A A A A A

ಜೀವನ: [ಪ್ರಾಣಿಗಳು]


ಆದಿಕಾಂಡ ೧:೨೧
ಹೀಗೆ ದೇವರು ಸಮುದ್ರದ ಬೃಹದಾಕಾರದ ಪ್ರಾಣಿಗಳನ್ನು, ಸಮುದ್ರದಲ್ಲಿ ಚಲಿಸುವ ಪ್ರತಿಯೊಂದು ಬಗೆಯ ಜೀವಿಗಳನ್ನು ಮತ್ತು ರೆಕ್ಕೆಗಳುಳ್ಳ ಪ್ರತಿಯೊಂದು ಬಗೆಯ ಪಕ್ಷಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.

ಆದಿಕಾಂಡ ೧:೩೦
ಭೂಮಿಯ ಮೇಲಿರುವ ಪ್ರಾಣಿಗಳಿಗೆಲ್ಲಾ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆಲ್ಲಾ ಭೂಮಿಯ ಮೇಲೆ ಹರಿದಾಡುವ ಕ್ರಿಮಿಕೀಟಗಳಿಗೆಲ್ಲಾ ಆಹಾರಕ್ಕಾಗಿ ಸಸ್ಯರಾಶಿಯನ್ನು ಕೊಟ್ಟಿದ್ದೇನೆ” ಅಂದನು. ಹಾಗೆಯೇ ಆಯಿತು.

ಯಕೋಬನು ೩:೭
ಜನರು ಎಲ್ಲಾ ವಿಧವಾದ ಕಾಡುಮೃಗ, ಪಕ್ಷಿ, ಸರ್ಪ, ಮೀನುಗಳನ್ನು ಹತೋಟಿಗೆ ತರುತ್ತಾರೆ. ಜನರು ಈಗಾಗಲೇ ಇವುಗಳನ್ನು ಹತೋಟಿಗೆ ತಂದಿದ್ದಾರೆ.

ಯೆರೆಮೀಯನ ಗ್ರಂಥ ೮:೭
ಆಕಾಶದಲ್ಲಿ ಹಾರಾಡುವ ಘಕಪಕ್ಷಿಗಳಿಗೂ ಸಹ ಆಯಾ ಕೆಲಸ ಮಾಡುವ ಸರಿಯಾದ ಸಮಯ ಗೊತ್ತಿದೆ. ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ಹೊಸ ಮನೆಗೆ ಹೋಗಙೇಕಾದ ಕಾಲವನ್ನು ಘಲ್ಲವು. ಆದರೆ ನನ್ನ ಜನರಿಗೆ ತಮ್ಮ ಯೆಹೋವನು ಅವರಿಂದ ಏನನ್ನು ಬಯಸುತ್ತಾನೆ ಎಂಬುದು ಗೊತ್ತಿಲ್ಲ.

ಯೋಬನ ೩೫:೧೧
ನಮ್ಮನ್ನು ಪಕ್ಷಿಗಳಿಗಿಂತಲೂ ಪ್ರಾಣಿಗಳಿಗಿಂತಲೂ ಜ್ಞಾನಿಗಳನ್ನಾಗಿ ಮಾಡುವ ದೇವರೆಲ್ಲಿ?’ ಎಂದು ಅವರು ಕೇಳುವುದಿಲ್ಲ.

ಲೂಕನು ೩:೬
ಪ್ರತಿಯೊಬ್ಬನೂ ದೇವರ ರಕ್ಷಣೆಯನ್ನು ಕಾಣುವನು!’ 

ಲೂಕನು ೧೨:೨೪
ಪಕ್ಷಿಗಳನ್ನು ನೋಡಿರಿ. ಅವು ಬಿತ್ತುವುದೂ ಇಲ್ಲ, ಕೊಯ್ಯುವುದೂ ಇಲ್ಲ. ಅವು ಆಹಾರವನ್ನು ಮನೆಗಳಲ್ಲಾಗಲಿ ಕಣಜಗಳಲ್ಲಾಗಲಿ ತುಂಬಿಟ್ಟುಕೊಳ್ಳುವುದಿಲ್ಲ. ದೇವರೇ ಅವುಗಳನ್ನು ಪರಿಪಾಲಿಸುತ್ತಾನೆ. ನೀವು ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರಾಗಿದ್ದೀರಿ.

ಮತ್ತಾಯನು ೬:೨೬
ಪಕ್ಷಿಗಳ ಕಡೆಗೆ ನೋಡಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ ಇಲ್ಲವೇ ಕಣಜಗಳಲ್ಲಿ ತುಂಬಿಟ್ಟುಕೊಳ್ಳುವುದಿಲ್ಲ. ಆದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳಿಗೆ ಆಹಾರವನ್ನು ನೀಡುತ್ತಾನೆ. ನೀವು ಆ ಪಕ್ಷಿಗಳಿಗಿಂತ ಎಷ್ಟೋ ಅಮೂಲ್ಯರೆಂಬುದು ನಿಮಗೆ ಗೊತ್ತಿದೆ.

ಜ್ಞಾನೋಕ್ತಿಗಳು ೧೨:೧೦
ಶಿಷ್ಟನು ತನ್ನ ಪಶುಗಳನ್ನು ನೋಡಿಕೊಳ್ಳುತ್ತಾನೆ. ಆದರೆ ದುಷ್ಟನ ವಾತ್ಸಲ್ಯವು ಕ್ರೂರವಾಗಿದೆ.

ಕೀರ್ತನೆಗಳು ೧೦೪:೨೧
ಸಿಂಹಗಳು ಬೇಟೆಯಾಡುವಾಗ ಆಹಾರಕ್ಕಾಗಿ ದೇವರನ್ನು ಕೇಳಿಕೊಳ್ಳುತ್ತಿವೆಯೊ ಎಂಬಂತೆ ಬರ್ಜಿಸುತ್ತವೆ.

ಆದಿಕಾಂಡ ೨:೧೯-೨೦
[೧೯] ದೇವರಾದ ಯೆಹೋವನು ನೆಲದ ಮಣ್ಣಿನಿಂದ ಭೂಮಿಯ ಮೇಲಿರುವ ಪ್ರತಿಯೊಂದು ಪಶುವನ್ನೂ ಆಕಾಶದಲ್ಲಿರುವ ಪ್ರತಿಯೊಂದು ಪಕ್ಷಿಯನ್ನೂ ನಿರ್ಮಿಸಿ ಮನುಷ್ಯನ ಬಳಿಗೆ ಬರಮಾಡಿದನು. ಅವುಗಳಿಗೆಲ್ಲಾ ಮನುಷ್ಯನು ಹೆಸರಿಟ್ಟನು.[೨೦] ಭೂಮಿಯ ಮೇಲಿನ ಎಲ್ಲಾ ಪಶುಗಳಿಗೂ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೂ ಮತ್ತು ಕಾಡಿನಲ್ಲಿರುವ ಎಲ್ಲಾ ಕ್ರೂರಪ್ರಾಣಿಗಳಿಗೂ ಮನುಷ್ಯನು ಹೆಸರಿಟ್ಟನು. ಮನುಷ್ಯನು ಅನೇಕಾನೇಕ ಪ್ರಾಣಿಗಳನ್ನು ಮತ್ತು ಪಕ್ಷಿಗಳನ್ನು ನೋಡಿದನು. ಆದರೆ ಅವುಗಳಲ್ಲಿ ತನಗೆ ಸರಿಹೊಂದುವ ಸಹಕಾರಿಣಿಯನ್ನು ಅವನು ಕಾಣಲಿಲ್ಲ.

ಆದಿಕಾಂಡ ೯:೨-೩
[೨] ಭೂಮಿಯ ಮೇಲಿರುವ ಪ್ರತಿಯೊಂದು ಪ್ರಾಣಿಯೂ ನಿಮಗೆ ಹೆದರಿ ಭಯಪಡುವುದು; ಆಕಾಶದಲ್ಲಿ ಹಾರಾಡುವ ಪ್ರತಿಯೊಂದು ಪಕ್ಷಿಯೂ ನಿಮಗೆ ಹೆದರಿ ಭಯಪಡುವುದು; ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಮತ್ತು ಸಮುದ್ರದಲ್ಲಿರುವ ಪ್ರತಿಯೊಂದು ಮೀನೂ ನಿಮಗೆ ಹೆದರಿ ಭಯಪಡುವುದು. ನೀವು ಅವುಗಳಿಗೆಲ್ಲಾ ಒಡೆಯರಾಗಿರುತ್ತೀರಿ.[೩] ಮೊದಲು, ನಿಮ್ಮ ಆಹಾರಕ್ಕಾಗಿ ಸಸ್ಯಗಳನ್ನು ಕೊಟ್ಟೆನು. ಈಗ ನಿಮ್ಮ ಆಹಾರಕ್ಕಾಗಿ ಪ್ರತಿಯೊಂದು ಪ್ರಾಣಿಯನ್ನೂ ಕೊಟ್ಟಿದ್ದೇನೆ. ಭೂಮಿಯ ಮೇಲಿರುವ ಎಲ್ಲವನ್ನೂ ನಾನು ನಿಮಗೋಸ್ಕರ ಕೊಟ್ಟಿದ್ದೇನೆ.

ಆದಿಕಾಂಡ ೧:೨೪-೨೮
[೨೪] ಬಳಿಕ ದೇವರು, “ಭೂಮಿಯು ಅನೇಕ ಬಗೆಯ ಪ್ರಾಣಿಗಳನ್ನು ಅವುಗಳ ಜಾತಿಗನುಸಾರವಾಗಿ ಹುಟ್ಟಿಸಲಿ. ಪ್ರತಿಯೊಂದು ಬಗೆಯ ದೊಡ್ಡ ಪ್ರಾಣಿಗಳು ಮತ್ತು ಹರಿದಾಡುವ ಚಿಕ್ಕ ಪ್ರಾಣಿಗಳು ಹುಟ್ಟಿಕೊಂಡು ಅಭಿವೃದ್ಧಿಯಾಗಲಿ” ಅಂದನು. ಹಾಗೆಯೇ ಆಯಿತು.[೨೫] ಹೀಗೆ ದೇವರು ಪ್ರತಿಯೊಂದು ಬಗೆಯ ಕಾಡುಪ್ರಾಣಿಗಳನ್ನು, ಸಾಕುಪ್ರಾಣಿಗಳನ್ನು ಮತ್ತು ಹರಿದಾಡುವ ಎಲ್ಲಾ ಕ್ರಿಮಿಗಳನ್ನು ಸೃಷ್ಟಿಸಿದನು. ಆತನಿಗೆ ಇವು ಒಳ್ಳೆಯದಾಗಿ ಕಂಡವು.[೨೬] ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಮನುಷ್ಯರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.[೨೭] ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾಗಿ ಸೃಷ್ಟಿಸಿದನು. ಆತನು ಅವರನ್ನು ಗಂಡು ಮತ್ತು ಹೆಣ್ಣುಗಳಾಗಿ ರೂಪಿಸಿದನು.[೨೮] ದೇವರು ಅವರನ್ನು ಆಶೀರ್ವದಿಸಿ, “ನೀವು ಅನೇಕ ಮಕ್ಕಳನ್ನು ಪಡೆದು ಭೂಮಿಯಲ್ಲೆಲ್ಲಾ ಹರಡಿಕೊಂಡು ಅದನ್ನು ಸ್ವಾಧೀನಪಡಿಸಿಕೊಳ್ಳಿರಿ. ಸಮುದ್ರದಲ್ಲಿರುವ ಮೀನುಗಳ ಮೇಲೆ, ಆಕಾಶದಲ್ಲಿರುವ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆ ದೊರೆತನ ಮಾಡಿರಿ” ಅಂದನು.

ಜ್ಞಾನೋಕ್ತಿಗಳು ೬:೬-೮
[೬] ಸೋಮಾರಿಯೇ, ನೀನು ಇರುವೆಯಂತೆ ಚುರುಕಾಗಿರಬೇಕು. ಇರುವೆಯನ್ನು ನೋಡಿ ಕಲಿತುಕೊ.[೭] ಇರುವೆಗೆ ರಾಜನಿಲ್ಲ, ಅಧಿಕಾರಿಯಿಲ್ಲ, ನಾಯಕನಿಲ್ಲ,[೮] ಆದರೆ ಸುಗ್ಗಿಕಾಲದಲ್ಲಿ ತನಗೆ ಬೇಕಾದ ಆಹಾರವನ್ನೆಲ್ಲ ಅದು ಕೂಡಿಸಿಟ್ಟುಕೊಳ್ಳುವುದು. ಆದ್ದರಿಂದ ಚಳಿಗಾಲದಲ್ಲಿ ಅದಕ್ಕೆ ಬೇಕಾದಷ್ಟು ಆಹಾರ ಇರುವುದು.

ಕೀರ್ತನೆಗಳು ೮:೬-೯
[೬] ನೀನು ಸೃಷ್ಟಿಸಿದ ಪ್ರತಿಯೊಂದರ ಮೇಲೂ ಅವರನ್ನು ಅಧಿಪತಿಯನ್ನಾಗಿ ಮಾಡಿರುವೆ. ನೀನು ಪ್ರತಿಯೊಂದನ್ನೂ ಅವರಿಗೆ ಅಧೀನಗೊಳಿಸಿರುವೆ.[೭] ಅವರು ಎಲ್ಲಾ ಪಶುಗಳ ಮೇಲೆಯೂ ಕಾಡುಪ್ರಾಣಿಗಳ ಮೇಲೆಯೂ ದೊರೆತನ ಮಾಡುವರು.[೮] ಆಕಾಶದ ಪಕ್ಷಿಗಳ ಮೇಲೆಯೂ ಸಾಗರದ ಮೀನುಗಳ ಮೇಲೆಯೂ ದೊರೆತನ ಮಾಡುವರು.[೯] ನಮ್ಮ ದೇವರಾದ ಯೆಹೋವನೇ, ನಿನ್ನ ಹೆಸರು ಭೂಲೋಕದಲ್ಲೆಲ್ಲಾ ಎಷ್ಟೋ ಅತಿಶಯವಾಗಿದೆ.

ಯೋಬನ ೧೨:೭-೧೦
[೭] “ಆದರೆ ಪ್ರಾಣಿಗಳನ್ನು ಕೇಳು, ಅವು ನಿನಗೆ ಉಪದೇಶಿಸುತ್ತವೆ. ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುತ್ತವೆ.[೮] ಭೂಮಿಯೊಂದಿಗೆ ಮಾತಾಡು, ಅದು ನಿನಗೆ ಉಪದೇಶಿಸುತ್ತದೆ. ಸಮುದ್ರದ ಮೀನುಗಳು ತಮ್ಮ ಜ್ಞಾನವನ್ನು ನಿನಗೆ ತಿಳಿಸಲಿ.[೯] ಇದನ್ನು ಮಾಡಿದಾತನು ಯೆಹೋವನೇ ಎಂಬುದು ಈ ಸೃಷ್ಟಿಗಳಲ್ಲಿ ಪ್ರತಿಯೊಂದಕ್ಕೂ ಗೊತ್ತು.[೧೦] ಪ್ರತಿಯೊಂದು ಪ್ರಾಣಿಯ ಜೀವವೂ ಪ್ರತಿಯೊಬ್ಬ ವ್ಯಕ್ತಿಯ ಆತ್ಮವೂ ದೇವರ ಕೈಯಲ್ಲಿವೆ.

ಯೆಶಾಯನ ೧೧:೬-೯
[೬] ಆ ಸಮಯದಲ್ಲಿ ತೋಳಗಳು ಕುರಿಮರಿಯೊಂದಿಗೆ ಸಮಾಧಾನದಿಂದ ಒಟ್ಟಾಗಿ ವಾಸಿಸುವವು. ಚಿರತೆಯು ಆಡಿನ ಮರಿಗಳೊಂದಿಗೆ ಮಲಗಿಕೊಳ್ಳುವದು. ಕರುಗಳು, ಪ್ರಾಯದ ಸಿಂಹಗಳು, ಹೋರಿಗಳು ಒಟ್ಟಾಗಿ ಸಮಾಧಾನದಿಂದ ಜೀವಿಸುವವು. ಒಂದು ಚಿಕ್ಕಮಗು ಅವುಗಳನ್ನು ನಡಿಸುವುದು.[೭] ದನಗಳೂ ಕರಡಿಗಳೂ ಜೊತೆಯಾಗಿರುವವು. ಅವುಗಳ ಮರಿಗಳೆಲ್ಲಾ ಒಂದಕ್ಕೊಂದು ಹಾನಿಮಾಡದೆ ಒಟ್ಟಾಗಿ ಮಲಗಿಕೊಳ್ಳುವವು. ಸಿಂಹಗಳು ದನಗಳಂತೆ ಹುಲ್ಲು ತಿನ್ನುವವು. ಹಾವುಗಳು ಸಹ ಜನರಿಗೆ ಹಾನಿ ಮಾಡುವದಿಲ್ಲ.[೮] ಮಗುವು ನಾಗರಹಾವಿನ ಹುತ್ತದ ಬಳಿ ಆಡುತ್ತಾ ಹುತ್ತದೊಳಗೆ ಕೈಹಾಕುವದು.[೯] ಯಾರೂ ಪರಸ್ಪರ ಹಾನಿಮಾಡುವದಿಲ್ಲ. ನನ್ನ ಪವಿತ್ರ ಪರ್ವತದಲ್ಲಿನ ಜನರು ವಸ್ತುಗಳನ್ನು ನಾಶಮಾಡಲು ಇಷ್ಟಪಡುವದಿಲ್ಲ. ಯಾಕೆಂದರೆ ಆಗ ಜನರು ನಿಜವಾಗಿಯೂ ಯೆಹೋವನನ್ನು ಅರಿತಿರುವರು. ಸಾಗರದಲ್ಲಿ ನೀರು ತುಂಬಿದಂತೆ ಲೋಕವೆಲ್ಲಾ ಆತನ ವಿಷಯವೆಂಬ ಜ್ಞಾನದಿಂದ ತುಂಬುವದು.

ಉಪದೇಷಕ ೩:೧೮-೨೧
[೧೮] ಅಲ್ಲದೆ ಮನಸ್ಸಿನಲ್ಲಿ ಹೀಗೆಂದುಕೊಂಡೆನು: “ಮನುಷ್ಯರು ಪ್ರಾಣಿಗಳಿಗಿಂತ ಮೇಲಾದವರಲ್ಲ ಎಂಬುದನ್ನು ನಾವು ತಿಳಿದುಕೊಳ್ಳಬೇಕೆಂಬುದು ದೇವರ ಇಷ್ಟವಾಗಿದೆ.[೧೯] ಮನುಷ್ಯನು ಪ್ರಾಣಿಗಿಂತಲೂ ಉತ್ತಮನಾಗಿರುವನೇ? ಇಲ್ಲ! ಏಕೆಂದರೆ ಪ್ರತಿಯೊಂದು ಉಪಯೋಗವಿಲ್ಲದ್ದು. ಪ್ರಾಣಿಗಳಿಗೂ ಮನುಷ್ಯರಿಗೂ ಒಂದೇ ಗತಿಯಾಗುವುದು; ಪ್ರಾಣಿಗಳೂ ಸಾಯುವವು, ಮನುಷ್ಯರೂ ಸಾಯುವರು. ಮನುಷ್ಯರಿಗೂ ಪ್ರಾಣಿಗಳಿಗೂ ಇರುವುದು ಒಂದೇ “ಉಸಿರು.” ಸತ್ತ ಪ್ರಾಣಿಗೂ ಸತ್ತ ಮನುಷ್ಯನಿಗೂ ವ್ಯತ್ಯಾಸವಿಲ್ಲ.[೨೦] ಮನುಷ್ಯರ ಮತ್ತು ಪ್ರಾಣಿಗಳ ದೇಹಗಳೆಲ್ಲ ಒಂದೇ ಸ್ಥಳಕ್ಕೆ ಹೋಗುತ್ತವೆ. ಮನುಷ್ಯರು ಮಣ್ಣಿನಿಂದ ಬಂದರು. ಕೊನೆಗೆ ಅವರು ಮಣ್ಣಿಗೇ ಹೋಗುವರು. ಪ್ರಾಣಿಗಳು ಮಣ್ಣಿನಿಂದ ಬಂದವು; ಕೊನೆಗೆ ಅವು ಮಣ್ಣಿಗೆ ಹೋಗುತ್ತವೆ.[೨೧] ಮನುಷ್ಯನ ಆತ್ಮಕ್ಕೆ ಏನು ಸಂಭವಿಸುವುದೋ ಯಾರಿಗೆ ಗೊತ್ತು? ಮನುಷ್ಯನ ಆತ್ಮವು ದೇವರ ಬಳಿಗೆ ಮೇಲಕ್ಕೆ ಹೋಗುವುದೋ ಪ್ರಾಣಿಯ ಆತ್ಮವು ಭೂಮಿಯೊಳಗೆ ಇಳಿಯುವುದೋ ಯಾರಿಗೆ ಗೊತ್ತು?

ಕೀರ್ತನೆಗಳು ೧೪೮:೭-೧೨
[೭] ಭೂಮಿಯ ಮೇಲಿರುವ ಸಮಸ್ತವೇ, ಯೆಹೋವನಿಗೆ ಸ್ತೋತ್ರಮಾಡಿರಿ! ಮಹಾಸಮುದ್ರ ಪ್ರಾಣಿಗಳೇ, ಆತನನ್ನು ಸ್ತುತಿಸಿರಿ![೮] ಆತನು ಬೆಂಕಿಯನ್ನೂ ಆಲಿಕಲ್ಲನ್ನೂ ಮಂಜನ್ನೂ ಹೊಗೆಯನ್ನೂ ಬಿರುಗಾಳಿಯನ್ನೂ ಉಂಟುಮಾಡಿದನು.[೯] ಆತನು ಬೆಟ್ಟಗಳನ್ನೂ ಗುಡ್ಡಗಳನ್ನೂ ಹಣ್ಣಿನ ಮರಗಳನ್ನೂ ದೇವದಾರು ಮರಗಳನ್ನೂ ಸೃಷ್ಟಿಮಾಡಿದನು.[೧೦] ಆತನು ಎಲ್ಲಾ ಕಾಡುಪ್ರಾಣಿಗಳನ್ನೂ ಪಶುಗಳನ್ನೂ ಕ್ರಿಮಿಕೀಟಗಳನ್ನೂ ಪಕ್ಷಿಗಳನ್ನೂ ಸೃಷ್ಟಿಮಾಡಿದನು.[೧೧] ಆತನು ಭೂಮಿಯ ಮೇಲೆ ರಾಜರುಗಳನ್ನೂ ಜನಾಂಗಗಳನ್ನೂ ನಾಯಕರುಗಳನ್ನೂ ನ್ಯಾಯಾಧಿಪತಿಗಳನ್ನೂ ಸೃಷ್ಟಿಮಾಡಿದನು.[೧೨] ಆತನು ಪ್ರಾಯಸ್ಥರಾದ ಸ್ತ್ರೀಪುರುಷರನ್ನೂ ವೃದ್ಧರನ್ನೂ ಯೌವನಸ್ಥರನ್ನೂ ಸೃಷ್ಟಿಸಿದನು.

Kannada Bible 1934
Public Domain: 1934