A A A A A

ಹುಡುಕಿ
ಮತ್ತಾಯನು ೩:೧೧
ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ.


ಮತ್ತಾಯನು ೫:೮
ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು.


ಮತ್ತಾಯನು ೫:೨೮
ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ.


ಮತ್ತಾಯನು ೬:೨೧
ನಿನ್ನ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿನ್ನ ಹೃದಯ.”


ಮತ್ತಾಯನು ೧೧:೨೯
ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ಮತ್ತಾಯನು ೧೨:೩೪
ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.


ಮತ್ತಾಯನು ೧೩:೧೫
ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’


ಮತ್ತಾಯನು ೧೩:೧೯
ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಮತ್ತಾಯನು ೧೫:೮
‘ಬರಿಯ ಮಾತಿನ ಮನ್ನಣೆಯನ್ನೀಯುತ ಹೃದಯವನು ದೂರವಿರಿಸುತ ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ


ಮತ್ತಾಯನು ೧೫:೧೮
ಆದರೆ ಬಾಯಿಂದ ಹೊರಡುವಂಥವು ಅವನ ಹೃದಯದಿಂದ ಹೊರಹೊಮ್ಮುತ್ತವೆ; ಇವು ಮನುಷ್ಯನನ್ನು ಕಲುಷಿತಗೊಳಿಸುತ್ತವೆ.


ಮತ್ತಾಯನು ೧೫:೧೯
ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.


ಮತ್ತಾಯನು ೧೫:೩೨
ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು, “ಈ ಜನಸ್ತೋಮ ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದೆ. ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡು ನನ್ನ ಹೃದಯ ಕರಗುತ್ತದೆ. ಇವರನ್ನು ಹಸಿದ ಹೊಟ್ಟೆಯಲ್ಲಿ ಕಳಿಸಿಬಿಡಲು ನನಗೆ ಇಷ್ಟವಿಲ್ಲ, ದಾರಿಯಲ್ಲಿ ಬಳಲಿ ಬಿದ್ದಾರು,” ಎಂದರು.


ಮತ್ತಾಯನು ೧೯:೮
“ನಿಮ್ಮ ಹೆಂಡತಿಯನ್ನು ನೀವು ಬಿಟ್ಟುಬಿಡಬಹುದೆಂದು ಮೋಶೆ ಅನುಮತಿ ಇತ್ತದ್ದು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತದಿಂದಲೇ. ಆದರೆ ಅದು ಆದಿಯಿಂದಲೇ ಹಾಗಿರಲಿಲ್ಲ.


ಮತ್ತಾಯನು ೨೨:೩೭
ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’


ಮಾರ್ಕನು ೩:೫
ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.


ಮಾರ್ಕನು ೭:೬
ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’


ಮಾರ್ಕನು ೭:೧೯
ಹೊರಗಿನಿಂದ ಮನುಷ್ಯನ ಒಳಕ್ಕೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಅವನು ತಿಂದದ್ದು ಅವನ ಹೃದಯವನ್ನು ಹೊಕ್ಕದೆ, ಹೊಟ್ಟೆಯನ್ನು ಮಾತ್ರ ಸೇರಿ, ಬಳಿಕ ದೇಹದಿಂದ ವಿಸರ್ಜಿತವಾಗುತ್ತದೆ. (ಹೀಗೆ ಆಹಾರ ಪದಾರ್ಥಗಳು ಯಾವುವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದರು.)


ಮಾರ್ಕನು ೭:೨೧
ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ,


ಮಾರ್ಕನು ೮:೩
ಇವರನ್ನು ಕಂಡಾಗ ನನ್ನ ಹೃದಯ ಕರಗುತ್ತದೆ. ಬರೀ ಹೊಟ್ಟೆಯಲ್ಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಕೆಲವರಂತೂ ಬಹುದೂರದಿಂದ ಬಂದಿದ್ದಾರೆ,” ಎಂದರು.


ಮಾರ್ಕನು ೧೦:೫
ಆಗ ಯೇಸು, “ನಿಮ್ಮ ಹೃದಯ ಕಲ್ಲಾಗಿ ಇದ್ದುದರಿಂದಲೇ ಮೋಶೆ ಈ ನಿಯಮವನ್ನು ಬರೆದಿಟ್ಟನು.


ಮಾರ್ಕನು ೧೨:೩೦
ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ.


ಮಾರ್ಕನು ೧೨:೩೩
ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು.


ಮಾರ್ಕನು ೧೬:೧೪
ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು.


ಲೂಕನು ೧:೫೧
ಗರ್ವ ಹೃದಯಿಗಳನಾತ ಚದರಿಸಿರುವನು I ಪ್ರದರ್ಶಿಸಿರುವನು ತನ್ನ ಬಾಹುಬಲವನು II


ಲೂಕನು ೨:೩೪
ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.


ಲೂಕನು ೬:೪೫
ಒಳ್ಳೆಯವನು ತನ್ನ ಹೃದಯವೆಂಬ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿಮಾತಾಗಿ ತುಳುಕುತ್ತದೆ.


ಲೂಕನು ೮:೧೨
ಕಾಲ್ದಾರಿಯಲ್ಲಿ ಬಿದ್ದ ಬೀಜಗಳು ಎಂದರೆ ಆ ವಾಕ್ಯವನ್ನು ಕೇಳಿದವರು. ಆದರೆ ಅವರು ವಿಶ್ವಾಸಿಸಿ ಜೀವೋದ್ಧಾರವನ್ನು ಪಡೆಯದಂತೆ ಪಿಶಾಚಿ ಬಂದು ಆ ವಾಕ್ಯವನ್ನು ಅವರ ಹೃದಯದಿಂದ ಕೂಡಲೇ ತೆಗೆದುಬಿಡುತ್ತದೆ.


ಲೂಕನು ೮:೧೫
ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


ಲೂಕನು ೧೦:೨೭
ಅವನು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಆತ್ಮದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು ಉತ್ತರಕೊಟ್ಟನು.


ಲೂಕನು ೧೨:೩೪
ನಿಮ್ಮ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿಮ್ಮ ಹೃದಯ.


ಲೂಕನು ೧೫:೨೦
ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. “ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ.


ಲೂಕನು ೨೪:೩೨
ಶಿಷ್ಯರು ಒಬ್ಬರಿಗೊಬ್ಚರು ಮಾತನಾಡಿಕೊಳ್ಳುತ್ತಾ, “ದಾರಿಯಲ್ಲಿ ಇವರು ನಮ್ಮ ಸಂಗಡ ಮಾತನಾಡುತ್ತಾ ಪವಿತ್ರಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಾ ಇತ್ತಲ್ಲವೆ?” ಎಂದುಕೊಂಡರು.


ಯೊವಾನ್ನನು ೭:೩೮
ಪವಿತ್ರಗ್ರಂಥದಲ್ಲಿ ಹೇಳಿರುವಂತೆ, ‘ನನ್ನಲ್ಲಿ ವಿಶ್ವಾಸವಿಡುವವನ ಹೃದಯದಿಂದ ಜೀವಜಲ ಹೊನಲುಹೊನಲಾಗಿ ಹರಿಯುವುದು,’ “ ಎಂದು ಕೂಗಿ ಹೇಳಿದರು.


ಯೊವಾನ್ನನು ೧೪:೧
ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ.


ಯೊವಾನ್ನನು ೧೪:೨೭
ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಯೊವಾನ್ನನು ೧೬:೬
ಇದನ್ನೆಲ್ಲಾ ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.


ಯೊವಾನ್ನನು ೧೭:೧೩
ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿತುಳುಕುವಂತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ.


ಪ್ರೇಷಿತರ ೨:೨೬
ಇದಕಾರಣ ಹರ್ಷಿಸಿತು ಎನ್ನ ಹೃದಯ ತುಳುಕಿತು ಸಂತಸ ಎನ್ನ ನಾಲಗೆಯಿಂದ ನಂಬಿ ನಿರೀಕ್ಷೆಯಿಂದಿರುವುದು ಎನ್ನ ಮರ್ತ್ಯದೇಹ.


ಪ್ರೇಷಿತರ ೨:೩೭
ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.


ಪ್ರೇಷಿತರ ೨:೪೬
ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು.


ಪ್ರೇಷಿತರ ೫:೩
ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?


ಪ್ರೇಷಿತರ ೭:೫೧
ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.


ಪ್ರೇಷಿತರ ೮:೨೧
ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ. ದೇವರ ದೃಷ್ಟಿಯಲ್ಲಿ ನಿನ್ನ ಹೃದಯವು ಸರಿಯಿಲ್ಲ.


ಪ್ರೇಷಿತರ ೮:೩೭
(ಫಿಲಿಪ್ಪನು, “ನೀವು ಹೃದಯಪೂರ್ವಕವಾಗಿ ವಿಶ್ವಾಸಿಸುವುದಾದರೆ ದೀಕ್ಷಾಸ್ನಾನವನ್ನು ಪಡೆಯಬಹುದು,” ಎಂದನು. “ಯೇಸುಕ್ರಿಸ್ತ ದೇವರ ಪುತ್ರ ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಅಧಿಕಾರಿ ಪ್ರತ್ಯುತ್ತರವಿತ್ತನು).


ಪ್ರೇಷಿತರ ೧೪:೧೭
ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”


ಪ್ರೇಷಿತರ ೧೬:೧೪
ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು.


ಪ್ರೇಷಿತರ ೨೧:೧೩
ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಪ್ರೇಷಿತರ ೨೮:೨೭
ಇವರ ಹೃದಯ ಕಲ್ಲಾಗಿದೆ, ಕಿವಿ ಮಂದವಾಗಿದೆ, ಕಣ್ಣು ಮಬ್ಬಾಗಿದೆ. ಇಲ್ಲದಿರೆ ಇವರ ಕಣ್ಣು ಕಾಣುತ್ತಾ, ಕಿವಿ ಕೇಳುತ್ತಾ, ಹೃದಯ ಗ್ರಹಿಸುತ್ತಾ, ನನ್ನತ್ತ ತಿರುಗುತ್ತಿದ್ದರು. ದೇವರಾದ ನಾನಿವರನ್ನು ಸ್ವಸ್ಥಪಡಿಸುತ್ತಿದ್ದೆ.’


ರೋಮನರಿಗೆ ೨:೫
ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ರೋಮನರಿಗೆ ೨:೧೫
ಧರ್ಮಶಾಸ್ತ್ರದ ವಿಧಿನಿಯಮಗಳು ಅವರ ಹೃದಯಗಳಲ್ಲಿ ಲಿಖಿತವಾಗಿವೆಯೆಂದು ಅವರ ನಡತೆಯಿಂದಲೇ ವೇದ್ಯವಾಗುತ್ತದೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.


ರೋಮನರಿಗೆ ೫:೫
ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ರೋಮನರಿಗೆ ೧೦:೮
ಧರ್ಮಗ್ರಂಥವು ಹೇಳುವುದಿಷ್ಟೆ; ದೇವರ ವಾಕ್ಯ ನಿನ್ನ ಸಮೀಪದಲ್ಲೇ ಇದೆ. ಅದು ನಿನ್ನ ಬಾಯಲ್ಲೂ ಹೃದಯದಲ್ಲೂ ಇದೆ. ಅದೇ ನಾವು ನಿಮಗೆ ಬೋಧಿಸುವ ವಿಶ್ವಾಸದ ವಾಕ್ಯ.


ರೋಮನರಿಗೆ ೧೦:೯
“ಯೇಸುಸ್ವಾಮಿಯೇ ಪ್ರಭು” ಎಂದು ನೀನು ಬಾಯಿಂದ ನಿವೇದಿಸಿ, ಅವರನ್ನು ದೇವರು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆಂದು ಹೃದಯದಿಂದ ವಿಶ್ವಾಸಿಸಿದರೆ ಜೀವೋದ್ಧಾರವನ್ನು ಹೊಂದುತ್ತೀಯೆ.


ರೋಮನರಿಗೆ ೧೦:೧೦
ಹೌದು, ಹೃದಯಪೂರ್ವಕವಾಗಿ ವಿಶ್ವಾಸಿಸುವವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆ; ಬಾಯಿಂದ ನಿವೇದಿಸುವವನು ಜೀವೋದ್ಧಾರ ಹೊಂದುತ್ತಾನೆ.


ರೋಮನರಿಗೆ ೧೧:೭
ಇದರ ಅರ್ಥವಾದರೂ ಏನು? ಇಸ್ರಯೇಲರು ಅರಸುತ್ತಿದ್ದುದು ಅವರಿಗೆ ದೊರಕಲಿಲ್ಲ. ಆಯ್ಕೆಯಾದವರಿಗೆ ಮಾತ್ರ ಅದು ದೊರಕಿತು. ಮಿಕ್ಕವರು ಕಠಿಣ ಹೃದಯಿಗಳಾದರು.


ಕೊರಿಂಥಿಯರಿಗೆ ೨ ೧:೨೩
ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.


ಕೊರಿಂಥಿಯರಿಗೆ ೨ ೨:೪
ಮನೋವ್ಯಥೆಯಿಂದಲೂ ಹೃದಯವೇದನೆಯಿಂದಲೂ ಕಣ್ಣೀರಿಡುತ್ತಾ ನಾನು ನಿಮಗೆ ಪತ್ರ ಬರೆದೆ. ನಿಮ್ಮನ್ನು ದುಃಖಕ್ಕೀಡುಮಾಡಬೇಕೆಂದಲ್ಲ, ನಿಮ್ಮನ್ನು ಎಷ್ಟರಮಟ್ಟಿಗೆ ಪ್ರೀತಿಸುತ್ತಿರುವೆನೆಂದು ನೀವು ತಿಳಿದುಕೊಳ್ಳಬೇಕೆಂದು ಬರೆದೆ.


ಕೊರಿಂಥಿಯರಿಗೆ ೨ ೩:೨
ನೀವೇ ನಮ್ಮ ಯೋಗ್ಯತಾಪತ್ರ, ನಮ್ಮ ಹೃದಯ ಪಟಲದ ಮೇಲೆ ಬರೆಯಲಾದ ಪತ್ರ. ಅದನ್ನು ಯಾರು ಬೇಕಾದರೂ ಗುರುತಿಸಬಹುದು. ಓದಿ ತಿಳಿದುಕೊಳ್ಳಬಹುದು.


ಕೊರಿಂಥಿಯರಿಗೆ ೨ ೩:೩
ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ.


ಕೊರಿಂಥಿಯರಿಗೆ ೨ ೬:೧೧
ಕೊರಿಂಥದ ನಿವಾಸಿಗಳೇ, ಬಿಚ್ಚುಮನದಿಂದಲೂ ತೆರೆದ ಹೃದಯದಿಂದಲೂ ನಾವು ನಿಮ್ಮೊಡ಼ನೆ ಮಾತನಾಡಿದ್ದೇವೆ.


ಕೊರಿಂಥಿಯರಿಗೆ ೨ ೬:೧೩
ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ: ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವೂ ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ.


ಕೊರಿಂಥಿಯರಿಗೆ ೨ ೭:೨
ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವಿರಲಿ. ನಾವು ಯಾರಿಗೂ ಅನ್ಯಾಯಮಾಡಿಲ್ಲ, ಯಾರಿಗೂ ಕೇಡನ್ನು ಬಗೆದಿಲ್ಲ, ಯಾರನ್ನೂ ವಂಚಿಸಲಿಲ್ಲ.


ಕೊರಿಂಥಿಯರಿಗೆ ೨ ೭:೩
ನಿಮ್ಮನ್ನು ನಿಂದಿಸುವುದಕ್ಕಾಗಿ ಇದನ್ನು ನಾನು ಹೇಳುತ್ತಿಲ್ಲ; ಈ ಮೊದಲೇ ನಿಮಗೆ ತಿಳಿಸಿರುವಂತೆ, ‘ಸತ್ತರೂ ಒಂದಾಗಿ ಸಾಯುತ್ತೇವೆ, ಬದುಕಿದರೂ ಒಂದಾಗಿ ಬದುಕುತ್ತೇವೆ,” ಎನ್ನುವಷ್ಟರ ಮಟ್ಟಿಗೆ ನೀವು ನನ್ನ ಹೃದಯದಲ್ಲಿದ್ದೀರಿ.


ಕೊರಿಂಥಿಯರಿಗೆ ೨ ೭:೧೦
ದೇವರ ಚಿತ್ತಾನುಸಾರ ಬಂದೊದಗುವ ದುಃಖವು ಹೃದಯ ಪರಿವರ್ತನೆಗೆ ಕಾರಣವಾಗುತ್ತದೆ; ಜೀವೋದ್ಧಾರಕ್ಕೆ ಎಡೆಮಾಡುತ್ತದೆ. ಕೇವಲ ಪ್ರಾಪಂಚಿಕವಾದ ದುಃಖವು ಸಾವಿಗೆ ಒಯ್ಯುತ್ತದೆ;


ಗಲಾತ್ಯರಿಗೆ ೪:೬
ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ.


ಎಫೆಸಿಯರಿಗೆ ೩:೧೭
ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.


ಎಫೆಸಿಯರಿಗೆ ೪:೧೮
ಅವರ ಮನಸ್ಸಿಗೆ ಕತ್ತಲು ಕವಿದಿದೆ. ಅವರು ಅಜ್ಞಾನಿಗಳೂ ಕಠಿಣ ಹೃದಯಿಗಳೂ ಆಗಿರುವುದರಿಂದ ದೇವರು ಕೊಡುವ ಜೀವಕ್ಕೆ ಹೊರತಾಗಿದ್ದಾರೆ.


ಎಫೆಸಿಯರಿಗೆ ೫:೧೯
ಕೀರ್ತನೆ, ಹಾಡು, ಭಕ್ತಿಗೀತೆ ಇವುಗಳಿಂದ ನಿಮ್ಮ ಭಾವಗಳನ್ನು ಪರಸ್ಪರ ವ್ಯಕ್ತಪಡಿಸಿರಿ. ಹೃದಯಾಂತರಾಳದಿಂದ ಹಾಡಿ ಪ್ರಭುವಿಗೆ ಸ್ತುತಿಸಲ್ಲಿಸಿರಿ.


ಎಫೆಸಿಯರಿಗೆ ೬:೬
ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಯನ್ನು ಮಾಡದಿರಿ. ಕ್ರಿಸ್ತಯೇಸುವಿನ ದಾಸರಂತೆ ದೈವೇಚ್ಛೆಯನ್ನು ಹೃದಯಪೂರ್ವಕವಾಗಿ ಈಡೇರಿಸಿರಿ.


ಫಿಲಿಪಿಯರಿಗೆ ೧:೪
ನಿಮಗೋಸ್ಕರ ಯಾವಾಗಲೂ ತುಂಬುಹೃದಯದಿಂದ ಪ್ರಾರ್ಥಿಸುತ್ತೇನೆ.


ಫಿಲಿಪಿಯರಿಗೆ ೨:೨೯
ಪ್ರಭುವಿನ ಹೆಸರಿನಲ್ಲಿ ನೀವು ಅವನನ್ನು ತುಂಬು ಹೃದಯದಿಂದ ಸ್ವಾಗತಿಸಿರಿ. ಅವನಂಥವರಿಗೆ ಸೂಕ್ತ ಗೌರವ ಸಲ್ಲಿಸಿರಿ.


ಕೊಲೊಸ್ಸೆಯರಿಗೆ ೩:೧೬
ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.


ತಿಮೊಥೇಯನಿಗ ೧ ೧:೫
ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.


ತಿಮೊಥೇಯನಿಗ ೧ ೬:೧೦
ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.


ತಿಮೊಥೇಯನಿಗ ೨ ೨:೨೨
ನೀನು ಯೌವನದ ಭಾವೋದ್ರೇಕಗಳಿಗೆ ತುತ್ತಾಗದೆ ಧರ್ಮ, ವಿಶ್ವಾಸ, ಪ್ರೀತಿ ಮತ್ತು ಶಾಂತಿ - ಇವುಗಳನ್ನು ರೂಢಿಸಿಕೋ. ಈ ದಿಸೆಯಲ್ಲಿ ಶುದ್ಧ ಹೃದಯದಿಂದ ದೇವರನ್ನು ಅರಸುವವನು ನಿನಗೆ ಆದರ್ಶವಾಗಿರಲಿ.


ಫಿಲೆಮೋನನಿಗೆ ೧:೭
ಸಹೋದರನೇ, ನಿನ್ನ ಪ್ರೀತಿಯನ್ನು ನೆನೆದು ನಾನು ಆನಂದವನ್ನೂ ಆದರಣೆಯನ್ನೂ ಪಡೆಯುತ್ತಿದ್ದೇನೆ. ದೇವಜನರೆಲ್ಲರ ಹೃದಯಗಳನ್ನು ನೀನು ಉಲ್ಲಾಸಪಡಿಸುತ್ತಿರುವೆ.


ಫಿಲೆಮೋನನಿಗೆ ೧:೨೦
ಹೌದು, ಪ್ರಿಯ ಸಹೋದರನೇ, ಪ್ರಭುವಿನ ಹೆಸರಿನಲ್ಲಿ ಇದೊಂದು ಉಪಕಾರವನ್ನು ನನಗೆ ಮಾಡಿಕೊಡು; ಕ್ರಿಸ್ತಯೇಸುವಿನಲ್ಲಿ ನನ್ನ ಹೃದಯ ಆನಂದಿಸುವಂತೆ ಮಾಡು.


ಹಿಬ್ರಿಯರಿಗೆ ೩:೭
ಆದಕಾರಣ ಪವಿತ್ರಾತ್ಮ ಹೇಳುವ ಪ್ರಕಾರ: “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು.


ಹಿಬ್ರಿಯರಿಗೆ ೩:೧೦
ಎಂತಲೇ ಆ ಜನರ ವಿರುದ್ಧ ಕೆರಳಿ ಇಂತೆಂದನು: ಹಾದಿ ತಪ್ಪಿದ ಹೃದಯಿಗಳು ಇವರೆಂದಿಗೂ, ಗ್ರಹಿಸಿಕೊಳ್ಳರಿವರು ಎನ್ನ ಮಾರ್ಗವನು


ಹಿಬ್ರಿಯರಿಗೆ ೩:೧೫
“ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು ಮರುಭೂಮಿಯಲಿ ದೇವರ ವಿರುದ್ಧ ದಂಗೆಯೆದ್ದವರವರು.”


ಹಿಬ್ರಿಯರಿಗೆ ೪:೭
ಈ ಕಾರಣದಿಂದಲೇ ದೇವರು, “ಇಂದು” ಎಂದು ಬೇರೊಂದು ದಿನವನ್ನು ಗೊತ್ತುಮಾಡುತ್ತಾರೆ. ಈ ದಿನವನ್ನು ಕುರಿತೇ ದೀರ್ಘಕಾಲದ ನಂತರ ದಾವೀದನ ಮುಖಾಂತರ: “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು,” ಎಂದು ಹೇಳಿದ್ದಾರೆ.


ಹಿಬ್ರಿಯರಿಗೆ ೪:೧೨
ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.


ಹಿಬ್ರಿಯರಿಗೆ ೮:೧೦
ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.


ಹಿಬ್ರಿಯರಿಗೆ ೧೦:೧೬
“ಆ ದಿನಗಳು ಬಂದಮೇಲೆ ನಾನು ಅವರೊಡನೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು: ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ನಾಟಿಸುವೆನು; ಅವರ ಮನದಲ್ಲಿ ಬರೆಯುವೆನು.” ಎಂದು ಹೇಳಿದ ನಂತರವೇ,


ಹಿಬ್ರಿಯರಿಗೆ ೧೦:೨೨
ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.


ಹಿಬ್ರಿಯರಿಗೆ ೧೩:೯
ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ.


ಯಕೋಬನು ೧:೨೦
ಮಾನವನ ಕೋಪ ದೇವನೀತಿಗೆ ಧಕ್ಕೆ! ಆದುದರಿಂದ ನಿಮ್ಮಲ್ಲಿರುವ ಎಲ್ಲ ನೀಚತನವನ್ನು ಮತ್ತು ಬೆಳೆಯುತ್ತಿರುವ ದುಷ್ಟತನವನ್ನು ಕಿತ್ತೊಗೆಯಿರಿ. ನಿಮ್ಮ ಹೃದಯದಲ್ಲಿ ದೇವರು ನೆಟ್ಟಿರುವ ವಾಕ್ಯವನ್ನು ನಮ್ರತೆಯಿಂದ ಪರಿಗ್ರಹಿಸಿರಿ. ಇದು ನಿಮ್ಮ ಜೀವೋದ್ಧಾರಮಾಡಬಲ್ಲದು.


ಯಕೋಬನು ೩:೧೪
ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.


ಯಕೋಬನು ೪:೮
ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ಪೇತ್ರನು ೧ ೩:೧೫
ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ.


ಪೇತ್ರನು ೨ ೧:೧೯
ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.


ಪೇತ್ರನು ೨ ೨:೮
ಆತನು ಆ ದುರ್ಜನರ ನಡುವೆ ಬಾಳುತ್ತಾ ಅವರ ದುಷ್ಕೃತ್ಯಗಳನ್ನು ಕಂಡು ಕೇಳುತ್ತಿದ್ದಾಗ, ಅವನ ನಿರ್ಮಲ ಹೃದಯ ದಿನೇದಿನೇ ಅತೀವ ವೇದನೆಯನ್ನು ಅನುಭವಿಸುತ್ತಿತ್ತು.


ಯೂದನು ೧:೨೨
ಸಂಶಯಪಡುವವರಿಗೆ ಸಹೃದಯದಿಂದ ನೆರವಾಗಿರಿ.


ಪ್ರಕಟನೆ ೧೮:೭
ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು: ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


Kannada Bible (KNCL) 2016
No Data