A A A A A

ರಹಸ್ಯಗಳು: [ಕ್ಯಾನ್ಸರ್]


ಕೊರಿಂಥಿಯರಿಗೆ ೨ ೪:೧೬-೧೯
[೧೬] ಆದಕಾರಣವೇ, ನಾವೆಂದಿಗೂ ಬಲಹೀನರಾಗುವುದಿಲ್ಲ. ನಮ್ಮ ಭೌತಿಕ ದೇಹಕ್ಕೆ ವಯಸ್ಸಾಗುತ್ತಿದೆ ಮತ್ತು ಅದು ಬಲಹೀನವಾಗುತ್ತಿದೆ. ಆದರೆ ನಮ್ಮ ಆಂತರ್ಯವು ಪ್ರತಿದಿನ ಹೊಸದಾಗುತ್ತಿದೆ.[೧೭] ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.[೧೮] ಆದ್ದರಿಂದ ನಮಗೆ ಕಾಣುವಂಥವುಗಳ ಬಗ್ಗೆ ಯೋಚಿಸದೆ ನಮಗೆ ಕಾಣದಿರುವಂಥವುಗಳ ಬಗ್ಗೆ ಯೋಚಿಸುತ್ತೇವೆ. ನಮಗೆ ಕಾಣುವಂಥವುಗಳು ಕೇವಲ ಸ್ವಲ್ಪಕಾಲ ಮಾತ್ರ ಇರುತ್ತವೆ. ಆದರೆ ನಮಗೆ ಕಾಣದಂಥವುಗಳು ಎಂದೆಂದಿಗೂ ಇರುತ್ತವೆ.[೧೯] ಭೂಮಿಯ ಮೇಲೆ ನಾವು ವಾಸವಾಗಿರುವ ಈ ಗುಡಾರವು ಅಂದರೆ ಈ ದೇಹವು ನಾಶವಾಗುವುದೆಂದು ನಮಗೆ ಗೊತ್ತಿದೆ. ಆದರೆ ಅದು ಸಂಭವಿಸಿದಾಗ, ನಮ್ಮ ವಾಸಕ್ಕಾಗಿ ದೇವರು ನಮಗೊಂದು ಮನೆಯನ್ನು ಕೊಡುವನು. ಅದು ಮನುಷ್ಯರಿಂದ ನಿರ್ಮಿತವಾದ ಮನೆಯಲ್ಲ. ಅದು ಪರಲೋಕದಲ್ಲಿರುವ ಶಾಶ್ವತವಾದ ಮನೆಯಾಗಿದೆ.

ಕೀರ್ತನೆಗಳು ೧೦೭:೨೦
ಆತನು ಆಜ್ಞಾಪಿಸಲು ಜನರು ಗುಣಹೊಂದಿದರು. ಸಮಾಧಿಯಿಂದ ತಪ್ಪಿಸಿಕೊಂಡರು.

ಯೆಶಾಯನ ೪೦:೩೧
ಆದರೆ ಯೆಹೋವನಲ್ಲಿ ಭರವಸೆಯಿಟ್ಟವರು ಮತ್ತೆ ಬಲಹೊಂದುವರು. ಹದ್ದು ಹೊಸಗರಿಗಳನ್ನು ಹೊಂದುವಂತೆ ಅವರು ಹೊಸ ಬಲವನ್ನು ಹೊಂದುವರು. ಅವರು ಓಡಾಡಿದರೂ ಆಯಾಸಗೊಳ್ಳುವದಿಲ್ಲ. ನಡೆದಾಡಿದರೂ ಬಳಲಿಹೋಗುವುದಿಲ್ಲ.

ಧರ್ಮೋಪದೇಷಕಾಂಡ ೩೧:೬
ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”

ಮತ್ತಾಯನು ೧೧:೨೮-೨೯
[೨೮] “ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ. ನಾನು ನಿಮಗೆ ವಿಶ್ರಾಂತಿಯನ್ನು ಕೊಡುತ್ತೇನೆ.[೨೯] ನನ್ನ ನೊಗಕ್ಕೆ ಹೆಗಲು ಕೊಟ್ಟು ನನ್ನಿಂದ ಕಲಿತುಕೊಳ್ಳಿರಿ. ನಾನು ಸಾತ್ವಿಕನೂ ದೀನನೂ ಆಗಿರುವುದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.

ಕೀರ್ತನೆಗಳು ೧೮:೬
ಆಗ ನಾನು ಸಹಾಯಕ್ಕಾಗಿ ಯೆಹೋವನನ್ನು ಕೂಗಿಕೊಂಡೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಆತನು ತನ್ನ ಆಲಯದಲ್ಲಿ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಗೆ ಕಿವಿಗೊಟ್ಟನು.

ಉಪದೇಷಕ ೩:೧
ಪ್ರತಿಯೊಂದಕ್ಕೂ ಸೂಕ್ತವಾದ ಸಮಯವಿದೆ. ಭೂಮಿಯ ಮೇಲೆ ನಡೆಯುವ ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವಿದೆ.

ಯೆರೆಮೀಯನ ಗ್ರಂಥ ೨೯:೧೧
ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನ್ನು ಹಾಕಿದ್ದೇನೆ. ನಿಮಗೆ ಕೆಟ್ಟದ್ದನ್ನು ಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನ್ನಿಟ್ಟುಕೊಂಡಿದ್ದೇನೆ.

ಯೊವಾನ್ನನು ೧೪:೧-೪
[೧] ಯೇಸು, “ನಿಮ್ಮ ಹೃದಯವು ಕಳವಳಗೊಳ್ಳದಿರಲಿ. ದೇವರಲ್ಲಿ ವಿಶ್ವಾಸವಿಡಿರಿ. ನನ್ನಲ್ಲಿಯೂ ವಿಶ್ವಾಸವಿಡಿರಿ.[೨] ನನ್ನ ತಂದೆಯ ಮನೆಯಲ್ಲಿ ಅನೇಕ ಕೋಣೆಗಳಿವೆ. ಅದು ಸತ್ಯವಲ್ಲದಿದ್ದರೆ, ನಾನು ನಿಮಗೆ ಹೇಳುತ್ತಿರಲಿಲ್ಲ. ನಾನು ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಲು ಅಲ್ಲಿಗೆ ಹೋಗುತ್ತಿದ್ದೇನೆ.[೩] ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಿದ ಮೇಲೆ ಹಿಂತಿರುಗಿ ಬಂದು, ನಿಮ್ಮನ್ನು ನನ್ನೊಂದಿಗೆ ಕರೆದುಕೊಂಡು ಹೋಗುವೆನು. ಏಕೆಂದರೆ ನಾನಿರುವಲ್ಲಿ ನೀವೂ ಇರಬೇಕು.[೪] ನಾನು ಹೋಗಲಿರುವ ಸ್ಥಳದ ದಾರಿಯು ನಿಮಗೆ ತಿಳಿದಿದೆ” ಎಂದು ಹೇಳಿದನು.

ರೋಮನರಿಗೆ ೮:೧೬-೨೫
[೧೬] ನಾವು ದೇವರ ಮಕ್ಕಳಾಗಿದ್ದೇವೆಂದು ಪವಿತ್ರಾತ್ಮನು ತಾನೇ ನಮ್ಮ ಅಂತರಾತ್ಮದೊಂದಿಗೆ ಹೇಳುತ್ತಾನೆ.[೧೭] ನಾವು ದೇವರ ಮಕ್ಕಳಾಗಿದ್ದರೆ, ಬಾಧ್ಯರಾಗಿದ್ದೇವೆ. ಹೌದು, ದೇವರಿಗೆ ಬಾಧ್ಯರಾಗಿದ್ದೇವೆ ಮತ್ತು ಕ್ರಿಸ್ತನೊಂದಿಗೆ ಬಾಧ್ಯರಾಗಿದ್ದೇವೆ. ಹೇಗೆಂದರೆ, ಕ್ರಿಸ್ತನ ಬಾಧೆಯಲ್ಲಿ ನಾವು ಪಾಲುಗಾರರಾಗುವುದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.[೧೮] ಈಗ ನಾವು ಕಷ್ಟಸಂಕಟಗಳನ್ನು ಸಹಿಸಿಕೊಳ್ಳುತ್ತೇವೆ. ಆದರೆ ನಮಗೆ ಮುಂದೆ ಕೊಡಲ್ಪಡುವ ಮಹಿಮೆಗೆ ಈ ಕಷ್ಟಸಂಕಟಗಳನ್ನು ಹೋಲಿಸಿದರೆ ಇವು ಗಣನೆಗೆ ಬರುವುದಿಲ್ಲ.[೧೯] ದೇವರು ತನ್ನ ಮಕ್ಕಳನ್ನು ಪ್ರತ್ಯಕ್ಷಪಡಿಸುವ ಕಾಲಕ್ಕಾಗಿ ದೇವರ ಸರ್ವಸೃಷ್ಟಿಯು ಉತ್ಸುಕತೆಯಿಂದ ಎದುರು ನೋಡುತ್ತಿದೆ. ಅದು ಸಂಭವಿಸಲೆಂದು ಇಡೀ ಜಗತ್ತೇ ಹಂಬಲಿಸುತ್ತಿದೆ.[೨೦] ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಹೀಗಾದದ್ದು ಅದರ ಸ್ವಂತ ಇಚ್ಛೆಯಿಂದಲ್ಲ, ದೇವರ ಇಚ್ಛೆಯಿಂದಲೇ. ಆದರೂ ಅದಕ್ಕೆ ನಿರೀಕ್ಷೆಯಿತ್ತು. ಅದೇನೆಂದರೆ:[೨೧] ಸರ್ವಸೃಷ್ಟಿಯು ನಾಶನದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಸ್ವಾತಂತ್ರವನ್ನೂ ಮಹಿಮೆಯನ್ನೂ ಹೊಂದಿಕೊಳ್ಳುತ್ತದೆ ಎಂಬುದೇ.[೨೨] ದೇವರು ಸೃಷ್ಟಿಮಾಡಿದ ಪ್ರತಿಯೊಂದೂ, ಪ್ರಸವವೇದನೆ ಪಡುತ್ತಿರುವ ಸ್ತ್ರೀಯಂತೆ ನೋವಿನಿಂದ ನರಳುತ್ತಾ ಇಂದಿನವರೆಗೂ ಕಾಯುತ್ತಿದೆ ಎಂಬುದು ನಮಗೆ ಗೊತ್ತಿದೆ.[೨೩] ಜಗತ್ತು ಮಾತ್ರವೇ ಅಲ್ಲ, ನಾವು ಸಹ ನಮ್ಮೊಳಗೆ ನೋವಿನಿಂದ ನರಳುತ್ತಾ ಕಾಯುತ್ತಿದ್ದೇವೆ. ದೇವರ ವಾಗ್ದಾನದ ಮೊದಲನೆ ಭಾಗವಾಗಿರುವ ಪವಿತ್ರಾತ್ಮನನ್ನು ನಾವು ಹೊಂದಿಕೊಂಡಿದ್ದೇವೆ. ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ದೇವರು ಮಾಡುತ್ತಿರುವ ಕಾರ್ಯವು ಸಂಪೂರ್ಣಗೊಳ್ಳುವುದನ್ನೇ ಅಂದರೆ, ನಮ್ಮ ದೇಹಗಳಿಗಾಗುವ ಬಿಡುಗಡೆಯನ್ನೇ ನಾವು ಎದುರು ನೋಡುತ್ತಿದ್ದೇವೆ.[೨೪] ನಾವು ರಕ್ಷಣೆ ಹೊಂದಿದ್ದೇವೆ ಮತ್ತು ನಮಗಿನ್ನೂ ಆ ನಿರೀಕ್ಷೆಯಿದೆ. ನಾವು ಯಾವುದಕ್ಕೋಸ್ಕರ ಕಾಯುತ್ತಿದ್ದೇವೊ ಅದನ್ನು ಕಾಣಬಲ್ಲವರಾಗಿದ್ದರೆ, ಅದು ನಿಜವಾದ ನಿರೀಕ್ಷೆಯಲ್ಲ. ಜನರು ತಾವು ಈಗಾಗಲೇ ಹೊಂದಿರುವ ಯಾವುದನ್ನೂ ನಿರೀಕ್ಷಿಸುವುದಿಲ್ಲ.[೨೫] ಆದರೆ ನಾವಿನ್ನೂ ಹೊಂದಿಕೊಂಡಿಲ್ಲದೆ ಇರುವುದನ್ನು ನಿರೀಕ್ಷಿಸುತ್ತಾ ತಾಳ್ಮೆಯಿಂದ ಅದಕ್ಕಾಗಿ ಕಾಯುತ್ತಿದ್ದೇವೆ.

ಪೇತ್ರನು ೧ ೧:೩
ನಮ್ಮ ಪ್ರಭುವಾಗಿರುವ ಯೇಸು ಕ್ರಿಸ್ತನ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ದೇವರು ಮಹಾ ಕರುಣಾಳುವಾಗಿದ್ದಾನೆ. ಆತನು ತನ್ನ ಕರುಣೆಯಿಂದಲೇ ನಮಗೆ ಹೊಸ ಜೀವವನ್ನು ನೀಡಿದನು. ಸತ್ತವರೊಳಗಿಂದ ಎದ್ದುಬಂದ ಯೇಸು ಕ್ರಿಸ್ತನ ಮೂಲಕ ಅದು ನಮಗೆ ಒಂದು ಜೀವಂತ ನಿರೀಕ್ಷೆಯನ್ನು ತರುತ್ತದೆ.

ಕೊರಿಂಥಿಯರಿಗೆ ೨ ೧:೩-೬
[೩] ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ದೇವರು ಕನಿಕರದಿಂದ ತುಂಬಿರುವ ತಂದೆಯಾಗಿದ್ದಾನೆ. ಆತನು ಸಕಲ ವಿಧವಾಗಿ ಸಂತೈಸುವ ದೇವರಾಗಿದ್ದಾನೆ.[೪] ನಮಗೆ ಸಂಕಷ್ಟವಿರುವಾಗಲೆಲ್ಲಾ ಆತನು ನಮ್ಮನ್ನು ಸಂತೈಸುತ್ತಾನೆ; ಸಂಕಷ್ಟಗಳಲ್ಲಿರುವ ಇತರ ಜನರನ್ನು ಸಂತೈಸಲು ಇದರ ಮೂಲಕ ನಾವು ಸಹ ಶಕ್ತರಾಗುತ್ತೇವೆ. ದೇವರು ನಮ್ಮನ್ನು ಸಂತೈಸುವಂತೆಯೇ ನಾವು ಸಹ ಅವರನ್ನು ಸಂತೈಸಬಲ್ಲವರಾಗುತ್ತೇವೆ.[೫] ನಾವು ಕ್ರಿಸ್ತನ ಅನೇಕ ಬಾಧೆಗಳಲ್ಲಿ ಪಾಲುಗಾರರಾಗುತ್ತೇವೆ. ಅದೇ ರೀತಿಯಲ್ಲಿ, ಕ್ರಿಸ್ತನ ಮೂಲಕ ಹೇರಳವಾದ ಆದರಣೆಯು ನಮಗೆ ಬರುತ್ತದೆ.[೬] ನಮಗೆ ಸಂಕಷ್ಟಗಳಿರುವುದಾದರೆ, ಆ ಸಂಕಷ್ಟಗಳು ನಿಮ್ಮ ಆದರಣೆಗಾಗಿಯೇ ಮತ್ತು ರಕ್ಷಣೆಗಾಗಿಯೇ. ನಮಗೆ ಆದರಣೆ ಇರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ನಮಗಿರುವಂಥ ಬಾಧೆಗಳನ್ನು ನೀವು ತಾಳ್ಮೆಯಿಂದ ಸ್ವೀಕರಿಸಿಕೊಳ್ಳಲು ಇದು ನಿಮಗೆ ಸಹಾಯವಾಗಿದೆ.

Kannada Bible 1934
Public Domain: 1934