A A A A A

ಹೆಚ್ಚುವರಿ: [ಆಲ್ಕೋಹಾಲ್]


ಪೇತ್ರನು ೧ ೪:೩
ಮೊದಲು, ನಂಬಿಕೆಯಿಲ್ಲದ ಜನರು ಮಾಡುವಂತಹ ಕಾರ್ಯಗಳನ್ನು ಮಾಡುತ್ತಾ ಬಹಳ ಕಾಲವನ್ನು ವ್ಯರ್ಥಗೊಳಿಸಿ ಬಿಟ್ಟಿರುವಿರಿ. ನೀವು ಲೈಂಗಿಕ ಪಾಪಗಳನ್ನು ಮಾಡುತ್ತಿದ್ದರಿ; ಇಷ್ಟವಾದ ಕೆಟ್ಟಕಾರ್ಯಗಳನ್ನು ಮಾಡುತ್ತಿದ್ದಿರಿ; ಕುಡುಕರಾಗಿದ್ದಿರಿ, ಕ್ರೂರಿಗಳಾಗಿದ್ದಿರಿ; ಅಸಹ್ಯಕರವಾದ ನಿರರ್ಥಕ ಗೋಷ್ಠಿಗಳನ್ನು ಮತ್ತು ಮದ್ಯಪಾನಗೋಷ್ಠಿಗಳನ್ನು ನಡೆಸುತ್ತಿದ್ದಿರಿ; ವಿಗ್ರಹಾರಾಧನೆ ಮಾಡುತ್ತಿದ್ದಿರಿ.

ತಿಮೊಥೇಯನಿಗ ೧ ೫:೨೩
ತಿಮೊಥೆಯನೇ, ನೀನು ನೀರನ್ನು ಮಾತ್ರ ಕುಡಿಯದೆ ಸ್ವಲ್ಪ ದ್ರಾಕ್ಷಾರಸವನ್ನು ಸಹ ಕುಡಿಯಬೇಕು. ಇದರಿಂದ ನಿನ್ನ ಜೀರ್ಣಶಕ್ತಿಯು ಹೆಚ್ಚುವುದರಿಂದ ಪದೇಪದೇ ಅಸ್ವಸ್ಥನಾಗುವುದಿಲ್ಲ.

ಉಪದೇಷಕ ೯:೭
ಆದ್ದರಿಂದ ಹೋಗು, ಊಟಮಾಡಿ ಸಂತೋಷಪಡು; ದ್ರಾಕ್ಷಾರಸವನ್ನು ಕುಡಿದು ಉಲ್ಲಾಸಿಸು; ನಿನ್ನ ಈ ನಡತೆಯು ದೇವರಿಗೆ ಮೆಚ್ಚಿಕೆಯಾಗಿದೆ.

ಎಫೆಸಿಯರಿಗೆ ೫:೧೮
ಮದ್ಯಪಾನಮಾಡಿ ಮತ್ತರಾಗಬೇಡಿ, ಅದು ಪಾಪಕೃತ್ಯಗಳಿಗೆ ನಡೆಸುತ್ತದೆ, ಆದರೆ ಯಾವಾಗಲೂ ಪವಿತ್ರಾತ್ಮಭರಿತರಾಗಿರಿ.

ಜ್ಞಾನೋಕ್ತಿಗಳು ೨೦:೧
ದ್ರಾಕ್ಷಾರಸವು ಪರಿಹಾಸ್ಯಕ್ಕೂ ಮದ್ಯವು ಕೂಗಾಟಕ್ಕೂ ನಡೆಸುತ್ತವೆ. ಅಮಲೇರಿಸಿಕೊಳ್ಳುವುದು ಮೂರ್ಖತನ.

ಜ್ಞಾನೋಕ್ತಿಗಳು ೨೩:೩೧
ಆದ್ದರಿಂದ ಮದ್ಯದ ಬಗ್ಗೆ ಎಚ್ಚರಿಕೆಯಾಗಿರು. ಅದು ಅಂದವಾಗಿದ್ದು ಕೆಂಪಗೆ ಥಳಥಳಿಸುತ್ತದೆ. ನೀನು ಅದನ್ನು ಕುಡಿದಾಗ, ನಯವಾಗಿ ಇಳಿದುಹೋಗುತ್ತದೆ.

ರೋಮನರಿಗೆ ೧೩:೧೩
ಹಗಲಿಗೆ ಸೇರಿದ ಜನರಂತೆ ಸರಿಯಾದ ರೀತಿಯಲ್ಲಿ ಜೀವಿಸೋಣ. ಕೆಟ್ಟದಾದ ಮತ್ತು ವ್ಯರ್ಥವಾದ ಔತಣಕೂಟಗಳನ್ನು ನಾವು ಏರ್ಪಡಿಸಕೂಡದು; ಕುಡಿದು ಮತ್ತರಾಗಕೂಡದು; ನಾವು ಲೈಂಗಿಕ ಪಾಪವನ್ನಾಗಲಿ ನಮ್ಮ ದೇಹದಿಂದ ಯಾವುದೇ ಬಗೆಯ ಪಾಪವನ್ನಾಗಲಿ ಮಾಡಕೂಡದು; ವಾಗ್ವಾದಗಳನ್ನಾಗಲಿ ಜಗಳಗಳನ್ನಾಗಲಿ ಎಬ್ಬಿಸಬಾರದು; ಅಲ್ಲದೆ ಹೊಟ್ಟೆಕಿಚ್ಚುಪಡಬಾರದು.

ಜ್ಞಾನೋಕ್ತಿಗಳು ೩೧:೪-೫
[೪] ಲೆಮೂವೇಲನೇ, ರಾಜರುಗಳು ಮದ್ಯವನ್ನು ಕುಡಿಯುವುದು ಒಳ್ಳೆಯದಲ್ಲ. ಮದ್ಯಪಾನ ಆಳುವವರಿಗೆ ಒಳ್ಳೆಯದಲ್ಲ.[೫] ಅವರು ಅತಿಯಾಗಿ ಕುಡಿದು ಕಟ್ಟಳೆಗಳನ್ನು ಮರೆತು ಬಡವರ ಹಕ್ಕುಗಳನ್ನೆಲ್ಲ ರದ್ದುಮಾಡುವರು.

ಕೀರ್ತನೆಗಳು ೧೦೪:೧೪-೧೫
[೧೪] ನೀನು ಪಶುಗಳಿಗೋಸ್ಕರ ಹುಲ್ಲನ್ನು ಬೆಳೆಯ ಮಾಡುವೆ. ನಾವು ದುಡಿದು ಬೆಳೆಸುವುದಕ್ಕಾಗಿ ಸಸಿಗಳನ್ನು ಕೊಟ್ಟಿರುವೆ. ಅವು ಬೆಳೆದು ನಮಗೆ ಆಹಾರವನ್ನು ಒದಗಿಸುತ್ತವೆ.[೧೫] ನಮ್ಮನ್ನು ಸಂತೋಷಪಡಿಸುವ ದ್ರಾಕ್ಷಾರಸವನ್ನೂ ನಮ್ಮ ಚರ್ಮವನ್ನು ಮೃದುಗೊಳಿಸುವ ಎಣ್ಣೆಯನ್ನೂ ನಮ್ಮನ್ನು ಬಲಗೊಳಿಸುವ ಆಹಾರವನ್ನೂ ನಮಗೆ ದೇವರು ಕೊಡುತ್ತಾನೆ.

ಕೊರಿಂಥಿಯರಿಗೆ ೧ ೧೦:೨೩-೨೪
[೨೩] "ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ನಾವು ಮಾಡುವ ಕಾರ್ಯಗಳೆಲ್ಲಾ ಒಳ್ಳೆಯವೆಂದು ಹೇಳುವುದು ಸರಿಯಲ್ಲ. “ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಸ್ವಾತಂತ್ರ್ಯವಿದೆ.” ಆದರೆ ಕೆಲವು ಕಾರ್ಯಗಳು ಬೇರೆಯವರ ಅಭಿವೃದ್ಧಿಗೆ ಸಹಾಯಕವಾಗಿರುವುದಿಲ್ಲ.[೨೪] ಪ್ರತಿಯೊಬ್ಬನೂ ತನಗೆ ಮಾತ್ರ ಹಿತಕರವಾದ ಕಾರ್ಯಗಳನ್ನು ಮಾಡದೆ ಬೇರೆಯವರಿಗೂ ಹಿತಕರವಾದ ಕಾರ್ಯಗಳನ್ನು ಮಾಡಲು ಪ್ರಯತ್ನಿಸಬೇಕು.

ಯೆಶಾಯನ ೬೨:೮-೯
[೮] ಯೆಹೋವನು ವಾಗ್ದಾನವನ್ನು ಮಾಡಿರುತ್ತಾನೆ. ಆತನ ಸ್ವಂತ ಹೆಸರೇ ಅದಕ್ಕೆ ಸಾಕ್ಷಿಯಾಗಿದೆ. ಆತನು ತನ್ನ ಸಾಮರ್ಥ್ಯದಿಂದ ವಾಗ್ದಾನವನ್ನು ನೆರವೇರಿಸುವನು. ಯೆಹೋವನು ಹೇಳಿದ್ದೇನೆಂದರೆ, “ನಿನ್ನ ಆಹಾರವನ್ನು ನಾನು ನಿನ್ನ ವೈರಿಗಳಿಗೆ ಮತ್ತೆ ಕೊಡುವದಿಲ್ಲವೆಂದು ವಾಗ್ದಾನ ಮಾಡುತ್ತೇನೆ. ನೀನು ತಯಾರಿಸುವ ದ್ರಾಕ್ಷಾರಸವನ್ನು ಇನ್ನು ಮುಂದೆ ನಿನ್ನ ವೈರಿಗಳು ಸೇವಿಸುವದಿಲ್ಲವೆಂದು ನಾನು ವಾಗ್ದಾನ ಮಾಡುತ್ತೇನೆ.[೯] ಒಬ್ಬನು ಆಹಾರವನ್ನು ಒಟ್ಟುಗೂಡಿಸಿ ತಾನೇ ತಿನ್ನುವನು. ಅವನು ದೇವರನ್ನು ಸ್ತುತಿಸುವನು. ದ್ರಾಕ್ಷಿಹಣ್ಣನ್ನು ಶೇಖರಿಸುವವನು ಅದರ ರಸವನ್ನು ಕುಡಿಯುವನು. ಇವೆಲ್ಲವೂ ನನ್ನ ಪರಿಶುದ್ಧ ದೇಶದಲ್ಲಿ ಆಗುವದು.”

ಗಲಾತ್ಯರಿಗೆ ೫:೧೯-೨೧
[೧೯] ನಮ್ಮ ಶರೀರಭಾವವು ಮಾಡುವ ಕೆಟ್ಟ ಸಂಗತಿಗಳು ಸ್ಪಷ್ಟವಾಗಿವೆ. ಜಾರತ್ವ, ಅಶುದ್ಧತ್ವ, ಲೈಂಗಿಕಪಾಪ,[೨೦] ಸುಳ್ಳುದೇವರುಗಳ ಆರಾಧನೆ, ಮಾಟಮಂತ್ರ, ದ್ವೇಷ, ಜಗಳ, ಹೊಟ್ಟೆಕಿಚ್ಚು, ಕಡುಕೋಪ, ಸ್ವಾರ್ಥ, ಸಿಟ್ಟು, ಕಕ್ಷಭೇದ,[೨೧] ಮತ್ಸರ, ಕುಡಿಕತನ ಮತ್ತು ಸ್ವೇಚ್ಫಾಚಾರದ ಕೂಟ, ಮೊದಲಾದವುಗಳೇ. ನಾನು ನಿಮ್ಮನ್ನು ಮೊದಲು ಎಚ್ಚರಿಸಿದಂತೆ ಈಗಲೂ ಎಚ್ಚರಿಸುತ್ತೇನೆ. ಇಂಥವುಗಳನ್ನು ಮಾಡುವ ಜನರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.

ಕೊರಿಂಥಿಯರಿಗೆ ೧ ೯:೧೯-೨೩
[೧೯] ನಾನು ಸ್ವತಂತ್ರನಾಗಿದ್ದೇನೆ; ಯಾರ ಅಧೀನದಲ್ಲಿಯೂ ಇಲ್ಲ. ಆದರೆ ನನ್ನಿಂದ ಸಾಧ್ಯವಾದಷ್ಟು ಜನರನ್ನು ರಕ್ಷಣಾ ಮಾರ್ಗಕ್ಕೆ ನಡೆಸಲು ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಳ್ಳುತ್ತೇನೆ.[೨೦] ಯೆಹೂದ್ಯರನ್ನು ರಕ್ಷಣಾಮಾರ್ಗಕ್ಕೆ ತರಲು ಅವರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಾಗಿಲ್ಲದಿದ್ದರೂ ಧರ್ಮಶಾಸ್ತ್ರಕ್ಕೆ ಅಧೀನರಾಗಿರುವ ಜನರನ್ನು ರಕ್ಷಣಾಮಾರ್ಗಕ್ಕೆ ತರಬೇಕೆಂದು ಧರ್ಮಶಾಸ್ತ್ರಕ್ಕೆ ಅಧೀನನಾದೆನು.[೨೧] ಧರ್ಮಶಾಸ್ತ್ರವಿಲ್ಲದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಧರ್ಮಶಾಸ್ತ್ರವಿಲ್ಲದ ವ್ಯಕ್ತಿಯಂತಾದೆನು. (ಆದರೆ ನಿಜವಾಗಿಯೂ, ನಾನು ಧರ್ಮಶಾಸ್ತ್ರವಿಲ್ಲದವನಲ್ಲ. ನಾನು ಕ್ರಿಸ್ತನ ಧರ್ಮಶಾಸ್ತ್ರಕ್ಕೆ ಅಧೀನನಾಗಿದ್ದೇನೆ.)[೨೨] ಬಲಹೀನರಾದ ಜನರನ್ನು ರಕ್ಷಣಾಮಾರ್ಗಕ್ಕೆ ನಡೆಸಬೇಕೆಂದು ಅವರಿಗೆ ಬಲಹೀನನಂತಾದೆನು. ಯಾವ ರೀತಿಯಲ್ಲಾದರೂ ರಕ್ಷಣಾ ಮಾರ್ಗಕ್ಕೆ ನಡೆಸಬೇಕೆಂದು ಯಾರ್ಯಾರಿಗೆ ಎಂಥೆಂಥವನಾಗಬೇಕೋ ಅಂಥಂಥವನಾದೆನು.[೨೩] ಇವುಗಳನ್ನೆಲ್ಲ ಮಾಡುವುದು ಸುವಾರ್ತೆಗಾಗಿಯೇ. ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇವುಗಳನ್ನೆಲ್ಲ ಮಾಡುತ್ತೇನೆ.

ರೋಮನರಿಗೆ ೧೪:೧೫-೨೧
[೧೫] ನೀನು ತಿನ್ನುವ ಒಂದು ಆಹಾರಪದಾರ್ಥದಿಂದ ನಿನ್ನ ಸಹೋದರನ ನಂಬಿಕೆಗೆ ನೀನು ತೊಂದರೆಯನ್ನು ಮಾಡಿದರೆ, ನೀನು ಪ್ರೀತಿಯ ಮಾರ್ಗವನ್ನು ನಿಜವಾಗಿಯೂ ಅನುಸರಿಸುತ್ತಿಲ್ಲ. ಒಬ್ಬನು ಯಾವುದಾದರೂ ಆಹಾರಪದಾರ್ಥವನ್ನು ತಿನ್ನುವುದು ತಪ್ಪೆಂದು ಭಾವಿಸಿಕೊಂಡಿರುವಾಗ, ನೀನು ಆ ಪದಾರ್ಥವನ್ನು ತಿಂದರೆ ಅವನ ನಂಬಿಕೆ ಹಾಳಾಗುವುದು. ಆದ್ದರಿಂದ ನೀನು ಹಾಗೆ ಮಾಡಕೂಡದು. ಕ್ರಿಸ್ತನು ಆ ವ್ಯಕ್ತಿಗಾಗಿಯೂ ಸತ್ತನು.[೧೬] ನೀನು ಯಾವುದನ್ನು ಒಳ್ಳೆಯದೆಂದು ಆಲೋಚಿಸುವಿಯೋ ಅದು ಬೇರೆಯವರಿಂದ ಕೆಟ್ಟದ್ದು ಎಂಬ ಟೀಕೆಗೆ ಒಳಗಾಗದಂತೆ ಎಚ್ಚರವಹಿಸು.[೧೭] ದೇವರ ರಾಜ್ಯದಲ್ಲಿ ತಿನ್ನುವುದಾಗಲಿ ಕುಡಿಯುವುದಾಗಲಿ ಮುಖ್ಯವಲ್ಲ. ನೀತಿಯೂ ಸಮಾಧಾನವೂ ಪವಿತ್ರಾತ್ಮನಿಂದಾಗುವ ಆನಂದವೂ ಅಲ್ಲಿ ಮುಖ್ಯವಾಗಿವೆ.[೧೮] ಈ ರೀತಿಯಲ್ಲಿ ಕ್ರಿಸ್ತನ ಸೇವೆಮಾಡುವವನು ದೇವರನ್ನು ಮೆಚ್ಚಿಸುವವನಾಗಿದ್ದಾನೆ. ಜನರೂ ಅವನನ್ನು ಸ್ವೀಕರಿಸಿಕೊಳ್ಳುವರು.[೧೯] ಆದ್ದರಿಂದ ಸಮಾಧಾನವನ್ನು ಉಂಟುಮಾಡುವ ಕಾರ್ಯಗಳನ್ನು ನಮ್ಮಿಂದ ಸಾಧ್ಯವಾದಷ್ಟರ ಮಟ್ಟಿಗೆ ಮಾಡಲು ನಾವು ಪ್ರಯತ್ನಿಸೋಣ. ಪರಸ್ಪರ ಸಹಾಯಕವಾದ ಕಾರ್ಯಗಳನ್ನೇ ಮಾಡಲು ನಾವು ಪ್ರಯತ್ನಿಸೋಣ. ದೇವರ ಕಾರ್ಯವನ್ನು ನಾಶಪಡಿಸಲು ಆಹಾರಕ್ಕೆ ಅವಕಾಶ ಕೊಡಬೇಡಿ.[೨೦] ಎಲ್ಲಾ ಆಹಾರಪದಾರ್ಥಗಳು ಶುದ್ಧವಾಗಿವೆ ಮತ್ತು ತಿನ್ನಲು ಯೋಗ್ಯವಾಗಿವೆ. ಆದರೆ ಒಬ್ಬನು ತಾನು ತಿನ್ನುವ ಆಹಾರಪದಾರ್ಥದ ಮೂಲಕ ಮತ್ತೊಬ್ಬ ವ್ಯಕ್ತಿಯನ್ನು ಪಾಪಕ್ಕೆ ಬೀಳಿಸುವುದಾಗಿದ್ದರೆ, ಅವನು ಆ ಪದಾರ್ಥವನ್ನು ತಿನ್ನುವುದೇ ತಪ್ಪು.[೨೧] ನೀನು ಮಾಂಸ ತಿನ್ನುವುದು ಅಥವಾ ದ್ರಾಕ್ಷಾರಸ ಕುಡಿಯುವುದು, ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವುದಾಗಿದ್ದರೆ ಮಾಂಸವನ್ನು ತಿನ್ನದೆ, ದ್ರಾಕ್ಷಾರಸವನ್ನು ಕುಡಿಯದೇ ಇರುವುದು ಉತ್ತಮ. ನಿನ್ನ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ಪಾಪಕ್ಕೆ ಬೀಳಿಸುವಂಥದ್ದನ್ನು ಮಾಡದಿರುವುದೇ ಉತ್ತಮ.

ಯೊವಾನ್ನನು ೨:೩-೧೧
[೩] ಮದುವೆಯಲ್ಲಿ ಸಾಕಷ್ಟು ದ್ರಾಕ್ಷಾರಸವಿರಲಿಲ್ಲ. ಇದ್ದ ದ್ರಾಕ್ಷಾರಸವೆಲ್ಲಾ ಮುಗಿದುಹೋದಾಗ ಯೇಸುವಿನ ತಾಯಿಯು ಆತನಿಗೆ, “ಅವರಲ್ಲಿ ದ್ರಾಕ್ಷಾರಸವೇ ಇಲ್ಲ” ಎಂದು ತಿಳಿಸಿದಳು.[೪] ಯೇಸು, “ಅಮ್ಮಾ, ನನ್ನ ಗೊಡವೆ ನಿನಗೇಕೆ? ನನ್ನ ಸಮಯ ಇನ್ನೂ ಬಂದಿಲ್ಲ” ಎಂದು ಉತ್ತರಕೊಟ್ಟನು.[೫] ಯೇಸುವಿನ ತಾಯಿ ಸೇವಕರಿಗೆ, “ಯೇಸು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ” ಎಂದು ಹೇಳಿದಳು.[೬] ಕಲ್ಲಿನಿಂದ ಮಾಡಿದ ಆರು ದೊಡ್ಡ ಬಾನೆಗಳು ಅಲ್ಲಿದ್ದವು. ಯೆಹೂದ್ಯರು ಶುದ್ಧಾಚಾರಗಳಿಗಾಗಿ ಈ ಕಲ್ಲಿನ ಬಾನೆಗಳನ್ನು ಉಪಯೋಗಿಸುತ್ತಿದ್ದರು. ಪ್ರತಿಯೊಂದು ಬಾನೆಯೂ ಸುಮಾರು ನೂರು ಲೀಟರ್‌ಗಳಷ್ಟು ನೀರು ಹಿಡಿಯುತ್ತಿತ್ತು.[೭] ಯೇಸು ಸೇವಕರಿಗೆ, “ಆ ಬಾನೆಗಳಲ್ಲಿ ನೀರನ್ನು ತುಂಬಿರಿ” ಎಂದು ಹೇಳಿದನು. ಅಂತೆಯೇ ಸೇವಕರು ಆ ಬಾನೆಗಳ ಕಂಠದವರೆಗೂ ನೀರನ್ನು ತುಂಬಿದರು.[೮] ಬಳಿಕ ಯೇಸು ಸೇವಕರಿಗೆ, “ಈಗ ಸ್ವಲ್ಪ ನೀರನ್ನು ತೆಗೆದುಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿರಿ” ಎಂದು ಹೇಳಿದನು. ಅಂತೆಯೇ ಅವರು ಅದನ್ನು ತೆಗೆದುಕೊಂಡು ಹೋದರು.[೯] ಮದುವೆಯ ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರನ್ನು ರುಚಿ ನೋಡಿದನು. ದ್ರಾಕ್ಷಾರಸವು ಎಲ್ಲಿಂದ ಬಂತೆಂಬುದು ಅವನಿಗೆ ಗೊತ್ತಿರಲಿಲ್ಲ. ಆದರೆ ಅದು ಆ ಸೇವಕರಿಗೆ ತಿಳಿದಿತ್ತು. ಮದುವೆಯ ಮೇಲ್ವಿಚಾರಕನು ಮದುಮಗನನ್ನು ಕರೆದು,[೧೦] “ಜನರು ಉತ್ತಮವಾದ ದ್ರಾಕ್ಷಾರಸವನ್ನು ಯಾವಾಗಲೂ ಮೊದಲು ಹಂಚುತ್ತಾರೆ. ಅತಿಥಿಗಳು ಕುಡಿದು ಮತ್ತರಾದ ಮೇಲೆ ಅವರಿಗೆ ಕಡಿಮೆ ದರ್ಜೆಯ ದ್ರಾಕ್ಷಾರಸವನ್ನು ಕೊಡುತ್ತಾರೆ. ಆದರೆ ನೀನು ಉತ್ತಮವಾದ ದ್ರಾಕ್ಷಾರಸವನ್ನು ಈವರೆಗೂ ಇಟ್ಟಿರುವೆ!” ಎಂದು ಹೇಳಿದನು.[೧೧] ಯೇಸು ಮಾಡಿದ ಮೊದಲನೆಯ ಅದ್ಭುತಕಾರ್ಯವಿದು. ಯೇಸು ಇದನ್ನು ಗಲಿಲಾಯದ ಕಾನಾ ಊರಿನಲ್ಲಿ ಮಾಡಿ ತನ್ನ ಮಹತ್ವವನ್ನು ತೋರಿದನು. ಆತನ ಶಿಷ್ಯರೂ ಆತನಲ್ಲಿ ನಂಬಿಕೆ ಇಟ್ಟರು.

Kannada Bible 1934
Public Domain: 1934