A A A A A

ಗಣಿತ ಚಿಹ್ನೆಗಳು: [ಸಂಖ್ಯೆ ೭]


ಅರಸುಗಳು ೨ ೫:೧೦
ಎಲೀಷನು ತನ್ನ ಸಂದೇಶಕನ ಮೂಲಕ ನಾಮಾನನಿಗೆ, “ಹೋಗಿ, ಜೋರ್ಡನ್ ನದಿಯಲ್ಲಿ ಏಳು ಸಲ ಸ್ನಾನಮಾಡು. ಆಗ ನಿನ್ನ ಚರ್ಮರೋಗವು ಗುಣವಾಗುವುದು. ನೀನು ಸಂಪೂರ್ಣ ಶುದ್ಧನಾಗುವೆ” ಎಂದು ತಿಳಿಸಿದನು.

ಧರ್ಮೋಪದೇಷಕಾಂಡ ೫:೧೨
“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ವಿಶೇಷದಿನವೆಂದು ಪರಿಗಣಿಸಬೇಕು.

ವಿಮೋಚನಾಕಾಂಡ ೨೨:೩೦
ಮಾತ್ರವಲ್ಲದೆ, ನಿಮ್ಮ ಕುರಿದನಗಳಲ್ಲಿ ಚೊಚ್ಚಲಾದವುಗಳನ್ನು ನನಗೆ ಅರ್ಪಿಸಬೇಕು. ಚೊಚ್ಚಲಾದವುಗಳು ತನ್ನ ತಾಯಿಯೊಂದಿಗೆ ಏಳು ದಿನಗಳಿರಲಿ. ಬಳಿಕ, ಎಂಟನೆಯ ದಿನದಲ್ಲಿ ನೀವು ಅದನ್ನು ನನಗೆ ಅರ್ಪಿಸಬೇಕು.

ಯೊವಾನ್ನನು ೬:೩೫
ಅದಕ್ಕೆ ಯೇಸು, “ನಾನೇ ಜೀವಕೊಡುವ ರೊಟ್ಟಿ. ನನ್ನ ಬಳಿಗೆ ಬರುವವನಿಗೆ ಎಂದಿಗೂ ಹಸಿವೆಯಾಗದು. ನನ್ನಲ್ಲಿ ನಂಬಿಕೆ ಇಡುವವನಿಗೆ ಎಂದಿಗೂ ಬಾಯಾರಿಕೆಯಾಗದು.

ಮತ್ತಾಯನು ೨೬:೨೬
ಅವರು ಊಟಮಾಡುತ್ತಿದ್ದಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಎಂದು ಹೇಳಿ ತನ್ನ ಶಿಷ್ಯರಿಗೆ ಕೊಟ್ಟನು.

ಸಂಖ್ಯಾಕಾಂಡ ೪:೭
“ಬಳಿಕ ಅವರು ಪವಿತ್ರ ಮೇಜಿನ ಮೇಲೆ ನೀಲಿಬಟ್ಟೆಯನ್ನು ಹಾಸಬೇಕು. ಪಾನದ್ರವ್ಯಾರ್ಪಣೆಗಳಿಗಾಗಿ ತಟ್ಟೆಗಳನ್ನೂ ಚಮಚಗಳನ್ನೂ ಬಟ್ಟಲುಗಳನ್ನೂ ಹೂಜೆಗಳನ್ನೂ ವಿಶೇಷ ರೊಟ್ಟಿಯನ್ನೂ ಮೇಜಿನ ಮೇಲೆ ಇಡಬೇಕು.

ಯೊಹೋಶುವ ೬:೩-೪
[೩] ಪ್ರತಿ ನಿತ್ಯ ಒಂದು ಸಲ ನಿನ್ನ ಸೇನೆಯೊಂದಿಗೆ ನಗರದ ಸುತ್ತಲೂ ಸುತ್ತಬೇಕು. ಹೀಗೆ ಆರು ದಿನಗಳವರೆಗೆ ಸುತ್ತಬೇಕು.[೪] ಏಳು ಮಂದಿ ಯಾಜಕರಿಗೆ ಟಗರಿನ ಕೊಂಬಿನಿಂದ ಮಾಡಿದ ತುತ್ತೂರಿಗಳನ್ನು ಹಿಡಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ಹೋಗಲು ಹೇಳು. ಏಳನೆಯ ದಿನದಲ್ಲಿ ನಗರದ ಸುತ್ತಲೂ ನೀವು ಏಳುಸಲ ಸುತ್ತಬೇಕು. ಏಳನೆಯ ದಿನದಲ್ಲಿ ಸುತ್ತುವಾಗ ತುತ್ತೂರಿಯನ್ನು ಊದಬೇಕೆಂದು ಯಾಜಕರಿಗೆ ಹೇಳು.

ಆದಿಕಾಂಡ ೨:೧-೩
[೧] ಹೀಗೆ ಭೂಮಿಯೂ ಆಕಾಶವೂ ಅವುಗಳಲ್ಲಿರುವ ಪ್ರತಿಯೊಂದೂ ನಿರ್ಮಿತವಾದವು.[೨] ದೇವರು ತನ್ನ ಸೃಷ್ಟಿಕಾರ್ಯವನ್ನು ಮುಕ್ತಾಯಗೊಳಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡನು.[೩] ದೇವರು ತನ್ನ ಎಲ್ಲಾ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡದ್ದರಿಂದ ಆ ದಿನವು “ಪರಿಶುದ್ಧ ದಿನವಾಗಿರಲಿ” ಎಂದು ಆಶೀರ್ವದಿಸಿದನು.

ಆದಿಕಾಂಡ ೯:೧೨-೧೬
[೧೨] ಇದಲ್ಲದೆ ದೇವರು, “ನನ್ನ ವಾಗ್ದಾನಕ್ಕೆ ಸಾಕ್ಷಿಯಾಗಿ ನಾನು ನಿಮಗೊಂದು ಗುರುತನ್ನು ಕೊಡುವೆನು. ನಾನು ನಿಮ್ಮೊಡನೆ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯೊಡನೆ ಒಡಂಬಡಿಕೆ ಮಾಡಿಕೊಂಡಿರುವುದನ್ನು ಈ ಗುರುತು ತೋರಿಸುತ್ತದೆ. ಈ ಗುರುತು ಯಾವಾಗಲೂ ಇರುವುದು.[೧೩] ನಾನು ಮೋಡಗಳಲ್ಲಿ ಇಟ್ಟಿರುವ ಮುಗಿಲುಬಿಲ್ಲು ನನಗೂ ಭೂಮಿಗೂ ಆಗಿರುವ ಒಡಂಬಡಿಕೆಗೆ ಗುರುತಾಗಿರುವುದು.[೧೪] ನಾನು ಮೋಡಗಳನ್ನು ಭೂಮಿಯ ಮೇಲೆ ಕವಿಸುವಾಗ, ಮೋಡದಲ್ಲಿ ಮುಗಿಲುಬಿಲ್ಲನ್ನು ಕಾಣುವಿರಿ.[೧೫] ನಾನು ಈ ಮುಗಿಲುಬಿಲ್ಲನ್ನು ನೋಡುವಾಗ, ನನಗೂ ನಿಮಗೂ ಮತ್ತು ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಆಗಿರುವ ಒಡಂಬಡಿಕೆಯನ್ನು ನೆನಪುಮಾಡಿಕೊಳ್ಳುವೆನು. ಜಲಪ್ರಳಯವು ಇನ್ನೆಂದಿಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳನ್ನು ನಾಶಗೊಳಿಸುವುದಿಲ್ಲ ಎಂಬುದೇ ಈ ಒಡಂಬಡಿಕೆ.[೧೬] ನಾನು ಮೋಡಗಳಲ್ಲಿರುವ ಮುಗಿಲುಬಿಲ್ಲನ್ನು ನೋಡುವಾಗ, ಶಾಶ್ವತವಾದ ಈ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವೆನು. ನನಗೂ ಮತ್ತು ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಗಳಿಗೂ ಆದ ಒಡಂಬಡಿಕೆಯನ್ನು ನೆನಸಿಕೊಳ್ಳುವೆನು” ಎಂದು ಹೇಳಿದನು.

Kannada Bible 1934
Public Domain: 1934