೆಂದು ತೀರ್ಪಿಡುವುದೇಕೆ? ಮಾಂಸಹಾರಿಯೇ, ನಿನ್ನ ಸಹೋದರನನ್ನು ಹೀನೈಸುವುದೇಕೆ? ನಾವೆಲ್ಲರೂ ದೇವರ ನ್ಯಾಯಸ್ಥಾನದ ಮುಂದೆ ನಿಲ್ಲಬೇಕಲ್ಲವೆ?


ಕೊರಿಂಥಿಯರಿಗೆ ೧ ೪:೩
ನನ್ನ ವಿಷಯದಲ್ಲಿ ಹೇಳುವುದಾದರೆ, ನಿಮ್ಮಿಂದಾಗಲಿ, ಮಾನವ ನಿಯಮಿತ ನ್ಯಾಯಾಲಯದಿಂದಾಗಲಿ ನನ್ನ ವಿಚಾರಣೆಯಾಗುವುದರ ಬಗ್ಗೆ ನನಗೆ ಕಿಂಚಿತ್ತೂ ಚಿಂತೆಯಿಲ್ಲ. ನನಗೆ ನಾನೇ ನ್ಯಾಯತೀರ್ಪು ಮಾಡಿಕೊಳ್ಳುವುದೂ ಇಲ್ಲ.


ಕೊರಿಂಥಿಯರಿಗೆ ೧ ೪:೪
ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ.


ಕೊರಿಂಥಿಯರಿಗೆ ೧ ೬:೧
ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ ನ್ಯಾಯವಿಚಾರಣೆಗೆ ದೇವಜನರ ಮುಂದೆ ಹೋಗದೆ, ಅನ್ಯಜನರ ಮುಂದೆ ಹೋಗುವಷ್ಟು ಸೊಕ್ಕು ನಿಮಗೆಲ್ಲಿಂದ ಬಂದಿತು?


ಕೊರಿಂಥಿಯರಿಗೆ ೧ ೬:೨
ದೇವಜನರು ಈ ಲೋಕಕ್ಕೆ ನ್ಯಾಯತೀರ್ಪು ಮಾಡುತ್ತಾರೆಂದು ನಿಮಗೆ ತಿಳಿಯದೋ? ಲೋಕವೇ ನಿಮ್ಮಿಂದ ತೀರ್ಪು ಪಡೆಯಬೇಕಾಗಿರುವಲ್ಲಿ ಸಣ್ಣಪುಟ್ಟ ವಿಷಯಗಳನ್ನು ತೀರ್ಮಾನಿಸಿಕೊಳ್ಳಲು ನೀವು ಅಸಮರ್ಥರೋ?


ಕೊರಿಂಥಿಯರಿಗೆ ೧ ೬:೩
ದೇವದೂತರಿಗೂ ನಾವು ನ್ಯಾಯತೀರ್ಪು ಮಾಡುವೆವೆಂದು ನಿಮಗೆ ತಿಳಿಯದೋ? ಹೀಗಿರುವಲ್ಲಿ, ಈ ಜೀವನದ ಸಮಸ್ಯೆಗಳನ್ನು ಕುರಿತು ನ್ಯಾಯತೀರ್ಪು ಮಾಡುವುದು ಎಷ್ಟೋ ಸುಲಭವಲ್ಲವೇ?


ಕೊರಿಂಥಿಯರಿಗೆ ೧ ೬:೪
ಇಂಥ ವಿಷಯಗಳು ತಲೆದೋರಿದಾಗ ಧರ್ಮಸಭೆಯಿಂದ ಮಾನ್ಯತೆ ಪಡೆಯದವರನ್ನು ಏಕೆ ನ್ಯಾಯತೀರ್ಪುಗಾರರನ್ನಾಗಿ ಮಾಡುತ್ತೀರಿ?


ಕೊರಿಂಥಿಯರಿಗೆ ೧ ೬:೬
ಸಹೋದರನು ಸಹೋದರನ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು, ಅದೂ ಅವಿಶ್ವಾಸಿಗಳ ಮುಂದೆ ಹೋಗುವುದು ಸರಿಯೇ?


ಕೊರಿಂಥಿಯರಿಗೆ ೧ ೬:೭
ನಿಮ್ಮ ನಿಮ್ಮಲ್ಲಿರುವ ವ್ಯಾಜ್ಯಗಳೇ ನಿಮ್ಮ ಸೋಲಿನ ಸೂಚನೆಗಳು. ಅದಕ್ಕಿಂತ ಅನ್ಯಾಯವನ್ನು ಸಹಿಸಿಕೊಳ್ಳುವುದು ಒಳ್ಳೆಯದಲ್ಲವೇ? ಸುಲಿಗೆಗೆ ತುತ್ತಾದರೂ ಸಾವಧಾನದಿಂದ ಇರುವುದು ಒಳಿತಲ್ಲವೇ?


ಕೊರಿಂಥಿಯರಿಗೆ ೧ ೬:೮
ಅದಕ್ಕೆ ಬದಲು ನೀವೇ ಅನ್ಯಾಯಮಾಡುತ್ತೀರಿ; ನೀವೇ ಸುಲಿಗೆಮಾಡುತ್ತೀರಿ; ಅದೂ ಸಹೋದರರಿಗೆ ಹೀಗೆ ಮಾಡುತ್ತೀರಿ;


ಕೊರಿಂಥಿಯರಿಗೆ ೧ ೧೧:೨೯
ಏಕೆಂದರೆ, ಅದು ಪ್ರಭುವಿನ ಶರೀರವೆಂದು ಪರಿಗ್ರಹಿಸದೆ, ಭುಜಿಸಿ ಪಾನಮಾಡುವಾತನು ನ್ಯಾಯತೀರ್ಪನ್ನು ತನ್ನ ಮೇಲೆ ಬರಮಾಡಿಕೊಳ್ಳುವುದಕ್ಕಾಗಿಯೇ ತಿನ್ನುತ್ತಾನೆ, ಕುಡಿಯುತ್ತಾನೆ.


ಕೊರಿಂಥಿಯರಿಗೆ ೧ ೧೧:೩೧
ನಮ್ಮನ್ನು ನಾವೇ ಪರಿಶೋಧಿಸಿಕೊಂಡರೆ ನಾವು ನ್ಯಾಯತೀರ್ಪಿಗೆ ಒಳಗಾಗುವುದಿಲ್ಲ.


ಕೊರಿಂಥಿಯರಿಗೆ ೧ ೧೧:೩೪
ನೀವು ಹಸಿವು ನೀಗಿಸಿಕೊಳ್ಳುವುದಕ್ಕಾಗಿ ಸಭೆಗೆ ಬರುವುದಾದರೆ ಮನೆಯಲ್ಲೇ ಊಟಮಾಡಿ. ಆಗ ಸಭೆಸೇರಿ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ಇನ್ನುಳಿದ ವಿಷಯಗಳನ್ನು ನಾನು ಬಂದು ಇತ್ಯರ್ಥ ಮಾಡುತ್ತೇನೆ.


ಕೊರಿಂಥಿಯರಿಗೆ ೨ ೫:೧೦
ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.


ಕೊರಿಂಥಿಯರಿಗೆ ೨ ೭:೨
ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವಿರಲಿ. ನಾವು ಯಾರಿಗೂ ಅನ್ಯಾಯಮಾಡಿಲ್ಲ, ಯಾರಿಗೂ ಕೇಡನ್ನು ಬಗೆದಿಲ್ಲ, ಯಾರನ್ನೂ ವಂಚಿಸಲಿಲ್ಲ.


ಕೊರಿಂಥಿಯರಿಗೆ ೨ ೭:೯
ನಿಮಗೆ ದುಃಖ ಉಂಟಾಯಿತೆಂಬ ಕಾರಣದಿಂದ ಅಲ್ಲ, ಆ ದುಃಖದಿಂದ ನಿಮಗೆ ಮನಪರಿವರ್ತನೆ ಆಯಿತೆಂಬ ಕಾರಣದಿಂದ ಸಂತೋಷಪಡುತ್ತೇನೆ. ನಿಮಗೆ ದುಃಖ ಉಂಟಾದುದು ದೇವರ ಚಿತ್ತವೇ ಸರಿ. ಆದರೆ ನನ್ನಿಂದ ನಿಮಗೆ ಅನ್ಯಾಯವೇನೂ ಆಗಲಿಲ್ಲ.


ಕೊರಿಂಥಿಯರಿಗೆ ೨ ೭:೧೨
ನಾನು ನಿಮಗೆ ಆ ಪತ್ರವನ್ನು ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ-ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ.


ಕೊರಿಂಥಿಯರಿಗೆ ೨ ೧೨:೧೩
ನನ್ನ ಜೀವನಾಂಶದ ಹೊಣೆಯನ್ನು ನಾನು ನಿಮ್ಮ ಮೇಲೆ ಹೊರಿಸಲಿಲ್ಲ. ಇದೊಂದನ್ನು ಬಿಟ್ಟರೆ ಯಾವ ವಿಷಯದಲ್ಲೂ ನಿಮ್ಮನ್ನು ಮಿಕ್ಕ ಸಭೆಗಳಿಗಿಂತ ಕೀಳಾಗಿ ಕಾಣಲಿಲ್ಲ. ಈ ಒಂದು ಅನ್ಯಾಯಕ್ಕಾಗಿ ನನ್ನನ್ನು ಕ್ಷಮಿಸಿರಿ.


ಕೊರಿಂಥಿಯರಿಗೆ ೨ ೧೨:೧೪
ಇಗೋ ಮೂರನೆಯ ಬಾರಿಗೆ ನಾನು ನಿಮ್ಮ ಬಳಿಗೆ ಬರಲು ಸಿದ್ಧನಿದ್ದೇನೆ. ಈ ಸಾರಿಯೂ ನಾನು ನಿಮಗೆ ಹೊರೆಯಾಗಿರಲಾರೆ. ನನಗೆ ಬೇಕಾದವರು ನೀವೇ ಹೊರತು ನಿಮ್ಮ ಹಣಕಾಸು ಅಲ್ಲ. ಮಕ್ಕಳು ಹೆತ್ತವರಿಗಾಗಿ ಅಲ್ಲ, ಹೆತ್ತವರು ಮಕ್ಕಳಿಗಾಗಿ ಆಸ್ತಿಪಾಸ್ತಿಯನ್ನು ಕೂಡಿಡುವುದು ನ್ಯಾಯ.


ಗಲಾತ್ಯರಿಗೆ ೪:೧೨
ಪ್ರಿಯ ಸಹೋದರರೇ, ನಾನು ನಿಮ್ಮಂತೆ ಆದಹಾಗೆ, ನೀವೂ ನನ್ನಂತೆ ಆಗಬೇಕೆಂದು ಕಳಕಳಿಯಿಂದ ಕೇಳಿಕೊಳ್ಳುತ್ತೇನೆ. ನೀವು ನನಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.


ಫಿಲಿಪಿಯರಿಗೆ ೪:೮
ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಕೊಲೊಸ್ಸೆಯರಿಗೆ ೩:೨೫
ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ದೇವರು ಪಕ್ಷಪಾತಿಯಲ್ಲ.


ಕೊಲೊಸ್ಸೆಯರಿಗೆ ೪:೧
ಯಜಮಾನರೇ, ಸ್ವರ್ಗಲೋಕದಲ್ಲಿ ನಿಮಗೂ ಒಬ್ಬ ಒಡೆಯನಿದ್ದಾನೆಂಬುದನ್ನು ತಿಳಿದುಕೊಂಡು ನಿಮ್ಮ ಮನೆಯಾಳುಗಳನ್ನು ನ್ಯಾಯಬದ್ಧ ರೀತಿಯಲ್ಲಿ ನೋಡಿಕೊಳ್ಳಿ.


ಥೆಸೆಲೋನಿಯರಿಗೆ ೨ ೧:೫
ನೀವು ಅನುಭವಿಸುತ್ತಿರುವುದೆಲ್ಲ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗೂ ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು.


ಥೆಸೆಲೋನಿಯರಿಗೆ ೨ ೧:೬
ನ್ಯಾಯವಾದುದ್ದನ್ನೇ ಮಾಡುವ ದೇವರು ನಿಮ್ಮನ್ನು ಹಿಂಸಿಸುವವರಿಗೆ ಪ್ರತಿಹಿಂಸೆಯನ್ನೂ ಮತ್ತು ಹಿಂಸೆಯನ್ನು ಸಹಿಸುತ್ತಿರುವ ನಿಮಗೆ, ನಮ್ಮೊಡನೆ ಉಪಶಮನವನ್ನೂ ದಯಪಾಲಿಸುವರು.


ತಿಮೊಥೇಯನಿಗ ೨ ೪:೧
ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


ತಿಮೊಥೇಯನಿಗ ೨ ೪:೮
ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ಫಿಲೆಮೋನನಿಗೆ ೧:೧೮
ಇವನು ನಿನಗೇನಾದರೂ ಅನ್ಯಾಯ ಮಾಡಿದ್ದಾದರೆ, ಅಥವಾ ಇವನಿಂದ ನಿನಗೇನಾದರೂ ಸಲ್ಲಬೇಕಾದ ಬಾಕಿಯಿದ್ದರೆ, ಅದೆಲ್ಲವನ್ನೂ ನನ್ನ ಲೆಕ್ಕಕ್ಕೆ ಹಾಕು.


ಹಿಬ್ರಿಯರಿಗೆ ೧:೮
ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.


ಹಿಬ್ರಿಯರಿಗೆ ೧:೯
ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.


ಹಿಬ್ರಿಯರಿಗೆ ೫:೧೩
ಹಾಲು ಕುಡಿಯಬೇಕಾದವನು ಹಸುಗೂಸು. ನ್ಯಾಯನೀತಿಯ ಅನುಭವ ಅವನಿಗಿಲ್ಲ.


ಹಿಬ್ರಿಯರಿಗೆ ೬:೨
ಜಡ ಕರ್ಮಗಳನ್ನು ಬಿಟ್ಟು ದೇವರಲ್ಲಿ ವಿಶ್ವಾಸವಿಡುವುದು, ಸ್ನಾನಸಂಸ್ಕಾರಗಳು, ಹಸ್ತನಿಕ್ಷೇಪ, ಸತ್ತವರ ಪುನರುತ್ಥಾನ, ನಿತ್ಯವಾದ ನ್ಯಾಯತೀರ್ಪು - ಈ ಬೋಧನಾ ಅಸ್ತಿವಾರವನ್ನು ಮತ್ತೆ ಮತ್ತೆ ಹಾಕಬೇಕಾಗಿಲ್ಲ.


ಹಿಬ್ರಿಯರಿಗೆ ೬:೧೦
ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಹಿಬ್ರಿಯರಿಗೆ ೭:೨
ಆಗ ಅಬ್ರಹಾಮನು ತಾನು ಗೆದ್ದು ತಂದಿದ್ದ ಎಲ್ಲದರಲ್ಲೂ ದಶಮಾಂಶವನ್ನು ಆತನಿಗೆ ಕೊಟ್ಟು ಗೌರವಿಸಿದನು. ಮೆಲ್ಕಿಸದೇಕ ಎಂಬ ಹೆಸರಿನ ಮೂಲಾರ್ಥ, ‘ನ್ಯಾಯನೀತಿಯ ಅರಸ.’ ಅಲ್ಲದೆ, ಆತನು ಸಾಲೇಮಿನ ಅರಸನೂ ಆಗಿದ್ದನು. ಆದ್ದರಿಂದ ‘ಶಾಂತಿಸಮಾಧಾನದ ಅರಸ’ ಎಂಬ ಅರ್ಥವೂ ಉಂಟು.


ಹಿಬ್ರಿಯರಿಗೆ ೯:೨೭
ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ಹಿಬ್ರಿಯರಿಗೆ ೧೦:೩೦
“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ನಾನೇ ಪ್ರತೀಕಾರವನ್ನು ಸಲ್ಲಿಸುವೆನು,” ಎಂದು ಹೇಳಿದವರು ಯಾರೆಂದು ಬಲ್ಲೆವು. ಅಲ್ಲದೆ, “ಸರ್ವೇಶ್ವರ ತಮ್ಮ ಪ್ರಜೆಗಳಿಗೆ ನ್ಯಾಯತೀರ್ಪನ್ನು ನೀಡುವರು,” ಎಂದೂ ಹೇಳಲಾಗಿದೆ.


ಹಿಬ್ರಿಯರಿಗೆ ೧೧:೩೩
ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು.


ಹಿಬ್ರಿಯರಿಗೆ ೧೨:೧೧
ಯಾವ ಶಿಕ್ಷೆಯಾದರೂ ತಕ್ಷಣಕ್ಕೆ ಸಿಹಿಯಾಗಿರದೆ ಕಹಿಯಾಗಿಯೇ ಇರುತ್ತದೆ. ಹೀಗೆ ಶಿಸ್ತಿನ ಕ್ರಮಕ್ಕೆ ಒಳಗಾದವರು ಮುಂದಕ್ಕೆ ನ್ಯಾಯನೀತಿಯನ್ನೂ ಶಾಂತಿಸಮಾಧಾನವನ್ನೂ ಪ್ರತಿಫಲವಾಗಿ ಪಡೆಯುತ್ತಾರೆ.


ಹಿಬ್ರಿಯರಿಗೆ ೧೨:೨೩
ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


ಹಿಬ್ರಿಯರಿಗೆ ೧೩:೩
ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?


ಹಿಬ್ರಿಯರಿಗೆ ೧೩:೪
ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ಯಕೋಬನು ೨:೬
ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?


ಯಕೋಬನು ೨:೧೨
ವಿಮೋಚನೆಯನ್ನೀಯುವ ಧರ್ಮಶಾಸ್ತ್ರದ ನ್ಯಾಯತೀರ್ಪಿಗೆ ಗುರಿಯಾಗುವಿರಿ ಎಂದು ತಿಳಿದು ನೀವು ನಡೆಯಲ್ಲೂ ನುಡಿಯಲ್ಲೂ ಯೋಗ್ಯರಾಗಿ ಬಾಳಿ.


ಯಕೋಬನು ೨:೧೩
ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಯಕೋಬನು ೩:೧
ಸಹೋದರರೇ, ಎಲ್ಲರೂ ಬೋಧಕರಾಗಲು ಆತುರಪಡಬೇಡಿ. ಬೋಧಕರಾದ ನಾವು ಇತರರಿಗಿಂತಲೂ ತೀವ್ರವಾದ ನ್ಯಾಯವಿಚಾರಣೆಗೆ ಗುರಿಯಾಗುತ್ತೇವೆ.


ಯಕೋಬನು ೩:೧೭
ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ಯಕೋಬನು ೪:೧೧
ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿ. ಯಾರಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ಖಂಡಿಸಿದರೆ, ಅಂಥವನು ಧರ್ಮಶಾಸ್ತ್ರವನ್ನೇ ನಿಂದಿಸಿ ಖಂಡಿಸುತ್ತಾನೆ. ನೀನು ಧರ್ಮಶಾಸ್ತ್ರವನ್ನುಖಂಡಿಸಿದರೆ, ನ್ಯಾಯಾಧಿಪತಿ ಎನಿಸಿಕೊಳ್ಳುವೆಯೇ ಹೊರತು ನೀನು ಅದನ್ನು ಅನುಸರಿಸಿ ನಡೆಯುವವನಾಗುವುದಿಲ್ಲ.


ಯಕೋಬನು ೪:೧೨
ನ್ಯಾಯವಿಧಿಗಳನ್ನು ಕೊಟ್ಟವರೂ ನ್ಯಾಯಾಧಿಪತಿಯೂ ಒಬ್ಬರೇ; ಅವರೇ ಉದ್ಧಾರಮಾಡುವುದಕ್ಕೂ ವಿನಾಶಗೊಳಿಸುವುದಕ್ಕೂ ಶಕ್ತರು. ಹೀಗಿರುವಲ್ಲಿ, ನಿನ್ನ ನೆರೆಯವನಿಗೆ ತೀರ್ಪುಕೊಡಲು ನೀನು ಯಾರು?


ಯಕೋಬನು ೫:೯
ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.


ಪೇತ್ರನು ೧ ೧:೧೭
ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.


ಪೇತ್ರನು ೧ ೨:೧೯
ಯಾವನಾದರೂ ಅನ್ಯಾಯವಾಗಿ ಹಿಂಸೆಬಾಧೆಗಳನ್ನು ಅನುಭವಿಸಬೇಕಾಗಿ ಬಂದಾಗ ಅದನ್ನು ದೇವರ ಹೆಸರಿನಲ್ಲಿ ಸಹಿಸಿಕೊಂಡರೆ ಅವನು ಮೆಚ್ಚುಗೆಯನ್ನು ಗಳಿಸುತ್ತಾನೆ.


ಪೇತ್ರನು ೧ ೨:೨೩
ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.


ಪೇತ್ರನು ೧ ೩:೧೪
ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ನೀವು ಭಾಗ್ಯವಂತರು. ಮಾನವರ ಬೆದರಿಕೆಗೆ ಹೆದರಬೇಡಿ, ಕಳವಳ ಪಡಬೇಡಿ.


ಪೇತ್ರನು ೧ ೪:೫
ಜೀವಂತರಿಗೂ ಮೃತರಿಗೂ ನ್ಯಾಯತೀರಿಸಲು ಸಿದ್ಧವಾಗಿರುವ ದೇವರಿಗೆ ಅವರು ಲೆಕ್ಕಕೊಡಬೇಕಾಗುವುದು.


ಪೇತ್ರನು ೧ ೪:೧೭
ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?


ಪೇತ್ರನು ೨ ೨:೯
ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ಪೇತ್ರನು ೨ ೩:೭
ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.


ಯೊವಾನ್ನನು ೧ ೪:೧೭
ಇದರಿಂದಾಗಿ, ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬಂದಿರುತ್ತದೆ; ನ್ಯಾಯತೀರ್ಪಿನ ದಿನದಂದು ನಾವು ಭರವಸೆಯಿಂದಿರುತ್ತೇವೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.


ಯೂದನು ೧:೧೪
ಇವರ ವಿಷಯವಾಗಿ ಆದಾಮನ ಏಳನೆಯ ತಲೆಮಾರಿನ ಹನೋಕನು, “ಇಗೋ, ಸರ್ವೇಶ್ವರ ತಮ್ಮ ಅಸಂಖ್ಯಾತ ಪರಿಶುದ್ಧ ದೂತರ ಸಮೇತ ಆಗಮಿಸುವರು. ಎಲ್ಲರಿಗೂ ನ್ಯಾಯತೀರ್ಪು ಕೊಡುವರು.


ಪ್ರಕಟನೆ ೬:೧೦
ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.


ಪ್ರಕಟನೆ ೧೧:೧೮
ಕೆರಳಿದವು ವಿಶ್ವ ರಾಷ್ಟ್ರಗಳು ಎರಗಿತು ನಿನ್ನ ಪ್ರಕೋಪವು ಸಮೀಪಿಸಿತು ಮೃತರ ನ್ಯಾಯತೀರ್ಪಿನ ದಿನವು ಬಂದಿದೆ ಸಮಯ ಸನ್ಮಾನಿಸಲು ನಿನ್ನ ದಾಸರನು, ಪ್ರವಾದಿಗಳನು, ದೇವಪ್ರಜೆಗಳನು ನಿನ್ನಲ್ಲಿ ಭಯಭಕುತಿಯುಳ್ಳ ಹಿರಿಯ ಕಿರಿಯರನು. ಇದಿಗೋ ಬಂದಿದೆ ಗಳಿಗೆಯು ಲೋಕನಾಶಕರನ್ನು ವಿನಾಶಗೊಳಿಸಲು\, ಎಂದು ಹಾಡಿದರು.


ಪ್ರಕಟನೆ ೧೬:೫
ಆಗ ಜಲಾಧಿಕಾರಿಯಾದ ದೂತನು: “ತ್ರಿಕಾಲಸ್ಥನು ಪರಿಶುದ್ಧನು ನೀನೇ ನೀನಿತ್ತ ತೀರ್ಪು ನ್ಯಾಯಬದ್ಧವಾದುದೇ.


ಪ್ರಕಟನೆ ೧೬:೭
ಅನಂತರ ಬಲಿಪೀಠದಿಂದ ಹೀಗೆ ಕೇಳಿ ಬಂತು: “ಹೌದು ಪ್ರಭುವೇ, ಸರ್ವಶಕ್ತನೇ, ನೀನಿತ್ತ ತೀರ್ಪು ಸತ್ಯ ಹಾಗೂ ನ್ಯಾಯಬದ್ಧವಾದುದೇ.”


ಪ್ರಕಟನೆ ೧೮:೫
ಅವಳ ಪಾಪಗಳು ಬೆಳೆಬೆಳೆದು ಆಗಸಕ್ಕೇರುತಿವೆ ಅವಳ ಅಕ್ರಮ ಅನ್ಯಾಯಗಳು ದೇವರ ನೆನಪಿನಲ್ಲಿವೆ.


ಪ್ರಕಟನೆ ೧೯:೨
ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ಪ್ರಕಟನೆ ೧೯:೧೧
ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.


ಪ್ರಕಟನೆ ೨೦:೧೨
ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ಪ್ರಕಟನೆ ೨೦:೧೩
ಸಮುದ್ರವು ತನ್ನಲ್ಲಿದ್ದ ಮೃತರನ್ನು ಒಪ್ಪಿಸಿತು; ಮೃತ್ಯುವು ಪಾತಾಳವೂ ತಮ್ಮ ವಶದಲ್ಲಿದ್ದ ಮೃತರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ಆಯಿತು.


Kannada Bible (KNCL) 2016
No Data