A A A A A

ಒಳ್ಳೆಯ ಅಕ್ಷರ: [ಆರೈಕೆ]


ತಿಮೊಥೇಯನಿಗ ೧ ೫:೪
ಆದರೆ ಒಬ್ಬ ವಿಧವೆಗೆ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ, ಅವರು ತಂದೆತಾಯಿಗಳಿಗೆ ಸಹಾಯ ಮಾಡುವುದರ ಮೂಲಕ ಸ್ವಂತ ಕುಟುಂಬಕ್ಕೆ ಗೌರವವನ್ನು ತೋರಬೇಕು. ಅವರು ಹೀಗೆ ಮಾಡಿದರೆ, ತಂದೆತಾಯಿಗಳಿಗೆ ಮತ್ತು ಅಜ್ಜಅಜ್ಜಿಯರಿಗೆ ಪ್ರತ್ಯುಪಕಾರ ಮಾಡಿದಂತಾಗುವುದು. ಅದು ದೇವರಿಗೆ ಮೆಚ್ಚಿಕೆಯಾದದ್ದು.

ತಿಮೊಥೇಯನಿಗ ೧ ೩:೧೫
ನಂತರ ನಾನು ನಿನ್ನ ಬಳಿಗೆ ಬೇಗ ಬಾರದೆ ಇದ್ದರೂ, ದೇವರ ಮನೆಯಲ್ಲಿ ಜನರು ಮಾಡಲೇಬೇಕಾದ ಕಾರ್ಯಗಳ ಬಗ್ಗೆ ನಿನಗೆ ತಿಳಿದಿದೆ. ಆ ಮನೆಯು ಜೀವಂತ ದೇವರ ಸಭೆ. ಅದು ಸತ್ಯದ ಅಡಿಪಾಯವೂ ಆಧಾರವೂ ಆಗಿದೆ.

ಯೊವಾನ್ನನು ೮:೩೨
ನೀವು ಸತ್ಯವನ್ನು ತಿಳಿದುಕೊಳ್ಳುವಿರಿ. ಆ ಸತ್ಯವು ನಿಮ್ಮನ್ನು ಬಿಡುಗಡೆ ಮಾಡುವುದು” ಎಂದು ಹೇಳಿದನು.

ಪ್ರಕಟನೆ ೧೭:೫
ಅವಳ ಹಣೆಯ ಮೇಲೆ ಒಂದು ಬರಹವನ್ನು ಬರೆದಿತ್ತು. ಆ ಬರಹಕ್ಕೆ ಗೂಢಾರ್ಥವಿತ್ತು. ಅಲ್ಲಿ ಬರೆದಿದ್ದುದು ಹೀಗಿತ್ತು:

ಯಕೋಬನು ೧:೨೭
ದೇವರು ಒಪ್ಪಿಕೊಳ್ಳುವ ಭಕ್ತಿಯು ಹೀಗಿದೆ: ಕೊರತೆಯಲ್ಲಿರುವ ಅನಾಥರನ್ನೂ ವಿಧವೆಯರನ್ನೂ ನೋಡಿಕೊಳ್ಳುವುದು ಮತ್ತು ಲೋಕದ ಕೆಟ್ಟತನದಿಂದ ಪ್ರಭಾವಿತರಾಗದಂತೆ ಅದರಿಂದ ದೂರವಿರುವುದು. ದೇವರು ಇಂಥ ಭಕ್ತಿಯನ್ನು ಪರಿಶುದ್ಧವಾದದ್ದೆಂದೂ ಒಳಿತಾದದ್ದೆಂದೂ ಪರಿಗಣಿಸಿ ಸ್ವೀಕರಿಸಿಕೊಳ್ಳುವನು.

ಯೊವಾನ್ನನು ೬:೫೪
ನನ್ನ ದೇಹವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನು ನಿತ್ಯಜೀವವನ್ನು ಹೊಂದಿದ್ದಾನೆ. ಅಂತಿಮ ದಿನದಂದು ನಾನು ಆ ವ್ಯಕ್ತಿಯನ್ನು ಜೀವಂತವಾಗಿ ಎಬ್ಬಿಸುವೆನು.

ಮಾರ್ಕನು ೬:೩
ಇವನು ಕೇವಲ ಬಡಗಿಯಲ್ಲವೋ? ಇವನ ತಾಯಿ ಮರಿಯಳು. ಇವನು ಯಾಕೋಬ, ಯೋಸೆ, ಯೂದ ಮತ್ತು ಸಿಮೋನರ ಅಣ್ಣ. ಇವನ ತಂಗಿಯರು ಇಲ್ಲಿ ನಮ್ಮೊಂದಿಗಿದ್ದಾರೆ” ಎಂದು ಹೇಳಿ ಆತನನ್ನು ತಾತ್ಸಾರ ಮಾಡಿದರು.

ಯೊವಾನ್ನನು ೧೪:೬
ಯೇಸು, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ತಂದೆಯ ಬಳಿಗೆ ಹೋಗಲು ನಾನೇ ಏಕೈಕ ಮಾರ್ಗ.

ಆದಿಕಾಂಡ ೧:೧-೭
[೧] ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.[೨] ಭೂಮಿಯು ಅಸ್ತವ್ಯಸ್ತವಾಗಿಯೂ ಬರಿದಾಗಿಯೂ ಇತ್ತು. ಭೂಮಿಯ ಮೇಲೆ ಏನೂ ಇರಲಿಲ್ಲ. ಸಾಗರದ ಮೇಲೆ ಕತ್ತಲು ಕವಿದಿತ್ತು. ದೇವರಾತ್ಮನು ಜಲಸಮೂಹಗಳ ಮೇಲೆ ಚಲಿಸುತ್ತಿದ್ದನು.[೩] ಆಗ ದೇವರು, “ಬೆಳಕಾಗಲಿ” ಅನ್ನಲು ಬೆಳಕಾಯಿತು.[೪] ದೇವರಿಗೆ ಬೆಳಕು ಒಳ್ಳೆಯದಾಗಿ ಕಂಡಿತು. ಬಳಿಕ ದೇವರು ಕತ್ತಲೆಯಿಂದ ಬೆಳಕನ್ನು ಬೇರ್ಪಡಿಸಿದನು.[೫] ದೇವರು ಬೆಳಕಿಗೆ ಹಗಲೆಂದೂ ಕತ್ತಲೆಗೆ ರಾತ್ರಿಯೆಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಮುಂಜಾನೆಯೂ ಆಗಿ ಮೊದಲನೆ ದಿನವಾಯಿತು.[೬] ಬಳಿಕ ದೇವರು, “ಜಲಸಮೂಹಗಳ ನಡುವೆ ಗುಮಟ ಉಂಟಾಗಲಿ. ಅದು ಕೆಳಭಾಗದ ನೀರುಗಳನ್ನು ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಲಿ” ಅಂದನು.[೭] ಹೀಗೆ ದೇವರು ಗುಮಟವನ್ನು ಉಂಟುಮಾಡಿ ಅದರ ಕೆಳಭಾಗದ ನೀರುಗಳನ್ನು ಅದರ ಮೇಲ್ಭಾಗದ ನೀರುಗಳಿಂದ ಬೇರ್ಪಡಿಸಿದನು.

ತಿಮೊಥೇಯನಿಗ ೧ ೫:೮
ಯಾವನಾದರೂ ಸ್ವಂತ ಜನರನ್ನು ವಿಶೇಷವಾಗಿ ಸ್ವಂತ ಕುಟುಂಬದವರನ್ನು ಪರಿಪಾಲಿಸದೆ ಹೋದರೆ ಅವನು ಸತ್ಯಬೋಧನೆಯನ್ನು ತಿರಸ್ಕರಿಸುವವನಾಗಿದ್ದಾನೆ. ಅವನು ನಂಬದವನಿಗಿಂತ ತುಂಬಾ ಕೀಳಾದವನು.

ಗಲಾತ್ಯರಿಗೆ ೧:೧೯
ಪ್ರಭುವಿನ (ಯೇಸು) ಸಹೋದರನಾದ ಯಾಕೋಬನನ್ನು ಹೊರತು ಬೇರೆ ಯಾವ ಅಪೊಸ್ತಲರನ್ನೂ ನಾನು ಭೇಟಿಯಾಗಲಿಲ್ಲ.

ಮಲಾಕಿಯನ ೧:೧೧
“ಭೂಲೋಕದ ಜನರೆಲ್ಲಾ ನನ್ನ ಹೆಸರನ್ನು ಗೌರವಿಸುತ್ತಾರೆ; ಒಳ್ಳೆಯ ಕಾಣಿಕೆಗಳನ್ನು ತಂದೊಪ್ಪಿಸುತ್ತಾರೆ, ಒಳ್ಳೆಯ ಧೂಪವನ್ನು ಕಾಣಿಕೆಯಾಗಿ ಅರ್ಪಿಸುತ್ತಾರೆ. ಯಾಕೆಂದರೆ ಅವರಿಗೆಲ್ಲಾ ನನ್ನ ನಾಮ ಮಹತ್ತರವಾದದ್ದು, ವಿಶೇಷವಾದದ್ದು.” ಇದು ಸರ್ವಶಕ್ತನಾದ ಯೆಹೋವನ ನುಡಿ.

ಆದಿಕಾಂಡ ೨:೭
ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.

ಯೊವಾನ್ನನು ೩:೩-೫
[೩] ಯೇಸು “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ಹೊಸದಾಗಿ ಹುಟ್ಟಲೇಬೇಕು. ಒಬ್ಬನು ಹೊಸದಾಗಿ ಹುಟ್ಟಿಲ್ಲದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು” ಎಂದು ಉತ್ತರಿಸಿದನು.[೪] ನಿಕೊದೇಮನು, “ಮನುಷ್ಯನು ಮುದುಕನಾದ ಮೇಲೆ ಹುಟ್ಟುವುದು ಹೇಗೆ? ಒಬ್ಬನು ತನ್ನ ತಾಯಿಯ ಗರ್ಭದೊಳಗೆ ಮತ್ತೆ ಪ್ರವೇಶಿಸಲು ಸಾಧ್ಯವೇ?” ಎಂದು ಕೇಳಿದನು.[೫] ಅದಕ್ಕೆ ಯೇಸು, “ನಾನು ನಿನಗೆ ಸತ್ಯವನ್ನು ಹೇಳುತ್ತೇನೆ. ಒಬ್ಬನು ನೀರಿನಿಂದಲೂ ಆತ್ಮನಿಂದಲೂ ಹುಟ್ಟಲೇಬೇಕು. ಇಲ್ಲವಾದರೆ ಅವನು ದೇವರ ರಾಜ್ಯವನ್ನು ಪ್ರವೇಶಿಸಲಾರನು.

ಹಿಬ್ರಿಯರಿಗೆ ೧೨:೧೪
ಎಲ್ಲಾ ಜನರೊಂದಿಗೆ ಸಮಾಧಾನದಿಂದಲೂ ಪರಿಶುದ್ಧರಾಗಿಯೂ ಜೀವಿಸಲು ಪ್ರಯತ್ನಿಸಿರಿ. ಯಾವನ ಜೀವಿತವು ಪರಿಶುದ್ಧವಾಗಿರುವುದಿಲ್ಲವೋ ಅವನೆಂದಿಗೂ ಪ್ರಭುವನ್ನು ನೋಡುವುದಿಲ್ಲ.

ಪ್ರಕಟನೆ ೧೭:೧೮
ನೀನು ನೋಡಿದ ಸ್ತ್ರೀಯು ಲೋಕದ ರಾಜರುಗಳನ್ನು ಆಳುವ ಮಹಾನಗರಿಯಾಗಿದ್ದಾಳೆ.”

ಮತ್ತಾಯನು ೧೬:೧೮
ಆದ್ದರಿಂದ ನಾನು ನಿನಗೆ ಹೇಳುವುದೇನೆಂದರೆ, ನೀನೇ ಪೇತ್ರ. ನಾನು ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುತ್ತೇನೆ. ಪಾತಾಳಲೋಕದ ಬಲವು ನನ್ನ ಸಭೆಯನ್ನು ಸೋಲಿಸಲಾರದು.

ಆದಿಕಾಂಡ ೧:೧
ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದನು.

ವಿಮೋಚನಾಕಾಂಡ ೧೫:೩
ಯೆಹೋವನೇ ಯುದ್ಧವೀರನು. ಆತನ ನಾಮಧೇಯವು ಯೆಹೋವನೇ.

ಪ್ರಕಟನೆ ೧೭:೯
“ಇದನ್ನು ಅರ್ಥಮಾಡಿಕೊಳ್ಳಲು ನಿನಗೆ ಬುದ್ಧಿ ಬೇಕು. ಆ ಮೃಗದ ಏಳು ತಲೆಗಳೇ ಆ ಸ್ತ್ರೀಯು ಕುಳಿತುಕೊಳ್ಳುವ ಏಳು ಬೆಟ್ಟಗಳಾಗಿವೆ. ಅವು ಏಳು ಮಂದಿ ರಾಜರುಗಳೂ ಆಗಿವೆ.

ಫಿಲಿಪಿಯರಿಗೆ ೪:೬-೭
[೬] ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.[೭] ದೇವಶಾಂತಿಯು ಕ್ರಿಸ್ತ ಯೇಸುವಿನಲ್ಲಿ ನಿಮ್ಮ ಹೃದಯಗಳನ್ನೂ ಮನಸ್ಸುಗಳನ್ನೂ ಕಾಯುವುದು. ದೇವರು ಕೊಡುವ ಆ ಶಾಂತಿಯು ನಾವು ಅರ್ಥಮಾಡಿಕೊಳ್ಳಲಾಗದಷ್ಟು ಅಗಮ್ಯವಾಗಿದೆ.

ಗಲಾತ್ಯರಿಗೆ ೪:೧೯
ನನ್ನ ಪ್ರಿಯ ಮಕ್ಕಳೇ, ಪ್ರಸವವೇದನೆಪಡುವ ತಾಯಿಯಂತೆ ನಾನು ನಿಮ್ಮ ವಿಷಯದಲ್ಲಿ ನೋವುಳ್ಳವನಾಗಿದ್ದೇನೆ. ನೀವು ನಿಜವಾಗಿಯೂ ಕ್ರಿಸ್ತನಂತಾಗುವ ತನಕ ನನಗೆ ಈ ನೋವಿರುತ್ತದೆ.

ಪೇತ್ರನು ೧ ೩:೧೫
ನಿಮ್ಮ ಹೃದಯಗಳಲ್ಲಿ ಕ್ರಿಸ್ತನೇ ಪ್ರಭುವಾಗಿರಲಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ನಿಮ್ಮನ್ನು ಕೇಳುವ ಪ್ರತಿಯೊಬ್ಬರಿಗೂ ಉತ್ತರ ಹೇಳಲು ಯಾವಾಗಲೂ ಸಿದ್ಧವಾಗಿರಿ.

ಪ್ರಕಟನೆ ೧೭:೧
ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡಿದನು. ಏಳು ಪಾತ್ರೆಗಳನ್ನು ಹೊಂದಿದ್ದವರಲ್ಲಿ ಇವನೂ ಒಬ್ಬನಾಗಿದ್ದನು. ಆ ದೇವದೂತನು, “ಬಾ, ಪ್ರಸಿದ್ಧಳಾದ ವೇಶ್ಯಾಸ್ತ್ರೀಗೆ ನೀಡುವ ದಂಡನೆಯನ್ನು ನಾನು ನಿನಗೆ ತೋರಿಸುತ್ತೇನೆ. ಬಹಳ ನೀರುಗಳ ಮೇಲೆ ಕುಳಿತುಕೊಂಡಿರುವವಳು ಅವಳೇ.

ಮತ್ತಾಯನು ೧೮:೧೫-೧೮
[೧೫] ಆದರೆ ಅವನು ನಿನ್ನ ಮಾತನ್ನು ಕೇಳದಿದ್ದರೆ, ನಿನ್ನೊಂದಿಗೆ ಒಬ್ಬಿಬ್ಬರನ್ನು ಕರೆದುಕೊಂಡು ಮತ್ತೆ ಅವನ ಬಳಿಗೆ ಹೋಗು. ಆಗ ಪ್ರತಿಯೊಂದು ದೂರಿನ ವಿಷಯದಲ್ಲೂ ಇಬ್ಬರು ಅಥವಾ ಮೂವರು ಸಾಕ್ಷಿಗಳಿರುವರು.[೧೬] ಅವನು ಅವರ ಮಾತನ್ನೂ ಕೇಳದಿದ್ದರೆ, ಸಭೆಗೆ ತಿಳಿಸು. ಅವನು ಸಭೆಯ ಮಾತನ್ನೂ ಕೇಳದಿದ್ದರೆ ಅವನನ್ನು ದೇವರಲ್ಲಿ ನಂಬಿಕೆ ಇಡದ ಮನುಷ್ಯನಂತಾಗಲಿ ಸುಂಕವಸೂಲಿಗಾರನಂತಾಗಲಿ ಪರಿಗಣಿಸಿರಿ.[೧೭] “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ಈ ಲೋಕದಲ್ಲಿ ನೀಡುವ ನಿಷಿದ್ಧಾಜ್ಞೆಯು ದೇವರೇ ನೀಡಿದ ನಿಷಿದ್ಧಾಜ್ಞೆಯಾಗಿರುತ್ತದೆ. ನೀವು ಭೂಲೋಕದಲ್ಲಿ ನೀಡುವ ಅನುಮತಿಯು ದೇವರೇ ನೀಡಿದ ಅನುಮತಿಯಾಗಿರುತ್ತದೆ.[೧೮] ಇದಲ್ಲದೆ ನಿಮ್ಮಲ್ಲಿ ಇಬ್ಬರು ಈ ಲೋಕದಲ್ಲಿ ಒಮ್ಮನಸ್ಸಿನಿಂದ ಏನನ್ನೇ ಬೇಡಿಕೊಂಡರೂ ಪರಲೋಕದಲ್ಲಿರುವ ನನ್ನ ತಂದೆ ಅದನ್ನು ನೆರವೇರಿಸುತ್ತಾನೆ.

ಎಫೆಸಿಯರಿಗೆ ೧:೨೨-೨೩
[೨೨] ದೇವರು ಪ್ರತಿಯೊಂದನ್ನು ಕ್ರಿಸ್ತನ ಅಧಿಕಾರಕ್ಕೆ ಒಳಪಡಿಸಿದನು. ಸಭೆಗೋಸ್ಕರವಾಗಿ ದೇವರು ಆತನನ್ನು ಪ್ರತಿಯೊಂದರ ಮೇಲೆ ಶಿರಸ್ಸನ್ನಾಗಿ ಮಾಡಿದನು.[೨೩] ಸಭೆಯು ಕ್ರಿಸ್ತನ ದೇಹವಾಗಿದೆ. ಸಭೆಯು ಕ್ರಿಸ್ತನಿಂದ ಆವರಿಸಲ್ಪಟ್ಟಿದೆ. ಆತನು ಸಮಸ್ತವನ್ನು ಪ್ರತಿಯೊಂದು ವಿಷಯದಲ್ಲಿಯೂ ಸಂಪೂರ್ಣಗೊಳಿಸುತ್ತಾನೆ.

ಎಫೆಸಿಯರಿಗೆ ೫:೨೩
ಕ್ರಿಸ್ತನು ಸಭೆಗೆ ಶಿರಸ್ಸಾಗಿರುವಂತೆ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಸಭೆಯು ಕ್ರಿಸ್ತನ ದೇಹವಾಗಿದೆ. ಕ್ರಿಸ್ತನು ಆ ದೇಹದ ರಕ್ಷಕನಾಗಿದ್ದಾನೆ.

ಪ್ರೇಷಿತರ ೪:೩೨
ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು.

ಕೊರಿಂಥಿಯರಿಗೆ ೧ ೧:೧೦
ಸಹೋದರ ಸಹೋದರಿಯರೇ, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ವಾದವಿವಾದವಿಲ್ಲದೆ ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕ್ಯಮತ್ಯದಿಂದ ಬಾಳಿರಿ.

ಯೊವಾನ್ನನು ೧೨:೪೮
ನನ್ನಲ್ಲಿ ನಂಬಿಕೆ ಇಡದಿರುವವನಿಗೆ ಮತ್ತು ನಾನು ಹೇಳುವುದನ್ನು ತಿರಸ್ಕರಿಸುವವನಿಗೆ ತೀರ್ಪುಮಾಡುವಂಥದ್ದು ನಾನು ಆಡಿದ ಮಾತುಗಳೇ. ಅಂತಿಮ ದಿನದಂದು ಅವೇ ಅವನಿಗೆ ತೀರ್ಪುಮಾಡುತ್ತವೆ.

ಯೊವಾನ್ನನು ೧೪:೨೮
‘ನಾನು ಹೊರಟುಹೋಗುತ್ತೇನೆ. ಆದರೆ ನಿಮ್ಮ ಬಳಿಗೆ ಹಿಂತಿರುಗಿ ಬರುತ್ತೇನೆ’ ಎಂದು ನಾನು ನಿಮಗೆ ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ, ನಾನು ತಂದೆಯ ಬಳಿಗೆ ಮರಳಿಹೋಗುವುದರ ಬಗ್ಗೆ ಸಂತೋಷಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವನು.

ಹಿಬ್ರಿಯರಿಗೆ ೧:೧೪
ದೇವದೂತರೆಲ್ಲರೂ ದೇವರ ಸೇವೆಮಾಡುವ ಆತ್ಮಗಳಾಗಿದ್ದಾರೆ ಮತ್ತು ರಕ್ಷಣೆಯನ್ನು ಹೊಂದಿಕೊಳ್ಳುವ ಜನರ ಸಹಾಯಕ್ಕಾಗಿ ಕಳುಹಿಸಲ್ಪಟ್ಟವರಾಗಿದ್ದಾರೆ.

ಮತ್ತಾಯನು ೧೮:೧೦
“ಎಚ್ಚರವಾಗಿರಿ! ಈ ಚಿಕ್ಕ ಮಕ್ಕಳಿಗೆ ಬೆಲೆಯೇ ಇಲ್ಲವೆಂದು ನೆನೆಸಬೇಡಿ. ಇವರಿಗಾಗಿ ಪರಲೋಕದಲ್ಲಿ ದೂತರನ್ನು ನೇಮಿಸಲಾಗಿದೆ. ಆ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಸಮ್ಮುಖದಲ್ಲಿ ಇರುತ್ತಾರೆ. 

ಎಫೆಸಿಯರಿಗೆ ೬:೧೨
ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ.

ಯೊವಾನ್ನನು ೩:೧೬
ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು.

ಯೊವಾನ್ನನು ೧೭:೧೭
“ನಿನ್ನ ಸತ್ಯದ ಮೂಲಕ ನೀನು ಇವರನ್ನು ನಿನ್ನ ಸೇವೆಗೆ ಸಿದ್ಧಪಡಿಸು. ನಿನ್ನ ವಾಕ್ಯವು ಸತ್ಯವಾದದ್ದು.

ಪ್ರಕಟನೆ ೨:೯
“ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ.

ಕೀರ್ತನೆಗಳು ೬೮:೫
ದೇವರು ತನ್ನ ಪವಿತ್ರ ಆಲಯದಲ್ಲಿ, ಅನಾಥರಿಗೆ ತಂದೆಯೂ ವಿಧವೆಯರಿಗೆ ಪಾಲಕನೂ ಆಗಿದ್ದಾನೆ.

ಕೀರ್ತನೆಗಳು ೧೪೬:೯
ಯೆಹೋವನು ನಮ್ಮ ದೇಶದಲ್ಲಿ ವಾಸವಾಗಿರುವ ವಿದೇಶಿಯರನ್ನು ಕಾಪಾಡುತ್ತಾನೆ. ಆತನು ವಿಧವೆಯರನ್ನೂ ಅನಾಥರನ್ನೂ ಪರಿಪಾಲಿಸುತ್ತಾನೆ. ಆದರೆ ಆತನು ದುಷ್ಟರ ಆಲೋಚನೆಗಳನ್ನು ನಾಶಮಾಡುವನು.

ಗಲಾತ್ಯರಿಗೆ ೨:೧೦
ಬಡಜನರನ್ನು ಜ್ಞಾಪಕದಲ್ಲಿಟ್ಟುಕೊಂಡು ಅವರಿಗೆ ಸಹಾಯಮಾಡಬೇಕೆಂಬ ಒಂದೇ ಒಂದು ಸಂಗತಿಯನ್ನು ಅವರು ನಮಗೆ ತಿಳಿಸಿದರು. ನಾನೂ ಈ ಕಾರ್ಯವನ್ನು ಮಾಡಬೇಕೆಂದುಕೊಂಡಿದ್ದೆನು.

ರೋಮನರಿಗೆ ೩:೨೩
ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದವರಾಗಿದ್ದಾರೆ.

Kannada Bible 1934
Public Domain: 1934