A A A A A

ಏಂಜಲ್ಸ್ ಮತ್ತು ರಾಕ್ಷಸರು: [ಏಂಜಲ್ಸ್]


ಆದಿಕಾಂಡ ೨:೧
ಹೀಗೆ ಭೂಮಿಯೂ ಆಕಾಶವೂ ಅವುಗಳಲ್ಲಿರುವ ಪ್ರತಿಯೊಂದೂ ನಿರ್ಮಿತವಾದವು.

ಕೊಲೊಸ್ಸೆಯರಿಗೆ ೧:೧೬
ಭೂಲೋಕ ಮತ್ತು ಪರಲೋಕಗಳಲ್ಲಿರುವ ಎಲ್ಲವುಗಳು,

ಯೋಬನ ೩೮:೧-೭
[೧] ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು:[೨] “ನನ್ನ ಉದ್ದೇಶಗಳನ್ನು ಮೂರ್ಖತನದ ಮಾತುಗಳಿಂದ ಗಲಿಬಿಲಿಗೊಳಿಸುತ್ತಿರುವ ಈ ಮನುಷ್ಯನು ಯಾರು?[೩] ಯೋಬನೇ, ನಡುಕಟ್ಟಿಕೊಂಡು ಬಲಿಷ್ಠನಾಗಿರು. ನಾನು ನಿನಗೆ ಕೇಳುವ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧನಾಗು.[೪] “ಯೋಬನೇ, ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದೆ? ನೀನು ಬಹು ಜಾಣನಾಗಿದ್ದರೆ ನನಗೆ ಉತ್ತರಕೊಡು.[೫] ಯೋಬನೇ, ಭೂಮಿಯ ಅಳತೆಗಳನ್ನು ಯಾರು ನಿರ್ಧರಿಸಿದರು? ನಿನಗೆ ಅದು ತಿಳಿದದೆ. ಭೂಮಿಯ ಅಳತೆಯನ್ನು ನೂಲುಗುಂಡಿನಿಂದ ಅಳೆದವರು ಯಾರು?[೬] ಭೂಮಿಯ ಆಧಾರಸ್ತಂಭಗಳು ಯಾವುದರ ಮೇಲೆ ನೆಲೆಗೊಂಡಿವೆ? ಭೂಮಿಯ ಅಸ್ತಿವಾರಕ್ಕೆ ಮೊದಲ ಕಲ್ಲನ್ನು ಹಾಕಿದವರು ಯಾರು?[೭] ಅದು ಸಂಭವಿಸಿದಾಗ, ಮುಂಜಾನೆಯ ನಕ್ಷತ್ರಗಳು ಒಟ್ಟಾಗಿ ಹಾಡಿದವು; ದೇವದೂತರುಗಳು ಆನಂದಘೋಷ ಮಾಡಿದರು!

ಲೂಕನು ೨೦:೩೫-೩೬
[೩೫] ಪುನರುತ್ಥಾನಕ್ಕೆ ಯೋಗ್ಯರಾದ ಕೆಲವು ಜನರು ಜೀವಂತವಾಗಿ ಎದ್ದುಬಂದು ಮತ್ತೆ ಜೀವಿಸುತ್ತಾರೆ. ಆ ಹೊಸ ಜೀವನದಲ್ಲಿ ಅವರು ಮದುವೆ ಆಗುವುದಿಲ್ಲ.[೩೬] ಆ ಜೀವನದಲ್ಲಿ ಅವರು ದೇವದೂತರಂತಿರುತ್ತಾರೆ. ಅವರಿಗೆ ಮರಣವೂ ಇರುವುದಿಲ್ಲ. ಅವರು ದೇವರ ಮಕ್ಕಳಾಗಿರುತ್ತಾರೆ, ಏಕೆಂದರೆ ಅವರು ಪುನರುತ್ಥಾನ ಹೊಂದಿದವರಾಗಿದ್ದಾರೆ.

ಪ್ರಕಟನೆ ೪:೮
ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು:

ಮತ್ತಾಯನು ೨೨:೩೦
ಸ್ತ್ರೀಯರು ಮತ್ತು ಪುರುಷರು ಪುನರುತ್ಥಾನ ಹೊಂದಿದ ಮೇಲೆ ಮದುವೆ ಮಾಡಿಕೊಳ್ಳುವುದಿಲ್ಲ. ಅವರೆಲ್ಲರೂ ಪರಲೋಕದ ದೇವದೂತರಂತೆ ಇರುತ್ತಾರೆ.

ಸಮುವೇಲನು ೨ ೧೪:೧೭
ರಾಜನಾದ ನನ್ನ ಒಡೆಯನ ಮಾತುಗಳು ನನಗೆ ವಿಶ್ರಾಂತಿಯನ್ನು ಕೊಡುತ್ತವೆ ಎಂದು ನನಗೆ ತಿಳಿದಿರುವುದರಿಂದ ನಿನ್ನ ಬಳಿಗೆ ಬಂದಿರುವೆನು. ಏಕೆಂದರೆ ನೀನು ದೇವದೂತನಂತಿರುವೆ. ಯಾವುದು ಒಳ್ಳೆಯದು, ಯಾವುದು ಕೆಟ್ಟದ್ದು ಎಂಬುದು ನಿನಗೆ ತಿಳಿದಿದೆ. ನಿನ್ನ ದೇವರಾದ ಯೆಹೋವನು ನಿನ್ನೊಂದಿಗಿರುವನು” ಎಂದು ಹೇಳಿದಳು.

ಲೂಕನು ೧೫:೧೦
ಅದೇರೀತಿ ಒಬ್ಬ ಪಾಪಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವಾಗ ದೇವದೂತರ ಮುಂದೆ ಸಂತೋಷವಾಗುವುದು.”

ಪ್ರಕಟನೆ ೧೪:೬
ನಂತರ ಇನ್ನೊಬ್ಬ ದೇವದೂತನು ವಾಯುಮಂಡಲದಲ್ಲಿ ಅತಿ ಎತ್ತರದಲ್ಲಿ ಹಾರುತ್ತಿರುವುದನ್ನು ನಾನು ನೋಡಿದೆನು. ಭೂಮಿಯ ಮೇಲೆ ವಾಸಿಸುವ ಸಕಲ ಜನಾಂಗ, ಕುಲ, ಪ್ರಜೆ, ಭಾಷೆಗಳ ಜನರಿಗೆಲ್ಲಾ ಬೋಧಿಸುವುದಕ್ಕೆ ನಿತ್ಯವಾದ ಸುವಾರ್ತೆಯು ಆ ದೇವದೂತನಲ್ಲಿತ್ತು.

ಯೋಬನ ೪:೧೫-೧೮
[೧೫] ಯಾವುದೋ ಒಂದು ಉಸಿರು ನನ್ನ ಮುಖಕ್ಕೆ ಸುಳಿಯಲು ಮೈಯೆಲ್ಲಾ ರೋಮಾಂಚನಗೊಂಡಿತು.[೧೬] ಯಾವುದೋ ಒಂದು ಆತ್ಮ ನನ್ನ ಕಣ್ಣೆದುರಿನಲ್ಲಿ ಬಂದು ನಿಂತುಕೊಂಡಿತು; ಅದು ಏನೆಂಬುದು ನನಗೆ ಗೊತ್ತಾಗಲಿಲ್ಲ. ಸೂಕ್ಷ್ಮ ಧ್ವನಿಯೊಂದು ನನಗೆ ಕೇಳಿಬಂತು.[೧೭] ಅದೇನೆಂದರೆ: ‘ದೇವರಿಗಿಂತಲೂ ನೀತಿವಂತನಾದ ಮನುಷ್ಯನಿರುವನೇ? ಮನುಷ್ಯನು ತನ್ನ ಸೃಷ್ಟಿಕರ್ತನಿಗಿಂತಲೂ ಶುದ್ಧನಾಗಿರುವನೇ?[೧೮] ದೇವರು ತನ್ನ ಪರಲೋಕದ ಸೇವಕರುಗಳಲ್ಲಿಯೂ ಭರವಸವಿಡುವುದಿಲ್ಲ. ದೇವರು ತನ್ನ ದೂತರುಗಳಲ್ಲಿಯೂ ತಪ್ಪನ್ನು ಕಂಡುಹಿಡಿಯುವನು.

ಯೆಶಾಯನ ೧೪:೧೨-೧೪
[೧೨] ನೀನು ಉದಯ ನಕ್ಷತ್ರದಂತೆ ಇರುವೆ. ಆದರೆ ನೀನು ಆಕಾಶದಿಂದ ಕೆಳಗೆ ಬಿದ್ದಿರುವೆ. ಹಿಂದಿನ ಕಾಲದಲ್ಲಿ ಲೋಕದ ಎಲ್ಲಾ ರಾಜ್ಯಗಳು ನಿನಗೆ ಅಡ್ಡಬಿದ್ದವು. ಆದರೆ ಈಗ ನೀನು ಉರುಳಿಸಲ್ಪಟ್ಟಿರುವೆ.[೧೩] ನೀನು ಯಾವಾಗಲೂ ನಿನ್ನೊಳಗೆ, “ನಾನು ಉನ್ನತವಾದ ಆಕಾಶಕ್ಕೆ ಹೋಗುವೆನು. ನಾನು ದೇವರ ನಕ್ಷತ್ರಗಳಿಗಿಂತ ಮೇಲೆ ನನ್ನ ಸಿಂಹಾಸನವನ್ನು ಸ್ಥಾಪಿಸುವೆನು. ನಾನು ಜಾಫೋನ್ ಎಂಬ ಪವಿತ್ರ ಪರ್ವತದಲ್ಲಿ ಕುಳಿತುಕೊಳ್ಳುವೆನು. ಆ ಪರ್ವತದಲ್ಲಿ ನಾನು ದೇವರುಗಳನ್ನು ಸಂಧಿಸುವೆನು.[೧೪] ನಾನು ಉನ್ನತ ಮೇಘಮಂಡಲದ ಮೇಲೆ ಏರಿ ಮಹೋನ್ನತನಿಗೆ ಸರಿಸಮಾನನಾಗುತ್ತೇನೆ” ಎಂದುಕೊಳ್ಳುತ್ತಿದ್ದೆ.

ಯೂದನು ೧:೬
ದೇವದೂತರು ಅಧಿಕಾರವನ್ನು ಹೊಂದಿದ್ದರೂ ಅದನ್ನು ಉಳಿಸಿಕೊಳ್ಳಲಾರದೆ ಸ್ವಂತ ವಾಸಸ್ಥಾನವನ್ನು ಬಿಟ್ಟುಹೋದದ್ದನ್ನು ನೆನಸಿಕೊಳ್ಳಿರಿ. ಆದ್ದರಿಂದ ಪ್ರಭುವು ಈ ದೇವದೂತರನ್ನು ಅಂಧಕಾರದಲ್ಲಿಟ್ಟನು. ಅವರನ್ನು ಶಾಶ್ವತವಾದ ಬೇಡಿಗಳಿಂದ ಬಂಧಿಸಲಾಯಿತು. ಮಹಾದಿನದಂದು ಅವರಿಗೆ ತೀರ್ಪು ನೀಡುವುದಕ್ಕಾಗಿ ಆತನು ಅವರನ್ನು ಅಲ್ಲಿಟ್ಟಿದ್ದಾನೆ.

ಪೇತ್ರನು ೧ ೩:೨೧-೨೨
[೨೧] ಆ ನೀರು ಈಗ ನಿಮ್ಮನ್ನು ರಕ್ಷಿಸುತ್ತಿರುವ ದೀಕ್ಷಾಸ್ನಾನದಂತಿದೆ. ದೀಕ್ಷಾಸ್ನಾನವು ಮೈಕೊಳೆಯನ್ನು ತೊಳೆಯುವಂಥದ್ದಲ್ಲ. ಅದು ಪರಿಶುದ್ಧ ಹೃದಯ ಬೇಕೆಂದು ವಿಜ್ಞಾಪಿಸಿಕೊಳ್ಳುವಂಥದಾಗಿದೆ. ಯೇಸು ಕ್ರಿಸ್ತನು ಸಾವಿನಿಂದ ಎದ್ದುಬಂದದ್ದರಿಂದ ಅದು ನಿಮ್ಮನ್ನು ರಕ್ಷಿಸುತ್ತದೆ.[೨೨] ಈಗ ಯೇಸು ಪರಲೋಕಕ್ಕೆ ಹೋಗಿರುವನು. ಆತನು ದೇವರ ಬಲಗಡೆಯಲ್ಲಿದ್ದಾನೆ. ಆತನು ದೇವದೂತರನ್ನೂ ಅಧಿಕಾರಿಗಳನ್ನೂ ಶಕ್ತಿಗಳನ್ನೂ ಆಳುತ್ತಿದ್ದಾನೆ.

ಪೇತ್ರನು ೧ ೧:೧೨
ಆ ಪ್ರವಾದಿಗಳು ಮಾಡಿದ ಈ ಸೇವೆಯು ನಿಮಗೋಸ್ಕರವೇ ಹೊರತು ಅವರಿಗೋಸ್ಕರವಲ್ಲ ಎಂಬುದು ಅವರಿಗೆ ಪ್ರಕಟವಾಯಿತು. ಈಗ ನೀವು ಕೇಳಿದ ಸಂಗತಿಗಳನ್ನು ಅವರು ತಿಳಿಸಿದಾಗ ಅವರು ನಿಮ್ಮ ಸೇವೆಯನ್ನೇ ಮಾಡುತ್ತಿದ್ದರು. ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಸಹಾಯದಿಂದ ನಿಮಗೆ ಸುವಾರ್ತೆಯನ್ನು ತಿಳಿಸಿದವರೇ ನಿಮಗೆ ಆ ಸಂಗತಿಗಳನ್ನು ತಿಳಿಸಿದರು. ನಿಮಗೆ ತಿಳಿಸಿದ ಸಂಗತಿಗಳ ಬಗ್ಗೆ ತಿಳಿದುಕೊಳ್ಳಲು ದೇವದೂತರೂ ಕಾತುರರಾಗಿದ್ದಾರೆ.

ಹಿಬ್ರಿಯರಿಗೆ ೧೨:೨೨
ಆದರೆ ನೀವು ಅಂಥ ಸ್ಥಳಕ್ಕೆ ಬಂದಿಲ್ಲ. ನೀವು ಬಂದಿರುವ ಹೊಸ ಸ್ಥಳ ಚೀಯೋನ್ ಬೆಟ್ಟ, ಜೀವಸ್ವರೂಪನಾದ ದೇವರು ವಾಸವಾಗಿರುವ ಪರಲೋಕದ ಜೆರುಸಲೇಮಿಗೂ ಸಹಸ್ರಾರು ದೇವದೂತರು ಸಂತೋಷದಿಂದ ಒಟ್ಟುಗೂಡಿರುವ ಸ್ಥಳಕ್ಕೂ ಬಂದಿರುವಿರಿ.

ಪ್ರಕಟನೆ ೫:೧೧-೧೨
[೧೧] ನಂತರ ನಾನು ನೋಡಿದಾಗ, ಅನೇಕ ದೇವದೂತರ ಧ್ವನಿಗಳನ್ನು ಕೇಳಿದೆನು. ಈ ದೇವದೂತರು ಸಿಂಹಾಸನದ, ನಾಲ್ಕು ಜೀವಿಗಳ ಮತ್ತು ಹಿರಿಯರ ಸುತ್ತಲೂ ಇದ್ದರು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನು ಕೋಟಿಯಾಗಿಯೂ ಇತ್ತು.[೧೨] ಈ ದೇವದೂತರು ಗಟ್ಟಿಯಾದ ಧ್ವನಿಯಿಂದ ಇಂತೆಂದರು:

ಕೀರ್ತನೆಗಳು ೭೮:೨೫-೪೯
[೨೫] ಜನರು ದೇವದೂತರ ಆಹಾರವನ್ನು ತಿಂದರು. ಅವರನ್ನು ತೃಪ್ತಿಗೊಳಿಸುವುದಕ್ಕಾಗಿ ಆತನು ಆಹಾರವನ್ನು ಹೇರಳವಾಗಿ ಒದಗಿಸಿದನು.[೨೬] ಬಳಿಕ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಆಗ ಲಾವಕ್ಕಿಗಳು ಮಳೆಯಂತೆ ಅವರಿದ್ದಲ್ಲಿಗೆ ಬಂದು ಬಿದ್ದವು.[೨೭] ಆತನು ತೇಮಾನಿನಿಂದ ಗಾಳಿಬೀಸುವಂತೆ ಮಾಡಿದಾಗ ಪಕ್ಷಿಗಳು ಸಮುದ್ರದ ಮರಳಿನಷ್ಟು ಅವರಿದ್ದಲ್ಲಿ ಬಂದು ಬಿದ್ದವು.[೨೮] ಪಕ್ಷಿಗಳು ಪಾಳೆಯದ ಮಧ್ಯಭಾಗದಲ್ಲಿ, ಆ ಜನರ ಗುಡಾರಗಳ ಸುತ್ತಲೆಲ್ಲಾ ಬಿದ್ದವು.[೨೯] ಅವರಿಗೆ ತಿನ್ನಲು ಹೇರಳವಾಗಿತ್ತು. ಆದರೆ ತಮ್ಮ ಆಸೆಗಳೇ ತಮ್ಮನ್ನು ಪಾಪಕ್ಕೆ ನಡೆಸುವಂತೆ ಅವರು ಮಾಡಿದರು.[೩೦] ಅವರು ತಮ್ಮ ಆಸೆಗಳನ್ನು ತಮ್ಮ ಹತೋಟಿಯಲ್ಲಿಟ್ಟುಕೊಳ್ಳಲಿಲ್ಲ. ಆ ಲಾವಕ್ಕಿಗಳ ರಕ್ತವನ್ನು ಪೂರ್ತಿಯಾಗಿ ತೆಗೆಯುವ ಮೊದಲೇ ಅವುಗಳ ಮಾಂಸವನ್ನು ತಿಂದುಬಿಟ್ಟರು.[೩೧] ಆಗ ಆತನು ಅವರ ಮೇಲೆ ಬಹು ಕೋಪಗೊಂಡು, ಅವರಲ್ಲಿ ಅನೇಕರನ್ನು ಕೊಂದುಹಾಕಿದನು. ದೃಢಕಾಯರಾಗಿದ್ದ ಅನೇಕ ಯುವಕರಿಗೆ ಆತನು ಸಾವನ್ನು ಬರಮಾಡಿದನು.[೩೨] ಆದರೂ ಅವರು ಪಾಪಮಾಡುತ್ತಾ ಬಂದರು. ಆತನ ಅದ್ಭುತಕಾರ್ಯಗಳನ್ನು ಅವರು ನಂಬದೆ ಹೋದರು.[೩೩] ಆದ್ದರಿಂದ ಆತನು ಆಪತ್ತುಗಳನ್ನು ಬರಮಾಡಿ ಅವರ ಅಯೋಗ್ಯ ಜೀವಿತಗಳನ್ನು ಉಸಿರಿನಂತೆ ಅಂತ್ಯಗೊಳಿಸಿದನು.[೩೪] ಅವರಲ್ಲಿ ಕೆಲವರನ್ನು ದೇವರು ಕೊಂದಾಗಲೆಲ್ಲಾ, ಉಳಿದವರು ಆತನ ಕಡೆಗೆ ತಿರುಗಿಕೊಂಡು ಓಡಿ ಬರುತ್ತಿದ್ದರು.[೩೫] ದೇವರೇ ತಮ್ಮ ಆಶ್ರಯಸ್ಥಾನವೆಂಬುದನ್ನೂ ಮಹೋನ್ನತನಾದ ದೇವರೇ ತಮ್ಮ ರಕ್ಷಕನೆಂಬುದನ್ನೂ ಅವರು ಜ್ಞಾಪಿಸಿಕೊಳ್ಳುತ್ತಿದ್ದರು.[೩೬] ಆದರೆ ಅವರು ಯಥಾರ್ಥವಾಗಿರದೆ ಸುಳ್ಳಾಡಿದರು.[೩೭] ಅವರ ಹೃದಯಗಳು ಆತನಲ್ಲಿ ನೆಲೆಗೊಂಡಿರಲಿಲ್ಲ. ಆತನ ಒಡಂಬಡಿಕೆಗೆ ಅವರು ನಂಬಿಗಸ್ತರಾಗಿರಲಿಲ್ಲ.[೩೮] ಆದರೆ ಆತನು ಅವರಿಗೆ ಕರುಣೆತೋರಿ ಅವರ ಪಾಪಗಳನ್ನು ಕ್ಷಮಿಸಿದನು. ಆತನು ಅವರನ್ನು ನಾಶಮಾಡಲಿಲ್ಲ. ಅನೇಕ ಸಲ ಆತನು ತನ್ನ ಕೋಪವನ್ನು ತಡೆಯುತ್ತಾ ಬಂದನು; ತಾನು ಬಹು ಕೋಪಗೊಳ್ಳದಂತೆ ನೋಡಿಕೊಂಡನು.[೩೯] ಅವರು ಕೇವಲ ಮನುಷ್ಯರೆಂಬುದನ್ನು ಆತನು ಜ್ಞಾಪಿಸಿಕೊಂಡನು. ಜನರಾದರೋ ಬೀಸಿದ ನಂತರ ಹಿಂತಿರುಗಿ ಬಾರದ ಗಾಳಿಯಂತಿದ್ದಾರೆ.[೪೦] ಅಯ್ಯೋ, ಅವರು ಅರಣ್ಯದಲ್ಲಿ ಆತನಿಗೆ ವಿರುದ್ಧವಾಗಿ ಅನೇಕ ಸಲ ದಂಗೆಎದ್ದರು. ಆತನನ್ನು ಬಹಳವಾಗಿ ನೋಯಿಸಿದರು.[೪೧] ಪದೇಪದೇ ಅವರು ಆತನ ತಾಳ್ಮೆಯನ್ನು ಪರೀಕ್ಷಿಸಿದರು. ಅವರು ಇಸ್ರೇಲರ ಪರಿಶುದ್ಧನನ್ನು ಬಹಳವಾಗಿ ನೋಯಿಸಿದರು.[೪೨] ಅವರು ಆತನ ಶಕ್ತಿಯನ್ನು ಮರೆತುಬಿಟ್ಟರು. ಅನೇಕ ಸಲ ಆತನು ತಮ್ಮನ್ನು ಶತ್ರುಗಳಿಂದ ರಕ್ಷಿಸಿದ್ದನ್ನು ಅವರು ಮರೆತುಬಿಟ್ಟರು.[೪೩] ಈಜಿಪ್ಟಿನಲ್ಲಿಯೂ ಸೋನ್ ಬಯಲುಗಳಲ್ಲಿಯೂ ಮಾಡಿದ ಅದ್ಭುತಕಾರ್ಯಗಳನ್ನು ಅವರು ಮರೆತುಬಿಟ್ಟರು.[೪೪] ಆತನು ನದಿಗಳನ್ನು ರಕ್ತವನ್ನಾಗಿ ಪರಿವರ್ತಿಸಿದನು! ಈಜಿಪ್ಟಿನವರಿಗೆ ನೀರನ್ನು ಕುಡಿಯಲಾಗಲಿಲ್ಲ.[೪೫] ಆತನು ಹಿಂಡುಹಿಂಡು ಹುಳಗಳನ್ನು ಕಳುಹಿಸಿದನು; ಅವು ಈಜಿಪ್ಟಿನ ಜನರನ್ನು ಕಚ್ಚಿದವು. ಆತನು ಕಪ್ಪೆಗಳನ್ನು ಕಳುಹಿಸಿದನು; ಅವು ಈಜಿಪ್ಟಿನವರ ಜೀವಿತಗಳನ್ನು ಹಾಳುಮಾಡಿದವು.[೪೬] ಆತನು ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ ಇತರ ಗಿಡಗಳನ್ನು ಪ್ರಿಯತಮತೆಗಳಿಗೂ ಕೊಟ್ಟನು.[೪೭] ಈಜಿಪ್ಟ್ ಜನರ ದ್ರಾಕ್ಷಾಲತೆಗಳನ್ನು ನಾಶಮಾಡಲು ಆತನು ಆಲಿಕಲ್ಲು ಮಳೆ ಸುರಿಸಿದನು; ಅವರ ಮರಗಳನ್ನು ನಾಶಮಾಡಲು ಮಂಜುಮಳೆಯನ್ನು ಸುರಿಸಿದನು.[೪೮] ಆತನು ಅವರ ದನಕರುಗಳನ್ನು ಆಲಿಕಲ್ಲಿನಿಂದಲೂ ಅವರ ಕುರಿಹಿಂಡುಗಳನ್ನು ಸಿಡಿಲಿನಿಂದಲೂ ಕೊಂದುಹಾಕಿದನು.[೪೯] ಆತನು ಈಜಿಪ್ಟ್ ಜನರಿಗೆ ತನ್ನ ಭಯಂಕರವಾದ ಕೋಪವನ್ನು ತೋರಿದನು. ಆತನು ತನ್ನ ಸಂಹಾರ ದೂತರನ್ನು ಅವರಿಗೆ ವಿರೋಧವಾಗಿ ಕಳುಹಿಸಿದನು.

ಕೀರ್ತನೆಗಳು ೯೧:೧೧
ನೀನು ಹೋದಲ್ಲೆಲ್ಲಾ ನಿನ್ನನ್ನು ಕಾಯಲು ಆತನು ತನ್ನ ದೂತರಿಗೆ ಆಜ್ಞಾಪಿಸುವನು.

ಕೀರ್ತನೆಗಳು ೧೦೩:೨೦
ದೇವದೂತರೇ, ಆತನ ಮಾತಿಗೆ ಕಿವಿಗೊಡುವವರೇ, ಆತನ ಆಜ್ಞೆಗಳಿಗೆ ವಿಧೇಯರಾಗುವ ಬಲಿಷ್ಠ ಸೈನಿಕರೇ, ಯೆಹೋವನನ್ನು ಕೊಂಡಾಡಿರಿ.

ಮತ್ತಾಯನು ೪:೬-೧೧
[೬] “ನೀನು ದೇವರ ಮಗನಾಗಿದ್ದರೆ, ಕೆಳಕ್ಕೆ ದುಮುಕು.[೭] ಅದಕ್ಕೆ ಯೇಸು,[೮] ಬಳಿಕ ಸೈತಾನನು ಯೇಸುವನ್ನು ಎತ್ತರವಾದ ಬೆಟ್ಟದ ತುದಿಗೆ ಕರೆದುಕೊಂಡು ಹೋಗಿ ಲೋಕದ ಎಲ್ಲಾ ರಾಜ್ಯಗಳನ್ನು ಮತ್ತು ಅವುಗಳ ವೈಭವವನ್ನು ತೋರಿಸಿ,[೯] ಯೇಸು ಸೈತಾನನಿಗೆ, “ಇಲ್ಲಿಂದ ತೊಲಗು![೧೦] ಆದ್ದರಿಂದ ಸೈತಾನನು ಯೇಸುವನ್ನು ಬಿಟ್ಟುಹೋದನು. ಆಗ ಕೆಲವು ದೇವದೂತರು ಬಂದು ಆತನನ್ನು ಉಪಚರಿಸಿದರು.[೧೧] ಯೋಹಾನನನ್ನು ಸೆರೆಯಲ್ಲಿಟ್ಟಿದ್ದಾರೆಂಬುದು ಯೇಸುವಿಗೆ ತಿಳಿಯಿತು. ಆದ್ದರಿಂದ ಯೇಸು ಗಲಿಲಾಯಕ್ಕೆ ಹಿಂತಿರುಗಿ ಹೋದನು.

ಮತ್ತಾಯನು ೧೬:೨೭
ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ಮತ್ತು ತನ್ನ ದೂತರೊಡನೆ ಮರಳಿ ಬಂದು ಪ್ರತಿಯೊಬ್ಬನಿಗೂ ಅವನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವನು.

ಮತ್ತಾಯನು ೧೮:೧೦
“ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ. 

ಮತ್ತಾಯನು ೨೪:೩೧-೩೫
[೩೧] ಮಹಾಶಬ್ದದ ತುತ್ತೂರಿಯ ಘೋಷಣೆಯೊಡನೆ ಮನುಷ್ಯಕುಮಾರನು ತನ್ನ ದೂತರನ್ನು ಭೂಮಿಯ ಎಲ್ಲಾ ಕಡೆಗೆ ಕಳುಹಿಸುವನು. ಆತನು ಆರಿಸಿಕೊಂಡವರನ್ನು ದೇವದೂತರು ಭೂಲೋಕದ ಎಲ್ಲಾ ಕಡೆಗಳಿಂದಲೂ ಒಟ್ಟುಗೂಡಿಸುವರು.[೩೨] “ಅಂಜೂರದ ಮರವು ನಮಗೆ ಒಂದು ಪಾಠವನ್ನು ಕಲಿಸುತ್ತದೆ. ಅಂಜೂರದ ಮರದ ಕೊಂಬೆಗಳು ಹಸುರಾಗಿ ಎಳೆಯದಾಗಿದ್ದು ಹೊಸ ಎಲೆಗಳು ಬೆಳೆಯುವುದಕ್ಕೆ ಪ್ರಾರಂಭಿಸಿದಾಗ, ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.[೩೩] ನಾನು ನಿಮಗೆ ಹೇಳಿದ ಈ ಸಂಗತಿಗಳಿಗೂ ಅದು ಅನ್ವಯಿಸುತ್ತದೆ. ಈ ಸಂಗತಿಗಳೆಲ್ಲಾ ಸಂಭವಿಸುತ್ತಿರುವುದನ್ನು ನೀವು ನೋಡುವಾಗ ಆ ಸಮಯ ಹತ್ತಿರವಾಯಿತೆಂದೂ ಬರುವುದಕ್ಕೆ ಸಿದ್ಧವಾಗಿದೆಯೆಂದೂ ತಿಳಿದುಕೊಳ್ಳುವಿರಿ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ.[೩೪] ಇಂದಿನ ಜನರು ಇನ್ನೂ ಜೀವಿಸಿರುವಾಗಲೇ ಈ ಎಲ್ಲಾ ಸಂಗತಿಗಳು ಸಂಭವಿಸುತ್ತವೆ![೩೫] ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!

ಲೂಕನು ೪:೧೦
‘ದೇವರು ನಿನ್ನನ್ನು ಕಾಪಾಡುವುದಕ್ಕೆ ತನ್ನ ದೂತರಿಗೆ ಅಪ್ಪಣೆಕೊಡುವನು.’ \rq ಕೀರ್ತನೆ. 91:1\rq*

ಯೊವಾನ್ನನು ೨೦:೧೧-೧೨
[೧೧] ಆದರೆ ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ,[೧೨] ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ದೇವದೂತರನ್ನು ಕಂಡಳು. ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಅವರಲ್ಲೊಬ್ಬನು ಯೇಸುವಿನ ತಲೆಯಿದ್ದ ಕಡೆಯಲ್ಲಿಯೂ ಮತ್ತೊಬ್ಬನು ಪಾದವಿದ್ದ ಕಡೆಯಲ್ಲಿಯೂ ಕುಳಿತುಕೊಂಡಿದ್ದನು.

ಕೊಲೊಸ್ಸೆಯರಿಗೆ ೨:೧೮
ಕೆಲವರು ದೇವದೂತರ ಪೂಜೆಯಲ್ಲಿಯೂ ಅತಿವಿನಯವಂತರಂತೆ ನಟಿಸುವುದರಲ್ಲಿಯೂ ಆಸಕ್ತರಾಗಿದ್ದಾರೆ. ಆ ಜನರು ತಾವು ಕಂಡ ದರ್ಶನಗಳ ಬಗ್ಗೆ ಯಾವಾಗಲೂ ಮಾತನಾಡುತ್ತಿರುತ್ತಾರೆ. “ನೀವು ಇಂಥಿಂಥ ಕಾರ್ಯಗಳನ್ನು ಮಾಡದಿರುವುದರಿಂದ ತಪ್ಪಿತಸ್ಥರಾಗಿದ್ದೀರಿ” ಎಂದು ಆ ಜನರು ನಿಮ್ಮ ಬಗ್ಗೆ ಹೇಳಲು ಅವಕಾಶಕೊಡಬೇಡಿ. ಅವರ ಪ್ರಾಪಂಚಿಕ ಆಲೋಚನೆಯು ಅವರನ್ನು ನಿಷ್ಕಾರಣವಾಗಿ ಗರ್ವದಿಂದ ಉಬ್ಬಿಸುತ್ತದೆ.

ಹಿಬ್ರಿಯರಿಗೆ ೧:೧೪
ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.

ಹಿಬ್ರಿಯರಿಗೆ ೨:೬-೧೩
[೬] ಅದನ್ನು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ:[೭] ಕೇವಲ ಸ್ವಲ್ಪಕಾಲದವರೆಗೆ ನೀನು ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆ ಮಾಡಿದೆ.[೮] ನೀನು ಎಲ್ಲವನ್ನು ಅವನಿಗೆ ಅಧೀನಗೊಳಿಸಿರುವೆ. \rq ಕೀರ್ತನೆ. 8:4-6\rq*[೯] ಕೇವಲ ಸ್ವಲ್ಪಕಾಲದವರೆಗೆ ಯೇಸುವು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಲ್ಪಟ್ಟನು. ಆದರೆ ನಾವೀಗ ವೈಭವ, ಗೌರವಗಳೆಂಬ ಕಿರೀಟ ಧರಿಸಿರುವ ಆತನನ್ನು ನೋಡುತ್ತೇವೆ. ಏಕೆಂದರೆ ದೇವರ ಕೃಪೆಯ ನಿಮಿತ್ತ ಆತನು ಎಲ್ಲರಿಗೋಸ್ಕರ ಸಂಕಟ ಅನುಭವಿಸಿ ಮರಣಹೊಂದಿದನು.[೧೦] ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.[೧೧] ಜನರನ್ನು ಪರಿಶುದ್ಧರನ್ನಾಗಿ ಮಾಡುವ ಯೇಸುವೂ ಮತ್ತು ಆತನಿಂದ ಪರಿಶುದ್ಧರಾಗುವ ಜನರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಆ ಜನರನ್ನು ಸಹೋದರರೆಂದೂ ಸಹೋದರಿಯರೆಂದೂ ಕರೆಯಲು ಆತನು (ಯೇಸು) ನಾಚಿಕೆಪಡುವುದಿಲ್ಲ.[೧೨] ಯೇಸು ಹೇಳುತ್ತಾನೆ:[೧೩] ಆತನು ಮತ್ತೆ ಹೇಳುತ್ತಾನೆ:

ಹಿಬ್ರಿಯರಿಗೆ ೧೩:೨
ಅತಿಥಿಸತ್ಕಾರ ಮಾಡಿರಿ. ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.

ಪೇತ್ರನು ೨ ೨:೪
ದೇವದೂತರು ಪಾಪಗಳನ್ನು ಮಾಡಿದಾಗ, ದೇವರು ಅವರನ್ನು ದಂಡಿಸದೆ ಬಿಡಲಿಲ್ಲ. ಆತನು ಅವರನ್ನು ನರಕಕ್ಕೆ ದಬ್ಬಿದನು. ಕತ್ತಲೆಯ ಗುಂಡಿಗಳಿಗೆ ಹಾಕಿದನು. ಅವರಿಗೆ ನ್ಯಾಯತೀರ್ಪಾಗುವವರೆಗೂ ಅವರು ಅಲ್ಲಿಯೇ ಇರುವರು.

Kannada Bible 1934
Public Domain: 1934