A A A A A

ರಹಸ್ಯಗಳು: [ಏಲಿಯೆನ್ಸ್]


ಕೊಲೊಸ್ಸೆಯರಿಗೆ ೧:೧೬
ಭೂಲೋಕ ಮತ್ತು ಪರಲೋಕಗಳಲ್ಲಿರುವ ಎಲ್ಲವುಗಳು,

ಧರ್ಮೋಪದೇಷಕಾಂಡ ೪:೧೯
ನೀವು ಆಕಾಶವನ್ನು ತಲೆಯೆತ್ತಿ ನೋಡುವಾಗ ಅಲ್ಲಿ ಕಾಣುವ ಸೂರ್ಯಚಂದ್ರ ನಕ್ಷತ್ರಾದಿಗಳನ್ನು ಪೂಜಿಸಬೇಡಿ. ಇವುಗಳನ್ನೆಲ್ಲಾ ಅನ್ಯರು ಪೂಜಿಸುವರು.

ಧರ್ಮೋಪದೇಷಕಾಂಡ ೧೭:೩
ಅವರು ಬೇರೆ ದೇವರುಗಳನ್ನಾಗಲಿ ಸೂರ್ಯಚಂದ್ರ ನಕ್ಷತ್ರಗಳನ್ನಾಗಲಿ ಪೂಜಿಸುತ್ತಾರೆ ಎಂಬ ಸುದ್ದಿಯನ್ನು ನೀವು ಕೇಳಿದರೂ ಕೇಳಬಹುದು, ಅದು ದೇವರ ಕಟ್ಟಳೆಗೆ ವಿರುದ್ಧವಾದದ್ದು.

ಎಫೆಸಿಯರಿಗೆ ೨:೧೯
ಆದ್ದರಿಂದ ಯೆಹೂದ್ಯರಲ್ಲದವರಾದ ನೀವು ಈಗ ವಿದೇಶಿಯರಲ್ಲ ಮತ್ತು ಅನ್ಯಜನರಲ್ಲ. ಈಗ ನೀವು ದೇವರ ಪರಿಶುದ್ಧ ಜನರೊಂದಿಗೆ ಪ್ರಜೆಗಳಾಗಿದ್ದೀರಿ. ನೀವು ದೇವರ ಕುಟುಂಬಕ್ಕೆ ಸೇರಿದವರಾಗಿದ್ದೀರಿ.

ಎಫೆಸಿಯರಿಗೆ ೬:೧೨
ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ.

ವಿಮೋಚನಾಕಾಂಡ ೧೨:೪೯
ಪ್ರತಿಯೊಬ್ಬರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸ್ವದೇಶದವನಿಗೂ ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಅಂದನು.

ವಿಮೋಚನಾಕಾಂಡ ೨೨:೨೧
“ನೀವು ಮೊದಲು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದದ್ದನ್ನು ಜ್ಞಾಪಕಮಾಡಿಕೊಳ್ಳಿ. ಆದ್ದರಿಂದ ನೀವು ಮೋಸಮಾಡಬಾರದು; ನಿಮ್ಮ ದೇಶದಲ್ಲಿರುವ ಯಾವ ಪರದೇಶಸ್ಥನಿಗೂ ಕೇಡು ಮಾಡಬಾರದು.

ವಿಮೋಚನಾಕಾಂಡ ೨೩:೯
“ನೀವು ಪರದೇಶಸ್ಥರಿಗೆ ತೊಂದರೆ ಕೊಡಬಾರದು. ನೀವು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.

ಯೆಜೆಕಿಯೇಲನ ೧:೪-೭
[೪] ಉತ್ತರ ದಿಕ್ಕಿನಿಂದ ಒಂದು ದೊಡ್ಡ ಬಿರುಗಾಳಿ ಬರುವದನ್ನು ಯೆಹೆಜ್ಕೇಲನಾದ ನಾನು ನೋಡಿದೆನು. ಬಿರುಗಾಳಿಯೊಡನೆ ಕೂಡಿದ ಒಂದು ದೊಡ್ಡ ಮೋಡವು ಅಲ್ಲಿತ್ತು. ಅದರಿಂದ ಬೆಂಕಿಯು ಪ್ರಜಬಲಿಸುತ್ತಿತ್ತು. ಮೋಡದ ಸುತ್ತಲೂ ಬೆಳಕಿತ್ತು. ಬೆಂಕಿಯ ಮಧ್ಯದಲ್ಲಿ ಕಾದಲೋಹದಂತೆ ಹೊಳೆಯುತ್ತಿದ್ದ ಏನನೊಐ ಕಂಡೆನು.[೫] ಆ ಮೋಡದೊಳಗೆ ಮನುಷ್ಯರನ್ನು ಹೋಲುವ ನಾಲ್ಕು ಜೀವಿಗಳಿದ್ದವು.[೬] ಆ ಜೀವಿಗಳಲ್ಲಿ ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ ನಾಲ್ಕು ರೆಕ್ಕೆಗಳೂ ಇದ್ದವು.[೭] ಅವುಗಳ ಕಾಲುಗಳು ನೆಟ್ಟಗಿದ್ದವು. ಅವುಗಳ ಪಾದಗಳು ಕರುವಿನ ಗೊರಸಿನಂತಿದ್ದವು. ಅವು ಬೆಳಗಿದ ತಾಮ್ರದಂತೆ ಹೊಳೆಯುತ್ತಿದ್ದವು.

ಆದಿಕಾಂಡ ೧:೨೬
ಬಳಿಕ ದೇವರು, “ಈಗ ನಾವು ಮನುಷ್ಯನನ್ನು ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ನಿರ್ಮಿಸೋಣ. ಮನುಷ್ಯರು ಸಮುದ್ರದಲ್ಲಿರುವ ಎಲ್ಲಾ ಮೀನುಗಳ ಮೇಲೆ, ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳ ಮೇಲೆ ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳ ಮೇಲೆ ದೊರೆತನ ಮಾಡಲಿ” ಅಂದನು.

ಆದಿಕಾಂಡ ೨:೧
ಹೀಗೆ ಭೂಮಿಯೂ ಆಕಾಶವೂ ಅವುಗಳಲ್ಲಿರುವ ಪ್ರತಿಯೊಂದೂ ನಿರ್ಮಿತವಾದವು.

ಹಿಬ್ರಿಯರಿಗೆ ೧೧:೧೩
ಈ ಮಹಾಪುರಷರೆಲ್ಲರೂ ತಾವು ಸಾಯುವವರೆಗೂ ನಂಬಿಕೆಯುಳ್ಳವರಾಗಿದ್ದರು. ದೇವರು ತನ್ನ ಜನರಿಗೆ ವಾಗ್ದಾನ ಮಾಡಿದ್ದವುಗಳನ್ನು ಆ ಜನರು ಪಡೆಯಲಿಲ್ಲ. ಮುಂದೆ ಬಹುಕಾಲದ ನಂತರ ಬರಲಿದ್ದ ಅವುಗಳನ್ನು ನೋಡಿ ಅವರು ಸಂತೋಷಗೊಂಡರು. ಅವರು ತಾವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಅಪರಿಚಿತರಂತೆ ಇದ್ದೇವೆ ಎಂಬುದನ್ನು ಒಪ್ಪಿಕೊಂಡರು.

ಹಿಬ್ರಿಯರಿಗೆ ೧೩:೨
ಅತಿಥಿಸತ್ಕಾರ ಮಾಡಿರಿ. ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.

ಯೆಶಾಯನ ೧೩:೫
ಯೆಹೋವನೂ ಆ ಸೈನ್ಯವೂ ದೂರದಿಂದ ಬರುತ್ತಿದ್ದಾರೆ. ದಿಗಂತದ ಆಚೆಯಿಂದ ಅವರು ಬರುತ್ತಿದ್ದಾರೆ. ತನ್ನ ಸಿಟ್ಟನ್ನು ಪ್ರದರ್ಶಿಸುವದಕೋಸ್ಕರ ಯೆಹೋವನು ಈ ಸೈನ್ಯವನ್ನು ಉಪಯೋಗಿಸುವನು. ಈ ಸೈನ್ಯವು ಇಡೀ ಭೂಮಿಯನ್ನು ಹಾಳು ಮಾಡುವುದು.”

ಯೆಶಾಯನ ೪೫:೧೨
ಭೂಮಿಯನ್ನು ನಿರ್ಮಿಸಿದವನೂ ಅದರಲ್ಲಿ ವಾಸಿಸುವ ಎಲ್ಲಾ ಜನರನ್ನು ಉಂಟುಮಾಡಿದವನೂ ನಾನೇ. ನನ್ನ ಸ್ವಹಸ್ತದಿಂದ ಆಕಾಶಮಂಡಲವನ್ನು ನಿರ್ಮಿಸಿದ್ದೇನೆ. ಆಕಾಶದಲ್ಲಿರುವ ಎಲ್ಲಾ ನಕ್ಷತ್ರಪುಂಜಗಳನ್ನು ನನ್ನ ಹತೋಟಿಯಲ್ಲಿಟ್ಟಿದ್ದೇನೆ.

ಯೆಶಾಯನ ೬೦:೮
ಜನರನ್ನು ನೋಡು! ಆಕಾಶದ ಮೋಡವು ಹಾರಿಹೋಗುವಂತೆ ಅವರು ನಿನ್ನ ಬಳಿಗೆ ತ್ವರಿತವಾಗಿ ಬರುತ್ತಿದ್ದಾರೆ. ತಮ್ಮ ಗೂಡುಗಳಿಗೆ ಹಾರುವ ಪಾರಿವಾಳಗಳಂತೆ ಅವರಿರುತ್ತಾರೆ.

ಯಾಜಕಕಾಂಡ ೨೪:೨೨
“ಈ ಕಟ್ಟಳೆ ನ್ಯಾಯವಾದದ್ದು. ಅದು ನಿಮ್ಮ ಸ್ವದೇಶದವರಿಗೆ ಅನ್ವಯಿಸುವಂತೆ ಪರದೇಶಸ್ಥರಿಗೂ ಅನ್ವಯಿಸುವುದು. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು!”

ನೆಹೆಮೀಯಾ ೯:೬
ನೀನು ದೇವರಾಗಿರುವೆ. ಯೆಹೋವನೇ, ನೀನೊಬ್ಬನೇ ದೇವರು. ನೀನು ಆಕಾಶವನ್ನು ಉಂಟುಮಾಡಿರುವೆ. ಪರಲೋಕವನ್ನು ನೀನೇ ಮಾಡಿರುವೆ. ಅದರಲ್ಲಿರುವದನ್ನೆಲ್ಲಾ ನೀನೇ ನಿರ್ಮಿಸಿರುವೆ. ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ್ದು ನೀನೇ. ಸಮುದ್ರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಎಲ್ಲಾದಕ್ಕೂ ಜೀವಕೊಡುವಾತನು ನೀನೇ. ಪರಲೋಕದ ದೂತರು ನಿನಗಡ್ಡಬಿದ್ದು ಆರಾಧಿಸುವರು.

ಕೀರ್ತನೆಗಳು ೯೭:೬
ಆಕಾಶಗಳೇ, ಆತನ ನೀತಿಯ ಕುರಿತು ಹೇಳಿರಿ! ದೇವರ ಮಹಿಮೆಯನ್ನು ಪ್ರತಿಯೊಬ್ಬನೂ ಕಾಣಲಿ!

ಪೇತ್ರನು ೧ ೨:೧೧
ಪ್ರಿಯ ಸ್ನೇಹಿತರೇ, ನೀವು ಈ ಲೋಕದಲ್ಲಿ ಪ್ರವಾಸಿಗಳಂತೆ ಮತ್ತು ಪರದೇಶದವರಂತೆ ಇದ್ದೀರಿ. ಆದ್ದರಿಂದ ನಿಮ್ಮ ದೇಹಗಳಿಗೆ ಇಷ್ಟವಾದ ಕೆಟ್ಟಸಂಗತಿಗಳಿಂದ ದೂರವಾಗಿರಿ. ಇವು ನಿಮ್ಮ ಜೀವಾತ್ಮಕ್ಕೆ ವಿರುದ್ಧವಾಗಿ ಹೋರಾಡುತ್ತವೆ.

ಪ್ರೇಷಿತರ ೧೯:೩೫
ಬಳಿಕ ಪಟ್ಟಣದ ಅಧಿಕಾರಿಯು ಜನಸಮೂಹವನ್ನು ಶಾಂತಗೊಳಿಸಿ ಅವರಿಗೆ, “ಎಫೆಸದ ಜನರೇ, ಮಹಾದೇವತೆಯಾದ ಅರ್ತೆಮಿ ದೇವಿಯ ಗುಡಿಯನ್ನು ಎಫೆಸ ಪಟ್ಟಣವು ಕಾಪಾಡಿಕೊಂಡು ಬಂದಿರುವುದು ಜನರೆಲ್ಲರಿಗೆ ತಿಳಿದಿದೆ. ಆಕೆಯು ಪವಿತ್ರ ಕಲ್ಲನ್ನು ಸಹ ನಾವು ಕಾಪಾಡಿಕೊಂಡು ಬಂದಿರುವುದು ಜನರೆಲ್ಲರಿಗೆ ಗೊತ್ತಿದೆ.

ಪ್ರಕಟನೆ ೧೨:೧೨
ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೆಲ್ಲರೇ, ಹರ್ಷಗೊಳ್ಳಿರಿ! ಆದರೆ ಭೂಮಿಯೇ, ಸಮುದ್ರವೇ, ಸೈತಾನನು ನಿಮ್ಮ ಬಳಿಗೆ ಬಂದಿರುವುದರಿಂದ ನಿಮಗೆ ದುರ್ಗತಿಯುಂಟಾಗುವುದು! ಸೈತಾನನು ಕೋಪದಿಂದ ತುಂಬಿಕೊಂಡಿದ್ದಾನೆ. ತನಗಿರುವುದು ಸ್ವಲ್ಪಕಾಲವೆಂಬುದು ಅವನಿಗೆ ತಿಳಿದಿದೆ.”

ಪ್ರಕಟನೆ ೧೩:೧
ನಂತರ ಸಮುದ್ರದಿಂದ ಒಂದು ಮೃಗವು ಹೊರಗೆ ಬರುತ್ತಿರುವುದನ್ನು ನಾನು ನೋಡಿದೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದವು. ಅದರ ಪ್ರತಿಯೊಂದು ಕೊಂಬಿನ ಮೇಲೆ ಒಂದೊಂದು ಕಿರೀಟವಿತ್ತು. ಪ್ರತಿಯೊಂದು ತಲೆಯ ಮೇಲೂ ದೇವದೂಷಣೆ ನಾಮಗಳನ್ನು ಬರೆಯಲಾಗಿತ್ತು.

ಆಮೋಸನ ೯:೨-೩
[೨] ಭೂಮಿಯನ್ನು ಅವರು ಅಗೆದು ಅದರೊಳಗೆ ಅವಿತುಕೊಂಡರೆ ಅದರೊಳಗಿಂದ ಅವರನ್ನು ಎಳೆದುಹಾಕುವೆನು. ಆಕಾಶದೊಳಗೆ ಹಾರಿ ತಪ್ಪಸಿಕೊಂಡರೆ ಅಲ್ಲಿಂದಲೂ ನಾನು ಅವರನ್ನು ಎಳೆದುಹಾಕುವೆನು.[೩] ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಂಡುಹಿಡಿದು ಅಲ್ಲಿಂದ ತೆಗೆದುಬಿಡುವೆನು. ಸಮುದ್ರ ತಳದಲ್ಲಿ ಅವರು ಅಡಗಿಕೊಂಡರೆ ಅವರನ್ನು ಕಚ್ಚುವಂತೆ ನಾನು ಸರ್ಪಕ್ಕೆ ಆಜ್ಞಾಪಿಸುವೆನು.

ಯಾಜಕಕಾಂಡ ೧೯:೩೩-೩೪
[೩೩] ನಿಮ್ಮ ದೇಶದಲ್ಲಿ ವಾಸಿಸುವ ಪರದೇಶಸ್ಥರಿಗೆ ಕೆಟ್ಟದ್ದನ್ನು ಮಾಡಬೇಡಿರಿ.[೩೪] ನಿಮ್ಮ ಸ್ವಂತ ದೇಶದವರೊಡನೆ ವರ್ತಿಸುವ ಪ್ರಕಾರ ಪರದೇಶಸ್ಥರೊಡನೆ ವರ್ತಿಸಿರಿ. ನಿಮ್ಮನ್ನು ಪ್ರೀತಿಸುವಂತೆ ಪರದೇಶಸ್ಥರನ್ನು ಪ್ರೀತಿಸಿರಿ. ಯಾಕೆಂದರೆ ನೀವು ಸಹ ಒಂದು ಕಾಲದಲ್ಲಿ ಈಜಿಪ್ಟಿನಲ್ಲಿದ್ದಾಗ ಪರದೇಶಸ್ಥರಾಗಿದ್ದಿರಿ. ನಾನೇ ನಿಮ್ಮ ದೇವರಾದ ಯೆಹೋವನು!

ಪ್ರಕಟನೆ ೯:೭-೧೧
[೭] ಪ್ರಿಯತಮತೆಗಳು ಯುದ್ಧಕ್ಕೆ ಸಿದ್ಧಪಡಿಸಿದ ಕುದುರೆಗಳಂತೆ ಕಾಣುತ್ತಿದ್ದವು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆ ಎನೋ ಇದ್ದವು; ಅವುಗಳ ಮುಖಗಳು ಮಾನವರ ಮುಖಗಳಂತಿದ್ದವು.[೮] ತಲೆಕೂದಲು ಸ್ತ್ರೀಯರ ತಲೆಕೂದಲಂತಿತ್ತು; ಹಲ್ಲುಗಳು ಸಿಂಹಗಳ ಹಲ್ಲುಗಳಂತಿದ್ದವು.[೯] ಎದೆಗಳು ಉಕ್ಕಿನ ಕವಚಗಳಂತೆ ಇದ್ದವು; ರೆಕ್ಕೆಗಳ ಶಬ್ದವು ಯುದ್ಧದಲ್ಲಿ ಆತುರದಿಂದ ಓಡುವ ಅನೇಕ ಕುದುರೆಗಳ ಮತ್ತು ರಥಗಳ ಶಬ್ದದಂತಿತ್ತು.[೧೦] ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಇದ್ದವು; ಜನರಿಗೆ ಐದುತಿಂಗಳ ಕಾಲ ನೋವುಂಟುಮಾಡುವ ಶಕ್ತಿಯು ಅವುಗಳ ಬಾಲಗಳಲ್ಲಿ ಇತ್ತು.[೧೧] ಪ್ರಿಯತಮತೆಗಳಿಗೆ ಒಬ್ಬ ರಾಜನಿದ್ದನು. ತಳವಿಲ್ಲದ ಕೂಪದ ದೂತನೇ ಅವುಗಳ ರಾಜನಾಗಿದ್ದನು. ಅವನಿಗೆ ಹಿಬ್ರೂ ಭಾಷೆಯಲ್ಲಿ “ಅಬದ್ದೋನ್” ಎಂಬ ಹೆಸರಿತ್ತು. ಗ್ರೀಕ್ ಭಾಷೆಯಲ್ಲಿ “ಅಪೊಲ್ಲುವೋನ್” (ವಿನಾಶಕರ) ಎಂದೂ ಹೆಸರಿತ್ತು.

ಆದಿಕಾಂಡ ೬:೧-೨೨
[೧] ಭೂಮಿಯಲ್ಲಿ ಜನಸಂಖ್ಯೆಯು ಹೆಚ್ಚುತ್ತಲೇ ಇತ್ತು. ಅವರಿಗೆ ಸುಂದರವಾದ ಹೆಣ್ಣುಮಕ್ಕಳು ಹುಟ್ಟಿದರು.[೨] ಜನರ ದುಷ್ಟತನ ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು. (Verses 2-4)[೩] See verse 2[೪] See verse 2[೫] ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು.[೬] ಭೂಮಿಯ ಮೇಲೆ ತಾನು ಮನುಷ್ಯರನ್ನು ಸೃಷ್ಟಿಸಿದ್ದಕ್ಕಾಗಿ ಯೆಹೋವನು ದುಃಖಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.[೭] ಆದ್ದರಿಂದ ಯೆಹೋವನು, “ನಾನು ಸೃಷ್ಟಿಸಿದ ಜನರನ್ನೆಲ್ಲ ಭೂಮುಖದಿಂದ ನಾಶಮಾಡುವೆನು. ಪ್ರತಿಯೊಬ್ಬ ಮನುಷ್ಯನನ್ನೂ ಪ್ರತಿಯೊಂದು ಪ್ರಾಣಿಯನ್ನೂ ನೆಲದ ಮೇಲೆ ಹರಿದಾಡುವ ಪ್ರತಿಯೊಂದು ಜಂತುವನ್ನೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೂ ನಾಶಮಾಡುವೆನು. ಇವುಗಳನ್ನೆಲ್ಲಾ ಸೃಷ್ಟಿಸಿದ್ದರಿಂದ ನನಗೆ ದುಃಖವಾಯಿತು” ಅಂದುಕೊಂಡನು.[೮] ಆದರೆ ಯೆಹೋವನಿಗೆ ಮೆಚ್ಚಿಕೆಯಾಗುವಂತೆ ನಡೆದುಕೊಂಡ ಒಬ್ಬ ಮನುಷ್ಯನಿದ್ದನು. ಅವನೇ ನೋಹ.[೯] ಇದು ನೋಹನ ಚರಿತ್ರೆ. ಅವನು ತನ್ನ ಜೀವಮಾನವೆಲ್ಲಾ ನೀತಿವಂತನಾಗಿದ್ದನು; ಯಾವಾಗಲೂ ದೇವರನ್ನೇ ಅನುಸರಿಸುತ್ತಿದ್ದನು.[೧೦] ಅವನಿಗೆ ಮೂವರು ಗಂಡುಮಕ್ಕಳಿದ್ದರು: ಶೇಮ್, ಹಾಮ್, ಯೆಫೆತ್.[೧೧] ದೇವರು ಭೂಮಿಯ ಕಡೆಗೆ ನೋಡಿದಾಗ ಜನರಿಂದ ಅದು ಕೆಟ್ಟುಹೋಗಿರುವುದನ್ನು ಕಂಡನು. ಎಲ್ಲೆಲ್ಲೂ ಹಿಂಸೆ ತುಂಬಿಕೊಂಡಿತ್ತು; ಜನರು ದುಷ್ಟರಾಗಿಯೂ ಕ್ರೂರಿಗಳಾಗಿಯೂ ತಮ್ಮ ಜೀವಿತವನ್ನು ಕೆಡಿಸಿಕೊಂಡಿದ್ದರು. (Verses 11-12)[೧೨] See verse 11[೧೩] ಆದ್ದರಿಂದ ದೇವರು ನೋಹನಿಗೆ, “ನಾನು ಎಲ್ಲಾ ಜನರಿಗೂ ಅಂತ್ಯವನ್ನು ಬರಮಾಡಬೇಕೆಂದಿದ್ದೇನೆ; ಯಾಕೆಂದರೆ ಅವರು ಕೋಪ, ಹಿಂಸೆಗಳಿಂದ ಭೂಮಿಯನ್ನು ತುಂಬಿಸಿದ್ದಾರೆ. ಆದಕಾರಣ ನಾನು ಎಲ್ಲಾ ಜೀವಿಗಳನ್ನು ನಾಶಮಾಡುವೆನು.[೧೪] ನಿನಗೋಸ್ಕರ ಒಂದು ನಾವೆಯನ್ನು ತುರಾಯಿ ಮರದಿಂದ ತಯಾರಿಸು. ಆ ನಾವೆಯಲ್ಲಿ ಕೋಣೆಗಳನ್ನು ಮಾಡು. ಇಡೀ ನಾವೆಗೆ ಒಳಭಾಗದಲ್ಲೂ ಹೊರಭಾಗದಲ್ಲೂ ರಾಳವನ್ನು ಹಚ್ಚು.[೧೫] “ನೀನು ತಯಾರಿಸುವ ನಾವೆಯು ನಾನೂರೈವತ್ತು ಅಡಿ ಉದ್ದವಾಗಿಯೂ ಎಪ್ಪತ್ತೈದು ಅಡಿ ಅಗಲವಾಗಿಯೂ ನಲವತ್ತೈದು ಅಡಿ ಎತ್ತರವಾಗಿಯೂ ಇರಬೇಕು.[೧೬] ಕಿಟಕಿಯ ಮೇಲ್ಛಾವಣಿಗೆ ಹದಿನೆಂಟು ಇಂಚು ಕೆಳಗಿರಲಿ. ನಾವೆಯ ಪಾರ್ಶ್ವದಲ್ಲಿ ಬಾಗಿಲಿರಲಿ. ನಾವೆಯಲ್ಲಿ ಮೇಲಂತಸ್ತು ಮಧ್ಯಂತಸ್ತು ಮತ್ತು ಕೆಳಂತಸ್ತು ಎಂಬ ಮೂರು ಅಂತಸ್ತುಗಳಿರಲಿ.[೧೭] “ನಾನು ನಿನಗೆ ಹೇಳುತ್ತಿರುವುದನ್ನು ಅರ್ಥಮಾಡಿಕೊ. ನಾನು ಭೂಮಿಯ ಮೇಲೆ ಮಹಾ ಜಲಪ್ರಳಯವನ್ನು ತರುವೆನು. ಆಕಾಶದ ಕೆಳಗಿರುವ ಎಲ್ಲಾ ಜೀವಿಗಳನ್ನು ನಾಶಮಾಡುವೆನು. ಭೂಮಿಯ ಮೇಲಿರುವ ಪ್ರತಿಯೊಂದೂ ಸಾಯುವುದು.[೧೮] ನಾನು ನಿನ್ನೊಂದಿಗೆ ವಿಶೇಷ ಒಡಂಬಡಿಕೆಯನ್ನು ಮಾಡಿಕೊಳ್ಳುವೆ. ಅದೇನೆಂದರೆ, ನೀನು ಮತ್ತು ನಿನ್ನ ಹೆಂಡತಿ, ನಿನ್ನ ಗಂಡುಮಕ್ಕಳು ಮತ್ತು ಸೊಸೆಯಂದಿರು ನಾವೆಯೊಳಗೆ ಹೋಗುವಿರಿ.[೧೯] ಇದಲ್ಲದೆ, ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯಲ್ಲಿ ಒಂದು ಗಂಡನ್ನೂ ಒಂದು ಹೆಣ್ಣನ್ನೂ ನಾವೆಯೊಳಗೆ ಸೇರಿಸಿಕೊ. ನಿನ್ನೊಡನೆ ಅವುಗಳನ್ನು ಜೀವದಿಂದುಳಿಸಿ ಕಾಪಾಡು.[೨೦] ಭೂಮಿಯ ಮೇಲಿರುವ ಪ್ರತಿಯೊಂದು ಬಗೆಯ ಪಕ್ಷಿಗಳಲ್ಲಿ ಎರಡೆರಡೂ ಪ್ರತಿಯೊಂದು ಪ್ರಾಣಿಗಳಲ್ಲಿ ಎರಡೆರಡೂ ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಜಂತುಗಳಲ್ಲಿ ಎರಡೆರಡೂ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುವುದಕ್ಕಾಗಿ ನಿನ್ನೊಂದಿಗಿರಲಿ.[೨೧] ಭೂಮಿಯ ಮೇಲೆ ದೊರೆಯುವ ಎಲ್ಲಾ ಬಗೆಯ ಆಹಾರವನ್ನು ನಿಮಗಾಗಿಯೂ ಮತ್ತು ಪ್ರಾಣಿಗಳಿಗಾಗಿಯೂ ನಾವೆಯಲ್ಲಿ ತುಂಬಿಸಿಕೊ” ಎಂದು ಹೇಳಿದನು.[೨೨] ದೇವರು ಆಜ್ಞಾಪಿಸಿದಂತೆಯೇ ನೋಹನು ಮಾಡಿದನು.

ಯೆಜೆಕಿಯೇಲನ ೧:೧-೨೮
[೧] ನಾನು ಯಾಜಕನಾಗಿದ್ದೇನೆ. ನಾನು ಘೂಜಿಯ ಮಗನಾದ ಯೆಹೆಜ್ಕೇಲ. ನಾನು ಬಾಬಿಲೋನಿನಲ್ಲಿ ಯೆಹೂದ್ಯರೊಂದಿಗೆ ಸೆರೆಯಲ್ಲಿದ್ದೆ. ನಾನು ಕೆಬಾರ್ ಕಾಲುವೆಯ ಬಳಿಯಲ್ಲಿದ್ದಾಗ ಆಕಾಶ ತೆರೆದಿರುವದನ್ನು ಕಂಡೆನು. ನನಗೆ ದೇವದರ್ಶನವಾಯಿತು. ಇದು ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆ ದಿವಸದಲ್ಲಾಯಿತು. ಒಡೆಯನಾದ ಯೆಹೋಯಾಖೀನನು ಸೆರೆಯಲ್ಲಿದ್ದ ಐದನೆಯ ವರ್ಷದ ನಾಲ್ಕನೆ ತಿಂಗಳಿನ ಐದನೆಯ ದಿನದಲ್ಲಿ ಯೆಹೋವನ ವಾಕ್ಯವು ಯೆಹೆಜ್ಕೇಲನಿಗೆ ಘಂದಿತು. ಆ ಸ್ಥಳದಲ್ಲಿ ಯೆಹೋವನ ಆತ್ಮನಿಂದ ಅವನು ಪರವಶನಾದನು. (Verses 1-3)[೨] See verse 1[೩] See verse 1[೪] ಉತ್ತರ ದಿಕ್ಕಿನಿಂದ ಒಂದು ದೊಡ್ಡ ಬಿರುಗಾಳಿ ಬರುವದನ್ನು ಯೆಹೆಜ್ಕೇಲನಾದ ನಾನು ನೋಡಿದೆನು. ಬಿರುಗಾಳಿಯೊಡನೆ ಕೂಡಿದ ಒಂದು ದೊಡ್ಡ ಮೋಡವು ಅಲ್ಲಿತ್ತು. ಅದರಿಂದ ಬೆಂಕಿಯು ಪ್ರಜಬಲಿಸುತ್ತಿತ್ತು. ಮೋಡದ ಸುತ್ತಲೂ ಬೆಳಕಿತ್ತು. ಬೆಂಕಿಯ ಮಧ್ಯದಲ್ಲಿ ಕಾದಲೋಹದಂತೆ ಹೊಳೆಯುತ್ತಿದ್ದ ಏನನೊಐ ಕಂಡೆನು.[೫] ಆ ಮೋಡದೊಳಗೆ ಮನುಷ್ಯರನ್ನು ಹೋಲುವ ನಾಲ್ಕು ಜೀವಿಗಳಿದ್ದವು.[೬] ಆ ಜೀವಿಗಳಲ್ಲಿ ಪ್ರತಿಯೊಂದಕ್ಕೂ ನಾಲ್ಕು ಮುಖಗಳೂ ನಾಲ್ಕು ರೆಕ್ಕೆಗಳೂ ಇದ್ದವು.[೭] ಅವುಗಳ ಕಾಲುಗಳು ನೆಟ್ಟಗಿದ್ದವು. ಅವುಗಳ ಪಾದಗಳು ಕರುವಿನ ಗೊರಸಿನಂತಿದ್ದವು. ಅವು ಬೆಳಗಿದ ತಾಮ್ರದಂತೆ ಹೊಳೆಯುತ್ತಿದ್ದವು.[೮] ಒಂದೊಂದು ಜೀವಿಯ ನಾಲ್ಕು ಪಾಶಬರ್ಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯನ ತೋಳುಗಳೂ ಕೈಗಳೂ ಇದ್ದವು. ನಾಲ್ಕು ಜೀವಿಗಳಿಗೆ ಮುಖಗಳೂ ರೆಕ್ಕೆಗಳೂ ಈ ರೀತಿಯಲ್ಲಿದ್ದವು;[೯] ಆ ರೆಕ್ಕೆಗಳು ಒಂದಕ್ಕೊಂದು ತಾಕಿದ್ದವು. ಆ ಜೀವಿಗಳು ಚಲಿಸುವಾಗ ಅತ್ತಿತ್ತ ತಿರುಗುತ್ತಿರಲಿಲ್ಲ. ತಮ್ಮ ದೃಷ್ಟಿಯಿದ್ದ ಕಡಗೆ ನೆಟ್ಟಗೆ ಹೋದವು.[೧೦] ಪ್ರತೀ ಜೀವಿಗೆ ನಾಲ್ಕು ಮುಖಗಳಿದ್ದವು. ಮುಂಭಾಗದಲ್ಲಿ ಮನುಷ್ಯನ ಮುಖ, ಘಲಘದಿಯಲ್ಲಿ ಸಿಂಹದ ಮುಖ, ಎಡ ಘದಿಯಲ್ಲಿ ಹೋರಿಯ ಮುಖ, ಹಿಂಘದಿಯಲ್ಲಿ ಗರುಡನ ಮುಖ.[೧೧] ಒಂದೊಂದು ಜೀವಿಯ ಎರಡು ರೆಕ್ಕೆಗಳು ಮತ್ತೊಂದು ಜೀವಿಯ ರೆಕ್ಕೆಗಳನ್ನು ತಾಗುತ್ತಿದ್ದವು ಮತ್ತು ಉಳಿದೆರಡು ರೆಕ್ಕೆಗಳು ಅದರ ದೇಹವನ್ನು ಆವರಿಸಿಕೊಂಡಿದ್ದವು.[೧೨] ಆ ಜೀವಿಗಳು ಯಾವ ದಿಕ್ಕಿಗೆ ನೋಡುತ್ತಿದ್ದವೋ ಅದೇ ಕಡೆಗೆ ಹೋಗುತ್ತಿದ್ದವು. ದೇವರಾತ್ಮನು ಅವುಗಳನ್ನು ಯಾವ ಕಡೆಗೆ ನಡಿಸುತ್ತಾನೋ ಆ ದಿಕ್ಕಿಗೆ ಅವು ಹೋದವು. ಆದರೆ ಹೋಗುತ್ತಿರುವಾಗ ಅವುಗಳು ತಿರುಗಲಿಲ್ಲ.[೧೩] ಆ ಜೀವಿಗಳ ಮಧ್ಯದಲ್ಲಿ ಉರಿಯುವ ಕೆಂಡಗಳಂತೆ ಕಾಣುತ್ತಿದ್ದ ಏನೋ ಇತ್ತು. ಈ ಬೆಂಕಿಯು ಸಣ್ಣ ದೀವಟಿಗೆಗಳಂತೆ ಜೀವಿಗಳ ಮಧ್ಯೆ ಸಂಚರಿಸುತ್ತಿದ್ದವು. ಆ ಬೆಂಕಿಯು ಪ್ರಕಾಶಮಾನವಾಗಿದ್ದು ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.[೧೪] ಆ ಮಿಂಚಿನ ವೇಗದಂತೆ ಜೀವಿಗಳು ಅತ್ತಿತ್ತ ಓಡಾಡುತ್ತಿದ್ದವು.[೧೫] ಆ ಜೀವಿಗಳನ್ನು ನಾನು ನೋಡುತ್ತಿರುವಾಗ, ನೆಲಕ್ಕೆ ತಾಕಿದ್ದ ನಾಲ್ಕು ಚಕ್ರಗಳನ್ನು ಕಂಡೆನು. ಒಂದೊಂದು ಜೀವಿಯ ಪಕ್ಕದಲ್ಲಿ ಒಂದೊಂದು ಚಕ್ರಗಳಿದ್ದವು. ಆ ಎಲ್ಲಾ ಚಕ್ರಗಳು ಒಂದೇ ಪ್ರಕಾರವಾಗಿ ಕಾಣುತ್ತಿದ್ದವು. ಅವುಗಳು ಹೊಳೆಯುವ ಹಳದಿ ಘಣ್ಣದ ರತಐಗಳಿಂದ ಮಾಡಲ್ಪಟ್ಟಂತೆ ತೋರುತ್ತಿದ್ದವು. ಆ ಚಕ್ರದೊಳಗೆ ಇನ್ನೊಂದು ಚಕ್ರವಿದ್ದಂತೆ ತೋರುತ್ತಿತ್ತು. (Verses 15-16)[೧೬] See verse 15[೧೭] ಆ ಚಕ್ರಗಳು ಹೊರಳುವಾಗ ನಾಲ್ಕು ದಿಕ್ಕುಗಳಲ್ಲಿ ಯಾವ ದಿಕ್ಕಿಗೆ ಙೇಕಾದರೂ ತಿರುಗಘಲ್ಲವುಗಳಾಗಿದ್ದವು. ಆದರೆ ಜೀವಿಗಳು ಚಲಿಸುತ್ತಿರುವಾಗ ಅವು ತಿರುಗುತ್ತಿರಲಿಲ್ಲ.[೧೮] ಚಕ್ರಗಳ ಅಂಚು ಎತ್ತರವಾಗಿದ್ದು ಭಯಾನಕವಾಗಿ ಕಾಣುತ್ತಿದ್ದವು. ಆ ನಾಲ್ಕು ಚಕ್ರಗಳ ಅಂಚುಗಳ ತುಂಬ ಕಣ್ಣುಗಳಿದ್ದವು.[೧೯] ಚಕ್ರಗಳು ಜೀವಿಗಳೊಂದಿಗೆ ಯಾವಾಗಲೂ ಚಲಿಸುತ್ತಿದ್ದವು. ಜೀವಿಗಳು ಗಾಳಿಯಲ್ಲಿ ಹಾರಾಡುತ್ತಿದ್ದರೆ, ಚಕ್ರಗಳು ಸಹ ಅವುಗಳ ಜೊತೆಯಲ್ಲಿಯೇ ಚಲಿಸುತ್ತಿದ್ದವು.[೨೦] ದೇವರಾತ್ಮನು ನಡೆಸಿದ ಕಡೆಗೆ ಜೀವಿಗಳು ಹೋದವು. ಚಕ್ರಗಳು ಸಹ ಅವುಗಳೊಂದಿಗೆ ಚಲಿಸಿದವು. ಯಾಕೆಂದರೆ ಜೀವಿಗಳನ್ನು ನಿಯಂತ್ರಿಸುವ ಆತ್ಮವು ಚಕ್ರಗಳಲ್ಲಿತ್ತು.[೨೧] ಹೀಗೆ ಜೀವಿಗಳು ಚಲಿಸಿದಾಗ ಚಕ್ರಗಳು ಚಲಿಸಿದವು. ಜೀವಿಗಳು ನಿಂತಾಗ ಚಕ್ರಗಳೂ ನಿಂತವು. ಜೀವಿಗಳು ಗಾಳಿಯಲ್ಲಿ ಮೇಲಕ್ಕೆ ಹೋದರೆ, ಚಕ್ರಗಳೂ ಅವುಗಳೊಂದಿಗೆ ಮೇಲಕ್ಕೆ ಹೋದವು; ಯಾಕೆಂದರೆ ಜೀವಿಗಳನ್ನು ನಿಯಂತ್ರಿಸುವ ಆತ್ಮವು ಚಕ್ರಗಳಲ್ಲಿ ಇತ್ತು.[೨೨] ಆ ಜೀವಿಗಳ ತಲೆಗಳ ಮೇಲೆ ಆಶ್ಚರ್ಯಕರವಾದ ಒಂದು ಗುಮಟದಂತಿರುವ ವಸ್ತುವು ಹರಡಿಕೊಂಡಿತ್ತು. ಅದು ತಲೆಕೆಳಕಾಗಿ ಇಟ್ಟಿದ್ದ ಬೋಗುಣಿಯಂತಿತ್ತು. ಅದು ಸ್ಪಟಿಕದಂತೆ ಸಬಚ್ಫವಾಗಿತ್ತು.[೨೩] ಈ ಬೋಗುಣಿಯಡಿಯಲ್ಲಿ ಒಂದೊಂದು ಜೀವಿಯು ತನ್ನ ಎರಡು ರೆಕ್ಕೆಗಳನ್ನು ಚಾಚಿಕೊಂಡು ಮತ್ತೊಂದು ಜೀವಿಯನ್ನು ತಾಕುತ್ತಿತ್ತು. ಒಂದೊಂದು ಜೀವಿಯ ಮತ್ತೆರಡು ರೆಕ್ಕೆಗಳು ಅದರ ದೇಹವನ್ನು ಆವರಿಸಿಕೊಂಡಿದ್ದವು.[೨೪] ಜೀವಿಗಳು ಚಲಿಸಿದಾಗಲೆಲ್ಲಾ ಅವುಗಳ ರೆಕ್ಕೆಗಳ ಗಟ್ಟಿಯಾದ ಶಘ್ದ ನನಗೆ ಕೇಳಿಸಿತು. ಅದು ನೀರು ಭೋರ್ಗರೆಯುವ ಶಘ್ದದಂತಿತ್ತು. ಸರ್ವಶಕ್ತನಾದ ದೇವರ ಶಘ್ದದಂತೆ ಅದು ಗಟ್ಟಿಯಾಗಿತ್ತು. ಅದು ದೊಡ್ಡ ಸೈನ್ಯದ ಅಥವಾ ಜನಸಮೂಹದ ಶಘ್ದದಂತಿತ್ತು. ಜೀವಿಗಳು ಚಲಿಸುವುದನ್ನು ನಿಲ್ಲಿಸಿದಾಗ ಅವುಗಳು ತಮ್ಮ ರೆಕ್ಕೆಗಳನ್ನು ತಮ್ಮ ಪಾಶಬರ್ಗಳಲ್ಲಿ ಕೆಳಗಿಳಿಸುತ್ತಿದ್ದವು.[೨೫] ಜೀವಿಗಳು ಚಲಿಸುವದನ್ನು ನಿಲ್ಲಿಸಿ ರೆಕ್ಕೆಗಳನ್ನು ಕೆಳಗಿಳಿಸಿದವು. ಆಗ ಇನ್ನೊಂದು ದೊಡ್ಡ ಶಘ್ದ ಉಂಟಾಯಿತು. ಅವುಗಳ ತಲೆಗಳ ಮೇಲ್ಗಡೆಯ ಬೋಗುಣಿಯ ಮೇಲಿನಿಂದ ಆ ಶಘ್ದವು ಹೊರಟಿತ್ತು.[೨೬] ಆ ಬೋಗುಣಿಯ ಮೇಲೆ ಸಿಂಹಾಸನದಂತಿದ್ದ ವಸ್ತುವು ಇತ್ತು. ಅದು ನೀಲಮಣಿಯಂತೆ ನೀಲಿ ಘಣ್ಣದ್ದಾಗಿತ್ತು. ಆ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದ ಒಬ್ಬನು ಮನುಷ್ಯನಂತೆ ಕಾಣುತ್ತಿದ್ದನು.[೨೭] ನಾನು ಆತನ ಸೊಂಟದ ಮೇಲ್ಭಾಗವನ್ನು ನೋಡಿದಾಗ, ಆತನು ಬೆಂಕಿಯಿಂದ ಸುತ್ತುವರಿದ ಕಾದಲೋಹದಂತೆ ಕಂಡನು. ನಾನು ಆತನ ಸೊಂಟದಿಂದ ಕೆಳಭಾಗವನ್ನು ನೋಡಿದಾಗ ಆತನು ಬೆಂಕಿಯಂತೆ ಕಂಡನು. ಆತನ ಸುತ್ತಲೂ ಪ್ರಕಾಶಮಾನವಾದ ಬೆಳಕಿತ್ತು.[೨೮] ಆತನ ಸುತ್ತಲೂ ಇದ್ದ ಪ್ರಕಾಶವು ಮೇಘಬಿಲ್ಲಿನಂತೆಯೂ ಯೆಹೋವನ ಮಹಿಮೆಯಂತೆಯೂ ಕಾಣುತ್ತಿತ್ತು. ನಾನು ಅದನ್ನು ನೋಡಿದ ಕೂಡಲೇ ನೆಲಕ್ಕೆ ಬಿದ್ದೆನು. ಮುಖವನ್ನು ನೆಲದ ಮೇಲಿಟ್ಟು ಅಡ್ಡಬಿದ್ದೆನು. ಆಗ ನನ್ನೊಂದಿಗೆ ಮಾತನಾಡುತ್ತಿದ್ದ ಸಬರವನ್ನು ಕೇಳಿದೆನು.

Kannada Bible 1934
Public Domain: 1934