A A A A A


ಹುಡುಕಿ

ಮತ್ತಾಯನು ೧೩:೨೦
ಬೇರೊಬ್ಬನು ಈ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ.


ಮತ್ತಾಯನು ೧೩:೪೪
“ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ.


ಲೂಕನು ೧:೫೮
ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು.


ಲೂಕನು ೮:೧೩
ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ.


ಲೂಕನು ೧೦:೧೭
ಕಳುಹಿಸಲಾಗಿದ್ದ ಎಪ್ಪತ್ತೆರಡು ಮಂದಿ ಸಂತೋಷಭರಿತರಾಗಿ ಹಿಂದಿರುಗಿ ಬಂದು, “ಸ್ವಾಮೀ, ನಿಮ್ಮ ಹೆಸರಿನಲ್ಲಿ ಆಜ್ಞೆಮಾಡಿದಾಗ ದೆವ್ವಗಳು ಕೂಡ ನಮಗೆ ಅಧೀನವಾಗುತ್ತವೆ,” ಎಂದು ವರದಿಮಾಡಿದರು.


ಲೂಕನು ೧೦:೨೦
ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.


ಲೂಕನು ೧೩:೧೭
ಈ ಉತ್ತರವನ್ನು ಕೇಳಿ ಯೇಸುವಿನ ವಿರೋಧಿಗಳೆಲ್ಲರೂ ನಾಚಿದರು. ಜನರ ಕೂಟವಾದರೋ ಅವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಕಂಡು ಸಂತೋಷಪಟ್ಟಿತು.


ಲೂಕನು ೧೫:೫
ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ;


ಲೂಕನು ೧೫:೬
ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ. ‘ಕಳೆದುಹೋಗಿದ್ದ ಕುರಿ ಸಿಕ್ಕಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾನೆ, ಅಲ್ಲವೆ?


ಲೂಕನು ೧೫:೭
“ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.


ಲೂಕನು ೧೫:೯
ಅದು ಸಿಕ್ಕಿದಾಗ ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ‘ಕಳೆದುಹೋದ ನಾಣ್ಯ ಸಿಕ್ಕಿಬಿಟ್ಟಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾಳಲ್ಲವೆ?


ಲೂಕನು ೧೫:೧೦
“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


ಲೂಕನು ೧೯:೬
ಜಕ್ಕಾಯನು ತಕ್ಷಣವೇ ಇಳಿದುಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು.


ಲೂಕನು ೨೩:೮
ಯೇಸುಸ್ವಾಮಿಯನ್ನು ಕಂಡೊಡನೆ ಹೆರೋದನಿಗೆ ತುಂಬ ಸಂತೋಷವಾಯಿತು. ಆತನು ಅವರನ್ನು ಕಾಣಲು ಬಹಳ ದಿನಗಳಿಂದ ಕಾತರನಾಗಿದ್ದನು. ಏಕೆಂದರೆ ಅವರ ವಿಷಯವಾಗಿ ಈಗಾಗಲೇ ಎಷ್ಟೋ ಕೇಳಿದ್ದನು. ಅವರು ಯಾವುದಾದರೊಂದು ಪವಾಡಕಾರ್ಯ ಮಾಡುವುದನ್ನು ನೋಡಬೇಕೆಂಬ ಅಪೇಕ್ಷೆ ಆತನಿಗಿತ್ತು.


ಯೊವಾನ್ನನು ೪:೩೬
ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ.


ಪ್ರೇಷಿತರ ೨:೪೬
ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು.


ಪ್ರೇಷಿತರ ೫:೪೧
ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.


ಪ್ರೇಷಿತರ ೮:೮
ಇದರಿಂದ ಆ ಪಟ್ಟಣದಲ್ಲಿ ಉಂಟಾದ ಸಂತೋಷಕ್ಕೆ ಎಲ್ಲೆಯೇ ಇರಲಿಲ್ಲ.


ಪ್ರೇಷಿತರ ೮:೩೯
ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು.


Acts 11:23
ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


Acts 13:48
ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು.


Acts 15:3
ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.


Acts 21:17
ನಾವು ಜೆರುಸಲೇಮಿಗೆ ಬಂದಾಗ ಅಲ್ಲಿನ ಸಹೋದರರು ನಮ್ಮನ್ನು ಸಂತೋಷದಿಂದ ಸ್ವಾಗತಿಸಿದರು.


ಕೊರಿಂಥಿಯರಿಗೆ ೧ ೭:೩೦
ದುಃಖಿತರು ದುಃಖವಿಲ್ಲದವರಂತೆ, ಸಂತೋಷಭರಿತರು ಸಂತೋಷರಹಿತರಂತೆ ಹಾಗು ಕೊಂಡುಕೊಳ್ಳುವವರು ಕೊಂಡದ್ದು ತಮ್ಮದಲ್ಲವೋ ಎಂಬಂತೆ ನಡೆದುಕೊಳ್ಳಲಿ.


ಕೊರಿಂಥಿಯರಿಗೆ ೧ ೧೬:೧೭
ಸ್ತೇಫನನು, ಪೋರ್ತುನಾತನು ಮತ್ತು ಅಖಾಯಿಕನು ಬಂದುದರಿಂದ ನನಗೆ ಸಂತೋಷವುಂಟಾಯಿತು. ನೀವು ಇಲ್ಲದ್ದರಿಂದ ನನಗುಂಟಾದ ಕೊರತೆಯನ್ನು ಅವರು ನೀಗಿಸಿದ್ದಾರೆ.


ಕೊರಿಂಥಿಯರಿಗೆ ೨ ೧:೧೫
ಈ ನಂಬಿಕೆಯಿಂದಲೇ ನಿಮಗೆ ಇಮ್ಮಡಿ ಸಂತೋಷ ಲಭಿಸಬೇಕೆಂದು ನಾನು ನಿಮ್ಮ ಬಳಿಗೆ ಈ ಮುಂಚಿತವಾಗಿಯೇ ಬರಬೇಕೆಂದಿದ್ದೆ.


ಕೊರಿಂಥಿಯರಿಗೆ ೨ ೧:೨೪
ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತಿದ್ದೇವೆಂದು ತಿಳಿಯಬೇಡಿ; ವಿಶ್ವಾಸದಲ್ಲಿ ನೀವು ದೃಢರಾಗಿಯೇ ಇದ್ದೀರಿ. ನಿಮ್ಮ ಸಂತೋಷಕ್ಕಾಗಿ ನಾವು ನಿಮ್ಮೊಡನೆ ಸಹಕರಿಸುತ್ತೇವೆ.


ಕೊರಿಂಥಿಯರಿಗೆ ೨ ೨:೨
ನಾನೇ ನಿಮ್ಮನ್ನು ದುಃಖಪಡಿಸಿದೆನಾದರೆ, ನನ್ನನ್ನು ಸಂತೋಷಪಡಿಸುವವರು ಯಾರು? ನನ್ನಿಂದ ದುಃಖಕ್ಕೆ ಒಳಗಾದ ನೀವೇ ಅಲ್ಲವೇ?


ಕೊರಿಂಥಿಯರಿಗೆ ೨ ೨:೩
ಇದಕ್ಕಾಗಿಯೇ ನಾನು ಆ ಪತ್ರವನ್ನು ಬರೆದದ್ದು; ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮ ಸಂತೋಷವೆಂದು ನೀವು ಭಾವಿಸುತ್ತೀರೆಂದು ಬಲ್ಲೆ.


ಕೊರಿಂಥಿಯರಿಗೆ ೨ ೬:೧೦
ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.


ಕೊರಿಂಥಿಯರಿಗೆ ೨ ೭:೮
ನಾನು ಬರೆದ ಪತ್ರದಿಂದ ನಿಮ್ಮ ಮನಸ್ಸಿಗೆ ನೋವಾಗಿರಬಹುದು. ಆದರೂ ಚಿಂತೆಯಿಲ್ಲ. ಆ ಪತ್ರವು ನಿಮ್ಮನ್ನು ಸ್ವಲ್ಪಕಾಲ ದುಃಖಕ್ಕೀಡುಮಾಡಿತೆಂದು ನಾನು ಮೊದಮೊದಲು ನೊಂದುಕೊಂಡೆನಾದರೂ ಈಗ ಸಂತೋಷಪಡುತ್ತೇನೆ.


ಕೊರಿಂಥಿಯರಿಗೆ ೨ ೭:೯
ನಿಮಗೆ ದುಃಖ ಉಂಟಾಯಿತೆಂಬ ಕಾರಣದಿಂದ ಅಲ್ಲ, ಆ ದುಃಖದಿಂದ ನಿಮಗೆ ಮನಪರಿವರ್ತನೆ ಆಯಿತೆಂಬ ಕಾರಣದಿಂದ ಸಂತೋಷಪಡುತ್ತೇನೆ. ನಿಮಗೆ ದುಃಖ ಉಂಟಾದುದು ದೇವರ ಚಿತ್ತವೇ ಸರಿ. ಆದರೆ ನನ್ನಿಂದ ನಿಮಗೆ ಅನ್ಯಾಯವೇನೂ ಆಗಲಿಲ್ಲ.


ಕೊರಿಂಥಿಯರಿಗೆ ೨ ೭:೧೩
ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.


ಕೊರಿಂಥಿಯರಿಗೆ ೨ ೭:೧೬
ನಿಮ್ಮ ಮೇಲೆ ನನಗೆ ಪೂರ್ಣಭರವಸೆ ಇದೆ. ಇದೇ ನನ್ನ ಸಂತೋಷ.


ಕೊರಿಂಥಿಯರಿಗೆ ೨ ೧೨:೧೫
ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?


ಕೊರಿಂಥಿಯರಿಗೆ ೨ ೧೩:೯
ನೀವು ನಿಜವಾಗಿ ಬಲಾಢ್ಯರಾಗಿದ್ದರೆ ನಾವು ಬಲಹೀನರಾಗಿದ್ದರೂ ನಮಗೆ ಸಂತೋಷವೇ. ನೀವು ಕ್ರೈಸ್ತವಿಶ್ವಾಸದಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಪ್ರಾರ್ಥನೆಯ ಉದ್ದೇಶ.


ಕೊರಿಂಥಿಯರಿಗೆ ೨ ೧೩:೧೧
ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.


ಗಲಾತ್ಯರಿಗೆ ೪:೨೭
“ಸಂತಾನವಿಲ್ಲದ ಸ್ತ್ರೀಯೇ, ಸಂತೋಷಿಸು ಪ್ರಸವವೇದನೆಯನರಿಯದವಳೇ, ಹರ್ಷೋದ್ಗಾರಮಾಡು ಗಂಡನುಳ್ಳವಳಿಗಿಂತ ಕೈಬಿಟ್ಟವಳ ಸಂತಾನ ಹೆಚ್ಚು.” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ.


ಫಿಲಿಪಿಯರಿಗೆ ೧:೧೮
ಅವರ ಉದ್ದೇಶ ಏನೇ ಆಗಿರಲಿ, ನನಗದು ಮುಖ್ಯವಲ್ಲ. ಕ್ರಿಸ್ತಯೇಸುವನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ.


ಫಿಲಿಪಿಯರಿಗೆ ೧:೧೯
ಹೌದು, ನನಗದು ತುಂಬಾ ಸಂತೋಷದ ವಿಷಯ. ನಿಮ್ಮ ಪ್ರಾರ್ಥನಾ ಫಲದಿಂದಲೂ ಯೇಸುಕ್ರಿಸ್ತರು ಕೊಡುವ ಆತ್ಮದ ನೆರವಿನಿಂದಲೂ ನನಗೆ ಬಿಡುಗಡೆ ಖಚಿತವೆಂದು ಬಲ್ಲೆ.


ಫಿಲಿಪಿಯರಿಗೆ ೨:೨
ನಿಮ್ಮೆಲ್ಲರಲ್ಲಿ ಒಂದೇ ಮನಸ್ಸು, ಒಂದೇ ಪ್ರೀತಿ ಇರಲಿ. ನಿಮ್ಮ ಗುರಿ ಧ್ಯೇಯಗಳು ಒಂದೇ ಆಗಿರಲಿ. ಆಗ ನನ್ನ ಸಂತೋಷವು ಸಂಪೂರ್ಣಗೊಳ್ಳುವುದು.


ಫಿಲಿಪಿಯರಿಗೆ ೨:೧೭
ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.


ಫಿಲಿಪಿಯರಿಗೆ ೨:೧೮
ಅದೇ ರೀತಿ ನೀವು ಸಹ ನನ್ನೊಡನೆ ಸಂತೋಷದಿಂದ ಸಂಭ್ರಮಿಸಿರಿ.


ಫಿಲಿಪಿಯರಿಗೆ ೪:೧೦
ನನ್ನ ಬಗ್ಗೆ ನಿಮಗಿರುವ ಮಮತೆಯು ಇಷ್ಟು ದಿನಗಳಾದ ಮೇಲೆ ಪುನಃ ಅರಳಿದ್ದಕ್ಕೆ ಪ್ರಭುವಿನಲ್ಲಿ ನಾನು ಬಹಳ ಸಂತೋಷಪಡುತ್ತೇನೆ. ಇಂಥ ಮಮತೆ ನಿಮಗೆ ಮೊದಲಿನಿಂದ ಇತ್ತಾದರೂ ಅದನ್ನು ವ್ಯಕ್ತಪಡಿಲು ನಿಮಗೆ ಸೂಕ್ತ ಸಂದರ್ಭ ಒದಗಿರಲಿಲ್ಲ.


ಕೊಲೊಸ್ಸೆಯರಿಗೆ ೧:೨೪
ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.


ತಿಮೊಥೇಯನಿಗ ೧ ೬:೧೭
ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಹಿಬ್ರಿಯರಿಗೆ ೧೦:೩೪
ಸೆರೆಯಾಳುಗಳಿಗೆ ಸಂತಾಪ ತೋರಿಸಿದಿರಿ, ನಿಮ್ಮ ಸೊತ್ತನ್ನು ಸುಲಿಗೆಮಾಡಿದಾಗ ಸಂತೋಷದಿಂದ ಬಿಟ್ಟುಕೊಟ್ಟಿರಿ. ಏಕೆಂದರೆ, ಇದಕ್ಕೂ ಶ್ರೇಷ್ಠವಾದ ಹಾಗೂ ಶಾಶ್ವತವಾದ ಸೊತ್ತು ನಿಮಗಿದೆಯೆಂದು ಚೆನ್ನಾಗಿ ಅರಿತಿದ್ದಿರಿ.


ಹಿಬ್ರಿಯರಿಗೆ ೧೧:೧೩
ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು.


ಹಿಬ್ರಿಯರಿಗೆ ೧೩:೧೭
ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.


ಯಕೋಬನು ೧:೨
ನನ್ನ ಪ್ರಿಯ ಸಹೋದರರೇ, ನಿಮಗೆ ವಿವಿಧ ಸಂಕಟ ಶೋಧನೆಗಳು ಬಂದೊದಗಿದಾಗ ಅವುಗಳನ್ನು ಸಂತೋಷದಿಂದ ಸಹಿಸಿಕೊಳ್ಳಿ.


ಯಕೋಬನು ೪:೯
ನಿಮ್ಮ ಹೀನಸ್ಥಿತಿಗಾಗಿ ವ್ಯಥೆಪಡಿರಿ. ಕಣ್ಣೀರಿಟ್ಟು ಗೋಳಾಡಿರಿ. ನಗುವುದನ್ನು ಬಿಟ್ಟು ದುಃಖಿಸಿರಿ; ಸಂತೋಷವನ್ನು ಬಿಟ್ಟು ಶೋಕಿಸಿರಿ.


ಯಕೋಬನು ೫:೧೩
ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ.


ಪೇತ್ರನು ೧ ೪:೧೩
ಬದಲಿಗೆ, ಯೇಸುಕ್ರಿಸ್ತರ ಬಾಧೆಗಳಲ್ಲಿ ಪಾಲುಹೊಂದಿರುತ್ತೀರೆಂದು ಸಂತೋಷಪಡಿ; ಅವರ ಮಹಿಮೆಯು ಪ್ರತ್ಯಕ್ಷವಾಗುವಾಗ ಪೂರ್ಣ ಹರ್ಷಾನಂದವನ್ನು ಪಡೆಯುವಿರಿ.


ಯೊವಾನ್ನನು ೨ ೧:೧೨
ನಾನು ನಿಮಗೆ ತಿಳಿಸಬೇಕಾದ ವಿಷಯಗಳು ಬಹಳಷ್ಟಿವೆ. ಆದರೆ ಅವುಗಳನ್ನು ಕಾಗದಪತ್ರಗಳ ಮೂಲಕ ತಿಳಿಸಲು ನನಗೆ ಇಷ್ಟವಿಲ್ಲ. ನಾನೇ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ಮಾತನಾಡುವ ನಿರೀಕ್ಷೆ ಇದೆ. ಹೀಗೆ ಮುಖಾಮುಖಿಯಾಗಿ ಮಾತನಾಡುವುದರಿಂದ ಪೂರ್ಣಸಂತೋಷವೂ ಆಗುತ್ತದೆ.


ಪ್ರಕಟನೆ ೧೧:೧೦
ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.


ಪ್ರಕಟನೆ ೧೯:೭
ಬಂದಿದೆ ಯಜ್ಞದ ಕುರಿಮರಿಯ ಶುಭ ವಿವಾಹ ಸಿದ್ಧಳಿಹಳು ಮದುಮಗಳು ಶೃಂಗಾರ ಸಹಿತ ಸಂತೋಷಿಸೋಣ, ಸಂಭ್ರಮಿಸೋಣ! ಆತನ ಮಹಿಮೆಯನು ಕೀರ್ತಿಸೋಣ;


Kannada Bible (KNCL) 2016
No Data