A A A A A

ರಹಸ್ಯಗಳು: [ಡೆಸ್ಟಿನಿ]


ಉಪದೇಷಕ ೬:೧೦
ಮನುಷ್ಯನು ಕೇವಲ ಮನುಷ್ಯನಾಗಿ ಸೃಷ್ಟಿಸಲ್ಪಟ್ಟಿದ್ದಾನೆ. ಅದರ ಬಗ್ಗೆ ವಾದಮಾಡುವುದರಿಂದ ಉಪಯೋಗವಿಲ್ಲ. ಅಲ್ಲದೆ ಮನುಷ್ಯನು ದೇವರೊಂದಿಗೆ ವಾದಮಾಡಲಾರನು. ಯಾಕೆಂದರೆ ದೇವರು ಮನುಷ್ಯನಿಗಿಂತಲೂ ಬಲಿಷ್ಠನಾಗಿದ್ದಾನೆ. ಆದ್ದರಿಂದ ವಾದವು ಕೇವಲ ನಿರರ್ಥಕವಾಗಿದೆ. (Verses 10-11)

ಹಬಕ್ಕೂಕನ ೨:೩
ಭವಿಷ್ಯದ ಒಂದು ವಿಶೇಷ ಸಮಯದ ಕುರಿತಾಗಿ ಈ ಸಂದೇಶ. ಈ ಸಂದೇಶವು ಅಂತ್ಯದ ವಿಷಯವಾಗಿ ಇದೆ. ಇದು ಖಂಡಿತವಾಗಿಯೂ ನೆರವೇರುತ್ತದೆ. ಆ ಸಮಯವು ಎಂದಿಗೂ ಬರುವುದಿಲ್ಲ ಎಂಬಂತೆ ಕಾಣಬಹುದು. ಆದರೆ ತಾಳ್ಮೆಯಿಂದಿರು; ಅದನ್ನು ನಿರೀಕ್ಷಿಸುತ್ತಾ ಇರು. ಆ ಸಮಯವು ಬರುವದು. ಅದು ತಡವಾಗುವುದಿಲ್ಲ.

ಯೆಶಾಯನ ೪೬:೧೦
“ನಾನು ಅಂತ್ಯದಲ್ಲಿ ನಡೆಯಲಿರುವ ವಿಷಯಗಳನ್ನು ಪ್ರಾರಂಭದಲ್ಲಿಯೇ ತಿಳಿಸಿರುತ್ತೇನೆ. ಬಹುಕಾಲದ ಹಿಂದೆ ಇನ್ನೂ ಸಂಭವಿಸದ ಸಂಗತಿಗಳನ್ನು ತಿಳಿಸಿದ್ದೇನೆ. ನಾನು ಯೋಜಿಸುವ ಸಂಗತಿಗಳು ನೆರವೇರುವವು. ನಾನು ಮಾಡಲು ಬಯಸುವ ಕಾರ್ಯಗಳನ್ನು ನೆರವೇರಿಸುವೆನು.

ಯೆಶಾಯನ ೫೫:೧೧
ಅದೇ ಪ್ರಕಾರ ನನ್ನ ಬಾಯಿಂದ ಹೊರಟ ಮಾತುಗಳು ಯೋಚಿಸಿದ ಕಾರ್ಯಗಳನ್ನು ಮಾಡದೆ ಹಿಂತಿರುಗುವುದಿಲ್ಲ. ನನ್ನ ಮಾತುಗಳು ನನ್ನ ಆಲೋಚನೆಗೆ ಸರಿಯಾಗಿ ಕಾರ್ಯ ಮಾಡುವವು. ನನ್ನ ಮಾತುಗಳು ತಮಗೆ ನೇಮಕವಾದ ಆ ಕಾರ್ಯಗಳನ್ನು ಮಾಡಿಮುಗಿಸುವವು.

ಯೆರೆಮೀಯನ ಗ್ರಂಥ ೧:೫
“ನಾನು ನಿನ್ನನ್ನು ನಿನ್ನ ತಾಯಿಯ ಗರ್ಭದಲ್ಲಿ ರೂಪಿಸುವ ಮುಂಚೆಯೇ ನಿನ್ನನ್ನು ಘಲ್ಲವನಾಗಿದ್ದೆನು. ನೀನು ಹುಟ್ಟುವದಕ್ಕಿಂತ ಮುಂಚೆಯೇ ನಾನು ನಿನ್ನನ್ನು ಒಂದು ವಿಶೇಷವಾದ ಕೆಲಸಕ್ಕೆ ಅಂದರೆ ಜನಾಂಗಗಳಿಗೆ ಪ್ರವಾದಿಯನ್ನಾಗಿ ಆರಿಸಿಕೊಂಡಿದ್ದೆನು.”

ಯೆರೆಮೀಯನ ಗ್ರಂಥ ೧೭:೧೦
ನಾನೇ ಯೆಹೋವನು, ನಾನು ಮನುಷ್ಯನ ಹೃದಯದ ಆಳವನ್ನು ನೋಡಘಲ್ಲೆ, ಮನುಷ್ಯನ ಬುದ್ಧಿಯನ್ನು ಪರೀಕ್ಷಿಸಘಲ್ಲೆ. ಆದ್ದರಿಂದ ಪ್ರತಿಯೊಬ್ಬ ಮನುಷ್ಯನಿಗೆ ತಕ್ಕ ಪ್ರತಿಫಲವನ್ನು ನಾನು ನಿರ್ಧರಿಸಘಲ್ಲೆ. ಪ್ರತಿಯೊಬ್ಬ ಮನುಷ್ಯನಿಗೆ ಅವನ ಕೆಲಸಕ್ಕೆ ತಕ್ಕಂತೆ ಸರಿಯಾಗಿ ಫಲವನ್ನು ಕೊಡುವೆನು.

ಯೊವಾನ್ನನು ೧೬:೩೩
“ನೀವು ನನ್ನಲ್ಲಿ ಶಾಂತಿಯನ್ನು ಹೊಂದಿದವರಾಗಿರಬೇಕೆಂದು ನಾನು ನಿಮಗೆ ಈ ಸಂಗತಿಗಳನ್ನೆಲ್ಲಾ ಹೇಳಿದ್ದೇನೆ. ಈ ಲೋಕದಲ್ಲಿ ನಿಮಗೆ ಸಂಕಟವಿದೆ. ಆದರೆ ಧೈರ್ಯದಿಂದಿರಿ! ನಾನು ಈ ಲೋಕವನ್ನು ಸೋಲಿಸಿದ್ದೇನೆ!” ಎಂದು ಹೇಳಿದನು.

ಸಂಖ್ಯಾಕಾಂಡ ೨೩:೧೯
ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.

ಜ್ಞಾನೋಕ್ತಿಗಳು ೧೬:೩
ನಿಮ್ಮ ಕಾರ್ಯಗಳನ್ನು ಯೆಹೋವನಿಗೆ ವಹಿಸಿರಿ; ಆಗ ನಿಮ್ಮ ಯೋಜನೆಗಳೆಲ್ಲಾ ಸಫಲವಾಗುವವು.

ಜ್ಞಾನೋಕ್ತಿಗಳು ೧೯:೨೦-೨೪
[೨೦] ಉಪದೇಶಕ್ಕೆ ಕಿವಿಗೊಟ್ಟು ಸರಿಪಡಿಸಿಕೊ. ಆಗ ನೀನು ಜ್ಞಾನಿಯಾಗುವೆ.[೨೧] ಜನರು ಅನೇಕ ಆಲೋಚನೆಗಳನ್ನು ಮಾಡಿಕೊಂಡರೂ ಯೆಹೋವನ ಇಚ್ಛೆಯೇ ನೆರವೇರುವುದು.[೨೨] ದುರಾಶೆಯುಳ್ಳವನಿಗೆ ಅವನ ದುರಾಶೆಯೇ ಅವಮಾನಕರ. ಸುಳ್ಳು ಹೇಳುವುದಕ್ಕಿಂತ ಬಡವನಾಗಿರುವುದೇ ಮೇಲು.[೨೩] ಭಯಭಕ್ತಿಯು ಒಳ್ಳೆಯ ಜೀವನಕ್ಕೆ ನಡೆಸುತ್ತದೆ. ಅದು ಅವನಿಗೆ ತೃಪ್ತಿಯನ್ನೂ ಕೊಡುವುದು; ಕೇಡಿನಿಂದಲೂ ತಪ್ಪಿಸಿ ಕಾಪಾಡುವುದು.[೨೪] ಕೆಲವರಿಗೆ ಊಟಮಾಡುವುದಕ್ಕೂ ಸೋಮಾರಿತನ. ಅವರು ಕೈಯನ್ನು ತಟ್ಟೆಗೆ ಹಾಕಿದರೂ ಊಟವನ್ನು ಬಾಯಿಗೆ ಹಾಕಿಕೊಳ್ಳುವುದಿಲ್ಲ.

ಕೀರ್ತನೆಗಳು ೩೭:೩೭
ಪವಿತ್ರರನ್ನೂ ಯಥಾರ್ಥರನ್ನೂ ಗಮನಿಸು. ಶಾಂತಿಪ್ರಿಯರು ಅನೇಕ ಸಂತಾನಗಳನ್ನು ಹೊಂದಿಕೊಳ್ಳುವರು.

ಕೀರ್ತನೆಗಳು ೧೩೮:೮
ಯೆಹೋವನೇ, ನಿನ್ನ ವಾಗ್ದಾನಗಳನ್ನು ನೆರವೇರಿಸು. ಯೆಹೋವನೇ, ನಿನ್ನ ಪ್ರೀತಿಯು ಶಾಶ್ವತವಾದದ್ದು. ನಮ್ಮನ್ನು ಸೃಷ್ಟಿಸಿದಾತನು ನೀನೇ. ನಮ್ಮನ್ನು ಕೈಬಿಡಬೇಡ!

ಪ್ರಕಟನೆ ೨೦:೧೨
ಸತ್ತುಹೋಗಿದ್ದ ಚಿಕ್ಕವರು ಮತ್ತು ದೊಡ್ಡವರು ಸಿಂಹಾಸನದ ಮುಂದೆ ನಿಂತಿದ್ದರು. ಆಗ ಜೀವಬಾಧ್ಯರ ಪುಸ್ತಕವನ್ನು ತೆರೆಯಲಾಯಿತು. ತೆರೆದಿದ್ದ ಇತರ ಪುಸ್ತಕಗಳೂ ಅಲ್ಲಿದ್ದವು. ಸತ್ತುಹೋಗಿದ್ದ ಈ ಜನರಿಗೆ ಅವರು ಮಾಡಿದ್ದ ಕಾರ್ಯಗಳ ಆಧಾರದ ಮೇಲೆ ತೀರ್ಪು ನೀಡಲಾಯಿತು. ಇವುಗಳು ಪುಸ್ತಕಗಳಲ್ಲಿ ಬರೆಯಲ್ಪಟ್ಟಿವೆ.

ರೋಮನರಿಗೆ ೧೨:೨
ಈ ಲೋಕದವರ ನಡವಳಿಕೆಯನ್ನು ಅನುಸರಿಸದೆ ಅಂತರಂಗದಲ್ಲಿ ಮಾರ್ಪಾಟನ್ನು ಹೊಂದಿದವರಾಗಿದ್ದು ಪರಲೋಕ ಭಾವದವರಾಗಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಮೆಚ್ಚಿಕೆಯಾದುದು ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.

ರೋಮನರಿಗೆ ೮:೨೮-೨೯
[೨೮] ದೇವರು ತನ್ನನ್ನು ಪ್ರೀತಿಸುವವರ ಒಳ್ಳೆಯದಕ್ಕಾಗಿ ಪ್ರತಿಯೊಂದು ಕಾರ್ಯವನ್ನೂ ಅನುಕೂಲ ಮಾಡುತ್ತಾನೆಂದು ನಮಗೆ ಗೊತ್ತಿದೆ. ಆ ಜನರನ್ನು ದೇವರೇ ಆರಿಸಿಕೊಂಡನು, ಏಕೆಂದರೆ ಅದು ಆತನ ಯೋಜನೆಯಾಗಿತ್ತು.[೨೯] ದೇವರು ತಾನು ಜಗತ್ತನ್ನು ಸೃಷ್ಟಿಸುವುದಕ್ಕಿಂತ ಮೊದಲೇ ಆ ಜನರನ್ನು ಬಲ್ಲವನಾಗಿದ್ದನು ಮತ್ತು ಆ ಜನರು ತನ್ನ ಮಗನ ಅನುರೂಪಿಗಳಾಗಿರಬೇಕೆಂದು ನಿರ್ಧರಿಸಿದನು. ಹೀಗಿರಲಾಗಿ, ಅನೇಕ ಸಹೋದರ ಸಹೋದರಿಯರಲ್ಲಿ ಯೇಸುವೇ ಹಿರಿಯವನಾಗಿದ್ದಾನೆ.

ಎಫೆಸಿಯರಿಗೆ ೨:೮-೯
[೮] ಆದ್ದರಿಂದ ನೀವು ನಂಬಿಕೆಯ ಮೂಲಕ ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಅದು ದೇವರ ವರ.[೯] ನಿಮಗೆ ರಕ್ಷಣೆ ದೊರೆತದ್ದು ನಿಮ್ಮ ಒಳ್ಳೆಯ ಕಾರ್ಯಗಳಿಂದಲ್ಲ. ಆದ್ದರಿಂದ ತನ್ನನ್ನು ತಾನೇ ರಕ್ಷಿಸಿಕೊಂಡಿರುವುದಾಗಿ ಯಾರೂ ಹೊಗಳಿಕೊಳ್ಳಲು ಸಾಧ್ಯವಿಲ್ಲ.

ಪೇತ್ರನು ೧ ೨:೮-೯
[೮] ನಂಬದಿರುವ ಜನರಿಗೆ ಆತನು:[೯] ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.

ಕೊರಿಂಥಿಯರಿಗೆ ೧ ೨:೭-೯
[೭] ನಾವಾದರೊ ದೇವರ ರಹಸ್ಯವಾದ ಜ್ಞಾನವನ್ನೇ ಹೇಳುತ್ತೇವೆ. ಈ ಜ್ಞಾನವನ್ನು ಜನರಿಗೆ ಮರೆಮಾಡಲಾಗಿದೆ. ದೇವರು ನಮ್ಮ ಮಹಿಮೆಗಾಗಿ ಈ ಜ್ಞಾನವನ್ನು ಲೋಕವು ಆರಂಭವಾಗುವುದಕ್ಕಿಂತ ಮೊದಲೇ ಯೋಜಿಸಿದ್ದನು.[೮] ಈ ಲೋಕದ ಯಾವ ಅಧಿಪತಿಗಳೂ ಈ ಜ್ಞಾನವನ್ನು ಅರ್ಥಮಾಡಿಕೊಳ್ಳಲಿಲ್ಲ. ಅವರು ಅರ್ಥಮಾಡಿಕೊಂಡಿದ್ದರೆ, ಮಹಿಮೆಯುಳ್ಳ ಪ್ರಭುವನ್ನು ಶಿಲುಬೆಗೇರಿಸುತ್ತಿರಲಿಲ್ಲ.[೯] ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು:

ಯೆರೆಮೀಯನ ಗ್ರಂಥ ೨೯:೧೧-೧೪
[೧೧] ನಾನು ನಿಮಗಾಗಿ ಹಾಕಿದ ಯೋಜನೆಗಳು ನನಗೆ ಗೊತ್ತಿರುವುದರಿಂದ ನಾನು ಹೀಗೆ ಹೇಳುತ್ತಿದ್ದೇನೆ.” ಇದು ಯೆಹೋವನ ಸಂದೇಶ. “ನಾನು ನಿಮಗಾಗಿ ಒಳ್ಳೆಯ ಯೋಜನೆಗಳನ್ನು ಹಾಕಿದ್ದೇನೆ. ನಿಮಗೆ ಕೆಟ್ಟದ್ದನ್ನು ಮಾಡುವ ವಿಚಾರ ನನಗಿಲ್ಲ. ನಾನು ನಿಮಗಾಗಿ ಆಶಾದಾಯಕವಾದ ಮತ್ತು ಒಳ್ಳೆಯ ಭವಿಷ್ಯದ ವಿಚಾರಗಳನ್ನಿಟ್ಟುಕೊಂಡಿದ್ದೇನೆ.[೧೨] ಆಗ ನೀವು ನನ್ನಲ್ಲಿ ಮೊರೆಯಿಡುವಿರಿ. ನೀವು ನನ್ನಲ್ಲಿಗೆ ಬಂದು ನನ್ನನ್ನು ಪ್ರಾರ್ಥಿಸಿರಿ; ಆಗ ನಾನು ನಿಮಗೆ ಕಿವಿಗೊಡುವೆನು.[೧೩] ನೀವು ನನ್ನನ್ನು ಹುಡುಕುವಿರಿ. ನೀವು ಮನಃಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.[೧೪] ನಾನು ನಿಮಗೆ ದೊರೆಯುವೆನು. ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಘಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.

Kannada Bible 1934
Public Domain: 1934