A A A A A

ಚರ್ಚ್: [ಸುಳ್ಳು ಶಿಕ್ಷಕರು]


ಯೆಜೆಕಿಯೇಲನ ೧೩:೯
ಯೆಹೋವನು ಹೇಳುವುದೇನೆಂದರೆ, “ಯಾವ ಪ್ರವಾದಿಗಳು ಸುಳ್ಳುದರ್ಶನವನ್ನು ನೋಡಿ ಸುಳ್ಳನ್ನು ಹೇಳಿದ್ದಾರೋ, ಅವರನ್ನು ಶಿಕ್ಷಿಸುವೆನು. ನನ್ನ ಜನರ ಮಧ್ಯೆಯಿಂದ ಅವರನ್ನು ತೆಗೆದುಬಿಡುವೆನು. ಅವರ ಹೆಸರುಗಳು ಇಸ್ರೇಲರ ವಂಶಾವಳಿ ಪಟ್ಟಿಯಲ್ಲಿ ಇರುವುದಿಲ್ಲ. ಅವರು ಇಸ್ರೇಲ್ ದೇಶಕ್ಕೆ ಹಿಂದಿರುಗಿ ಬರುವುದಿಲ್ಲ. ನಾನೇ ಒಡೆಯನಾದ ಯೆಹೋವನೆಂದು ಆಗ ನಿಮಗೆ ಗೊತ್ತಾಗುವುದು.

ಯೆರೆಮೀಯನ ಗ್ರಂಥ ೨೩:೧೬
ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: “ಆ ಪ್ರವಾದಿಗಳು ನಿಮಗೆ ಹೇಳುತ್ತಿರುವ ವಿಷಯಗಳ ಕಡೆಗೆ ಗಮನ ಕೊಡಬೇಡಿರಿ. ಅವರು ನಿಮ್ಮನ್ನು ಮರುಳುಗೊಳಿಸಲು ಪ್ರಯತಿಐಸುತ್ತಿದ್ದಾರೆ. ಅವರು ದರ್ಶನಗಳ ಬಗ್ಗೆ ಹೇಳುತ್ತಾರೆ. ಅವರ ದರ್ಶನಗಳು ಅವರ ಮನಸ್ಸಿನಿಂದ ಘಂದವುಗಳೇ ಹೊರತು ನನ್ನಿದ ಘಂದವುಗಳಲ್ಲ.

ಲೂಕನು ೬:೨೬
“ಜನರಿಂದ ಯಾವಾಗಲೂ ಹೊಗಳಿಸಿಕೊಳ್ಳುವವರೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರ ಪಿತೃಗಳು ಸುಳ್ಳು ಪ್ರವಾದಿಗಳನ್ನು ಯಾವಾಗಲೂ ಹೊಗಳುತ್ತಿದ್ದರು.

ಮತ್ತಾಯನು ೨೪:೨೪
ಸುಳ್ಳುಕ್ರಿಸ್ತರು ಮತ್ತು ಸುಳ್ಳುಪ್ರವಾದಿಗಳು ಬಂದು ದೇವರು ಆರಿಸಿಕೊಂಡಿರುವ ಜನರನ್ನು ಮೋಸಗೊಳಿಸುವುದಕ್ಕಾಗಿ ಮಹತ್ಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡುವರು.

ಮತ್ತಾಯನು ೧೬:೧೧-೧೨
[೧೧] ಆದ್ದರಿಂದ ನಾನು ನಿಮಗೆ ಹೇಳಿದ್ದು ರೊಟ್ಟಿಯ ಕುರಿತಲ್ಲ. ನೀವು ಇದನ್ನು ಅರ್ಥ ಮಾಡಿಕೊಳ್ಳುವುದಿಲ್ಲವೇಕೆ? ಫರಿಸಾಯರು ಮತ್ತು ಸದ್ದುಕಾಯರ ಹುಳಿಗೆ (ಕೆಟ್ಟ ಪ್ರಭಾವಕ್ಕೆ) ಒಳಗಾಗದಂತೆ ನೀವು ಎಚ್ಚರಿಕೆಯಿಂದಿರಬೇಕೆಂದು ನಾನು ನಿಮ್ಮನ್ನು ಎಚ್ಚರಿಸಿದೆನು” ಅಂದನು.[೧೨] ಆಗ ಶಿಷ್ಯರು ಯೇಸು ಹೇಳಿದ್ದನ್ನು ಅರ್ಥಮಾಡಿಕೊಂಡರು. ಆತನು ಅವರಿಗೆ ರೊಟ್ಟಿಯಲ್ಲಿ ಬೆರೆಸಿದ್ದ ಹುಳಿಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಲಿಲ್ಲ. ಫರಿಸಾಯರು ಮತ್ತು ಸದ್ದುಕಾಯರ ಬೋಧನೆಯ ಪ್ರಭಾವಕ್ಕೆ ಒಳಗಾಗದಂತೆ ಎಚ್ಚರಿಕೆಯಾಗಿರಬೇಕೆಂದು ಹೇಳಿದ್ದನು.

ತಿಮೊಥೇಯನಿಗ ೨ ೪:೩-೪
[೩] ಜನರು ಸತ್ಯೋಪದೇಶವನ್ನು ಕೇಳದಿರುವ ಕಾಲವು ಬರಲಿದೆ. ಜನರು ತಮ್ಮನ್ನು ಮೆಚ್ಚಿಸುವಂಥ ಬೋಧಕರನ್ನು ಮತ್ತು ತಮ್ಮ ಕಿವಿಗೆ ಹಿತವೆನಿಸುವ ಬೋಧನೆಯನ್ನು ನೀಡುವ ಬೋಧಕರನ್ನು ಕಂಡುಕೊಳ್ಳುವರು.[೪] ಜನರು ಸತ್ಯವನ್ನು ಕೇಳದೆ ಸುಳ್ಳುಕಥೆಗಳನ್ನು ಕೇಳಲಾರಂಭಿಸುತ್ತಾರೆ.

ತಿಮೊಥೇಯನಿಗ ೨ ೪:೩-೪
[೩] ಜನರು ಸತ್ಯೋಪದೇಶವನ್ನು ಕೇಳದಿರುವ ಕಾಲವು ಬರಲಿದೆ. ಜನರು ತಮ್ಮನ್ನು ಮೆಚ್ಚಿಸುವಂಥ ಬೋಧಕರನ್ನು ಮತ್ತು ತಮ್ಮ ಕಿವಿಗೆ ಹಿತವೆನಿಸುವ ಬೋಧನೆಯನ್ನು ನೀಡುವ ಬೋಧಕರನ್ನು ಕಂಡುಕೊಳ್ಳುವರು.[೪] ಜನರು ಸತ್ಯವನ್ನು ಕೇಳದೆ ಸುಳ್ಳುಕಥೆಗಳನ್ನು ಕೇಳಲಾರಂಭಿಸುತ್ತಾರೆ.

ಪ್ರೇಷಿತರ ೨೦:೨೮-೩೦
[೨೮] ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.[೨೯] ನಾನು ಹೊರಟುಹೋದ ಮೇಲೆ ಬೇರೆಯವರು ನಿಮ್ಮ ಸಭೆಗೆ ಬರುತ್ತಾರೆಂದು ನನಗೆ ಗೊತ್ತಿದೆ. ಕ್ರೂರವಾದ ತೋಳಗಳಂತಿರುವ ಅವರು ಮಂದೆಯನ್ನು ನಾಶಮಾಡಲು ಪ್ರಯತ್ನಿಸುವರು.[೩೦] ಅಲ್ಲದೆ, ನಿಮ್ಮ ಸಭೆಯ ಕೆಲವು ಜನರೇ ದುರ್ಬೋಧಕರಾಗಿ ಯೇಸುವಿನ ಶಿಷ್ಯರಲ್ಲಿ ಕೆಲವರನ್ನು ಸತ್ಯದಿಂದ ದೂರಕ್ಕೆ ನಡೆಸುವರು.

ಪೇತ್ರನು ೨ ೩:೧೪-೧೮
[೧೪] ಪ್ರಿಯ ಸ್ನೇಹಿತರೇ, ಇವುಗಳಿಗಾಗಿಯೇ ನಾವು ಎದುರುನೋಡುತ್ತಿದ್ದೇವೆ. ಆದ್ದರಿಂದ ನೀವು ಪಾಪವಿಲ್ಲದವರಾಗಿರಲು ಮತ್ತು ತಪ್ಪಿಲ್ಲದವರಾಗಿರಲು ನಿಮ್ಮಿಂದ ಸಾಧ್ಯವಾದಷ್ಟು ಪ್ರಯತ್ನಿಸಿರಿ. ದೇವರೊಂದಿಗೆ ಸಮಾಧಾನದಿಂದಿರಲು ಪ್ರಯತ್ನಿಸಿರಿ.[೧೫] ನಾವು ರಕ್ಷಣೆ ಹೊಂದಿಕೊಂಡದ್ದು ನಮ್ಮ ಪ್ರಭುವಿನ ತಾಳ್ಮೆಯಿಂದಲೇ ಎಂಬುದನ್ನು ನೆನಪು ಮಾಡಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ದೇವರಿಂದ ತನಗೆ ದೊರೆತ ಜ್ಞಾನದಿಂದ ನಿಮಗೆ ಪತ್ರ ಬರೆದಾಗ ಇದನ್ನೇ ತಿಳಿಸಿದನು.[೧೬] ಪೌಲನು ತನ್ನ ಎಲ್ಲ ಪತ್ರಗಳಲ್ಲಿಯೂ ಇವುಗಳನ್ನು ಕುರಿತು ಇದೇ ರೀತಿ ಬರೆಯುತ್ತಾನೆ. ಕೆಲವು ಸಂದರ್ಭಗಳಲ್ಲಿ ಪೌಲನ ಪತ್ರಗಳಲ್ಲಿರುವವುಗಳನ್ನು ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಕೆಲವರು ಅವುಗಳನ್ನು ಬೇಕೆಂದೇ ತಪ್ಪಾಗಿ ಅರ್ಥೈಸುತ್ತಾರೆ. ಅವರು ಮೂಢರಾಗಿದ್ದಾರೆ ಮತ್ತು ನಂಬಿಕೆಯಲ್ಲಿ ಬಲಹೀನರಾಗಿದ್ದಾರೆ. ಅವರು ಪವಿತ್ರ ಗ್ರಂಥದ ಇತರ ಭಾಗಗಳನ್ನೂ ತಪ್ಪಾಗಿ ವಿವರಿಸುತ್ತಾರೆ. ಹೀಗೆ ಅವರು ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.[೧೭] ಪ್ರಿಯ ಸ್ನೇಹಿತರೇ, ನೀವು ಈಗಾಗಲೇ ಇದರ ಬಗ್ಗೆ ತಿಳಿದಿರುವಿರಿ. ಆದ್ದರಿಂದ ನೀವು ಎಚ್ಚರದಿಂದಿರಿ. ಆ ಕೆಟ್ಟಜನರು ತಾವು ಮಾಡುವ ಕೆಟ್ಟಕಾರ್ಯಗಳಿಂದ ನಿಮ್ಮನ್ನು ದಾರಿತಪ್ಪಿಸದಂತೆ ನೋಡಿಕೊಳ್ಳಿರಿ. ನಿಮ್ಮ ಬಲವಾದ ನಂಬಿಕೆಯನ್ನು ತೊರೆದುಬಿಡದಂತೆ ಎಚ್ಚರಿಕೆಯಾಗಿರಿ.[೧೮] ನಿಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನ ಕೃಪೆಯಲ್ಲಿಯೂ ತಿಳುವಳಿಕೆಯಲ್ಲಿಯೂ ಬೆಳೆಯುತ್ತಲೇ ಇರಿ. ಆತನಿಗೆ ಈಗಲೂ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.

ಯೊವಾನ್ನನು ೧ ೪:೧-೬
[೧] ನನ್ನ ಪ್ರಿಯ ಸ್ನೇಹಿತರೇ, ಈಗ ಲೋಕದಲ್ಲಿ ಅನೇಕ ಸುಳ್ಳುಪ್ರವಾದಿಗಳಿದ್ದಾರೆ. ಆದ್ದರಿಂದ ಪ್ರತಿಯೊಂದು ಆತ್ಮವನ್ನು ನಂಬಬೇಡಿ. ಆದರೆ ಆ ಆತ್ಮಗಳು ದೇವರಿಂದ ಬಂದವುಗಳೇ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಿರಿ.[೨] ದೇವ ರಾತ್ಮವನ್ನು ನೀವು ಇದೇ ರೀತಿ ತಿಳಿದುಕೊಳ್ಳಲು ಸಾಧ್ಯ. “ಈ ಲೋಕಕ್ಕೆ ಮನುಷ್ಯನಾಗಿ ಬಂದ ಯೇಸುವೇ ಕ್ರಿಸ್ತನೆಂದು ನಾನು ನಂಬುತ್ತೇನೆ” ಎಂದು ಹೇಳುವ ಆತ್ಮವು ದೇವರಿಂದ ಬಂದದ್ದಾಗಿದೆ.[೩] ಯೇಸುವಿನ ಬಗ್ಗೆ ಹೀಗೆ ಹೇಳದ ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮ. ಕ್ರಿಸ್ತವಿರೋಧಿಯು ಬರುತ್ತಾನೆ ಎಂಬುದನ್ನು ನೀವು ಕೇಳಿರುವಿರಿ. ಕ್ರಿಸ್ತವಿರೋಧಿಯು ಈಗಾಗಲೇ ಈ ಲೋಕದಲ್ಲಿದ್ದಾನೆ.[೪] ನನ್ನ ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರು. ಆದ್ದರಿಂದ ನೀವು ಅವರನ್ನು (ಸುಳ್ಳುಬೋಧಕರು) ಸೋಲಿಸಿ ದ್ದೀರಿ. ಏಕೆಂದರೆ ನಿಮ್ಮಲ್ಲಿರುವಾತನು (ದೇವರು) ಈ ಲೋಕದ ಜನರಲ್ಲಿರುವವನಿಗಿಂತ (ಸೈತಾನ) ದೊಡ್ಡವನಾಗಿದ್ದಾನೆ.[೫] ಆ ಜನರು (ಸುಳ್ಳುಬೋಧಕರು) ಈ ಲೋಕಕ್ಕೆ ಸೇರಿದವರಾಗಿದ್ದಾರೆ. ಆದ್ದರಿಂದ ಅವರು ಹೇಳುವುದೆಲ್ಲವೂ ಈ ಲೋಕಕ್ಕೆ ಸೇರಿವೆ. ಅವರು ಏನೇ ಹೇಳಿದರೂ ಲೋಕವು ಕೇಳುತ್ತದೆ.[೬] ನಾವಾದರೋ ದೇವರಿಂದ ಬಂದವರು. ಆದ್ದರಿಂದ ದೇವರನ್ನು ಬಲ್ಲ ಜನರು ನಮಗೆ ಕಿವಿಗೊಡುತ್ತಾರೆ, ಆದರೆ ದೇವರಿಂದ ಬಂದಿಲ್ಲದ ಜನರು ನಮ್ಮ ಮಾತುಗಳನ್ನು ಕೇಳುವುದಿಲ್ಲ. ಯಾವುದು ಸತ್ಯವನ್ನು ಬೋಧಿಸುವ ಆತ್ಮ, ಯಾವುದು ಸುಳ್ಳನ್ನು ಬೋಧಿಸುವ ಆತ್ಮ ಎಂಬುದನ್ನು ಹೀಗೆ ತಿಳಿದುಕೊಳ್ಳುತ್ತೇವೆ.

ಮತ್ತಾಯನು ೭:೧೫-೨೦
[೧೫] “ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ.[೧೬] ಅವರ ಕ್ರಿಯೆಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳಿನ ಪೊದೆಗಳಲ್ಲಿ ದ್ರಾಕ್ಷಿಯು ಹೇಗೆ ದೊರೆಯುವುದಿಲ್ಲವೋ ಅದೇ ರೀತಿ ಒಳ್ಳೆಯವುಗಳು ಕೆಟ್ಟ ಜನಗಳಿಂದ ಬರುವುದಿಲ್ಲ. ಅಂಜೂರವು ಮುಳ್ಳುಗಿಡಗಳಲ್ಲಿ ದೊರೆಯುವುದಿಲ್ಲ.[೧೭] ಅದೇ ರೀತಿ ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ.[೧೮] ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ ಮತ್ತು ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.[೧೯] ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಎಸೆಯಲಾಗುವುದು.[೨೦] ಈ ಸುಳ್ಳು ಬೋಧಕರನ್ನು ಅವರು ಕೊಡುವ ಫಲದಿಂದಲೇ (ಕಾರ್ಯಗಳಿಂದಲೇ) ನೀವು ತಿಳಿದುಕೊಳ್ಳುವಿರಿ.

ಪೇತ್ರನು ೨ ೧:೧೨-೨೧
[೧೨] ಇವೆಲ್ಲವೂ ನಿಮಗೆ ತಿಳಿದಿದೆ. ನಿಮ್ಮಲ್ಲಿರುವ ಸತ್ಯದಲ್ಲಿ ನೀವು ಸ್ಥಿರವಾಗಿದ್ದೀರಿ. ಆದರೆ ಇವುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳುವಂತೆ ನಾನು ನಿಮಗೆ ಯಾವಾಗಲೂ ಸಹಾಯ ಮಾಡುತ್ತೇನೆ.[೧೩] ನಾನು ಈ ಲೋಕದಲ್ಲಿ ಇನ್ನೂ ಜೀವದಿಂದಿರುವಾಗಲೇ ಇವುಗಳನ್ನು ನಿಮ್ಮ ನೆನಪಿಗೆ ತರುವುದು ಯೋಗ್ಯವಾದದ್ದೆಂಬುದು ನನ್ನ ಆಲೋಚನೆ.[೧೪] ನಾನು ಬಹುಬೇಗ ಈ ದೇಹವನ್ನು ತ್ಯಜಿಸಬೇಕೆಂಬುದೂ ನನಗೆ ತಿಳಿದಿದೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಅದನ್ನು ತೋರ್ಪಡಿಸಿದ್ದಾನೆ.[೧೫] ನೀವು ಇವುಗಳನ್ನು ಯಾವಾಗಲೂ ನೆನಪು ಮಾಡಿಕೊಳ್ಳಲು ನಿಮಗೆ ನನ್ನಿಂದಾದಷ್ಟು ಸಹಾಯಮಾಡಲು ನಾನು ಪ್ರಯತ್ನಿಸುತ್ತೇನೆ. ನಾನು ಈ ಲೋಕವನ್ನು ಬಿಟ್ಟುಹೋದ ನಂತರವೂ ನೀವು ಈ ಸಂಗತಿಗಳನ್ನು ನೆನಪು ಮಾಡಿಕೊಳ್ಳಲು ಸಮರ್ಥರಾಗಿರಬೇಕೆಂಬುದು ನನ್ನ ಅಪೇಕ್ಷೆ.[೧೬] ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಶಕ್ತಿಯ ಕುರಿತಾಗಿ ಮತ್ತು ಆತನ ಬರುವಿಕೆಯ ಕುರಿತಾಗಿ ನಿಮಗೆ ತಿಳಿಸಿದ್ದೇವೆ. ಆ ಸಂಗತಿಗಳು ಜನರಿಂದ ಕಲ್ಪಿತವಾದ ಜಾಣ್ಮೆಯ ಕಥೆಗಳಲ್ಲ. ಯೇಸುವಿನ ಮಹಿಮೆಯನ್ನು ನಾವು ಕಣ್ಣಾರೆ ಕಂಡಿದ್ದೇವೆ.[೧೭] ಆತನು ಅತ್ಯಂತ ಪ್ರಭಾವವುಳ್ಳ (ದೇವರ) ಸ್ವರವನ್ನು ಕೇಳಿದನು. ಆಗಲೇ ಆತನು ತಂದೆಯಾದ ದೇವರಿಂದ ಮಾನವನ್ನೂ ಪ್ರಭಾವವನ್ನೂ ಹೊಂದಿಕೊಂಡನು. ಆ ಸ್ವರವು, “ಈತನು ನನ್ನ ಪ್ರಿಯ ಮಗ. ಈತನನ್ನು ಬಹಳವಾಗಿ ಮೆಚ್ಚಿಕೊಂಡಿದ್ದೇನೆ” ಎಂದು ಹೇಳಿತು.[೧೮] ನಾವು ಪವಿತ್ರ ಪರ್ವತದ ಮೇಲೆ ಯೇಸುವಿನ ಜೊತೆಯಲ್ಲಿದ್ದಾಗ ಪರಲೋಕದಿಂದ ಬಂದ ಆ ಧ್ವನಿಯನ್ನು ನಾವೂ ಕೇಳಿದೆವು.[೧೯] ಪ್ರವಾದಿಗಳು ಹೇಳಿದ ಸಂಗತಿಗಳನ್ನು ಇದು ನಮಗೆ ಮತ್ತಷ್ಟು ಖಚಿತಪಡಿಸಿತು. ಅವರು ಹೇಳಿದ್ದನ್ನು ನೀವು ಚಾಚು ತಪ್ಪದೆ ಅನುಸರಿಸುವುದು ಒಳ್ಳೆಯದೇ ಸರಿ. ಅವರು ಹೇಳಿದ ಸಂಗತಿಗಳು ಅಂಧಕಾರದಲ್ಲಿ ಪ್ರಕಾಶಿಸುವ ಬೆಳಕಿನಂತಿವೆ. ನಿಮ್ಮ ಹೃದಯಗಳಲ್ಲಿ ಹಗಲು ಆರಂಭವಾಗಿ, ಮುಂಜಾನೆಯ ನಕ್ಷತ್ರವು ಮೂಡುವವರೆಗೂ ಆ ಬೆಳಕು ಪ್ರಕಾಶಿಸುತ್ತದೆ.[೨೦] ನೀವು ಅರ್ಥಮಾಡಿಕೊಳ್ಳಬೇಕಾದ ಮುಖ್ಯವಾದ ಸಂಗತಿಯೇನೆಂದರೆ, ಪವಿತ್ರ ಗ್ರಂಥದಲ್ಲಿರುವ ಯಾವ ಪ್ರವಾದನವಾಕ್ಯವೂ ಒಬ್ಬ ವ್ಯಕ್ತಿಯ ವೈಯಕ್ತಿಕ ವಿವರಣೆಯಿಂದ ಬಂದಿಲ್ಲ.[೨೧] ಯಾವ ಪ್ರವಾದನೆಯೇ ಆಗಲಿ ಮನುಷ್ಯನ ಚಿತ್ತದಿಂದ ಬಂದಿಲ್ಲ. ಆದರೆ ಜನರು ಪವಿತ್ರಾತ್ಮನಿಂದ ನಡೆಸಲ್ಪಟ್ಟು ದೇವರಿಂದ ಹೊಂದಿದ್ದನ್ನೇ ಮಾತನಾಡಿದರು.

ತೀತನಿಗೆ ೧:೬-೧೬
[೬] ಸಭೆಯ ಹಿರಿಯನಾಗುವವನು ಅಪರಾಧಿಯೆಂಬ ನಿಂದನೆಗೆ ಗುರಿಯಾಗಿರಬಾರದು. ಅವನಿಗೆ ಒಬ್ಬಳೇ ಪತ್ನಿಯಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು; ಅವರು ದುಷ್ಟರೆಂದಾಗಲಿ ಅವಿಧೇಯರೆಂದಾಗಲಿ ಹೇಳಿಸಿಕೊಂಡಿರಬಾರದು.[೭] ಸಭಾಹಿರಿಯನು ದೇವರ ಸೇವೆಯ ಜವಾಬ್ದಾರಿಯನ್ನು ಹೊತ್ತು ಕೊಂಡವನಾಗಿದ್ದಾನೆ. ಆದ್ದರಿಂದ ಅವನು ಅಪರಾಧಿಯೆಂಬ ನಿಂದನೆಗೆ ಒಳಗಾಗಿರಬಾರದು; ಗರ್ವಿಷ್ಠನಾಗಿರಬಾರದು; ಸ್ವಾರ್ಥಿಯಾಗಿರಬಾರದು ಮತ್ತು ಮುಂಗೋಪಿಯಾಗಿರಬಾರದು; ದ್ರಾಕ್ಷಾರಸವನ್ನು ಅತಿಯಾಗಿ ಕುಡಿಯುವವನಾಗಿರಬಾರದು; ಜಗಳಗಂಟನಾಗಿರಬಾರದು; ಜನರನ್ನು ವಂಚಿಸಿ ಶ್ರೀಮಂತನಾಗಲು ಪ್ರಯತ್ನಿಸುವವನಾಗಿರಬಾರದು.[೮] ಸಭಾಹಿರಿಯನು ಜನರನ್ನು ತನ್ನ ಮನೆಗೆ ಆಹ್ವಾನಿಸಿ ಅತಿಥಿಸತ್ಕಾರ ಮಾಡಲು ಸಿದ್ಧನಾಗಿರಬೇಕು. ಅವನು ಒಳ್ಳೆಯದನ್ನು ಪ್ರೀತಿಸಬೇಕು; ಜ್ಞಾನಿಯಾಗಿರಬೇಕು; ನ್ಯಾಯವಂತನಾಗಿರಬೇಕು; ಪವಿತ್ರನಾಗಿರಬೇಕು. ಅವನು ತನ್ನನ್ನು ಹತೋಟಿಯಲ್ಲಿ ಇಟ್ಟುಕೊಂಡಿರಬೇಕು.[೯] ನಾವು ಬೋಧಿಸುವ ಸತ್ಯವಾಕ್ಯವನ್ನು ಅವನು ನಂಬಿಗಸ್ತಿಕೆಯಿಂದ ಅನುಸರಿಸಬೇಕು. ಸತ್ಯವಾದ ಮತ್ತು ಯೋಗ್ಯವಾದ ಬೋಧನೆಯಿಂದ ಅವನು ಜನರಿಗೆ ಸಹಾಯ ಮಾಡುವವನಾಗಿರಬೇಕು. ಅವನು ಸತ್ಯಬೋಧನೆಗೆ ವಿರುದ್ಧವಾದ ಜನರಿಗೆ ಅವರ ತಪ್ಪನ್ನು ತೋರಿಸಿಕೊಡುವ ಸಾಮರ್ಥ್ಯ ಉಳ್ಳವನಾಗಿರಬೇಕು.[೧೦] ಅವಿಧೇಯರಾಗಿರುವ ಜನರು ಅನೇಕರಿದ್ದಾರೆ. ಅವರು ನಿರರ್ಥಕವಾದುದನ್ನು ಕುರಿತು ಮಾತನಾಡುತ್ತಲೇ ಇರುತ್ತಾರೆ ಮತ್ತು ಉಳಿದ ಜನರನ್ನು ತಪ್ಪುದಾರಿಗೆ ಎಳೆಯುತ್ತಾರೆ. ಯೆಹೂದ್ಯರಲ್ಲದ ಜನರೆಲ್ಲರೂ ಸುನ್ನತಿ ಮಾಡಿಸಿಕೊಳ್ಳಬೇಕೆಂದು ಬೋಧಿಸುವ ಜನರ ಬಗ್ಗೆಯೇ ನಾನು ಹೇಳುತ್ತಿರುವುದು.[೧೧] ಆ ಜನರ ಬೋಧನೆ ತಪ್ಪೆಂದು ನಿರೂಪಿಸಲು ಮತ್ತು ಉಪಯೋಗವಿಲ್ಲದ ಆ ಸಂಗತಿಗಳನ್ನು ಬೋಧಿಸದಂತೆ ಮಾಡಲು ಸಭಾಹಿರಿಯನು ಸಮರ್ಥನಾಗಿರಬೇಕು. ಅವರು ಉಪದೇಶ ಮಾಡಬಾರದ ಸಂಗತಿಗಳನ್ನು ಉಪದೇಶಿಸುತ್ತಾ ಇಡೀ ಕುಟುಂಬಗಳನ್ನೇ ಸಂಪೂರ್ಣವಾಗಿ ನಾಶಗೊಳಿಸುತ್ತಿದ್ದಾರೆ. ಅವರು ಜನರನ್ನು ವಂಚಿಸಿ, ಹಣವನ್ನು ಸಂಪಾದಿಸುವುದಕ್ಕೋಸ್ಕರ ಆ ಸಂಗತಿಗಳನ್ನು ಉಪದೇಶಿಸುತ್ತಿದ್ದಾರೆ.[೧೨] ಅವರ ಪ್ರವಾದಿಗಳಲ್ಲಿ ಒಬ್ಬನು, “ಕ್ರೇತದ ಜನರು ಯಾವಾಗಲೂ ಸುಳ್ಳು ಹೇಳುತ್ತಾರೆ. ಅವರು ದುಷ್ಟ ಮೃಗಗಳಾಗಿದ್ದಾರೆ; ಸೋಮಾರಿತನದಿಂದ ಕೆಲಸವನ್ನೇ ಮಾಡದೆ ಹೊಟ್ಟೆಬಾಕರಾಗಿದ್ದಾರೆ” ಎಂದು ಹೇಳಿದ್ದಾನೆ.[೧೩] ಪ್ರವಾದಿಯು ಹೇಳಿದ ಮಾತುಗಳು ಸತ್ಯವಾಗಿವೆ. ಆದ್ದರಿಂದ ಅವರು ಮಾಡುತ್ತಿರುವ ತಪ್ಪುಗಳನ್ನು ಅವರಿಗೆ ತಿಳಿಸು. ನೀನು ಅವರ ವಿಷಯದಲ್ಲಿ ಕಟ್ಟುನಿಟ್ಟಾಗಿರಬೇಕು. ಆಗ ಅವರು ತಮ್ಮ ನಂಬಿಕೆಯಲ್ಲಿ ದೃಢವಾಗಿದ್ದು,[೧೪] ಯೆಹೂದ್ಯರ ಕಟ್ಟುಕಥೆಗಳನ್ನು ಒಪ್ಪಿಕೊಳ್ಳುವುದಿಲ್ಲ ಮತ್ತು ಸತ್ಯವನ್ನು ಒಪ್ಪಿಕೊಳ್ಳದ ಜನರ ಆಜ್ಞೆಗಳನ್ನು ಅನುಸರಿಸುವುದಿಲ್ಲ.[೧೫] ಪರಿಶುದ್ಧರಾದ ಜನರಿಗೆ ಎಲ್ಲಾ ಸಂಗತಿಗಳು ಪರಿಶುದ್ಧವಾಗಿರುತ್ತವೆ. ಆದರೆ ಪಾಪಗಳನ್ನೇ ತುಂಬಿಕೊಂಡಿರುವ ಮತ್ತು ನಂಬಿಕೆಯಿಲ್ಲದ ಜನರಿಗೆ ಯಾವುದೂ ಪರಿಶುದ್ಧವಾಗಿರುವುದಿಲ್ಲ. ನಿಜವಾಗಿಯೂ, ಅವರ ಮನಸ್ಸುಗಳು ಮತ್ತು ಮನಸ್ಸಾಕ್ಷಿಗಳು ಮಲಿನವಾಗಿವೆ.[೧೬] ದೇವರ ಬಗ್ಗೆ ತಮಗೆ ತಿಳಿದಿದೆಯೆಂದು ಅವರು ಹೇಳಿದರೂ ಅವರು ದೇವರನ್ನು ತಿಳಿದಿಲ್ಲವೆಂದು ಅವರ ಕೆಟ್ಟಕಾರ್ಯಗಳೇ ಸ್ಪಷ್ಟಪಡಿಸುತ್ತವೆ. ಅವರು ಭಯಂಕರವಾದ ಜನರು ಮತ್ತು ಅವಿಧೇಯರು. ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೂ ಅವರು ಯೋಗ್ಯರಲ್ಲ.

ಪೇತ್ರನು ೨ ೨:೧-೨೨
[೧] ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.[೨] ಅವರು ಮಾಡುವ ಕೆಟ್ಟಕಾರ್ಯಗಳನ್ನು ಅನೇಕ ಜನರು ಅನುಸರಿಸುತ್ತಾರೆ. ಆ ಜನರ ದೆಸೆಯಿಂದ ಸತ್ಯಮಾರ್ಗದ ಕುರಿತಾಗಿ ಇತರರು ಕೆಟ್ಟಮಾತುಗಳನ್ನು ಆಡುತ್ತಾರೆ.[೩] ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.[೪] ದೇವದೂತರು ಪಾಪಗಳನ್ನು ಮಾಡಿದಾಗ, ದೇವರು ಅವರನ್ನು ದಂಡಿಸದೆ ಬಿಡಲಿಲ್ಲ. ಆತನು ಅವರನ್ನು ನರಕಕ್ಕೆ ದಬ್ಬಿದನು. ಕತ್ತಲೆಯ ಗುಂಡಿಗಳಿಗೆ ಹಾಕಿದನು. ಅವರಿಗೆ ನ್ಯಾಯತೀರ್ಪಾಗುವವರೆಗೂ ಅವರು ಅಲ್ಲಿಯೇ ಇರುವರು.[೫] ಬಹಳ ಹಿಂದೆ ಬದುಕಿದ್ದ ಕೆಟ್ಟ ಜನರನ್ನು ದೇವರು ದಂಡಿಸಿದನು. ಈ ಲೋಕದಲ್ಲಿ ತನಗೆ ವಿರುದ್ಧವಾದ ಜನರು ತುಂಬಿಕೊಂಡಿದ್ದಾಗ ಆತನು ಜಲಪ್ರಳಯವನ್ನು ಬರಮಾಡಿ ದನು. ಆದರೆ ನೋಹನನ್ನೂ ಅವನೊಂದಿಗಿದ್ದ ಏಳು ಮಂದಿಯನ್ನೂ ರಕ್ಷಿಸಿದನು. ಯೋಗ್ಯರಾಗಿ ಜೀವಿಸಬೇಕೆಂದು ಆ ಜನರಿಗೆ ತಿಳಿಸಿದವನೇ ನೋಹ.[೬] ದೇವರು ಸೊದೋಮ್, ಗೊಮೋರ ಎಂಬ ಕೆಟ್ಟ ಪಟ್ಟಣಗಳನ್ನು ದಂಡಿಸಿದನು. ಆತನು ಆ ಪಟ್ಟಣಗಳಲ್ಲಿ ಏನೂ ಉಳಿಯದಂತೆ, ಸುಟ್ಟು ಬೂದಿಮಾಡಿದನು. ತನಗೆ ವಿರುದ್ಧವಾಗಿರುವ ಜನರಿಗೆ ಏನಾಗುತ್ತದೆ ಎಂಬುದಕ್ಕೆ ಆತನು ಆ ಪಟ್ಟಣಗಳನ್ನು ನಿದರ್ಶನಗಳನ್ನಾಗಿ ಇಟ್ಟಿದ್ದಾನೆ.[೭] ಆದರೆ ದೇವರು ಆ ಪಟ್ಟಣಗಳಿಂದ ಲೋಟನನ್ನು ರಕ್ಷಿಸಿದನು. ಲೋಟನು ನೀತಿವಂತನಾಗಿದ್ದನು. ದುಷ್ಟ ಜನರ ಕೆಟ್ಟ ನಡತೆಯಿಂದ ಅವನು ದುಃಖಗೊಂಡಿದ್ದನು.[೮] (ಲೋಟನು ನೀತಿವಂತನಾಗಿದ್ದನು. ಆದರೆ ಅವನು ಪ್ರತಿದಿನವೂ ಆ ದುಷ್ಟಜನರ ಮಧ್ಯೆ ಜೀವಿಸುತ್ತಿದ್ದನು. ಕೆಟ್ಟಕಾರ್ಯಗಳನ್ನು ನೋಡಿ ಮತ್ತು ಕೇಳಿ ಅವನ ಒಳ್ಳೆಯ ಹೃದಯವು ವೇದನೆಗೆ ಒಳಗಾಗಿತ್ತು.)[೯] ಹೌದು, ಪ್ರಭುವಾದ ದೇವರು ತನ್ನ ಭಕ್ತರನ್ನು ತೊಂದರೆಗಳಿಂದ ಯಾವಾಗಲೂ ರಕ್ಷಿಸುತ್ತಾನೆ. ಆತನು ದುಷ್ಟಜನರನ್ನು ನ್ಯಾಯತೀರ್ಪಿನ ದಿನ ಬರುವತನಕ ದಂಡಿಸುತ್ತಾನೆ.[೧೦] ಪ್ರಭುವಿನ ಅಧಿಕಾರವನ್ನು ದ್ವೇಷಿಸುವ ಜನರನ್ನು ಮತ್ತು ತಮ್ಮ ಪಾಪಸ್ವಭಾವದ ಇಚ್ಚೆಗನುಸಾರವಾಗಿ ಕೆಟ್ಟಕಾರ್ಯಗಳನ್ನು ಮಾಡುವ ಜನರನ್ನು ದೇವರು ಹೀಗೆ ದಂಡಿಸುತ್ತಾನೆ. ಈ ಸುಳ್ಳುಬೋಧಕರು ತಮಗೆ ಬೇಕಾದದ್ದನ್ನೆಲ್ಲಾ ಮಾಡುತ್ತಾರೆ ಮತ್ತು ತಮ್ಮ ಬಗ್ಗೆ ಹೊಗಳಿಕೊಳ್ಳುತ್ತಾರೆ. ಪ್ರಭಾವದಿಂದ ಕೂಡಿರುವ ದೇವದೂತರ ಬಗ್ಗೆ ಕೆಟ್ಟದ್ದನ್ನು ಹೇಳಲು ಅವರು ಹೆದರುವುದಿಲ್ಲ.[೧೧] ದೇವದೂತರು ಈ ಸುಳ್ಳುಬೋಧಕರಿಗಿಂತ ಹೆಚ್ಚು ಬಲಿಷ್ಠರಾಗಿದ್ದಾರೆ ಮತ್ತು ಹೆಚ್ಚು ಶಕ್ತಿಯುಳ್ಳವರಾಗಿದ್ದಾರೆ. ಆದರೂ ದೇವದೂತರು ಸುಳ್ಳುಬೋಧಕರನ್ನು ಪ್ರಭುವಿನ ಸನ್ನಿಧಿಯಲ್ಲಿ ದೂಷಿಸುವುದಿಲ್ಲ.[೧೨] ಆದರೆ ಈ ಸುಳ್ಳುಬೋಧಕರು ತಮಗೆ ಅರ್ಥವಾಗದ ಸಂಗತಿಗಳ ವಿರುದ್ಧ ಕೆಟ್ಟದ್ದನ್ನು ಮಾತಾಡುತ್ತಾರೆ. ಅವರು ವಿವೇಚಿಸದೆ ಕಾರ್ಯ ಮಾಡುವ ಪ್ರಾಣಿಗಳಂತಿದ್ದಾರೆ. ಹಿಡಿಯಲ್ಪಟ್ಟು ಕೊಲ್ಲಲ್ಪಡುವುದಕ್ಕಾಗಿಯೇ ಹುಟ್ಟಿರುವ ಕ್ರೂರಪ್ರಾಣಿಗಳಂತೆ ಅವರು ನಾಶವಾಗುವರು.[೧೩] ಅವರಿಂದ ಅನೇಕ ಜನರು ಸಂಕಟಕ್ಕೆ ಒಳಗಾಗುವರು. ಅವರು ಮಾಡಿದ್ದಕ್ಕೆ ಅದೇ ಪ್ರತಿಫಲವಾಗಿರುವುದು.ಈ ಸುಳ್ಳುಬೋಧಕರು ಜನರೆಲ್ಲರ ಎದುರಿನಲ್ಲಿ ಕೆಟ್ಟದ್ದನ್ನು ಮಾಡಲು ಸಂತೋಷಿಸುತ್ತಾರೆ. ತಮ್ಮನ್ನು ಸಂತಸಗೊಳಿಸುವ ಕೆಟ್ಟಕಾರ್ಯಗಳಿಂದ ಅವರು ಆನಂದಿಸುತ್ತಾರೆ. ಅವರು ನಿಮ್ಮ ಮಧ್ಯದಲ್ಲಿ ಕೊಳಕಾದ ಕಲೆಗಳಂತಿದ್ದಾರೆ. ನೀವು ಒಟ್ಟಾಗಿ ಊಟ ಮಾಡುವಾಗ ಅವರು ನಿಮಗೆ ಅಪಮಾನಕರವಾಗಿದ್ದಾರೆ.[೧೪] ಅವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರಾಗಿದ್ದಾರೆ. ಅವರು ದುರ್ಬಲರನ್ನು ಪಾಪವೆಂಬ ಉರುಲಿನಲ್ಲಿ ಬೀಳಿಸುತ್ತಾರೆ. ಅವರು ತಮ್ಮ ಹೃದಯಗಳಿಗೆ ಸ್ವಾರ್ಥವನ್ನೇ ಕಲಿಸಿದ್ದಾರೆ. ಅವರು ಶಾಪಗ್ರಸ್ತ ರಾಗಿದ್ದಾರೆ.[೧೫] ಈ ಸುಳ್ಳುಬೋಧಕರು ಸರಿಯಾದ ಮಾರ್ಗವನ್ನು ತೊರೆದು, ಕೆಟ್ಟಮಾರ್ಗವನ್ನು ಅನುಸರಿಸಿದ್ದಾರೆ. ಬಿಳಾಮನು ಬೆಯೋರನ ಮಗ. ಅವನು ಅಧರ್ಮದಿಂದ ದೊರೆಯುವ ಲಾಭವನ್ನು ಪ್ರೀತಿಸಿದನು.[೧೬] ಆದರೆ ಅವನು ಮಾಡುತ್ತಿರುವುದು ತಪ್ಪೆಂದು ಒಂದು ಹೇಸರಕತ್ತೆಯು ಅವನಿಗೆ ತಿಳಿಸಿತು. ಅದು ಒಂದು ಮೂಕಪ್ರಾಣಿ. ಆದರೆ ಅದು ಮಾನವನಂತೆ ಮಾತಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿ ಮಾಡಿತು.[೧೭] ಈ ಸುಳ್ಳುಬೋಧಕರು ನೀರಿಲ್ಲದ ಒರತೆಗಳಂತಿದ್ದಾರೆ. ಅವರು ಬಿರುಗಾಳಿಯಿಂದ ಬಡಿದುಕೊಂಡು ಹೋಗುವ ಮೋಡಗಳಂತಿದ್ದಾರೆ. ಅವರಿಗಾಗಿ ಒಂದು ಕಗ್ಗತ್ತಲಾದ ಸ್ಥಳವನ್ನು ಕಾದಿರಿಸಲಾಗಿದೆ.[೧೮] ಅವರು ಅರ್ಥವಿಲ್ಲದ ಮಾತು ಗಳಿಂದ ಬಡಾಯಿಕೊಚ್ಚಿಕೊಳ್ಳುತ್ತಾರೆ; ಜನರನ್ನು ಪಾಪಗಳ ಬಲೆಗೆ ನಡೆಸುತ್ತಿದ್ದಾರೆ. ತಪ್ಪುಮಾರ್ಗದಲ್ಲಿ ನಡೆಯುವ ಜನರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡು ಬಂದ ಜನರನ್ನು ದಾರಿತಪ್ಪಿಸುತ್ತಾರೆ. ತಮ್ಮ ಪಾಪಸ್ವಭಾವಕ್ಕನುಸಾರವಾಗಿ ಮಾಡಲು ಇಚ್ಛಿಸುವ ಕೆಟ್ಟಕಾರ್ಯಗಳನ್ನು ಬಳಸಿಕೊಂಡು ಈ ಸುಳ್ಳುಬೋಧಕರು ಅವರನ್ನು ದಾರಿ ತಪ್ಪಿಸುತ್ತಾರೆ.[೧೯] ಈ ಸುಳ್ಳುಬೋಧಕರು ಆ ಜನರಿಗೆ ಸ್ವಾತಂತ್ರ್ಯವನ್ನು ಕೊಡುವುದಾಗಿ ವಾಗ್ದಾನ ಮಾಡುತ್ತಾರೆ. ಆದರೆ ಈ ಸುಳ್ಳುಬೋಧಕರೇ ಸ್ವತಂತ್ರರಾಗದೆ ನಾಶವಾಗುವಂಥ ಸಂಗತಿಗಳಿಗೆ ಗುಲಾಮರಾಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತುಹೋಗಿದ್ದಾನೋ ಅದಕ್ಕೆ ಗುಲಾಮನಾಗಿದ್ದಾನೆ.[೨೦] ಈ ಲೋಕದಲ್ಲಿನ ಕೆಟ್ಟಕಾರ್ಯಗಳಿಂದ ಆ ಜನರನ್ನು ಪಾರುಮಾಡಲಾಯಿತು. ನಮ್ಮ ಪ್ರಭುವಾದ ಮತ್ತು ರಕ್ಷಕನಾದ ಯೇಸು ಕ್ರಿಸ್ತನನ್ನು ತಿಳಿದುಕೊಳ್ಳುವುದರ ಮೂಲಕ ಅವರಿಗೆ ಬಿಡುಗಡೆಯಾಯಿತು. ಆದರೆ ಆ ಜನರು ತಮ್ಮ ಹಿಂದಿನ ಸಂಗತಿಗಳ ಕಡೆಗೆ ಹಿಂದಿರುಗಿಹೋದರೆ ಮತ್ತು ಅವುಗಳು ಅವರನ್ನು ತಮ್ಮ ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವರು ಮೊದಲಿಗಿಂತಲೂ ಹೆಚ್ಚು ಕೆಟ್ಟುಹೋಗುತ್ತಾರೆ.[೨೧] ಹೌದು, ಆ ಜನರು ಸರಿಯಾದ ಮಾರ್ಗವನ್ನು ತಿಳಿಯದೆ ಹೋಗಿದ್ದರೇ ಒಳ್ಳೆಯದಾಗುತ್ತಿತ್ತು. ಸರಿಯಾದ ಮಾರ್ಗವನ್ನು ಅರಿತುಕೊಂಡು, ಪವಿತ್ರ ಬೋಧನೆಗಳಿಗೆ ವಿಮುಖರಾಗುವುದಕ್ಕಿಂತ ಅದನ್ನು ತಿಳಿದುಕೊಳ್ಳದಿದ್ದರೇ ಚೆನ್ನಾಗಿರುತ್ತಿತ್ತು.[೨೨] ನಿಜವಾಗಿ ಈ ಗಾದೆಗಳಂತೆಯೇ ಅವರು ಮಾಡಿದರು: “ನಾಯಿಯು ತಾನು ಕಕ್ಕಿದ್ದನ್ನೇ ನೆಕ್ಕಲು ತಿರುಗಿಕೊಂಡಿತು”

ಮತ್ತಾಯನು ೨೩:೧-೨೯
[೧] ಬಳಿಕ ಯೇಸು ನೆರೆದಿದ್ದ ಜನರೊಂದಿಗೂ ತನ್ನ ಶಿಷ್ಯರೊಂದಿಗೂ ಮಾತಾಡಿ ಹೇಳಿದ್ದೇನೆಂದರೆ:[೨] “ಮೋಶೆಯ ಧರ್ಮಶಾಸ್ತ್ರ ಹೇಳುವುದನ್ನು ನಿಮಗೆ ತಿಳಿಸಲು ಧರ್ಮೋಪದೇಶಕರಿಗೂ ಫರಿಸಾಯರಿಗೂ ಅಧಿಕಾರವಿದೆ.[೩] ಆದ್ದರಿಂದ ನೀವು ಅವರಿಗೆ ವಿಧೇಯರಾಗಿರಬೇಕು ಮತ್ತು ಅವರು ಹೇಳಿದ್ದನ್ನೆಲ್ಲ ಕೈಕೊಂಡು ನಡೆಯಬೇಕು. ಆದರೆ ಅವರ ಜೀವಿತಗಳು ಅನುಸರಿಸತಕ್ಕ ಒಳ್ಳೆಯ ಮಾದರಿ ಜೀವಿತಗಳಲ್ಲ. ಅವರು ನಿಮಗೆ ತಿಳಿಸುವಂಥ ಸಂಗತಿಗಳನ್ನು ತಾವೇ ಅನುಸರಿಸುವುದಿಲ್ಲ.[೪] ಅವರು ಬೇರೆಯವರಿಗೆ ಕಷ್ಟಕರವಾದ ನಿಯಮಗಳನ್ನು ಕೊಟ್ಟು ಅವುಗಳಿಗೆ ವಿಧೇಯರಾಗಬೇಕೆಂದು ಒತ್ತಾಯ ಮಾಡುತ್ತಾರೆ. ತಾವಾದರೋ ಆ ನಿಯಮಗಳಲ್ಲಿ ಯಾವದನ್ನಾದರೂ ಅನುಸರಿಸಲು ಪ್ರಯತ್ನಿಸುವುದಿಲ್ಲ.[೫] “ತಮ್ಮನ್ನು ಬೇರೆ ಜನರು ನೋಡಲಿ ಎಂಬ ಒಂದೇ ಉದ್ದೇಶದಿಂದ ಅವರು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾರೆ. ಪವಿತ್ರ ಗ್ರಂಥಗಳು ತುಂಬಿರುವ ವಿಶೇಷವಾದ ಚರ್ಮದ ಚೀಲಗಳನ್ನು ಅವರು ಕಟ್ಟಿಕೊಂಡಿರುತ್ತಾರೆ. ಅವರು ಈ ಚೀಲಗಳನ್ನು ಇನ್ನೂ ಹೆಚ್ಚುಹೆಚ್ಚು ದೊಡ್ಡದನ್ನಾಗಿ ಮಾಡುತ್ತಾರೆ. ಜನರು ನೋಡಲಿ ಎಂದು ಅವರು ತಮ್ಮ ವಿಶೇಷ ಪ್ರಾರ್ಥನೆಯ ಉಡುಪುಗಳನ್ನು ಮತ್ತಷ್ಟು ಉದ್ದ ಮಾಡುತ್ತಾರೆ.[೬] ಆ ಫರಿಸಾಯರು ಮತ್ತು ಧರ್ಮೋಪದೇಶಕರು ಔತಣಗಳಲ್ಲಿ ಹಾಗೂ ಸಭಾಮಂದಿರಗಳಲ್ಲಿ ಅತಿ ಪ್ರಾಮುಖ್ಯವಾದ ಸ್ಥಾನಗಳನ್ನು ಅಪೇಕ್ಷಿಸುತ್ತಾರೆ.[೭] ಮಾರುಕಟ್ಟೆಗಳಲ್ಲಿ ಜನರು ತಮಗೆ ಮರ್ಯಾದೆ ತೋರಿಸಬೇಕೆಂದು ಆಶಿಸುತ್ತಾರೆ; ಜನರಿಂದ ಉಪದೇಶಕರೆನಿಸಿಕೊಳ್ಳಲು ಇಷ್ಟಪಡುತ್ತಾರೆ.[೮] “ಆದರೆ ನೀವು ಉಪದೇಶಕರೆನಿಸಿಕೊಳ್ಳಬೇಡಿ. ನೀವೆಲ್ಲರೂ ಸಹೋದರಸಹೋದರಿಯರು. ನಿಮಗೆ ಒಬ್ಬನೇ ಉಪದೇಶಕನು.[೯] ಈ ಲೋಕದಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿ. ನಿಮಗೆ ಒಬ್ಬನೇ ತಂದೆ. ಆತನು ಪರಲೋಕದಲ್ಲಿದ್ದಾನೆ.[೧೦] ‘ಗುರು’ವೆಂದೂ ಕರೆಸಿಕೊಳ್ಳಬೇಡಿ. ನಿಮಗೆ ಕ್ರಿಸ್ತನೊಬ್ಬನೇ ಗುರು.[೧೧] ಸೇವಕನಂತೆ ನಿಮಗೆ ಸೇವೆ ಮಾಡುವವನೇ ನಿಮ್ಮಲ್ಲಿ ಅತ್ಯಂತ ದೊಡ್ಡವನಾಗಿದ್ದಾನೆ.[೧೨] ತಾನು ಬೇರೆಯವರಿಗಿಂತ ಉತ್ತಮನೆಂದು ತನ್ನನ್ನು ಭಾವಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಉನ್ನತಿಗೇರಿಸಲ್ಪಡುವನು.[೧೩] “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ಜನರು ಪರಲೋಕರಾಜ್ಯಕ್ಕೆ ಪ್ರವೇಶಿಸುವ ದಾರಿಯನ್ನು ನೀವು ಮುಚ್ಚಿಬಿಡುತ್ತೀರಿ. ನೀವೂ ಪ್ರವೇಶಿಸುವುದಿಲ್ಲ ಮತ್ತು ಪ್ರವೇಶಿಸುವುದಕ್ಕೆ ಪ್ರಯತ್ನಿಸುವ ಜನರಿಗೂ ಬಿಡುವುದಿಲ್ಲ.[೧೪] “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮ ಮಾರ್ಗಗಳನ್ನು ಹಿಂಬಾಲಿಸುವ ಒಬ್ಬನನ್ನು ಕಂಡುಕೊಳ್ಳಲು ನೀವು ಸಮುದ್ರಗಳನ್ನು ದಾಟಿ ಬೇರೆಬೇರೆ ದೇಶಗಳಲ್ಲಿ ಪ್ರಯಾಣ ಮಾಡುತ್ತೀರಿ. ಅವನನ್ನು ಕಂಡುಕೊಂಡ ಮೇಲೆ ನಿಮಗಿಂತಲೂ ಹೆಚ್ಚು ಕೆಟ್ಟವನನ್ನಾಗಿ ಮಾಡುತ್ತೀರಿ. ನೀವು ನರಕಪಾತ್ರರಾಗುವಷ್ಟು ಕೆಟ್ಟವರಾಗಿದ್ದೀರಿ.[೧೫] “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು. ಒಬ್ಬನು ದೇವಾಲಯದ ಹೆಸರಿನ ಮೇಲೆ ವಾಗ್ದಾನ ಮಾಡಿದರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ದೇವಾಲಯದಲ್ಲಿರುವ ಚಿನ್ನದ ಮೇಲೆ ವಾಗ್ದಾನ ಮಾಡಿದರೆ, ಅವನು ಅದನ್ನು ಈಡೇರಿಸಬೇಕು ಎಂದು ಹೇಳುತ್ತೀರಿ![೧೬] ನೀವು ಕುರುಡರಾದ ಮೂರ್ಖರು! ಯಾವುದು ಹೆಚ್ಚಿನದು? ಚಿನ್ನವೋ ಅಥವಾ ದೇವಾಲಯವೋ? ಆ ಚಿನ್ನವು ಪರಿಶುದ್ಧಗೊಂಡದ್ದು ದೇವಾಲಯದಿಂದಲೇ. ಆದ್ದರಿಂದ ದೇವಾಲಯವೇ ಹೆಚ್ಚಿನದು.[೧೭] “ಒಬ್ಬನು ಯಜ್ಞವೇದಿಕೆಯ ಮೇಲೆ ಆಣೆಯಿಟ್ಟುಕೊಂಡರೆ ಅದಕ್ಕೇನೂ ಬೆಲೆಯಿಲ್ಲ ಎನ್ನುತ್ತೀರಿ. ಆದರೆ ಒಬ್ಬನು ಯಜ್ಞವೇದಿಕೆಯ ಮೇಲಿರುವ ಕಾಣಿಕೆಯ ಮೇಲೆ ವಾಗ್ದಾನ ಮಾಡಿದರೆ ಅವನು ಅದನ್ನು ಈಡೇರಿಸಲೇಬೇಕು ಎಂದು ಹೇಳುತ್ತೀರಿ.[೧೮] ನೀವು ಕುರುಡರು. ನಿಮಗೇನೂ ಅರ್ಥವಾಗುವುದಿಲ್ಲ. ಯಾವುದು ಹೆಚ್ಚಿನದು? ಕಾಣಿಕೆಯೋ ಅಥವಾ ಯಜ್ಞವೇದಿಕೆಯೋ? ಕಾಣಿಕೆ ಪರಿಶುದ್ಧಗೊಂಡದ್ದು ಯಜ್ಞವೇದಿಕೆಯಿಂದಲೇ. ಆದ್ದರಿಂದ ಯಜ್ಞವೇದಿಕೆಯೇ ಹೆಚ್ಚಿನದು.[೧೯] ಯಜ್ಞವೇದಿಕೆಯ ಮೇಲೆ ವಾಗ್ದಾನ ಮಾಡುವವನು ಯಜ್ಞವೇದಿಕೆಯ ಮತ್ತು ಅದರ ಮೇಲಿರುವ ಕಾಣಿಕೆಯ ಮೇಲೆ ವಾಗ್ದಾನ ಮಾಡಿದಂತಾಯಿತು.[೨೦] ದೇವಾಲಯದ ಮೇಲೆ ವಾಗ್ದಾನ ಮಾಡುವವನು ನಿಜವಾಗಿಯೂ ದೇವಾಲಯದ ಮತ್ತು ಅದರೊಳಗೆ ವಾಸವಾಗಿರುವಾತನ ಮೇಲೆ ವಾಗ್ದಾನ ಮಾಡಿದಂತಾಯಿತು.[೨೧] ಪರಲೋಕದ ಮೇಲೆ ವಾಗ್ದಾನ ಮಾಡುವವನು ದೇವರ ಸಿಂಹಾಸನದ ಮೇಲೆಯೂ ಆ ಸಿಂಹಾಸನದ ಮೇಲೆ ಕುಳಿತಿರುವಾತನ ಮೇಲೆಯೂ ವಾಗ್ದಾನ ಮಾಡಿದಂತಾಯಿತು.[೨೨] “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನಿಮ್ಮಲ್ಲಿರುವ ಪ್ರತಿಯೊಂದರಲ್ಲೂ ನಿಮ್ಮ ಪುದೀನ, ಸಬ್ಬಸ್ಸಿಗೆ ಸೊಪ್ಪು, ಜೀರಿಗೆ ಗಿಡಗಳಲ್ಲಿಯೂ ಸಹ ಹತ್ತರಲ್ಲೊಂದು ಪಾಲನ್ನು ದೇವರಿಗೆ ಕೊಡುತ್ತೀರಿ. ಆದರೆ ಧರ್ಮಶಾಸ್ತ್ರದ ಬೋಧನೆಗಳಲ್ಲಿ ನಿಜವಾಗಿಯೂ ಪ್ರಾಮುಖ್ಯವಾದ ಆಜ್ಞೆಗಳನ್ನು ಅಂದರೆ ನ್ಯಾಯವನ್ನೂ ಕರುಣೆಯನ್ನೂ ಯಥಾರ್ಥತೆಯನ್ನೂ ನೀವು ತೊರೆದುಬಿಟ್ಟಿದ್ದೀರಿ. ಈ ಆಜ್ಞೆಗಳಿಗೆ ನೀವು ಮೊದಲು ವಿಧೇಯರಾಗಿ, ಈಗ ಮಾಡುತ್ತಿರುವಂಥ ಕಾರ್ಯಗಳನ್ನು ಮಾಡಬೇಕಿತ್ತು.[೨೩] ನೀವು ಜನರಿಗೆ ಮಾರ್ಗದರ್ಶನ ಮಾಡುತ್ತೀರಿ. ಆದರೆ ನೀವೇ ಕುರುಡರು! ಒಬ್ಬನು ತಾನು ಕುಡಿಯುವ ಪಾನೀಯದೊಳಗಿಂದ ಸಣ್ಣ ಸೊಳ್ಳೆಯನ್ನು ತೆಗೆದುಹಾಕಿ ಆಮೇಲೆ ಒಂಟೆಯನ್ನು ನುಂಗುವವನಂತೆ ನೀವಿದ್ದೀರಿ.[೨೪] “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ನಿಮ್ಮ ಪಾತ್ರೆ ಬಟ್ಟಲುಗಳ ಹೊರಭಾಗವನ್ನು ತೊಳೆದು ಸ್ವಚ್ಛಮಾಡುತ್ತೀರಿ. ಆದರೆ ಅವುಗಳ ಒಳಭಾಗವು ಮೋಸದಿಂದಲೂ ನಿಮಗೆ ತೃಪ್ತಿ ನೀಡುವ ಪದಾರ್ಥಗಳಿಂದಲೂ ತುಂಬಿವೆ.[೨೫] ಫರಿಸಾಯರೇ, ನೀವು ಕುರುಡರು! ಮೊದಲು ಬಟ್ಟಲಿನ ಒಳಭಾಗವನ್ನು ಚೆನ್ನಾಗಿ ಶುಚಿಮಾಡಿರಿ. ಆಗ ಬಟ್ಟಲಿನ ಹೊರಭಾಗವು ನಿಜವಾಗಿಯೂ ಶುಚಿಯಾಗಿರುವುದು.[೨೬] “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಸುಣ್ಣ ಹಚ್ಚಿದ ಸಮಾಧಿಗಳಂತಿದ್ದೀರಿ. ಆ ಸಮಾಧಿಗಳ ಹೊರಭಾಗ ಚಂದವಾಗಿ ಕಾಣುತ್ತದೆ. ಆದರೆ ಒಳಭಾಗ ಸತ್ತವರ ಎಲುಬುಗಳಿಂದಲೂ ಎಲ್ಲಾ ಬಗೆಯ ಹೊಲಸುಗಳಿಂದಲೂ ತುಂಬಿರುತ್ತದೆ.[೨೭] ನೀವು ಅದೇ ರೀತಿ ಇದ್ದೀರಿ. ನಿಮ್ಮನ್ನು ನೋಡಿದ ಜನರು ನಿಮ್ಮನ್ನು ಒಳ್ಳೆಯವರೆಂದು ಭಾವಿಸಿಕೊಳ್ಳುತ್ತಾರೆ. ಆದರೆ ನಿಮ್ಮ ಅಂತರಂಗವು ಕಪಟದಿಂದಲೂ ದುಷ್ಟತನದಿಂದಲೂ ತುಂಬಿಕೊಂಡಿದೆ.[೨೮] “ಧರ್ಮೋಪದೇಶಕರೇ, ಫರಿಸಾಯರೇ, ನಿಮ್ಮ ಗತಿ ಏನು ಹೇಳಲಿ! ನೀವು ಕಪಟಿಗಳು. ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟುತ್ತೀರಿ. ಒಳ್ಳೆಯವರಾಗಿ ಜೀವಿಸದವರ ಗೋರಿಗಳಿಗೆ ಹೋಗಿ ಗೌರವ ತೋರಿಸುತ್ತೀರಿ.[೨೯] ‘ನಮ್ಮ ಪಿತೃಗಳ ಕಾಲದಲ್ಲಿ ನಾವು ಇದ್ದಿದ್ದರೆ ಈ ಪ್ರವಾದಿಗಳನ್ನು ಕೊಲ್ಲುವುದಕ್ಕೆ ಅವರಿಗೆ ಸಹಾಯ ಮಾಡುತ್ತಿರಲಿಲ್ಲ’ ಎಂದು ಹೇಳುತ್ತೀರಿ.

Kannada Bible 1934
Public Domain: 1934