A A A A A

ಚರ್ಚ್: [ಧರ್ಮಾಧಿಕಾರಿಗಳು]


ತಿಮೊಥೇಯನಿಗ ೧ ೩:೧-೧೩
[೧] ನಾನು ಹೇಳುವ ಈ ಸಂಗತಿ ಸತ್ಯವಾದದ್ದು. ಅದೇನೆಂದರೆ, ಸಭಾಧ್ಯಕ್ಷನಾಗಲು ಬಹಳವಾಗಿ ಪ್ರಯತ್ನಿಸುವವನು ಒಳ್ಳೆಯ ಕೆಲಸವನ್ನೇ ಅಪೇಕ್ಷಿಸುವವನಾಗಿದ್ದಾನೆ.[೨] ಅವನು ಜನರ ಟೀಕೆಗೆ ಒಳಗಾಗದಷ್ಟು ಉತ್ತಮನಾಗಿರಬೇಕು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನು ಜಿತೇಂದ್ರಿಯನೂ ಜ್ಞಾನಿಯೂ ಆಗಿರಬೇಕು; ಜನರ ಗೌರವಕ್ಕೆ ಪಾತ್ರನಾಗಿರಬೇಕು; ಜನರನ್ನು ತನ್ನ ಮನೆಗೆ ಸ್ವಾಗತಿಸಿ ಅವರಿಗೆ ಸಹಾಯ ಮಾಡಲು ಸಿದ್ಧನಾಗಿರಬೇಕು; ಒಳ್ಳೆಯ ಉಪದೇಶಕನಾಗಿರಬೇಕು;[೩] ಮದ್ಯಪಾನದಲ್ಲಿ ಆಸ್ತಕನಾಗಿರಬಾರದು ಮತ್ತು ಹಿಂಸಾತ್ಮಕನಾಗಿರಬಾರದು. ಅವನು ಸಾತ್ವಿಕನೂ ಶಾಂತನೂ ಆಗಿರಬೇಕು; ಹಣದಾಸೆ ಉಳ್ಳವನಾಗಿರಬಾರದು.[೪] ಅವನು ತನ್ನ ಸ್ವಂತ ಕುಟುಂಬಕ್ಕೆ ಒಳ್ಳೆಯ ನಾಯಕನಾಗಿರಬೇಕು. ಅವನ ಮಕ್ಕಳು ಅವನಿಗೆ ವಿಧೇಯರಾಗಿದ್ದು ಪೂರ್ಣ ಗೌರವವನ್ನು ನೀಡುವಂತಿರಬೇಕೆಂಬುದು ಇದರ ಅರ್ಥ.[೫] (ತನ್ನ ಸ್ವಂತ ಕುಟುಂಬವನ್ನು ಆಳಲು ತಿಳಿಯದವನು ದೇವರ ಸಭೆಯನ್ನು ಪರಾಮರಿಸಲು ಸಮರ್ಥನಲ್ಲ.)[೬] ಅವನು ಹೊಸ ವಿಶ್ವಾಸಿಯಾಗಿರಬಾರದು. ಹೊಸ ವಿಶ್ವಾಸಿಯನ್ನು ಸಭಾಧ್ಯಕ್ಷನನ್ನಾಗಿ ಮಾಡಿದರೆ, ಅವನು ಗರ್ವಿಷ್ಠನಾಗುವನು. ಸೈತಾನನು ತನ್ನ ಗರ್ವದ ನಿಮಿತ್ತ ಶಿಕ್ಷೆಗೆ ಒಳಗಾದಂತೆ ಇವನೂ ಶಿಕ್ಷೆಗೆ ಗುರಿಯಾಗುವನು.[೭] ಸಭಾಧ್ಯಕ್ಷನು ಸಭೆಯಲ್ಲಿಲ್ಲದ ಜನರ ಗೌರವಕ್ಕೆ ಸಹ ಪಾತ್ರನಾಗಿರಬೇಕು. ಆಗ ಅವನು ಇತರರ ಟೀಕೆಗೆ ಗುರಿಯಾಗುವುದೂ ಇಲ್ಲ, ಸೈತಾನನ ವಂಚನೆಗೆ ಸಿಕ್ಕಿಬೀಳುವುದೂ ಇಲ್ಲ.[೮] ಅದೇ ರೀತಿಯಲ್ಲಿ ಸಭೆಯಲ್ಲಿ ವಿಶೇಷ ಸೇವಕರಾದವರು ತಮ್ಮ ನಡತೆಯ ನಿಮಿತ್ತ ಇತರರಿಂದ ಗೌರವ ಹೊಂದಿದವರಾಗಿರಬೇಕು. ಯಥಾರ್ಥವಾಗಿ ಮಾತಾಡುವಂಥವರಾಗಿರಬೇಕು. ಅವರು ಮದ್ಯಪಾನದಲ್ಲಿ ಆಸ್ತಕರಾಗಿದ್ದು ತಮ್ಮ ಕಾಲವನ್ನು ಕಳೆಯುವವರಾಗಿರಬಾರದು; ಯಾವಾಗಲೂ ಇತರರನ್ನು ಮೋಸಗೊಳಿಸಿ ಶ್ರೀಮಂತರಾಗಲು ಪ್ರಯತ್ನಿಸುವವರಾಗಿರಬಾರದು;[೯] ದೇವರು ನಮಗೆ ತಿಳಿಸಿಕೊಟ್ಟ ಸತ್ಯವನ್ನು ಶುದ್ಧ ಮನಸ್ಸಾಕ್ಷಿಯಿಂದ ಮಾಡುವವರಾಗಿರಬೇಕು.[೧೦] ಅವರನ್ನು ನೀನು ಮೊದಲು ಪರೀಕ್ಷಿಸು. ಅವರು ಕಳಂಕರಹಿತರಾಗಿದ್ದರೆ, ಸೇವಕರಾಗಿ ಸೇವೆ ಮಾಡಬಹುದು.[೧೧] ಇದೇ ರೀತಿಯಲ್ಲಿ ಸಭಾಸೇವಕಿಯರಾದ ಸ್ತ್ರೀಯರು ಜನರ ಗೌರವಕ್ಕೆ ಪಾತ್ರರಾಗಿರಬೇಕು. ಅವರು ಇತರ ಜನರ ಬಗ್ಗೆ ಕೆಟ್ಟದ್ದನ್ನು ಹೇಳುವಂಥವರಾಗಿರಬಾರದು. ಅವರು ತಮ್ಮನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು; ಎಲ್ಲಾ ವಿಷಯಗಳಲ್ಲಿಯೂ ನಂಬಿಗಸ್ತರಾಗಿರಬೇಕು.[೧೨] ಸಭಾಸೇವಕರು ಏಕ ಪತ್ನಿ ಉಳ್ಳವರಾಗಿರಬೇಕು. ಅವರು ತಮ್ಮ ಮಕ್ಕಳಿಗೆ ಮತ್ತು ಕುಟುಂಬಕ್ಕೆ ಒಳ್ಳೆಯ ನಾಯಕರಾಗಿರಬೇಕು.[೧೩] ಯೋಗ್ಯ ಮಾರ್ಗದಲ್ಲಿ ಸೇವೆ ಮಾಡುವ ಜನರು ತಮಗೆ ಗೌರವಯುತವಾದ ಸ್ಥಾನವನ್ನು ಪಡೆಯುವರು. ಕ್ರಿಸ್ತ ಯೇಸುವಿನಲ್ಲಿ ತಮಗಿರುವ ನಂಬಿಕೆಯ ವಿಷಯದಲ್ಲಿ ಅವರು ಭರವಸೆ ಉಳ್ಳವರಾಗಿರುತ್ತಾರೆ.

ಫಿಲಿಪಿಯರಿಗೆ ೧:೧
ಯೇಸು ಕ್ರಿಸ್ತನ ದಾಸರಾದ ಪೌಲನು ತಿಮೊಥೆಯನು ಫಿಲಿಪ್ಪಿಯವರಿಗೆ ಬರೆಯುವ ಪತ್ರ. ಯೇಸು ಕ್ರಿಸ್ತನ ಮೂಲಕ ದೇವರ ಪರಿಶುದ್ಧ ಜನರಾಗಿರುವವರಿಗೂ ಎಲ್ಲಾ ಹಿರಿಯರಿಗೂ ಸಭಾಸೇವಕರಿಗೂ ನಾವು ಈ ಪತ್ರವನ್ನು ಬರೆಯತ್ತಿದ್ದೇವೆ.

ಪ್ರೇಷಿತರ ೬:೧-೭
[೧] ಯೇಸುವಿನ ಶಿಷ್ಯರ ಸಂಖ್ಯೆಯು ಹೆಚ್ಚುಹೆಚ್ಚಾಗುತ್ತಿತ್ತು. ಆದರೆ ಈ ಸಮಯದಲ್ಲಿ ಗ್ರೀಕ್ ಮಾತಾಡುವ ಶಿಷ್ಯರು ಯೆಹೂದ್ಯ ಶಿಷ್ಯರಿಗೆ ದೂರು ಹೇಳಿದರು. ಪ್ರತಿದಿನ ಶಿಷ್ಯರಿಗೆ ಕೊಡುವಂಥವುಗಳಲ್ಲಿ ತಮ್ಮ ವಿಧವೆಯರಿಗೆ ಅವರ ಪಾಲು ದೊರೆಯುತ್ತಿಲ್ಲವೆಂದು ಅವರು ಆಪಾದಿಸಿದರು.[೨] ಆಗ ಹನ್ನೆರಡು ಮಂದಿ ಅಪೊಸ್ತಲರು ಇಡೀ ಶಿಷ್ಯಸಮುದಾಯದ ಸಭೆಯನ್ನು ಕರೆದು ಅವರಿಗೆ, “ದೇವರ ವಾಕ್ಯವನ್ನು ಬೋಧಿಸುವುದು ನಮ್ಮ ಕೆಲಸ. ಆದರೆ ಅದು ನಿಂತುಹೋಗುವುದು ಸರಿಯಲ್ಲ! ನಾವು ಜನರಿಗೆ ಊಟವನ್ನು ಒದಗಿಸಲು ಸಹಾಯ ಮಾಡುವುದಕ್ಕಿಂತಲೂ ದೇವರ ವಾಕ್ಯೋಪದೇಶವನ್ನು ಮುಂದುವರಿಸುವುದು ಒಳ್ಳೆಯದು.[೩] ಆದ್ದರಿಂದ, ಸಹೋದರರೇ, ನಿಮ್ಮ ಜನರಲ್ಲಿ ಏಳು ಮಂದಿಯನ್ನು ಆರಿಸಿಕೊಳ್ಳಿರಿ. ಅವರು ಜನರಿಂದ ಒಳ್ಳೆಯವರು ಎನಿಸಿಕೊಂಡವರಾಗಿರಬೇಕು; ಜ್ಞಾನಪೂರ್ಣರಾಗಿರಬೇಕು ಮತ್ತು ಪವಿತ್ರಾತ್ಮಭರಿತರಾಗಿರಬೇಕು. ನಾವು ಅವರಿಗೆ ಈ ಕೆಲಸವನ್ನು ಒಪ್ಪಿಸಿಕೊಡುತ್ತೇವೆ.[೪] ಆಗ ನಾವು ನಮ್ಮ ಸಮಯವನ್ನೆಲ್ಲಾ ಪ್ರಾರ್ಥನೆಗೂ ದೇವರ ವಾಕ್ಯೋಪದೇಶಕ್ಕೂ ಕೊಡಲು ಸಾಧ್ಯವಾಗುತ್ತದೆ” ಎಂದು ಹೇಳಿದರು.[೫] ಇಡೀ ಸಮುದಾಯವು ಈ ಆಲೋಚನೆಯನ್ನು ಇಷ್ಟಪಟ್ಟಿತು. ಆದ್ದರಿಂದ ಅವರು ಈ ಏಳು ಮಂದಿಯನ್ನು ಆರಿಸಿಕೊಂಡರು: ಸ್ತೆಫನ (ಮಹಾನಂಬಿಕೆಯುಳ್ಳ ಮತ್ತು ಪವಿತ್ರಾತ್ಮಭರಿತನಾಗಿದ್ದ ಮನುಷ್ಯ), ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ನಿಕೊಲಾಯ (ಮತಾಂತರ ಹೊಂದಿ ಯೆಹೂದ್ಯನಾಗಿದ್ದ ಇವನು ಅಂತಿಯೋಕ್ಯಕ್ಕೆ ಸೇರಿದವನು.)[೬] ಬಳಿಕ ಅವರು ಈ ಏಳು ಮಂದಿಯನ್ನು ಅಪೊಸ್ತಲರ ಮುಂದೆ ನಿಲ್ಲಿಸಿದರು. ಅಪೊಸ್ತಲರು ಪ್ರಾರ್ಥಿಸಿ, ಅವರ ತಲೆಗಳ ಮೇಲೆ ತಮ್ಮ ಕೈಗಳನ್ನಿಟ್ಟರು.[೭] ದೇವರ ವಾಕ್ಯವು ಹೆಚ್ಚುಹೆಚ್ಚು ಜನರಿಗೆ ತಲುಪತೊಡಗಿತು. ಜೆರುಸಲೇಮಿನ ಶಿಷ್ಯಸಮುದಾಯವು ಹೆಚ್ಚುಹೆಚ್ಚು ದೊಡ್ಡದಾಗ ತೊಡಗಿತು. ಅನೇಕ ಯೆಹೂದ್ಯಯಾಜಕರು ನಂಬಿಕೊಂಡರು ಮತ್ತು ವಿಧೇಯರಾದರು.

ರೋಮನರಿಗೆ १६:१
ಕ್ರಿಸ್ತನಲ್ಲಿ ನಮ್ಮ ಸಹೋದರಿಯಾದ ಪೊಯಿಬೆಯನ್ನು ನಾನು ನಿಮಗೆ ಶಿಫಾರಸು ಮಾಡಲಿಚ್ಛಿಸುತ್ತೇನೆ. ಈಕೆಯು ಕೆಂಕ್ರೆಯ ಪಟ್ಟಣದ ಸಭೆಯಲ್ಲಿ ವಿಶೇಷ ಸಹಾಯಕಳಾಗಿದ್ದಾಳೆ.

ತೀತನಿಗೆ ೧:೭
ಸಭಾಹಿರಿಯನು ದೇವರ ಸೇವೆಯ ಜವಾಬ್ದಾರಿಯನ್ನು ಹೊತ್ತು ಕೊಂಡವನಾಗಿದ್ದಾನೆ. ಆದ್ದರಿಂದ ಅವನು ಅಪರಾಧಿಯೆಂಬ ನಿಂದನೆಗೆ ಒಳಗಾಗಿರಬಾರದು; ಗರ್ವಿಷ್ಠನಾಗಿರಬಾರದು; ಸ್ವಾರ್ಥಿಯಾಗಿರಬಾರದು ಮತ್ತು ಮುಂಗೋಪಿಯಾಗಿರಬಾರದು; ದ್ರಾಕ್ಷಾರಸವನ್ನು ಅತಿಯಾಗಿ ಕುಡಿಯುವವನಾಗಿರಬಾರದು; ಜಗಳಗಂಟನಾಗಿರಬಾರದು; ಜನರನ್ನು ವಂಚಿಸಿ ಶ್ರೀಮಂತನಾಗಲು ಪ್ರಯತ್ನಿಸುವವನಾಗಿರಬಾರದು.

ಪ್ರೇಷಿತರ ೬:೩
ಆದ್ದರಿಂದ, ಸಹೋದರರೇ, ನಿಮ್ಮ ಜನರಲ್ಲಿ ಏಳು ಮಂದಿಯನ್ನು ಆರಿಸಿಕೊಳ್ಳಿರಿ. ಅವರು ಜನರಿಂದ ಒಳ್ಳೆಯವರು ಎನಿಸಿಕೊಂಡವರಾಗಿರಬೇಕು; ಜ್ಞಾನಪೂರ್ಣರಾಗಿರಬೇಕು ಮತ್ತು ಪವಿತ್ರಾತ್ಮಭರಿತರಾಗಿರಬೇಕು. ನಾವು ಅವರಿಗೆ ಈ ಕೆಲಸವನ್ನು ಒಪ್ಪಿಸಿಕೊಡುತ್ತೇವೆ.

ಯೊವಾನ್ನನು ೮:೩೨
ನೀವು ಸತ್ಯವನ್ನು ತಿಳಿದುಕೊಳ್ಳುವಿರಿ. ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.

ಎಫೆಸಿಯರಿಗೆ ೪:೧೧
ಆತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಉಪದೇಶಕರನ್ನಾಗಿಯೂ ನೇಮಿಸಿದನು.

ಪ್ರೇಷಿತರ ೨೦:೨೮
ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.

ಯೊವಾನ್ನನು ೬:೫೪
ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು.

ಮಾರ್ಕನು ೬:೩
ಇವನು ಕೇವಲ ಬಡಗಿಯಲ್ಲವೋ? ಇವನ ತಾಯಿ ಮರಿಯಳು. ಇವನು ಯಾಕೋಬ, ಯೋಸೆ, ಯೂದ ಮತ್ತು ಸಿಮೋನರ ಅಣ್ಣ. ಇವನ ತಂಗಿಯರು ಇಲ್ಲಿ ನಮ್ಮೊಂದಿಗಿದ್ದಾರೆ” ಎಂದು ಹೇಳಿ ಆತನನ್ನು ತಾತ್ಸಾರ ಮಾಡಿದರು.

ಕೊರಿಂಥಿಯರಿಗೆ ೧ ೧೨:೨೮
ದೇವರು ಸಭೆಯಲ್ಲಿ ಅಪೊಸ್ತಲರಿಗೆ ಮೊದಲನೆಯ ಸ್ಥಾನವನ್ನೂ ಪ್ರವಾದಿಗಳಿಗೆ ಎರಡನೆಯ ಸ್ಥಾನವನ್ನೂ ಉಪದೇಶಕರಿಗೆ ಮೂರನೆಯ ಸ್ಥಾನವನ್ನೂ ಇಟ್ಟಿದ್ದಾನೆ. ಇದಲ್ಲದೆ ದೇವರು, ಅದ್ಭುತಕಾರ್ಯಗಳನ್ನು ಮಾಡುವ ಜನರಿಗೂ ಸ್ಪಸ್ಥಪಡಿಸುವ ಜನರಿಗೂ ಇತರರಿಗೆ ಸಹಾಯಮಾಡುವ ಜನರಿಗೂ ಮುನ್ನಡೆಸಬಲ್ಲ ಜನರಿಗೂ ವಿವಿಧ ಭಾಷೆಗಳನ್ನು ಮಾತಾಡಬಲ್ಲ ಜನರಿಗೂ ಸಭೆಯಲ್ಲಿ ಸ್ಥಾನವನ್ನು ಕೊಟ್ಟಿದ್ದಾನೆ.

ಗಲಾತ್ಯರಿಗೆ ೧:೧೯
ಪ್ರಭುವಿನ (ಯೇಸು) ಸಹೋದರನಾದ ಯಾಕೋಬನನ್ನು ಹೊರತು ಬೇರೆ ಯಾವ ಅಪೊಸ್ತಲರನ್ನೂ ನಾನು ಭೇಟಿಯಾಗಲಿಲ್ಲ.

ಮಲಾಕಿಯನ ೧:೧೧
“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಹಿಬ್ರಿಯರಿಗೆ ೧೩:೧೭
ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ ಮತ್ತು ಅವರ ಅಧಿಕಾರದ ಅಧೀನದಲ್ಲಿರಿ. ಅವರೇ ನಿಮಗೆ ಜವಾಬ್ದಾರರು. ಅವರು ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಈ ಕಾರ್ಯವನ್ನು ವ್ಯಸನದಿಂದ ಮಾಡದೆ ಸಂತೋಷದಿಂದ ಮಾಡಲು ಸಾಧ್ಯವಾಗುವಂತೆ ಅವರಿಗೆ ವಿಧೇಯರಾಗಿರಿ. ಅವರ ಕಾರ್ಯವನ್ನು ಕಷ್ಟಕರವನ್ನಾಗಿ ಮಾಡುವುದರಿಂದ ನಿಮಗೇನೂ ಪ್ರಯೋಜನವಿಲ್ಲ.

ಯೊವಾನ್ನನು ೩:೩-೫
[೩] ಯೇಸು “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಹೊಸದಾಗಿ ಹುಟ್ಟಲೇಬೇಕು. ಒಬ್ಬನು ಹೊಸದಾಗಿ ಹುಟ್ಟಿಲ್ಲದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು” ಎಂದು ಉತ್ತರಿಸಿದನು.[೪] ನಿಕೊದೇಮನು, “ಮನುಷ್ಯನು ಮುದುಕನಾದ ಮೇಲೆ ಹುಟ್ಟುವುದು ಹೇಗೆ? ಒಬ್ಬನು ತನ್ನ ತಾಯಿಯ ಗರ್ಭದೊಳಗೆ ಮತ್ತೆ ಪ್ರವೇಶಿಸಲು ಸಾಧ್ಯವೇ?” ಎಂದು ಕೇಳಿದನು.[೫] ಅದಕ್ಕೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟಲೇಬೇಕು. ಇಲ್ಲವಾದರೆ ಅವನು ದೇವರ ರಾಜ್ಯವನ್ನು ಪ್ರವೇಶಿಸಲಾರನು.

ಹಿಬ್ರಿಯರಿಗೆ ೧೨:೧೪
ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.

ಪ್ರೇಷಿತರ ೬:೪
ಆಗ ನಾವು ನಮ್ಮ ಸಮಯವನ್ನೆಲ್ಲಾ ಪ್ರಾರ್ಥನೆಗೂ ದೇವರ ವಾಕ್ಯೋಪದೇಶಕ್ಕೂ ಕೊಡಲು ಸಾಧ್ಯವಾಗುತ್ತದೆ” ಎಂದು ಹೇಳಿದರು.

ತಿಮೊಥೇಯನಿಗ ೧ ೩:೧-೭
[೧] ನಾನು ಹೇಳುವ ಈ ಸಂಗತಿ ಸತ್ಯವಾದದ್ದು. ಅದೇನೆಂದರೆ, ಸಭಾಧ್ಯಕ್ಷನಾಗಲು ಬಹಳವಾಗಿ ಪ್ರಯತ್ನಿಸುವವನು ಒಳ್ಳೆಯ ಕೆಲಸವನ್ನೇ ಅಪೇಕ್ಷಿಸುವವನಾಗಿದ್ದಾನೆ.[೨] ಅವನು ಜನರ ಟೀಕೆಗೆ ಒಳಗಾಗದಷ್ಟು ಉತ್ತಮನಾಗಿರಬೇಕು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನು ಜಿತೇಂದ್ರಿಯನೂ ಜ್ಞಾನಿಯೂ ಆಗಿರಬೇಕು; ಜನರ ಗೌರವಕ್ಕೆ ಪಾತ್ರನಾಗಿರಬೇಕು; ಜನರನ್ನು ತನ್ನ ಮನೆಗೆ ಸ್ವಾಗತಿಸಿ ಅವರಿಗೆ ಸಹಾಯ ಮಾಡಲು ಸಿದ್ಧನಾಗಿರಬೇಕು; ಒಳ್ಳೆಯ ಉಪದೇಶಕನಾಗಿರಬೇಕು;[೩] ಮದ್ಯಪಾನದಲ್ಲಿ ಆಸ್ತಕನಾಗಿರಬಾರದು ಮತ್ತು ಹಿಂಸಾತ್ಮಕನಾಗಿರಬಾರದು. ಅವನು ಸಾತ್ವಿಕನೂ ಶಾಂತನೂ ಆಗಿರಬೇಕು; ಹಣದಾಸೆ ಉಳ್ಳವನಾಗಿರಬಾರದು.[೪] ಅವನು ತನ್ನ ಸ್ವಂತ ಕುಟುಂಬಕ್ಕೆ ಒಳ್ಳೆಯ ನಾಯಕನಾಗಿರಬೇಕು. ಅವನ ಮಕ್ಕಳು ಅವನಿಗೆ ವಿಧೇಯರಾಗಿದ್ದು ಪೂರ್ಣ ಗೌರವವನ್ನು ನೀಡುವಂತಿರಬೇಕೆಂಬುದು ಇದರ ಅರ್ಥ.[೫] (ತನ್ನ ಸ್ವಂತ ಕುಟುಂಬವನ್ನು ಆಳಲು ತಿಳಿಯದವನು ದೇವರ ಸಭೆಯನ್ನು ಪರಾಮರಿಸಲು ಸಮರ್ಥನಲ್ಲ.)[೬] ಅವನು ಹೊಸ ವಿಶ್ವಾಸಿಯಾಗಿರಬಾರದು. ಹೊಸ ವಿಶ್ವಾಸಿಯನ್ನು ಸಭಾಧ್ಯಕ್ಷನನ್ನಾಗಿ ಮಾಡಿದರೆ, ಅವನು ಗರ್ವಿಷ್ಠನಾಗುವನು. ಸೈತಾನನು ತನ್ನ ಗರ್ವದ ನಿಮಿತ್ತ ಶಿಕ್ಷೆಗೆ ಒಳಗಾದಂತೆ ಇವನೂ ಶಿಕ್ಷೆಗೆ ಗುರಿಯಾಗುವನು.[೭] ಸಭಾಧ್ಯಕ್ಷನು ಸಭೆಯಲ್ಲಿಲ್ಲದ ಜನರ ಗೌರವಕ್ಕೆ ಸಹ ಪಾತ್ರನಾಗಿರಬೇಕು. ಆಗ ಅವನು ಇತರರ ಟೀಕೆಗೆ ಗುರಿಯಾಗುವುದೂ ಇಲ್ಲ, ಸೈತಾನನ ವಂಚನೆಗೆ ಸಿಕ್ಕಿಬೀಳುವುದೂ ಇಲ್ಲ.

ತಿಮೊಥೇಯನಿಗ ೧ ೨:೧೨
ಅವರು ಪುರುಷರಿಗೆ ಉಪದೇಶಿಸುವುದಕ್ಕಾಗಲಿ ಅವರ ಮೇಲೆ ಅಧಿಕಾರ ಚಲಾಯಿಸುವುದಕ್ಕಾಗಲಿ ನಾನು ಸಮ್ಮತಿಸುವುದಿಲ್ಲ. ಅವರು ಮೌನವಾಗಿರಬೇಕು.

ಪ್ರೇಷಿತರ ೧೪:೨೩
ಪೌಲ ಬಾರ್ನಬರು ಪ್ರತಿಯೊಂದು ಸಭೆಗೂ ಹಿರಿಯರನ್ನು ಆಯ್ಕೆ ಮಾಡಿದರು. ಅವರು ಈ ಹಿರಿಯರಿಗೋಸ್ಕರ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರನ್ನು ಪ್ರಭುವಿನ ಕೈಗೆ ಒಪ್ಪಿಸಿಕೊಟ್ಟರು.

ತಿಮೊಥೇಯನಿಗ ೧ ೫:೧೭
ಸಭೆಯನ್ನು ಉತ್ತಮ ಮಾರ್ಗದಲ್ಲಿ ನಡೆಸುವ ಹಿರಿಯರು ಗೌರವಕ್ಕೂ ಸಂಬಳಕ್ಕೂ ಯೋಗ್ಯರಾಗಿದ್ದಾರೆ. ಪ್ರಸಂಗ ಮಾಡುವುದರಲ್ಲಿಯೂ ಉಪದೇಶಮಾಡುವುದರಲ್ಲಿಯೂ ನಿರತರಾಗಿರುವ ಹಿರಿಯರು ಉನ್ನತವಾದ ಗೌರವವನ್ನು ಪಡೆಯುತ್ತಾರೆ.

ಹಿಬ್ರಿಯರಿಗೆ ೧೩:೭
ನಿಮ್ಮ ಸಭಾನಾಯಕರನ್ನು ನೆನಪು ಮಾಡಿಕೊಳ್ಳಿ. ಅವರು ನಿಮಗೆ ದೇವರ ಸಂದೇಶವನ್ನು ಬೋಧಿಸಿದರು. ಅವರು ಹೇಗೆ ಜೀವಿಸಿದ್ದರು ಮತ್ತು ಹೇಗೆ ಸತ್ತರು ಎಂಬುದನ್ನು ನೆನಪಿಸಿಕೊಳ್ಳಿ. ಅವರ ನಂಬಿಕೆಯನ್ನು ಅನುಸರಿಸಿರಿ.

ತೀತನಿಗೆ ೧:೮
ಸಭಾಹಿರಿಯನು ಜನರನ್ನು ತನ್ನ ಮನೆಗೆ ಆಹ್ವಾನಿಸಿ ಅತಿಥಿಸತ್ಕಾರ ಮಾಡಲು ಸಿದ್ಧನಾಗಿರಬೇಕು. ಅವನು ಒಳ್ಳೆಯದನ್ನು ಪ್ರೀತಿಸಬೇಕು; ಜ್ಞಾನಿಯಾಗಿರಬೇಕು; ನ್ಯಾಯವಂತನಾಗಿರಬೇಕು; ಪವಿತ್ರನಾಗಿರಬೇಕು. ಅವನು ತನ್ನನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು.

ಪೇತ್ರನು ೧ ೫:೨
ನೀವು ಜವಾಬ್ದಾರಿ ವಹಿಸಿಕೊಂಡಿರುವ ಸಭೆಯನ್ನು ಪರಿಪಾಲಿಸಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ಅವರು ದೇವರ ಮಂದೆ. ನೀವು ಆ ಮಂದೆಯನ್ನು ಕಾಯಿರಿ, ಏಕೆಂದರೆ ಅದು ನಿಮ್ಮ ಬಯಕೆಯಾಗಿದೆ; ಅದು ಬಲವಂತದಿಂದ ಹೊರಿಸಿದ ಹೊರೆಯಲ್ಲ. ದೇವರು ಅದನ್ನೇ ಇಷ್ಟಪಡುತ್ತಾನೆ. ನೀವು ಆ ಮಂದೆಯನ್ನು ಕಾಯುವುದು ಹಣದ ನಿಮಿತ್ತವಲ್ಲ, ದೇವರ ಸೇವೆ ಮಾಡಲು ನಿಮಗಿರುವ ಸಂತಸದ ನಿಮಿತ್ತವಾಗಿಯೇ.

ತೀತನಿಗೆ ೧:೬
ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು.

ತಿಮೊಥೇಯನಿಗ ೧ ೫:೨೨
ನೀನು ನಿನ್ನ ಹಸ್ತಗಳನ್ನು ಯಾರ ಮೇಲಾದರೂ ಇಟ್ಟು ಅವನನ್ನು ಸಭಾಹಿರಿಯನನ್ನಾಗಿ ನೇಮಿಸುವುದಕ್ಕಿಂತ ಮೊದಲೇ ಗಮನವಿಟ್ಟು ಆಲೋಚನೆಮಾಡು. ಇತರ ಜನರ ಪಾಪಗಳಲ್ಲಿ ಪಾಲುಗಾರನಾಗದೆ ಶುದ್ಧನಾಗಿರು.

ತೀತನಿಗೆ ೧:೫
ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು.

ಗಲಾತ್ಯರಿಗೆ ೪:೧೯
ನನ್ನ ಪ್ರಿಯ ಮಕ್ಕಳೇ, ಪ್ರಸವವೇದನೆಪಡುವ ತಾಯಿಯಂತೆ ನಾನು ನಿಮ್ಮ ವಿಷಯದಲ್ಲಿ ನೋವುಳ್ಳವನಾಗಿದ್ದೇನೆ. ನೀವು ನಿಜವಾಗಿಯೂ ಕ್ರಿಸ್ತನಂತಾಗುವ ತನಕ ನನಗೆ ಈ ನೋವಿರುತ್ತದೆ.

Kannada Bible 1934
Public Domain: 1934