A A A A A


ಹುಡುಕಿ

ಮತ್ತಾಯನು ೫:೪೩
“ ‘ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ.


ಮತ್ತಾಯನು ೫:೪೪
ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.


ಮತ್ತಾಯನು ೫:೪೬
ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿಮಾಡುವವರೂ ಹಾಗೆ ಮಾಡುವುದಿಲ್ಲವೇ?


ಮತ್ತಾಯನು ೬:೨೪
“ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.”


ಮತ್ತಾಯನು ೧೦:೩೭
“ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.


Matthew 19:19
ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸಬೇಕು,” ಎಂದರು.


Matthew 22:37
ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’


Matthew 22:39
ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು.’


Matthew 24:12
ಭ್ರಷ್ಟಾಚಾರವು ಬೆಳೆದು ಬಹುಜನರ ಪ್ರೀತಿ ಉಡುಗಿಹೋಗುವುದು.


ಲೂಕನು ೧:೫೦
ಆತನಲ್ಲಿ ಭಯಭಕ್ತಿಯುಳ್ಳವರಿಗೆ I ಆತನ ಪ್ರೀತಿ ತಲತಲಾಂತರದವರೆಗೆ II


ಲೂಕನು ೧:೭೨
ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು I ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು II


ಲೂಕನು ೬:೨೭
“ನನ್ನನ್ನು ಆಲಿಸುತ್ತಿರುವವರೇ, ನನ್ನ ಮಾತನ್ನು ಕೇಳಿರಿ: ‘ನಿಮ್ಮ ಶತ್ರುಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಿಸುವವರನ್ನು ಸತ್ಕರಿಸಿರಿ.


ಲೂಕನು ೬:೩೨
ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ಅದೇನು ಪುಣ್ಯ? ಪಾಪಿಷ್ಠರು ಸಹ ತಮ್ಮನ್ನು ಪ್ರೀತಿಸುವವರನ್ನು ಪ್ರೀತಿಸುತ್ತಾರಲ್ಲವೆ?


ಲೂಕನು ೬:೩೫
“ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.


ಲೂಕನು ೭:೫
ನಮ್ಮ ಜನರ ಮೇಲೆ ಅವನಿಗೆ ಪ್ರೀತಿ ಇದೆ; ಅಲ್ಲದೆ ನಮ್ಮ ಪ್ರಾರ್ಥನಾಮಂದಿರವನ್ನು ಕಟ್ಟಿಸಿಕೊಟ್ಟವನೂ ಅವನೇ,” ಎಂದು ಬಹಳವಾಗಿ ವಿನಂತಿಸಿದರು.


ಲೂಕನು ೭:೪೨
ಆ ಇಬ್ಬರಿಗೂ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲಿಗನು ಇಬ್ಬರ ಸಾಲವನ್ನು ಮನ್ನಾ ಮಾಡಿದನು. ಈಗ ಹೇಳು, ಈ ಇಬ್ಬರಲ್ಲಿ “ಯಾರಿಗೆ ಆ ಸಾಲಿಗನ ಮೇಲೆ ಹೆಚ್ಚು ಪ್ರೀತಿ?” ಎಂದು ಕೇಳಿದರು.


ಲೂಕನು ೭:೪೭
ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ,” ಎಂದರು.


ಲೂಕನು ೧೦:೨೭
ಅವನು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಆತ್ಮದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು ಉತ್ತರಕೊಟ್ಟನು.


ಲೂಕನು ೧೧:೪೨
“ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು.


ಲೂಕನು ೧೬:೧೩
“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾಗದು; ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು,” ಎಂದರು.


ರೋಮನರಿಗೆ ೫:೫
ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ರೋಮನರಿಗೆ ೫:೮
ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.


ರೋಮನರಿಗೆ ೮:೨೮
ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ರೋಮನರಿಗೆ ೮:೩೫
ಕ್ರಿಸ್ತಯೇಸುವಿನ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಯಾರಿಂದ ಸಾಧ್ಯ? ಕಷ್ಟಸಂಕಟ, ಇಕ್ಕಟ್ಟು-ಬಿಕ್ಕಟ್ಟು, ಹಿಂಸೆ ಬಾಧೆ ಇವುಗಳಿಂದ ಸಾಧ್ಯವೆ? ಇಲ್ಲ, ಹಸಿವು ನೀರಡಿಕೆ, ನಗ್ನಸ್ಥಿತಿ, ಆಪತ್ತು-ವಿಪತ್ತು, ಖಡ್ಗಕಠಾರಿಗಳಿಂದ ಸಾಧ್ಯವೆ? ಎಂದಿಗೂ ಇಲ್ಲ.


ರೋಮನರಿಗೆ ೮:೩೭
ನಮ್ಮನ್ನು ಪ್ರೀತಿಸಿದ ಯೇಸುಕ್ರಿಸ್ತರ ಮುಖಾಂತರ ಇವೆಲ್ಲವುಗಳಲ್ಲಿಯೂ ನಾವು ಪೂರ್ಣ ಜಯಶಾಲಿಗಳಾಗುತ್ತೇವೆ.


ರೋಮನರಿಗೆ ೮:೩೮
ಸಾವಾಗಲಿ ಜೀವವಾಗಲಿ, ದೇವದೂತರಾಗಲಿ ದುರಾತ್ಮರಾಗಲಿ, ಈಗಿನ ಸಂತತಿಗಳೇ ಆಗಲಿ, ಭವಿಷ್ಯದ ಆಗುಹೋಗುಗಳೇ ಆಗಲಿ, ಯಾವ ಶಕ್ತಿಗಳೇ ಆಗಲಿ ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ತೋರಿಬಂದ ದೈವಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲಾರವು.


ರೋಮನರಿಗೆ ೮:೩೯
ಅಂತೆಯೇ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಸೃಷ್ಟಿಸಮಸ್ತಗಳಲ್ಲಿ ಯಾವುದೇ ಆಗಲಿ, ಆ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇದು ನಿಶ್ಚಯ.


ರೋಮನರಿಗೆ ೯:೧೩
ಅಂತೆಯೇ, “ನಾನು ಯಕೋಬನನ್ನು ಪ್ರೀತಿಸಿದೆನು. ಏಸಾವನನ್ನು ದ್ವೇಷಿಸಿದೆನು,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ರೋಮನರಿಗೆ ೧೨:೯
ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.


ರೋಮನರಿಗೆ ೧೨:೧೦
ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.


ರೋಮನರಿಗೆ ೧೩:೮
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ವಿಧವಾದ ಋಣವೂ ನಿಮಗಿರಬಾರದು. ಏಕೆಂದರೆ ಪರರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನು ಪೂರ್ಣವಾಗಿ ನೆರವೇರಿಸಿದವನು.


ರೋಮನರಿಗೆ ೧೩:೯
“ವ್ಯಭಿಚಾರ ಮಾಡಬೇಡ, ಕೊಲಬೇಡ, ಕಳಬೇಡ, ದುರಾಶೆ ಪಡಬೇಡ,” - ಈ ಮುಂತಾದ ಆಜ್ಞೆಗಳೆಲ್ಲವೂ “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ಅಡಗಿವೆ.


ರೋಮನರಿಗೆ ೧೩:೧೦
ಪ್ರೀತಿಯು ಪರರಿಗೆ ಕೇಡು ಬಗೆಯದು. ಆದಕಾರಣ ಪ್ರೀತಿಯೇ ಧರ್ಮಶಾಸ್ತ್ರದ ಪೂರೈಕೆ.


ರೋಮನರಿಗೆ ೧೪:೧೫
ನೀನು ಏನನ್ನಾದರೂ ತಿನ್ನುವುದರಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾಗುವುದಾದರೆ ನಿನ್ನ ಆ ವರ್ತನೆ ಪ್ರೀತಿಪ್ರೇರಿತವಾದುದಲ್ಲ. ಯಾರಿಗೋಸ್ಕರ ಕ್ರಿಸ್ತಯೇಸು ಪ್ರಾಣಾರ್ಪಣೆ ಮಾಡಿದರೋ ಅಂಥವನಿಗೆ ನೀನು ತಿನ್ನುವ ಆಹಾರದಿಂದಾಗಿ ನಾಶವನ್ನು ತರಬಾರದು.


ರೋಮನರಿಗೆ ೧೫:೩೦
ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲೂ ಪವಿತ್ರಾತ್ಮ ಪ್ರೇರಿತವಾದ ಪ್ರೀತಿಯಿಂದಲೂ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ: ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ ನನ್ನ ಹೋರಾಟದಲ್ಲಿ ಸಹಕರಿಸಿರಿ.


ರೋಮನರಿಗೆ ೧೬:೧
ನಾನು ನಿಮ್ಮ ಬಳಿಗೆ ಕಳುಹಿಸುತ್ತಿರುವ ಸಹೋದರಿ ಫೊಯಿಬೆಯನ್ನು ಪ್ರೀತಿಯಿಂದ ಸ್ವಾಗತಿಸಿರಿ. ಈಕೆ ಕೆಂಕ್ರೆಯ ಪಟ್ಟಣದ ಸಭಾಸೇವಕಳು.


ಕೊರಿಂಥಿಯರಿಗೆ ೧ ೪:೨೧
ಬೆತ್ತವನ್ನು ಹಿಡಿದು ಬಿಗಿಯಲು ಬರಲೋ? ಅಥವಾ ಪ್ರೀತಿ ಸಹಾನುಭೂತಿಯಿಂದ ತುಂಬಿದವನಾಗಿ ಬರಲೋ? ನಿಮಗೆ ಯಾವುದು ಇಷ್ಟ?


ಕೊರಿಂಥಿಯರಿಗೆ ೧ ೮:೧
ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ.


ಕೊರಿಂಥಿಯರಿಗೆ ೧ ೮:೩
ಆದರೆ ದೇವರನ್ನು ಪ್ರೀತಿಸುವವನನ್ನು ದೇವರು ಗುರುತಿಸುತ್ತಾರೆ.


ಕೊರಿಂಥಿಯರಿಗೆ ೧ ೧೩:೧
ಸುರನರರ ನುಡಿಗಳ ನಾನಾಡಬಲ್ಲೆನಾದರೂ ಪರಮ ಪ್ರೀತಿಯೊಂದೆನಗಿಲ್ಲದಿರಲು ನಾ ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ಜಾಗಟೆ.


ಕೊರಿಂಥಿಯರಿಗೆ ೧ ೧೩:೨
ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ಕೊರಿಂಥಿಯರಿಗೆ ೧ ೧೩:೩
ನನಗಿರುವುದೆಲ್ಲವನು ನಾ ದಾನಮಾಡೆ ದೇಹವನೆ ಸಜೀವ ದಹಿಸಲು ನೀಡೆ ನಾನಾಗಿರೆ ಪರಮ ಪ್ರೀತಿ ವಿಹೀನ ಏನದು ಜೀವನ, ನನಗೇನದು ಪ್ರಯೋಜನ?


ಕೊರಿಂಥಿಯರಿಗೆ ೧ ೧೩:೪
ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.


ಕೊರಿಂಥಿಯರಿಗೆ ೧ ೧೩:೭
ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು.


ಕೊರಿಂಥಿಯರಿಗೆ ೧ ೧೩:೮
ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ‍ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ.


ಕೊರಿಂಥಿಯರಿಗೆ ೧ ೧೩:೧೩
ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರಲಿ ಪ್ರೀತಿಯೇ ಪರಮೋನ್ನತವೆಂಬುದ ನೀನರಿ.


ಕೊರಿಂಥಿಯರಿಗೆ ೧ ೧೪:೧
ಪ್ರೀತಿಯನ್ನು ಅರಸಿರಿ. ಪವಿತ್ರಾತ್ಮರ ವರಗಳನ್ನು ಬಯಸಿರಿ. ದೇವರ ಸಂದೇಶವನ್ನು ಸಾರಲು ಹಂಬಲಿಸಿರಿ.


ಕೊರಿಂಥಿಯರಿಗೆ ೧ ೧೬:೧೪
ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.


ಕೊರಿಂಥಿಯರಿಗೆ ೧ ೧೬:೨೨
ಯಾರಾದರೂ ಪ್ರಭುವನ್ನು ಪ್ರೀತಿಸದೆಹೋದರೆ ಅವರಿಗೆ ಧಿಕ್ಕಾರ! “ಮಾರನಥ\ - ಪ್ರಭುವೇ ಬನ್ನಿ.


ಕೊರಿಂಥಿಯರಿಗೆ ೧ ೧೬:೨೪
ಕ್ರಿಸ್ತಯೇಸುವಿನಲ್ಲಿ ನಿಮ್ಮೆಲ್ಲರಿಗೂ ನನ್ನ ಪ್ರೀತಿವಾತ್ಸಲ್ಯಗಳು!


ಕೊರಿಂಥಿಯರಿಗೆ ೨ ೨:೪
ಮನೋವ್ಯಥೆಯಿಂದಲೂ ಹೃದಯವೇದನೆಯಿಂದಲೂ ಕಣ್ಣೀರಿಡುತ್ತಾ ನಾನು ನಿಮಗೆ ಪತ್ರ ಬರೆದೆ. ನಿಮ್ಮನ್ನು ದುಃಖಕ್ಕೀಡುಮಾಡಬೇಕೆಂದಲ್ಲ, ನಿಮ್ಮನ್ನು ಎಷ್ಟರಮಟ್ಟಿಗೆ ಪ್ರೀತಿಸುತ್ತಿರುವೆನೆಂದು ನೀವು ತಿಳಿದುಕೊಳ್ಳಬೇಕೆಂದು ಬರೆದೆ.


ಕೊರಿಂಥಿಯರಿಗೆ ೨ ೨:೮
ನಿಮ್ಮ ಪ್ರೀತಿ ಅವನಿಗೆ ಮನದಟ್ಟಾಗುವಂತೆ ನಡೆದುಕೊಳ್ಳಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ಕೊರಿಂಥಿಯರಿಗೆ ೨ ೫:೧೪
ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು.


ಕೊರಿಂಥಿಯರಿಗೆ ೨ ೬:೧೩
ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ: ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವೂ ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ.


ಕೊರಿಂಥಿಯರಿಗೆ ೨ ೭:೧೫
ನಿಮ್ಮೆಲ್ಲರ ವಿನಯ-ವಿಧೇಯತೆಯನ್ನು, ಭಯಭಕ್ತಿಯಿಂದ ನೀವು ನೀಡಿದ ಸ್ವಾಗತವನ್ನು ಸ್ಮರಿಸಿಕೊಳ್ಳುವಾಗಲೆಲ್ಲ ನಿಮ್ಮ ಮೇಲೆ ಆತನಿಗಿರುವ ಪ್ರೀತಿ ಉಕ್ಕಿ ಹರಿಯುತ್ತದೆ.


ಕೊರಿಂಥಿಯರಿಗೆ ೨ ೮:೬
ಇಂಥ ಪ್ರೀತಿಮಯ ಸೇವಾಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ತೀತನು ಅದನ್ನು ಮುಂದುವರಿಸಿ, ಪೂರ್ಣಗೊಳಿಸಬೇಕೆಂದು ನಾವು ಆತನನ್ನು ಕೇಳಿಕೊಂಡಿದ್ದೇವೆ.


ಕೊರಿಂಥಿಯರಿಗೆ ೨ ೮:೭
ವಿಶ್ವಾಸ, ವಾಕ್ಚಾತುರ್ಯ, ಜ್ಞಾನ, ಶ್ರದ್ಧೆ, ನಮ್ಮ ಬಗ್ಗೆ ನಿಮಗಿರುವ ಪ್ರೀತಿ - ಈ ಎಲ್ಲಾ ವಿಷಯಗಳಲ್ಲೂ ನೀವು ಸಮೃದ್ಧರಾಗಿದ್ದೀರಿ. ಹಾಗೆಯೇ ಈ ಸೇವಾಕಾರ್ಯದಲ್ಲೂ ಸಮೃದ್ಧರಾಗಿರಿ.


ಕೊರಿಂಥಿಯರಿಗೆ ೨ ೮:೮
ಇದನ್ನು ನಾನು ಆಜ್ಞಾರೂಪವಾಗಿ ಹೇಳುತ್ತಿಲ್ಲ. ಬೇರೆಯವರಿಗೆ ಈ ಸೇವಾಕಾರ್ಯದಲ್ಲಿ ಇರುವ ಶ್ರದ್ಧೆಯನ್ನು ಆದರ್ಶವಾಗಿ ಹಿಡಿದು ನಿಮ್ಮ ಪ್ರೀತಿ ಎಷ್ಟು ಯಥಾರ್ಥವಾದುದೆಂದು ಕಂಡುಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇನೆ.


ಕೊರಿಂಥಿಯರಿಗೆ ೨ ೮:೨೪
ಆದ್ದರಿಂದ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟುಮಾಡಿಕೊಡಿರಿ.


ಕೊರಿಂಥಿಯರಿಗೆ ೨ ೯:೭
ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ.


ಕೊರಿಂಥಿಯರಿಗೆ ೨ ೯:೧೪
ದೇವರು ನಿಮಗೆ ಅನುಗ್ರಹಿಸಿರುವ ಅತಿಶಯವಾದ ವರಕ್ಕಾಗಿ ಅವರು ಪ್ರೀತಿವಾತ್ಸಲ್ಯದಿಂದ ನಿಮಗೋಸ್ಕರ ಪ್ರಾರ್ಥಿಸುವರು.


ಕೊರಿಂಥಿಯರಿಗೆ ೨ ೧೧:೧೧
ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲರು.


ಕೊರಿಂಥಿಯರಿಗೆ ೨ ೧೨:೧೫
ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?


ಕೊರಿಂಥಿಯರಿಗೆ ೨ ೧೩:೧೧
ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ಕೊರಿಂಥಿಯರಿಗೆ ೨ ೧೩:೧೩
ನಮ್ಮ ಪ್ರಭು ಯೇಸುಕ್ರಿಸ್ತರ ವರಪ್ರಸಾದವೂ ದೇವರ ಪ್ರೀತಿಯೂ ಪವಿತ್ರಾತ್ಮರ ಅನ್ಯೋನ್ಯತೆಯೂ ನಿಮ್ಮೆಲ್ಲರೊಡನೆ ಇರಲಿ!


ಗಲಾತ್ಯರಿಗೆ ೨:೨೦
ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.


ಗಲಾತ್ಯರಿಗೆ ೫:೬
ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.


ಗಲಾತ್ಯರಿಗೆ ೫:೧೩
ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.


ಗಲಾತ್ಯರಿಗೆ ೫:೧೪
“ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸು,” ಎಂಬ ಒಂದೇ ವಚನದಲ್ಲಿ ಇಡೀ ಧರ್ಮಶಾಸ್ತ್ರವು ಅಡಗಿದೆ.


ಗಲಾತ್ಯರಿಗೆ ೫:೨೨
ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ಎಫೆಸಿಯರಿಗೆ ೧:೫
ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು.


ಎಫೆಸಿಯರಿಗೆ ೧:೬
ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.


ಎಫೆಸಿಯರಿಗೆ ೧:೧೫
ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿನಿಂದ ನಿಮ್ಮ ಸಲುವಾಗಿ ದೇವರಿಗೆ ಸದಾ ಕೃತಜ್ಞತಾಸ್ತುತಿ ಸಲ್ಲಿಸಿ, ನನ್ನ ಪ್ರಾರ್ಥನೆಯಲ್ಲಿ ನಿಮ್ಮನ್ನು ಸ್ಮರಿಸಿಕೊಳ್ಳುತ್ತಿದ್ದೇನೆ.


ಎಫೆಸಿಯರಿಗೆ ೨:೪
ಆದರೆ ಕರುಣಾಮಯ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿ,


ಎಫೆಸಿಯರಿಗೆ ೩:೧೭
ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.


ಎಫೆಸಿಯರಿಗೆ ೩:೧೮
ಹೀಗೆ ದೇವಜನರೆಲ್ಲರೊಡನೆ, ಕ್ರಿಸ್ತಯೇಸುವಿನ ಅಗಾಧ ಪ್ರೀತಿಯ ಉದ್ದ-ಅಗಲ, ಆಳ-ಎತ್ತರ ಎಷ್ಟೆಂಬುದನ್ನು ನೀವು ಗ್ರಹಿಸಿಕೊಳ್ಳುವಂತಾಗಲಿ.


ಎಫೆಸಿಯರಿಗೆ ೩:೧೯
ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ.


ಎಫೆಸಿಯರಿಗೆ ೪:೨
ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ.


ಎಫೆಸಿಯರಿಗೆ ೪:೧೫
ಬದಲಾಗಿ, ಪ್ರೀತಿಯಿಂದ ಸತ್ಯವನ್ನೇ ನುಡಿಯುತ್ತೇವೆ. ಶಿರಸ್ಸಾದ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಸರ್ವತೋಮುಖವಾಗಿ ಬೆಳೆಯುತ್ತೇವೆ.


ಎಫೆಸಿಯರಿಗೆ ೪:೧೬
ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ.


ಎಫೆಸಿಯರಿಗೆ ೫:೨
ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಎಫೆಸಿಯರಿಗೆ ೫:೨೫
ಪುರುಷರೇ, ಕ್ರಿಸ್ತಯೇಸು ಧರ್ಮಸಭೆಯನ್ನು ಪ್ರೀತಿಸಿದ ಪ್ರಕಾರ ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಧರ್ಮಸಭೆಯನ್ನು ಪಾವನಗೊಳಿಸುವುದಕ್ಕಾಗಿ ಕ್ರಿಸ್ತಯೇಸು ತಮ್ಮ ಪ್ರಾಣವನ್ನೇ ಕೊಟ್ಟರು. ವಾಕ್ಯೋಪದೇಶದಿಂದಲೂ ಜಲಸ್ನಾನದಿಂದಲೂ ಅದನ್ನು ಶುದ್ಧೀಕರಿಸಿದರು.


ಎಫೆಸಿಯರಿಗೆ ೫:೨೮
ಹಾಗೆಯೇ ಪುರುಷನು ಸಹ ತನ್ನ ಶರೀರವನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನು ಪ್ರೀತಿಸಲಿ. ತನ್ನ ಪತ್ನಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.


ಎಫೆಸಿಯರಿಗೆ ೫:೩೩
ಆದರೆ ಇದು ನಿಮಗೂ ಅನ್ವಯಿಸುತ್ತದೆ. ಪ್ರತಿಯೊಬ್ಬ ಪುರುಷನು ತನ್ನನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನೂ ಪ್ರೀತಿಸಲಿ ಮತ್ತು ಪ್ರತಿಯೊಬ್ಬ ಸ್ತ್ರೀಯು ತನ್ನ ಪತಿಯ ವಿಷಯದಲ್ಲಿ ಗೌರವದಿಂದ ನಡೆದುಕೊಳ್ಳಲಿ.


ಎಫೆಸಿಯರಿಗೆ ೬:೨೩
ಪಿತನಾದ ದೇವರೂ ಪ್ರಭುವಾದ ಯೇಸುಕ್ರಿಸ್ತರೂ ಸಹೋದರರಿಗೆ ಶಾಂತಿಸಮಾಧಾನವನ್ನು ಮತ್ತು ಪ್ರೀತಿವಿಶ್ವಾಸವನ್ನು ದಯಪಾಲಿಸಲಿ.


ಎಫೆಸಿಯರಿಗೆ ೬:೨೪
ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!


ಫಿಲಿಪಿಯರಿಗೆ ೧:೮
ಕ್ರಿಸ್ತಯೇಸುವಿನಲ್ಲಿರುವ ಉತ್ಕಟ ಪ್ರೀತಿಯಿಂದಲೇ ನಾನು ನಿಮ್ಮೆಲ್ಲರಿಗಾಗಿ ಹಂಬಲಿಸುತ್ತಿದ್ದೇನೆ; ಇದಕ್ಕೆ ದೇವರೇ ಸಾಕ್ಷಿ.


ಫಿಲಿಪಿಯರಿಗೆ ೧:೯
ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾ, ಪೂರ್ಣ ಜ್ಞಾನ ಹಾಗೂ ವಿವೇಕದಿಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ.


ಫಿಲಿಪಿಯರಿಗೆ ೨:೧
ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಾಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನ್ಯತೆ, ದೀನದಯಾಳತೆ ಇರುವುದಾದರೆ ಐಕಮತ್ಯದಿಂದ ಬಾಳಿರಿ.


ಫಿಲಿಪಿಯರಿಗೆ ೨:೨
ನಿಮ್ಮೆಲ್ಲರಲ್ಲಿ ಒಂದೇ ಮನಸ್ಸು, ಒಂದೇ ಪ್ರೀತಿ ಇರಲಿ. ನಿಮ್ಮ ಗುರಿ ಧ್ಯೇಯಗಳು ಒಂದೇ ಆಗಿರಲಿ. ಆಗ ನನ್ನ ಸಂತೋಷವು ಸಂಪೂರ್ಣಗೊಳ್ಳುವುದು.


ಫಿಲಿಪಿಯರಿಗೆ ೪:೮
ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.


ಕೊಲೊಸ್ಸೆಯರಿಗೆ ೧:೩
ನೀವು ಪ್ರಭು ಯೇಸುಕ್ರಿಸ್ತರಲ್ಲಿ ಇಟ್ಟಿರುವ ವಿಶ್ವಾಸ ಹಾಗೂ ದೇವಜನರಲ್ಲಿ ನೀವು ಇರಿಸಿರುವ ಪ್ರೀತಿ ಇವುಗಳ ಬಗ್ಗೆ ನಾವು ಕೇಳಿದ್ದೇವೆ. ಇದಕ್ಕಾಗಿ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಲ್ಲಿ ಪ್ರಾರ್ಥಿಸುವಾಗಲೆಲ್ಲ ನಿಮಗಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ಕೊಲೊಸ್ಸೆಯರಿಗೆ ೧:೮
ಪವಿತ್ರಾತ್ಮ ಅವರು ನಿಮಗೆ ಅನುಗ್ರಹಿಸಿದ ಪ್ರೀತಿಯ ಬಗ್ಗೆ ನಮಗೆ ತಿಳಿಸಿದವನು ಸಹ ಆತನೇ.


ಕೊಲೊಸ್ಸೆಯರಿಗೆ ೨:೨
ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ.


ಕೊಲೊಸ್ಸೆಯರಿಗೆ ೩:೧೪
ಎಲ್ಲಕ್ಕಿಂತ ಮಿಗಿಲಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯೇ ಸಮಸ್ತವನ್ನು ಸಂಪೂರ್ಣಗೊಳಿಸುವ ಬಂಧನ.


ಕೊಲೊಸ್ಸೆಯರಿಗೆ ೩:೧೯
ಪುರುಷರೇ, ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಅವರೊಡನೆ ಕಠಿಣವಾಗಿ ವರ್ತಿಸದಿರಿ.


ಥೆಸೆಲೋನಿಯರಿಗೆ ೧ ೧:೩
ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.


ಥೆಸೆಲೋನಿಯರಿಗೆ ೧ ೩:೬
ನಿಮ್ಮನ್ನು ಸಂದರ್ಶಿಸಿದ ನಂತರ ತಿಮೊಥೇಯನು ಹಿಂದಿರುಗಿದ್ದಾನೆ. ನಿಮ್ಮ ವಿಶ್ವಾಸ ಮತ್ತು ಪ್ರೀತಿಯ ಬಗ್ಗೆ ಶುಭವರ್ತಮಾನವನ್ನು ತಂದಿದ್ದಾನೆ. ನಾವು ನಿಮ್ಮನ್ನು ಕಾಣಲು ಬಯಸುವಂತೆ, ನೀವೂ ನಮ್ಮನ್ನು ನೋಡಲು ಹಾತೊರೆಯುತ್ತಿರುವಿರೆಂದು ಮತ್ತು ನಮ್ಮನ್ನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತಿರುವಿರೆಂದು ತಿಳಿಸಿದ್ದಾನೆ.


ಥೆಸೆಲೋನಿಯರಿಗೆ ೧ ೩:೧೨
ನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ಧಿಯಾಗುತ್ತಿರುವಂತೆಯೇ, ನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ಧಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ.


ಥೆಸೆಲೋನಿಯರಿಗೆ ೧ ೪:೯
ಸಹೋದರ ಪ್ರೇಮವನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ನೀವು ಒಬ್ಬರನ್ನೊಬ್ಬರು ಪ್ರೀತಿಸುವುದನ್ನು ದೇವರಿಂದಲೇ ಕಲಿತಿದ್ದೀರಿ.


ಥೆಸೆಲೋನಿಯರಿಗೆ ೧ ೪:೧೦
ಮಕೆದೋನಿಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ನೀವು ಪ್ರೀತಿಸುತ್ತಿರುವುದೇನೋ ನಿಜ. ಆದರೂ ಸಹೋದರರೇ, ನಿಮ್ಮ ಈ ಪ್ರೀತಿ ಇನ್ನೂ ಅಧಿಕಾಧಿಕವಾಗಬೇಕೆಂಬುದೇ ನಮ್ಮ ಆಶಯ.


ಥೆಸೆಲೋನಿಯರಿಗೆ ೧ ೫:೮
ನಾವು ಹಗಲಿಗೆ ಸೇರಿದವರಾದುದರಿಂದ ಸ್ವಸ್ಥಚಿತ್ತದಿಂದ ಇರೋಣ. ವಿಶ್ವಾಸ ಹಾಗೂ ಪ್ರೀತಿ ನಮಗೆ ವಕ್ಷಕವಚವಾಗಬೇಕು. ಜೀವೋದ್ಧಾರದ ನಿರೀಕ್ಷೆ ನಮಗೆ ಶಿರಸ್ತ್ರಾಣವಾಗಿರಬೇಕು.


ಥೆಸೆಲೋನಿಯರಿಗೆ ೧ ೫:೧೩
ಅವರು ನಿರ್ವಹಿಸುವ ಕಾರ್ಯದ ನಿಮಿತ್ತ ಅವರನ್ನು ಅತ್ಯಧಿಕ ಪ್ರೀತಿಯಿಂದ ಗೌರವಿಸಿರಿ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.


ಥೆಸೆಲೋನಿಯರಿಗೆ ೨ ೧:೩
ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.


ಥೆಸೆಲೋನಿಯರಿಗೆ ೨ ೨:೧೦
ಸತ್ಯವನ್ನು ಪ್ರೀತಿಸದೆ, ಜೀವೋದ್ಧಾರವನ್ನು ನಿರಾಕರಿಸಿ, ವಿನಾಶದ ಮಾರ್ಗದಲ್ಲಿರುವವರನ್ನು ಎಲ್ಲಾ ತರಹದ ಕುಯುಕ್ತಿಯಿಂದ ಅವನು ವಂಚಿಸುವನು.


ಥೆಸೆಲೋನಿಯರಿಗೆ ೨ ೨:೧೬
ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.


ಥೆಸೆಲೋನಿಯರಿಗೆ ೨ ೩:೫
ದೇವರ ಪ್ರೀತಿಯನ್ನೂ ಕ್ರಿಸ್ತಯೇಸುವಿನ ಸಹನೆಯನ್ನೂ ನೀವು ಕಲಿತುಕೊಳ್ಳುವಂತೆ, ಪ್ರಭುವೇ ನಿಮ್ಮ ಅಂತರಂಗವನ್ನು ಬೆಳಗಿಸಲಿ.


ತಿಮೊಥೇಯನಿಗ ೧ ೧:೫
ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.


ತಿಮೊಥೇಯನಿಗ ೧ ೧:೧೪
ಕ್ರಿಸ್ತಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿ ವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು.


ತಿಮೊಥೇಯನಿಗ ೧ ೨:೧೫
ಮಹಿಳೆ ಸಚ್ಚರಿತಳಾಗಿದ್ದು ವಿಶ್ವಾಸ, ಪ್ರೀತಿ ಮತ್ತು ಪವಿತ್ರತೆಯಲ್ಲಿ ಪ್ರವರ್ಧಿಸಿದರೆ, ತನ್ನ ತಾಯ್ತನದ ಮೂಲಕ ಸಂರಕ್ಷಣೆಯನ್ನು ಪಡೆಯುತ್ತಾಳೆ.


ತಿಮೊಥೇಯನಿಗ ೧ ೪:೧೨
ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು.


ತಿಮೊಥೇಯನಿಗ ೧ ೬:೨
ಒಂದು ವೇಳೆ ಯಜಮಾನರು ಕ್ರೈಸ್ತವಿಶ್ವಾಸಿಗಳಾಗಿದ್ದರೆ ತಮ್ಮ ಯಜಮಾನರು ಸಹೋದರ ವರ್ಗದವರು ಎಂದು ಉದಾಸೀನ ಮಾಡಬಾರದು. ಬದಲಿಗೆ ಹೆಚ್ಚಿನ ಉತ್ಸಾಹದಿಂದ ಸೇವೆಸಲ್ಲಿಸಬೇಕು. ಏಕೆಂದರೆ, ಅವರ ಸೇವೆಯ ಪ್ರಯೋಜನವನ್ನು ಪಡೆಯುತ್ತಿರುವ ಯಜಮಾನರು, ಕ್ರೈಸ್ತವಿಶ್ವಾಸಿಗಳೂ ಪ್ರೀತಿಗೆ ಪಾತ್ರರಾದವರು. ಈ ವಿಷಯಗಳ ಬಗ್ಗೆ ಆಜ್ಞಾಪೂರ್ವಕವಾಗಿ ಬೋಧಿಸು.


ತಿಮೊಥೇಯನಿಗ ೧ ೬:೧೧
ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ತಿಮೊಥೇಯನಿಗ ೨ ೧:೧
ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ!


ತಿಮೊಥೇಯನಿಗ ೨ ೧:೭
ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.


ತಿಮೊಥೇಯನಿಗ ೨ ೧:೧೩
ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ವಿಶ್ವಾಸ ಹಾಗೂ ಪ್ರೀತಿಯಲ್ಲಿ ನೀನು ನೆಲೆಗೊಂಡಿರು. ನಾನು ಬೋಧಿಸಿದ್ದನ್ನು ಆದರ್ಶವಾಗಿಟ್ಟುಕೊಂಡು ಅನುಸರಿಸು.


ತಿಮೊಥೇಯನಿಗ ೨ ೨:೨೨
ನೀನು ಯೌವನದ ಭಾವೋದ್ರೇಕಗಳಿಗೆ ತುತ್ತಾಗದೆ ಧರ್ಮ, ವಿಶ್ವಾಸ, ಪ್ರೀತಿ ಮತ್ತು ಶಾಂತಿ - ಇವುಗಳನ್ನು ರೂಢಿಸಿಕೋ. ಈ ದಿಸೆಯಲ್ಲಿ ಶುದ್ಧ ಹೃದಯದಿಂದ ದೇವರನ್ನು ಅರಸುವವನು ನಿನಗೆ ಆದರ್ಶವಾಗಿರಲಿ.


ತಿಮೊಥೇಯನಿಗ ೨ ೪:೮
ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ತೀತನಿಗೆ ೧:೮
ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಆಗಿರಬೇಕು. ಇಂಥವನು ಸ್ವಸ್ಥಚಿತ್ತನೂ ನೀತಿವಂತನೂ ಸದ್ಭಕ್ತನೂ ಆತ್ಮಸಂಯಮವುಳ್ಳವನೂ ಆಗಿರಬೇಕು.


ತೀತನಿಗೆ ೨:೨
ಮದ್ಯಾಸಕ್ತಿ ಇಲ್ಲದೆಯೂ ಗೌರವಾಸಕ್ತರಾಗಿಯೂ ಆತ್ಮಸಂಯಮಿಗಳಾಗಿಯೂ ಇರಬೇಕೆಂದು ವೃದ್ಧರಿಗೆ ಬೋಧಿಸು. ವಿಶ್ವಾಸ, ಪ್ರೀತಿ ಮತ್ತು ತಾಳ್ಮೆ ಅವರ ಮುಖ್ಯ ಗುಣಗಳಾಗಿರಬೇಕು.


ತೀತನಿಗೆ ೨:೪
ಅವರು ನವಗೃಹಿಣಿಯರಿಗೆ, ತಮ್ಮ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವಂತೆ ಬುದ್ಧಿ ಹೇಳಬೇಕು.


ಫಿಲೆಮೋನನಿಗೆ ೧:೫
ಏಕೆಂದರೆ, ಪ್ರಭು ಯೇಸುವಿನಲ್ಲೂ ದೇವಜನರೆಲ್ಲರಲ್ಲೂ ನಿನಗಿರುವ ಪ್ರೀತಿವಿಶ್ವಾಸದ ಬಗ್ಗೆ ನಾನು ಕೇಳುತ್ತಿದ್ದೇನೆ.


ಫಿಲೆಮೋನನಿಗೆ ೧:೭
ಸಹೋದರನೇ, ನಿನ್ನ ಪ್ರೀತಿಯನ್ನು ನೆನೆದು ನಾನು ಆನಂದವನ್ನೂ ಆದರಣೆಯನ್ನೂ ಪಡೆಯುತ್ತಿದ್ದೇನೆ. ದೇವಜನರೆಲ್ಲರ ಹೃದಯಗಳನ್ನು ನೀನು ಉಲ್ಲಾಸಪಡಿಸುತ್ತಿರುವೆ.


ಫಿಲೆಮೋನನಿಗೆ ೧:೯
ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ.


ಫಿಲೆಮೋನನಿಗೆ ೧:೧೬
ಈಗ ಅವನು ನಿನ್ನ ಬಳಿಗೆ ಬರುತ್ತಿರುವುದು ಕೇವಲ ಗುಲಾಮನಂತೆ ಅಲ್ಲ. ಅದಕ್ಕಿಂತಲೂ ಬಹಳ ಮೇಲಾದವನಂತೆ, ಕ್ರಿಸ್ತಯೇಸುವಿನಲ್ಲಿ ಪ್ರಿಯ ಸಹೋದರನಂತೆ, ಅವನೆಂದರೆ ನನಗೆಷ್ಟೋ ಪ್ರೀತಿ. ಹಾಗಾದರೆ ನಿನ್ನ ಸೇವಕನೂ ನಮ್ಮ ಪ್ರಭುವಿನಲ್ಲಿ ನಿನ್ನ ಪ್ರಿಯ ಸಹೋದರನೂ ಆಗಿರುವ ಅವನ ಬಗ್ಗೆ ನಿನಗೆ ಮತ್ತಷ್ಟು ಪ್ರೀತಿ ಇರಬೇಕಲ್ಲವೇ?


ಹಿಬ್ರಿಯರಿಗೆ ೧:೯
ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.


ಹಿಬ್ರಿಯರಿಗೆ ೬:೧೦
ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಹಿಬ್ರಿಯರಿಗೆ ೧೦:೨೪
ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ.


ಹಿಬ್ರಿಯರಿಗೆ ೧೨:೬
ಸರ್ವೇಶ್ವರ ತಾವು ಪ್ರೀತಿಸುವವನನ್ನು ಶಿಕ್ಷಿಸುವರು; ತಮಗೆ ಮಗನೆಂದು ಬರಮಾಡಿಕೊಳ್ಳುವವನನ್ನು ದಂಡಿಸುವರು.”


ಹಿಬ್ರಿಯರಿಗೆ ೧೩:೧
ಸೋದರ ಪ್ರೀತಿಯಲ್ಲಿ ನೆಲೆಯಾಗಿ ನಿಲ್ಲಿರಿ.


ಯಕೋಬನು ೧:೧೨
ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.


ಯಕೋಬನು ೨:೫
ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಯಕೋಬನು ೨:೮
‘ನಿನ್ನನ್ನು ನೀನು ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನು ಪ್ರೀತಿಸು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ಕೈಗೊಂಡು ನಡೆಯುತ್ತಿದ್ದರೆ ಅದು ಒಳ್ಳೆಯದು.


ಪೇತ್ರನು ೧ ೧:೮
ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ಪೇತ್ರನು ೧ ೧:೨೨
ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಪೇತ್ರನು ೧ ೩:೮
ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.


ಪೇತ್ರನು ೧ ೪:೮
ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆಂದರೆ, ಪ್ರೀತಿ ಅಸಂಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ.


ಪೇತ್ರನು ೧ ೫:೧೪
ಪ್ರೀತಿಯ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಯೇಸುಕ್ರಿಸ್ತರಲ್ಲಿರುವ ನಿಮ್ಮೆಲ್ಲರಿಗೂ ಶಾಂತಿಸಮಾಧಾನ ಲಭಿಸಲಿ!


ಪೇತ್ರನು ೨ ೧:೭
ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು, ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.


ಯೊವಾನ್ನನು ೧ ೨:೫
ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ.


ಯೊವಾನ್ನನು ೧ ೨:೧೦
ತನ್ನ ಸಹೋದರನನ್ನು ಪ್ರೀತಿಸುವವನಾದರೋ ಬೆಳಕಿನಲ್ಲಿ ನೆಲೆಗೊಂಡಿರುತ್ತಾನೆ. ಎಡವಿ ಪಾಪದಲ್ಲಿ ಬೀಳಿಸುವಂಥದ್ದೇನೂ ಅವನಲ್ಲಿ ಇರದು.


ಯೊವಾನ್ನನು ೧ ೩:೧
ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.


ಯೊವಾನ್ನನು ೧ ೩:೧೦
ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.


ಯೊವಾನ್ನನು ೧ ೩:೧೧
ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ ಮೊತ್ತಮೊದಲಿನಿಂದಲೂ ನೀವು ಕೇಳಿದ ಸಂದೇಶ.


ಯೊವಾನ್ನನು ೧ ೩:೧೪
ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.


ಯೊವಾನ್ನನು ೧ ೩:೧೬
ಕ್ರಿಸ್ತಯೇಸು ನಮಗೋಸ್ಕರ ತಮ್ಮ ಪ್ರಾಣವನ್ನೇ ತೆತ್ತರು. ಇದರಿಂದ ಪ್ರೀತಿ ಎಂತಹುದೆಂದು ನಾವು ಅರಿತುಕೊಂಡೆವು. ನಾವೂ ಕೂಡ ಸಹೋದರರಿಗಾಗಿ ಪ್ರಾಣಾರ್ಪಣೆ ಮಾಡಲು ಬದ್ಧರಾಗಿದ್ದೇವೆ.


ಯೊವಾನ್ನನು ೧ ೩:೧೭
ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು?


ಯೊವಾನ್ನನು ೧ ೩:೧೮
ಪ್ರಿಯಮಕ್ಕಳೇ, ನಾವು ಬರಿಯ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರಬಾರದು. ನಮ್ಮ ಪ್ರೀತಿ ಸತ್ಯದಲ್ಲೂ ಕೃತ್ಯದಲ್ಲೂ ವ್ಯಕ್ತವಾಗಬೇಕು.


ಯೊವಾನ್ನನು ೧ ೩:೨೩
ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ.


ಯೊವಾನ್ನನು ೧ ೪:೭
ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು.


ಯೊವಾನ್ನನು ೧ ೪:೮
ಪ್ರೀತಿಸದವನು ದೇವರನ್ನು ಬಲ್ಲವನಲ್ಲ. ಏಕೆಂದರೆ, ದೇವರು ಪ್ರೀತಿಸ್ವರೂಪಿ.


ಯೊವಾನ್ನನು ೧ ೪:೯
ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು.


ಯೊವಾನ್ನನು ೧ ೪:೧೦
ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ.


ಯೊವಾನ್ನನು ೧ ೪:೧೧
ಪ್ರಿಯರೇ, ದೇವರೇ ನಮ್ಮನ್ನು ಇಷ್ಟಾಗಿ ಪ್ರೀತಿಸಿರುವಲ್ಲಿ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಲೇಬೇಕು.


ಯೊವಾನ್ನನು ೧ ೪:೧೨
ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಸಿರುತ್ತಾರೆ. ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ಯೊವಾನ್ನನು ೧ ೪:೧೬
ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ.


ಯೊವಾನ್ನನು ೧ ೪:೧೭
ಇದರಿಂದಾಗಿ, ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬಂದಿರುತ್ತದೆ; ನ್ಯಾಯತೀರ್ಪಿನ ದಿನದಂದು ನಾವು ಭರವಸೆಯಿಂದಿರುತ್ತೇವೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.


ಯೊವಾನ್ನನು ೧ ೪:೧೮
ಪ್ರೀತಿ ಇರುವಲ್ಲಿ ಭೀತಿ ಇರುವುದಿಲ್ಲ. ಪೂರ್ಣ ಪ್ರೀತಿ ಭೀತಿಯನ್ನು ಹೊರದೂಡುತ್ತದೆ. ಭೀತಿ ಇರುವಲ್ಲಿ ಯಾತನೆ ಇರುತ್ತದೆ. ಭೀತಿಯಿಂದಿರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.


ಯೊವಾನ್ನನು ೧ ೪:೧೯
ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಪ್ರೀತಿಸುತ್ತೇವೆ.


ಯೊವಾನ್ನನು ೧ ೪:೨೦
ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?


ಯೊವಾನ್ನನು ೧ ೪:೨೧
ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ.


ಯೊವಾನ್ನನು ೧ ೫:೧
ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.


ಯೊವಾನ್ನನು ೧ ೫:೨
ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಪಾಲಿಸುವುದರಿಂದ ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದು ನಿಶ್ಚಯ ಆಗುತ್ತದೆ.


ಯೊವಾನ್ನನು ೧ ೫:೩
ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ.


ಯೊವಾನ್ನನು ೨ ೧:೨
ನಮ್ಮಲ್ಲಿ ನೆಲೆಗೊಂಡಿರುವ ಹಾಗೂ ನಮ್ಮಲ್ಲಿ ಶಾಶ್ವತವಾಗಿರುವ ಸತ್ಯದ ಪ್ರಯುಕ್ತ ನಾನು ಮತ್ತು ಸತ್ಯವನ್ನು ಅರಿತಿರುವ ಎಲ್ಲರು ನಿಮ್ಮಲ್ಲಿ ಪ್ರೀತಿಯನ್ನಿಟ್ಟಿದ್ದೇವೆ.


ಯೊವಾನ್ನನು ೨ ೧:೩
ಪಿತನಾದ ದೇವರಿಂದಲೂ ಅವರ ಪುತ್ರ ಯೇಸುಕ್ರಿಸ್ತರಿಂದಲೂ ಕೃಪೆ, ಕರುಣೆ, ಶಾಂತಿ, ಸಮಾಧಾನಗಳು ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮಲ್ಲಿ ನೆಲೆಸಲಿ!


ಯೊವಾನ್ನನು ೨ ೧:೫
ಶ್ರೀಮಾತೆಯೇ, ನಾನು ಮಾಡುವ ಬಿನ್ನಹವಿದು: ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದು ಮೊತ್ತಮೊದಲಿನಿಂದಲೂ ನಮಗೆ ಕೊಡಲಾದ ಆಜ್ಞೆಯೇ ಹೊರತು ಹೊಸದೇನೂ ಅಲ್ಲ.


ಯೊವಾನ್ನನು ೨ ೧:೬
ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಪ್ರೀತಿ. ಪ್ರೀತಿಮಾರ್ಗದಲ್ಲಿ ನಡೆಯಬೇಕೆಂಬುದೇ ನೀವು ಮೊತ್ತಮೊದಲಿನಿಂದಲೂ ಕೇಳಿರುವ ಆಜ್ಞೆ.


ಯೊವಾನ್ನನು ಮೂರು ೧:೧
ಯಥಾರ್ಥ ಪ್ರೀತಿಗೆ ಪಾತ್ರನಾದ ಗಾಯನಿಗೆ - ಸಭೆಯ ಹಿರಿಯನಾದ ನಾನು ಬರೆಯುವ ಪತ್ರ:


ಯೂದನು ೧:೧
ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.


ಯೂದನು ೧:೨
ದೇವರಿಂದ ಕರೆಹೊಂದಿರುವ ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಸಮೃದ್ಧಿಯಾಗಿ ಲಭಿಸಲಿ!


ಯೂದನು ೧:೨೧
ನಿತ್ಯಜೀವವನ್ನು ದಯಪಾಲಿಸುವ ಕರುಣಾಮಯ ಪ್ರಭು ಯೇಸುಕ್ರಿಸ್ತರನ್ನು ಎದುರುನೋಡುತ್ತಾ ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ.


ಪ್ರಕಟನೆ ೧:೫
ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಪ್ರಕಟನೆ ೨:೪
ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ: ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.


ಪ್ರಕಟನೆ ೨:೧೯
ನಿನ್ನ ಸುಕೃತ್ಯಗಳನ್ನು ನಾನು ಬಲ್ಲೆ. ನಿನ್ನ ಪ್ರೀತಿ ವಿಶ್ವಾಸಗಳು ನನಗೆ ತಿಳಿದಿವೆ. ನಿನ್ನ ಸೇವೆ ಸಹಿಷ್ಣುತೆಗಳನ್ನು ಮನಗಂಡಿದ್ದೇನೆ. ನಿನ್ನ ಇತ್ತೀಚಿನ ಕಾರ್ಯಗಳು ನಿನ್ನ ಹಿಂದಿನ ಕಾರ್ಯಗಳಿಗಿಂತಲೂ ಮೇಲಾದುವೆಂದು ನನಗೆ ಗೊತ್ತು.


ಪ್ರಕಟನೆ ೩:೯
ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.


ಪ್ರಕಟನೆ ೩:೧೯
ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.


Kannada Bible (KNCL) 2016
No Data