A A A A A

ದೇವರು: [ಅನುಶಾಸನಗಳು]


ಮಾರ್ಕನು ೧೦:೧೯
ನೀನು ನಿತ್ಯಜೀವ ಹೊಂದಬೇಕಾದರೆ ನಿನಗೆ ತಿಳಿದೇ ಇರುವ ಈ ಆಜ್ಞೆಗಳನ್ನು ಪಾಲಿಸು: ‘ಕೊಲೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳು ಹೇಳಬೇಡ, ಮೋಸ ಮಾಡಬೇಡ, ಅಲ್ಲದೆ ನಿನ್ನ ತಂದೆತಾಯಿಯರನ್ನು ಸನ್ಮಾನಿಸು’” ಎಂದು ಉತ್ತರಿಸಿದನು.

ಲೂಕನು ೧೮:೨೦
ದೇವರ ಈ ಆಜ್ಞೆಗಳು ನಿನಗೆ ಗೊತ್ತೇ ಇವೆ: ‘ನೀನು ವ್ಯಭಿಚಾರ ಮಾಡಬಾರದು, ಯಾರನ್ನೂ ಕೊಲೆಮಾಡಬಾರದು, ಯಾವುದನ್ನೂ ಕದಿಯಬಾರದು, ಬೇರೆ ಜನರ ಬಗ್ಗೆ ನೀನು ಸುಳ್ಳನ್ನು ಹೇಳಬಾರದು ಮತ್ತು ನೀನು ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’” ಎಂದನು.

ಮತ್ತಾಯನು ೨೨:೩೪-೪೦
[೩೪] ಸದ್ದುಕಾಯರು ಪ್ರತಿವಾದ ಮಾಡಲಾಗದ ರೀತಿಯಲ್ಲಿ ಯೇಸು ಉತ್ತರಕೊಟ್ಟನೆಂಬುದು ಫರಿಸಾಯರಿಗೆ ತಿಳಿದು ಅವರು ಒಟ್ಟಾಗಿ ಯೇಸುವಿನ ಬಳಿಗೆ ಬಂದರು.[೩೫] ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವೀಣನಾಗಿದ್ದ ಫರಿಸಾಯನೊಬ್ಬನು ಯೇಸುವನ್ನು ಪರೀಕ್ಷಿಸಲು,[೩೬] “ಬೋಧಕನೇ, ಧರ್ಮಶಾಸ್ತ್ರದಲ್ಲಿ ಅತ್ಯಂತ ಪ್ರಮುಖ ಆಜ್ಞೆ ಯಾವುದು?” ಎಂದು ಕೇಳಿದನು.[೩೭] ಯೇಸು, “‘ನಿನ್ನ ದೇವರಾಗಿರುವ ಪ್ರಭುವನ್ನು ಪ್ರೀತಿಸಬೇಕು. ನೀನು ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’[೩೮] ಇದೇ ಮೊದಲನೆಯ ಮತ್ತು ಅತ್ಯಂತ ಪ್ರಮುಖವಾದ ಆಜ್ಞೆ.[೩೯] ಎರಡನೆಯ ಆಜ್ಞೆಯು ಮೊದಲನೆಯ ಆಜ್ಞೆಯಷ್ಟೇ ಪ್ರಮುಖವಾಗಿದೆ. ‘ನೀನು ನಿನ್ನನ್ನು ಪ್ರೀತಿಸುವಂತೆಯೇ ನೆರೆಯವರನ್ನು ಪ್ರೀತಿಸಬೇಕು’ ಎಂಬುದೇ ಆ ಆಜ್ಞೆ.[೪೦] ಇಡೀ ಧರ್ಮಶಾಸ್ತ್ರವು ಮತ್ತು ಪ್ರವಾದಿಗಳ ಎಲ್ಲಾ ಗ್ರಂಥಗಳು ಈ ಎರಡು ಆಜ್ಞೆಗಳ ಅರ್ಥವನ್ನೇ ಒಳಗೊಂಡಿವೆ” ಎಂದು ಉತ್ತರಕೊಟ್ಟನು.

ರೋಮನರಿಗೆ ೧೩:೯
ಏಕೆಂದರೆ, “ವ್ಯಭಿಚಾರ ಮಾಡಕೂಡದು; ಕೊಲೆ ಮಾಡಕೂಡದು; ಕದಿಯಕೂಡದು; ಇತರರಿಗೆ ಸೇರಿದ ವಸ್ತುಗಳನ್ನು ಅಪೇಕ್ಷಿಸಕೂಡದು; ಎಂಬ ಒಂದೇ ಆಜ್ಞೆಯಲ್ಲಿ ಅಡಕವಾಗಿದೆ.

ಮತ್ತಾಯನು ೧೯:೧೬-೧೯
[೧೬] ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವ ಹೊಂದಲು ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.[೧೭] ಯೇಸು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ಕೇಳುವುದೇಕೆ? ದೇವರೊಬ್ಬನೇ ಒಳ್ಳೆಯವನು. ಆದರೆ ನೀನು ನಿತ್ಯಜೀವವನ್ನು ಹೊಂದಬೇಕೆಂದಿದ್ದರೆ ಈ ಆಜ್ಞೆಗಳಿಗೆ ವಿಧೇಯನಾಗು” ಎಂದು ಉತ್ತರಕೊಟ್ಟನು.[೧೮] ಆ ಮನುಷ್ಯನು, “ಯಾವ ಆಜ್ಞೆಗಳು?” ಎಂದು ಕೇಳಿದನು. ಯೇಸು “ಕೊಲೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು.[೧೯] ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಮತ್ತು ನಿನ್ನನ್ನು ನೀನು ಪ್ರೀತಿಸುವಂತೆ ಬೇರೆಯವರನ್ನೂ ಪ್ರೀತಿಸಬೇಕು” ಎಂದು ಉತ್ತರಕೊಟ್ಟನು.

ಮತ್ತಾಯನು ೨೨:೩೬-೪೦
[೩೬] “ಬೋಧಕನೇ, ಧರ್ಮಶಾಸ್ತ್ರದಲ್ಲಿ ಅತ್ಯಂತ ಪ್ರಮುಖ ಆಜ್ಞೆ ಯಾವುದು?” ಎಂದು ಕೇಳಿದನು.[೩೭] ಯೇಸು, “‘ನಿನ್ನ ದೇವರಾಗಿರುವ ಪ್ರಭುವನ್ನು ಪ್ರೀತಿಸಬೇಕು. ನೀನು ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’[೩೮] ಇದೇ ಮೊದಲನೆಯ ಮತ್ತು ಅತ್ಯಂತ ಪ್ರಮುಖವಾದ ಆಜ್ಞೆ.[೩೯] ಎರಡನೆಯ ಆಜ್ಞೆಯು ಮೊದಲನೆಯ ಆಜ್ಞೆಯಷ್ಟೇ ಪ್ರಮುಖವಾಗಿದೆ. ‘ನೀನು ನಿನ್ನನ್ನು ಪ್ರೀತಿಸುವಂತೆಯೇ ನೆರೆಯವರನ್ನು ಪ್ರೀತಿಸಬೇಕು’ ಎಂಬುದೇ ಆ ಆಜ್ಞೆ.[೪೦] ಇಡೀ ಧರ್ಮಶಾಸ್ತ್ರವು ಮತ್ತು ಪ್ರವಾದಿಗಳ ಎಲ್ಲಾ ಗ್ರಂಥಗಳು ಈ ಎರಡು ಆಜ್ಞೆಗಳ ಅರ್ಥವನ್ನೇ ಒಳಗೊಂಡಿವೆ” ಎಂದು ಉತ್ತರಕೊಟ್ಟನು.

ಮತ್ತಾಯನು ೧೦:೧೭-೨೨
[೧೭] ಜನರ ವಿಷಯದಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮನ್ನು ಅವರು ಬಂಧಿಸಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗುವರು. ಅವರು ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.[೧೮] ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ.[೧೯] ನಿಮ್ಮನ್ನು ಬಂಧಿಸಿದಾಗ ನೀವು ಏನು ಮಾತಾಡಬೇಕು, ಹೇಗೆ ಮಾತಾಡಬೇಕು ಎಂದು ಚಿಂತಿಸಬೇಡಿ. ನೀವು ಹೇಳಬೇಕಾದುವುಗಳನ್ನು ಆ ಸಮಯದಲ್ಲಿ ನಿಮಗೆ ಅನುಗ್ರಹಿಸಲಾಗುವುದು.[೨೦] ಮಾತಾಡುವವರು ನಿಜವಾಗಿಯೂ ನೀವಲ್ಲ. ನಿಮ್ಮ ತಂದೆಯ ಆತ್ಮನೇ ನಿಮ್ಮ ಮೂಲಕ ಮಾತನಾಡುತ್ತಾನೆ.[೨೧] “ಸಹೋದರರು ಸ್ವಂತ ಸಹೋದರರಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು. ತಂದೆಯಂದಿರು ತಮ್ಮ ಸ್ವಂತ ಮಕ್ಕಳಿಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ಮರಣದಂಡನೆಗೆ ಒಪ್ಪಿಸುವರು.[೨೨] ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರೆಲ್ಲರೂ ನಿಮ್ಮನ್ನು ದ್ವೇಷಿಸುತ್ತಾರೆ. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆ ಹೊಂದುವನು.

ರೋಮನರಿಗೆ ೧೩:೮-೧೪
[೮] ಜನರಿಗೆ ಯಾವ ವಿಷಯದಲ್ಲಿಯೂ ಸಾಲಗಾರರಾಗಿರಬೇಡಿ. ಆದರೆ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ವಿಷಯದಲ್ಲಿ ಮಾತ್ರ ಯಾವಾಗಲೂ ಸಾಲಗಾರರಾಗಿದ್ದೀರಿ. ಇತರ ಜನರನ್ನು ಪ್ರೀತಿಸುವ ವ್ಯಕ್ತಿಯು ಇಡೀ ಧರ್ಮಶಾಸ್ತ್ರಕ್ಕೆ ವಿಧೇಯನಾಗಿದ್ದಾನೆ.[೯] ಏಕೆಂದರೆ, “ವ್ಯಭಿಚಾರ ಮಾಡಕೂಡದು; ಕೊಲೆ ಮಾಡಕೂಡದು; ಕದಿಯಕೂಡದು; ಇತರರಿಗೆ ಸೇರಿದ ವಸ್ತುಗಳನ್ನು ಅಪೇಕ್ಷಿಸಕೂಡದು; ಎಂಬ ಒಂದೇ ಆಜ್ಞೆಯಲ್ಲಿ ಅಡಕವಾಗಿದೆ.[೧೦] ಪ್ರೀತಿಯು ಬೇರೆಯವರಿಗೆ ಕೇಡುಮಾಡುವುದಿಲ್ಲ. ಆದ್ದರಿಂದ ಪ್ರೀತಿಸುವುದಕ್ಕೂ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗುವುದಕ್ಕೂ ವ್ಯತ್ಯಾಸವೇನೂ ಇಲ್ಲ.[೧೧] ನಾವು ಪ್ರಾಮುಖ್ಯವಾದ ಸಮಯದಲ್ಲಿ ಜೀವಿಸುತ್ತಿರುವುದರಿಂದ ಈ ವಿಷಯಗಳನ್ನು ಹೇಳುತ್ತಿದ್ದೇನೆ ಎಂಬುದು ನಿಮಗೆ ಗೊತ್ತೇ ಇದೆ. ಹೌದು, ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಕಾಲ ಇದಾಗಿದೆ. ನಾವು ವಿಶ್ವಾಸಿಗಳಾದ ಕಾಲಕ್ಕಿಂತ ಈಗ ನಮ್ಮ ರಕ್ಷಣೆಯು ಸಮೀಪವಾಗಿದೆ.[೧೨] “ರಾತ್ರಿ”ಯು ಬಹುಮಟ್ಟಿಗೆ ಮುಗಿದುಹೋಗಿದೆ. “ಹಗಲು” ಬಹುಮಟ್ಟಿಗೆ ಬಂದಿದೆ. ಆದ್ದರಿಂದ ಕತ್ತಲೆಗೆ ಸೇರಿದ ಕಾರ್ಯಗಳನ್ನು ಇನ್ನು ಮೇಲೆ ಮಾಡದೆ ಬೆಳಕಿಗೆ ಸೇರಿದ ಕಾರ್ಯಗಳನ್ನು ಮಾಡಲು ನಮ್ಮನ್ನು ಸಿದ್ಧಪಡಿಸಿಕೊಳ್ಳಬೇಕು.[೧೩] ಹಗಲಿಗೆ ಸೇರಿದ ಜನರಂತೆ ಸರಿಯಾದ ರೀತಿಯಲ್ಲಿ ಜೀವಿಸೋಣ. ಕೆಟ್ಟದಾದ ಮತ್ತು ವ್ಯರ್ಥವಾದ ಔತಣಕೂಟಗಳನ್ನು ನಾವು ಏರ್ಪಡಿಸಕೂಡದು; ಕುಡಿದು ಮತ್ತರಾಗಕೂಡದು; ನಾವು ಲೈಂಗಿಕ ಪಾಪವನ್ನಾಗಲಿ ನಮ್ಮ ದೇಹದಿಂದ ಯಾವುದೇ ಬಗೆಯ ಪಾಪವನ್ನಾಗಲಿ ಮಾಡಕೂಡದು; ವಾಗ್ವಾದಗಳನ್ನಾಗಲಿ ಜಗಳಗಳನ್ನಾಗಲಿ ಎಬ್ಬಿಸಬಾರದು; ಅಲ್ಲದೆ ಹೊಟ್ಟೆಕಿಚ್ಚುಪಡಬಾರದು.[೧೪] ಪ್ರಭುವಾದ ಯೇಸು ಕ್ರಿಸ್ತನನ್ನೇ ಧರಿಸಿಕೊಳ್ಳಿರಿ. ನಿಮ್ಮ ಪಾಪಸ್ವಭಾವವನ್ನು ಹೇಗೆ ತೃಪ್ತಿಗೊಳಿಸಬೇಕೆಂದಾಗಲಿ ಕೆಟ್ಟಕಾರ್ಯಗಳನ್ನು ಮಾಡಬೇಕೆಂಬ ಬಯಕೆಯನ್ನು ಹೇಗೆ ಪೂರೈಸಿಕೊಳ್ಳಬೇಕೆಂದಾಗಲಿ ಆಲೋಚಿಸಬೇಡಿ.

ಮಾರ್ಕನು ೧೨:೨೮-೩೪
[೨೮] ಈ ವಾದವಿವಾದವನ್ನು ಕೇಳುತ್ತಿದ್ದ ಧರ್ಮೋಪದೇಶಕರಲ್ಲಿ ಒಬ್ಬನು ಯೇಸು ಸದ್ದುಕಾಯರಿಗೆ ಹಾಗೂ ಫರಿಸಾಯರಿಗೆ ಒಳ್ಳೆಯ ಉತ್ತರ ಕೊಟ್ಟದ್ದನ್ನು ಗಮನಿಸಿ, ಆತನ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಅತ್ಯಂತ ಮುಖ್ಯವಾದ ಆಜ್ಞೆ ಯಾವುದು?” ಎಂದು ಕೇಳಿದನು.[೨೯] ಅದಕ್ಕೆ ಯೇಸು, “ಇಸ್ರೇಲಿನ ಜನರೇ ಕೇಳಿರಿ, ‘ನಮ್ಮ ದೇವರಾದ ಪ್ರಭುವೊಬ್ಬನೇ ದೇವರು.[೩೦] ನಿಮ್ಮ ದೇವರಾದ ಪ್ರಭುವನ್ನು ನೀವು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.’ ಇದೇ ಅತ್ಯಂತ ಮುಖ್ಯವಾದ ಆಜ್ಞೆ.[೩೧] ‘ನೀವು ನಿಮ್ಮನ್ನು ಪ್ರೀತಿಸುವಂತೆ ನಿಮ್ಮ ನೆರೆಯವರನ್ನು ಪ್ರೀತಿಸಬೇಕು’ ಎಂಬುದೇ ಅತ್ಯಂತ ಮುಖ್ಯವಾದ ಎರಡನೇ ಆಜ್ಞೆ. ಇವುಗಳೇ ಅತ್ಯಂತ ಮುಖ್ಯವಾದವು” ಎಂದು ಹೇಳಿದನು.[೩೨] ಆಗ ಅವನು, “ಉಪದೇಶಕನೇ, ಅದು ಒಳ್ಳೆಯ ಉತ್ತರ. ನೀನು ಸರಿಯಾಗಿ ಹೇಳಿದೆ. ದೇವರೊಬ್ಬನೇ ಪ್ರಭು.[೩೩] ಆತನಲ್ಲದೆ ಬೇರೆ ದೇವರಿಲ್ಲ. ದೇವರನ್ನು ಪೂರ್ಣಹೃದಯದಿಂದ, ಪೂರ್ಣಬುದ್ಧಿಯಿಂದ ಹಾಗೂ ಪೂರ್ಣಶಕ್ತಿಯಿಂದ ಪ್ರೀತಿಸಬೇಕು ಮತ್ತು ಒಬ್ಬ ವ್ಯಕ್ತಿಯು ತನ್ನನ್ನು ಪ್ರೀತಿಸುವಂತೆಯೇ ಇತರರನ್ನೂ ಪ್ರೀತಿಸಬೇಕು. ನಾವು ದೇವರಿಗೆ ಅರ್ಪಿಸುವ ಪಶುಯಜ್ಞಗಳಿಗಿಂತಲೂ ಈ ಆಜ್ಞೆಗಳು ಹೆಚ್ಚು ಮುಖ್ಯವಾಗಿವೆ” ಎಂದು ಉತ್ತರಿಸಿದನು.[೩೪] ಅವನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿದ ಯೇಸು, “ನೀನು ದೇವರ ರಾಜ್ಯಕ್ಕೆ ಹತ್ತಿರವಾಗಿರುವೆ” ಎಂದನು. ಅಂದಿನಿಂದ, ಯೇಸುವಿಗೆ ಹೆಚ್ಚು ಪ್ರಶೆಗಳನ್ನು ಕೇಳಲು ಯಾರಿಗೂ ಸಾಕಷ್ಟು ಧೈರ್ಯ ಬರಲಿಲ್ಲ.

ವಿಮೋಚನಾಕಾಂಡ ೩೪:೨೮
ಮೋಶೆಯು ಅಲ್ಲಿ ಯೆಹೋವನೊಂದಿಗೆ ಹಗಲಿರುಳು ನಲವತ್ತು ದಿನಗಳಿದ್ದನು. ಆ ದಿನಗಳಲ್ಲಿ ಅವನು ಆಹಾರವನ್ನಾಗಲಿ ನೀರನ್ನಾಗಲಿ ಸೇವಿಸಲಿಲ್ಲ. ಮೋಶೆಯು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ದಶಾಜ್ಞೆಗಳನ್ನು ಎರಡು ಕಲ್ಲಿನ ಹಲಿಗೆಗಳ ಮೇಲೆ ಬರೆದನು.

ಧರ್ಮೋಪದೇಷಕಾಂಡ ೪:೧೩
ಅಲ್ಲಿ ಆತನು ನಿಮ್ಮೊಂದಿಗೆ ಒಡಂಬಡಿಕೆ ಮಾಡಿಕೊಂಡನು. ಆತನು ಹತ್ತು ಆಜ್ಞೆಗಳನ್ನು ನಿಮಗೆ ಕೊಟ್ಟು ಅವುಗಳನ್ನು ಅನುಸರಿಸಲು ಆಜ್ಞಾಪಿಸಿದನು. ಆ ಹತ್ತು ಆಜ್ಞೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದನು.

ಧರ್ಮೋಪದೇಷಕಾಂಡ ೧೦:೪
ಆಗ ಯೆಹೋವನು ಮುಂಚಿನಂತೆಯೇ ಇದರಲ್ಲೂ ದಶಾಜ್ಞೆಗಳನ್ನು ಬರೆದು ನನಗೆ ಕೊಟ್ಟನು. ನೀವು ಬೆಟ್ಟದ ಬಳಿ ಒಟ್ಟಾಗಿ ಸೇರಿ ಬಂದಿದ್ದಾಗ ಆತನು ಬೆಂಕಿಯೊಳಗಿಂದ ಹೇಳಿದ್ದ ದಶಾಜ್ಞೆಗಳೇ ಇವು.

ಧರ್ಮೋಪದೇಷಕಾಂಡ ೫:೭-೨೨
[೭] “ನೀವು ನನ್ನ ಹೊರತು ಬೇರೆ ಯಾವ ದೇವರುಗಳನ್ನೂ ಪೂಜಿಸಬಾರದು.[೮] “ನೀವು ವಿಗ್ರಹಗಳನ್ನು ಮಾಡಿಕೊಳ್ಳಬಾರದು. ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಭೂಮಿಯ ಕೆಳಗಿರುವ ನೀರಿನಲ್ಲಾಗಲಿ ಯಾವ ವಸ್ತುಗಳ ವಿಗ್ರಹಗಳನ್ನಾಗಲಿ ಪ್ರತಿಮೆಗಳನ್ನಾಗಲಿ ಮಾಡಿಕೊಳ್ಳಬಾರದು.[೯] ನಾನೇ ನಿಮ್ಮ ದೇವರಾದ ಯೆಹೋವನು. ಆದ್ದರಿಂದ ನೀವು ಯಾವ ವಿಗ್ರಹವನ್ನೂ ಪೂಜಿಸಬಾರದು ಮತ್ತು ಅದರ ಸೇವೆ ಮಾಡಬಾರದು. ನನ್ನ ಜನರು ಇತರ ದೇವರುಗಳನ್ನು ಆರಾಧಿಸುವುದನ್ನು ನಾನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪ ಮಾಡಿದವರನ್ನು ನಾನು ಶಿಕ್ಷಿಸುತ್ತೇನೆ. ಅವರ ಮಕ್ಕಳು, ಮೊಮ್ಮಕ್ಕಳು ಮತ್ತು ಮರಿಮೊಮ್ಮಕ್ಕಳು ನನ್ನ ದಂಡನೆಗೆ ಗುರಿಯಾಗುವರು.[೧೦] ಆದರೆ ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳಿಗೆ ವಿಧೇಯರಾಗುವವರ ಮೇಲೆ ನಾನು ದಯೆ ತೋರಿಸುವೆನು. ಅವರ ಕುಟುಂಬಗಳವರಿಗೆ ಸಾವಿರಾರು ತಲೆಮಾರುಗಳವರೆಗೂ ಕರುಣೆಯನ್ನು ತೋರಿಸುವೆನು.[೧೧] “ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಎತ್ತಬಾರದು. ಯಾರಾದರೂ ಅಯೋಗ್ಯ ಕಾರ್ಯಕ್ಕಾಗಿ ನನ್ನ ಹೆಸರನ್ನು ಉಪಯೋಗಿಸಿದರೆ ನಾನು ಅವನನ್ನು ಶಿಕ್ಷಿಸುವೆನು.[೧೨] “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ವಿಶೇಷದಿನವೆಂದು ಪರಿಗಣಿಸಬೇಕು.[೧೩] ವಾರದ ಆರು ದಿನಗಳಲ್ಲಿ ಕೆಲಸಮಾಡಿರಿ.[೧೪] ಆದರೆ ಏಳನೆಯ ದಿನವು ವಿಶ್ರಾಂತಿಯ ದಿನವಾಗಿದೆ. ಆ ದಿನ ಯಾರೂ ಕೆಲಸ ಮಾಡಬಾರದು. ನೀವು ಮಾತ್ರವೇ ಅಲ್ಲ, ನಿಮ್ಮ ಮಕ್ಕಳು, ಸೇವಕರು, ನಿಮ್ಮ ಪಶುಗಳು, ನಿಮ್ಮಲ್ಲಿರುವ ಪರದೇಶಿಯರು ಕೆಲಸಮಾಡದೆ ವಿಶ್ರಾಂತಿಯಲ್ಲಿರಬೇಕು. ನಿಮ್ಮ ದೇವರಾದ ಯೆಹೋವನ ಗೌರವಾರ್ಥವಾಗಿ ಸಬ್ಬತ್ ದಿನವು ವಿಶ್ರಾಂತಿಯ ದಿನವಾಗಿದೆ.[೧೫] ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಿರೆಂಬುದನ್ನು ಮರೆಯಬೇಡಿ. ನಿಮ್ಮ ದೇವರಾದ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದಲೇ ನಿಮ್ಮ ದೇವರು ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞೆ ಮಾಡಿದ್ದು.[೧೬] “ನಿಮ್ಮ ತಂದೆತಾಯಿಗಳನ್ನು ನೀವು ಸನ್ಮಾನಿಸಬೇಕು. ಇದು ನಿಮ್ಮ ದೇವರ ಆಜ್ಞೆ. ನೀವು ಇದಕ್ಕೆ ವಿಧೇಯರಾದರೆ ದೇವರು ನಿಮಗೆ ಕೊಡುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ ಮತ್ತು ನಿಮಗೆ ಯಾವಾಗಲೂ ಶುಭವಿರುವುದು.[೧೭] “ಕೊಲೆ ಮಾಡಬಾರದು.[೧೮] “ವ್ಯಭಿಚಾರ ಮಾಡಬಾರದು.[೧೯] “ಕದಿಯಬಾರದು.[೨೦] “ಇತರರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಬಾರದು.[೨೧] “ಇನ್ನೊಬ್ಬನ ಹೆಂಡತಿಯನ್ನು ಆಶಿಸಬಾರದು. ಅವನ ಮನೆಯನ್ನಾಗಲಿ ಹೊಲವನ್ನಾಗಲಿ ಸೇವಕರನ್ನಾಗಲಿ ದನವನ್ನಾಗಲಿ ಕತ್ತೆಯನ್ನಾಗಲಿ ನೀವು ಅಪೇಕ್ಷಿಸಬಾರದು. ಇನ್ನೊಬ್ಬನ ವಸ್ತುಗಳಲ್ಲಿ ಯಾವುದನ್ನೂ ಆಶಿಸಬಾರದು!”[೨೨] ಮೋಶೆಯು ಹೇಳಿದ್ದೇನೆಂದರೆ: “ನೀವೆಲ್ಲಾ ಆ ಬೆಟ್ಟದ ಬಳಿಯಲ್ಲಿರುವಾಗ ದೇವರಾದ ಯೆಹೋವನು ಈ ಆಜ್ಞೆಗಳನ್ನು ನಿಮಗೆ ಕೊಟ್ಟನು. ಬೆಂಕಿ, ಮೋಡ ಮತ್ತು ಕಾರ್ಗತ್ತಲೊಳಗಿನಿಂದ ಯೆಹೋವನು ಗಟ್ಟಿಯಾದ ಸ್ವರದಲ್ಲಿ ಮಾತಾಡಿದ್ದನ್ನು ನೀವು ಕೇಳಿದಿರಿ. ಆತನು ಈ ಆಜ್ಞೆಗಳನ್ನು ಕೊಟ್ಟ ಬಳಿಕ ಬೇರೆ ಏನನ್ನೂ ಹೇಳಲಿಲ್ಲ. ಆತನು ತನ್ನ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದು ನನಗೆ ಕೊಟ್ಟನು.

ಧರ್ಮೋಪದೇಷಕಾಂಡ ೬:೨೧
ಆಗ ನೀವು ಹೀಗೆ ಉತ್ತರಿಸಬೇಕು: ‘ನಾವು ಈಜಿಪ್ಟಿನಲ್ಲಿ ಫರೋಹನ ಗುಲಾಮರಾಗಿದ್ದೆವು. ಆದರೆ ನಮ್ಮ ದೇವರಾದ ಯೆಹೋವನು ತನ್ನ ಪರಾಕ್ರಮದಿಂದ ನಮ್ಮನ್ನು ಬಿಡುಗಡೆ ಮಾಡಿದನು.

ಧರ್ಮೋಪದೇಷಕಾಂಡ ೧೦:೧-೫
[೧] “ಆಗ ಯೆಹೋವನು ನನಗೆ, ‘ಮೊದಲಿನ ಎರಡು ಕಲ್ಲಿನ ಹಲಗೆಗಳಂತೆಯೇ ಎರಡು ಕಲ್ಲಿನ ಹಲಗೆಗಳನ್ನು ಮಾಡು. ಆಮೇಲೆ ಬೆಟ್ಟದ ಮೇಲೆ ನನ್ನ ಬಳಿಗೆ ಬಾ. ಅಲ್ಲದೆ ಒಂದು ಮರದ ಪೆಟ್ಟಿಗೆಯನ್ನೂ ತಯಾರು ಮಾಡು.[೨] ನೀನು ಒಡೆದುಹಾಕಿದ ಮೊದಲಿನ ಕಲ್ಲು ಹಲಗೆಗಳ ಮೇಲೆ ಯಾವ ಪದಗಳನ್ನು ಬರೆದಿದ್ದೆನೋ ಅದೇ ಪದಗಳನ್ನು ಈ ಕಲ್ಲಿನ ಹಲಗೆಗಳ ಮೇಲೆ ಬರೆಯುತ್ತೇನೆ. ಈ ಹೊಸ ಕಲ್ಲಿನ ಹಲಗೆಗಳನ್ನು ನೀನು ಮರದ ಪೆಟ್ಟಿಗೆಯಲ್ಲಿಡಬೇಕು’ ಎಂದು ಹೇಳಿದನು.[೩] “ನಾನು ಜಾಲೀಮರದಿಂದ ಪೆಟ್ಟಿಗೆಯನ್ನು ಮಾಡಿದೆನು. ಎರಡು ಕಲ್ಲಿನ ಹಲಗೆಗಳನ್ನು ತಯಾರಿಸಿ ಬೆಟ್ಟವನ್ನೇರಿದೆನು.[೪] ಆಗ ಯೆಹೋವನು ಮುಂಚಿನಂತೆಯೇ ಇದರಲ್ಲೂ ದಶಾಜ್ಞೆಗಳನ್ನು ಬರೆದು ನನಗೆ ಕೊಟ್ಟನು. ನೀವು ಬೆಟ್ಟದ ಬಳಿ ಒಟ್ಟಾಗಿ ಸೇರಿ ಬಂದಿದ್ದಾಗ ಆತನು ಬೆಂಕಿಯೊಳಗಿಂದ ಹೇಳಿದ್ದ ದಶಾಜ್ಞೆಗಳೇ ಇವು.[೫] ನಾನು ಬೆಟ್ಟದಿಂದಿಳಿದು ಆ ಕಲ್ಲಿನ ಹಲಗೆಗಳನ್ನು ಯೆಹೋವನ ಅಪ್ಪಣೆಯಂತೆ ನಾನು ಮಾಡಿದ ಪೆಟ್ಟಿಗೆಯೊಳಗಿಟ್ಟೆನು. ಆ ಕಲ್ಲಿನ ಹಲಗೆಗಳು ಈಗಲೂ ಇವೆ.”

ವಿಮೋಚನಾಕಾಂಡ ೨೦:೧-೧೭
[೧] ಬಳಿಕ ಯೆಹೋವನು ಈ ದಶಾಜ್ಞೆಗಳನ್ನು ಅವರಿಗೆ ಕೊಟ್ಟನು:[೨] “ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.[೩] “ನನ್ನನ್ನಲ್ಲದೆ ಬೇರೆ ಯಾವ ದೇವರುಗಳನ್ನೂ ನೀವು ಆರಾಧಿಸಬಾರದು.[೪] “ನೀವು ಯಾವ ವಿಗ್ರಹಗಳನ್ನೂ ಮಾಡಬಾರದು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ನೀರಿನಲ್ಲಾಗಲಿ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜಿಸಲೂ ಬಾರದು.[೫] ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.[೬] ಆದರೆ ನನ್ನ ಆಜ್ಞೆಗಳಿಗೆ ವಿಧೇಯರಾಗಿರುವವರಿಗೆ ಅವರ ಸಾವಿರ ತಲೆಮಾರುಗಳವರೆಗೂ ದಯೆತೋರಿಸುವೆನು.[೭] “ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.[೮] “ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಅದನ್ನು ಆಚರಿಸಿರಿ.[೯] ವಾರದ ಆರು ದಿನಗಳಲ್ಲಿ ಕೆಲಸಮಾಡಿರಿ.[೧೦] ಆದರೆ ಏಳನೆ ದಿನವು ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಮೀಸಲಾಗಿರುವ ವಿಶ್ರಾಂತಿ ದಿನವಾಗಿದೆ. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. ನೀವಾಗಲಿ ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಸೇವಕರಾಗಲಿ ಸೇವಕಿಯರಾಗಲಿ ನಿಮ್ಮ ಪಶುಗಳಾಗಲಿ ನಿಮ್ಮಲ್ಲಿರುವ ವಿದೇಶಿಯರಾಗಲಿ ಕೆಲಸ ಮಾಡಬಾರದು.[೧೧] ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.[೧೨] “ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.[೧೩] “ನೀವು ಯಾರನ್ನೂ ಕೊಲೆ ಮಾಡಬಾರದು.[೧೪] “ನೀವು ವ್ಯಭಿಚಾರ ಮಾಡಬಾರದು.[೧೫] “ನೀವು ಕದಿಯಬಾರದು.[೧೬] “ನೀವು ಬೇರೆಯವರ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.[೧೭] “ನೀವು ನೆರೆಯವನ ಮನೆಯನ್ನು ಆಶಿಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.

ವಿಮೋಚನಾಕಾಂಡ ೨೪:೧೨
ಯೆಹೋವನು ಮೋಶೆಗೆ, “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಬಳಿಯಲ್ಲಿರು. ನಾನು ನನ್ನ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ಎರಡು ಕಲ್ಲಿನ ಹಲಗೆಗಳ ಮೇಲೆ ಬರೆದಿದ್ದೇನೆ. ಈ ಉಪದೇಶಗಳನ್ನು ಮತ್ತು ಕಟ್ಟಳೆಗಳನ್ನು ನೀನು ಜನರಿಗೆ ಬೋಧಿಸಬೇಕು. ನಾನು ಈ ಕಲ್ಲಿನ ಹಲಗೆಗಳನ್ನು ನಿನಗೆ ಕೊಡುವೆನು” ಎಂದು ಹೇಳಿದನು.

ವಿಮೋಚನಾಕಾಂಡ ೩೪:೧೦-೨೯
[೧೦] ಆಗ ಯೆಹೋವನು, “ನಾನು ನಿಮ್ಮೊಂದಿಗೆ ಈ ಒಡಂಬಡಿಕೆಯನ್ನು ಮಾಡುತ್ತಿದ್ದೇನೆ. ಭೂಲೋಕದಲ್ಲಿ ಎಲ್ಲಿಯೇ ಆಗಲಿ ಯಾವ ಜನಾಂಗದಲ್ಲಿಯೇ ಆಗಲಿ ಹಿಂದೆಂದೂ ನಡೆಯದಂತ ಮಹತ್ಕಾರ್ಯಗಳನ್ನು ಮಾಡುವೆನು. ಎಲ್ಲಾ ಜನರು ಮತ್ತು ನಿನ್ನೊಂದಿಗಿರುವ ಜನರು ಇವುಗಳನ್ನು ನೋಡಿ ಯೆಹೋವನಾದ ನಾನೇ ಮಹಾ ಮಹಿಮಸ್ವರೂಪನೆಂದು ತಿಳಿದುಕೊಳ್ಳುವರು.[೧೧] ನಾನು ಈ ದಿನ ಕೊಡುವ ಆಜ್ಞೆಗಳಿಗೆ ವಿಧೇಯರಾಗಿರಿ. ನಿಮ್ಮ ವೈರಿಗಳಾದ ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಹೊರಗಟ್ಟುವೆನು.[೧೨] ಎಚ್ಚರಿಕೆಯಾಗಿರಿ! ನೀವು ಹೋಗುತ್ತಿರುವ ದೇಶದಲ್ಲಿರುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ನೀವು ಆ ಜನರೊಂದಿಗೆ ಒಪ್ಪಂದ ಮಾಡಿಕೊಂಡರೆ, ಅದು ನಿಮಗೆ ಕೇಡನ್ನು ಬರಮಾಡುವುದು.[೧೩] ಅವರ ವೇದಿಕೆಗಳನ್ನು ನಾಶಮಾಡಿರಿ. ಅವರು ಪೂಜಿಸುವ ಕಲ್ಲುಗಳನ್ನು ಒಡೆದು ಹಾಕಿರಿ. ಅವರ ವಿಗ್ರಹಗಳನ್ನು ಕಡಿದು ಹಾಕಿರಿ.[೧೪] ಬೇರೆ ಯಾವ ದೇವರನ್ನೂ ಪೂಜಿಸಬೇಡಿರಿ. ನಾನೇ ಯೆಹೋವನು. ‘ಸ್ವಗೌರವವನ್ನು ಕಾಪಾಡಿಕೊಳ್ಳುವವನು’ ಎಂಬುದೇ ನನ್ನ ಹೆಸರು.[೧೫] “ಎಚ್ಚರಿಕೆಯಾಗಿರಿ, ಆ ದೇಶದಲ್ಲಿ ವಾಸಿಸುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ನೀವು ಅವರೊಂದಿಗೆ ಸೇರಿಕೊಳ್ಳುವಿರಿ. ಅವರೊಂದಿಗೆ ಸೇರಿಕೊಳ್ಳುವಂತೆ ನಿಮ್ಮನ್ನು ಆಹ್ವಾನಿಸುವರು; ಅವರ ಯಜ್ಞಾರ್ಪಣೆಗಳನ್ನು ತಿನ್ನುವಿರಿ.[೧೬] ನೀವು ಅವರ ಪುತ್ರಿಯರಲ್ಲಿ ಕೆಲವರನ್ನು ನಿಮ್ಮ ಪುತ್ರರಿಗೆ ಹೆಂಡತಿಯರಾಗುವುದಕ್ಕೆ ಆರಿಸಿಕೊಳ್ಳುವಿರಿ. ಅವರ ಪುತ್ರಿಯರು ಸುಳ್ಳುದೇವರುಗಳ ಸೇವೆ ಮಾಡುತ್ತಾರೆ. ನಿಮ್ಮ ಪುತ್ರರನ್ನೂ ಅವರು ಅದೇ ಸೇವೆಗೆ ನಡೆಸುತ್ತಾರೆ.[೧೭] “ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ.[೧೮] “ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಿರಿ. ನಾನು ನಿಮಗೆ ಮೊದಲು ಆಜ್ಞಾಪಿಸಿದಂತೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಿರಿ. ನಾನು ಆರಿಸಿಕೊಂಡ ಅಬೀಬ್ ಮಾಸದಲ್ಲಿ ಇದನ್ನು ಮಾಡಿರಿ. ಯಾಕೆಂದರೆ ಆ ತಿಂಗಳಲ್ಲಿ ನೀವು ಈಜಿಪ್ಟಿನಿಂದ ಬಿಡುಗಡೆ ಹೊಂದಿದಿರಿ.[೧೯] “ಸ್ತ್ರೀಯಲ್ಲಿ ಹುಟ್ಟಿದ ಮೊದಲಿನ ಮಗು ಯಾವಾಗಲೂ ನನಗೆ ಸೇರಿದ್ದು. ನಿಮ್ಮ ದನಕುರಿಗಳಲ್ಲಿ ಹುಟ್ಟಿದ ಮೊದಲ ಮರಿಗಳು ನನಗೆ ಸೇರಿದವುಗಳಾಗಿವೆ.[೨೦] ಚೊಚ್ಚಲಾಗಿ ಹುಟ್ಟಿದ ಕತ್ತೆಯನ್ನು ನೀವು ಇಟ್ಟುಕೊಳ್ಳಲು ಬಯಸಿದರೆ, ಆಗ ನೀವು ಕುರಿಮರಿಯನ್ನು ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಆದರೆ ನೀವು ಅದನ್ನು ಕೊಂಡುಕೊಳ್ಳದಿದ್ದರೆ, ಅದರ ಕುತ್ತಿಗೆಯನ್ನು ಮುರಿದು ಕೊಂದುಬಿಡಬೇಕು. ನೀವು ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನನ್ನಿಂದ ಕೊಂಡುಕೊಳ್ಳಬೇಕು. ಯಾವ ವ್ಯಕ್ತಿಯೂ ಕಾಣಿಕೆಯಿಲ್ಲದೆ, ನನ್ನ ಸನ್ನಿಧಿಗೆ ಬರಕೂಡದು.[೨೧] “ನೀವು ವಾರದಲ್ಲಿ ಆರುದಿನ ಕೆಲಸ ಮಾಡುವಿರಿ. ಆದರೆ ಏಳನೆಯ ದಿನದಲ್ಲಿ ನೀವು ವಿಶ್ರಮಿಸಿಕೊಳ್ಳಬೇಕು. ನೀವು ಬಿತ್ತುವ ಮತ್ತು ಕೊಯ್ಯುವ ಸಮಯದಲ್ಲಿಯೂ ವಿಶ್ರಮಿಸಿಕೊಳ್ಳಬೇಕು.[೨೨] “ವಾರಗಳ ಹಬ್ಬವನ್ನು ಆಚರಿಸಿರಿ. ಈ ಹಬ್ಬಕ್ಕಾಗಿ ಗೋಧಿಬೆಳೆಯ ಪ್ರಥಮ ಕಾಳನ್ನು ಉಪಯೋಗಿಸಿರಿ ಮತ್ತು ವರ್ಷಾಂತ್ಯದಲ್ಲಿ ಸುಗ್ಗಿಹಬ್ಬವನ್ನು ಆಚರಿಸಿರಿ.[೨೩] “ವರ್ಷದಲ್ಲಿ ಮೂರುಸಲ ನಿಮ್ಮಲ್ಲಿರುವ ಗಂಡಸರೆಲ್ಲರೂ, ಇಸ್ರೇಲರ ದೇವರಾಗಿರುವ ಒಡೆಯನಾದ ಯೆಹೋವನ ಸನ್ನಿಧಿಯಲ್ಲಿ ಸೇರಬೇಕು.[೨೪] “ನೀವು ದೇಶದೊಳಕ್ಕೆ ಹೋದಾಗ, ನಾನು ನಿಮ್ಮ ವೈರಿಗಳನ್ನು ಆ ದೇಶದಿಂದ ಹೊರಗಟ್ಟುವೆನು. ನಾನು ನಿಮ್ಮ ಮೇರೆಗಳನ್ನು ವಿಸ್ತರಿಸುವೆನು. ನಿಮಗೆ ಹೆಚ್ಚೆಚ್ಚಾಗಿ ಭೂಮಿ ದೊರೆಯುವುದು. ಪ್ರತಿ ವರ್ಷ ಮೂರುಸಲ ನೀವು ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಿರಿ. ಆ ಸಮಯದಲ್ಲಿ ಯಾರೂ ನಿಮ್ಮಿಂದ ಭೂಮಿಯನ್ನು ಅಪಹರಿಸಲು ಪ್ರಯತ್ನಿಸುವುದಿಲ್ಲ.[೨೫] “ನೀವು ಯಜ್ಞಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಬಾರದು; “ಪಸ್ಕ ಭೋಜನದ ಮಾಂಸದಲ್ಲಿ ಏನನ್ನೂ ಮರುದಿನದ ಮುಂಜಾನೆಯವರೆಗೆ ಉಳಿಸಬಾರದು.[೨೬] “ನೀವು ಕೊಯ್ಯುವ ಪ್ರಥಮವಾದ ಬೆಳೆಗಳನ್ನು ಯೆಹೋವನಿಗೆ ಕೊಡಿರಿ. ಅವುಗಳನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ತನ್ನಿರಿ. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಎಂದಿಗೂ ಬೇಯಿಸಬಾರದು.”[೨೭] ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಹೇಳಿದ ಸಂಗತಿಗಳನ್ನೆಲ್ಲಾ ಬರೆ. ಆ ಸಂಗತಿಗಳು ನಾನು ನಿನ್ನೊಂದಿಗೆ ಮತ್ತು ಇಸ್ರೇಲರೊಂದಿಗೆ ಮಾಡಿದ ಒಡಂಬಡಿಕೆಯಾಗಿದೆ” ಎಂದು ಹೇಳಿದನು.[೨೮] ಮೋಶೆಯು ಅಲ್ಲಿ ಯೆಹೋವನೊಂದಿಗೆ ಹಗಲಿರುಳು ನಲವತ್ತು ದಿನಗಳಿದ್ದನು. ಆ ದಿನಗಳಲ್ಲಿ ಅವನು ಆಹಾರವನ್ನಾಗಲಿ ನೀರನ್ನಾಗಲಿ ಸೇವಿಸಲಿಲ್ಲ. ಮೋಶೆಯು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ದಶಾಜ್ಞೆಗಳನ್ನು ಎರಡು ಕಲ್ಲಿನ ಹಲಿಗೆಗಳ ಮೇಲೆ ಬರೆದನು.[೨೯] ತರುವಾಯ ಮೋಶೆಯು ಸೀನಾಯಿ ಬೆಟ್ಟದಿಂದ ಇಳಿದು ಬಂದನು. ಒಡಂಬಡಿಕೆಯ ವಾಕ್ಯಗಳು ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಅವನು ಹಿಡಿದುಕೊಂಡಿದ್ದನು. ಯೆಹೋವನು ಅವನೊಡನೆ ಮಾತಾಡಿದ್ದರಿಂದ ಅವನ ಮುಖವು ಹೊಳೆಯುತ್ತಿತ್ತು. ಆದರೆ ಮೋಶೆಗೆ ಇದು ತಿಳಿದಿರಲಿಲ್ಲ.

ಧರ್ಮೋಪದೇಷಕಾಂಡ ೬:೪-೯
[೪] “ಇಸ್ರೇಲಿನ ಜನರೇ, ಕಿವಿಗೊಡಿರಿ. ಯೆಹೋವನೇ ನಮ್ಮ ದೇವರು. ದೇವರು ಒಬ್ಬನೇ![೫] ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.[೬] ನಾನೀಗ ಕೊಡುವ ಆಜ್ಞೆಗಳನ್ನು ಯಾವಾಗಲೂ ನಿಮ್ಮ ಜ್ಞಾಪದಲ್ಲಿಟ್ಟುಕೊಂಡಿರಿ.[೭] ನಿಮ್ಮ ಮಕ್ಕಳಿಗೆ ಇದನ್ನು ಕಲಿಸಲು ಮರೆಯಬೇಡಿರಿ. ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ರಸ್ತೆಗಳಲ್ಲಿ ನಡೆಯುತ್ತಿರುವಾಗ, ನೀವು ಮಲಗಿರುವಾಗ, ಎದ್ದಾಗ ಈ ಆಜ್ಞೆಗಳ ಕುರಿತಾಗಿ ಮಾತಾಡಿಕೊಳ್ಳಿರಿ.[೮] ಈ ಆಜ್ಞೆಗಳನ್ನು ಬರೆದು ನಿಮ್ಮ ಕೈಗಳಿಗೆ ಕಟ್ಟಿರಿ, ನಿಮ್ಮ ಹಣೆಗಳ ಮೇಲೆ ಕಟ್ಟಿರಿ. ಇವು ನನ್ನ ಬೋಧನೆಯ ವಿಚಾರವಾಗಿ ನಿಮಗೆ ಜ್ಞಾಪಕ ಹುಟ್ಟಿಸಲು ಸಹಾಯವಾಗುವುದು.[೯] ಅವುಗಳನ್ನು ನಿಮ್ಮ ಬಾಗಿಲಿನ ಮೇಲೆಯೂ ನಿಲುವುಪಟ್ಟಿಗಳ ಮೇಲೆಯೂ ಬರೆಯಿರಿ.

ವಿಮೋಚನಾಕಾಂಡ ೨೦:೨-೧೭
[೨] “ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.[೩] “ನನ್ನನ್ನಲ್ಲದೆ ಬೇರೆ ಯಾವ ದೇವರುಗಳನ್ನೂ ನೀವು ಆರಾಧಿಸಬಾರದು.[೪] “ನೀವು ಯಾವ ವಿಗ್ರಹಗಳನ್ನೂ ಮಾಡಬಾರದು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ನೀರಿನಲ್ಲಾಗಲಿ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜಿಸಲೂ ಬಾರದು.[೫] ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.[೬] ಆದರೆ ನನ್ನ ಆಜ್ಞೆಗಳಿಗೆ ವಿಧೇಯರಾಗಿರುವವರಿಗೆ ಅವರ ಸಾವಿರ ತಲೆಮಾರುಗಳವರೆಗೂ ದಯೆತೋರಿಸುವೆನು.[೭] “ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.[೮] “ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಅದನ್ನು ಆಚರಿಸಿರಿ.[೯] ವಾರದ ಆರು ದಿನಗಳಲ್ಲಿ ಕೆಲಸಮಾಡಿರಿ.[೧೦] ಆದರೆ ಏಳನೆ ದಿನವು ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಮೀಸಲಾಗಿರುವ ವಿಶ್ರಾಂತಿ ದಿನವಾಗಿದೆ. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. ನೀವಾಗಲಿ ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಸೇವಕರಾಗಲಿ ಸೇವಕಿಯರಾಗಲಿ ನಿಮ್ಮ ಪಶುಗಳಾಗಲಿ ನಿಮ್ಮಲ್ಲಿರುವ ವಿದೇಶಿಯರಾಗಲಿ ಕೆಲಸ ಮಾಡಬಾರದು.[೧೧] ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.[೧೨] “ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.[೧೩] “ನೀವು ಯಾರನ್ನೂ ಕೊಲೆ ಮಾಡಬಾರದು.[೧೪] “ನೀವು ವ್ಯಭಿಚಾರ ಮಾಡಬಾರದು.[೧೫] “ನೀವು ಕದಿಯಬಾರದು.[೧೬] “ನೀವು ಬೇರೆಯವರ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.[೧೭] “ನೀವು ನೆರೆಯವನ ಮನೆಯನ್ನು ಆಶಿಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.

ವಿಮೋಚನಾಕಾಂಡ ೩೧:೧೮
ಹೀಗೆ, ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡುವುದನ್ನು ಮುಗಿಸಿದನು. ಬಳಿಕ ಯೆಹೋವನು ಒಡಂಬಡಿಕೆ ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಗೆ ಕೊಟ್ಟನು. ಅವು ದೇವರ ಬೆರಳಿನಿಂದ ಲಿಖಿತವಾಗಿತ್ತು.

ಯೊವಾನ್ನನು ೧೪:೧೫
“ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ಆಜ್ಞಾಪಿಸುವವುಗಳನ್ನು ಮಾಡುವಿರಿ.

ಮತ್ತಾಯನು ೧೯:೧೮
ಆ ಮನುಷ್ಯನು, “ಯಾವ ಆಜ್ಞೆಗಳು?” ಎಂದು ಕೇಳಿದನು. ಯೇಸು “ಕೊಲೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು.

ಯೊವಾನ್ನನು ೧೫:೧೦
ನಾನು ನನ್ನ ತಂದೆಯ ಆಜ್ಞೆಗಳಿಗೆ ವಿಧೇಯನಾಗಿದ್ದು ಆತನ ಪ್ರೀತಿಯಲ್ಲಿ ನೆಲೆಗೊಂಡಿದ್ದೇನೆ. ಅದೇ ರೀತಿಯಲ್ಲಿ, ನೀವು ನನ್ನ ಆಜ್ಞೆಗಳಿಗೆ ವಿಧೇಯರಾದರೆ, ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.

ಮತ್ತಾಯನು ೫:೧೭
“ನಾನು ಮೋಶೆಯ ಧರ್ಮಶಾಸ್ತ್ರವನ್ನಾಗಲಿ ಪ್ರವಾದಿಗಳ ಉಪದೇಶಗಳನ್ನಾಗಲಿ ತೆಗೆದುಹಾಕುವುದಕ್ಕೆ ಬಂದೆನೆಂದು ನೆನೆಸಬೇಡಿರಿ. ನಾನು ಅವುಗಳನ್ನು ನಾಶಮಾಡುವುದಕ್ಕಾಗಿ ಬರದೆ ಅವುಗಳನ್ನು ನೆರವೇರಿಸುವುದಕ್ಕಾಗಿ ಬಂದೆನು.

ವಿಮೋಚನಾಕಾಂಡ ೩೨:೧೫
ಬಳಿಕ ಮೋಶೆ ಬೆಟ್ಟದಿಂದಿಳಿದು ಹೋದನು. ಮೋಶೆಯೊಡನೆ ಆಜ್ಞಾಶಾಸನಗಳ ಎರಡು ಕಲ್ಲಿನ ಹಲಿಗೆಗಳಿದ್ದವು. ಈ ಆಜ್ಞಾಶಾಸನಗಳ ಕಲ್ಲುಗಳ ಮುಂದೆಯೂ ಹಿಂದೆಯೂ ಬರೆಯಲ್ಪಟ್ಟಿದ್ದವು.

ಯೊವಾನ್ನನು ೧೫:೧೨-೧೭
[೧೨] ನಾನು ನಿಮ್ಮನ್ನು ಪ್ರೀತಿಸಿದಂತೆ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆಯಾಗಿದೆ.[೧೩] ಗೆಳೆಯರಿಗಾಗಿ ಸ್ವಂತ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ.[೧೪] ನಾನು ಹೇಳುವ ಕಾರ್ಯಗಳನ್ನು ನೀವು ಮಾಡಿದರೆ, ನೀವು ನನ್ನ ಸ್ನೇಹಿತರು.[೧೫] ಈಗ ನಾನು ನಿಮ್ಮನ್ನು ನನ್ನ ಸೇವಕರುಗಳೆಂದು ಕರೆಯುವುದಿಲ್ಲ. ಯಜಮಾನನ ಕೆಲಸಕಾರ್ಯಗಳು ಸೇವಕನಿಗೆ ತಿಳಿದಿರುವುದಿಲ್ಲ. ಆದರೆ ಈಗ ನಾನು ನಿಮ್ಮನ್ನು ನನ್ನ ಗೆಳೆಯರೆಂದು ಕರೆಯುತ್ತೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ ಪ್ರತಿಯೊಂದನ್ನೂ ನಾನು ನಿಮಗೆ ಹೇಳಿದ್ದೇನೆ.[೧೬] “ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ; ನಾನು ನಿಮ್ಮನ್ನು ಆರಿಸಿಕೊಂಡೆನು. ನೀವು ಹೊರಟುಹೋಗಿ ಫಲಕೊಡಬೇಕು. ಇದೇ ನಾನು ನಿಮಗೆ ಕೊಟ್ಟಿರುವ ಕೆಲಸ. ಈ ಫಲವು ನಿಮ್ಮ ಜೀವನದಲ್ಲಿ ಶಾಶ್ವತವಾಗಿರಲಿ ಎಂಬುದೇ ನನ್ನ ಬಯಕೆ. ಹೀಗಿರಲಾಗಿ, ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.[೧೭] ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆ.

ವಿಮೋಚನಾಕಾಂಡ ೩೨:೧೬
ಯೆಹೋವನು ತಾನೇ ಆ ಕಲ್ಲುಗಳನ್ನು ಮಾಡಿ ಅವುಗಳ ಮೇಲೆ ಬರೆದಿದ್ದನು.

ವಿಮೋಚನಾಕಾಂಡ ೩೪:೨೭
ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಹೇಳಿದ ಸಂಗತಿಗಳನ್ನೆಲ್ಲಾ ಬರೆ. ಆ ಸಂಗತಿಗಳು ನಾನು ನಿನ್ನೊಂದಿಗೆ ಮತ್ತು ಇಸ್ರೇಲರೊಂದಿಗೆ ಮಾಡಿದ ಒಡಂಬಡಿಕೆಯಾಗಿದೆ” ಎಂದು ಹೇಳಿದನು.

Kannada Bible 1934
Public Domain: 1934