A A A A A

ಒಳ್ಳೆಯ ಅಕ್ಷರ: [ಹೊಣೆಗಾರಿಕೆ]


ರೋಮನರಿಗೆ ೧೪:೧೨
ಆದ್ದರಿಂದ ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮನಮ್ಮ ಜೀವಿತದ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.

ರೋಮನರಿಗೆ ೧:೨೦
ಜನರು ದೇವರ ನಿತ್ಯಶಕ್ತಿಯನ್ನಾಗಲಿ ಆತನ ದೈವತ್ವಗಳನ್ನಾಗಲಿ ಕಾಣಲಾರರು. ಆದರೆ ಲೋಕದ ಆರಂಭದಿಂದಲೂ ಆ ಸಂಗತಿಗಳು ಜನರಿಗೆ ಸುಲಭವಾಗಿ ಅರ್ಥವಾಗುತ್ತವೆ. ದೇವರು ಮಾಡಿದ ಸೃಷ್ಟಿಗಳಲ್ಲಿ ಆ ಸಂಗತಿಗಳು ಸ್ಪಷ್ಟವಾಗಿವೆ. ಆದ್ದರಿಂದ ಜನರು ತಾವು ಮಾಡುವ ಕೆಟ್ಟಕಾರ್ಯಗಳಿಗೆ ನೆವ ಹೇಳಲು ಸಾಧ್ಯವಿಲ್ಲ.

ಜ್ಞಾನೋಕ್ತಿಗಳು ೨೭:೧೭
ಕಬ್ಬಿಣವು ಕಬ್ಬಿಣವನ್ನು ಹರಿತಗೊಳಿಸುವುದು; ಅಂತೆಯೇ ಸ್ನೇಹಿತನು ಸ್ನೇಹಿತನನ್ನು ಉತ್ತಮಪಡಿಸುವನು.

ಯಕೋಬನು ೫:೧೬
ನೀವು ಮಾಡಿದ ತಪ್ಪುಗಳನ್ನು ಒಬ್ಬರಿಗೊಬ್ಬರು ಯಾವಾಗಲೂ ಹೇಳಿಕೊಳ್ಳಿರಿ. ಬಳಿಕ ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ನೀವು ಹೀಗೆ ಮಾಡಿದರೆ, ದೇವರು ನಿಮ್ಮನ್ನು ಗುಣಪಡಿಸುವನು. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಲವಾಗಿದೆ.

ರೋಮನರಿಗೆ ೨:೧೨
ಧರ್ಮಶಾಸ್ತ್ರವನ್ನು ಹೊಂದಿರುವ ಜನರು ಮತ್ತು ಧರ್ಮಶಾಸ್ತ್ರದ ಬಗ್ಗೆ ಕೇಳಿಯೂ ಇಲ್ಲದ ಜನರು ಪಾಪ ಮಾಡುವಾಗ ಅವರಿಬ್ಬರಿಗೂ ಯಾವ ವ್ಯತ್ಯಾಸವಿರುವುದಿಲ್ಲ. ಧರ್ಮಶಾಸ್ತ್ರವಿಲ್ಲದವರಾಗಿ ಪಾಪ ಮಾಡುವವರು ನಾಶವಾಗುವರು. ಅದೇ ರೀತಿಯಲ್ಲಿ, ಧರ್ಮಶಾಸ್ತ್ರವನ್ನು ಹೊಂದಿದವರಾಗಿ ಪಾಪ ಮಾಡುವವರು ಧರ್ಮಶಾಸ್ತ್ರಕ್ಕನುಸಾರವಾಗಿ ತೀರ್ಪನ್ನು ಹೊಂದುವರು.

ಲೂಕನು ೧೨:೪೭-೪೮
[೪೭] “ತನ್ನ ಯಜಮಾನನು ತನ್ನಿಂದ ಏನು ಅಪೇಕ್ಷಿಸುತ್ತಾನೆ ಎಂಬುದು ಆ ಸೇವಕನಿಗೆ ಗೊತ್ತಿತ್ತು. ಆದರೆ ಅವನು ತನ್ನನ್ನು ಸಿದ್ಧಪಡಿಸಿಕೊಳ್ಳಲಿಲ್ಲ ಮತ್ತು ತನ್ನ ಕೆಲಸವನ್ನು ಪೂರೈಸಲು ಪ್ರಯತ್ನಿಸಲಿಲ್ಲ. ಆದ್ದರಿಂದ ಅವನು ಕಠಿಣ ದಂಡನೆಗೆ ಗುರಿಯಾಗುವನು![೪೮] ಆದರೆ ತನ್ನ ಯಜಮಾನನ ಬಯಕೆಯನ್ನು ತಿಳಿದಿಲ್ಲದ ಸೇವಕನಿಗೆ ಏನಾಗುವುದು? ಇವನು ಸಹ ದಂಡನೆಗೆ ಅರ್ಹವಾದ ಕಾರ್ಯಗಳನ್ನು ಮಾಡುತ್ತಾನೆ. ಆದರೆ ತನ್ನ ಕರ್ತವ್ಯವನ್ನು ತಿಳಿದಿದ್ದರೂ ಮಾಡದೆಹೋದ ಸೇವಕನಿಗಿಂತ ಇವನಿಗೆ ಕಡಿಮೆ ದಂಡನೆ ಆಗುವುದು. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ಪಡೆದವನಿಂದ ಇನ್ನೂ ಹೆಚ್ಚಾಗಿ ನಿರೀಕ್ಷಿಸಲಾಗುವುದು.”

ಥೆಸೆಲೋನಿಯರಿಗೆ ೧ ೫:೧೧
ಆದ್ದರಿ0ದ ಒಬ್ಬರನ್ನೊಬ್ಬರು ಸ0ತೈಸಿ ಬಲಪಡಿಸಿರಿ. ಈಗ ನೀವು ಮಾಡುತ್ತಿರುವುದು ಅದನ್ನೇ.

ಯಕೋಬನು ೪:೧೭
ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದ್ದರೂ ಒಳ್ಳೆಯದನ್ನು ಮಾಡದಿರುವವನು ಪಾಪವನ್ನು ಮಾಡುವವನಾಗಿದ್ದಾನೆ.

ರೋಮನರಿಗೆ ೪:೧೫
ಏಕೆಂದರೆ ಧರ್ಮಶಾಸ್ತ್ರಕ್ಕೆ ವಿಧೇಯರಾಗದೆ ಹೋದಾಗ, ಧರ್ಮಶಾಸ್ತ್ರವು ದೇವರ ಕೋಪವನ್ನು ಮಾತ್ರ ತರುತ್ತದೆ. ಆದರೆ ಧರ್ಮಶಾಸ್ತ್ರವು ಇಲ್ಲದಿದ್ದರೆ ಅವಿಧೇಯರಾಗುವುದಕ್ಕೆ ಏನೂ ಇರುವುದಿಲ್ಲ.

ತಿಮೊಥೇಯನಿಗ ೧ ೧:೧೦
ಲೈಂಗಿಕ ಪಾಪಗಳನ್ನು ಮಾಡುವವರಿಗೆ, ಸಲಿಂಗಕಾಮಿಗಳಿಗೆ, ಗುಲಾಮರನ್ನು ಮಾರಾಟ ಮಾಡುವವರಿಗೆ, ಸುಳ್ಳನ್ನು ಹೇಳುವವರಿಗೆ, ಒಪ್ಪಂದವನ್ನು ಮೀರುವ ಜನರಿಗೆ, ದೇವರ ಸತ್ಯೋಪದೇಶಕ್ಕೆ ವಿರುದ್ಧವಾಗಿ ಏನನ್ನು ಬೇಕಾದರೂ ಮಾಡುವವರಿಗೆ ಅದನ್ನು ರೂಪಿಸಲಾಗಿದೆ.

ಮತ್ತಾಯನು ೧೨:೩೬
ಜನರು ನಿರ್ಲಕ್ಷ್ಯಭಾವದಿಂದ ಆಡಿದ ಪ್ರತಿಯೊಂದು ಮಾತಿಗೂ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರ ಕೊಡಬೇಕಾಗುವುದು.

ಲೂಕನು ೧೨:೪೮
ಆದರೆ ತನ್ನ ಯಜಮಾನನ ಬಯಕೆಯನ್ನು ತಿಳಿದಿಲ್ಲದ ಸೇವಕನಿಗೆ ಏನಾಗುವುದು? ಇವನು ಸಹ ದಂಡನೆಗೆ ಅರ್ಹವಾದ ಕಾರ್ಯಗಳನ್ನು ಮಾಡುತ್ತಾನೆ. ಆದರೆ ತನ್ನ ಕರ್ತವ್ಯವನ್ನು ತಿಳಿದಿದ್ದರೂ ಮಾಡದೆಹೋದ ಸೇವಕನಿಗಿಂತ ಇವನಿಗೆ ಕಡಿಮೆ ದಂಡನೆ ಆಗುವುದು. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ಪಡೆದವನಿಂದ ಇನ್ನೂ ಹೆಚ್ಚಾಗಿ ನಿರೀಕ್ಷಿಸಲಾಗುವುದು.”

ಯೆಜೆಕಿಯೇಲನ ೧೮:೨೦
ಯಾರು ಪಾಪ ಮಾಡುತ್ತಾರೋ ಅವರೇ ಮರಣಶಿಕ್ಷೆ ಹೊಂದುವರು. ತಂದೆಯ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳುವುದಿಲ್ಲ. ಮತ್ತು ಮಗನ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ತಂದೆಯು ಹೊತ್ತುಕೊಳ್ಳುವದಿಲ್ಲ. ಒಬ್ಬ ಒಳ್ಳೆ ಮನುಷ್ಯನ ನೀತಿಯು ಅವನಿಗೇ ಸೇರಿದ್ದು. ಕೆಟ್ಟ ಮನುಷ್ಯನ ದುಷ್ಟತಬವೂ ಆ ಕೆಟ್ಟ ಮನುಷ್ಯನಿಗೆ ಸೇರಿದ್ದಾಗಿದೆ.

ಎಫೆಸಿಯರಿಗೆ ೫:೨೧
ನೀವು ಒಬ್ಬರಿಗೊಬ್ಬರು ವಿಧೇಯರಾಗಿರಬೇಕು. ಏಕೆಂದರೆ ನೀವು ಕ್ರಿಸ್ತನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು.

ಹಿಬ್ರಿಯರಿಗೆ ೧೦:೨೫
ನಾವು ಸಭೆಯಾಗಿ ಸೇರಿಬರುವುದನ್ನು ಬಿಡಬಾರದು. ಕೆಲವರು ಸಭೆಗೆ ಬರುತ್ತಿಲ್ಲ. ನಾವು ಒಟ್ಟಾಗಿ ಸೇರಿಬಂದು ಒಬ್ಬರನ್ನೊಬ್ಬರು ಬಲಪಡಿಸಬೇಕು. ಯೇಸುವು ಪ್ರತ್ಯಕ್ಷನಾಗುವ ದಿನ ಸಮೀಪವಾಗುತ್ತಿರುವುದರಿಂದ ನೀವು ಇದನ್ನು ಮತ್ತಷ್ಟು ಹೆಚ್ಚಾಗಿ ಮಾಡಬೇಕು.

ಯೆಜೆಕಿಯೇಲನ ೩೩:೮
‘ಈ ಕೆಟ್ಟ ಮನುಷ್ಯನು ಸಾಯುವನು’ ಎಂದು ನಾನು ಹೇಳಿದರೆ, ನೀನು ಹೋಗಿ ಆ ಮನುಷ್ಯನನ್ನು ಎಚ್ಚರಿಸಬೇಕು. ಆದರೆ ನೀನು ಅವನನ್ನು ಎಚ್ಚರಿಸದೆ ಹೋದರೆ, ಅವನ ಜೀವಿತವನ್ನು ಘದಲಾಯಿಸಿಕೊಳ್ಳಲು ಹೇಳದೆ ಹೋದರೆ, ಪಾಪಮಾಡಬೇಡ ಎಂದು ಹೇಳದೆ ಹೋದರೆ, ಆ ದುಷ್ಟನು ಸಾಯುವನು. ಯಾಕೆಂದರೆ, ಅವನು ಪಾಪಮಾಡಿದನು. ಆದರೆ ಅವನ ಮರಣಕ್ಕೆ ನಿನ್ನನ್ನು ಕಾರಣನನ್ನಾಗಿ ಮಾಡುತ್ತೇನೆ.

ಮತ್ತಾಯನು ೧೨:೩೬-೩೭
[೩೬] ಜನರು ನಿರ್ಲಕ್ಷ್ಯಭಾವದಿಂದ ಆಡಿದ ಪ್ರತಿಯೊಂದು ಮಾತಿಗೂ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರ ಕೊಡಬೇಕಾಗುವುದು.[೩೭] ನಿಮ್ಮ ಮಾತುಗಳಿಂದಲೇ ನಿಮಗೆ ನೀತಿವಂತರೆಂದಾಗಲಿ ಅಪರಾಧಿಗಳೆಂದಾಗಲಿ ತೀರ್ಪು ನೀಡಲಾಗುವುದು” ಎಂದನು.

ಗಲಾತ್ಯರಿಗೆ ೬:೧-೨
[೧] ಸಹೋದರ ಸಹೋದರಿಯರೇ, ನಿಮ್ಮ ಸಭೆಯಲ್ಲಿ ಯಾವನಾದರೂ ತಪ್ಪು ಮಾಡಿದರೆ, ಆತ್ಮಿಕರಾದ ನೀವು ಅವನ ಬಳಿಗೆ ಹೋಗಿ ಸೌಮ್ಯತೆಯಿಂದ ಅವನನ್ನು ತಿದ್ದಿ ಸರಿಪಡಿಸಬೇಕು. ಆದರೆ ಎಚ್ಚರಿಕೆಯಿಂದಿರಿ! ನೀವು ಸಹ ಶೋಧನೆಗೊಳಗಾಗಿ ಪಾಪಕ್ಕೆ ಬೀಳುವ ಸಾಧ್ಯವಿದೆ.[೨] ನಿಮ್ಮ ಭಾರವಾದ ಹೊರೆಗಳನ್ನು ಹೊರಲು ಒಬ್ಬರಿಗೊಬ್ಬರು ಸಹಾಯಮಾಡಿರಿ. ಹೀಗೆ ನೀವು ಕ್ರಿಸ್ತನ ಆಜ್ಞೆಯನ್ನು ನಿಜವಾಗಿಯೂ ಅನುಸರಿಸಿರಿ.

ಹಿಬ್ರಿಯರಿಗೆ ೧೦:೨೪
ಒಬ್ಬರಿಗೊಬ್ಬರು ಹಿತಚಿಂತಕರಾಗಿರೋಣ. ಆಗ ಒಬ್ಬರಿಗೊಬ್ಬರು ಪ್ರೀತಿಯನ್ನು ತೋರ್ಪಡಿಸುವುದಕ್ಕೂ ಒಳ್ಳೆಯಕಾರ್ಯಗಳನ್ನು ಮಾಡುವುದಕ್ಕೂ ಪ್ರೋತ್ಸಾಹಿಸಲು ಸಾಧ್ಯವಾಗುತ್ತದೆ.

ಕೀರ್ತನೆಗಳು ೫೧:೫
ಹುಟ್ಟಿದಂದಿನಿಂದ ನಾನು ಪಾಪಿಯೇ. ಮಾತೃಗರ್ಭವನ್ನು ಪ್ರವೇಶಿಸಿದ ದಿನದಿಂದ ನಾನು ದ್ರೋಹಿಯೇ.

ಯೊವಾನ್ನನು ೧ ೨:೨
ನಮ್ಮ ಪಾಪಗಳ ನಿವಾರಣೆಗೂ ಎಲ್ಲಾ ಜನರ ಪಾಪಗಳ ನಿವಾರಣೆಗೂ ಯೇಸುವೇ ಮಾರ್ಗವಾಗಿದ್ದಾನೆ.

ಕೊರಿಂಥಿಯರಿಗೆ ೨ ೫:೧೦
ನಾವೆಲ್ಲರೂ ನ್ಯಾಯ ವಿಚಾರಣೆಗಾಗಿ ಕ್ರಿಸ್ತನ ಮುಂದೆ ನಿಂತುಕೊಳ್ಳಲೇಬೇಕು. ಪ್ರತಿಯೊಬ್ಬನು ಇಹಲೋಕದ ದೇಹದಲ್ಲಿ ವಾಸವಾಗಿದ್ದಾಗ ಮಾಡಿದ ಒಳ್ಳೆಯದಕ್ಕಾಗಲಿ ಕೆಟ್ಟದಕ್ಕಾಗಲಿ ಪ್ರತಿಫಲವನ್ನು ಹೊಂದುವನು.

ಕೊರಿಂಥಿಯರಿಗೆ ೨ ೪:೧೭-೧೮
[೧೭] ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.[೧೮] ಆದ್ದರಿಂದ ನಮಗೆ ಕಾಣುವಂಥವುಗಳ ಬಗ್ಗೆ ಯೋಚಿಸದೆ ನಮಗೆ ಕಾಣದಿರುವಂಥವುಗಳ ಬಗ್ಗೆ ಯೋಚಿಸುತ್ತೇವೆ. ನಮಗೆ ಕಾಣುವಂಥವುಗಳು ಕೇವಲ ಸ್ವಲ್ಪಕಾಲ ಮಾತ್ರ ಇರುತ್ತವೆ. ಆದರೆ ನಮಗೆ ಕಾಣದಂಥವುಗಳು ಎಂದೆಂದಿಗೂ ಇರುತ್ತವೆ.

ಎಫೆಸಿಯರಿಗೆ ೪:೨೫
ಆದ್ದರಿಂದ ನೀವು ಸುಳ್ಳು ಹೇಳದೆ ಒಬ್ಬರಿಗೊಬ್ಬರು ಯಾವಾಗಲೂ ಸತ್ಯವನ್ನೇ ಹೇಳಿರಿ. ಏಕೆಂದರೆ ನಾವೆಲ್ಲರೂ ಒಂದೇ ದೇಹಕ್ಕೆ ಸೇರಿದ ಅಂಗಗಳಾಗಿದ್ದೇವೆ.

ಗಲಾತ್ಯರಿಗೆ ೬:೨
ನಿಮ್ಮ ಭಾರವಾದ ಹೊರೆಗಳನ್ನು ಹೊರಲು ಒಬ್ಬರಿಗೊಬ್ಬರು ಸಹಾಯಮಾಡಿರಿ. ಹೀಗೆ ನೀವು ಕ್ರಿಸ್ತನ ಆಜ್ಞೆಯನ್ನು ನಿಜವಾಗಿಯೂ ಅನುಸರಿಸಿರಿ.

ಪ್ರೇಷಿತರ ೧೪:೧೭
ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.”

ಕೊರಿಂಥಿಯರಿಗೆ ೨ ೨:೬
ನಿಮ್ಮ ಸಭೆಯ ಬಹುಮಂದಿ ಅವನಿಗೆ ವಿಧಿಸಿರುವ ಶಿಕ್ಷೆಯೇ ಸಾಕಾಗಿದೆ.

ಸಮುವೇಲನು ೧ ೧೬:೭
ಆದರೆ ಯೆಹೋವನು ಸಮುವೇಲನಿಗೆ, “ಎಲೀಯಾಬನ ಎತ್ತರವನ್ನಾಗಲಿ ರೂಪವನ್ನಾಗಲಿ ಪರಿಗಣಿಸಬೇಡ. ಯಾಕೆಂದರೆ ನಾನು ಅವನನ್ನು ತಿರಸ್ಕರಿಸಿದ್ದೇನೆ. ಮನುಷ್ಯರಾದರೋ ಹೊರತೋರಿಕೆಯನ್ನು ಪರಿಗಣಿಸುತ್ತಾರೆ; ಯೆಹೋವನಾದರೋ ಹೊರತೋರಿಕೆಯನ್ನು ನೋಡದೆ ಹೃದಯವನ್ನೇ ನೋಡುವವನಾಗಿದ್ದಾನೆ” ಎಂದು ಹೇಳಿದನು.

ಕೊರಿಂಥಿಯರಿಗೆ ೧ ೧:೧೦
ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.

ಅರಸುಗಳು ೨ ೧೨:೪-೫
[೪] ಯೆಹೋವಾಷನು ಯಾಜಕರಿಗೆ, “ದೇವಾಲಯದಲ್ಲಿ ಬಹಳ ಹಣವಿದೆ. ಜನರು ಅನೇಕ ವಸ್ತುಗಳನ್ನು ಆಲಯಕ್ಕೆ ಕೊಟ್ಟಿದ್ದಾರೆ. ಜನಗಣತಿಯಲ್ಲಿ ಲೆಕ್ಕಿಸಲ್ಪಟ್ಟ ಜನರು ಆಲಯದ ತೆರಿಗೆಯನ್ನು ಕೊಟ್ಟಿದ್ದಾರೆ. ಜನರು ತಮ್ಮ ಸ್ವ ಇಚ್ಛೆಯಿಂದ ಹಣವನ್ನು ಕೊಟ್ಟಿದ್ದಾರೆ. ಯಾಜಕರಾದ ನೀವು ಆ ಹಣವನ್ನು ತೆಗೆದುಕೊಂಡು, ಯೆಹೋವನ ಆಲಯವನ್ನು ಸರಿಪಡಿಸಿ. ಪ್ರತಿಯೊಬ್ಬ ಯಾಜಕನೂ ತಾನು ಜನರ ಸೇವೆಯಿಂದ ಪಡೆದ ಹಣವನ್ನು ಉಪಯೋಗಿಸಲೇಬೇಕು. ಅವನು ಆ ಹಣವನ್ನು ದೇವಾಲಯದ ಶಿಥಿಲತೆಯನ್ನು ಸರಿಪಡಿಸಲು ಉಪಯೋಗಿಸಲೇಬೇಕು” ಎಂದು ಹೇಳಿದನು. (Verses 4-5)[೫] See verse 4

ಕೀರ್ತನೆಗಳು ೮೨:೧
ದೇವಾದಿದೇವನು ತನ್ನ ಸಭೆಯಲ್ಲಿ ನಿಂತುಕೊಂಡು ದೇವರುಗಳಿಗೆ ನ್ಯಾಯತೀರ್ಪು ನೀಡುವನು.

ಕೀರ್ತನೆಗಳು ೮೨:೬
ನಾಯಕರಾದ ನಿಮಗೆ ನಾನು ಹೇಳುವುದೇನೆಂದರೆ: “ನೀವು ದೇವರುಗಳು. ನೀವು ಮಹೋನ್ನತನಾದ ದೇವರ ಪುತ್ರರು.

ಯೋಬನ ೧:೬-೧೨
[೬] ದೇವದೂತರು ಯೆಹೋವನನ್ನು ಭೇಟಿಯಾಗುವ ದಿನ ಬಂದಿತು. ಆಗ ಸೈತಾನನು ಸಹ ಆ ದೂತರೊಂದಿಗೆ ಬಂದನು.[೭] ಯೆಹೋವನು ಸೈತಾನನಿಗೆ, “ನೀನು ಎಲ್ಲಿಗೆ ಹೋಗಿದ್ದೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಿದ್ದೆ” ಎಂದು ಉತ್ತರಕೊಟ್ಟನು.[೮] ಆಗ ಯೆಹೋವನು, “ನನ್ನ ಸೇವಕನಾದ ಯೋಬನ ಬಗ್ಗೆ ಆಲೋಚಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ” ಎಂದು ಹೇಳಿದನು.[೯] ಅದಕ್ಕೆ ಸೈತಾನನು, “ಹೌದು! ಯೋಬನು ದೇವರಲ್ಲಿ ಭಯಭಕ್ತಿಯಿಟ್ಟಿರುವುದಕ್ಕೆ ಒಳ್ಳೆಯ ಕಾರಣವೊಂದಿದೆ![೧೦] ನೀನು ಅವನನ್ನೂ ಅವನ ಕುಟುಂಬವನ್ನೂ ಅವನ ಆಸ್ತಿಯನ್ನೂ ಸಂರಕ್ಷಿಸುತ್ತಿರುವೆ. ಅವನ ಕೆಲಸಕಾರ್ಯಗಳನ್ನು ಸಫಲಪಡಿಸುತ್ತಿರುವುದರಿಂದ ಅವನ ಸಂಪತ್ತು ದೇಶದಲ್ಲೆಲ್ಲಾ ವೃದ್ಧಿಯಾಗುತ್ತಿದೆ.[೧೧] ಆದರೆ ಈಗ ನೀನು ನಿನ್ನ ಕೈಚಾಚಿ ಅವನ ಆಸ್ತಿಯನ್ನೆಲ್ಲಾ ನಾಶಮಾಡು. ಆಗ ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತರಕೊಟ್ಟನು.[೧೨] ಯೆಹೋವನು ಸೈತಾನನಿಗೆ, “ಸರಿ, ಯೋಬನ ಆಸ್ತಿಗೆಲ್ಲಾ ನೀನು ಏನು ಬೇಕಾದರೂ ಮಾಡು. ಆದರೆ ಅವನ ದೇಹಕ್ಕೆ ಮಾತ್ರ ನೋವನ್ನು ಮಾಡಬೇಡ” ಎಂದು ಹೇಳಿದನು. ಬಳಿಕ ಸೈತಾನನು ಯೆಹೋವನ ಬಳಿಯಿಂದ ಹೊರಟುಹೋದನು.

ಯೋಬನ ೨:೧-೭
[೧] ಮತ್ತೊಂದು ದಿನ ಯೆಹೋವನನ್ನು ಭೇಟಿಯಾಗಲು ದೇವದೂತರು ಬಂದರು. ಸೈತಾನನು ಸಹ ಯೆಹೋವನನ್ನು ಭೇಟಿಯಾಗಲು ಅವರೊಂದಿಗೆ ಬಂದನು.[೨] ಯೆಹೋವನು ಸೈತಾನನಿಗೆ, “ನೀನು ಎಲ್ಲಿಂದ ಬರುತ್ತಿರುವೆ?” ಎಂದು ಕೇಳಿದನು. ಸೈತಾನನು ಯೆಹೋವನಿಗೆ, “ನಾನು ಭೂಮಿಯ ಮೇಲೆಲ್ಲಾ ಅಲೆದಾಡುತ್ತಾ ಬಂದೆನು” ಎಂದು ಉತ್ತರಕೊಟ್ಟನು.[೩] ಅದಕ್ಕೆ ಯೆಹೋವನು, “ನನ್ನ ಸೇವಕನಾದ ಯೋಬನನ್ನು ಗಮನಿಸಿದೆಯಾ? ಭೂಮಿಯ ಮೇಲೆ ಅವನಂತೆ ಯಾರೂ ಇಲ್ಲ. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದಾನೆ; ಕೆಟ್ಟಕಾರ್ಯಗಳನ್ನು ಮಾಡದೆ ನಿರ್ದೋಷಿಯೂ ಯಥಾರ್ಥವಂತನೂ ಆಗಿದ್ದಾನೆ. ನಿಷ್ಕಾರಣವಾಗಿ ಅವನನ್ನು ನಾಶಪಡಿಸುವಂತೆ ನೀನು ನನ್ನನ್ನು ಒತ್ತಾಯಪಡಿಸಿದೆ. ಆದರೆ ಅವನು ನನಗೆ ಇನ್ನೂ ನಂಬಿಗಸ್ತನಾಗಿದ್ದಾನೆ” ಎಂದು ಹೇಳಿದನು.[೪] ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ! ಎಂಬಂತೆ ಮನುಷ್ಯನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ತನ್ನ ಸರ್ವಸ್ವವನ್ನೂ ಕೊಡುವನು.[೫] ಆದರೆ ನೀನು ಕೈಚಾಚಿ ಅವನ ಮಾಂಸವನ್ನೂ ಮೂಳೆಗಳನ್ನೂ ಹೊಡೆ. ಅವನು ನಿನ್ನ ಮುಖದೆದುರಿಗೆ ನಿನ್ನನ್ನು ಖಂಡಿತವಾಗಿ ದೂಷಿಸುವನು” ಎಂದು ಉತ್ತರಕೊಟ್ಟನು.[೬] ಅದಕ್ಕೆ ಯೆಹೋವನು ಸೈತಾನನಿಗೆ, “ಸರಿ, ಯೋಬನನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ; ಆದರೆ ಅವನ ಪ್ರಾಣವನ್ನು ಮಾತ್ರ ತೆಗೆಯಬೇಡ” ಎಂದು ಅಪ್ಪಣೆಕೊಟ್ಟನು.[೭] ಆಗ, ಸೈತಾನನು ಯೆಹೋವನ ಬಳಿಯಿಂದ ಹೊರಟುಹೋಗಿ ಯೋಬನಿಗೆ ಬಾಧಿಸುವ ಕುರುಗಳನ್ನು ಹುಟ್ಟಿಸಿದನು. ಯೋಬನ ದೇಹದ ಮೇಲೆಲ್ಲಾ ಅಂದರೆ ಅವನ ಪಾದದಿಂದಿಡಿದು ತಲೆಯ ಮೇಲ್ಭಾಗದವರೆಗೂ ಬಾಧಿಸುವ ಕುರುಗಳು ತುಂಬಿಕೊಂಡವು.

ಕ್ರಾನಿಕಲ್ಸ್ ೧ ೨೮:೮
“ನಾನು ದೇವರ ಸನ್ನಿಧಾನದಲ್ಲಿಯೂ ಎಲ್ಲಾ ಇಸ್ರೇಲರ ಮುಂದೆಯೂ ನಿಮಗಿದನ್ನು ಹೇಳುತ್ತಿದ್ದೇನೆ. ನಿಮ್ಮ ದೇವರಾದ ಯೆಹೋವನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನೀವು ಉತ್ತಮವಾದ ಈ ದೇಶವನ್ನು ಅನುಭವಿಸುವಿರಿ; ನಿಮ್ಮ ಸಂತತಿಯವರೂ ಇದರ ಸುಖವನ್ನು ಅನುಭವಿಸುವಂತೆ ಮಾಡುವಿರಿ.

Kannada Bible 1934
Public Domain: 1934