A A A A A

ಹುಡುಕಿ
ಮತ್ತಾಯನು ೫:೯
ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು.


ಲೂಕನು ೧:೭೯
ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು I ನಮ್ಮ ಕಾಲುಗಳನ್ನೂರಿಸಿ ನಡೆಯಲು ಶಾಂತಿಪಥದೊಳು II


ಲೂಕನು ೨:೧೪
“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.


ಲೂಕನು ೨:೨೯
“ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.


ಲೂಕನು ೧೦:೫
ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ.


ಲೂಕನು ೧೦:೬
ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು.


ಲೂಕನು ೧೯:೩೮
“ಸರ್ವೇಶ್ವರನ ನಾಮದಲಿ ಬರುವ ಅರಸನಿಗೆ ಜಯಜಯವಾಗಲಿ! ಶಾಂತಿ ಸ್ವರ್ಗದಲಿ, ಮಹಿಮೆ ಮಹೋನ್ನತದಲಿ!” ಎಂದು ಜಯಘೋಷ ಮಾಡುತ್ತಿದ್ದರು.


ಲೂಕನು ೧೯:೪೨
“ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ.


ಲೂಕನು ೨೪:೩೬
ಅವರು ವರದಿಮಾಡುತ್ತಿದ್ದಂತೆ ಯೇಸುಸ್ವಾಮಿಯೇ ಅವರ ಮಧ್ಯೆ ಪ್ರತ್ಯಕ್ಷವಾಗಿ ನಿಂತು, ‘ನಿಮಗೆ ಶಾಂತಿ,’ ಎಂದರು.


ಯೊವಾನ್ನನು ೧೪:೨೭
ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಯೊವಾನ್ನನು ೧೬:೩೩
ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.


ಯೊವಾನ್ನನು ೨೦:೨೦
“ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು.


ಯೊವಾನ್ನನು ೨೦:೨೧
ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.


ಯೊವಾನ್ನನು ೨೦:೨೬
ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು.


ಪ್ರೇಷಿತರ ೯:೩೧
ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.


ಪ್ರೇಷಿತರ ೧೦:೩೬
ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.


ಪ್ರೇಷಿತರ ೨೪:೨
ಪೌಲನನ್ನು ಕರೆದುತಂದು ನಿಲ್ಲಿಸಿದಾಗ ತೆರ್ತುಲ್ಲನು ಅವನ ವಿರುದ್ಧ ಹೀಗೆಂದು ವಾದಿಸಲಾರಂಭಿಸಿದನು: “ಮಹಾಪ್ರಭುವೇ, ನಿಮ್ಮ ಮುಖಂಡತ್ವದಲ್ಲಿ ನಾವು ಶಾಂತಿ ಸೌಭಾಗ್ಯವನ್ನು ಸವಿಯುತ್ತಿದ್ದೇವೆ. ದೇಶ ಪ್ರಗತಿಗಾಗಿ ಆಗುತ್ತಿರುವ ಸುಧಾರಣೆಗಳಿಗೆ ತಮ್ಮ ಪರಾಮರಿಕೆಯೇ ಕಾರಣ.


ರೋಮನರಿಗೆ ೧:೧
ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್‍ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.


ರೋಮನರಿಗೆ ೨:೪
ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ರೋಮನರಿಗೆ ೨:೧೦
ಅಂತೆಯೇ, ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ಸತ್ಕಾರ್ಯಗಳನ್ನು ಮಾಡುವ ಪ್ರತಿಯೊಬ್ಬರಿಗೂ ಮಹಿಮೆ, ಗೌರವ, ಶಾಂತಿ ಲಭಿಸುತ್ತವೆ.


ರೋಮನರಿಗೆ ೩:೧೭
ಶಾಂತಿಪಥವನು ಅರಿಯರವರು


ರೋಮನರಿಗೆ ೫:೧
ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.


ರೋಮನರಿಗೆ ೮:೬
ಶರೀರ ಸ್ವಭಾವದಲ್ಲೆ ಮಗ್ನರಾಗಿರುವುದರ ಪರಿಣಾಮ ಮರಣ; ಪವಿತ್ರಾತ್ಮ ಅವರಲ್ಲೇ ಮಗ್ನರಾಗಿರುವುದರ ಪರಿಣಾಮ ಸಜ್ಜೀವ ಮತ್ತು ಶಾಂತಿಸಮಾಧಾನ.


ರೋಮನರಿಗೆ ೧೪:೧೭
ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.


ರೋಮನರಿಗೆ ೧೪:೧೯
ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ.


ರೋಮನರಿಗೆ ೧೫:೧೩
ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ರೋಮನರಿಗೆ ೧೫:೩೩
ಶಾಂತಿದಾತ ದೇವರು ನಿಮ್ಮೆಲ್ಲರೊಡನೆ ಇರಲಿ! ಆಮೆನ್.


ರೋಮನರಿಗೆ ೧೬:೨೦
ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಕೊರಿಂಥಿಯರಿಗೆ ೧ ೧:೩
ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸುಕ್ರಿಸ್ತರಿಂದಲೂ ನಿಮಗೆ ಅನುಗ್ರಹ ಮತ್ತು ಶಾಂತಿಸಮಾಧಾನ ಲಭಿಸಲಿ!


ಕೊರಿಂಥಿಯರಿಗೆ ೧ ೭:೧೫
ಒಂದು ವೇಳೆ, ವಿಶ್ವಾಸವಿಲ್ಲದ ಸತಿಯಾಗಲಿ, ಪತಿಯಾಗಲಿ ಬೇರ್ಪಟ್ಟುಹೋಗಬೇಕೆಂದಿದ್ದರೆ ಹೋಗಲಿ. ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನು, ಇಲ್ಲವೆ ಸಹೋದರಿಯು ವಿವಾಹ ಬಂಧನದಿಂದ ವಿಮುಕ್ತರಾಗುತ್ತಾರೆ. ಏಕೆಂದರೆ, ದೇವರು ನಿಮ್ಮನ್ನು ಶಾಂತಿಸಮಾಧಾನದಿಂದ ಬಾಳಲು ಕರೆದಿದ್ದಾರೆ.


ಕೊರಿಂಥಿಯರಿಗೆ ೧ ೧೪:೩೩
ದೇವರು ಗಲಿಬಿಲಿಯನ್ನು ಬಯಸುವವರಲ್ಲ; ಅವರು ಶಾಂತಿ ಮತ್ತು ಸುವ್ಯವಸ್ಥೆಯ ದೇವರು.


ಗಲಾತ್ಯರಿಗೆ ೧:೩
ನಮ್ಮ ತಂದೆಯಾದ ದೇವರಿಂದಲೂ ಪ್ರಭು ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ!


ಗಲಾತ್ಯರಿಗೆ ೫:೨೨
ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.


ಗಲಾತ್ಯರಿಗೆ ೬:೧೬
ಈ ನಿಯಮವನ್ನು ಅನುಸರಿಸುವ ಎಲ್ಲರಿಗೂ, ಅಂದರೆ ನಿಜ ಇಸ್ರಯೇಲರಾದ ದೇವಜನರೆಲ್ಲರಿಗೂ ಶಾಂತಿಸಮಾಧಾನವೂ ಕೃಪಾಶೀರ್ವಾದವೂ ಲಭಿಸಲಿ!


ಎಫೆಸಿಯರಿಗೆ ೧:೨
ಪಿತನಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!


ಎಫೆಸಿಯರಿಗೆ ೨:೧೪
ಯೇಸುಕ್ರಿಸ್ತರೇ ನಮ್ಮ ಶಾಂತಿದಾತ. ನಿಮ್ಮನ್ನೂ ನಮ್ಮನ್ನೂ ಒಂದುಗೂಡಿಸಿದವರು ಅವರೇ. ನಮ್ಮೀರ್ವರನ್ನು ಪ್ರತ್ಯೇಕಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತಮ್ಮ ಶರೀರದಿಂದಲೇ ಕೆಡವಿಹಾಕಿದ್ದಾರೆ.


ಎಫೆಸಿಯರಿಗೆ ೨:೧೫
ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ.


ಎಫೆಸಿಯರಿಗೆ ೨:೧೭
ಯೇಸುಕ್ರಿಸ್ತರು ಬಂದು ದೇವರಿಂದ ದೂರವಾಗಿದ್ದ ನಿಮಗೂ ಹತ್ತಿರವಾಗಿದ್ದ ನಮಗೂ ಶಾಂತಿಯ ಸಂದೇಶವನ್ನು ಸಾರಿದರು.


ಎಫೆಸಿಯರಿಗೆ ೪:೨
ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ.


ಎಫೆಸಿಯರಿಗೆ ೬:೧೫
ಶಾಂತಿಯ ಶುಭಸಂದೇಶವನ್ನು ಸಾರಲು ಶ್ರದ್ಧೆಯೆಂಬ ಪಾದರಕ್ಷೆಯನ್ನು ಮೆಟ್ಟುಕೊಳ್ಳಿರಿ.


ಎಫೆಸಿಯರಿಗೆ ೬:೨೩
ಪಿತನಾದ ದೇವರೂ ಪ್ರಭುವಾದ ಯೇಸುಕ್ರಿಸ್ತರೂ ಸಹೋದರರಿಗೆ ಶಾಂತಿಸಮಾಧಾನವನ್ನು ಮತ್ತು ಪ್ರೀತಿವಿಶ್ವಾಸವನ್ನು ದಯಪಾಲಿಸಲಿ.


ಫಿಲಿಪಿಯರಿಗೆ ೧:೨
ನಮ್ಮೆಲ್ಲರ ಪಿತನಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಆಶೀರ್ವಾದವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!


ಫಿಲಿಪಿಯರಿಗೆ ೪:೭
ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.


ಫಿಲಿಪಿಯರಿಗೆ ೪:೯
ನೀವು ನನ್ನಿಂದ ಕಲಿತವು ಹಾಗೂ ಅರಿತವುಗಳನ್ನು, ಕೇಳಿದವು ಹಾಗೂ ಕಂಡವುಗಳನ್ನು ನಿಮ್ಮ ಜೀವಿತದಲ್ಲಿ ಕಾರ್ಯರೂಪಕ್ಕೆ ತನ್ನಿರಿ. ಆಗ ಶಾಂತಿದಾಯಕ ದೇವರು ನಿಮ್ಮ ಸಂಗಡ ಇರುವರು.


ಕೊಲೊಸ್ಸೆಯರಿಗೆ ೧:೨
ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಮತ್ತು ಸಹೋದರ ತಿಮೊಥೇಯನು ಬರೆಯುವ ಪತ್ರ. ನಮ್ಮ ತಂದೆಯಾದ ದೇವರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮ್ಮಲ್ಲಿರಲಿ!


ಕೊಲೊಸ್ಸೆಯರಿಗೆ ೧:೨೦
ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.


ಕೊಲೊಸ್ಸೆಯರಿಗೆ ೩:೧೨
ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.


ಕೊಲೊಸ್ಸೆಯರಿಗೆ ೩:೧೫
ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ‍ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.


ಥೆಸೆಲೋನಿಯರಿಗೆ ೧ ೧:೧
ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗೂ ತಿಮೊಥೇಯ ಇವರು ಬರೆಯುವ ಪತ್ರ. ದೈವಾನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!


ಥೆಸೆಲೋನಿಯರಿಗೆ ೧ ೫:೨೩
ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.


ಥೆಸೆಲೋನಿಯರಿಗೆ ೨ ೧:೨
ತಂದೆಯಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!


ಥೆಸೆಲೋನಿಯರಿಗೆ ೨ ೩:೧೬
ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ!


ತಿಮೊಥೇಯನಿಗ ೧ ೧:೨
ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ!


ತಿಮೊಥೇಯನಿಗ ೧ ೨:೨
ನಾವು ದೈವಭಕ್ತಿಯುಳ್ಳವರಾಗಿ ಮತ್ತು ಗೌರವಯುತರಾಗಿ ಶಾಂತಿಸಮಾಧಾನದಿಂದಲೂ ನೆಮ್ಮದಿಯಿಂದಲೂ ಜೀವಿಸಲು ಅನುಕೂಲವಾಗುವಂತೆ ಅರಸರಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಬೇಕು.


ತಿಮೊಥೇಯನಿಗ ೨ ೧:೧
ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ!


ತಿಮೊಥೇಯನಿಗ ೨ ೨:೨೨
ನೀನು ಯೌವನದ ಭಾವೋದ್ರೇಕಗಳಿಗೆ ತುತ್ತಾಗದೆ ಧರ್ಮ, ವಿಶ್ವಾಸ, ಪ್ರೀತಿ ಮತ್ತು ಶಾಂತಿ - ಇವುಗಳನ್ನು ರೂಢಿಸಿಕೋ. ಈ ದಿಸೆಯಲ್ಲಿ ಶುದ್ಧ ಹೃದಯದಿಂದ ದೇವರನ್ನು ಅರಸುವವನು ನಿನಗೆ ಆದರ್ಶವಾಗಿರಲಿ.


ತೀತನಿಗೆ ೧:೧
ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ‍ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.


ಫಿಲೆಮೋನನಿಗೆ ೧:೧
ನಮ್ಮ ಅತಿಪ್ರಿಯನೂ ಸಹೋದ್ಯೋಗಿಯೂ ಆದ ಫಿಲೆಮೋನನಿಗೂ ನಿನ್ನ ಮನೆಯಲ್ಲಿ ಸಭೆಸೇರುವ ಸಹೋದರರಿಗೂ ಹಾಗು ನಮ್ಮ ಸಹೋದರಿ ಅಪ್ಪಿಯ ಮತ್ತು ಸಹಸೈನಿಕ ಅರ್ಖಿಪ್ಪನಿಗೂ - ಕ್ರಿಸ್ತಯೇಸುವಿಗೋಸ್ಕರ ಸೆರೆಯಾಳಾಗಿರುವ ಪೌಲನೂ ಮತ್ತು ನಮ್ಮ ಸಹೋದರ ತಿಮೊಥೇಯನೂ ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಮತ್ತು ಒಡೆಯರಾದ ಯೇಸುಕ್ರಿಸ್ತರು ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ!


ಹಿಬ್ರಿಯರಿಗೆ ೭:೨
ಆಗ ಅಬ್ರಹಾಮನು ತಾನು ಗೆದ್ದು ತಂದಿದ್ದ ಎಲ್ಲದರಲ್ಲೂ ದಶಮಾಂಶವನ್ನು ಆತನಿಗೆ ಕೊಟ್ಟು ಗೌರವಿಸಿದನು. ಮೆಲ್ಕಿಸದೇಕ ಎಂಬ ಹೆಸರಿನ ಮೂಲಾರ್ಥ, ‘ನ್ಯಾಯನೀತಿಯ ಅರಸ.’ ಅಲ್ಲದೆ, ಆತನು ಸಾಲೇಮಿನ ಅರಸನೂ ಆಗಿದ್ದನು. ಆದ್ದರಿಂದ ‘ಶಾಂತಿಸಮಾಧಾನದ ಅರಸ’ ಎಂಬ ಅರ್ಥವೂ ಉಂಟು.


ಹಿಬ್ರಿಯರಿಗೆ ೧೨:೧೧
ಯಾವ ಶಿಕ್ಷೆಯಾದರೂ ತಕ್ಷಣಕ್ಕೆ ಸಿಹಿಯಾಗಿರದೆ ಕಹಿಯಾಗಿಯೇ ಇರುತ್ತದೆ. ಹೀಗೆ ಶಿಸ್ತಿನ ಕ್ರಮಕ್ಕೆ ಒಳಗಾದವರು ಮುಂದಕ್ಕೆ ನ್ಯಾಯನೀತಿಯನ್ನೂ ಶಾಂತಿಸಮಾಧಾನವನ್ನೂ ಪ್ರತಿಫಲವಾಗಿ ಪಡೆಯುತ್ತಾರೆ.


ಹಿಬ್ರಿಯರಿಗೆ ೧೨:೧೪
ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.


ಹಿಬ್ರಿಯರಿಗೆ ೧೩:೨೦
ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.


ಯಕೋಬನು ೩:೧೭
ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.


ಪೇತ್ರನು ೧ ೧:೨
ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!


ಪೇತ್ರನು ೧ ೩:೧೧
ಕೆಡಕನ್ನು ಬಿಟ್ಟು ಒಳಿತನ್ನು ಕೈಗೊಳ್ಳಲಿ ಶಾಂತಿಯನರಸಿ ಅದರ ಸ್ಥಾಪನೆಗೆ ಶ್ರಮಿಸಲಿ.


ಪೇತ್ರನು ೧ ೩:೧೬
ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.


ಪೇತ್ರನು ೧ ೫:೧೪
ಪ್ರೀತಿಯ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಯೇಸುಕ್ರಿಸ್ತರಲ್ಲಿರುವ ನಿಮ್ಮೆಲ್ಲರಿಗೂ ಶಾಂತಿಸಮಾಧಾನ ಲಭಿಸಲಿ!


ಪೇತ್ರನು ೨ ೧:೨
ದೇವರ ಮತ್ತು ಪ್ರಭು ಯೇಸುಕ್ರಿಸ್ತರ ಬಗ್ಗೆ ನೀವು ಪಡೆಯುತ್ತಿರುವ ಜ್ಞಾನಾರ್ಜನೆಯು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅಧಿಕಾಧಿಕವಾಗಿ ತರಲಿ!


ಪೇತ್ರನು ೨ ೩:೯
ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.


ಪೇತ್ರನು ೨ ೩:೧೪
ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ.


ಪೇತ್ರನು ೨ ೩:೧೫
ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ.


ಯೊವಾನ್ನನು ೨ ೧:೩
ಪಿತನಾದ ದೇವರಿಂದಲೂ ಅವರ ಪುತ್ರ ಯೇಸುಕ್ರಿಸ್ತರಿಂದಲೂ ಕೃಪೆ, ಕರುಣೆ, ಶಾಂತಿ, ಸಮಾಧಾನಗಳು ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮಲ್ಲಿ ನೆಲೆಸಲಿ!


ಯೊವಾನ್ನನು ಮೂರು ೧:೧೫
ಶಾಂತಿಸಮಾಧಾನ ನಿನ್ನಲ್ಲಿರಲಿ! ಮಿತ್ರರೆಲ್ಲರೂ ನಿನಗೆ ವಂದನೆ ಹೇಳಿದ್ದಾರೆ. ಅಲ್ಲಿರುವ ಪ್ರತಿಯೊಬ್ಬ ಮಿತ್ರನಿಗೂ ನಮ್ಮ ವಂದನೆಗಳನ್ನು ತಿಳಿಸು.


ಯೂದನು ೧:೨
ದೇವರಿಂದ ಕರೆಹೊಂದಿರುವ ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಸಮೃದ್ಧಿಯಾಗಿ ಲಭಿಸಲಿ!


ಪ್ರಕಟನೆ ೧:೪
ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು


ಪ್ರಕಟನೆ ೧:೫
ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ


ಪ್ರಕಟನೆ ೬:೪
ಆಗ ಕೆಂಪು ಕುದುರೆ ಒಂದು ಹೊರಟುಬಂದಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ವಿಶ್ವದಲ್ಲಿ ಶಾಂತಿಯನ್ನು ಅಳಿಸಿಹಾಕಿ ಲೋಕದ ಜನರು ಒಬ್ಬರನ್ನೊಬ್ಬರು ಕೊಲ್ಲುವಂತೆ ಮಾಡುವ ಅಧಿಕಾರವನ್ನು ಅವನಿಗೆ ಕೊಡಲಾಗಿತ್ತು. ಇದಲ್ಲದೆ, ಅವನಿಗೆ ದೊಡ್ಡ ಖಡ್ಗವನ್ನೂ ಸಹ ಕೊಡಲಾಗಿತ್ತು.


Kannada Bible (KNCL) 2016
No Data