A A A A A

ದೇವರು: [ನಿಮ್ಮಂತೆಯೇ ಬನ್ನಿ]


ಮತ್ತಾಯನು ೧೧:೨೭-೩೦
[೨೭] “ನನ್ನ ತಂದೆ ನನಗೆ ಎಲ್ಲವನ್ನು ಕೊಟ್ಟಿದ್ದಾನೆ. ಯಾವನೂ ಮಗನನ್ನು ಅರಿತಿಲ್ಲ. ತಂದೆ ಮಾತ್ರ ಮಗನನ್ನು ಅರಿತಿದ್ದಾನೆ. ಯಾವನೂ ತಂದೆಯನ್ನು ಅರಿತಿಲ್ಲ. ಮಗನು ಮಾತ್ರ ತಂದೆಯನ್ನು ಅರಿತಿದ್ದಾನೆ. ಮಗನು ತಂದೆಯನ್ನು ಯಾರಿಗೆ ಪ್ರಕಟಿಸಬೇಕೆಂದು ಇಷ್ಟಪಡುತ್ತಾನೋ ಅವರು ತಂದೆಯನ್ನು ತಿಳಿದುಕೊಳ್ಳುತ್ತಾರೆ.[೨೮] “ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ. ನಾನು ನಿಮಗೆ ವಿಶ್ರಾಂತಿಯನ್ನು ಕೊಡುತ್ತೇನೆ.[೨೯] ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.[೩೦] ಹೌದು, ನಿಮಗೆ ನನ್ನ ನೊಗವು ಮೃದುವಾಗಿದೆ; ನನ್ನ ಹೊರೆಯು ಹಗುರವಾಗಿದೆ.”

ಯೊವಾನ್ನನು ೬:೬೩-೬೫
[೬೩] ಒಬ್ಬನಿಗೆ ಜೀವವನ್ನು ಕೊಡುವಂಥದ್ದು ದೈಹಿಕ ಸಂಗತಿಗಳಲ್ಲ. ಜೀವವನ್ನು ಕೊಡುವಂಥದ್ದು ದೇವರಾತ್ಮ. ನಾನು ನಿಮಗೆ ಹೇಳಿದ ಸಂಗತಿಗಳು ಆತ್ಮಿಕ ಸಂಗತಿಗಳಾಗಿವೆ. ಆದ್ದರಿಂದ ಈ ಸಂಗತಿಗಳೇ ಜೀವವನ್ನು ಕೊಡುತ್ತವೆ.[೬೪] ಆದರೆ ನಿಮ್ಮಲ್ಲಿ ಕೆಲವರು ನಂಬುವುದಿಲ್ಲ” ಎಂದು ಹೇಳಿದನು. (ತನ್ನನ್ನು ನಂಬಿಲ್ಲದವರು ಯಾರೆಂದೂ ತನಗೆ ದ್ರೋಹ ಮಾಡುವವನು ಯಾರೆಂದೂ ಯೇಸುವಿಗೆ ಮೊದಲಿಂದಲೂ ತಿಳಿದಿತ್ತು.)[೬೫] ಇದಲ್ಲದೆ ಯೇಸು, “ತಂದೆಯ ಅನುಮತಿ ಇಲ್ಲದೆ ಯಾವನೂ ನನ್ನ ಬಳಿಗೆ ಬರಲಾರನು ಎಂದು ನಾನು ನಿಮಗೆ ಹೇಳಿದ್ದಕ್ಕೆ ಅದೇ ಕಾರಣ” ಎಂದನು.

ಮತ್ತಾಯನು ೧೧:೨೮
“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ. ನಾನು ನಿಮಗೆ ವಿಶ್ರಾಂತಿಯನ್ನು ಕೊಡುತ್ತೇನೆ.

ಯೆಶಾಯನ ೧:೧೮
ಯೆಹೋವನು ಹೀಗೆನ್ನುತ್ತಾನೆ: “ಬನ್ನಿರಿ, ನಾವು ಚರ್ಚೆ ಮಾಡೋಣ. ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಅವುಗಳನ್ನು ತೊಳೆದಾಗ ನೀವು ಹಿಮದಂತೆ ಬಿಳುಪಾಗುವಿರಿ. ನಿಮ್ಮ ಪಾಪಗಳು ಕಿರಮಂಜಿಬಣ್ಣವಾಗಿದ್ದರೂ ನೀವು ಉಣ್ಣೆಯಂತೆ ಬೆಳ್ಳಗಾಗುವಿರಿ.

ಯೆಶಾಯನ ೫೫:೧-೩
[೧] “ಎಲೈ ಬಾಯಾರಿದ ಜನರೆಲ್ಲರೇ, ಬಂದು ನೀರನ್ನು ಕುಡಿಯಿರಿ. ನಿಮ್ಮಲ್ಲಿ ಹಣವಿಲ್ಲವೆಂದು ಚಿಂತೆಮಾಡಬೇಡಿರಿ. ಬಂದು ಹೊಟ್ಟೆತುಂಬಾ ತಿಂದು ಕುಡಿಯಿರಿ. ನೀವು ಹಣ ಕೊಡಬೇಕಿಲ್ಲ. ಹೊಟ್ಟೆತುಂಬಾ ತಿಂದು ಕುಡಿಯಿರಿ ಹಾಲಿಗೂ ದ್ರಾಕ್ಷಾರಸಕ್ಕೂ ಕ್ರಯವಿಲ್ಲ.[೨] ಆಹಾರವಲ್ಲದ್ದಕ್ಕಾಗಿ ಹಣವನ್ನು ಯಾಕೆ ವೆಚ್ಚ ಮಾಡುತ್ತೀರಿ? ತೃಪ್ತಿಗೊಳಿಸದ ಆಹಾರಕ್ಕಾಗಿ ನೀವು ಯಾಕೆ ಶ್ರಮಿಸುತ್ತೀರಿ? ಗಮನವಿಟ್ಟು ಕೇಳಿರಿ. ನೀವು ಒಳ್ಳೆಯ ಆಹಾರವನ್ನು ತಿನ್ನುವಿರಿ; ನಿಮ್ಮ ಊಟದಲ್ಲಿ ಆನಂದಿಸುವಿರಿ. ಅವು ನಿಮ್ಮ ಆತ್ಮವನ್ನು ತೃಪ್ತಿಗೊಳಿಸುತ್ತವೆ.[೩] ನಾನು ಹೇಳುವ ವಿಷಯಗಳಿಗೆ ಸರಿಯಾಗಿ ಕಿವಿಗೊಡಿರಿ. ನಿಮ್ಮ ಆತ್ಮಗಳು ಜೀವಿಸುವಂತೆ ನನ್ನ ಮಾತುಗಳನ್ನು ಕೇಳಿರಿ. ನನ್ನ ಬಳಿಗೆ ಬನ್ನಿರಿ, ನಾನು ನಿಮ್ಮೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ನಾನು ದಾವೀದನೊಂದಿಗೆ ಮಾಡಿಕೊಂಡ ಒಡಂಬಡಿಕೆಯಂತೆ ಅದಿರುವುದು. ನಾನು ದಾವೀದನಿಗೆ ಅವನನ್ನು ಪ್ರೀತಿಸುವೆನೆಂದೂ ಅವನಿಗೆ ಪ್ರಾಮಾಣಿಕನಾಗಿರುವೆನೆಂದೂ ವಾಗ್ದಾನ ಮಾಡಿದ್ದೆನು. ಆ ಒಡಂಬಡಿಕೆಯನ್ನು ನೀವು ಖಂಡಿತವಾಗಿ ನಂಬಬಹುದು.”

ಮತ್ತಾಯನು ೧೫:೭-೯
[೭] ನೀವು ಕಪಟಿಗಳು. ಯೆಶಾಯನು ನಿಮ್ಮನ್ನು ಕುರಿತು ಸರಿಯಾಗಿ ಹೇಳಿದ್ದಾನೆ. ಅದೇನೆಂದರೆ:[೮] ‘ಇವರು ನನ್ನನ್ನು ಮಾತಿನಿಂದ ಗೌರವಿಸುತ್ತಾರೆ.[೯] ಇವರು ನನ್ನನ್ನು ಆರಾಧಿಸುವುದೂ ನಿರರ್ಥಕ.

ಮಾರ್ಕನು ೧೦:೧೩-೧೬
[೧೩] ಜನರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಆಶೀರ್ವದಿಸಲೆಂದು ಅವರನ್ನು ಯೇಸುವಿನ ಬಳಿಗೆ ತಂದರು. ಆದರೆ ಮಕ್ಕಳನ್ನು ಯೇಸುವಿನ ಬಳಿಗೆ ತರಕೂಡದೆಂದು ಶಿಷ್ಯರು ಜನರನ್ನು ಗದರಿಸಿದರು.[೧೪] ಇದನ್ನು ಕಂಡ ಯೇಸು ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಗೊಡಿಸಿರಿ. ಅವರನ್ನು ತಡೆಯಬೇಡಿ, ಏಕೆಂದರೆ ದೇವರ ರಾಜ್ಯವು ಇಂಥವರದೇ.[೧೫] ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ದೇವರ ರಾಜ್ಯವನ್ನು ಮಕ್ಕಳ ಮನೋಭಾವದಿಂದ ಸ್ವೀಕರಿಸದಿದ್ದರೆ ನೀವು ಅದರೊಳಗೆ ಸೇರುವುದೇ ಇಲ್ಲ” ಎಂದು ಹೇಳಿದನು.[೧೬] ನಂತರ ಯೇಸು ಮಕ್ಕಳನ್ನು ತನ್ನ ಕೈಗಳಿಂದ ಅಪ್ಪಿಕೊಂಡು ಅವರ ಮೇಲೆ ತನ್ನ ಕೈಗಳನ್ನಿಟ್ಟು ಆಶೀರ್ವದಿಸಿದನು.

ಯಕೋಬನು ೪:೬-೮
[೬] ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”[೭] ಆದ್ದರಿಂದ ದೇವರಿಗೆ ನಿಮ್ಮನ್ನು ಒಪ್ಪಿಸಿಕೊಂಡು ಸೈತಾನನನ್ನು ಎದುರಿಸಿರಿ. ಆಗ ಅವನು ನಿಮ್ಮಿಂದ ದೂರ ಓಡಿಹೋಗುತ್ತಾನೆ.[೮] ದೇವರ ಸಮೀಪಕ್ಕೆ ಬನ್ನಿ, ಆಗ ದೇವರು ನಿಮ್ಮ ಸಮೀಪಕ್ಕೆ ಬರುತ್ತಾನೆ. ನೀವು ಪಾಪಿಗಳು, ಆದ್ದರಿಂದ ನಿಮ್ಮ ಜೀವಿತಗಳಿಂದ ಪಾಪಗಳನ್ನು ತೊಳೆದು ಹಾಕಿರಿ. ನೀವು ದೇವರನ್ನು ಮತ್ತು ಈ ಲೋಕವನ್ನು ಏಕಕಾಲದಲ್ಲಿ ಅನುಸರಿಸಲು ಪ್ರಯತ್ನಿಸುತ್ತಿರುವಿರಿ. ನಿಮ್ಮ ಆಲೋಚನೆಗಳನ್ನು ಪರಿಶುದ್ಧಗೊಳಿಸಿರಿ.

ಕೊರಿಂಥಿಯರಿಗೆ ೨ ೫:೧೭
ಯಾವನಾದರೂ ಕ್ರಿಸ್ತನಲ್ಲಿದ್ದರೆ, ಅವನು ಹೊಸ ಸೃಷ್ಟಿಯಾಗಿದ್ದಾನೆ. ಹಳೆಯ ಸಂಗತಿಗಳೆಲ್ಲಾ ಅಳಿದು ಹೋದವು; ಪ್ರತಿಯೊಂದೂ ಹೊಸದಾಯಿತು.

ಯೊವಾನ್ನನು ೫:೨೪
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಸತ್ತುಹೋದವರು ದೇವರ ಮಗನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಅದು ಈಗಲೇ ಬಂದಿದೆ. ಕೇಳಿ ಸ್ವೀಕರಿಸಿಕೊಳ್ಳುವವರು ಜೀವವನ್ನು ಹೊಂದುವರು.

ರೋಮನರಿಗೆ ೧೨:೧-೨
[೧] ಆದ್ದರಿಂದ ಸಹೋದರ ಸಹೋದರಿಯರೇ, ದೇವರ ಮಹಾಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವ ಯಜ್ಞಗಳಾಗಿ ಅರ್ಪಿಸಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.[೨] ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕ ಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.

ಹಿಬ್ರಿಯರಿಗೆ ೧೨:೧
ನಮ್ಮ ಸುತ್ತಲೂ ನಂಬಿಕೆಯುಳ್ಳ ಅನೇಕ ಜನರಿದ್ದಾರೆ. ನಂಬಿಕೆ ಎಂದರೇನೆಂದು ಅವರ ಜೀವಿತಗಳೇ ಸಾಕ್ಷಿ ಹೇಳುತ್ತವೆ. ಆದ್ದರಿಂದ ನಾವು ಅವರಂತಿರಬೇಕು. ನಮ್ಮ ಮುಂದಿರುವ ಗುರಿಯನ್ನು ಮುಟ್ಟಲು ಓಡಬೇಕು ಮತ್ತು ನಮ್ಮ ಪ್ರಯತ್ನವನ್ನು ನಿಲ್ಲಿಸಬಾರದು. ನಮ್ಮನ್ನು ತಡೆಯುವ ಎಲ್ಲಾ ವಿಷಯಗಳನ್ನೂ ನಮ್ಮ ಜೀವಿತದಿಂದ ತೆಗೆದುಹಾಕಬೇಕು. ನಮ್ಮನ್ನು ಸುಲಭವಾಗಿ ಹಿಡಿದುಕೊಳ್ಳುವ ಪಾಪದಿಂದ ಬಿಡಿಸಿಕೊಳ್ಳಬೇಕು.

ಯಾಜಕಕಾಂಡ ೨೫:೪೪
“ನಿಮ್ಮ ಸುತ್ತಲಿರುವ ಬೇರೆ ಜನಾಂಗಗಳಿಂದ ನೀವು ಸೇವಕಸೇವಕಿಯರನ್ನು ಖರೀದಿ ಮಾಡಬಹುದು.

ಕೀರ್ತನೆಗಳು ೩೨:೮-೧೦
[೮] ಯೆಹೋವನು ಹೀಗೆನ್ನುತ್ತಾನೆ: “ನಿನಗೆ ಜೀವ ಮಾರ್ಗವನ್ನು ಉಪದೇಶಿಸಿ ಮಾರ್ಗದರ್ಶನ ನೀಡುವೆನು; ನಿನ್ನನ್ನು ಕಾಪಾಡಿ ನಿನಗೆ ಮಾರ್ಗದರ್ಶಿಯಾಗಿರುವೆನು.[೯] ಆದ್ದರಿಂದ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಮೂಢರಾಗಿರಬೇಡಿ. ಬಾರು, ಕಡಿವಾಣಗಳಿಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.[೧೦] ಕೆಡುಕರಿಗೆ ಅನೇಕ ಕೇಡುಗಳಾಗುತ್ತವೆ. ಆದರೆ ಯೆಹೋವನಲ್ಲಿ ಭರವಸವಿಟ್ಟಿರುವವರನ್ನು ಆತನ ಶಾಶ್ವತವಾದ ಪ್ರೀತಿಯು ಅವರಿಸಿಕೊಳ್ಳುವುದು.

ಯೆಶಾಯನ ೨೯:೧೩
ನನ್ನ ಒಡೆಯನು ಹೇಳುವುದೇನೆಂದರೆ, “ನನ್ನನ್ನು ಪ್ರೀತಿಸುವದಾಗಿ ಇವರು ಹೇಳುತ್ತಾರೆ. ಅವರು ತಮ್ಮ ಮಾತುಗಳಿಂದ ನನ್ನನ್ನು ಗೌರವಿಸುತ್ತಾರೆ. ಆದರೆ ಅವರ ಹೃದಯಗಳು ನನ್ನಿಂದ ದೂರವಾಗಿವೆ. ಅವರು ನನಗೆ ತೋರಿಸುವ ಗೌರವವು ಅವರು ಬಾಯಿಪಾಠ ಮಾಡಿದ ಮಾನವ ನಿರ್ಮಿತವಾದ ನಿಯಮಗಳಾಗಿವೆ.

ಯೊವಾನ್ನನು ೫:೪೦
“ಮನುಷ್ಯರಿಂದ ಬರುವ ಹೊಗಳಿಕೆಯು ನನಗೆ ಬೇಕಾಗಿಲ್ಲ.

ಯೊವಾನ್ನನು ೬:೪೪-೪೫
[೪೪] ತಂದೆಯೇ ನನ್ನನ್ನು ಕಳುಹಿಸಿದನು ಮತ್ತು ತಂದೆಯೇ ನನ್ನ ಬಳಿಗೆ ಜನರನ್ನು ಕರೆತರುವನು. ಅಂತಿಮ ದಿನದಂದು ನಾನು ಆ ಜನರನ್ನು ಜೀವಂತವಾಗಿ ಎಬ್ಬಿಸುವೆನು. ತಂದೆಯು ನನ್ನ ಬಳಿಗೆ ಕರೆದುಕೊಂಡು ಬರದ ಹೊರತು ಯಾವನೂ ನನ್ನ ಬಳಿಗೆ ಬರಲಾರನು.[೪೫] ‘ದೇವರು ಎಲ್ಲಾ ಜನರಿಗೆ ಉಪದೇಶಿಸುವನು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಜನರು ತಂದೆಗೆ ಕಿವಿಗೊಟ್ಟು ಆತನಿಂದ ಕಲಿತುಕೊಳ್ಳುವರು. ಆ ಜನರು ನನ್ನ ಬಳಿಗೆ ಬರುವರು.

ಯೊವಾನ್ನನು ೭:೩೭-೩೯
[೩೭] ಹಬ್ಬದ ಕೊನೆಯ ದಿನ ಬಂದಿತು. ಅದು ಅತ್ಯಂತ ಮುಖ್ಯವಾದ ದಿನವಾಗಿತ್ತು. ಅಂದು ಯೇಸು ನಿಂತುಕೊಂಡು, “ಯಾವನಿಗಾದರೂ ಬಾಯಾರಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.[೩೮] ನನ್ನಲ್ಲಿ ನಂಬಿಕೆ ಇಡುವವನ ಹೊಟ್ಟೆಯೊಳಗಿಂದ ಜೀವಕರವಾದ ನೀರಿನ ಹೊಳೆಗಳು ಹರಿಯುತ್ತವೆ. ಪವಿತ್ರ ಗ್ರಂಥವು ತಿಳಿಸುವುದು ಇದನ್ನೇ” ಎಂದು ಗಟ್ಟಿಯಾಗಿ ಹೇಳಿದನು.[೩೯] ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮನನ್ನು ಕುರಿತು ಹೇಳಿದನು. ಆತನು ಇನ್ನೂ ತನ್ನ ಮಹಿಮೆಯನ್ನು ಹೊಂದಿಲ್ಲದಿದ್ದ ಕಾರಣ ಪವಿತ್ರಾತ್ಮನು ಇನ್ನೂ ಬಂದಿರಲಿಲ್ಲ.

ಹಿಬ್ರಿಯರಿಗೆ ೪:೧೪-೧೬
[೧೪] ಪರಲೋಕಕ್ಕೆ ಏರಿಹೋದ ಪ್ರಧಾನ ಯಾಜಕನೊಬ್ಬನು ನಮಗಿದ್ದಾನೆ. ಆತನೇ ದೇವರ ಮಗನಾದ ಯೇಸು. ಆದ್ದರಿಂದ ನಮಗಿರುವ ನಂಬಿಕೆಯಲ್ಲೇ ದೃಢವಾಗಿ ಸಾಗೋಣ.[೧೫] ನಮ್ಮ ಪ್ರಧಾನ ಯಾಜಕನಾಗಿರುವ ಯೇಸು ನಮ್ಮ ದೌರ್ಬಲ್ಯವನ್ನು ಅರ್ಥಮಾಡಿಕೊಳ್ಳಲು ಸಮರ್ಥನಾಗಿದ್ದಾನೆ. ಆತನು ಈ ಲೋಕದಲ್ಲಿ ಜೀವಿಸಿದ್ದಾಗ, ಸರ್ವವಿಷಯಗಳಲ್ಲಿ ನಮ್ಮಂತೆಯೇ ಶೋಧನೆಗೆ ಗುರಿಯಾದರೂ ಪಾಪಮಾಡಲಿಲ್ಲ.[೧೬] ಆದ್ದರಿಂದ ದೇವರ ಕೃಪಾಸಿಂಹಾಸನದ ಬಳಿಗೆ ಸಂಕೋಚಪಡದೆ ಬರೋಣ. ಕೊರತೆಯಲ್ಲಿರುವಾಗ ನಮಗೆ ಬೇಕಾದ ಸಹಾಯಕ್ಕಾಗಿ ಕೃಪೆಯನ್ನೂ ಕರುಣೆಯನ್ನೂ ಅಲ್ಲಿ ಹೊಂದಿಕೊಳ್ಳುವೆವು.

ಪ್ರಕಟನೆ ೨೨:೧೬-೧೭
[೧೬] “ಯೇಸುವೆಂಬ ನಾನೇ, ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ಸಾಕ್ಷಿ ನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ದಾವೀದನ ವಂಶದಲ್ಲಿ ಹುಟ್ಟಿದವನೂ ಪ್ರಕಾಶಮಾನವಾದ ಉದಯನಕ್ಷತ್ರವೂ ಆಗಿದ್ದಾನೆ.”[೧೭] ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.

ಯೊವಾನ್ನನು ೬:೩೭
ತಂದೆಯು ನನ್ನ ಜನರನ್ನು ನನಗೆ ಕೊಡುತ್ತಾನೆ. ಆ ಜನರಲ್ಲಿ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ನನ್ನಲ್ಲಿಗೆ ಬರುವ ಪ್ರತಿಯೊಬ್ಬರನ್ನೂ ನಾನು ಖಂಡಿತವಾಗಿ ಸ್ವೀಕರಿಸಿಕೊಳ್ಳುವೆನು, ಅವರನ್ನು ಎಂದಿಗೂ ತಳ್ಳಿಬಿಡುವುದಿಲ್ಲ.

ಪ್ರಕಟನೆ ೨೨:೧೭
ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.

ಯೆಶಾಯನ ೧೩:೬-೮
[೬] ಯೆಹೋವನ ದಿನವು ಹತ್ತಿರವಾಗಿದೆ. ಆದ್ದರಿಂದ ದುಃಖಿಸಿರಿ, ರೋಧಿಸಿರಿ. ವೈರಿಯು ಬಂದು ನಿಮ್ಮ ಐಶ್ವರ್ಯವನ್ನು ಸೂರೆಮಾಡುವ ಸಮಯವು ಬರುತ್ತದೆ. ಸರ್ವಶಕ್ತನಾದ ದೇವರು ಅದನ್ನು ನೆರವೇರಿಸುವನು.[೭] ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. ಭಯದಿಂದ ಬಲಹೀನರಾಗುವರು.[೮] ಪ್ರತಿಯೊಬ್ಬರೂ ಭಯಪೀಡಿತರಾಗುವರು. ಯಾತನೆವೇದನೆಗಳು ಅವರನ್ನು ಆಕ್ರಮಿಸುವವು. ಪ್ರಸವವೇದನೆಯಿಂದ ನರಳುವ ಹೆಂಗಸಿನಂತೆ ಅವರ ಹೊಟ್ಟೆಯಲ್ಲಿ ನೋವು ಉಂಟಾಗುವದು; ಅವರ ಮುಖಗಳು ಬೆಂಕಿಯಂತೆ ಕೆಂಪಗಾಗುವವು. ಭಯದ ಮುಖವು ತಮ್ಮ ನೆರೆಯವರಲ್ಲಿಯೂ ಇರುವದನ್ನು ನೋಡಿ ಜನರು ಆಶ್ಚರ್ಯಪಡುವರು.

ಪ್ರಕಟನೆ ೧೨:೯
ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.

ಫಿಲಿಪಿಯರಿಗೆ ೧:೬
ದೇವರು ನಿಮ್ಮಲ್ಲಿ ಒಳ್ಳೆಯ ಕಾರ್ಯವನ್ನು ಆರಂಭಿಸಿ ನಡೆಸಿಕೊಂಡು ಬರುತ್ತಿದ್ದಾನೆ. ಯೇಸು ಕ್ರಿಸ್ತನು ಮತ್ತೆ ಬಂದಾಗ ದೇವರು ಆ ಕಾರ್ಯವನ್ನು ಸಂಪೂರ್ಣಗೊಳಿಸುವನೆಂದು ನನಗೆ ಭರವಸೆ ಇದೆ.

ಪ್ರಕಟನೆ ೨೧:೪
ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು.

ಹಿಬ್ರಿಯರಿಗೆ ೧೦:೧೯-೨೨
[೧೯] ಸಹೋದರ ಸಹೋದರಿಯರೇ, ನಾವು ಮಹಾ ಪವಿತ್ರಸ್ಥಳವನ್ನು ಪ್ರವೇಶಿಸಲು ಸಂಪೂರ್ಣವಾಗಿ ಸ್ವತಂತ್ರರಾಗಿದ್ದೇವೆ. ಯೇಸು ನಮಗಾಗಿ ತೆರೆದಿರುವ ಹೊಸ ಮಾರ್ಗದ ಮೂಲಕ ನಾವು ಭಯವಿಲ್ಲದೆ ಪ್ರವೇಶಿಸಬಹುದು. ಅದು ಜೀವವುಳ್ಳ ಮಾರ್ಗ. ಕ್ರಿಸ್ತನ ದೇಹವೆಂಬ ತೆರೆಯ ಮೂಲಕ ಈ ಹೊಸ ಮಾರ್ಗವು ನಮ್ಮನ್ನು ಮುಂದಕ್ಕೆ ಕೊಂಡೊಯ್ಯವುದು. (Verses 19-20)[೨೦] See verse 19[೨೧] ದೇವರ ಮನೆಯನ್ನು ಆಳಲು ನಮಗೊಬ್ಬ ಶ್ರೇಷ್ಠ ಯಾಜಕನಿರುವನು.[೨೨] ನಾವು ತೊಳೆಯಲ್ಪಟ್ಟವರಾಗಿದ್ದು ಕೆಟ್ಟ ಮನಸ್ಸಾಕ್ಷಿಯಿಂದ ಬಿಡುಗಡೆ ಹೊಂದಿದ್ದೇವೆ. ನಮ್ಮ ದೇಹಗಳನ್ನು ಶುದ್ಧವಾದ ನೀರಿನಿಂದ ತೊಳೆಯಲಾಗಿದೆ. ಆದ್ದರಿಂದ ಪೂರ್ಣನಂಬಿಕೆಯಿಂದಲೂ ಶುದ್ಧವಾದ ಹೃದಯದಿಂದಲೂ ದೇವರ ಬಳಿಗೆ ಬರೋಣ.

ಯೊವೇಲನ ೨:೩೨
ಆಗ ಯೆಹೋವನ ಹೆಸರನ್ನು ಹೇಳಿಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು. ಚೀಯೋನ್ ಪರ್ವತದಲ್ಲಿಯೂ ಜೆರುಸಲೇಮಿನಲ್ಲಿಯೂ ರಕ್ಷಿಸಲ್ಪಟ್ಟ ಜನರಿರುವರು. ಯೆಹೋವನು ಹೇಳಿದ ಪ್ರಕಾರವೇ ಇದು ಆಗುವುದು. ಉಳಿದ ಜನರಲ್ಲಿ ಯೆಹೋವನು ಕರೆದಿರುವ ಜನರು ಸೇರಿಕೊಂಡಿರುವರು.

ಕೀರ್ತನೆಗಳು ೧೦೪:೯
ನೀನು ಸಮುದ್ರಗಳಿಗೆ ಮೇರೆಗಳನ್ನು ಗೊತ್ತುಪಡಿಸಿರುವುದರಿಂದ ನೀರಿನಿಂದ ಭೂಮಿಯು ಮತ್ತೆಂದಿಗೂ ಆವೃತವಾಗದು.

ಆದಿಕಾಂಡ ೬:೧೨
See verse 11

ಆದಿಕಾಂಡ ೮:೯
ನೀರು ಇನ್ನೂ ಇದ್ದಕಾರಣ, ಆ ಪಾರಿವಾಳ ಹಿಂತಿರುಗಿ ಬಂತು. ನೋಹನು ಕೈಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಸೇರಿಸಿಕೊಂಡನು.

ಆದಿಕಾಂಡ ೯:೧೧
ನಾನು ನಿಮಗೆ ಮಾಡುವ ವಾಗ್ದಾನವೇನೆಂದರೆ: ಭೂಮಿಯ ಮೇಲಿದ್ದ ಎಲ್ಲಾ ಜೀವಿಗಳು ಜಲಪ್ರಳಯದಿಂದ ನಾಶವಾದವು. ಆದರೆ ಮತ್ತೆಂದಿಗೂ ಈ ರೀತಿ ಆಗುವುದಿಲ್ಲ. ಜಲಪ್ರಳಯವು ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ಇನ್ನೆಂದಿಗೂ ನಾಶಗೊಳಿಸುವುದಿಲ್ಲ” ಎಂದು ಹೇಳಿದನು.

ಆದಿಕಾಂಡ ೭:೨೦
ಬೆಟ್ಟಗಳ ಮೇಲೂ ನೀರು ಹೆಚ್ಚತೊಡಗಿತು. ಅತೀ ಎತ್ತರವಾದ ಬೆಟ್ಟಕ್ಕಿಂತಲೂ ಇಪ್ಪತ್ತು ಅಡಿ ಹೆಚ್ಚಾಗಿ ನೀರು ಆವರಿಸಿಕೊಂಡಿತು.

ಆದಿಕಾಂಡ ೮:೫
ನೀರು ಕಡಿಮೆಯಾಗತೊಡಗಿದ್ದರಿಂದ ಹತ್ತನೆಯ ತಿಂಗಳ ಮೊದಲನೆಯ ದಿನದಲ್ಲಿ ಬೆಟ್ಟದ ತುದಿಗಳು ಕಾಣತೊಡಗಿದವು.

ಜ್ಞಾನೋಕ್ತಿಗಳು ೩೧:೩೦
ಲಾವಣ್ಯ ನಿನ್ನನ್ನು ಮೋಸಗೊಳಿಸಬಲ್ಲದು; ಸೌಂದರ್ಯ ತಾತ್ಕಾಲಿಕವಾದದ್ದು. ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳ ಹೆಂಗಸೇ, ಹೊಗಳಿಕೆಗೆ ಪಾತ್ರಳು.

Kannada Bible 1934
Public Domain: 1934