A A A A A


ಹುಡುಕಿ

ಲೂಕನು ೧:೭೨
ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು I ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು II


ಲೂಕನು ೭:೪೭
ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ,” ಎಂದರು.


ಲೂಕನು ೧೧:೪೨
“ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು.


ರೋಮನರಿಗೆ ೫:೫
ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ರೋಮನರಿಗೆ ೮:೩೫
ಕ್ರಿಸ್ತಯೇಸುವಿನ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಯಾರಿಂದ ಸಾಧ್ಯ? ಕಷ್ಟಸಂಕಟ, ಇಕ್ಕಟ್ಟು-ಬಿಕ್ಕಟ್ಟು, ಹಿಂಸೆ ಬಾಧೆ ಇವುಗಳಿಂದ ಸಾಧ್ಯವೆ? ಇಲ್ಲ, ಹಸಿವು ನೀರಡಿಕೆ, ನಗ್ನಸ್ಥಿತಿ, ಆಪತ್ತು-ವಿಪತ್ತು, ಖಡ್ಗಕಠಾರಿಗಳಿಂದ ಸಾಧ್ಯವೆ? ಎಂದಿಗೂ ಇಲ್ಲ.


ರೋಮನರಿಗೆ ೮:೩೮
ಸಾವಾಗಲಿ ಜೀವವಾಗಲಿ, ದೇವದೂತರಾಗಲಿ ದುರಾತ್ಮರಾಗಲಿ, ಈಗಿನ ಸಂತತಿಗಳೇ ಆಗಲಿ, ಭವಿಷ್ಯದ ಆಗುಹೋಗುಗಳೇ ಆಗಲಿ, ಯಾವ ಶಕ್ತಿಗಳೇ ಆಗಲಿ ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ತೋರಿಬಂದ ದೈವಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲಾರವು.


ರೋಮನರಿಗೆ ೮:೩೯
ಅಂತೆಯೇ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಸೃಷ್ಟಿಸಮಸ್ತಗಳಲ್ಲಿ ಯಾವುದೇ ಆಗಲಿ, ಆ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇದು ನಿಶ್ಚಯ.


ರೋಮನರಿಗೆ ೧೩:೧೦
ಪ್ರೀತಿಯು ಪರರಿಗೆ ಕೇಡು ಬಗೆಯದು. ಆದಕಾರಣ ಪ್ರೀತಿಯೇ ಧರ್ಮಶಾಸ್ತ್ರದ ಪೂರೈಕೆ.


ರೋಮನರಿಗೆ ೧೫:೩೦
ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲೂ ಪವಿತ್ರಾತ್ಮ ಪ್ರೇರಿತವಾದ ಪ್ರೀತಿಯಿಂದಲೂ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ: ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ ನನ್ನ ಹೋರಾಟದಲ್ಲಿ ಸಹಕರಿಸಿರಿ.


ರೋಮನರಿಗೆ ೧೬:೧
ನಾನು ನಿಮ್ಮ ಬಳಿಗೆ ಕಳುಹಿಸುತ್ತಿರುವ ಸಹೋದರಿ ಫೊಯಿಬೆಯನ್ನು ಪ್ರೀತಿಯಿಂದ ಸ್ವಾಗತಿಸಿರಿ. ಈಕೆ ಕೆಂಕ್ರೆಯ ಪಟ್ಟಣದ ಸಭಾಸೇವಕಳು.


ಕೊರಿಂಥಿಯರಿಗೆ ೧ ೮:೧
ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ.


ಕೊರಿಂಥಿಯರಿಗೆ ೧ ೧೩:೧
ಸುರನರರ ನುಡಿಗಳ ನಾನಾಡಬಲ್ಲೆನಾದರೂ ಪರಮ ಪ್ರೀತಿಯೊಂದೆನಗಿಲ್ಲದಿರಲು ನಾ ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ಜಾಗಟೆ.


ಕೊರಿಂಥಿಯರಿಗೆ ೧ ೧೩:೨
ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ಕೊರಿಂಥಿಯರಿಗೆ ೧ ೧೩:೪
ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.


ಕೊರಿಂಥಿಯರಿಗೆ ೧ ೧೩:೭
ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು.


ಕೊರಿಂಥಿಯರಿಗೆ ೧ ೧೩:೧೩
ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರಲಿ ಪ್ರೀತಿಯೇ ಪರಮೋನ್ನತವೆಂಬುದ ನೀನರಿ.


ಕೊರಿಂಥಿಯರಿಗೆ ೧ ೧೪:೧
ಪ್ರೀತಿಯನ್ನು ಅರಸಿರಿ. ಪವಿತ್ರಾತ್ಮರ ವರಗಳನ್ನು ಬಯಸಿರಿ. ದೇವರ ಸಂದೇಶವನ್ನು ಸಾರಲು ಹಂಬಲಿಸಿರಿ.


ಕೊರಿಂಥಿಯರಿಗೆ ೧ ೧೬:೧೪
ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.


ಕೊರಿಂಥಿಯರಿಗೆ ೨ ೫:೧೪
ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು.


ಕೊರಿಂಥಿಯರಿಗೆ ೨ ೮:೨೪
ಆದ್ದರಿಂದ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟುಮಾಡಿಕೊಡಿರಿ.


ಕೊರಿಂಥಿಯರಿಗೆ ೨ ೧೩:೧೩
ನಮ್ಮ ಪ್ರಭು ಯೇಸುಕ್ರಿಸ್ತರ ವರಪ್ರಸಾದವೂ ದೇವರ ಪ್ರೀತಿಯೂ ಪವಿತ್ರಾತ್ಮರ ಅನ್ಯೋನ್ಯತೆಯೂ ನಿಮ್ಮೆಲ್ಲರೊಡನೆ ಇರಲಿ!


ಗಲಾತ್ಯರಿಗೆ ೫:೬
ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಗಲಾತ್ಯರಿಗೆ ೫:೧೩
ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.


ಎಫೆಸಿಯರಿಗೆ ೧:೫
ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು.


ಎಫೆಸಿಯರಿಗೆ ೧:೬
ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ಎಫೆಸಿಯರಿಗೆ ೧:೧೫
ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿನಿಂದ ನಿಮ್ಮ ಸಲುವಾಗಿ ದೇವರಿಗೆ ಸದಾ ಕೃತಜ್ಞತಾಸ್ತುತಿ ಸಲ್ಲಿಸಿ, ನನ್ನ ಪ್ರಾರ್ಥನೆಯಲ್ಲಿ ನಿಮ್ಮನ್ನು ಸ್ಮರಿಸಿಕೊಳ್ಳುತ್ತಿದ್ದೇನೆ.


ಎಫೆಸಿಯರಿಗೆ ೩:೧೭
ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.


ಎಫೆಸಿಯರಿಗೆ ೩:೧೮
ಹೀಗೆ ದೇವಜನರೆಲ್ಲರೊಡನೆ, ಕ್ರಿಸ್ತಯೇಸುವಿನ ಅಗಾಧ ಪ್ರೀತಿಯ ಉದ್ದ-ಅಗಲ, ಆಳ-ಎತ್ತರ ಎಷ್ಟೆಂಬುದನ್ನು ನೀವು ಗ್ರಹಿಸಿಕೊಳ್ಳುವಂತಾಗಲಿ.


ಎಫೆಸಿಯರಿಗೆ ೩:೧೯
ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ.


ಎಫೆಸಿಯರಿಗೆ ೪:೨
ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ.


ಎಫೆಸಿಯರಿಗೆ ೪:೧೫
ಬದಲಾಗಿ, ಪ್ರೀತಿಯಿಂದ ಸತ್ಯವನ್ನೇ ನುಡಿಯುತ್ತೇವೆ. ಶಿರಸ್ಸಾದ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಸರ್ವತೋಮುಖವಾಗಿ ಬೆಳೆಯುತ್ತೇವೆ.


ಎಫೆಸಿಯರಿಗೆ ೪:೧೬
ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ.


ಎಫೆಸಿಯರಿಗೆ ೫:೨
ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಎಫೆಸಿಯರಿಗೆ ೬:೨೪
ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!


ಫಿಲಿಪಿಯರಿಗೆ ೧:೮
ಕ್ರಿಸ್ತಯೇಸುವಿನಲ್ಲಿರುವ ಉತ್ಕಟ ಪ್ರೀತಿಯಿಂದಲೇ ನಾನು ನಿಮ್ಮೆಲ್ಲರಿಗಾಗಿ ಹಂಬಲಿಸುತ್ತಿದ್ದೇನೆ; ಇದಕ್ಕೆ ದೇವರೇ ಸಾಕ್ಷಿ.


ಫಿಲಿಪಿಯರಿಗೆ ೧:೯
ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾ, ಪೂರ್ಣ ಜ್ಞಾನ ಹಾಗೂ ವಿವೇಕದಿಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ.


ಕೊಲೊಸ್ಸೆಯರಿಗೆ ೧:೮
ಪವಿತ್ರಾತ್ಮ ಅವರು ನಿಮಗೆ ಅನುಗ್ರಹಿಸಿದ ಪ್ರೀತಿಯ ಬಗ್ಗೆ ನಮಗೆ ತಿಳಿಸಿದವನು ಸಹ ಆತನೇ.


ಕೊಲೊಸ್ಸೆಯರಿಗೆ ೨:೨
ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ.


ಕೊಲೊಸ್ಸೆಯರಿಗೆ ೩:೧೪
ಎಲ್ಲಕ್ಕಿಂತ ಮಿಗಿಲಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯೇ ಸಮಸ್ತವನ್ನು ಸಂಪೂರ್ಣಗೊಳಿಸುವ ಬಂಧನ.


ಥೆಸೆಲೋನಿಯರಿಗೆ ೧ ೩:೬
ನಿಮ್ಮನ್ನು ಸಂದರ್ಶಿಸಿದ ನಂತರ ತಿಮೊಥೇಯನು ಹಿಂದಿರುಗಿದ್ದಾನೆ. ನಿಮ್ಮ ವಿಶ್ವಾಸ ಮತ್ತು ಪ್ರೀತಿಯ ಬಗ್ಗೆ ಶುಭವರ್ತಮಾನವನ್ನು ತಂದಿದ್ದಾನೆ. ನಾವು ನಿಮ್ಮನ್ನು ಕಾಣಲು ಬಯಸುವಂತೆ, ನೀವೂ ನಮ್ಮನ್ನು ನೋಡಲು ಹಾತೊರೆಯುತ್ತಿರುವಿರೆಂದು ಮತ್ತು ನಮ್ಮನ್ನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತಿರುವಿರೆಂದು ತಿಳಿಸಿದ್ದಾನೆ.


ಥೆಸೆಲೋನಿಯರಿಗೆ ೧ ೩:೧೨
ನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ಧಿಯಾಗುತ್ತಿರುವಂತೆಯೇ, ನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ಧಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ.


ಥೆಸೆಲೋನಿಯರಿಗೆ ೧ ೫:೧೩
ಅವರು ನಿರ್ವಹಿಸುವ ಕಾರ್ಯದ ನಿಮಿತ್ತ ಅವರನ್ನು ಅತ್ಯಧಿಕ ಪ್ರೀತಿಯಿಂದ ಗೌರವಿಸಿರಿ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.


ಥೆಸೆಲೋನಿಯರಿಗೆ ೨ ೩:೫
ದೇವರ ಪ್ರೀತಿಯನ್ನೂ ಕ್ರಿಸ್ತಯೇಸುವಿನ ಸಹನೆಯನ್ನೂ ನೀವು ಕಲಿತುಕೊಳ್ಳುವಂತೆ, ಪ್ರಭುವೇ ನಿಮ್ಮ ಅಂತರಂಗವನ್ನು ಬೆಳಗಿಸಲಿ.


ತಿಮೊಥೇಯನಿಗ ೧ ೧:೫
ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.


ತಿಮೊಥೇಯನಿಗ ೨ ೧:೧
ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ!


ತಿಮೊಥೇಯನಿಗ ೨ ೧:೧೩
ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ವಿಶ್ವಾಸ ಹಾಗೂ ಪ್ರೀತಿಯಲ್ಲಿ ನೀನು ನೆಲೆಗೊಂಡಿರು. ನಾನು ಬೋಧಿಸಿದ್ದನ್ನು ಆದರ್ಶವಾಗಿಟ್ಟುಕೊಂಡು ಅನುಸರಿಸು.


ತಿಮೊಥೇಯನಿಗ ೨ ೪:೮
ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ಫಿಲೆಮೋನನಿಗೆ ೧:೭
ಸಹೋದರನೇ, ನಿನ್ನ ಪ್ರೀತಿಯನ್ನು ನೆನೆದು ನಾನು ಆನಂದವನ್ನೂ ಆದರಣೆಯನ್ನೂ ಪಡೆಯುತ್ತಿದ್ದೇನೆ. ದೇವಜನರೆಲ್ಲರ ಹೃದಯಗಳನ್ನು ನೀನು ಉಲ್ಲಾಸಪಡಿಸುತ್ತಿರುವೆ.


ಫಿಲೆಮೋನನಿಗೆ ೧:೯
ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ.


ಹಿಬ್ರಿಯರಿಗೆ ೧೩:೧
ಸೋದರ ಪ್ರೀತಿಯಲ್ಲಿ ನೆಲೆಯಾಗಿ ನಿಲ್ಲಿರಿ.


ಪೇತ್ರನು ೧ ೫:೧೪
ಪ್ರೀತಿಯ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಯೇಸುಕ್ರಿಸ್ತರಲ್ಲಿರುವ ನಿಮ್ಮೆಲ್ಲರಿಗೂ ಶಾಂತಿಸಮಾಧಾನ ಲಭಿಸಲಿ!


ಪೇತ್ರನು ೨ ೧:೭
ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು, ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.


ಯೊವಾನ್ನನು ೧ ೪:೧೦
ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ.


ಯೊವಾನ್ನನು ೧ ೪:೧೬
ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ.


ಯೊವಾನ್ನನು ೧ ೪:೧೮
ಪ್ರೀತಿ ಇರುವಲ್ಲಿ ಭೀತಿ ಇರುವುದಿಲ್ಲ. ಪೂರ್ಣ ಪ್ರೀತಿ ಭೀತಿಯನ್ನು ಹೊರದೂಡುತ್ತದೆ. ಭೀತಿ ಇರುವಲ್ಲಿ ಯಾತನೆ ಇರುತ್ತದೆ. ಭೀತಿಯಿಂದಿರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.


ಯೊವಾನ್ನನು ೨ ೧:೨
ನಮ್ಮಲ್ಲಿ ನೆಲೆಗೊಂಡಿರುವ ಹಾಗೂ ನಮ್ಮಲ್ಲಿ ಶಾಶ್ವತವಾಗಿರುವ ಸತ್ಯದ ಪ್ರಯುಕ್ತ ನಾನು ಮತ್ತು ಸತ್ಯವನ್ನು ಅರಿತಿರುವ ಎಲ್ಲರು ನಿಮ್ಮಲ್ಲಿ ಪ್ರೀತಿಯನ್ನಿಟ್ಟಿದ್ದೇವೆ.


ಯೂದನು ೧:೧
ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಯೂದನು ೧:೨
ದೇವರಿಂದ ಕರೆಹೊಂದಿರುವ ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಸಮೃದ್ಧಿಯಾಗಿ ಲಭಿಸಲಿ!


ಯೂದನು ೧:೨೧
ನಿತ್ಯಜೀವವನ್ನು ದಯಪಾಲಿಸುವ ಕರುಣಾಮಯ ಪ್ರಭು ಯೇಸುಕ್ರಿಸ್ತರನ್ನು ಎದುರುನೋಡುತ್ತಾ ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ.


Kannada Bible (KNCL) 2016
No Data