A A A A A

ಚರ್ಚ್: [ಚರ್ಚ್ ಕಿರುಕುಳ]


ಪ್ರೇಷಿತರ ೮:೧
ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು. (Verses 1-3)

ಮತ್ತಾಯನು ೫:೪೪
ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ನಿಮಗೆ ಕೆಟ್ಟದ್ದನ್ನು ಮಾಡುವ ಜನರಿಗಾಗಿ ಪ್ರಾರ್ಥಿಸಿರಿ.

ತಿಮೊಥೇಯನಿಗ ೨ ೩:೧೨
ಕ್ರಿಸ್ತ ಯೇಸುವಿನಲ್ಲಿ ದೇವರ ಚಿತ್ತಕ್ಕನುಸಾರವಾಗಿ ಜೀವಿಸುವ ಪ್ರತಿಯೊಬ್ಬರೂ ಹಿಂಸೆಗೆ ಒಳಗಾಗುವರು.

ಯೊವಾನ್ನನು ೧೫:೨೦
“ಸೇವಕನು ತನ್ನ ಒಡೆಯನಿಗಿಂತ ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಿಸಿಕೊಳ್ಳಿ. ಜನರು ನನ್ನನ್ನು ಹಿಂಸಿಸಿದಂತೆ ನಿಮ್ಮನ್ನೂ ಹಿಂಸಿಸುವರು ಮತ್ತು ನನ್ನ ಉಪದೇಶಕ್ಕೆ ವಿಧೇಯರಾದರೆ ನಿಮ್ಮ ಉಪದೇಶಕ್ಕೂ ವಿಧೇಯರಾಗುವರು.

ಪ್ರಕಟನೆ ೨:೧೦
ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.

ರೋಮನರಿಗೆ ೮:೩೫
ಕ್ರಿಸ್ತನ ಪ್ರೀತಿಯಿಂದ ಯಾವುದು ನಮ್ಮನ್ನು ಬೇರ್ಪಡಿಸಬಲ್ಲದು? ಕಷ್ಟಸಂಕಟಗಳಾಗಲಿ ಇಕ್ಕಟ್ಟುಗಳಾಗಲಿ ಹಿಂಸೆಯಾಗಲಿ ಆಹಾರವಿಲ್ಲದಿರುವುದಾಗಲಿ ಬಟ್ಟೆಯಿಲ್ಲದಿರುವುದಾಗಲಿ ಅಪಾಯವಾಗಲಿ ಮರಣವಾಗಲಿ ನಮ್ಮನ್ನು ಕ್ರಿಸ್ತನ ಪ್ರೀತಿಯಿಂದ ಬೇರ್ಪಡಿಸಬಲ್ಲವೇ? ಇಲ್ಲ!

ಮತ್ತಾಯನು ೫:೧೧
“ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಅಪಹಾಸ್ಯ ಮಾಡಿದರೆ, ಹಿಂಸೆಪಡಿಸಿದರೆ ಮತ್ತು ನಿಮ್ಮ ಮೇಲೆ ಕೆಟ್ಟಕೆಟ್ಟ ವಿಷಯಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರಾಗಿದ್ದೀರಿ.

ರೋಮನರಿಗೆ ೧೨:೧೪
ನಿಮಗೆ ಕೇಡುಮಾಡುವವರನ್ನು ಶಪಿಸದೆ ಆಶೀರ್ವದಿಸಿರಿ.

ಯೊವಾನ್ನನು ೫:೧೬
ಆದರೆ ಯೇಸು ಅವರಿಗೆ, “ನನ್ನ ತಂದೆಯು ತನ್ನ ಕಾರ್ಯವನ್ನು ಎಂದಿಗೂ ನಿಲ್ಲಿಸುವುದಿಲ್ಲ. ಆದ್ದರಿಂದ ನಾನು ಸಹ ಕಾರ್ಯನಿರತನಾಗಿದ್ದೇನೆ” ಎಂದು ತನ್ನನ್ನು ಪ್ರತಿಪಾದಿಸಿಕೊಂಡನು.

ಮತ್ತಾಯನು ೫:೧೦-೧೨
[೧೦] ನೀತಿಯ ನಿಮಿತ್ತ ಹಿಂಸೆಪಡುವವರು ಧನ್ಯರು.[೧೧] “ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಅಪಹಾಸ್ಯ ಮಾಡಿದರೆ, ಹಿಂಸೆಪಡಿಸಿದರೆ ಮತ್ತು ನಿಮ್ಮ ಮೇಲೆ ಕೆಟ್ಟಕೆಟ್ಟ ವಿಷಯಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರಾಗಿದ್ದೀರಿ.[೧೨] ಸಂತೋಷಪಡಿರಿ, ಆನಂದಿಸಿರಿ. ಪರಲೋಕದಲ್ಲಿ ನಿಮಗಾಗಿ ಕಾದಿರುವ ಹೆಚ್ಚಿನ ಪ್ರತಿಫಲವನ್ನು ನೀವು ಹೊಂದುವಿರಿ. ನಿಮಗಿಂತ ಮುಂಚೆ ಜೀವಿಸಿದ್ದ ಪ್ರವಾದಿಗಳಿಗೂ ಜನರು ಹೀಗೆಯೇ ಮಾಡಿದರು.

ಕೊರಿಂಥಿಯರಿಗೆ ೨ ೧೨:೧೦
ಆದ್ದರಿಂದ ನನ್ನಲ್ಲಿ ಬಲಹೀನತೆಗಳಿರುವಾಗ, ಜನರು ನನ್ನ ಬಗ್ಗೆ ಕೆಟ್ಟಸಂಗತಿಗಳನ್ನು ಹೇಳುವಾಗ, ಜನರು ನನ್ನನ್ನು ಹಿಂಸಿಸುವಾಗ, ನನಗೆ ಸಮಸ್ಯೆಗಳಿರುವಾಗ ಸಂತೋಷಿಸುತ್ತೇನೆ. ಇವುಗಳೆಲ್ಲಾ ಕ್ರಿಸ್ತನಿಗೋಸ್ಕರವಾಗಿಯೆ. ಇವುಗಳ ಬಗ್ಗೆ ಸಂತೋಷಪಡುತ್ತೇನೆ, ಏಕೆಂದರೆ ಬಲಹೀನನಾಗಿರುವಾಗಲೇ ನಿಜವಾಗಿಯೂ ಶಕ್ತಿಶಾಲಿಯಾಗಿರುತ್ತೇನೆ.

ಪ್ರೇಷಿತರ ೧೩:೫೦
ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.

ಪ್ರೇಷಿತರ ೭:೫೨
ಜೀವಸಿದ್ದ ಪ್ರವಾದಿಗಳಲ್ಲಿ ಪ್ರತಿಯೊಬ್ಬರನ್ನೂ ನಿಮ್ಮ ಪಿತೃಗಳು ಹಿಂಸಿಸಿದರು. ನೀತಿವಂತನೊಬ್ಬನು (ಕ್ರಿಸ್ತನು) ಬರುತ್ತಾನೆಂದು ಬಹುಕಾಲದ ಹಿಂದೆಯೇ ಆ ಪ್ರವಾದಿಗಳು ತಿಳಿಸಿದ್ದರು. ಆದರೆ ನಿಮ್ಮ ಪಿತೃಗಳು ಆ ಪ್ರವಾದಿಗಳನ್ನು ಕೊಂದುಹಾಕಿದರು. ಈಗ ನೀವು ನೀತಿವಂತನಿಗೆ ವಿರುದ್ಧವಾಗಿ ತಿರುಗಿ ಆತನನ್ನು ಕೊಂದುಹಾಕಿದಿರಿ.

ಮಾರ್ಕನು ೪:೧೭
ಆದರೆ ಆ ವಾಕ್ಯವು ತಮ್ಮಲ್ಲಿ ಆಳವಾಗಿ ಬೇರೂರಲು ಅವರು ಅವಕಾಶ ನೀಡುವುದಿಲ್ಲ. ಅವರು ಆ ವಾಕ್ಯವನ್ನು ಸ್ವಲ್ಪಕಾಲ ಮಾತ್ರ ಸ್ವೀಕರಿಸಿಕೊಂಡಿರುತ್ತಾರೆ. ಆ ವಾಕ್ಯದ ದೆಸೆಯಿಂದ ತೊಂದರೆಯಾಗಲಿ ಹಿಂಸೆಯಾಗಲಿ ಬಂದಾಗ ಅವರು ಅದನ್ನು ಬಹುಬೇಗನೆ ತ್ಯಜಿಸುತ್ತಾರೆ. ಇವರೇ ಬೀಜಬಿದ್ದ ಬಂಡೆಯ ನೆಲವಾಗಿದ್ದಾರೆ.

ಗಲಾತ್ಯರಿಗೆ ೪:೨೯
See verse 28

ಮಾರ್ಕನು ೧೦:೩೦
ನೂರರಷ್ಟು ಹೆಚ್ಚಾಗಿ ಪಡೆಯುತ್ತಾನೆ. ಈ ಪ್ರಪಂಚದಲ್ಲಿ ಅವನು ಅನೇಕ ಮನೆಗಳನ್ನು, ಸಹೋದರರನ್ನು, ಸಹೋದರಿಯರನ್ನು, ತಾಯಂದಿರನ್ನು, ಮಕ್ಕಳನ್ನು ಮತ್ತು ಭೂಮಿಯನ್ನು ಹಿಂಸೆಗಳೊಂದಿಗೆ ಪಡೆದುಕೊಳ್ಳುವನು. ಅಲ್ಲದೆ ಬರಲಿರುವ ಲೋಕದಲ್ಲಿ ಅವನು ನಿತ್ಯಜೀವವನ್ನೂ ಹೊಂದಿಕೊಳ್ಳುವನು.

ಮತ್ತಾಯನು ೧೩:೨೧
ಆದರೆ ಆ ಮನುಷ್ಯನು ಬೋಧನೆಯನ್ನು ತನ್ನ ಜೀವಿತದಲ್ಲಿ ಬೇರೂರಿಸಿಕೊಳ್ಳುವುದಿಲ್ಲ. ಅವನು ಆ ಬೋಧನೆಯನ್ನು ಸ್ವಲ್ಪಕಾಲ ಮಾತ್ರ ಅನುಸರಿಸುವನು. ಆ ಬೋಧನೆಯನ್ನು ಅಂಗೀಕರಿಸಿದ್ದರಿಂದ ತನಗೆ ಕಷ್ಟವಾಗಲಿ ಹಿಂಸೆಯಾಗಲಿ ಬಂದಾಗ ಅದನ್ನು ಬೇಗನೆ ಬಿಟ್ಟುಬಿಡುವನು.

ಪ್ರೇಷಿತರ ೨೨:೪
ಯೇಸುವಿನ ಮಾರ್ಗವನ್ನು ಯಾರು ಹಿಂಬಾಲಿಸುತ್ತಾರೋ ಅವರನ್ನು ನಾನು ಹಿಂಸಿಸಿದೆನು. ನನ್ನ ದೆಸೆಯಿಂದ ಅವರಲ್ಲಿ ಕೆಲವರು ಕೊಲ್ಲಲ್ಪಟ್ಟರು. ನಾನು ಪುರುಷರನ್ನು ಮತ್ತು ಸ್ತ್ರೀಯರನ್ನು ಬಂಧಿಸಿ ಸೆರೆಮನೆಗೆ ಹಾಕಿದೆನು.

ಮತ್ತಾಯನು ೫:೧೦
ನೀತಿಯ ನಿಮಿತ್ತ ಹಿಂಸೆಪಡುವವರು ಧನ್ಯರು.

ಗಲಾತ್ಯರಿಗೆ ೬:೧೨
ನೀವು ಸುನ್ನತಿ ಮಾಡಿಸಿಕೊಳ್ಳಬೇಕೆಂದು ಕೆಲವರು ನಿಮ್ಮನ್ನು ಒತ್ತಾಯಿಸುತ್ತಿದ್ದಾರೆ. ತಮ್ಮನ್ನು (ಯೆಹೂದ್ಯರು) ಸ್ವೀಕರಿಸಿಕೊಳ್ಳಲಿ ಎಂಬುದೇ ಅವರ ಉದ್ದೇಶ. ಕ್ರಿಸ್ತನ ಶಿಲುಬೆಯ ದೆಸೆಯಿಂದ ತಾವು ಹಿಂಸೆಗೆ ಒಳಗಾಗಬಹುದೆಂಬ ಭಯದಿಂದ ಅವರು ಹೀಗೆ ಮಾಡುತ್ತಾರೆ.

ಲೂಕನು ೨೧:೧೨
“ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು.

ಮಾರ್ಕನು ೧೦:೨೯-೩೦
[೨೯] ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನಗಾಗಿ ಮತ್ತು ಸುವಾರ್ತೆಗಾಗಿ ತನ್ನ ಮನೆಯನ್ನಾಗಲಿ ಸಹೋದರರನ್ನಾಗಲಿ ಸಹೋದರಿಯರನ್ನಾಗಲಿ ತಾಯಿಯನ್ನಾಗಲಿ ತಂದೆಯನ್ನಾಗಲಿ ಮಕ್ಕಳನ್ನಾಗಲಿ ಭೂಮಿಯನ್ನಾಗಲಿ ತ್ಯಜಿಸಿದ ಪ್ರತಿಯೊಬ್ಬ ವ್ಯಕ್ತಿಯೂ[೩೦] ನೂರರಷ್ಟು ಹೆಚ್ಚಾಗಿ ಪಡೆಯುತ್ತಾನೆ. ಈ ಪ್ರಪಂಚದಲ್ಲಿ ಅವನು ಅನೇಕ ಮನೆಗಳನ್ನು, ಸಹೋದರರನ್ನು, ಸಹೋದರಿಯರನ್ನು, ತಾಯಂದಿರನ್ನು, ಮಕ್ಕಳನ್ನು ಮತ್ತು ಭೂಮಿಯನ್ನು ಹಿಂಸೆಗಳೊಂದಿಗೆ ಪಡೆದುಕೊಳ್ಳುವನು. ಅಲ್ಲದೆ ಬರಲಿರುವ ಲೋಕದಲ್ಲಿ ಅವನು ನಿತ್ಯಜೀವವನ್ನೂ ಹೊಂದಿಕೊಳ್ಳುವನು.

ರೋಮನರಿಗೆ ೮:೩೫-೩೭
[೩೫] ಕ್ರಿಸ್ತನ ಪ್ರೀತಿಯಿಂದ ಯಾವುದು ನಮ್ಮನ್ನು ಬೇರ್ಪಡಿಸಬಲ್ಲದು? ಕಷ್ಟಸಂಕಟಗಳಾಗಲಿ ಇಕ್ಕಟ್ಟುಗಳಾಗಲಿ ಹಿಂಸೆಯಾಗಲಿ ಆಹಾರವಿಲ್ಲದಿರುವುದಾಗಲಿ ಬಟ್ಟೆಯಿಲ್ಲದಿರುವುದಾಗಲಿ ಅಪಾಯವಾಗಲಿ ಮರಣವಾಗಲಿ ನಮ್ಮನ್ನು ಕ್ರಿಸ್ತನ ಪ್ರೀತಿಯಿಂದ ಬೇರ್ಪಡಿಸಬಲ್ಲವೇ? ಇಲ್ಲ![೩೬] ಪವಿತ್ರ ಗ್ರಂಥದಲ್ಲಿ ಹೀಗೆ ಬರೆಯಲ್ಪಟ್ಟಿದೆ:[೩೭] ಆದರೆ ನಮಗೋಸ್ಕರ ತನ್ನ ಪ್ರೀತಿಯನ್ನು ತೋರಿಸಿದ ದೇವರ ಮೂಲಕವಾಗಿ ಈ ಎಲ್ಲಾ ಸಂಗತಿಗಳಲ್ಲಿ ನಮಗೆ ಪೂರ್ಣ ಜಯವಿದೆ.

ಪ್ರೇಷಿತರ ೧೧:೧೯-೨೧
[೧೯] ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು.[೨೦] ಈ ವಿಶ್ವಾಸಿಗಳಲ್ಲಿ ಕೆಲವರು ಸೈಪ್ರಸ್ ಮತ್ತು ಸಿರೇನ್ ಸ್ಥಳಗಳವರಾಗಿದ್ದರು. ಈ ಜನರು ಅಂತಿಯೋಕ್ಯಕ್ಕೆ ಬಂದಾಗ ಅವರು, ಪ್ರಭುವಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅಲ್ಲಿಯ ಗ್ರೀಕ್ ಜನರಿಗೆ ತಿಳಿಸಿದರು.[೨೧] ಪ್ರಭುವು ವಿಶ್ವಾಸಿಗಳಿಗೆ ಸಹಾಯ ಮಾಡುತ್ತಿದ್ದನು. ಜನರು ಬಹು ಸಂಖ್ಯೆಯಲ್ಲಿ ಪ್ರಭುವನ್ನು ನಂಬಿಕೊಂಡು ಅನುಸರಿಸತೊಡಗಿದರು.

ಪ್ರೇಷಿತರ ೯:೪-೫
[೪] ಸೌಲನು ನೆಲಕ್ಕೆ ಬಿದ್ದನು. “ಸೌಲನೇ, ಸೌಲನೇ, ನೀನು ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿಯೊಂದು ಅವನಿಗೆ ಕೇಳಿಸಿತು.[೫] ಸೌಲನು, “ಪ್ರಭುವೇ, ನೀನು ಯಾರು?” ಎಂದನು. ಆ ವಾಣಿಯು, “ನೀನು ಹಿಂಸಿಸುತ್ತಿರುವ ಯೇಸುವೇ ನಾನು!

ಗಲಾತ್ಯರಿಗೆ ೫:೧೧
ನನ್ನ ಸಹೋದರ ಸಹೋದರಿಯರೇ, ಜನರು ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಾನು ಬೋಧಿಸುವುದಿಲ್ಲ. ಸುನ್ನತಿಯ ಅಗತ್ಯತೆಯನ್ನು ಕುರಿತು ಉಪದೇಶಿಸುವವನಾಗಿದ್ದರೆ, ನಾನಿನ್ನೂ ಹಿಂಸೆಗೆ ಒಳಗಾಗಿರುವುದೇಕೆ? ಜನರು ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಾನಿನ್ನೂ ಉಪದೇಶಿಸುವುದಾಗಿದ್ದರೆ, ಶಿಲುಬೆಯ ವಿಷಯವಾದ ನನ್ನ ಬೋಧನೆಗೆ ಅಡ್ಡಿಯಾಗುವುದೇ ಇಲ್ಲ.

ಮತ್ತಾಯನು ೧೦:೨೩
ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಮತ್ತಾಯನು ೫:೧೨
ಸಂತೋಷಪಡಿರಿ, ಆನಂದಿಸಿರಿ. ಪರಲೋಕದಲ್ಲಿ ನಿಮಗಾಗಿ ಕಾದಿರುವ ಹೆಚ್ಚಿನ ಪ್ರತಿಫಲವನ್ನು ನೀವು ಹೊಂದುವಿರಿ. ನಿಮಗಿಂತ ಮುಂಚೆ ಜೀವಿಸಿದ್ದ ಪ್ರವಾದಿಗಳಿಗೂ ಜನರು ಹೀಗೆಯೇ ಮಾಡಿದರು.

ತಿಮೊಥೇಯನಿಗ ೧ ೧:೧೩
ಮೊದಲು, ನಾನು ಕ್ರಿಸ್ತನ ವಿರುದ್ಧ ಮಾತನಾಡಿದ್ದೆನು. ಆತನನ್ನು ಹಿಂಸಿಸಿದ್ದೆನು. ಆತನಿಗೆ ನೋವಾಗುವಂಥ ಕಾರ್ಯಗಳನ್ನು ಮಾಡಿದ್ದೆನು. ಆದರೆ ನಾನೇನು ಮಾಡುತ್ತಿದ್ದೇನೆಂಬುದು ನನಗೆ ತಿಳಿದಿರಲಿಲ್ಲವಾದ್ದರಿಂದ ದೇವರು ನನಗೆ ಕರುಣೆ ತೋರಿದನು. ನಂಬದಿರುವಾಗ ನಾನು ಅವುಗಳನ್ನು ಮಾಡಿದೆನು.

ಮತ್ತಾಯನು ೫:೧೧-೧೨
[೧೧] “ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಅಪಹಾಸ್ಯ ಮಾಡಿದರೆ, ಹಿಂಸೆಪಡಿಸಿದರೆ ಮತ್ತು ನಿಮ್ಮ ಮೇಲೆ ಕೆಟ್ಟಕೆಟ್ಟ ವಿಷಯಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರಾಗಿದ್ದೀರಿ.[೧೨] ಸಂತೋಷಪಡಿರಿ, ಆನಂದಿಸಿರಿ. ಪರಲೋಕದಲ್ಲಿ ನಿಮಗಾಗಿ ಕಾದಿರುವ ಹೆಚ್ಚಿನ ಪ್ರತಿಫಲವನ್ನು ನೀವು ಹೊಂದುವಿರಿ. ನಿಮಗಿಂತ ಮುಂಚೆ ಜೀವಿಸಿದ್ದ ಪ್ರವಾದಿಗಳಿಗೂ ಜನರು ಹೀಗೆಯೇ ಮಾಡಿದರು.

ಲೂಕನು ೧೧:೪೯
ಆದಕಾರಣ ದೇವರ ಜ್ಞಾನವು ಹೇಳಿದ್ದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು. ನನ್ನ ಕೆಲವು ಪ್ರವಾದಿಗಳು ಮತ್ತು ಅಪೊಸ್ತಲರು ಕೆಡುಕರಿಂದ ಹತರಾಗುವರು. ಬೇರೆ ಕೆಲವರು ಸಂಕಟಕ್ಕೆ ಗುರಿಯಾಗುವರು.’

ಥೆಸೆಲೋನಿಯರಿಗೆ ೧ ೩:೩-೪
[೩] ನಮಗೀಗ ಬ0ದಿರುವ ಕಷ್ಟಗಳಿ0ದ ನಿಮ್ಮಲ್ಲಿ ಯಾರೂ ತಳಮಳಗೊಳ್ಳಬಾರದೆ0ದು ತಿಮೊಥೆಯನನ್ನು ಕಳುಹಿಸಿದ್ದೇವೆ. ನಮಗೆ ಇ0ಥಾ ಕಷ್ಟಗಳು ಬರಲೇಬೇಕೆ0ದು ನಿಮಗೇ ತಿಳಿದಿದೆ.[೪] ನಾವು ನಿಮ್ಮೊಡನಿದ್ದಾಗ, ನಾವೆಲ್ಲರೂ ಹಿ0ಸೆಯನ್ನು ಅನುಭವಿಸಬೇಕಾಗುತ್ತದೆಯೆ0ದು ನಿಮಗೆ ತಿಳಿಸಿದೆವು. ನಾವು ಹೇಳಿದ0ತೆಯೇ ಅದು ಸ0ಭವಿಸಿತು ಎ0ಬುದು ನಿಮಗೆ ತಿಳಿದಿದೆ.

ಹಿಬ್ರಿಯರಿಗೆ ೧೧:೩೬-೩೮
[೩೬] ಕೆಲವರು ಇತರರಿಂದ ಅಪಹಾಸ್ಯಕ್ಕೆ ಗುರಿಯಾದರು, ಪೆಟ್ಟುಗಳನ್ನು ಅನುಭವಿಸಿದರು, ಸೆರೆವಾಸದಲ್ಲಿದ್ದರು.[೩೭] ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು.[೩೮] ಇವರಿಗೆ ಈ ಲೋಕವು ಯೋಗ್ಯವಾಗಿರಲಿಲ್ಲ. ಇವರು ಮರುಭೂಮಿಗಳಲ್ಲಿ, ಬೆಟ್ಟಗಳಲ್ಲಿ ಅಲೆಯುತ್ತಾ ಗುಹೆಗಳಲ್ಲಿಯೂ ನೆಲದ ಕುಣಿಗಳಲ್ಲಿಯೂ ವಾಸಿಸುತ್ತಿದ್ದರು.

ಯೊವಾನ್ನನು ೧೫:೨೦-೨೧
[೨೦] “ಸೇವಕನು ತನ್ನ ಒಡೆಯನಿಗಿಂತ ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಿಸಿಕೊಳ್ಳಿ. ಜನರು ನನ್ನನ್ನು ಹಿಂಸಿಸಿದಂತೆ ನಿಮ್ಮನ್ನೂ ಹಿಂಸಿಸುವರು ಮತ್ತು ನನ್ನ ಉಪದೇಶಕ್ಕೆ ವಿಧೇಯರಾದರೆ ನಿಮ್ಮ ಉಪದೇಶಕ್ಕೂ ವಿಧೇಯರಾಗುವರು.[೨೧] ಜನರು ನನ್ನ ದೆಸೆಯಿಂದ ಇದನ್ನೆಲ್ಲಾ ನಿಮಗೆ ಮಾಡುವರು. ನನ್ನನ್ನು ಕಳುಹಿಸಿದಾತನನ್ನು ಅವರು ತಿಳಿದಿಲ್ಲ.

ಮತ್ತಾಯನು ೧೦:೨೧-೨೩
[೨೧] “ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.[೨೨] ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು.[೨೩] ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಮತ್ತಾಯನು ೨೪:೮-೧೦
[೮] ಇವೆಲ್ಲಾ ಪ್ರಸವವೇದನೆಯ ಆರಂಭವಷ್ಟೇ.[೯] “ಆಗ ಜನರು ನಿಮ್ಮನ್ನು ಹಿಂಸಿಸಿ, ಮರಣದಂಡನೆ ವಿಧಿಸಲು ಅಧಿಕಾರಿಗಳಿಗೆ ಒಪ್ಪಿಸಿಕೊಡುವರು. ಜನರೆಲ್ಲರೂ ನಿಮ್ಮನ್ನು ವಿರೋಧಿಸುವರು. ನೀವು ನನ್ನಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ಇವುಗಳೆಲ್ಲಾ ನಿಮಗೆ ಸಂಭವಿಸುವವು.[೧೦] ಆ ಸಮಯದಲ್ಲಿ ಅನೇಕ ವಿಶ್ವಾಸಿಗಳು ತಮ್ಮ ನಂಬಿಕೆಯನ್ನು ಕಳೆದುಕೊಳ್ಳುವರು. ಅವರು ಒಬ್ಬರಿಗೊಬ್ಬರಿಗೆ ವಿರೋಧವಾಗಿ ತಿರುಗಿಕೊಂಡು ಒಬ್ಬರನ್ನೊಬ್ಬರು ದ್ವೇಷಿಸುವರು.

ಲೂಕನು ೨೧:೧೨-೧೯
[೧೨] “ಆದರೆ ಈ ಎಲ್ಲಾ ಸಂಗತಿಗಳು ಸಂಭವಿಸುವ ಮೊದಲು, ಜನರು ನಿಮ್ಮನ್ನು ಬಂಧಿಸುವರು ಮತ್ತು ಹಿಂಸಿಸುವರು. ಸಭಾಮಂದಿರಗಳಲ್ಲಿ ಜನರು ನಿಮಗೆ ತೀರ್ಪು ನೀಡಿ ಸೆರೆಮನೆಗೆ ಹಾಕುವರು. ರಾಜರ ಮುಂದೆ ಮತ್ತು ರಾಜ್ಯಪಾಲರ ಮುಂದೆ ನಿಮ್ಮನ್ನು ಬಲವಂತವಾಗಿ ನಿಲ್ಲಿಸುವರು. ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮಗೆ ಹೀಗೆಲ್ಲಾ ಮಾಡುವರು.[೧೩] ಆದರೆ ನನ್ನ ಕುರಿತು ಹೇಳುವುದಕ್ಕೆ ನಿಮಗೆ ಅದು ಸುಸಂದರ್ಭವಾಗಿರುವುದು.[೧೪] ನೀವು ಏನು ಹೇಳಬೇಕೆಂದು ಚಿಂತಿಸಬೇಡಿರಿ.[೧೫] ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.[೧೬] ನಿಮ್ಮ ತಂದೆತಾಯಿಗಳು, ಸಹೋದರರು, ಸಂಬಂಧಿಕರು ಮತ್ತು ಸ್ನೇಹಿತರು ಸಹ ನಿಮಗೆ ವಿರುದ್ಧವಾಗುವರು. ನಿಮ್ಮಲ್ಲಿ ಕೆಲವರನ್ನು ಅವರು ಕೊಲ್ಲುವರು.[೧೭] ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುವರು.[೧೮] ಆದರೆ ಇವುಗಳಿಂದ ನೀವೇನೂ ನಾಶವಾಗುವುದಿಲ್ಲ.[೧೯] ನೀವು ನಿಮ್ಮ ನಂಬಿಕೆಯಲ್ಲಿ ದೃಢವಾಗಿದ್ದರೆ ನಿಮ್ಮನ್ನು ರಕ್ಷಿಸಿಕೊಳ್ಳುವಿರಿ.

ಕೊರಿಂಥಿಯರಿಗೆ ೧ ೪:೮-೧೩
[೮] ನಿಮಗೆ ಅಗತ್ಯವಾದ ಪ್ರತಿಯೊಂದೂ ನಿಮಗಿದೆಯೆಂದು ನೀವು ಭಾವಿಸಿಕೊಂಡಿದ್ದೀರಿ. ನೀವು ನಿಮ್ಮನ್ನು ಐಶ್ವರ್ಯವಂತರೆಂದೂ ರಾಜರುಗಳೆಂದೂ ಭಾವಿಸಿಕೊಂಡಿದ್ದೀರಿ. ನೀವು ನಿಜವಾಗಿಯೂ ರಾಜರುಗಳಾಗಿದ್ದರೆ ನನಗೆ ಎಷ್ಟೋ ಸಂತೋಷವಾಗುತ್ತಿತ್ತು. ಆಗ ನಾವೂ ನಿಮ್ಮೊಂದಿಗೆ ರಾಜರುಗಳಾಗುತ್ತಿದ್ದೆವು.[೯] ಆದರೆ ದೇವರು ನನಗೂ ಉಳಿದ ಅಪೊಸ್ತಲರಿಗೂ ಕಡೆಯ ಸ್ಥಾನವನ್ನು ಕೊಟ್ಟಿದ್ದಾನೆಂದು ನನಗೆ ತೋರುತ್ತದೆ. ಜನರೆಲ್ಲರ ಎದುರಿನಲ್ಲಿ ನಾವು ಮರಣದಂಡನೆಗೆ ಗುರಿಯಾದಂಥವರಾಗಿದ್ದೇವೆ. ನಾವು ದೇವದೂತರಿಗೂ ಮನುಷ್ಯರಿಗೂ ಒಟ್ಟಿನಲ್ಲಿ ಇಡೀ ಜಗತ್ತಿಗೇ ನೋಟವಾಗಿದ್ದೇವೆ.[೧೦] ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ.[೧೧] ಈಗಲೂ ಸಹ ನಾವು ಹಸಿದವರಾಗಿದ್ದೇವೆ; ಬಾಯಾರಿದವರಾಗಿದ್ದೇವೆ; ಧರಿಸಿಕೊಳ್ಳಲು ಸಾಕಷ್ಟು ಬಟ್ಟೆಯಿಲ್ಲದವರಾಗಿದ್ದೇವೆ. ಆಗಾಗ್ಗೆ ನಮಗೆ ಪೆಟ್ಟುಗಳು ಬೀಳುತ್ತಿರುತ್ತವೆ; ನಮಗೆ ಮನೆಗಳೂ ಇಲ್ಲ.[೧೨] ನಾವು ಊಟಕ್ಕಾಗಿ ನಮ್ಮ ಕೈಯಾರೆ ಕಷ್ಟಪಟ್ಟು ದುಡಿಯುತ್ತೇವೆ. ಜನರು ನಮ್ಮನ್ನು ಶಪಿಸುತ್ತಾರೆ, ನಾವಾದರೋ ಅವರನ್ನು ಆಶೀರ್ವದಿಸುತ್ತೇವೆ. ಜನರು ನಮಗೆ ಹಿಂಸೆ ಕೊಟ್ಟರೂ ತಾಳಿಕೊಳ್ಳುತ್ತೇವೆ.[೧೩] ಜನರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಮಾತಾಡುತ್ತಾರೆ. ನಾವಾದರೋ ಅವರಿಗೆ ಒಳ್ಳೆಯ ವಿಷಯಗಳನ್ನು ಹೇಳುತ್ತೇವೆ. ಇಂದಿನವರೆಗೂ ಜನರು ನಮ್ಮನ್ನು ಲೋಕದ ಕಸವೋ ಭೂಮಿಯ ಹೊಲಸೋ ಎಂಬಂತೆ ಪರಿಗಣಿಸಿದ್ದಾರೆ.

ಹಿಬ್ರಿಯರಿಗೆ ೧೦:೩೨-೩೪
[೩೨] ನೀವು ಸತ್ಯವನ್ನು ತಿಳಿದುಕೊಂಡ ಆ ದಿನಗಳನ್ನು ನೆನಪು ಮಾಡಿಕೊಳ್ಳಿ. ನೀವು ಅನೇಕ ಸಂಕಟಗಳಲ್ಲಿ ಹೋರಾಟ ಮಾಡಿದರೂ, ಧೃತಿಗೆಡದೆ ಮುಂದುವರಿದಿರಿ.[೩೩] ಕೆಲವು ಸಂದರ್ಭಗಳಲ್ಲಿ ಜನರು ನಿಮಗೆ ದ್ವೇಷಮಯ ಸಂಗತಿಗಳನ್ನು ಹೇಳಿದರು ಹಾಗೂ ಅನೇಕ ಜನರ ಮುಂದೆ ನಿಮ್ಮನ್ನು ಹಿಂಸಿಸಿದರು. ಅದೇ ರೀತಿಯ ಹಿಂಸೆಗೆ ಗುರಿಯಾಗಿದ್ದ ಜನರಿಗೆ ಕೆಲವು ಸಂದರ್ಭಗಳಲ್ಲಿ ಸಹಾಯ ಮಾಡಿದಿರಿ.[೩೪] ಹೌದು, ಸೆರೆಯಲ್ಲಿರುವ ಜನರಿಗೆ ಸಹಾಯ ಮಾಡಿದಿರಿ ಮತ್ತು ಅವರ ಸಂಕಟಗಳಲ್ಲಿ ಪಾಲ್ಗೊಂಡಿರಿ. ನಿಮ್ಮ ಸ್ವತ್ತುಗಳನ್ನೆಲ್ಲ ನಿಮ್ಮಿಂದ ಕಿತ್ತುಕೊಂಡು ಹೋದಾಗಲೂ ಸಂತೋಷದಿಂದಲೇ ಇದ್ದಿರಿ. ಅದಕ್ಕಿಂತಲೂ ಉತ್ತಮವಾದದ್ದೂ ಶಾಶ್ವತವಾದದ್ದೂ ನಿಮಗೆ ದೊರೆತಿದೆ ಎಂದು ನಿಮಗೆ ತಿಳಿದಿದ್ದ ಕಾರಣ ನೀವು ಸಂತೋಷವಾಗಿದ್ದಿರಿ.

ಹಿಬ್ರಿಯರಿಗೆ 11:33-38
[33] ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು;[34] ಕೆಲವರು ಉರಿಯುವ ಬೆಂಕಿಯನ್ನು ನಂದಿಸಿದರು; ಇನ್ನು ಕೆಲವರು ಕತ್ತಿಗಳ ಬಾಯಿಂದ ಪಾರಾದರು; ದುರ್ಬಲರಾಗಿದ್ದವರು ತಮ್ಮ ನಂಬಿಕೆಯಿಂದ ಪ್ರಬಲರಾದರು; ಯುದ್ಧದಲ್ಲಿ ಶಕ್ತಿಶಾಲಿಗಳಾಗಿ ಶತ್ರುಗಳನ್ನು ಸೋಲಿಸಿದರು.[35] ಸತ್ತುಹೋಗಿದ್ದವರು ಸಾವಿನಿಂದ ಮೇಲೆದ್ದರು ಮತ್ತು ಅವರನ್ನು ಅವರವರ ಕುಟುಂಬಗಳ ಸ್ತ್ರೀಯರಿಗೆ ಒಪ್ಪಿಸಲಾಯಿತು. ಇತರ ಕೆಲವರು ಯಾತನೆಯನ್ನು ಅನುಭವಿಸುತ್ತಿದ್ದಾಗಲೂ ಪುನರುತ್ಥಾನದ ನಂತರವಿರುವ ಶ್ರೇಷ್ಠ ಜೀವಿತಕ್ಕಾಗಿ ಬಿಡುಗಡೆ ಹೊಂದಲು ಒಪ್ಪಲಿಲ್ಲ.[36] ಕೆಲವರು ಇತರರಿಂದ ಅಪಹಾಸ್ಯಕ್ಕೆ ಗುರಿಯಾದರು, ಪೆಟ್ಟುಗಳನ್ನು ಅನುಭವಿಸಿದರು, ಸೆರೆವಾಸದಲ್ಲಿದ್ದರು.[37] ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು.[38] ಇವರಿಗೆ ಈ ಲೋಕವು ಯೋಗ್ಯವಾಗಿರಲಿಲ್ಲ. ಇವರು ಮರುಭೂಮಿಗಳಲ್ಲಿ, ಬೆಟ್ಟಗಳಲ್ಲಿ ಅಲೆಯುತ್ತಾ ಗುಹೆಗಳಲ್ಲಿಯೂ ನೆಲದ ಕುಣಿಗಳಲ್ಲಿಯೂ ವಾಸಿಸುತ್ತಿದ್ದರು.

ಪ್ರೇಷಿತರ 12:1-19
[1] ಆ ಕಾಲದಲ್ಲಿ ರಾಜ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸಿಸತೊಡಗಿ,[2] ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು. ಯಾಕೋಬನು ಯೋಹಾನನ ಅಣ್ಣ.[3] ಯೆಹೂದ್ಯರು ಇದನ್ನು ಮೆಚ್ಚಿಕೊಂಡರೆಂಬುದು ಹೆರೋದನಿಗೆ ತಿಳಿಯಿತು. ಆದ್ದರಿಂದ ಅವನು ಪೇತ್ರನನ್ನು ಬಂಧಿಸಿ (ಇದು ನಡೆದದ್ದು ಯೆಹೂದ್ಯರ ಪಸ್ಕಹಬ್ಬದ ಕಾಲದಲ್ಲಿ) ಸೆರೆಮನೆಗೆ ಹಾಕಿಸಿದನು.[4] ಹದಿನಾರು ಮಂದಿ ಸಿಪಾಯಿಗಳು ಪೇತ್ರನನ್ನು ಕಾಯುತ್ತಿದ್ದರು. ಪಸ್ಕಹಬ್ಬದ ಕಾಲ ಮುಗಿದೊಡನೆ ಪೇತ್ರನನ್ನು ಜನರ ಮುಂದೆ ನಿಲ್ಲಿಸಬೇಕೆಂದಿದ್ದನು.[5] ಹೀಗೆ ಪೇತ್ರನು ಸೆರೆಮನೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ಎಡಬಿಡದೆ ದೇವರಲ್ಲಿ ಪ್ರಾರ್ಥಿಸುತ್ತಿದ್ದರು.[6] ಪೇತ್ರನು ಇಬ್ಬರು ಸೈನಿಕರ ಮಧ್ಯೆ ನಿದ್ರೆಮಾಡುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಅನೇಕ ಸೈನಿಕರು ಸೆರೆಮನೆಯ ಬಾಗಿಲನ್ನು ಕಾಯುತ್ತಿದ್ದರು. ಆಗ ರಾತ್ರಿಯಾಗಿತ್ತು. ಮರುದಿನ ಪೇತ್ರನನ್ನು ಜನರ ಮುಂದೆ ತರಬೇಕೆಂದು ಹೆರೋದನು ಯೋಚಿಸಿಕೊಂಡಿದ್ದನು.[7] ಇದ್ದಕ್ಕಿದ್ದಂತೆ, ಪ್ರಭುವಿನ ದೂತನೊಬ್ಬನು ಅಲ್ಲಿ ನಿಂತುಕೊಂಡನು. ಬೆಳಕು ಕೋಣೆಯಲ್ಲಿ ಪ್ರಕಾಶಿಸಿತು. ದೇವದೂತನು ಪೇತ್ರನ ಪಕ್ಕೆಯನ್ನು ಮುಟ್ಟಿ ಅವನನ್ನು ಎಬ್ಬಿಸಿ, “ಬೇಗನೆ ಎದ್ದೇಳು!” ಎಂದನು. ಆ ಕೂಡಲೆ ಸರಪಣಿಗಳು ಪೇತ್ರನ ಕೈಗಳಿಂದ ಕಳಚಿಬಿದ್ದವು.[8] ದೇವದೂತನು ಪೇತ್ರನಿಗೆ, “ಬಟ್ಟೆ ಧರಿಸಿಕೊ, ಪಾದರಕ್ಷೆಗಳನ್ನು ಮೆಟ್ಟಿಕೊ” ಎಂದು ಹೇಳಿದನು. ಅಂತೆಯೇ ಪೇತ್ರನು ಮಾಡಿದನು. ಬಳಿಕ ದೇವದೂತನು, “ನಿನ್ನ ಮೇಲಂಗಿಯನ್ನು ಧರಿಸಿಕೊಂಡು ನನ್ನನ್ನು ಹಿಂಬಾಲಿಸು” ಎಂದನು.[9] ದೇವದೂತನು ಹೊರಗೆ ಹೋದನು. ಪೇತ್ರನು ಅವನನ್ನು ಹಿಂಬಾಲಿಸಿದನು. ದೇವದೂತನು ನಿಜವಾಗಿಯೂ ಹೀಗೆ ಮಾಡುತ್ತಿದ್ದಾನೆಂಬುದು ಪೇತ್ರನಿಗೆ ತಿಳಿದಿರಲಿಲ್ಲ. ತಾನು ಕನಸು ಕಾಣುತ್ತಿರಬಹುದೆಂದು ಅವನು ಯೋಚಿಸಿಕೊಂಡನು.[10] ಪೇತ್ರನು ಮತ್ತು ದೇವದೂತನು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿಹೋದರು. ಬಳಿಕ ಅವರು ತಮ್ಮನ್ನು ಪಟ್ಟಣದತ್ತ ನಡೆಸುವ ಕಬ್ಬಿಣದ ಬಾಗಿಲಿಗೆ ಬಂದರು. ಆ ಬಾಗಿಲು ಅವರಿಗಾಗಿ ತನ್ನಷ್ಟಕ್ಕೆ ತಾನೇ ತೆರೆದುಕೊಂಡಿತು. ಪೇತ್ರ ಮತ್ತು ಆ ದೇವದೂತನು ಬಾಗಿಲ ಮೂಲಕ ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು. ಆಗ ಇದ್ದಕ್ಕಿದ್ದಂತೆ ಆ ದೇವದೂತನು ಅವನನ್ನು ಬಿಟ್ಟುಹೋದನು.[11] ನಡೆದ ಸಂಗತಿಯನ್ನು ಆಗ ಅರಿತುಕೊಂಡ ಪೇತ್ರನು, “ಪ್ರಭುವು ನನ್ನ ಬಳಿಗೆ ತನ್ನ ದೇವದೂತನನ್ನು ನಿಜವಾಗಿಯೂ ಕಳುಹಿಸಿದನೆಂದು ಈಗ ನನಗೆ ತಿಳಿಯಿತು. ಆತನು ನನ್ನನ್ನು ಹೆರೋದನ ಕೈಯಿಂದ ಪಾರುಮಾಡಿದನು. ನನಗೆ ಕೇಡು ಸಂಭವಿಸುತ್ತದೆಯೆಂದು ಯೆಹೂದ್ಯರು ಯೋಚಿಸಿಕೊಂಡಿದ್ದರು. ಆದರೆ ಪ್ರಭುವು ನನ್ನನ್ನು ಆ ಕೇಡಿನಿಂದ ರಕ್ಷಿಸಿದನು” ಎಂದುಕೊಂಡನು.[12] ಬಳಿಕ ಪೇತ್ರನು ಮರಿಯಳ ಮನೆಗೆ ಹೋದನು. ಆಕೆಯು ಯೋಹಾನನ ತಾಯಿ. (ಯೋಹಾನನನ್ನು ಮಾರ್ಕನೆಂದು ಕರೆಯುತ್ತಿದ್ದರು.) ಅನೇಕ ಜನರು ಅಲ್ಲಿ ಸೇರಿದ್ದರು. ಅವರೆಲ್ಲರೂ ಪ್ರಾರ್ಥಿಸುತ್ತಿದ್ದರು.[13] ಪೇತ್ರನು ಹೊರ ಬಾಗಲನ್ನು ತಟ್ಟಿದನು. ಯಾರೆಂದು ವಿಚಾರಿಸುವುದಕ್ಕಾಗಿ ರೋದೆ ಎಂಬ ಸೇವಕಿ ಬಂದಳು.[14] ರೋದೆಯು ಪೇತ್ರನ ಧ್ವನಿಯನ್ನು ಗುರುತಿಸಿದಳು. ಆಕೆಗೆ ತುಂಬಾ ಸಂತೋಷವಾಯಿತು. ಬಾಗಿಲು ತೆರೆಯುವುದನ್ನು ಆಕೆ ಮರೆತು, ನೆರೆದು ಬಂದಿದ್ದ ಜನರ ಬಳಿಗೆ ಓಡಿಹೋಗಿ, “ಪೇತ್ರನು ಬಾಗಿಲ ಬಳಿ ನಿಂತಿದ್ದಾನೆ!” ಎಂದು ಹೇಳಿದಳು.[15] ಆ ವಿಶ್ವಾಸಿಗಳು ಆಕೆಗೆ, “ನಿನಗೆ ಹುಚ್ಚು ಹಿಡಿದಿದೆ!” ಎಂದರು. ಆದರೆ ಅವಳು ತಾನು ಹೇಳುತ್ತಿರುವುದು ನಿಜವೆಂದು ಒತ್ತಿಹೇಳಿದಳು. ಆದ್ದರಿಂದ ಅವರು, “ಅವನು ಪೇತ್ರನ ದೂತನಿರಬೇಕು” ಎಂದು ಹೇಳಿದರು.[16] ಆದರೆ ಪೇತ್ರನು ಬಾಗಿಲನ್ನು ತಟ್ಟುತ್ತಲೇ ಇದ್ದನು. ಆ ವಿಶ್ವಾಸಿಗಳು ಬಾಗಿಲನ್ನು ತೆರೆದಾಗ ಅವರು ಪೇತ್ರನನ್ನು ಕಂಡು ವಿಸ್ಮಿತರಾದರು.[17] ಪೇತ್ರನು ಅವರಿಗೆ ಸುಮ್ಮನಿರಬೇಕೆಂದು ಸನ್ನೆ ಮಾಡಿದನು. ಪ್ರಭುವು ತನ್ನನ್ನು ಸೆರೆಮನೆಯಿಂದ ಬಿಡಿಸಿದ ರೀತಿಯನ್ನು ಅವನು ಅವರಿಗೆ ವಿವರಿಸಿ, “ಯಾಕೋಬನಿಗೂ ಮತ್ತು ಸಹೋದರರಿಗೂ ಈ ಸಂಗತಿಯನ್ನು ತಿಳಿಸಿರಿ” ಎಂದು ಹೇಳಿದನು. ಬಳಿಕ ಪೇತ್ರನು ಬೇರೊಂದು ಸ್ಥಳಕ್ಕೆ ಅಲ್ಲಿಂದ ಹೊರಟುಹೋದನು.[18] ಮರುದಿನ, ಪೇತ್ರನು ಏನಾದನೆಂದು ಸೈನಿಕರ ನಡುವೆ ದೊಡ್ಡ ಗೊಂದಲವೇ ಎದ್ದಿತು.[19] ಹೆರೋದನು ಎಲ್ಲೆಲ್ಲಿ ಹುಡುಕಿದರೂ ಪೇತ್ರನನ್ನು ಕಂಡುಹಿಡಿಯಲಾಗಲಿಲ್ಲ. ಆದ್ದರಿಂದ ಹೆರೋದನು ಕಾವಲುಗಾರರನ್ನು ವಿಚಾರಿಸಿ ಅವರಿಗೇ ಮರಣದಂಡನೆ ವಿಧಿಸಿದನು. ತರುವಾಯ ಹೆರೋದನು ಜುದೇಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಬಂದು ಅಲ್ಲೇ ಸ್ವಲ್ಪಕಾಲ ನೆಲೆಸಿದ್ದನು.

ಪ್ರೇಷಿತರ 9:1-14
[1] ಪ್ರಭುವಿನ ಶಿಷ್ಯರನ್ನು ಹೆದರಿಸಲು ಮತ್ತು ಕೊಲ್ಲಲು ಸೌಲನು ಜೆರುಸಲೇಮಿನಲ್ಲಿ ಇನ್ನೂ ಪ್ರಯತ್ನಿಸುತ್ತಿದ್ದನು. ಆದ್ದರಿಂದ ಅವನು ಪ್ರಧಾನಯಾಜಕನ ಬಳಿಗೆ ಹೋಗಿ,[2] ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.[3] ಅಂತೆಯೇ ಸೌಲನು ದಮಸ್ಕಕ್ಕೆ ಹೊರಟನು. ಅವನು ಪಟ್ಟಣದ ಸಮೀಪಕ್ಕೆ ಬಂದಾಗ, ಬಹು ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಇದ್ದಕ್ಕಿದ್ದಂತೆ ಅವನ ಸುತ್ತಲೂ ಹೊಳೆಯಿತು.[4] ಸೌಲನು ನೆಲಕ್ಕೆ ಬಿದ್ದನು. “ಸೌಲನೇ, ಸೌಲನೇ, ನೀನು ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿಯೊಂದು ಅವನಿಗೆ ಕೇಳಿಸಿತು.[5] ಸೌಲನು, “ಪ್ರಭುವೇ, ನೀನು ಯಾರು?” ಎಂದನು. ಆ ವಾಣಿಯು, “ನೀನು ಹಿಂಸಿಸುತ್ತಿರುವ ಯೇಸುವೇ ನಾನು![6] ಈಗ ಎದ್ದು ಪಟ್ಟಣದೊಳಗೆ ಹೋಗು. ನೀನು ಏನು ಮಾಡಬೇಕೆಂಬುದನ್ನು ಅಲ್ಲಿಯ ಒಬ್ಬನು ನಿನಗೆ ತಿಳಿಸುವನು” ಎಂದಿತು.[7] ಸೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು ಅಲ್ಲೇ ನಿಂತಿದ್ದರು. ಅವರು ಏನೂ ಮಾತಾಡಲಿಲ್ಲ. ಆ ಜನರು ವಾಣಿಯನ್ನು ಕೇಳಿದರು. ಆದರೆ ಅವರು ಯಾರನ್ನೂ ನೋಡಲಿಲ್ಲ.[8] ಸೌಲನು ನೆಲದ ಮೇಲಿಂದ ಎದ್ದು ಕಣ್ಣುಗಳನ್ನು ತೆರೆದನು. ಆದರೆ ಅವನಿಗೆ ಏನೂ ಕಾಣಲಿಲ್ಲ. ಆದ್ದರಿಂದ ಸೌಲನೊಂದಿಗಿದ್ದ ಜನರು ಅವನನ್ನು ಕೈಹಿಡಿದು ದಮಸ್ಕಕ್ಕೆ ಕರೆದೊಯ್ದರು.[9] ಮೂರು ದಿನಗಳವರೆಗೆ ಸೌಲನಿಗೆ ಏನೂ ಕಾಣಲಿಲ್ಲ. ಅವನು ಊಟವನ್ನೂ ಮಾಡಲಿಲ್ಲ ನೀರನ್ನೂ ಕುಡಿಯಲಿಲ್ಲ.[10] ದಮಸ್ಕದಲ್ಲಿ ಯೇಸುವಿನ ಶಿಷ್ಯನೊಬ್ಬನಿದ್ದನು. ಅವನ ಹೆಸರು ಅನನೀಯ. ಪ್ರಭುವು ಅನನೀಯನನ್ನು ದರ್ಶನದಲ್ಲಿ “ಅನನೀಯನೇ” ಎಂದು ಕರೆದನು. ಅನನೀಯನು, “ಪ್ರಭುವೇ, ಇಗೋ ಇದ್ದೇನೆ” ಎಂದು ಉತ್ತರಕೊಟ್ಟನು.[11] ಪ್ರಭುವು ಅನನೀಯನಿಗೆ, “ಎದ್ದು, ‘ನೇರಬೀದಿ’ ಎಂಬ ಬೀದಿಗೆ ಹೋಗು. ಅಲ್ಲಿರುವ ಯೂದನ ಮನೆಯನ್ನು ಕಂಡುಕೊಂಡು ತಾರ್ಸಸ್ ಪಟ್ಟಣದ ಸೌಲನ ಬಗ್ಗೆ ವಿಚಾರಿಸು. ಈಗ ಅವನು ಅಲ್ಲಿ ಪ್ರಾರ್ಥಿಸುತ್ತಿದ್ದಾನೆ.[12] ಸೌಲನು ಒಂದು ದರ್ಶನವನ್ನು ಕಂಡಿದ್ದಾನೆ. ಅನನೀಯನೆಂಬ ಒಬ್ಬನು ಅವನ ಬಳಿಗೆ ಬಂದು ತನ್ನ ಕೈಗಳನ್ನು ಅವನ ಮೇಲಿಡುವನು. ಆಗ ಅವನಿಗೆ ಮತ್ತೆ ದೃಷ್ಟಿಬರುವುದು. ಇದೇ ಆ ದರ್ಶನ” ಎಂದು ಹೇಳಿದನು.[13] ಆದರೆ ಅನನೀಯನು, “ಪ್ರಭುವೇ, ಜೆರುಸಲೇಮಿನಲ್ಲಿರುವ ನಿನ್ನ ಪವಿತ್ರ ಜನರಿಗೆ ಈ ಮನುಷ್ಯನು ಮಾಡಿದ ಅನೇಕ ಕೆಟ್ಟಕೃತ್ಯಗಳ ಬಗ್ಗೆ ಜನರು ನನಗೆ ಹೇಳಿದ್ದಾರೆ.[14] ಈಗ ಅವನು ದಮಸ್ಕಕ್ಕೂ ಬಂದಿದ್ದಾನೆ. ನಿನ್ನಲ್ಲಿ ನಂಬಿಕೆ ಇಡುವ ಜನರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಮಹಾಯಾಜಕರು ಅವನಿಗೆ ಕೊಟ್ಟಿದ್ದಾರೆ” ಎಂದು ಹೇಳಿದನು.

ಗಲಾತ್ಯರಿಗೆ 1:13
ನನ್ನ ಹಿಂದಿನ ಜೀವಿತದ ಬಗ್ಗೆ ನೀವು ಕೇಳಿದ್ದೀರಿ. ನಾನು ಯೆಹೂದ್ಯಧರ್ಮಕ್ಕೆ ಸೇರಿದವನಾಗಿದ್ದೆನು. ದೇವರ ಸಭೆಯನ್ನು ಬಹಳವಾಗಿ ಹಿಂಸಿಸಿದೆನು. ಕ್ರೈಸ್ತ ಸಭೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದೆನು.

ಪ್ರಕಟನೆ 2:8-10
[8] “ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಆದಿಯೂ ಅಂತ್ಯವೂ ಆಗಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ. ಸತ್ತು ಜೀವಂತವಾಗಿ ಎದ್ದುಬಂದಾತನು ಆತನೇ.[9] “ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.[10] ನಿನಗೆ ಸಂಭವಿಸುವ ಸಂಗತಿಗಳ ವಿಷಯದಲ್ಲಿ ಭಯಪಡಬೇಡ. ನಾನು ನಿನಗೆ ಹೇಳುವುದೇನೆಂದರೆ, ಸೈತಾನನು ನಿಮ್ಮಲ್ಲಿ ಕೆಲವರನ್ನು ಪರೀಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸುತ್ತಾನೆ. ನೀವು ಹತ್ತು ದಿನಗಳ ಕಾಲ ಸಂಕಟವನ್ನು ಅನುಭವಿಸುವಿರಿ. ನೀನು ಸಾಯಬೇಕಾದರೂ ನಂಬಿಗಸ್ತನಾಗಿದ್ದರೆ, ನಾನು ನಿನಗೆ ಜೀವವೆಂಬ ಕಿರೀಟವನ್ನು ದಯಪಾಲಿಸುವೆನು.

ಪ್ರೇಷಿತರ 26:9-11
[9] “ನಾನು ಫರಿಸಾಯನಾಗಿದ್ದಾಗ ನಜರೇತಿನ ಯೇಸುವಿನ ಹೆಸರಿಗೆ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಬೇಕೆಂದು ಆಲೋಚಿಸಿಕೊಂಡೆನು.[10] ಜೆರುಸಲೇಮಿನಲ್ಲಿ ವಿಶ್ವಾಸಿಗಳ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಿದೆ. ಈ ವಿಶ್ವಾಸಿಗಳಲ್ಲಿ ಅನೇಕರನ್ನು ಸೆರೆಮನೆಗೆ ಹಾಕಲು ಮಹಾಯಾಜಕರು ನನಗೆ ಅಧಿಕಾರವನ್ನು ಕೊಟ್ಟರು. ಯೇಸುವಿನ ಶಿಷ್ಯರನ್ನು ಕೊಂದಾಗ ಅದಕ್ಕೆ ನಾನೂ ನನ್ನ ಸಮ್ಮತಿಯನ್ನು ಸೂಚಿಸಿದೆ.[11] ಪ್ರತಿಯೊಂದು ಸಭಾಮಂದಿರದಲ್ಲಿಯೂ ನಾನು ಅವರನ್ನು ದಂಡಿಸಿದೆನು. ಯೇಸುವಿನ ವಿರುದ್ಧ ದೂಷಣೆಯ ಮಾತುಗಳನ್ನು ಅವರ ಬಾಯಿಂದ ಹೊರಡಿಸಲು ನಾನು ಪ್ರಯತ್ನಿಸಿದೆನು. ಆ ವಿಶ್ವಾಸಿಗಳ ಮೇಲೆ ಬಹುಕೋಪವುಳ್ಳವನಾಗಿದ್ದು ಅವರನ್ನು ಹುಡುಕಿಹುಡುಕಿ ಹಿಂಸಿಸುವುದಕ್ಕಾಗಿ ವಿದೇಶದ ಪಟ್ಟಣಗಳಿಗೂ ಹೋದೆನು.

ಕೊರಿಂಥಿಯರಿಗೆ ೧ ೪:೧೨
ನಾವು ಊಟಕ್ಕಾಗಿ ನಮ್ಮ ಕೈಯಾರೆ ಕಷ್ಟಪಟ್ಟು ದುಡಿಯುತ್ತೇವೆ. ಜನರು ನಮ್ಮನ್ನು ಶಪಿಸುತ್ತಾರೆ, ನಾವಾದರೋ ಅವರನ್ನು ಆಶೀರ್ವದಿಸುತ್ತೇವೆ. ಜನರು ನಮಗೆ ಹಿಂಸೆ ಕೊಟ್ಟರೂ ತಾಳಿಕೊಳ್ಳುತ್ತೇವೆ.

ಪ್ರೇಷಿತರ ೧೨:೧
ಆ ಕಾಲದಲ್ಲಿ ರಾಜ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸಿಸತೊಡಗಿ,

ಫಿಲಿಪಿಯರಿಗೆ ೩:೬
ಯೆಹೂದ್ಯ ಧರ್ಮದಲ್ಲಿ ಬಹಳ ಆಸಕ್ತಿಯುಳ್ಳವನಾಗಿದ್ದು ಕ್ರೈಸ್ತಸಭೆಯನ್ನು (ವಿಶ್ವಾಸಿಗಳನ್ನು) ಹಿಂಸಿಸಿದೆನು. ಮೋಶೆಯ ಧರ್ಮಶಾಸ್ತ್ರಕ್ಕೆ ಯಾವಾಗಲೂ ವಿಧೇಯನಾಗಿದ್ದುದರಿಂದ ಯಾರೂ ನನ್ನ ವಿಷಯದಲ್ಲಿ ತಪ್ಪನ್ನು ಕಂಡುಹಿಡಿಯಲಾಗಲಿಲ್ಲ.

Kannada Bible 1934
Public Domain: 1934