ಮತ್ತಾಯನು ೩:೨ |
“ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮೀಪಿಸಿತು,” ಎಂದು ಸಾರಿ ಹೇಳುತ್ತಾ ಬಂದನು.
|
ಮತ್ತಾಯನು ೪:೧೭ |
ಅಂದಿನಿಂದ ಯೇಸು, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು,” ಎಂಬ ಸಂದೇಶವನ್ನು ಬೋಧಿಸತೊಡಗಿದರು.
|
ಮತ್ತಾಯನು ೫:೩ |
“ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.
|
ಮತ್ತಾಯನು ೫:೧೦ |
ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.”
|
ಮತ್ತಾಯನು ೫:೧೨ |
ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು, ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.”
|
ಮತ್ತಾಯನು ೫:೧೬ |
ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”
|
ಮತ್ತಾಯನು ೫:೧೯ |
ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು.
|
ಮತ್ತಾಯನು ೫:೨೦ |
ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ.”
|
ಮತ್ತಾಯನು ೫:೪೫ |
ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.
|
ಮತ್ತಾಯನು ೫:೪೮ |
ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”
|
ಮತ್ತಾಯನು ೬:೧ |
“ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು.
|
ಮತ್ತಾಯನು ೬:೧೦ |
‘ಸ್ವರ್ಗ ದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ; ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ.
|
ಮತ್ತಾಯನು ೬:೧೪ |
“ಜನರ ತಪ್ಪುಗಳನ್ನು ನೀವು ಕ್ಷಮಿಸಿದರೆ ಸ್ವರ್ಗದಲ್ಲಿರುವ ನಿಮ್ಮ ತಂದೆ ನಿಮ್ಮನ್ನು ಕ್ಷಮಿಸುವರು.
|
ಮತ್ತಾಯನು ೬:೨೦ |
ನಿಮ್ಮ ಆಸ್ತಿಯನ್ನು ಸ್ವರ್ಗದಲ್ಲಿ ಕೂಡಿಸಿಡಿ. ಅಲ್ಲಿ ತುಕ್ಕು ಹಿಡಿಯದು. ನುಸಿ ಹೊಡೆಯದು, ಕಳ್ಳರು ಕನ್ನ ಕೊರೆದು ಕದಿಯರು.
|
ಮತ್ತಾಯನು ೬:೨೬ |
ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ಗಮನಿಸಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದೂ ಇಲ್ಲ. ಆದರೂ ಸ್ವರ್ಗದಲ್ಲಿರುವ ನಿಮ್ಮ ತಂದೆ ಅವುಗಳನ್ನು ಪೋಷಿಸುತ್ತಾರೆ. ಹಕ್ಕಿಗಳಿಗಿಂತ ನೀವು ಎಷ್ಟೋ ಮೇಲಾದವರಲ್ಲವೆ?
|
ಮತ್ತಾಯನು ೬:೩೨ |
ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ ಎಂದು ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.
|
ಮತ್ತಾಯನು ೭:೧೧ |
ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅದಕ್ಕಿಂತಲೂ ಎಷ್ಟೋ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಒಳ್ಳೆಯ ಕೊಡುಗೆಗಳನ್ನು ಕೊಡಬಲ್ಲರು!”
|
ಮತ್ತಾಯನು ೭:೨೧ |
“ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು.
|
ಮತ್ತಾಯನು ೮:೧೧ |
ಪೂರ್ವ. ಪಶ್ಚಿಮ ದಿಕ್ಕುಗಳಿಂದ ಅನೇಕ ಜನರು ಬಂದು ಅಬ್ರಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.
|
ಮತ್ತಾಯನು ೧೦:೭ |
ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆಮಾಡಿರಿ.
|
ಮತ್ತಾಯನು ೧೦:೩೨ |
“ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ.
|
ಮತ್ತಾಯನು ೧೦:೩೩ |
ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ.
|
ಮತ್ತಾಯನು ೧೧:೧೧ |
ಮಾನವನಾಗಿ ಜನಿಸಿದ್ದವರಲ್ಲಿ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಆದರೂ ಸ್ವರ್ಗಸಾಮ್ರಾಜ್ಯದಲ್ಲಿ ಕನಿಷ್ಠನಾದವನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ.
|
ಮತ್ತಾಯನು ೧೧:೧೨ |
ಯೊವಾನ್ನನು ತನ್ನ ಸಂದೇಶವನ್ನು ಸಾರಿದಂದಿನಿಂದ ಇಂದಿನವರೆಗೆ ಸ್ವರ್ಗಸಾಮ್ರಾಜ್ಯವು ನೂಕುನುಗ್ಗಲಿಗೆ ಗುರಿಯಾಗಿದೆ. ಬಲಪ್ರಯೋಗ ಮಾಡುವವರು ಅದನ್ನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.
|
ಮತ್ತಾಯನು ೧೧:೨೩ |
ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು.
|
ಮತ್ತಾಯನು ೧೨:೫೦ |
ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು.
|
ಮತ್ತಾಯನು ೧೩:೧೧ |
ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.
|
ಮತ್ತಾಯನು ೧೩:೨೪ |
ಯೇಸುಸ್ವಾಮಿ ಜನರಿಗೆ ಮತ್ತೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ.
|
ಮತ್ತಾಯನು ೧೩:೩೧ |
ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡು ಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ.
|
ಮತ್ತಾಯನು ೧೩:೩೩ |
ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.”
|
ಮತ್ತಾಯನು ೧೩:೪೪ |
“ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ.
|
ಮತ್ತಾಯನು ೧೩:೪೫ |
“ಸ್ವರ್ಗಸಾಮ್ರಾಜ್ಯವನ್ನು ಉತ್ತಮವಾದ ಮುತ್ತುರತ್ನಗಳನ್ನು ಹುಡುಕಿಕೊಂಡು ಹೋಗುವ ವರ್ತಕನಿಗೂ ಹೋಲಿಸಬಹುದು.
|
ಮತ್ತಾಯನು ೧೩:೪೭ |
“ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ.
|
ಮತ್ತಾಯನು ೧೩:೫೨ |
ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.
|
ಮತ್ತಾಯನು ೧೪:೧೯ |
ಬಳಿಕ ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿನೋಡಿ, ದೇವರಿಗೆ ಸ್ತೋತ್ರಸಲ್ಲಿಸಿದರು. ತರುವಾಯ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನರಿಗೆ ಹಂಚಿದರು.
|
ಮತ್ತಾಯನು ೧೬:೧೭ |
ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.
|
ಮತ್ತಾಯನು ೧೬:೧೯ |
ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತಿಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು,”
|
ಮತ್ತಾಯನು ೧೮:೧ |
ಆ ಸಮಯದಲ್ಲಿ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರು?” ಎಂದು ಕೇಳಿದರು.
|
ಮತ್ತಾಯನು ೧೮:೩ |
“ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ.
|
ಮತ್ತಾಯನು ೧೮:೪ |
ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು.
|
ಮತ್ತಾಯನು ೧೮:೧೧ |
ಸ್ವರ್ಗದಲ್ಲಿನ ಇವರ ದೂತರು ಸದಾಕಾಲ ನನ್ನ ಸ್ವರ್ಗೀಯ ಪಿತನ ಸಮ್ಮುಖದಲ್ಲಿ ಇದ್ದಾರೆ; ಇದು ನಿಮಗೆ ತಿಳಿದಿರಲಿ.
|
ಮತ್ತಾಯನು ೧೮:೧೪ |
ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತ.
|
ಮತ್ತಾಯನು ೧೮:೧೯ |
“ಇನ್ನೂ ನಾನು ನಿಮಗೆ ಹೇಳುವುದು ಏನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ.
|
ಮತ್ತಾಯನು ೧೮:೨೩ |
ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, “ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ.
|
ಮತ್ತಾಯನು ೧೮:೩೫ |
“ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು.
|
ಮತ್ತಾಯನು ೧೯:೧೨ |
ತಾಯಿಯ ಉದರದಿಂದಲೇ ನಪುಂಸಕರಾಗಿ ಹುಟ್ಟಿದವರಿದ್ದಾರೆ; ಜನರಿಂದ ನಪುಂಸಕರಾದವರು ಕೂಡ ಇದ್ದಾರೆ; ಸ್ವರ್ಗಸಾಮ್ರಾಜ್ಯದ ನಿಮಿತ್ತ ಅವಿವಾಹಿತರಾಗಿ ಇರುವವರೂ ಇದ್ದಾರೆ; ಇದನ್ನು ಅಂಗೀಕರಿಸಬಲ್ಲವನು ಅಂಗೀಕರಿಸಲಿ,” ಎಂದರು.
|
ಮತ್ತಾಯನು ೧೯:೧೪ |
ಆಗ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ, ಸ್ವರ್ಗಸಾಮ್ರಾಜ್ಯ ಇಂಥವರದೇ,” ಎಂದರು.
|
ಮತ್ತಾಯನು ೧೯:೨೧ |
ಆಗ ಯೇಸು, “ನೀನು ಸಂಪೂರ್ಣನಾಗಬೇಕು ಎಂದಿದ್ದರೆ ಹೋಗು, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.
|
ಮತ್ತಾಯನು ೧೯:೨೩ |
ಆಗ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವಂತನು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸುವುದು ಕಷ್ಟವೆಂದು ನಿಮಗೆ ಒತ್ತಿ ಹೇಳುತ್ತೇನೆ.
|
ಮತ್ತಾಯನು ೨೦:೧ |
“ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ.
|
ಮತ್ತಾಯನು ೨೨:೧ |
ಯೇಸುಸ್ವಾಮಿ ಮತ್ತೆ ಅವರೊಡನೆ ಸಾಮತಿಗಳಲ್ಲೇ ಮಾತನಾಡಿದರು: “ಸ್ವರ್ಗಸಾಮ್ರಾಜ್ಯ ಇಂತಿದೆ;
|
ಮತ್ತಾಯನು ೨೨:೩೦ |
ಪುನರುತ್ಥಾನ ಹೊಂದಿದ ಮೇಲೆ ಜನರು ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಸ್ವರ್ಗದ ದೇವದೂತರಂತೆ ಅವರು ಇರುತ್ತಾರೆ.
|
ಮತ್ತಾಯನು ೨೩:೯ |
ಇಹದಲ್ಲಿ ನೀವು ಯಾರನ್ನೂ ‘ಪಿತನೇ’ ಎಂದು ಸಂಬೋಧಿಸಬೇಡಿ. ಏಕೆಂದರೆ ನಿಮ್ಮ ಪಿತ ಒಬ್ಬರೇ. ಅವರು ಸ್ವರ್ಗದಲ್ಲಿದ್ದಾರೆ.
|
ಮತ್ತಾಯನು ೨೩:೧೩ |
“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.
|
ಮತ್ತಾಯನು ೨೩:೨೨ |
ಹಾಗೆಯೇ, ಸ್ವರ್ಗದ ಮೇಲೆ ಆಣೆಯಿಡುವವನು ದೇವರ ಸಿಂಹಾಸನದ ಮೇಲೂ ಅದರಲ್ಲಿ ಆಸೀನರಾಗಿರುವವರ ಮೇಲೂ ಆಣೆಯಿಡುತ್ತಾನೆ.
|
ಮತ್ತಾಯನು ೨೪:೩೬ |
“ಆ ದಿನವಾಗಲಿ, ಆ ಗಳಿಗೆಯಾಗಲಿ ಯಾವಾಗ ಬರುವುದೆಂದು ದೇವರೇ ಹೊರತು ಮತ್ತಾರೂ ಅರಿಯರು. ಸ್ವರ್ಗದ ದೂತರೇ ಆಗಲಿ, ಪುತ್ರನೇ ಆಗಲಿ ಅದನ್ನು ಅರಿಯರು.
|
ಮತ್ತಾಯನು ೨೫:೧ |
“ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತುಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು.
|
ಮತ್ತಾಯನು ೨೫:೧೪ |
“ಅದೂ ಅಲ್ಲದೆ ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಇಂತಿರುವುದು: ಒಬ್ಬಾತ ಪ್ರವಾಸ ಹೊರಡಲಿದ್ದ. ತನ್ನ ಸೇವಕರನ್ನು ಕರೆದು ಅವರ ವಶಕ್ಕೆ ತನ್ನ ಆಸ್ತಿಯನ್ನು ಒಪ್ಪಿಸಿದ.
|
ಮತ್ತಾಯನು ೨೮:೨ |
ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು.
|
ಮತ್ತಾಯನು ೨೮:೧೮ |
ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.
|
ಮಾರ್ಕನು ೬:೪೧ |
ಯೇಸು ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರ ಸಲ್ಲಿಸಿದರು. ತರುವಾಯ ಆ ರೊಟ್ಟಿಗಳನ್ನು ಮುರಿದು ಜನರಿಗೆ ಬಡಿಸುವಂತೆ ಅವನ್ನು ಶಿಷ್ಯರಿಗೆ ಕೊಟ್ಟರು. ಅಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚುವಂತೆ ಮಾಡಿದರು.
|
ಮಾರ್ಕನು ೭:೩೪ |
ತಮ್ಮ ಉಗುಳಿನಿಂದ ಅವನ ನಾಲಗೆಯನ್ನು ಮುಟ್ಟಿದರು. ಬಳಿಕ ಸ್ವರ್ಗದತ್ತ ಕಣ್ಣೆತ್ತಿನೋಡಿ, ದೀರ್ಘವಾಗಿ ಉಸಿರೆಳೆದು, ‘ಎಪ್ಫಥಾ’ ಎಂದರೆ ‘ತೆರೆಯಲಿ’ ಎಂದರು.
|
ಮಾರ್ಕನು ೧೦:೨೧ |
ಆಗ ಯೇಸು ಅವನನ್ನು ಮಮತೆಯಿಂದ ಈಕ್ಷಿಸಿ, “ನೀನು ಮಾಡಬೇಕಾದ ಕಾರ್ಯವೊಂದು ಬಾಕಿಯಿದೆ. ಹೋಗು, ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.
|
ಮಾರ್ಕನು ೧೧:೨೬ |
ಆಗ ಸ್ವರ್ಗದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸಿಬಿಡುವರು.\
|
ಮಾರ್ಕನು ೧೨:೨೫ |
ಸತ್ತವರು ಪುನರುತ್ಥಾನವಾದ ಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಅವರು ಸ್ವರ್ಗದ ದೇವದೂತರಂತೆ ಇರುತ್ತಾರೆ.
|
ಮಾರ್ಕನು ೧೩:೩೨ |
“ಆ ದಿನವಾಗಲಿ, ಆ ಗಳಿಗೆಯಾಗಲಿ, ಯಾವಾಗ ಬರುವುದೆಂದು ಪಿತನ ಹೊರತು ಮತ್ತಾರೂ ಅರಿಯರು. ಸ್ವರ್ಗದಲ್ಲಿರುವ ದೂತರೇ ಆಗಲಿ, ಪುತ್ರನೇ ಆಗಲಿ, ಅದನ್ನು ಅರಿಯರು.
|
ಮಾರ್ಕನು ೧೬:೧೯ |
ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.
|
ಲೂಕನು ೨:೧೩ |
ತಕ್ಷಣವೇ ಆ ದೂತನ ಸಂಗಡ ಸ್ವರ್ಗದ ದೂತಪರಿವಾರವೊಂದು ಕಾಣಿಸಿಕೊಂಡಿತು.
|
ಲೂಕನು ೨:೧೫ |
ದೇವದೂತರು ಸ್ವರ್ಗಕ್ಕೆ ಹಿಂದಿರುಗಿದ ಮೇಲೆ ಕುರುಬರು, ‘ಬನ್ನಿ, ಸರ್ವೇಶ್ವರ ನಮಗೆ ತಿಳಿಸಿದ ಘಟನೆಯನ್ನು ನೋಡಲು ಈಗಲೇ ಬೆತ್ಲೆಹೇಮಿಗೆ ಹೋಗೋಣ,’ ಎಂದು ಒಬ್ಬರಿಗೆ ಒಬ್ಬರು ಹೇಳಿಕೊಂಡರು.
|
ಲೂಕನು ೬:೨೨ |
ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು.
|
ಲೂಕನು ೯:೧೬ |
ಅನಂತರ ಯೇಸು ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರಸಲ್ಲಿಸಿದರು. ತರುವಾಯ ಅವುಗಳನ್ನು ಮುರಿದು ಜನಸಮೂಹಕ್ಕೆ ಬಡಿಸುವಂತೆ ಶಿಷ್ಯರಿಗೆ ಕೊಟ್ಟರು.
|
ಲೂಕನು ೯:೫೧ |
ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖವಾಗಿ ಹೊರಡಲು ನಿರ್ಧರಿಸಿದರು.
|
ಲೂಕನು ೧೦:೧೫ |
ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೇ ಇಳಿಯುವೆ,” ಎಂದರು ಯೇಸುಸ್ವಾಮಿ.
|
ಲೂಕನು ೧೦:೨೦ |
ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.
|
ಲೂಕನು ೧೦:೨೧ |
ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.
|
ಲೂಕನು ೧೧:೧೩ |
ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”
|
ಲೂಕನು ೧೧:೧೬ |
ಸ್ವರ್ಗದಿಂದ ಒಂದು ಅದ್ಭುತಕಾರ್ಯವನ್ನು ಮಾಡಿತೋರಿಸುವಂತೆ ಕೇಳಿದರು.
|
ಲೂಕನು ೧೨:೩೩ |
ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ; ನುಸಿಹಿಡಿದು ನಾಶವಾಗುವಂತಿಲ್ಲ.
|
ಲೂಕನು ೧೫:೭ |
“ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.
|
ಲೂಕನು ೧೬:೨೨ |
“ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು.
|
ಲೂಕನು ೧೮:೨೨ |
ಇದನ್ನು ಕೇಳಿದ ಯೇಸು, “ನೀನು ಮಾಡಬೇಕಾದ ಕಾರ್ಯ ಇನ್ನೂ ಒಂದು ಉಳಿದಿದೆ; ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.
|
ಲೂಕನು ೧೯:೩೮ |
“ಸರ್ವೇಶ್ವರನ ನಾಮದಲಿ ಬರುವ ಅರಸನಿಗೆ ಜಯಜಯವಾಗಲಿ! ಶಾಂತಿ ಸ್ವರ್ಗದಲಿ, ಮಹಿಮೆ ಮಹೋನ್ನತದಲಿ!” ಎಂದು ಜಯಘೋಷ ಮಾಡುತ್ತಿದ್ದರು.
|
ಲೂಕನು ೨೨:೪೩ |
ಆಗ ಸ್ವರ್ಗದಿಂದ ದೂತನೊಬ್ಬನು ಯೇಸುವಿಗೆ ಪ್ರತ್ಯಕ್ಷವಾಗಿ ಅವರನ್ನು ಸಶಕ್ತರನ್ನಾಗಿ ಮಾಡಿದನು.
|
ಲೂಕನು ೨೪:೪೯ |
ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.
|
ಲೂಕನು ೨೪:೫೧ |
ಆಶೀರ್ವದಿಸುತ್ತಿದ್ದ ಹಾಗೆಯೇ ಅವರನ್ನು ಬೀಳ್ಕೊಟ್ಟರು. (ಮತ್ತು ಸ್ವರ್ಗಕ್ಕೆ ಒಯ್ಯಲ್ಪಟ್ಟರು).
|
ಯೊವಾನ್ನನು ೧:೩೨ |
ಯೊವಾನ್ನನು ತನ್ನ ಸಾಕ್ಷ್ಯವನ್ನು ಮುಂದುವರಿಸುತ್ತಾ, “ಪಾರಿವಾಳದ ರೂಪದಲ್ಲಿ ಪವಿತ್ರಾತ್ಮ ಸ್ವರ್ಗದಿಂದ ಇಳಿದುಬಂದು ಅವರ ಮೇಲೆ ನೆಲಸುವುದನ್ನು ನಾನು ನೋಡಿದೆನು.
|
ಯೊವಾನ್ನನು ೧:೫೧ |
ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.
|
ಯೊವಾನ್ನನು ೩:೧೨ |
ಭೂಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಾಗಲೇ ನಿಮಗೆ ವಿಶ್ವಾಸವಿಲ್ಲವೆಂದ ಮೇಲೆ, ಸ್ವರ್ಗಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಲ್ಲಿ ನೀವು ವಿಶ್ವಾಸಿಸುವುದು ಉಂಟೆ?
|
ಯೊವಾನ್ನನು ೩:೧೩ |
ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.
|
ಯೊವಾನ್ನನು ೩:೩೧ |
ಮೇಲಿಂದ ಬಂದವನೇ ಎಲ್ಲರಿಗಿಂತ ಮೇಲಾದವನು. ಇಹಲೋಕದಿಂದ ಬಂದವನು ಆದರೋ ಈ ಲೋಕಕ್ಕೆ ಸೇರಿದವನು; ಅವನು ಲೌಕಿಕವಾದುದನ್ನೇ ಹೇಳುವವನು. ಸ್ವರ್ಗದಿಂದ ಬಂದವನಾದರೋ ಸರ್ವರಿಗೂ ಶ್ರೇಷ್ಠನು.
|
ಯೊವಾನ್ನನು ೬:೩೧ |
ನಮ್ಮ ಪೂರ್ವಜರಿಗೆ ಮರುಭೂಮಿಯಲ್ಲಿ ತಿನ್ನಲು ‘ಮನ್ನಾ’ ಸಿಕ್ಕಿತು. ತಿನ್ನಲು ಅವರಿಗೆ ಸ್ವರ್ಗದಿಂದ ರೊಟ್ಟಿ ದೊರಕಿತು, ಎಂದು ಪವಿತ್ರಗ್ರಂಥವೇ ಹೇಳುತ್ತದೆಯಲ್ಲವೇ?’ ಎಂದರು.
|
ಯೊವಾನ್ನನು ೬:೩೨ |
ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ; ಸ್ವರ್ಗದಿಂದ ನಿಮಗೆ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ; ನಿಮಗೆ ಸ್ವರ್ಗದಿಂದ ನಿಜವಾದ ರೊಟ್ಟಿಯನ್ನು ಕೊಡುವವರು ನನ್ನ ಪಿತನೇ.
|
ಯೊವಾನ್ನನು ೬:೩೩ |
ಏಕೆಂದರೆ, ಸ್ವರ್ಗದಿಂದ ಇಳಿದುಬಂದು ಲೋಕಕ್ಕೆ ಸಜ್ಜೀವವನ್ನೀಯುವಾತನೇ ದೇವರು ಕೊಡುವ ರೊಟ್ಟಿ,” ಎಂದು ಹೇಳಿದರು.
|
ಯೊವಾನ್ನನು ೬:೩೮ |
ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.
|
ಯೊವಾನ್ನನು ೬:೪೧ |
“ಸ್ವರ್ಗದಿಂದ ಇಳಿದುಬಂದ ರೊಟ್ಟಿ ನಾನೇ” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಗೊಣಗತೊಡಗಿದರು.
|
ಯೊವಾನ್ನನು ೬:೪೨ |
ಅವರು, “ಈತನು ಜೋಸೆಫನ ಮಗನಾದ ಯೇಸು ಅಲ್ಲವೆ? ಈತನ ತಂದೆ ತಾಯಿ ನಮಗೆ ಗೊತ್ತಿಲ್ಲವೆ? ಅಂದಮೇಲೆ, ‘ನಾನು ಸ್ವರ್ಗದಿಂದ ಬಂದಿದ್ದೇನೆ,’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.
|
ಯೊವಾನ್ನನು ೬:೫೦ |
ಸ್ವರ್ಗದಿಂದ ಇಳಿದುಬಂದ ರೊಟ್ಟಿಯಾದರೋ ಹಾಗಲ್ಲ, ಇದನ್ನು ತಿನ್ನುವ ಯಾರಿಗೂ ಸಾವೆಂಬುದು ಇಲ್ಲ.
|
ಯೊವಾನ್ನನು ೬:೫೧ |
ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.
|
ಯೊವಾನ್ನನು ೬:೫೮ |
ಸ್ವರ್ಗದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಪೂರ್ವಜರು ‘ಮನ್ನಾ’ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ. ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು,” ಎಂದು ಹೇಳಿದರು.
|
ಯೊವಾನ್ನನು ೧೨:೨೮ |
‘ಪಿತನೇ, ನಿಮ್ಮ ನಾಮ ಮಹಿಮೆಯನ್ನು ಬೆಳಗಿಸಿ’ “ ಎಂದು ನುಡಿದರು. ಆಗ, “ಹೌದು, ಆ ಮಹಿಮೆಯನ್ನು ಬೆಳಗಿಸಿದ್ದೇನೆ, ಪುನಃ ಬೆಳಗಿಸುತ್ತೇನೆ,” ಎಂಬ ಸ್ವರ್ಗೀಯ ವಾಣಿ ಕೇಳಿಸಿತು.
|
ಪ್ರೇಷಿತರ ೧:೧ |
ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು.
|
ಪ್ರೇಷಿತರ ೧:೯ |
ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು.
|
ಪ್ರೇಷಿತರ ೧:೧೧ |
“ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.
|
ಪ್ರೇಷಿತರ ೧:೨೨ |
ಅಂದರೆ, ಸ್ನಾನಿಕ ಯೊವಾನ್ನನು ಸ್ನಾನದೀಕ್ಷೆಯನ್ನು ಕುರಿತು ಬೋಧಿಸಿದ ದಿನದಿಂದ ಯೇಸುವಿನ ಸ್ವರ್ಗಾರೋಹಣದ ದಿನದವರೆಗೂ ನಮ್ಮ ಸಂಗಡ ಇದ್ದವನಾಗಿರಬೇಕು.”
|
ಪ್ರೇಷಿತರ ೨:೩೪ |
ಸ್ವರ್ಗಾರೋಹಣ ಆದವನು ದಾವೀದನಲ್ಲ; ಆದರೂ ಆತನು ಹೀಗೆಂದಿದ್ದಾನೆ: ನಿನ್ನ ಶತ್ರುಗಳನ್ನು ನಾನು ನಿನ್ನ ಪಾದಪೀಠವಾಗಿ ಮಾಡುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ‘ಪ್ರಭು’ವಿಗೆ ಸರ್ವೇಶ್ವರ ಹೇಳಿದ್ದಾರೆ.
|
ಪ್ರೇಷಿತರ ೩:೨೧ |
ಸಮಸ್ತವನ್ನೂ ಪುನರ್ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.
|
ಪ್ರೇಷಿತರ ೭:೪೯ |
ಸ್ವರ್ಗವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಇಂತಿರಲು, ನನ್ನಂಥವನಿಗೆ ಎಂಥ ಆಲಯವನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವಾದರೂ ಯಾವುದು?
|
ಪ್ರೇಷಿತರ ೭:೫೫ |
ಆದರೆ ಸ್ತೇಫನನು ಪವಿತ್ರಾತ್ಮಭರಿತನಾಗಿ ಸ್ವರ್ಗದತ್ತ ಕಣ್ಣೆತ್ತಿನೋಡಿ ದೇವರ ಮಹಿಮೆಯನ್ನೂ ಅವರ ಬಲಪಾರ್ಶ್ವದಲ್ಲಿ ನಿಂತಿರುವ ಯೇಸುವನ್ನೂ ಕಂಡು,
|
ಪ್ರೇಷಿತರ ೧೦:೧೧ |
ಸ್ವರ್ಗದ ಬಾಗಿಲು ತೆರೆಯಿತು. ದೊಡ್ಡ ದುಪ್ಪಟಿಯಂತಹ ವಸ್ತುವೊಂದು ಇಳಿದು ಬರುತ್ತಿತ್ತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಭೂಮಿಯ ಮೇಲೆ ಅದನ್ನು ಇಳಿಯಬಿಡಲಾಗಿತ್ತು.
|
ಪ್ರೇಷಿತರ ೧೦:೧೬ |
ಹೀಗೆ ಮೂರು ಸಾರಿ ನಡೆದ ಮೇಲೆ ಆ ವಸ್ತುವನ್ನು ಸ್ವರ್ಗಕ್ಕೆ ಎತ್ತಿಕೊಳ್ಳಲಾಯಿತು.
|
ಪ್ರೇಷಿತರ ೧೧:೫ |
“ಜೊಪ್ಪ ಪಟ್ಟಣದಲ್ಲಿ ನಾನು ಧ್ಯಾನಪರವಶನಾಗಿದ್ದಾಗ ದರ್ಶನವೊಂದನ್ನು ಕಂಡೆ. ಸ್ವರ್ಗದಿಂದ ದೊಡ್ಡ ದುಪ್ಪಟಿಯಂಥ ವಸ್ತು ಒಂದು ಕೆಳಕ್ಕೆ ಇಳಿಯಿತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಕೆಳಕ್ಕೆ ಇಳಿಬಿಡಲಾಗಿತ್ತು. ಅದು ಬಂದು ನನ್ನ ಪಕ್ಕದಲ್ಲೇ ನಿಂತಿತು.
|
ಪ್ರೇಷಿತರ ೧೧:೯ |
ಮತ್ತೊಮ್ಮೆ ಆ ವಾಣಿ ಸ್ವರ್ಗಲೋಕದಿಂದ, ‘ದೇವರೇ ಶುದ್ಧಿಕರಿಸಿರುವ ಏನನ್ನೂ ನೀನು ಅಶುದ್ಧವೆನ್ನಬೇಡ,’ ಎಂದು ಉತ್ತರಿಸಿತು.
|
ಪ್ರೇಷಿತರ ೧೧:೧೦ |
ಹೀಗೆ ಮೂರು ಬಾರಿ ನಡೆದ ಮೇಲೆ, ಅವೆಲ್ಲವನ್ನೂ ಒಟ್ಟಿಗೆ ಸ್ವರ್ಗಕ್ಕೆ ಮರಳಿ ಎಳೆದುಕೊಳ್ಳಲಾಯಿತು.
|
ಪ್ರೇಷಿತರ ೨೬:೧೯ |
“ಇಂತಿರಲು, ಅಗ್ರಿಪ್ಪ ರಾಜರೇ, ನನಗೆ ಲಭಿಸಿದ ಈ ಸ್ವರ್ಗೀಯ ದರ್ಶನಕ್ಕೆ ಅವಿಧೇಯನಾಗಿ ನಡೆಯಲು ನನ್ನಿಂದಾಗಲಿಲ್ಲ.
|
ರೋಮನರಿಗೆ ೧:೧೮ |
ಮಾನವರ ಎಲ್ಲಾ ಪಾಪಾಕ್ರಮಗಳ ಮೇಲೆ ದೇವರ ಕೋಪಾಗ್ನಿ ಸ್ವರ್ಗದಿಂದ ಎರಗುವುದೆಂದು ಪ್ರಕಟವಾಗುತ್ತಿದೆ. ಏಕೆಂದರೆ, ಅವರ ಅಕ್ರಮ ನಡತೆ ಸತ್ಯವನ್ನು ಅಡಗಿಸುತ್ತಿದೆ.
|
ರೋಮನರಿಗೆ ೧೦:೬ |
ಆದರೆ ವಿಶ್ವಾಸದ ಮೂಲಕ ದೊರಕುವ ಸತ್ಸಂಬಂಧದ ಬಗ್ಗೆ ಹೀಗೆ ಬರೆಯಲಾಗಿದೆ: “ಕ್ರಿಸ್ತಯೇಸುವನ್ನು ಕೆಳಕ್ಕೆ ಕರೆತರಲು ಸ್ವರ್ಗಕ್ಕೆ ಏರಿಹೋಗುವವರು ಯಾರು?” ಎಂದಾಗಲೀ,
|
ಕೊರಿಂಥಿಯರಿಗೆ ೧ ೧೫:೪೦ |
ಸ್ವರ್ಗೀಯ ಶರೀರಗಳೂ ಇವೆ. ಪೃಥ್ವಿಯ ಶರೀರಗಳೂ ಇವೆ. ಆದರೆ ಒಂದರ ಸ್ವರೂಪ ಮತ್ತೊಂದರಂತೆ ಇಲ್ಲ.
|
ಕೊರಿಂಥಿಯರಿಗೆ ೧ ೧೫:೪೭ |
ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು.
|
ಕೊರಿಂಥಿಯರಿಗೆ ೧ ೧೫:೪೮ |
ಮಣ್ಣಿಗೆ ಸಂಬಂಧಪಟ್ಟವರು ಮಣ್ಣಿನಿಂದ ಆದವನಂತೆಯೇ ಇರುತ್ತಾರೆ. ಸ್ವರ್ಗಕ್ಕೆ ಸಂಬಂಧಪಟ್ಟವರು ಸ್ವರ್ಗದಿಂದ ಬಂದವನಂತೆಯೇ ಇರುತ್ತಾರೆ.
|
ಕೊರಿಂಥಿಯರಿಗೆ ೧ ೧೫:೪೯ |
ಮಣ್ಣಿನಿಂದ ಆದವನ ರೂಪವನ್ನು ನಾವು ಧರಿಸಿರುವಂತೆಯೇ ಸ್ವರ್ಗದಿಂದ ಬಂದಾತನ ರೂಪವನ್ನು ಧರಿಸುತ್ತೇವೆ.
|
ಕೊರಿಂಥಿಯರಿಗೆ ೨ ೫:೧ |
ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.
|
ಕೊರಿಂಥಿಯರಿಗೆ ೨ ೫:೨ |
ಈ ಗುಡಾರದಲ್ಲಿರುವವರೆಗೆ ನಾವು ನರಳುತ್ತೇವೆ; ಸ್ವರ್ಗೀಯ ನಿವಾಸವನ್ನು ನಮ್ಮ ದೇಹದ ಮೇಲೆ ಎಂದಿಗೆ ನಾವು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.
|
ಕೊರಿಂಥಿಯರಿಗೆ ೨ ೧೨:೨ |
ಕ್ರೈಸ್ತನಾದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆ. ಅವನು ಹದಿನಾಲ್ಕು ವರ್ಷಗಳಿಗೆ ಹಿಂದೆ ಮಹೋನ್ನತ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ದೇಹಸಹಿತನಾಗಿಯೋ ದೇಹರಹಿತನಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು.
|
ಗಲಾತ್ಯರಿಗೆ ೧:೮ |
ನಾವು ನಿಮಗೆ ಬೋಧಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ನಾವೇ ಆಗಲಿ, ಸ್ವರ್ಗದಿಂದ ಇಳಿದ ದೇವದೂತನೇ ಆಗಲಿ, ಯಾರೇ ಆಗಲಿ ಬೋಧಿಸಿದರೆ ಅವನು ಶಾಪಗ್ರಸ್ತನಾಗಲಿ!
|
ಗಲಾತ್ಯರಿಗೆ ೪:೨೬ |
ಆದರೆ ಸ್ವರ್ಗೀಯ ಜೆರುಸಲೇಮ್ ದಾಸಿ ಅಲ್ಲ, ಸ್ವತಂತ್ರಳು, ಈಕೆಯೇ ನಮ್ಮ ತಾಯಿ.
|
ಎಫೆಸಿಯರಿಗೆ ೧:೩ |
ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.
|
ಎಫೆಸಿಯರಿಗೆ ೧:೧೪ |
ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ತ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.
|
ಎಫೆಸಿಯರಿಗೆ ೧:೨೦ |
ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೆಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು.
|
ಎಫೆಸಿಯರಿಗೆ ೨:೬ |
ಯೇಸುಕ್ರಿಸ್ತರೊಡನೆ ನಮ್ಮನ್ನೂ ಎಬ್ಬಿಸಿ, ಸ್ವರ್ಗಲೋಕದಲ್ಲಿ ಅವರ ಸನ್ನಿಧಿಯಲ್ಲಿಯೇ ಮಂಡಿಸುವ ಅವಕಾಶ ಮಾಡಿಕೊಟ್ಟರು.
|
ಎಫೆಸಿಯರಿಗೆ ೩:೧೫ |
ಸ್ವರ್ಗಲೋಕದಲ್ಲೂ ಭೂಲೋಕದಲ್ಲೂ ಪ್ರತಿ ಕುಟುಂಬವು ತನ್ನ ಹೆಸರನ್ನು ಪಡೆದಿರುವುದು ಅವರಿಂದಲೇ.
|
ಎಫೆಸಿಯರಿಗೆ ೬:೯ |
ಯಜಮಾನರೇ, ನೀವು ಕೂಡ ನಿಮ್ಮ ಸೇವಕರೊಡನೆ ಯೋಗ್ಯವಾದ ರೀತಿಯಲ್ಲಿ ವರ್ತಿಸಿರಿ. ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿ. ಸ್ವರ್ಗಲೋಕದಲ್ಲಿ ನಿಮಗೂ ಅವರಿಗೂ ಒಬ್ಬ ಯಜಮಾನ ಇರುತ್ತಾನೆ. ಆತ ಪಕ್ಷಪಾತಿಯಲ್ಲ ಎಂಬುದನ್ನು ಮರೆಯದಿರಿ.
|
ಫಿಲಿಪಿಯರಿಗೆ ೨:೧೦ |
ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು.
|
ಫಿಲಿಪಿಯರಿಗೆ ೩:೨೦ |
ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ.
|
ಕೊಲೊಸ್ಸೆಯರಿಗೆ ೧:೫ |
ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.
|
ಕೊಲೊಸ್ಸೆಯರಿಗೆ ೩:೧ |
ನೀವು ಯೇಸುಕ್ರಿಸ್ತರೊಂದಿಗೆ ಪುನರುತ್ಥಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನಕೊಡಿ. ಕ್ರಿಸ್ತಯೇಸು ಸ್ವರ್ಗದಲ್ಲಿ ದೇವರ ಬಲಗಡೆಯಲ್ಲಿ ಆಸೀನರಾಗಿದ್ದಾರೆ.
|
ಕೊಲೊಸ್ಸೆಯರಿಗೆ ೩:೨ |
ನೀವು ಕ್ರಿಸ್ತಯೇಸುವಿನೊಂದಿಗೆ ಮರಣ ಹೊಂದಿರುವುದರಿಂದ ಅವರೊಂದಿಗೆ ನಿಮ್ಮ ಜೀವ ದೇವರಲ್ಲಿ ಮರೆಯಾಗಿದೆ. ನಿಮ್ಮ ಮನಸ್ಸು ಪ್ರಾಪಂಚಿಕ ವಿಷಯಗಳ ಮೇಲೆ ಅಲ್ಲ, ಸ್ವರ್ಗೀಯ ವಿಷಯಗಳ ಮೇಲೆ ಕೇಂದ್ರೀಕೃತವಾಗಿರಲಿ.
|
ಕೊಲೊಸ್ಸೆಯರಿಗೆ ೩:೨೪ |
ಅದಕ್ಕೆ ಪ್ರತಿಫಲವಾಗಿ ಪ್ರಭುವಿನಿಂದ ನೀವು ಸ್ವರ್ಗೀಯ ಬಾಧ್ಯತೆಯನ್ನು ಪಡೆಯುವಿರೆಂದು ನಿಮಗೆ ತಿಳಿದೇ ಇದೆ.
|
ಕೊಲೊಸ್ಸೆಯರಿಗೆ ೪:೧ |
ಯಜಮಾನರೇ, ಸ್ವರ್ಗಲೋಕದಲ್ಲಿ ನಿಮಗೂ ಒಬ್ಬ ಒಡೆಯನಿದ್ದಾನೆಂಬುದನ್ನು ತಿಳಿದುಕೊಂಡು ನಿಮ್ಮ ಮನೆಯಾಳುಗಳನ್ನು ನ್ಯಾಯಬದ್ಧ ರೀತಿಯಲ್ಲಿ ನೋಡಿಕೊಳ್ಳಿ.
|
ಥೆಸೆಲೋನಿಯರಿಗೆ ೧ ೧:೧೦ |
ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.
|
ಥೆಸೆಲೋನಿಯರಿಗೆ ೧ ೪:೧೬ |
ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ.
|
ಥೆಸೆಲೋನಿಯರಿಗೆ ೨ ೧:೭ |
ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.
|
ತಿಮೊಥೇಯನಿಗ ೧ ೩:೧೬ |
ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.
|
ತಿಮೊಥೇಯನಿಗ ೨ ೪:೧೮ |
ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.
|
ಹಿಬ್ರಿಯರಿಗೆ ೧:೩ |
ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.
|
ಹಿಬ್ರಿಯರಿಗೆ ೩:೧ |
ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.
|
ಹಿಬ್ರಿಯರಿಗೆ ೪:೧೪ |
ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.
|
ಹಿಬ್ರಿಯರಿಗೆ ೬:೪ |
ಒಬ್ಬನು, ಒಮ್ಮೆ ಜ್ಞಾನೋದಯವನ್ನು ಪಡೆದು, ಸ್ವರ್ಗೀಯ ವರದಾನಗಳನ್ನು ಆಸ್ವಾದಿಸಿ, ಪವಿತ್ರಾತ್ಮ ಅವರ ಸಹಭಾಗಿಯಾಗಿ,
|
ಹಿಬ್ರಿಯರಿಗೆ ೬:೧೯ |
ಈ ನಂಬಿಕೆ, ನಿರೀಕ್ಷೆ, ನಮ್ಮ ಬಾಳನೌಕೆಯ ಸ್ಥಿರವಾದ ಹಾಗೂ ಸುರಕ್ಷಿತವಾದ ಲಂಗರಿನಂತಿದೆ. ಇದು ತೆರೆಯ ಹಿಂದಿರುವ ಸ್ವರ್ಗೀಯ ಗರ್ಭಗುಡಿಯನ್ನು ಪ್ರವೇಶಿಸುವಂಥದ್ದು.
|
ಹಿಬ್ರಿಯರಿಗೆ ೮:೧ |
ಈಗ ಹೇಳುತ್ತಿರುವುದರ ಮುಖ್ಯಾಂಶ ಏನೆಂದರೆ: ಸ್ವರ್ಗದಲ್ಲಿ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿರುವಂಥ ಪ್ರಧಾನಯಾಜಕ ನಮಗಿದ್ದಾರೆ.
|
ಹಿಬ್ರಿಯರಿಗೆ ೮:೫ |
ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸಿದಾಗ, ದೇವರು ಆತನಿಗೆ, “ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು,” ಎಂದು ಆಜ್ಞೆಯನ್ನಿತ್ತರು.
|
ಹಿಬ್ರಿಯರಿಗೆ ೯:೨೩ |
ಸ್ವರ್ಗೀಯವಾದವುಗಳ ಛಾಯೆಯಂತೆ ಇರುವ ಈ ವಸ್ತುಗಳೇ ಈ ಪ್ರಕಾರ ಶುದ್ಧೀಕರಣ ಹೊಂದಬೇಕಾಗಿತ್ತಾದರೆ, ನಿಜವಾಗಿ ಸ್ವರ್ಗೀಯವಾದವುಗಳ ಶುದ್ಧೀಕರಣಕ್ಕೆ ಮತ್ತಷ್ಟು ಶ್ರೇಷ್ಠವಾದ ಬಲಿಗಳು ಬೇಕಾಗಿತ್ತು.
|
ಹಿಬ್ರಿಯರಿಗೆ ೯:೨೪ |
ಕ್ರಿಸ್ತಯೇಸು ಪ್ರವೇಶಿಸಿದ್ದು ನೈಜದೇವಾಲಯದ ಛಾಯೆಯಂತಿರುವ ಮಾನವನಿರ್ಮಿತ ಗರ್ಭಗುಡಿಯನ್ನಲ್ಲ, ನಮ್ಮ ಪರವಾಗಿ ದೇವರ ಸಮ್ಮುಖದಲ್ಲಿ ಉಪಸ್ಥಿತರಾಗಲು ಸಾಕ್ಷಾತ್ ಸ್ವರ್ಗವನ್ನೇ ಅವರು ಪ್ರವೇಶಿಸಿದರು.
|
ಹಿಬ್ರಿಯರಿಗೆ ೯:೨೫ |
ಪ್ರಧಾನ ಯಾಜಕನು ಪ್ರತಿವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಗರ್ಭಗುಡಿಯನ್ನು ಪ್ರವೇಶಿಸುವಂತೆ ಯೇಸು ಪ್ರವೇಶಿಸಲಿಲ್ಲ. ಅವರು ಸ್ವರ್ಗವನ್ನು ಪ್ರವೇಶಿಸಿದ್ದು ಪದೇಪದೇ ತಮ್ಮನ್ನು ಸಮರ್ಪಿಸಿಕೊಳ್ಳುವುದಕ್ಕೂ ಅಲ್ಲ.
|
ಹಿಬ್ರಿಯರಿಗೆ ೧೧:೧೬ |
ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.
|
ಹಿಬ್ರಿಯರಿಗೆ ೧೨:೨೨ |
ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;
|
ಹಿಬ್ರಿಯರಿಗೆ ೧೨:೨೩ |
ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;
|
ಹಿಬ್ರಿಯರಿಗೆ ೧೨:೨೫ |
ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?
|
ಯಕೋಬನು ೨:೫ |
ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?
|
ಯಕೋಬನು ೫:೪ |
ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.
|
ಪೇತ್ರನು ೧ ೧:೪ |
ಹೀಗೆ ಅವರು, ತಮ್ಮ ಸ್ವಂತ ಜನರಿಗಾಗಿ ಸ್ವರ್ಗದಲ್ಲಿ ಕಾದಿರಿಸಿರುವ ಅಳಿಯದ, ಅಕ್ಷಯವಾದ, ಅನಂತವಾದ ಸಿರಿಸಂಪತ್ತಿಗೆ ನಿಮ್ಮನ್ನು ಬಾಧ್ಯರನ್ನಾಗಿ ಮಾಡಿದ್ದಾರೆ.
|
ಪೇತ್ರನು ೧ ೧:೧೨ |
ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.
|
ಪೇತ್ರನು ೧ ೩:೨೨ |
ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.
|
ಪೇತ್ರನು ೨ ೧:೧೮ |
ಆಗ ನಾವು ಆ ಪುನೀತ ಪರ್ವತದ ಮೇಲೆ ಅವರೊಡನೆ ಇದ್ದೆವು. ಸ್ವರ್ಗದಿಂದ ಆ ವಾಣಿಯನ್ನು ನಾವು ಕೇಳಿದೆವು.
|
ಪೇತ್ರನು ೨ ೨:೧೧ |
ಈ ಕಳ್ಳಬೋಧಕರು ಉದ್ಧಟರು, ಸ್ವೇಚ್ಛಾಪರರು, ಸ್ವರ್ಗನಿವಾಸಿಗಳನ್ನು ದೂಷಿಸುವವರು. ದೇವದೂತರು ಶಕ್ತಿಯಲ್ಲಿ ಮತ್ತು ಪರಾಕ್ರಮದಲ್ಲಿ ಶ್ರೇಷ್ಠರಾಗಿದ್ದರೂ ಸಹ ಈ ಸ್ವರ್ಗನಿವಾಸಿಗಳನ್ನು ಪ್ರಭುವಿನ ಮುಂದೆ ದೂಷಿಸುವುದೂ ಇಲ್ಲ, ಖಂಡಿಸುವುದೂ ಇಲ್ಲ.
|
ಯೂದನು ೧:೮ |
ಈ ದುರ್ಬೋಧಕರು ಕೂಡ ಹಾಗೆಯೇ ವರ್ತಿಸುತ್ತಾರೆ. ಕನಸು ಕಾಣುವವರಂತೆ ತಮ್ಮ ಶರೀರವನ್ನು ಪಾಪಕಳಂಕದಿಂದ ಮಲಿನವಾಗಿಸಿಕೊಳ್ಳುತ್ತಾರೆ. ಪ್ರಭುವಿನ ಅಧಿಕಾರವನ್ನು ಅಸಡ್ಡೆಮಾಡುತ್ತಾರೆ. ಸ್ವರ್ಗನಿವಾಸಿಗಳನ್ನು ದೂಷಿಸುತ್ತಾರೆ.
|
ಪ್ರಕಟನೆ ೩:೧೨ |
ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.
|
ಪ್ರಕಟನೆ ೪:೧ |
ಇದಾದ ಬಳಿಕ ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ಬಾಗಿಲು ತೆರೆದಿತ್ತು. ಮೊದಲು ನನ್ನೊಡನೆ ಮಾತನಾಡಿದ ತುತೂರಿಯಂಥ ನಾದವು ನನಗೆ ಕೇಳಿಸಿತು. ಅದು, “ಮೇಲೆ ಬಾ, ಮುಂದೆ ಸಂಭವಿಸಲಿರುವ ಘಟನೆಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.
|
ಪ್ರಕಟನೆ ೪:೨ |
ಕೂಡಲೇ, ನಾನು ದೇವರಾತ್ಮವಶನಾದೆ. ಆಗ ಸ್ವರ್ಗದಲ್ಲಿ ಒಂದು ಸಿಂಹಾಸನ ಇರುವುದನ್ನೂ ಅದರಲ್ಲಿ ಒಬ್ಬರು ಆಸೀನರಾಗಿರುವುದನ್ನೂ ಕಂಡೆ.
|
ಪ್ರಕಟನೆ ೫:೩ |
ಸ್ವರ್ಗದಲ್ಲಾಗಲಿ, ಭೂಮಿಯಲ್ಲಾಗಲಿ, ಪಾತಾಳದಲ್ಲಾಗಲಿ, ಆ ಸುರುಳಿಯನ್ನು ಬಿಚ್ಚುವುದಕ್ಕೂ ಇಲ್ಲವೆ ಅದನ್ನು ಬಿಚ್ಚಿನೋಡುವುದಕ್ಕೂ ಯಾರಿಂದಲೂ ಸಾಧ್ಯವಾಗಲಿಲ್ಲ.
|
ಪ್ರಕಟನೆ ೫:೧೩ |
ಇದಲ್ಲದೆ, ಸ್ವರ್ಗ, ಭೂಮಿ, ಪಾತಾಳಗಳಲ್ಲೂ ಸಮುದ್ರದಲ್ಲೂ ಇರುವ ಸಮಸ್ತ ಸೃಷ್ಟಿಗಳು ಹೀಗೆ ಹಾಡುವುದನ್ನು ಕೇಳಿಸಿಕೊಂಡೆ: “ಸಿಂಹಾಸನದಲ್ಲಿ ಕುಳಿತವನಿಗೆ, ಯಜ್ಞಕುರಿಮರಿಯಾದಾತನಿಗೆ ಸಲ್ಲಲಿ ಯುಗಯುಗಾಂತರಕ್ಕೆ ಘನಮಾನ, ಗೌರವ, ಪರಾಕ್ರಮ, ಮತ್ತು ಮಹಿಮೆ.”
|
ಪ್ರಕಟನೆ ೮:೧ |
ಆ ಯಜ್ಞದ ಕುರಿಮರಿ ಏಳನೆಯ ಮುದ್ರೆಯನ್ನು ಒಡೆದಾಗ ಸ್ವರ್ಗದಲ್ಲಿ ಅರ್ಧ ಗಂಟೆಯವರೆಗೆ ಮೌನವುಂಟಾಯಿತು.
|
ಪ್ರಕಟನೆ ೧೦:೧ |
ನಾನು ಮತ್ತೊಂದು ದೃಶ್ಯವನ್ನು ಕಂಡೆ. ಒಬ್ಬ ಬಲಿಷ್ಠ ದೇವದೂತನು ಸ್ವರ್ಗದಿಂದ ಇಳಿದುಬಂದನು. ಅವನು ಮೇಘಾಂಬರನಾಗಿದ್ದನು. ಅವನ ತಲೆಯ ಮೇಲೆ ಮುಗಿಲು ಬಿಲ್ಲೊಂದು ಇತ್ತು. ಮುಖವು ಸೂರ್ಯನಂತೆ ಇತ್ತು. ಕಾಲುಗಳು ಅಗ್ನಿಸ್ತಂಭಗಳಂತಿದ್ದವು.
|
ಪ್ರಕಟನೆ ೧೦:೪ |
ಏಳು ಗುಡುಗುಗಳು ನುಡಿದುದನ್ನು ಕೂಡಲೇ ನಾನು ಬರೆಯಬೇಕೆಂದಿದ್ದೆ. ಆಗ ಸ್ವರ್ಗದಿಂದ ಬಂದ ಒಂದು ಧ್ವನಿ, “ಆ ಏಳು ಗುಡುಗುಗಳು ನುಡಿದುದನ್ನು ರಹಸ್ಯವಾಗಿ ಇಡು. ಅವುಗಳನ್ನು ಬರೆಯಬೇಡ,” ಎಂದು ನನಗೆ ಆಜ್ಞಾಪಿಸಿತು.
|
ಪ್ರಕಟನೆ ೧೦:೫ |
ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ಕಾಲುಗಳನ್ನಿಟ್ಟು ನಿಂತಿದ್ದ ದೇವದೂತನು ತನ್ನ ಬಲಗೈಯನ್ನು ಸ್ವರ್ಗದ ಕಡೆಗೆ ಎತ್ತಿದನು.
|
ಪ್ರಕಟನೆ ೧೦:೬ |
ಅನಂತರ ಸ್ವರ್ಗ, ಭೂಮಿ, ಸಮುದ್ರ ಇವುಗಳನ್ನೂ ಇವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ಹಾಗು ಯುಗಯುಗಾಂತರಕ್ಕೂ ಜೀವಿಸುವ ದೇವರ ಹೆಸರಿನಲ್ಲಿ ಶಪಥಮಾಡಿ ಹೀಗೆ ಹೇಳಿದನು: “ಇನ್ನು ನಿಧಾನಿಸುವಂತಿಲ್ಲ;
|
ಪ್ರಕಟನೆ ೧೦:೮ |
ಸ್ವರ್ಗದಿಂದ ನನಗೆ ಕೇಳಿಸಿದ ಧ್ವನಿ ಮತ್ತೊಮ್ಮೆ ನನ್ನೊಡನೆ ಮಾತನಾಡಿ, “ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ಕಾಲಿಟ್ಟು ನಿಂತಿರುವ ದೇವದೂತನ ಬಳಿಗೆ ಹೋಗು. ಆತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ತಿಳಿಸಿತು.
|
ಪ್ರಕಟನೆ ೧೧:೧೨ |
ಅನಂತರ ಆ ಪ್ರವಾದಿಗಳಿಗೆ, “ಮೇಲೇರಿ ಬನ್ನಿ,” ಎಂದು ಸ್ವರ್ಗದಿಂದ ಒಂದು ಮಹಾವಾಣಿ ತಿಳಿಸಿತು. ಶತ್ರುಗಳು ಅವರನ್ನು ನೋಡುತ್ತಿದ್ದಂತೆಯೇ ಅವರು ಮೇಘಾರೂಢರಾಗಿ ಸ್ವರ್ಗಕ್ಕೇರಿದರು.
|
ಪ್ರಕಟನೆ ೧೧:೧೩ |
ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.
|
ಪ್ರಕಟನೆ ೧೧:೧೫ |
ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು: “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ\.
|
ಪ್ರಕಟನೆ ೧೧:೧೯ |
ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.
|
ಪ್ರಕಟನೆ ೧೨:೭ |
ಸ್ವರ್ಗದಲ್ಲಿ ಒಂದು ಯುದ್ಧ ಪ್ರಾರಂಭವಾಯಿತು. ಮಿಕಾಯೇಲನು ತನ್ನ ಸಹದೂತರ ಸಹಿತ ಘಟಸರ್ಪದ ವಿರುದ್ಧ ಯುದ್ಧಮಾಡಿದನು. ಘಟಸರ್ಪವೂ ತನ್ನ ದೂತರ ಸಮೇತ ಯುದ್ಧದಲ್ಲಿ ಕಾದಾಡಿತು.
|
ಪ್ರಕಟನೆ ೧೨:೮ |
ಆದರೆ ಜಯಗಳಿಸುವಷ್ಟು ಸಾಮರ್ಥ್ಯ ಘಟಸರ್ಪಕ್ಕಿರದೆ ಅದು ಸೋಲನ್ನಪ್ಪಿತು. ಹೀಗೆ ಸ್ವರ್ಗದಲ್ಲಿ ಅದಕ್ಕೂ ಅದರ ದೂತರಿಗೂ ಸ್ಥಳವಿಲ್ಲದಂತಾಯಿತು.
|
ಪ್ರಕಟನೆ ೧೨:೧೦ |
ಸ್ವರ್ಗದಿಂದ ಬಂದ ಮಹಾಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು: “ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ. ನಮ್ಮ ಸೋದರರನು ದೂರಿದವನನ್ನು ದಬ್ಬಲಾಗಿದೆ. ಹಗಲಿರುಳು ನಮ್ಮ ದೇವರೆದುರು ದೂರಿತ್ತಿದ್ದವನನ್ನು ತಳ್ಳಲಾಗಿದೆ.
|
ಪ್ರಕಟನೆ ೧೨:೧೨ |
ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”
|
ಪ್ರಕಟನೆ ೧೩:೬ |
ಅದು ಬಾಯಿ ತೆರೆದು ದೇವರನ್ನು ದೂಷಿಸಿತು; ಅವರ ನಾಮವನ್ನು ಶಪಿಸಿತು. ಅವರ ಆಲಯವನ್ನು, ಅಂದರೆ ಸ್ವರ್ಗನಿವಾಸಿಗಳೆಲ್ಲರನ್ನೂ ತೆಗಳಿತು.
|
ಪ್ರಕಟನೆ ೧೪:೨ |
ಇದಲ್ಲದೆ, ಸ್ವರ್ಗದಿಂದ ಮಹಾಧ್ವನಿಯೊಂದು ಕೇಳಿಸಿತು. ಅದು ಭೋರ್ಗರೆಯುವ ಜಲಪ್ರವಾಹದಂತೆಯೂ ದೊಡ್ಡ ಗುಡುಗಿನ ಗರ್ಜನೆಯಂತೆಯೂ ಇತ್ತು. ನಾವು ಕೇಳಿದಂಥ ಧ್ವನಿ ಕಿನ್ನರಿಯನ್ನು ನುಡಿಸುತ್ತಿರುವ ವಾದ್ಯಗಾರರ ಸ್ವರದಂತಿತ್ತು.
|
ಪ್ರಕಟನೆ ೧೪:೭ |
ಆತನು ಮಹಾಶಬ್ದದಿಂದ, “ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ; ಅವರಿಗೆ ಸ್ತುತಿಸ್ತೋತ್ರ ಸಲ್ಲಿಸಿರಿ. ಏಕೆಂದರೆ, ಅವರು ತೀರ್ಪುಕೊಡುವ ಗಳಿಗೆಯು ಬಂದಿದೆ. ಆದ್ದರಿಂದ ಭೂಸ್ವರ್ಗಗಳನ್ನೂ ಕಡಲುಕಾರಂಜಿಗಳನ್ನೂ ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸಿರಿ,” ಎಂದು ಹೇಳಿದನು.
|
ಪ್ರಕಟನೆ ೧೪:೧೩ |
ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.
|
ಪ್ರಕಟನೆ ೧೪:೧೭ |
ಮಗದೊಬ್ಬ ದೇವದೂತನು ಸ್ವರ್ಗದ ದೇವಮಂದಿರದಿಂದ ಹೊರಗೆ ಬಂದನು. ಆತನ ಕೈಯಲ್ಲೂ ಹರಿತವಾದ ಕುಡುಗೋಲು ಇತ್ತು.
|
ಪ್ರಕಟನೆ ೧೫:೧ |
ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.
|
ಪ್ರಕಟನೆ ೧೫:೫ |
ಇವುಗಳಾದ ಮೇಲೆ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ ಸ್ವರ್ಗದ ದೇವಾಲಯವು ತೆರೆದಿತ್ತು. ದೈವಪ್ರಸನ್ನತೆಯ ಗುಡಾರವು ಅದರೊಳಗಿತ್ತು.
|
ಪ್ರಕಟನೆ ೧೬:೧೧ |
ತಮ್ಮ ನೋವು ಬಾಧೆಗಳ ನಿಮಿತ್ತವೂ ತಮ್ಮ ಉರಿ ಹುಣ್ಣುಗಳ ನಿಮಿತ್ತವೂ ಸ್ವರ್ಗದ ದೇವರನ್ನು ದೂಷಿಸಿದರು. ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ.
|
ಪ್ರಕಟನೆ ೧೮:೧ |
ಇವುಗಳಾದ ಬಳಿಕ ನಾನು ಮತ್ತೂ ಒಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಮತ್ತೊಬ್ಬ ದೇವದೂತನು ಇಳಿದುಬಂದನು. ಅವನು ವಿಶೇಷ ಅಧಿಕಾರ ಪಡೆದಿದ್ದನು. ಅವನ ತೇಜಸ್ಸು ಭೂಮಿಯನ್ನು ಬೆಳಗಿತು.
|
ಪ್ರಕಟನೆ ೧೮:೪ |
ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು: ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ!
|
ಪ್ರಕಟನೆ ೧೮:೨೦ |
“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”
|
ಪ್ರಕಟನೆ ೧೯:೧ |
ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಬಂದ ಒಂದು ಮಹಾಶಬ್ದವನ್ನು ಆಲಿಸಿದೆ. ಅದು ದೊಡ್ಡ ಜನಸಮೂಹದ ಆರ್ಭಟದಂತಿತ್ತು. “ಅಲ್ಲೆಲೂಯ! ಜೀವೋದ್ಧಾರವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲುಂಟು.
|
ಪ್ರಕಟನೆ ೧೯:೧೧ |
ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.
|
ಪ್ರಕಟನೆ ೧೯:೧೪ |
ಸ್ವರ್ಗದ ಸೈನಿಕರು ಬಿಳಿಯ ಕುದುರೆಗಳನ್ನೇರಿ ಆತನನ್ನು ಹಿಂಬಾಲಿಸಿದರು. ಅವರು ಶುಭ್ರವಾದ ಬಿಳಿಯ ಸಮವಸ್ತ್ರಗಳನ್ನು ಧರಿಸಿದ್ದರು.
|
ಪ್ರಕಟನೆ ೨೦:೧ |
ತರುವಾಯ ದೇವದೂತನೊಬ್ಬನು ಸ್ವರ್ಗದಿಂದ ಇಳಿದುಬಂದುದನ್ನು ಕಂಡೆ. ಆತನ ಕೈಯಲ್ಲಿ ಪಾತಾಳದ ಬೀಗದ ಕೈ ಮತ್ತು ದೊಡ್ಡ ಸರಪಣಿ ಇದ್ದವು.
|
ಪ್ರಕಟನೆ ೨೦:೯ |
ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ದೇವರ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಸ್ವರ್ಗದಿಂದ ಬೆಂಕಿ ಇಳಿದುಬಂದು ಅವರನ್ನು ದಹಿಸಿಬಿಟ್ಟಿತು.
|
ಪ್ರಕಟನೆ ೨೧:೨ |
ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.
|
ಪ್ರಕಟನೆ ೨೧:೧೦ |
ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು;
|
Kannada Bible (KNCL) 2016 |
No Data |