A A A A A

ಜೀವನ: [ವಯಸ್ಸಾದ]


ತಿಮೊಥೇಯನಿಗ ೧ ೫:೮
ಯಾವನಾದರೂ ಸ್ವಂತ ಜನರನ್ನು ವಿಶೇಷವಾಗಿ ಸ್ವಂತ ಕುಟುಂಬದವರನ್ನು ಪರಿಪಾಲಿಸದೆ ಹೋದರೆ ಅವನು ಸತ್ಯಬೋಧನೆಯನ್ನು ತಿರಸ್ಕರಿಸುವವನಾಗಿದ್ದಾನೆ. ಅವನು ನಂಬದವನಿಗಿಂತ ತುಂಬಾ ಕೀಳಾದವನು.

ಕೊರಿಂಥಿಯರಿಗೆ ೨ ೪:೧೬
ಆದಕಾರಣವೇ, ನಾವೆಂದಿಗೂ ಬಲಹೀನರಾಗುವುದಿಲ್ಲ. ನಮ್ಮ ಭೌತಿಕ ದೇಹಕ್ಕೆ ವಯಸ್ಸಾಗುತ್ತಿದೆ ಮತ್ತು ಅದು ಬಲಹೀನವಾಗುತ್ತಿದೆ. ಆದರೆ ನಮ್ಮ ಆಂತರ್ಯವು ಪ್ರತಿದಿನ ಹೊಸದಾಗುತ್ತಿದೆ.

ಧರ್ಮೋಪದೇಷಕಾಂಡ ೩೨:೭
ಹಿಂದೆ ಏನಾಯಿತೆಂದು ಜ್ಞಾಪಕಕ್ಕೆ ತಂದುಕೊಳ್ಳಿರಿ. ಬಹಳ ವರ್ಷಗಳ ಹಿಂದೆ ನಡೆದದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ತಂದೆಗಳನ್ನು ಕೇಳಿ, ಅವರು ಹೇಳುವರು. ನಿಮ್ಮ ಹಿರಿಯರನ್ನು ವಿಚಾರಿಸಿ, ಅವರು ಹೇಳುವರು.

ಧರ್ಮೋಪದೇಷಕಾಂಡ ೩೪:೭
ಮೋಶೆಯು ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನು ಸಾಯುವ ತನಕ ಬಲಶಾಲಿಯಾಗಿಯೇ ಇದ್ದನು. ಅವನ ಕಣ್ಣು ಮೊಬ್ಬಾಗಿರಲಿಲ್ಲ.

ಉಪದೇಷಕ ೭:೧೦
“ಈ ಕಾಲಕ್ಕಿಂತ ‘ಹಿಂದಿನ ಕಾಲವೇ’ ಚೆನ್ನಾಗಿತ್ತಲ್ಲವೇ?” ಎನ್ನಬೇಡ. ಅದು ಜ್ಞಾನವುಳ್ಳವರ ಪ್ರಶ್ನೆಯಲ್ಲ.

ವಿಮೋಚನಾಕಾಂಡ ೨೦:೧೨
“ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.

ಆದಿಕಾಂಡ ೬:೩
See verse 2

ಆದಿಕಾಂಡ ೨೫:೮
ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ವೃದ್ಧನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.

ಯೆಶಾಯನ ೪೦:೨೯
ಬಳಲಿಹೋದವರನ್ನು ಆತನು ಬಲಶಾಲಿಗಳನ್ನಾಗಿ ಮಾಡುತ್ತಾನೆ. ಬಲಹೀನರನ್ನು ಶಕ್ತಿವಂತರನ್ನಾಗಿ ಮಾಡುತ್ತಾನೆ.

ಯೆಶಾಯನ ೪೬:೪
ನೀವು ಹುಟ್ಟಿದಾಗ ನಾನು ನಿಮ್ಮನ್ನು ಹೊತ್ತುಕೊಂಡೆನು. ನೀವು ಮುದುಕರಾಗುವಾಗಲೂ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು. ನಿಮ್ಮ ತಲೆಕೂದಲು ನರೆತಾಗಲೂ ನಾನು ನಿಮ್ಮನ್ನು ಹೊರುವೆನು; ಯಾಕೆಂದರೆ ನಾನು ನಿಮ್ಮನ್ನು ಸೃಷ್ಟಿಸಿದೆನು. ಆದ್ದರಿಂದ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು, ನಿಮ್ಮನ್ನು ರಕ್ಷಿಸುವೆನು.”

ಯೋಬನ ೫:೨೬
ಸುಗ್ಗಿಕಾಲದವರೆಗೂ ಬೆಳೆದು ಬಲಿಯುವ ಗೋಧಿಯಂತೆ ನೀನಿರುವೆ. ಹೌದು, ನೀನು ವೃದ್ಧಾಪ್ಯದ ಕೊನೆಯವರೆಗೂ ಜೀವಿಸುವೆ.

ಯೋಬನ ೧೨:೧೨-೨೦
[೧೨] “ಜ್ಞಾನವು ವೃದ್ಧರಲ್ಲಿಲ್ಲವೇ? ದೀರ್ಘಾಯುಷ್ಯವು ತಿಳಿವಳಿಕೆಯನ್ನು ಉಂಟುಮಾಡುವುದಿಲ್ಲವೇ?[೧೩] “ಜ್ಞಾನವೂ ಶಕ್ತಿಯೂ ಆತನವೇ. ಆಲೋಚನೆಯೂ ವಿವೇಕವೂ ಆತನವೇ.[೧೪] ದೇವರು ಕೆಡವಿದ್ದನ್ನು ಮತ್ತೆ ಕಟ್ಟುವುದಕ್ಕಾಗಲಿ ಸೆರೆಗೆ ಹಾಕಿದವನನ್ನು ಬಿಡಿಸುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.[೧೫] ಆತನು ಮಳೆಯನ್ನು ತಡೆಹಿಡಿದರೆ ಭೂಮಿಗೆ ಬರಗಾಲವಾಗುವುದು. ಮಳೆಯನ್ನು ಸುರಿಸಿದರೆ ಭೂಮಿಯ ಮೇಲೆ ಪ್ರವಾಹವಾಗುವುದು.[೧೬] ದೇವರು ಬಲಿಷ್ಠನಾಗಿರುವುದರಿಂದ ಯಾವಾಗಲೂ ಜಯಗಳಿಸುತ್ತಾನೆ. ಗೆಲ್ಲುವವರೂ ಸೋಲುವವರೂ ಆತನವರೇ![೧೭] ದೇವರು ಮಂತ್ರಿಗಳ ಜ್ಞಾನವನ್ನು ತೆಗೆದುಹಾಕುವನು. ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುವನು.[೧೮] ರಾಜರುಗಳು ಜನರಿಗೆ ಬೇಡಿಗಳನ್ನು ಹಾಕಿಸಿದರೆ ದೇವರು ಅವುಗಳನ್ನು ಕಿತ್ತೊಗೆದು ರಾಜರುಗಳ ಸೊಂಟಕ್ಕೆ ಚಿಂದಿಬಟ್ಟೆಯನ್ನು ಕಟ್ಟಿಸುವನು.[೧೯] ದೇವರು ಯಾಜಕರುಗಳ ಅಧಿಕಾರವನ್ನು ಕಿತ್ತೊಗೆಯುವನು; ಪ್ರಧಾನರನ್ನು ದಬ್ಬಿಬಿಡುವನು.[೨೦] ದೇವರು ವಿಶ್ವಾಸನೀಯವಾದ ಆಲೋಚನಾಗಾರರನ್ನು ಮೌನಗೊಳಿಸುವನು; ಹಿರಿಯರ ವಿವೇಕವನ್ನು ತೆಗೆದುಹಾಕುವನು.

ಯೋಬನ ೩೨:೭
‘ವೃದ್ಧರು ಮೊದಲು ಮಾತಾಡಬೇಕು. ಅನೇಕ ವರ್ಷಗಳ ಕಾಲ ಬದುಕಿದ ಜನರು ತಮ್ಮ ಜ್ಞಾನವನ್ನು ಹಂಚಿಕೊಳ್ಳಬೇಕು’ ಎಂದು ನಾನು ನನ್ನೊಳಗೆ ಆಲೋಚಿಸಿಕೊಂಡೆನು.

ಯೊವೇಲನ ೨:೨೮
“ಆ ಬಳಿಕ ನಾನು ನನ್ನ ಆತ್ಮವನ್ನು ಎಲ್ಲಾ ತರದ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಹೆಣ್ಣು ಮಕ್ಕಳು ಪ್ರವಾದಿಸುವರು. ನಿಮ್ಮ ವೃದ್ಧರು ಕನಸು ಕಾಣುವರು. ನಿಮ್ಮ ಯುವಕರಿಗೆ ದರ್ಶನಗಳಾಗುವವು.

ಯಾಜಕಕಾಂಡ ೧೯:೩೨
“ವೃದ್ಧರ ಮುಂದೆ ಎದ್ದು ನಿಂತುಕೊಳ್ಳಿರಿ. ಹಿರಿಯರಿಗೆ ಗೌರವಕೊಡಿರಿ. ನಿಮ್ಮ ದೇವರನ್ನು ಸನ್ಮಾನಿಸಿರಿ. ನಾನೇ ಯೆಹೋವನು!

ಫಿಲೆಮೋನನಿಗೆ ೧:೯
ಆದರೆ ನಾನು ನಿನಗೆ ಆಜ್ಞಾಪಿಸದೆ ಪ್ರೀತಿಯಿಂದ ನಿನ್ನನ್ನು ಕೇಳಿಕೊಳ್ಳುತ್ತಿದ್ದೇನೆ. ಪೌಲನಾದ ನಾನು ಈಗ ವೃದ್ಧನಾಗಿದ್ದೇನೆ ಮತ್ತು ಕ್ರಿಸ್ತ ಯೇಸುವಿನ ನಿಮಿತ್ತ ಸೆರೆಯಲ್ಲಿದ್ದೇನೆ.

ಕೀರ್ತನೆಗಳು ೭೧:೯
ವೃದ್ಧಾಪ್ಯದಲ್ಲಿ ನನ್ನನ್ನು ತಳ್ಳಿಬಿಡಬೇಡ. ಬಲವು ಕುಂದಿ ಹೋಗುತ್ತಿರುವಾಗ ಕೈಬಿಡಬೇಡ.

ಕೀರ್ತನೆಗಳು ೭೧:೧೮
ನಾನು ವೃದ್ಧನಾಗಿರುವೆ; ನನ್ನ ಕೂದಲೂ ನರೆತುಹೋಗಿದೆ. ನನ್ನ ದೇವರೇ, ನನ್ನನ್ನು ಕೈಬಿಡಬೇಡ. ನಿನ್ನ ಬಲವನ್ನೂ ಪ್ರತಾಪವನ್ನೂ ಮುಂದಿನ ತಲೆಮಾರುಗಳವರಿಗೆಲ್ಲಾ ಪ್ರಕಟಿಸುವೆನು.

ಕೀರ್ತನೆಗಳು ೭೩:೨೬
ನನ್ನ ಹೃದಯವೂ ದೇಹವೂ ನಾಶವಾಗುತ್ತವೆ; ಆದರೆ ಎಂದೆಂದಿಗೂ ನೀನೇ ನನಗೆ ಆಶ್ರಯಸ್ಥಾನವೂ ನನ್ನ ದೇವರೂ ಆಗಿರುವೆ.

ಕೀರ್ತನೆಗಳು ೯೦:೧೦-೧೨
[೧೦] ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ; ಬಲಹೆಚ್ಚಿದರೆ ಎಂಭತ್ತು ವರ್ಷ. ಕಷ್ಟಸಂಕಟಗಳೇ ಅದರ ಆಡಂಬರ. ಬಹುಬೇಗನೆ ನಮ್ಮ ಜೀವಿತಗಳು ಕೊನೆಗೊಳ್ಳುತ್ತವೆ! ನಾವು ಹಾರಿ ಹೋಗುತ್ತೇವೆ.[೧೧] ದೇವರೇ, ನಿನ್ನ ಕೋಪದ ಪೂರ್ಣ ಬಲವನ್ನು ಯಾರೂ ತಿಳಿಯರು. ನಿನ್ನಲ್ಲಿ ನಮಗಿರುವ ಭಯಭಕ್ತಿಯು ನಿನ್ನ ಕೋಪದಷ್ಟೇ ದೊಡ್ಡದಾಗಿವೆ.[೧೨] ನಮ್ಮ ಜೀವಿತಗಳು ಕೊಂಚವೇ ಎಂಬುದನ್ನು ನಮಗೆ ಕಲಿಸು. ಆಗ ನಾವು ವಿವೇಕಿಗಳಾಗುವೆವು.

ಕೀರ್ತನೆಗಳು ೯೧:೧೬
ನನ್ನ ಭಕ್ತರಿಗೆ ದೀರ್ಘಾಯುಷ್ಯವನ್ನು ನೀಡಿ ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸಿ ಕಾಪಾಡುವೆನು.”

ಜ್ಞಾನೋಕ್ತಿಗಳು ೧೭:೬
ಮೊಮ್ಮಕ್ಕಳು ವೃದ್ಧರಿಗೆ ಸಂತೋಷ. ಮಕ್ಕಳಿಗೆ ತಮ್ಮ ತಂದೆತಾಯಿಗಳ ಬಗ್ಗೆ ಹೆಮ್ಮೆ.

ಜ್ಞಾನೋಕ್ತಿಗಳು ೨೦:೨೯
ಯುವಕನ ಶಕ್ತಿ ಪ್ರಶಂಸೆಗೆ ಯೋಗ್ಯ. ವೃದ್ಧನ ನರೆಕೂದಲು ಗೌರವಕ್ಕೆ ಪಾತ್ರ.

ಜ್ಞಾನೋಕ್ತಿಗಳು ೨೩:೨೨
ನಿನ್ನ ತಂದೆಗೆ ಕಿವಿಗೊಡು. ಯಾಕೆಂದರೆ ನೀನು ಅವನ ಮಗನು. ಅವನು ನಿನ್ನ ತಂದೆ. ನಿನ್ನ ತಾಯಿ ವೃದ್ಧಳಾಗಿರುವಾಗಲೂ ಆಕೆಯನ್ನು ಗೌರವಿಸು.

ಕೀರ್ತನೆಗಳು ೩೭:೩೫
ಮಹಾದುಷ್ಟನನ್ನು ನಾನು ನೋಡಿದ್ದೇನೆ. ಅವನು ಮಹಾವೃಕ್ಷದಂತೆ ಬಲಿಷ್ಠನಾಗಿದ್ದನು.

ಕ್ರಾನಿಕಲ್ಸ್ ೧ ೨೯:೨೮
ಅವನು ಬಹಳ ಮುದುಕನಾಗಿ ಸತ್ತನು. ಅವನ ದೀರ್ಘಾಯುಷ್ಯದಲ್ಲಿ ಹೆಚ್ಚಾದ ಗೌರವ ಸನ್ಮಾನಗಳು ದೊರೆತವು. ಅವನ ನಂತರ ಮಗನಾದ ಸೊಲೊಮೋನನು ಅರಸನಾದನು.

ಅರಸುಗಳು ೧ ೩:೧೪
ನೀನು ನನ್ನ ಕಟ್ಟಳೆಗಳನ್ನು ಆಜ್ಞೆಗಳನ್ನು ಅನುಸರಿಸುವುದರ ಮೂಲಕ ನನಗೆ ವಿಧೇಯನಾಗಿರಬೇಕು ಎಂದು ಹೇಳುತ್ತೇನೆ. ನಿನ್ನ ತಂದೆಯಾದ ದಾವೀದನು ನಡೆದ ಮಾರ್ಗದಲ್ಲಿ ನೀನೂ ನಡೆ. ಆಗ ನಾನು ನಿನಗೆ ದೀರ್ಘಾಯುಷ್ಯವನ್ನು ಕೊಡುತ್ತೇನೆ” ಎಂದು ಹೇಳಿದನು.

ಕೀರ್ತನೆಗಳು ೧೦೩:೫
ಆತನು ನಮಗೆ ಸುವರಗಳನ್ನು ಹೇರಳವಾಗಿ ದಯಪಾಲಿಸುವನು. ಹದ್ದಿಗೆ ಬರುವಂತೆಯೇ ನಮಗೆ ಯೌವನವನ್ನು ಬರಮಾಡುತ್ತಾನೆ.

ತೀತನಿಗೆ ೨:೩
ಅಂತೆಯೇ ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು. ಅವರು ಚಾಡಿ ಹೇಳಬಾರದು; ಮದ್ಯಾಸಕ್ತರಾಗಿರಬಾರದು. ಅವರು ಒಳ್ಳೆಯದನ್ನೇ ಉಪದೇಶಿಸಬೇಕು.

ತಿಮೊಥೇಯನಿಗ ೧ ೫:೧-೨
[೧] ವೃದ್ಧಪುರುಷರೊಂದಿಗೆ ಕೋಪದಿಂದ ಮಾತಾಡದೆ ಅವರನ್ನು ನಿನ್ನ ತಂದೆಯೆಂದು ಭಾವಿಸಿ ಅವರೊಂದಿಗೆ ಮಾತನಾಡು. ಯೌವನಸ್ಥರನ್ನು ಸಹೋದರರಂತೆಯೂ[೨] ವೃದ್ಧ ಸ್ತ್ರೀಯರನ್ನು ತಾಯಿಗಳಂತೆಯೂ ಯೌವನಸ್ಥೆಯರನ್ನು ಸಹೋದರಿಯರಂತೆಯೂ ಪರಿಗಣಿಸು. ಯಾವಾಗಲೂ ಅವರೊಡನೆ ಒಳ್ಳೆಯ ರೀತಿಯಲ್ಲಿ ನಡೆದುಕೊ.

ಕೀರ್ತನೆಗಳು ೭೧:೮-೯
[೮] ದಿನವೆಲ್ಲಾ ನಿನ್ನ ಅದ್ಭುತಕಾರ್ಯಗಳ ಬಗ್ಗೆ ನಿನ್ನನ್ನು ಸ್ತುತಿಸಿ ಕೊಂಡಾಡುವೆನು.[೯] ವೃದ್ಧಾಪ್ಯದಲ್ಲಿ ನನ್ನನ್ನು ತಳ್ಳಿಬಿಡಬೇಡ. ಬಲವು ಕುಂದಿ ಹೋಗುತ್ತಿರುವಾಗ ಕೈಬಿಡಬೇಡ.

ಫಿಲಿಪಿಯರಿಗೆ ೩:೨೦-೨೧
[೨೦] ನಾವದರೋ ಪರಲೋಕ ಸಂಸ್ಥಾನದವರು. ನಮ್ಮ ರಕ್ಷಕನು ಅಲ್ಲಿಂದಲೇ ಬರುವುದನ್ನು ನಾವು ಎದುರುನೋಡುತ್ತಿದ್ದೇವೆ. ಪ್ರಭುವಾದ ಯೇಸು ಕ್ರಿಸ್ತನೇ ನಮ್ಮ ರಕ್ಷಕನು.[೨೧] ಆತನು ತನ್ನ ಶಕ್ತಿಯಿಂದ ಸಮಸ್ತವನ್ನು ಆಳುತ್ತಾನೆ ಮತ್ತು ನಮ್ಮ ದೀನಾವಸ್ಥೆಯ ಈ ಶರೀರವನ್ನು ರೂಪಾಂತರಪಡಿಸಿ ತನ್ನ ಸ್ವಂತ ಮಹಿಮಾಶರೀರದಂತೆ ಮಾಡುತ್ತಾನೆ.

ಯೆಶಾಯನ ೪೬:೩-೪
[೩] “ಯಾಕೋಬನ ವಂಶದವರೇ, ನನ್ನ ಮಾತನ್ನು ಕೇಳಿರಿ. ಇಸ್ರೇಲರಲ್ಲಿ ಉಳಿದಿರುವವರೇ, ನನ್ನ ಮಾತುಗಳನ್ನು ಕೇಳಿರಿ. ನಾನು ನಿಮ್ಮನ್ನು ಹೊರುತ್ತಿದ್ದೇನೆ. ನೀವು ತಾಯಿಯ ಗರ್ಭದಲ್ಲಿರುವಾಗಲೇ ನಾನು ನಿಮ್ಮನ್ನು ಹೊರುತ್ತಿದ್ದೇನೆ.[೪] ನೀವು ಹುಟ್ಟಿದಾಗ ನಾನು ನಿಮ್ಮನ್ನು ಹೊತ್ತುಕೊಂಡೆನು. ನೀವು ಮುದುಕರಾಗುವಾಗಲೂ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು. ನಿಮ್ಮ ತಲೆಕೂದಲು ನರೆತಾಗಲೂ ನಾನು ನಿಮ್ಮನ್ನು ಹೊರುವೆನು; ಯಾಕೆಂದರೆ ನಾನು ನಿಮ್ಮನ್ನು ಸೃಷ್ಟಿಸಿದೆನು. ಆದ್ದರಿಂದ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು, ನಿಮ್ಮನ್ನು ರಕ್ಷಿಸುವೆನು.”

ಕೀರ್ತನೆಗಳು ೯೨:೧೨-೧೫
[೧೨] ನೀತಿವಂತರಾದರೋ ಯೆಹೋವನ ಆಲಯದಲ್ಲಿ ಬೆಳೆಯುತ್ತಿರುವ ಲೆಬನೋನಿನ ದೇವದಾರು ವೃಕ್ಷದಂತಿರುವರು. ನೀತಿವಂತರಾದರೋ ನಮ್ಮ ದೇವಾಲಯದ ಅಂಗಳದಲ್ಲಿ ಮೊಗ್ಗು ಬಿಡುತ್ತಿರುವ ಖರ್ಜೂರದ ಮರಗಳಂತಿರುವರು. (Verses 12-13)[೧೩] See verse 12[೧೪] ಅವರು ಮುಪ್ಪಿನಲ್ಲಿಯೂ ಪುಷ್ಟಿಯಾಗಿ ಬೆಳೆದಿರುವ ಎಲೆಮರಗಳಂತೆ ಫಲಿಸುವರು.[೧೫] ಯೆಹೋವನು ಒಳ್ಳೆಯವನೆಂಬುವುದಕ್ಕೆ ಅವರು ದೃಷ್ಟಾಂತವಾಗಿರುವರು. ಆತನೇ ನನ್ನ ಬಂಡೆ. ಆತನು ಎಂದಿಗೂ ತಪ್ಪು ಮಾಡನು.

ಉಪದೇಷಕ ೧೨:೧-೭
[೧] ಕಷ್ಟಕಾಲಗಳು ಬರುವುದಕ್ಕಿಂತ ಮೊದಲೇ, ವರ್ಷಗಳು ಮುಗಿದು, “ನನಗೆ ಅವುಗಳಲ್ಲಿ ಸುಖವಿಲ್ಲ” ಎಂದು ಹೇಳುವ ಕಾಲಬರುವುದಕ್ಕಿಂತ ಮೊದಲೇ ಯೌವನಪ್ರಾಯದಲ್ಲಿ ನಿನ್ನ ಸೃಷ್ಟಿಕರ್ತನನ್ನು ಜ್ಞಾಪಿಸಿಕೊ.[೨] ನೀನು ಮುದುಕನಾದಾಗ, ಸೂರ್ಯ, ಚಂದ್ರ, ನಕ್ಷತ್ರಗಳ ಬೆಳಕು ನಿನಗೆ ಕತ್ತಲೆಯಂತೆ ಕಾಣುತ್ತದೆ. ಮಳೆಯಾದ ಮೇಲೆಯೂ ಮತ್ತೆಮತ್ತೆ ಮೋಡಗಳಂತೆ ನಿನ್ನ ಜೀವನದಲ್ಲಿ ಕಷ್ಟಗಳು ತುಂಬಿರುತ್ತವೆ.[೩] ಆ ಸಮಯದಲ್ಲಿ, ನಿನ್ನ ಬಲಿಷ್ಠವಾದ ತೋಳುಗಳು ಶಕ್ತಿಯನ್ನು ಕಳೆದುಕೊಳ್ಳುತ್ತವೆ; ನಿನ್ನ ಬಲಿಷ್ಠವಾದ ಕಾಲುಗಳು ಬಲಹೀನವಾಗಿ ಬಗ್ಗಿಹೋಗುತ್ತವೆ; ನಿನ್ನ ಹಲ್ಲುಗಳು ಬಿದ್ದುಹೋಗುತ್ತವೆ; ಆಗ ನೀನು ಆಹಾರವನ್ನು ಅಗಿದು ತಿನ್ನಲಾರೆ. ನಿನ್ನ ಕಣ್ಣುಗಳು ಮೊಬ್ಬಾಗುತ್ತವೆ.[೪] ನಿನ್ನ ಕಿವಿ ಮಂದವಾಗುತ್ತದೆ. ನೀನು ಮಾರುಕಟ್ಟೆಯ ಶಬ್ದವನ್ನೂ ಕೇಳಲಾರೆ. ಅರೆಯುವ ಕಲ್ಲು ಸಹ ನಿನಗೆ ತುಂಬ ಮೌನವಾಗಿದೆಯೋ ಎಂಬಂತೆ ತೋರುವುದು. ಗಾಯನವೂ ನಿನಗೆ ಕೇಳುವುದಿಲ್ಲ. ನಿನಗೆ ನಿದ್ರೆಬಾರದಿರುವುದರಿಂದ ಕೇವಲ ಒಂದು ಹಕ್ಕಿಯ ಧ್ವನಿಯು ನಿನ್ನನ್ನು ಹೊತ್ತಾರೆಯಲ್ಲಿ ಎಬ್ಬಿಸುವುದು.[೫] ನೀನು ಎತ್ತರವಾದ ಸ್ಥಳಗಳ ಬಗ್ಗೆ ಭಯದಿಂದಿರುವೆ; ನಿನ್ನ ಹಾದಿಯಲ್ಲಿರುವ ಪ್ರತಿಯೊಂದು ಚಿಕ್ಕ ವಸ್ತುವಿಗೂ ಹೆದರಿಕೊಂಡು ನಡೆದಾಡುವೆ. ನಿನ್ನ ಕೂದಲು ಬಾದಾಮಿ ಮರದ ಹೂವುಗಳಂತೆ ಬಿಳುಪಾಗುವುದು. ನೀನು ನಡೆಯುವಾಗ ಪ್ರಿಯತಮತೆಯಂತೆ ನಿನ್ನನ್ನು ಎಳೆದಾಡಿಕೊಂಡು ನಡೆಯುವೆ; ಮಗುವನ್ನು ಪಡೆಯಲಾರದಷ್ಟು ವಯಸ್ಸಾಗುವುದು. ಆಮೇಲೆ ನೀನು ನಿನ್ನ ಹೊಸ ಮನೆಗೆ (ಸಮಾಧಿಗೆ) ಹೋಗುವೆ. ನಿನ್ನ ಶವಸಂಸ್ಕಾರಕ್ಕೆ ಹೋಗಲು ಜನರು ಬೀದಿಗಳಲ್ಲಿ ತುಂಬಿರುವರು.[೬] ನಿನ್ನ ಜೀವನ ಮುಖ್ಯವಾದದ್ದು. ನಿನ್ನ ಜೀವನ ಬೆಳ್ಳಿಬಂಗಾರಗಳಂತೆ ಬೆಲೆಬಾಳುವಂಥದ್ದು. ಆದರೆ, ಅದು ಬಹುಬೇಗನೆ ತುಂಡಾದ ದಾರದಂತೆಯೂ ಮುರಿದುಹೋದ ಪಾತ್ರೆಯಂತೆಯೂ ಆಗುವುದು. ನಿನ್ನ ಜೀವನ ಬಾವಿಯಲ್ಲಿ ಒಡೆದುಹೋದ ಬಿಂದಿಗೆಯಂತೆ ನಿಷ್ಟ್ರಯೋಜಕವಾಗುವುದು. ನಿನ್ನ ಜೀವನವು, ಬಾವಿಯ ಕಟ್ಟೆಯ ಮೇಲೆ ಮುಚ್ಚಿದ್ದ ಚಪ್ಪಡಿಕಲ್ಲು ತಾನೇ ಒಡೆದು ಬಾವಿಯೊಳಗೆ ಬಿದ್ದು ಹೋದಂತೆ ನಿಷ್ಪ್ರಯೋಜಕವಾಗುವುದು. ಆದ್ದರಿಂದಲೇ ಯೌವನ ಪ್ರಾಯದಲ್ಲಿರುವಾಗಲೇ ನೀನು ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.[೭] ನಿನ್ನ ದೇಹ ಭೂಮಿಯಿಂದ ಬಂದಿದೆ. ನೀನು ಸತ್ತಾಗ ಅದು ಮತ್ತೆ ಭೂಮಿಯ ಪಾಲಾಗುವುದು. ಆದರೆ ನಿನ್ನ ಆತ್ಮವು ದೇವರಿಂದ ಬಂದಿದೆ. ನಿನ್ನ ದೇಹವು ಸತ್ತ ಮೇಲೆ, ನಿನ್ನ ಆತ್ಮವು ಮತ್ತೆ ದೇವರ ಬಳಿಗೆ ಹೋಗುವುದು.

Kannada Bible 1934
Public Domain: 1934