A A A A A

ಪಾಪಗಳು: [ಮಗುವನ್ನು ಗರ್ಭಪಾತ]


ಕೊರಿಂಥಿಯರಿಗೆ ೧ ೧:೨೭
ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ.

ಧರ್ಮೋಪದೇಷಕಾಂಡ ೨೪:೧೬
“ಮಕ್ಕಳು ಮಾಡಿದ ಪಾಪಕ್ಕಾಗಿ ಅವರ ತಂದೆತಾಯಿಗಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ತಂದೆತಾಯಿಗಳು ಮಾಡಿದ ಪಾಪಕ್ಕಾಗಿ ಮಕ್ಕಳಿಗೆ ಮರಣಶಿಕ್ಷೆಯನ್ನು ವಿಧಿಸಕೂಡದು. ಪಾಪ ಮಾಡಿದವರಿಗೇ ಮರಣ ಶಿಕ್ಷೆಯಾಗಬೇಕು.

ಧರ್ಮೋಪದೇಷಕಾಂಡ ೩೦:೧೯
“ಈ ದಿನ ಎರಡು ಮಾರ್ಗಗಳಲ್ಲಿ ಯಾವುದನ್ನು ಬೇಕಾದರೂ ಆರಿಸಿಕೊಳ್ಳಲು ನಾನು ನಿಮಗೆ ಅವಕಾಶ ಕೊಟ್ಟಿದ್ದೇನೆ. ಪರಲೋಕವೂ ಭೂಮಿಯೂ ಅದಕ್ಕೆ ಸಾಕ್ಷಿ. ನೀವು ಜೀವವನ್ನಾಗಲಿ ಮರಣವನ್ನಾಗಲಿ ಆರಿಸಿಕೊಳ್ಳಬಹುದು. ಜೀವವನ್ನಾರಿಸಿಕೊಂಡರೆ, ಆಶೀರ್ವಾದವು ಸಿಗುವುದು. ಮರಣವು ನಿಮಗೆ ಶಾಪವನ್ನು ತರುವುದು. ಆದ್ದರಿಂದ ಜೀವವನ್ನು ಆರಿಸಿಕೊಳ್ಳಿರಿ, ನೀವೂ ನಿಮ್ಮ ಮಕ್ಕಳೂ ಬಾಳುವಿರಿ.

ಗಲಾತ್ಯರಿಗೆ ೧:೧೫
ಆದರೆ ನಾನು ಹುಟ್ಟುವುದಕ್ಕಿಂತ ಮೊದಲೇ ನನ್ನ ವಿಷಯದಲ್ಲಿ ದೇವರಿಗೆ ವಿಶೇಷವಾದ ಯೋಜನೆಯಿತ್ತು. ಆದ್ದರಿಂದ ದೇವರು ತನ್ನ ಕೃಪೆಯಿಂದ ನನ್ನನ್ನು ಕರೆದನು.

ಯೆಶಾಯನ ೪೩:೨೫
“ನಿಮ್ಮ ಪಾಪಗಳನ್ನೆಲ್ಲಾ ಅಳಿಸಿ ಹಾಕುವಾತನು ನಾನೇ. ನಾನು ಇದನ್ನು ನನಗೋಸ್ಕರವಾಗಿ ಮಾಡುತ್ತೇನೆ. ನಾನು ನಿಮ್ಮ ಪಾಪಗಳನ್ನು ಜ್ಞಾಪಿಸಿಕೊಳ್ಳುವುದಿಲ್ಲ.

ಯೆಶಾಯನ ೪೪:೨೪
ಯೆಹೋವನು ನಿನ್ನನ್ನು ರೂಪಿಸಿದನು. ನೀನು ನಿನ್ನ ತಾಯಿಯ ಗರ್ಭದಲ್ಲಿರುವಾಗಲೇ ಆತನು ನಿನ್ನನ್ನು ರೂಪಿಸಿದನು. ಆತನು ಹೇಳುವುದೇನೆಂದರೆ, “ಯೆಹೋವನಾದ ನಾನು ಸಮಸ್ತವನ್ನೂ ಸೃಷ್ಟಿಸಿದೆನು. ಆಕಾಶಮಂಡಲವನ್ನು ಅದರ ಸ್ಥಳದಲ್ಲಿ ಇಟ್ಟೆನು; ಭೂಮಿಯನ್ನು ನನ್ನ ಮುಂದೆ ಹರಡಿದೆನು.”

ಎಫೆಸಿಯರಿಗೆ ೧:೭
ಕ್ರಿಸ್ತನ ರಕ್ತದ ಮೂಲಕವಾಗಿ ನಮಗೆ ಬಿಡುಗಡೆಯಾಯಿತು. ದೇವರ ಮಹಾ ಕೃಪೆಯಿಂದ ನಮ್ಮ ಪಾಪಗಳು ಕ್ಷಮಿಸಲ್ಪಟ್ಟವು.

ವಿಮೋಚನಾಕಾಂಡ ೪:೧೧
ಆಗ ಯೆಹೋವನು ಅವನಿಗೆ, “ಮನುಷ್ಯನ ಬಾಯನ್ನು ಯಾರು ಮಾಡಿದರು? ಮನುಷ್ಯನನ್ನು ಕಿವುಡನನ್ನಾಗಿ ಅಥವಾ ಮೂಕನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನನ್ನು ಕುರುಡನನ್ನಾಗಿ ಮಾಡಬಲ್ಲವರು ಯಾರು? ಮನುಷ್ಯನಿಗೆ ದೃಷ್ಟಿಕೊಟ್ಟವನು ಯಾರು? ಯೆಹೋವನಾದ ನಾನಲ್ಲವೇ.

ಯೆಶಾಯನ ೬೪:೮
ಯೆಹೋವನೇ, ನೀನು ನಮ್ಮ ತಂದೆಯಾಗಿರುವೆ. ನಾವು ಜೇಡಿಮಣ್ಣಿನಂತಿದ್ದೇವೆ. ನೀನಾದರೋ ಕುಂಬಾರನಾಗಿರುವೆ. ನಿನ್ನ ಕೈಗಳು ನಮ್ಮನ್ನು ನಿರ್ಮಿಸಿದವು.

ಯೆರೆಮೀಯನ ಗ್ರಂಥ ೧:೫
“ನಾನು ನಿನ್ನನ್ನು ನಿನ್ನ ತಾಯಿಯ ಗರ್ಭದಲ್ಲಿ ರೂಪಿಸುವ ಮುಂಚೆಯೇ ನಿನ್ನನ್ನು ಘಲ್ಲವನಾಗಿದ್ದೆನು. ನೀನು ಹುಟ್ಟುವದಕ್ಕಿಂತ ಮುಂಚೆಯೇ ನಾನು ನಿನ್ನನ್ನು ಒಂದು ವಿಶೇಷವಾದ ಕೆಲಸಕ್ಕೆ ಅಂದರೆ ಜನಾಂಗಗಳಿಗೆ ಪ್ರವಾದಿಯನ್ನಾಗಿ ಆರಿಸಿಕೊಂಡಿದ್ದೆನು.”

ಕೀರ್ತನೆಗಳು ೧೦೦:೩
ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಸೃಷ್ಟಿಸಿದವನು ಆತನೇ, ನಾವು ಆತನವರು. ನಾವು ಆತನ ಜನರೂ ಮಂದೆಯೂ ಆಗಿದ್ದೇವೆ.

ಕೀರ್ತನೆಗಳು ೧೨೭:೩
ಮಕ್ಕಳು ಯೆಹೋವನ ಕೊಡುಗೆ. ತಾಯಿಯ ಗರ್ಭಫಲವು ಆತನ ಬಹುಮಾನ.

ಲೂಕನು ೨:೬-೭
[೬] ಅವರು ಬೆತ್ಲೆಹೇಮಿನಲ್ಲಿದ್ದಾಗ ಮರಿಯಳಿಗೆ ಹೆರಿಗೆಕಾಲ ಬಂತು.[೭] ಆಕೆ ತನ್ನ ಚೊಚ್ಚಲಮಗುವನ್ನು (ಯೇಸು) ಹೆತ್ತಳು. ಅವರಿಗೆ ಇಳಿದುಕೊಳ್ಳಲು ಛತ್ರದಲ್ಲಿ ಸ್ಥಳ ದೊರೆಯಲಿಲ್ಲ. ಆದ್ದರಿಂದ ಮರಿಯಳು ಮಗುವನ್ನು ಬಟ್ಟೆಯಿಂದ ಸುತ್ತಿ ದನದ ಕೊಟ್ಟಿಗೆಯಲ್ಲಿ ಮೇವು ಹಾಕುತ್ತಿದ್ದ ತೊಟ್ಟಿಯಲ್ಲಿ ಮಲಗಿಸಿದಳು.

ಎಫೆಸಿಯರಿಗೆ ೧:೩-೪
[೩] ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.[೪] ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡನು. ತನ್ನ ಸನ್ನಿಧಿಯಲ್ಲಿ ನಾವು ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂಬುದು ಆತನ ಉದ್ದೇಶವಾಗಿತ್ತು.

ಕೊರಿಂಥಿಯರಿಗೆ ೧ ೬:೧೯-೨೦
[೧೯] ನಿಮ್ಮ ದೇಹವು ಪವಿತ್ರಾತ್ಮನಿಗೆ ಆಲಯವಾಗಿದೆ ಎಂಬುದು ನಿಮಗೆ ಗೊತ್ತಿದೆ. ಆತನು ನಿಮ್ಮೊಳಗಿದ್ದಾನೆ. ನೀವು ದೇವರಿಂದ ಆತನನ್ನು ಹೊಂದಿಕೊಂಡಿರಿ. ನೀವು ನಿಮ್ಮ ಸ್ವಂತ ಸ್ವತ್ತುಗಳಲ್ಲ.[೨೦] ನೀವು ದೇವರಿಂದ ಕ್ರಯಕ್ಕೆ ಕೊಳ್ಳಲ್ಪಟ್ಟವರು. ಆದ್ದರಿಂದ ನಿಮ್ಮ ದೇಹಗಳಿಂದ ದೇವರನ್ನು ಘನಪಡಿಸಿರಿ.

ಯೆಶಾಯನ ೪೫:೯-೧೧
[೯] “ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.[೧೦] ತಂದೆಯು ಮಕ್ಕಳನ್ನು ಹುಟ್ಟಿಸುತ್ತಾನೆ. ಮಕ್ಕಳು ತಂದೆಯನ್ನು, ‘ನನಗೆ ಜೀವ ಯಾಕೆ ಕೊಟ್ಟೆ?’ ಎಂದು ಕೇಳಲಾಗುವುದಿಲ್ಲ. ಮಕ್ಕಳು ತಮ್ಮ ತಾಯಿಗೆ, ‘ನನ್ನನ್ನು ಯಾಕೆ ಹೆತ್ತದ್ದು ಎಂದು ಕೇಳಲಾಗುವುದಿಲ್ಲ.”‘[೧೧] ದೇವರಾದ ಯೆಹೋವನು ಇಸ್ರೇಲರ ಪರಿಶುದ್ಧನಾಗಿದ್ದಾನೆ. ಆತನು ಇಸ್ರೇಲನ್ನು ಸೃಷ್ಟಿಸಿದನು. ಯೆಹೋವನು ಹೇಳುವುದೇನೆಂದರೆ, “ನಾನು ಕೈಯಾರೆ ಮಾಡಿದ ಮಕ್ಕಳ ಬಗ್ಗೆ ನೀನು ಪ್ರಶ್ನಿಸುವಿಯಾ? ನಾನು ಏನು ಮಾಡಬೇಕೆಂದು ನೀನು ನನಗೆ ಆಜ್ಞಾಪಿಸುವಿಯೋ?

ವಿಮೋಚನಾಕಾಂಡ ೨೧:೨೨-೨೫
[೨೨] “ಇಬ್ಬರು ಜಗಳವಾಡುವಾಗ ಗರ್ಭಿಣೆ ಸ್ತ್ರೀಗೆ ಪೆಟ್ಟಾಗಿ ಗರ್ಭಸ್ರಾವವಾದರೆ ಅದಕ್ಕೆ ಕಾರಣನಾದ ವ್ಯಕ್ತಿಯು ಅವಳಿಗೆ ದಂಡ ಕೊಡಬೇಕು. ಅವನು ಎಷ್ಟು ದಂಡ ಕೊಡಬೇಕೆಂಬುದನ್ನು ಅವಳ ಗಂಡನು ನ್ಯಾಯಾಧಿಪತಿಗಳ ಸಹಾಯದಿಂದ ತೀರ್ಮಾನಿಸುವನು.[೨೩] ಆದರೆ ಆ ಸ್ತ್ರೀಯು ತೀರಿಕೊಂಡರೆ ಅದಕ್ಕೆ ಕಾರಣನಾದವನಿಗೆ ಮರಣದಂಡನೆಯಾಗಬೇಕು. ನೀವು ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಿಸಬೇಕು.[೨೪] ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಪ್ರತಿಯಾಗಿ ಹಲ್ಲು, ಕೈಗೆ ಪ್ರತಿಯಾಗಿ ಕೈ, ಕಾಲಿಗೆ ಪ್ರತಿಯಾಗಿ ಕಾಲು,[೨೫] ಬರೆಗೆ ಪ್ರತಿಯಾಗಿ ಬರೆ, ಗಾಯಕ್ಕೆ ಪ್ರತಿಯಾಗಿ ಗಾಯ, ಏಟಿಗೆ ಪ್ರತಿಯಾಗಿ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.

ಕೀರ್ತನೆಗಳು ೧೩೯:೧೩-೧೬
[೧೩] ನನ್ನ ಅಂತರೀಂದ್ರಿಯಗಳನ್ನು ಸೃಷ್ಟಿಮಾಡಿದವನೂ ನೀನೇ. ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವನೂ ನೀನೇ.[೧೪] ನಿನ್ನ ಎಲ್ಲಾ ಅದ್ಭುತಕಾರ್ಯಗಳಿಗಾಗಿ ನಿನಗೆ ಕೃತಜ್ಞತಾಸ್ತುತಿ ಮಾಡುವೆನು. ನಿನ್ನ ಕಾರ್ಯಗಳು ಅದ್ಭುತಕರವಾಗಿವೆಯೆಂದು ನಾನು ಗ್ರಹಿಸಿಕೊಂಡಿರುವೆ.[೧೫] ನನ್ನ ವಿಷಯವೆಲ್ಲಾ ನಿನಗೆ ಗೊತ್ತಿದೆ. ತಾಯಿಗರ್ಭದಲ್ಲಿ ನನ್ನ ದೇಹ ರೂಪಗೊಳ್ಳುತ್ತಿದ್ದಾಗ ನನ್ನ ಎಲುಬುಗಳು ಬೆಳೆಯುವುದನ್ನೂ ನೀನು ನೋಡಿದೆ.[೧೬] ನನ್ನ ದೇಹದ ಅಂಗಾಂಗಗಳು ಬೆಳೆಯುವುದನ್ನೂ ನೀನು ಗಮನಿಸಿದೆ. ನನ್ನ ಆಯುಷ್ಕಾಲದ ಮೊದಲನೆ ದಿನ ಆರಂಭವಾಗುವುದಕ್ಕಿಂತ ಮೊದಲೇ ಅದರ ಎಲ್ಲಾ ದಿನಗಳು ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು.

ಲೂಕನು ೧:೪೧-೪೪
[೪೧] ಎಲಿಜಬೇತಳು ಮರಿಯಳ ವಂದನೆಯನ್ನು ಕೇಳಿದಾಗ, ಆಕೆಯ ಗರ್ಭದಲ್ಲಿದ್ದ ಮಗು ನಲಿದಾಡಿತು. ಆಗ ಎಲಿಜಬೇತಳು ಪವಿತ್ರಾತ್ಮಭರಿತಳಾಗಿ[೪೨] ಹರ್ಷೋದ್ಗಾರದಿಂದ ಹೀಗೆಂದಳು: “ದೇವರು ನಿನ್ನನ್ನು (ಮರಿಯ) ಬೇರೆಲ್ಲಾ ಸ್ತ್ರೀಯರಿಗಿಂತ ಹೆಚ್ಚಾಗಿ ಆಶೀರ್ವದಿಸಿದ್ದಾನೆ. ನಿನ್ನಲ್ಲಿ ಜನಿಸಲಿರುವ ಮಗುವನ್ನು ದೇವರು ಆಶೀರ್ವದಿಸಿದ್ದಾನೆ.[೪೩] ನನ್ನ ಪ್ರಭುವಿನ ತಾಯಿಯಾದ ನೀನೇ ನನ್ನ ಬಳಿಗೆ ಬಂದದ್ದು ನನಗೆಷ್ಟೋ ಭಾಗ್ಯ![೪೪] ನಿನ್ನ ಧ್ವನಿಯನ್ನು ಕೇಳಿದಾಗ, ನನ್ನೊಳಗಿರುವ ಕೂಸು ಸಂತೋಷದಿಂದ ನಲಿದಾಡಿತು.

ವಿಮೋಚನಾಕಾಂಡ ೨೦:೧-೧೩
[೧] ಬಳಿಕ ಯೆಹೋವನು ಈ ದಶಾಜ್ಞೆಗಳನ್ನು ಅವರಿಗೆ ಕೊಟ್ಟನು:[೨] “ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.[೩] “ನನ್ನನ್ನಲ್ಲದೆ ಬೇರೆ ಯಾವ ದೇವರುಗಳನ್ನೂ ನೀವು ಆರಾಧಿಸಬಾರದು.[೪] “ನೀವು ಯಾವ ವಿಗ್ರಹಗಳನ್ನೂ ಮಾಡಬಾರದು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ನೀರಿನಲ್ಲಾಗಲಿ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜಿಸಲೂ ಬಾರದು.[೫] ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.[೬] ಆದರೆ ನನ್ನ ಆಜ್ಞೆಗಳಿಗೆ ವಿಧೇಯರಾಗಿರುವವರಿಗೆ ಅವರ ಸಾವಿರ ತಲೆಮಾರುಗಳವರೆಗೂ ದಯೆತೋರಿಸುವೆನು.[೭] “ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.[೮] “ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಅದನ್ನು ಆಚರಿಸಿರಿ.[೯] ವಾರದ ಆರು ದಿನಗಳಲ್ಲಿ ಕೆಲಸಮಾಡಿರಿ.[೧೦] ಆದರೆ ಏಳನೆ ದಿನವು ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಮೀಸಲಾಗಿರುವ ವಿಶ್ರಾಂತಿ ದಿನವಾಗಿದೆ. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. ನೀವಾಗಲಿ ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಸೇವಕರಾಗಲಿ ಸೇವಕಿಯರಾಗಲಿ ನಿಮ್ಮ ಪಶುಗಳಾಗಲಿ ನಿಮ್ಮಲ್ಲಿರುವ ವಿದೇಶಿಯರಾಗಲಿ ಕೆಲಸ ಮಾಡಬಾರದು.[೧೧] ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.[೧೨] “ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.[೧೩] “ನೀವು ಯಾರನ್ನೂ ಕೊಲೆ ಮಾಡಬಾರದು.

Kannada Bible 1934
Public Domain: 1934