A A A A A

ಗಣಿತ ಚಿಹ್ನೆಗಳು: [ಸಂಖ್ಯೆ ೩]


ತಿಮೊಥೇಯನಿಗ ೧ ೨:೫
ದೇವರು ಒಬ್ಬನೇ. ದೇವರಿಗೂ ಮನುಷ್ಯರಿಗೂ ಮಧ್ಯಸ್ತನು ಒಬ್ಬನೇ. ಮನುಷ್ಯನಾಗಿರುವ ಯೇಸುಕ್ರಿಸ್ತನೇ ಆತನು.

ತಿಮೊಥೇಯನಿಗ ೨ ೩:೧೬
ಪವಿತ್ರ ಗ್ರಂಥವನ್ನು ದೇವರು ದಯಪಾಲಿಸಿದನು. ಉಪದೇಶವನ್ನು ಮಾಡುವುದಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಬೋಧೆಗೂ ಅದು ಉಪಯುಕ್ತವಾಗಿದೆ.

ಪ್ರೇಷಿತರ ೧೭:೨೮
ನಾವು ಆತನೊಂದಿಗೆ ವಾಸಿಸುತ್ತೇವೆ, ನಡೆಯುತ್ತೇವೆ, ಇರುತ್ತೇವೆ. ನಿಮ್ಮವರೇ ಆದ ಕೆಲವು ಲೇಖಕರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.

ಕೊಲೊಸ್ಸೆಯರಿಗೆ ೨:೯
ದೇವರ ಸರ್ವಸಂಪೂರ್ಣತೆಯು ಕ್ರಿಸ್ತನಲ್ಲಿ ನೆಲೆಗೊಂಡಿದೆ. (ಕ್ರಿಸ್ತನು ಈ ಲೋಕದಲ್ಲಿದ್ದಾಗಲೂ ಸಹ ನೆಲೆಗೊಂಡಿತ್ತು.)

ವಿಮೋಚನಾಕಾಂಡ ೩:೧೪
ಆಗ ದೇವರು ಮೋಶೆಗೆ, “ನಾನು ‘ಇರುವಾತನೇ’ ಆಗಿದ್ದೇನೆ. ನೀನು ಇಸ್ರೇಲರ ಬಳಿಗೆ ಹೋದಾಗ ‘ಇರುವಾತನೇ’ ಎಂಬವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳು” ಅಂದನು.

ಆದಿಕಾಂಡ ೧:೨೬
ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಮನುಷ್ಯರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.

ಹಿಬ್ರಿಯರಿಗೆ ೪:೧೨
ದೇವರ ವಾಕ್ಯವು ಸಜೀವವಾದದ್ದು, ಕಾರ್ಯ ಸಾಧಕವಾದದ್ದು. ಅದು ಅತ್ಯಂತ ಹರಿತವಾದ ಖಡ್ಗಕ್ಕಿಂತಲೂ ಹರಿತವಾಗಿದ್ದು ನಾಟಿಕೊಳ್ಳುತ್ತದೆ. ಆತ್ಮಪ್ರಾಣಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುತ್ತದೆ; ನಮ್ಮ ಹೃದಯದ ಉದ್ದೇಶಗಳನ್ನು ಮತ್ತು ಆಲೋಚನೆಗಳನ್ನು ವಿವೇಚಿಸುತ್ತದೆ.

ಯೊವಾನ್ನನು ೪:೨೪
ದೇವರು ಆತ್ಮಸ್ವರೂಪಿ. ಆದ್ದರಿಂದ ದೇವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು” ಎಂದು ಹೇಳಿದನು.

ಯಾಜಕಕಾಂಡ ೧೯:೨೮
ಸತ್ತವರನ್ನು ಜ್ಞಾಪಕ ಮಾಡಿಕೊಳ್ಳುವುದಕ್ಕಾಗಿ ನಿಮ್ಮ ದೇಹವನ್ನು ಗಾಯ ಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನೇ ಯೆಹೋವನು!

ಮತ್ತಾಯನು ೧೨:೪೦
ಪ್ರವಾದಿಯಾದ ಯೋನನು ಮೂರು ದಿವಸ ಹಗಲಿರುಳು ಒಂದು ದೊಡ್ಡ ಮೀನಿನ ಹೊಟ್ಟೆಯಲ್ಲಿ ಹೇಗಿದ್ದನೋ ಅದೇ ರೀತಿಯಲ್ಲಿ ಮನುಷ್ಯಕುಮಾರನು ಸಮಾಧಿಯಲ್ಲಿ ಮೂರು ದಿನ ಹಗಲಿರುಳು ಇರುವನು. ಇದಲ್ಲದೆ ಬೇರೆ ಯಾವ ಸೂಚಕಕಾರ್ಯವನ್ನು ಅವರಿಗೆ ತೋರಿಸಲಾಗುವುದಿಲ್ಲ.

ಪ್ರಕಟನೆ ೧:೪
ಏಷ್ಯಾ ಪ್ರದೇಶದಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನೆಂದರೆ: ವರ್ತಮಾನ, ಭೂತ, ಭವಿಷ್ಯತ್ಕಾಲಗಳಲ್ಲಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು

ತೀತನಿಗೆ ೧:೧೨
ಅವರ ಪ್ರವಾದಿಗಳಲ್ಲಿ ಒಬ್ಬನು, “ಕ್ರೇತದ ಜನರು ಯಾವಾಗಲೂ ಸುಳ್ಳು ಹೇಳುತ್ತಾರೆ. ಅವರು ದುಷ್ಟ ಮೃಗಗಳಾಗಿದ್ದಾರೆ; ಸೋಮಾರಿತನದಿಂದ ಕೆಲಸವನ್ನೇ ಮಾಡದೆ ಹೊಟ್ಟೆಬಾಕರಾಗಿದ್ದಾರೆ” ಎಂದು ಹೇಳಿದ್ದಾನೆ.

ಕೊರಿಂಥಿಯರಿಗೆ ೧ ೧೫:೩೩
ಮೋಸ ಹೋಗಬೇಡಿರಿ. “ದುರ್ಜನರ ಸಹವಾಸ ಸದಾಚಾರದ ಭಂಗ.”

ಯೊವಾನ್ನನು ೧ ೫:೭-೯
[೭] ಆದ್ದರಿಂದ ಯೇಸುವಿನ ಬಗ್ಗೆ ನಮಗೆ ತಿಳಿಸಲು ಮೂರು ಸಾಕ್ಷಿಗಳಿವೆ:[೮] ಆತ್ಮ, ನೀರು ಮತ್ತು ರಕ್ತ. ಈ ಮೂರು ಸಾಕ್ಷಿಗಳ ಅಭಿಪ್ರಾಯವು ಒಂದೇ.[೯] ಜನರು ಸಾಕ್ಷಿ ಹೇಳಿದಾಗ ನಾವು ನಂಬುತ್ತೇವೆ. ಆದರೆ ದೇವರ ಸಾಕ್ಷಿಯು ಅದಕ್ಕಿಂತಲೂ ವಿಶೇಷವಾಗಿದೆ. ದೇವರು ತನ್ನ ಸ್ವಂತ ಮಗನ ಕುರಿತು ಹೇಳಿದ ಸತ್ಯವೇ ಆತನು ನಮಗೆ ನೀಡಿದ ಸಾಕ್ಷಿಯಾಗಿದೆ.

ಯೊವಾನ್ನನು ೩:೧೬-೧೮
[೧೬] ಹೌದು, ದೇವರು ಲೋಕವನ್ನು ಎಷ್ಟೋ ಪ್ರೀತಿಸಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಹೊಂದಬೇಕೆಂದು ಆತನನ್ನು ಕೊಟ್ಟನು.[೧೭] ದೇವರು ತನ್ನ ಮಗನನ್ನು ಈ ಲೋಕಕ್ಕೆ ಕಳುಹಿಸಿದ್ದು, ಆತನ ಮೂಲಕವಾಗಿ ಈ ಲೋಕದ ಜನರನ್ನು ಅಪರಾಧಿಗಳೆಂದು ತೀರ್ಪು ಮಾಡುವುದಕ್ಕಾಗಿಯಲ್ಲ. ಈ ಲೋಕದವರು ರಕ್ಷಣೆ ಹೊಂದಿಕೊಳ್ಳಲೆಂದು ದೇವರು ಆತನನ್ನು ಕಳುಹಿಸಿಕೊಟ್ಟನು.[೧೮] ದೇವರ ಮಗನಲ್ಲಿ ನಂಬಿಕೆ ಇಡುವವನಿಗೆ ತೀರ್ಪಾಗುವುದಿಲ್ಲ. ಆದರೆ ನಂಬದವನಿಗೆ ಆಗಲೇ ತೀರ್ಪಾಗಿದೆ. ಏಕೆಂದರೆ ಅವನು ದೇವರ ಒಬ್ಬನೇ ಮಗನಲ್ಲಿ ನಂಬಿಕೆ ಇಡಲಿಲ್ಲ.

Kannada Bible 1934
Public Domain: 1934