A A A A A

ಪಾಪಗಳು: [ವ್ಯಭಿಚಾರ]


ಕೊರಿಂಥಿಯರಿಗೆ ೧ ೬:೧೮
ಆದ್ದರಿಂದ ಲೈಂಗಿಕ ಪಾಪದಿಂದ ಓಡಿಹೋಗಿರಿ. ಒಬ್ಬನು ಮಾಡುವ ಇತರ ಪಾಪಗಳೆಲ್ಲಾ ಅವನ ದೇಹದ ಹೊರಗಾಗಿವೆ. ಆದರೆ ಲೈಂಗಿಕ ಪಾಪ ಮಾಡುವ ವ್ಯಕ್ತಿ ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.

ವಿಮೋಚನಾಕಾಂಡ ೨೦:೧೪
“ನೀವು ವ್ಯಭಿಚಾರ ಮಾಡಬಾರದು.

ಹಿಬ್ರಿಯರಿಗೆ ೧೩:೪
ಮದುವೆಯನ್ನು ಜನರೆಲ್ಲರೂ ಗೌರವಿಸಬೇಕು. ಗಂಡ ಹೆಂಡತಿಯರ ಸಂಬಂಧ ಪರಿಶುದ್ಧವಾಗಿರಬೇಕು. ಲೈಂಗಿಕ ಪಾಪಗಳನ್ನು ಮಾಡುವವರು ಮತ್ತು ವ್ಯಭಿಚಾರವನ್ನು ಮಾಡುವವರು ದೇವರ ತೀರ್ಪಿಗೆ ಒಳಗಾಗಿದ್ದಾರೆ.

ಯಕೋಬನು ೪:೧೭
ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದ್ದರೂ ಒಳ್ಳೆಯದನ್ನು ಮಾಡದಿರುವವನು ಪಾಪವನ್ನು ಮಾಡುವವನಾಗಿದ್ದಾನೆ.

ಯೆರೆಮೀಯನ ಗ್ರಂಥ ೧೩:೨೭
ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಙೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”

ಯೊವಾನ್ನನು ೧ ೧:೯
ಆದರೆ ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ, ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿ ನಮ್ಮನ್ನು ಶುದ್ಧೀಕರಿಸುತ್ತಾನೆ.

ಲೂಕನು ೧೬:೧೮
"ತನ್ನ ಪತ್ನಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ. ವಿವಾಹವಿಚ್ಛೇದನ ಹೊಂದಿದ ಸ್ತ್ರೀಯನ್ನು ಮದುವೆ ಆಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.”

ಮತ್ತಾಯನು ೧೯:೯
ನಾನು ನಿಮಗೆ ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ. ಮೊದಲಿನ ಹೆಂಡತಿಯು ಬೇರೊಬ್ಬನೊಡನೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವನು ಆಕೆಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆ ಆಗಬಹುದು” ಎಂದು ಉತ್ತರಿಸಿದನು.

ಜ್ಞಾನೋಕ್ತಿಗಳು ೬:೩೨
ಆದರೆ ವ್ಯಭಿಚಾರ ಮಾಡುವವನು ಮೂರ್ಖನಾಗಿದ್ದಾನೆ. ಅದನ್ನು ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುತ್ತಾನೆ.

ರೋಮನರಿಗೆ ೭:೨-೩
[೨] ನಾನು ನಿಮಗೆ ಒಂದು ಉದಾಹರಣೆಯನ್ನು ಕೊಡುತ್ತೇನೆ: ಗಂಡನು ಬದುಕಿರುವ ತನಕ ಹೆಂಡತಿಯು ಕಾನೂನಿನ ಪ್ರಕಾರ ಅವನಿಗೆ ಬದ್ಧಳಾಗಿರಬೇಕು. ಆದರೆ ಆಕೆಯ ಗಂಡನು ತೀರಿಕೊಂಡರೆ, ವಿವಾಹದ ಕಾನೂನಿನಿಂದ ಆಕೆಯು ಬಿಡುಗಡೆಯಾಗಿದ್ದಾಳೆ.[೩] ಆದರೆ ತನ್ನ ಗಂಡನು ಜೀವದಿಂದಿರುವಾಗಲೇ ಮತ್ತೊಬ್ಬನನ್ನು ಮದುವೆ ಮಾಡಿಕೊಂಡರೆ ಆಕೆಯು ವ್ಯಭಿಚಾರವೆಂಬ ಅಪರಾಧಕ್ಕೆ ಗುರಿಯಾಗುತ್ತಾಳೆಂದು ಧರ್ಮಶಾಸ್ತ್ರವು ಹೇಳುತ್ತದೆ. ಆದರೆ ಆಕೆಯ ಗಂಡನು ಸತ್ತುಹೋದರೆ ಆಕೆಯು ವಿವಾಹದ ಹಂಗಿನಿಂದ ಬಿಡುಗಡೆಯಾಗಿದ್ದಾಳೆ. ಹೀಗಿರಲಾಗಿ, ತನ್ನ ಗಂಡನು ತೀರಿಕೊಂಡ ಮೇಲೆ ಮತ್ತೊಬ್ಬನನ್ನು ಮದುವೆ ಮಾಡಿಕೊಂಡರೆ ಆಕೆಯು ವ್ಯಭಿಚಾರವೆಂಬ ಅಪರಾಧಕ್ಕೆ ಗುರಿಯಾಗುವುದಿಲ್ಲ.

ಮಾರ್ಕನು ೧೦:೧೧-೧೨
[೧೧] ಅದಕ್ಕೆ ಯೇಸು, “ತನ್ನ ಹೆಂಡತಿಯನ್ನು ಬಿಟ್ಟು, ಬೇರೆ ಸ್ತ್ರೀಯನ್ನು ಮದುವೆಯಾಗುವವನು ತನ್ನ ಹೆಂಡತಿಗೆ ದ್ರೋಹಮಾಡಿ ವ್ಯಭಿಚಾರಿಯಾಗಿದ್ದಾನೆ.[೧೨] ತನ್ನ ಗಂಡನಿಗೆ ವಿಚ್ಛೇದನಪತ್ರ ಕೊಟ್ಟು ಬೇರೆ ಪುರುಷನನ್ನು ಮದುವೆಯಾಗುವ ಸ್ತ್ರೀಯೂ ವ್ಯಭಿಚಾರಿಣಿಯಾಗಿದ್ದಾಳೆ” ಎಂದು ಉತ್ತರಿಸಿದನು.

ಮತ್ತಾಯನು ೫:೨೭-೩೨
[೨೭] “‘ವ್ಯಭಿಚಾರ ಮಾಡಬೇಡಿರಿ’ ಎಂದು ಹೇಳಿದ್ದನ್ನು ನೀವು ಕೇಳಿದ್ದೀರಿ.[೨೮] ಆದರೆ ಒಬ್ಬನು ಪರಸ್ತ್ರೀಯನ್ನು ನೋಡಿ ಅವಳೊಂದಿಗೆ ಲೈಂಗಿಕ ಸಂಪರ್ಕ ಹೊಂದಲು ಬಯಸಿದರೆ, ಅವನು ಆಗಲೇ ತನ್ನ ಮನಸ್ಸಿನಲ್ಲಿ ಅವಳೊಂದಿಗೆ ವ್ಯಭಿಚಾರವನ್ನು ಮಾಡಿದ್ದಾನೆಂದು ನಾನು ನಿಮಗೆ ಹೇಳುತ್ತೇನೆ.[೨೯] ನಿನ್ನ ಬಲಗಣ್ಣು ನಿನ್ನನ್ನು ಪಾಪಕ್ಕೊಳಗಾಗುವಂತೆ ಮಾಡಿದರೆ, ಅದನ್ನು ಕಿತ್ತು ಬಿಸಾಡು. ನಿನ್ನ ಪೂರ್ಣಶರೀರವು ನರಕಕ್ಕೆ ಬೀಳುವುದಕ್ಕಿಂತ ನಿನ್ನ ಶರೀರದ ಒಂದು ಭಾಗವನ್ನು ಕಳೆದುಕೊಳ್ಳುವುದೇ ಮೇಲು.[೩೦] ನಿನ್ನ ಬಲಗೈ ನಿನ್ನನ್ನು ಪಾಪಕ್ಕೊಳಗಾಗುವಂತೆ ಮಾಡಿದರೆ, ಅದನ್ನು ಕತ್ತರಿಸಿ ಬಿಸಾಡು. ನಿನ್ನ ಪೂರ್ಣ ಶರೀರವು ನರಕಕ್ಕೆ ಹೋಗುವುದಕ್ಕಿಂತ ನಿನ್ನ ಶರೀರದ ಒಂದು ಭಾಗವನ್ನು ಕಳೆದುಕೊಳ್ಳುವುದೇ ಮೇಲು.[೩೧] “‘ತನ್ನ ಹೆಂಡತಿಯನ್ನು ಬಿಟ್ಟುಬಿಡಬೇಕೆಂದಿರುವವನು, ಅವಳಿಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ’ ಎಂದು ಹೇಳಲ್ಪಟ್ಟಿದೆ.[೩೨] ಆದರೆ ನಾನು ಹೇಳುವುದೇನೆಂದರೆ, ತನ್ನ ಹೆಂಡತಿಯನ್ನು ಬಿಟ್ಟುಬಿಡುವವನೇ ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ. ಹೆಂಡತಿಯು ಬೇರೊಬ್ಬ ಪುರುಷನೊಂದಿಗೆ ಲೈಂಗಿಕ ಸಂಬಂಧವಿಟ್ಟುಕೊಂಡಿದ್ದರೆ ಮಾತ್ರ ಅವಳನ್ನು ಗಂಡನು ಬಿಟ್ಟುಬಿಡಬಹುದು. ವಿವಾಹ ವಿಚ್ಛೇದನ ಹೊಂದಿದವಳನ್ನು ಮದುವೆಯಾಗುವವನು ಸಹ ವ್ಯಭಿಚಾರ ಮಾಡಿದವನಾಗುತ್ತಾನೆ.

ಕೊರಿಂಥಿಯರಿಗೆ ೧ ೬:೯-೧೬
[೯] ಅಧರ್ಮಿಗಳು ದೇವರ ರಾಜ್ಯವನ್ನು ಪಡೆಯುವುದಿಲ್ಲವೆಂದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ದೇವರ ರಾಜ್ಯಕ್ಕೆ ಸೇರದ ಜನರು ಯಾರ್ಯಾರೆಂದರೆ: ಲೈಂಗಿಕ ಪಾಪ ಮಾಡುವವರು, ವಿಗ್ರಹಗಳನ್ನು ಪೂಜಿಸುವವರು, ವ್ಯಭಿಚಾರ ಮಾಡುವವರು, ಸಲಿಂಗಕಾಮಿಗಳು, ಕದಿಯುವವರು, ಸ್ವಾರ್ಥಿಗಳು, ಕುಡುಕರು, ಬೈಯುವವರು ಮತ್ತು ಮೋಸಗಾರರು. (Verses 9-10)[೧೦] See verse 9[೧೧] ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರಾತ್ಮನ ಮೂಲಕವಾಗಿಯೂ ನೀವು ತೊಳೆಯಲ್ಪಟ್ಟಿರಿ; ಪರಿಶುದ್ಧರಾದಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿಕೊಂಡಿರಿ.[೧೨] "ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ಪ್ರತಿಯೊಂದೂ ಜನರಿಗೆ ಪ್ರಯೋಜಕವಲ್ಲ. “ಪ್ರತಿಯೊಂದನ್ನೂ ಮಾಡುವುದಕ್ಕೆ ನನಗೆ ಸ್ವತಂತ್ರವಿದೆ.” ಆದರೆ ನಾನು ಯಾವುದನ್ನೂ ನನ್ನ ಒಡೆಯನನ್ನಾಗಿ ಮಾಡಿಕೊಳ್ಳುವುದಿಲ್ಲ.[೧೩] "ಆಹಾರವು ಹೊಟ್ಟೆಗೋಸ್ಕರವಿದೆ, ಹೊಟ್ಟೆಯು ಆಹಾರಕ್ಕೋಸ್ಕರವಿದೆ.” ಹೌದು, ದೇವರು ಅವೆರಡನ್ನು ನಾಶಮಾಡುವನು. ದೇಹವಿರುವುದು ಲೈಂಗಿಕ ಪಾಪಮಾಡುವುದಕ್ಕಾಗಿಯಲ್ಲ. ದೇಹವು ಪ್ರಭುವಿಗೋಸ್ಕರವಿದೆ, ಪ್ರಭುವು ದೇಹಕ್ಕೋಸ್ಕರವಿದ್ದಾನೆ.[೧೪] ದೇವರು ತನ್ನ ಶಕ್ತಿಯಿಂದ ಪ್ರಭು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ದೇವರು ನಮ್ಮನ್ನು ಸಹ ಜೀವಂತವಾಗಿ ಎಬ್ಬಿಸುವನು.[೧೫] ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಹೀಗಿರಲಾಗಿ, ನಾನು ಕ್ರಿಸ್ತನ ಅಂಗಗಳನ್ನು ತೆಗೆದುಕೊಂಡು ಅವುಗಳನ್ನು ಸೂಳೆಯ ಅಂಗಗಳನ್ನಾಗಿ ಮಾಡಕೂಡದು.[೧೬] "ಇಬ್ಬರೂ ಒಂದೇ ದೇಹವಾಗುತ್ತಾರೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ಆದ್ದರಿಂದ ಸೂಳೆಯೊಂದಿಗೆ ಲೈಂಗಿಕ ಸಂಬಂಧವಿರುವವನು ಆಕೆಯೊಂದಿಗೆ ಒಂದೇ ದೇಹವಾಗಿದ್ದಾನೆ ಎಂಬುದು ನಿಮಗೆ ತಿಳಿದಿರಬೇಕು.

ಲೂಕನು ೧೮:೧೮-೨೦
[೧೮] ಒಬ್ಬ ಯೆಹೂದ್ಯನಾಯಕನು ಯೇಸುವಿಗೆ, “ಒಳ್ಳೆಯ ಉಪದೇಶಕನೇ, ನಿತ್ಯಜೀವ ಹೊಂದಲು ನಾನೇನು ಮಾಡಬೇಕು?” ಎಂದು ಕೇಳಿದನು.[೧೯] ಯೇಸು ಅವನಿಗೆ, “ನನ್ನನ್ನು ಒಳ್ಳೆಯವನೆಂದು ನೀನು ಏಕೆ ಕರೆಯುತ್ತೀ? ದೇವರೊಬ್ಬನೇ ಒಳ್ಳೆಯವನು.[೨೦] ದೇವರ ಈ ಆಜ್ಞೆಗಳು ನಿನಗೆ ಗೊತ್ತೇ ಇವೆ: ‘ನೀನು ವ್ಯಭಿಚಾರ ಮಾಡಬಾರದು, ಯಾರನ್ನೂ ಕೊಲೆಮಾಡಬಾರದು, ಯಾವುದನ್ನೂ ಕದಿಯಬಾರದು, ಬೇರೆ ಜನರ ಬಗ್ಗೆ ನೀನು ಸುಳ್ಳನ್ನು ಹೇಳಬಾರದು ಮತ್ತು ನೀನು ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’” ಎಂದನು.

ಥೆಸೆಲೋನಿಯರಿಗೆ ೧ ೪:೩-೫
[೩] ನೀವು ಪವಿತ್ರರಾಗಿರಬೇಕೆ0ಬುದು ದೇವರ ಚಿತ್ತವಾಗಿದೆ. ಆದುದರಿ0ದ ನೀವು ಲೈ0ಗಿಕ ಪಾಪಗಳಿ0ದ ದೂರವಿರಿ.[೪] ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಸ್ವ0ತ ದೇಹಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕೆ0ಬುದು ದೇವರ ಅಪೇಕ್ಷೆ. ನಿಮ್ಮ ದೇಹವನ್ನು ಪವಿತ್ರವಾದ ಮಾರ್ಗದಲ್ಲಿ ಬಳಸಿದರೆ, ದೇವರಿಗೆ ಗೌರವವನ್ನು ನೀಡಿದ0ತಾಗುವುದು.[೫] ನಿಮ್ಮ ದೇಹವನ್ನು ಲೈ0ಗಿಕ ಪಾಪಗಳಿಗಾಗಿ ಬಳಸಬೇಡಿ. ದೇವರನ್ನು ತಿಳಿಯದ ಜನರು ತಮ್ಮ ದೇಹಗಳನ್ನು ಅದಕ್ಕೆ ಬಳಸುತ್ತಾರೆ.

ಮಾರ್ಕನು ೭:೨೦-೨೩
[೨೦] ಒಬ್ಬ ವ್ಯಕ್ತಿಯ ಅಂತರಂಗದಲ್ಲಿ ಈ ಕೆಟ್ಟ ಆಲೋಚನೆಗಳೆಲ್ಲವೂ ಆರಂಭವಾಗುತ್ತವೆ: ದುರಾಲೋಚನೆ, ಲೈಂಗಿಕಪಾಪ, ಕಳ್ಳತನ, ಕೊಲೆ,[೨೧] ವ್ಯಭಿಚಾರ, ಹಣದಾಶೆ, ಕೆಡುಕುತನ, ಭಂಡತನ, ಅಸೂಯೆ, ಚಾಡಿಕೋರತನ, ಅಹಂಕಾರ ಮತ್ತು ಬುದ್ಧಿಗೇಡಿತನ.[೨೨] ಈ ಕೆಟ್ಟ ವಿಷಯಗಳೆಲ್ಲಾ ಮನುಷ್ಯನ ಅಂತರಂಗದಿಂದ ಬಂದು ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ” ಎಂದು ಹೇಳಿದನು.[೨೩] ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸುತ್ತಮುತ್ತಲಿನ ಪ್ರದೇಶಕ್ಕೆ ಹೋದನು. ಯೇಸು ಅಲ್ಲಿ ಒಂದು ಮನೆಯೊಳಕ್ಕೆ ಹೋದನು. ತಾನು ಅಲ್ಲಿರುವುದು ಅಲ್ಲಿಯ ಜನರಿಗೆ ತಿಳಿಯಬಾರದೆಂಬುದು ಆತನ ಅಪೇಕ್ಷೆಯಾಗಿತ್ತು. ಆದರೆ ಯೇಸುವಿಗೆ ಅಡಗಿಕೊಳ್ಳಲಿಕ್ಕಾಗಲಿಲ್ಲ.

ಮತ್ತಾಯನು ೧೫:೧೭-೨೦
[೧೭] ಒಬ್ಬ ಮನುಷ್ಯನ ಬಾಯಿಂದ ಆಹಾರ ಹೊಟ್ಟೆಯೊಳಕ್ಕೆ ಹೋಗುತ್ತದೆ. ನಂತರ ಅದು ದೇಹದಿಂದ ಹೊರಗೆ ಹೋಗಿಬಿಡುತ್ತದೆ. ಇದು ನಿಮಗೆ ತಿಳಿದೇ ಇದೆ.[೧೮] ಆದರೆ ಒಬ್ಬ ಮನುಷ್ಯನ ಬಾಯಿಂದ ಹೊರಡುವ ಕೆಟ್ಟಮಾತುಗಳು ಅವನ ಆಲೋಚನೆಯಿಂದ ಉದ್ಭವಿಸಿ ಅವನನ್ನು ಅಶುದ್ಧನನ್ನಾಗಿ ಮಾಡುತ್ತವೆ.[೧೯] ಮನುಷ್ಯನ ಮನಸ್ಸಿನಲ್ಲಿ ದುರಾಲೋಚನೆ, ಕೊಲೆ, ವ್ಯಭಿಚಾರ, ಸೂಳೆಗಾರಿಕೆ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ಬೈಗಳು ಹೊರಟುಬರುತ್ತವೆ.[೨೦] ಇವು ಮನುಷ್ಯನನ್ನು ಅಶುದ್ಧನನ್ನಾಗಿ ಮಾಡುತ್ತವೆ. ಆದರೆ ಊಟಕ್ಕೆ ಮೊದಲು ಕೈತೊಳೆಯದ ಮಾತ್ರಕ್ಕೆ ಮನುಷ್ಯನೇನೂ ಅಶುದ್ಧನಾಗುವುದಿಲ್ಲ” ಎಂದು ಹೇಳಿದನು.

ಜ್ಞಾನೋಕ್ತಿಗಳು ೫:೧೮-೨೩
[೧೮] ಆದ್ದರಿಂದ ಯೌವನಪ್ರಾಯದಲ್ಲಿ ನೀನು ಮದುವೆಮಾಡಿಕೊಂಡ ಸ್ತ್ರೀಯೊಡನೆ ಸಂತೋಷಿಸು.[೧೯] ಆಕೆ ಸುಂದರವಾದ ಜಿಂಕೆಯಂತೆಯೂ ಅಂದವಾದ ಕಾಡುಮೇಕೆಯಂತೆಯೂ ಇದ್ದಾಳೆ. ಆಕೆಯ ಸ್ತನಗಳು ನಿನ್ನನ್ನು ಸಂಪೂರ್ಣವಾಗಿ ತೃಪ್ತಿಪಡಿಸಲಿ. ಆಕೆಯ ಪ್ರೀತಿಯಲ್ಲೇ ಲೀನವಾಗಿರು.[೨೦] ಪರಸ್ತ್ರೀಯಲ್ಲಿ ಮೋಹಗೊಂಡು ಆಕೆಯನ್ನು ಅಪ್ಪಿಕೊಳ್ಳಬೇಡ.[೨೧] ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ; ಯೆಹೋವನು ಅವುಗಳನ್ನು ಪರೀಕ್ಷಿಸುತ್ತಾನೆ.[೨೨] ಕೆಡುಕನ ದುಷ್ಕೃತ್ಯಗಳು ಅವನನ್ನೇ ಹಿಡಿಯುತ್ತವೆ. ಅವನ ಪಾಪಗಳು ಹಗ್ಗದಂತೆ ಅವನನ್ನೇ ಬಂಧಿಸುತ್ತವೆ.[೨೩] ಅವನು ಬುದ್ಧಿವಾದವನ್ನು ತಿರಸ್ಕರಿಸಿದ್ದರಿಂದ ಸಾಯುವನು; ತನ್ನ ಅತಿಮೂರ್ಖತನದಿಂದ ದಾರಿತಪ್ಪುವನು.

ಯೊವಾನ್ನನು ೮:೪-೧೧
[೪] ಯೇಸುವಿಗೆ, “ಉಪದೇಶಕನೇ, ಈ ಸ್ತ್ರೀಯು ವ್ಯಭಿಚಾರ ಮಾಡುತ್ತಿದ್ದಾಗಲೇ ಸಿಕ್ಕಿಕೊಂಡಳು.[೫] ಇಂಥ ಕಾರ್ಯವನ್ನು ಮಾಡುವ ಪ್ರತಿಯೊಬ್ಬ ಸ್ತ್ರೀಯನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯ ಧರ್ಮಶಾಸ್ತ್ರವು ಆಜ್ಞಾಪಿಸುತ್ತದೆ. ಈಗ ನಾವೇನು ಮಾಡಬೇಕು? ನೀನೇ ಹೇಳು” ಎಂದರು.[೬] ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿದರೆ ಆತನ ಮೇಲೆ ಅಪವಾದ ಹೊರಿಸಲು ಸಾಧ್ಯವಾಗುತ್ತದೆ ಎಂದು ಈ ಪ್ರಶ್ನೆಯನ್ನು ಕೇಳಿದರು. ಆದರೆ ಯೇಸು ತಲೆ ಬಾಗಿಸಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆಯತೊಡಗಿದನು.[೭] ಯೆಹೂದ್ಯ ನಾಯಕರು ಅದೇ ಪ್ರಶ್ನೆಯನ್ನು ಮತ್ತೆ ಕೇಳಿದರು. ಆಗ ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪ ಮಾಡಿಲ್ಲದವನು ಆಕೆಯ ಮೇಲೆ ಮೊದಲನೆಯ ಕಲ್ಲನ್ನು ಎಸೆಯಲಿ” ಎಂದು ಹೇಳಿ,[೮] ಮತ್ತೆ ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದನು.[೯] ಯೇಸುವಿನ ಈ ಮಾತನ್ನು ಕೇಳಿದ ಆ ಜನರು ಒಬ್ಬೊಬ್ಬರಾಗಿ ಅಲ್ಲಿಂದ ಹೊರಟುಹೋದರು. ಮೊದಲು ಹಿರಿಯರು, ನಂತರ ಇತರರು ಹೊರಟುಹೋದರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ಆ ಸ್ತ್ರೀ. ಆಕೆಯು ಆತನ ಮುಂದೆ ನಿಂತುಕೊಂಡಿದ್ದಳು.[೧೦] ಯೇಸು ನೆಟ್ಟಗೆ ಕುಳಿತುಕೊಂಡು, “ಅಮ್ಮಾ, ನಿನ್ನ ಮೇಲೆ ತಪ್ಪು ಹೊರಿಸಿದವರು ಎಲ್ಲಿದ್ದಾರೆ? ಅವರಲ್ಲಿ ಒಬ್ಬರಾದರೂ ನಿನಗೆ ಶಿಕ್ಷೆ ವಿಧಿಸಲಿಲ್ಲವೇ?” ಎಂದು ಕೇಳಿದನು.[೧೧] ಆ ಸ್ತ್ರೀಯು, “ಸ್ವಾಮೀ, ಅವರಲ್ಲಿ ಯಾರೂ ನನಗೆ ತೀರ್ಪು ನೀಡಲಿಲ್ಲ” ಎಂದು ಉತ್ತರಕೊಟ್ಟಳು. ಯೇಸು ಆಕೆಗೆ, “ಆದ್ದರಿಂದ ನಾನು ಸಹ ನಿನಗೆ ತೀರ್ಪು ನೀಡುವುದಿಲ್ಲ. ಈಗ ನೀನು ಹೋಗಬಹುದು, ಆದರೆ ಇನ್ನು ಮುಂದೆ ಪಾಪ ಮಾಡಬೇಡ” ಎಂದು ಹೇಳಿದನು.

ಜ್ಞಾನೋಕ್ತಿಗಳು ೬:೨೦-೩೫
[೨೦] ನನ್ನ ಮಗನೇ, ನಿನ್ನ ತಂದೆಯ ಆಜ್ಞೆಗಳನ್ನು ಜ್ಞಾಪಕಮಾಡಿಕೋ. ನಿನ್ನ ತಾಯಿಯ ಉಪದೇಶಗಳನ್ನು ಮರೆಯಬೇಡ.[೨೧] ಯಾವಾಗಲೂ ಅವರ ಮಾತುಗಳನ್ನು ಜ್ಞಾಪಕಮಾಡಿಕೊ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೊ; ನಿನ್ನ ಹೃದಯದ ಮೇಲೆ ಇಟ್ಟುಕೊ.[೨೨] ನೀನು ಹೋಗುವಲ್ಲೆಲ್ಲಾ ಅವರ ಉಪದೇಶಗಳು ನಿನ್ನನ್ನು ನಡೆಸುತ್ತವೆ. ನೀನು ಮಲಗಿರುವಾಗಲೂ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಡನೆ ಮಾತಾಡಿ ನಿನಗೆ ಮಾರ್ಗದರ್ಶನ ನೀಡುತ್ತವೆ.[೨೩] ನಿನ್ನ ತಂದೆತಾಯಿಗಳ ಆಜ್ಞೆಗಳು ಮತ್ತು ಉಪದೇಶಗಳು ನಿನಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿವೆ. ಅವು ನಿನ್ನನ್ನು ಸರಿಪಡಿಸಿ ಜೀವಮಾರ್ಗದಲ್ಲಿ ನಡೆಯಲು ಸಹಾಯಮಾಡುತ್ತವೆ.[೨೪] ಅವು ನಿನ್ನನ್ನು ಕೆಟ್ಟ ಹೆಂಗಸಿನ ಬಳಿಗೆ ಹೋಗದಂತೆ ತಡೆಯುತ್ತವೆ; ಗಂಡನನ್ನು ಬಿಟ್ಟಂಥ ಹೆಂಗಸಿನ ನಯವಾದ ನುಡಿಗಳಿಂದ ತಪ್ಪಿಸಿ ಕಾಪಾಡುತ್ತವೆ.[೨೫] ಆಕೆಯ ಸೌಂದರ್ಯವನ್ನು ಕಂಡು ಹೃದಯದಲ್ಲಿ ಆಸೆಪಡಬೇಡ. ಆಕೆಯ ಕಣ್ಣುಗಳು ನಿನ್ನನ್ನು ವಶಮಾಡಿಕೊಳ್ಳಲು ಬಿಡಬೇಡ.[೨೬] ಸೂಳೆಯು ಒಂದು ರೊಟ್ಟಿಗೇ ಬರಬಹುದು; ಆದರೆ ಬೇರೊಬ್ಬನ ಹೆಂಡತಿಗೆ ನಿನ್ನ ಜೀವವನ್ನೇ ಕಳೆದುಕೊಳ್ಳಬೇಕಾಗುವುದು.[೨೭] ಮಡಿಲಲ್ಲಿ ಬೆಂಕಿಯನ್ನಿಟ್ಟುಕೊಂಡರೆ ಬಟ್ಟೆ ಸುಡುವುದಿಲ್ಲವೇ?[೨೮] ಉರಿಯುವ ಕೆಂಡದ ಮೇಲೆ ನಡೆದರೆ ಪಾದಗಳು ಸುಟ್ಟುಹೋಗುವುದಿಲ್ಲವೇ?[೨೯] ಬೇರೊಬ್ಬನ ಹೆಂಡತಿಯೊಡನೆ ಮಲಗಿಕೊಳ್ಳುವವನಿಗೆ ಇದೇ ರೀತಿಯಾಗುವುದು. ಅವನು ದಂಡನೆ ಅನುಭವಿಸುವನು.[೩೦] ಹಸಿವೆಗೊಂಡಿರುವವನು ಕದ್ದುತಿಂದರೂ ತಿನ್ನಬಹುದು. ಅವನು ಸಿಕ್ಕಿಕೊಂಡರೆ ತಾನು ಕದ್ದದ್ದಕ್ಕಿಂತ ಏಳರಷ್ಟು ಹೆಚ್ಚಾಗಿ ಕೊಡಬೇಕು. ಒಂದುವೇಳೆ ಅವನು ತನ್ನಲ್ಲಿರುವ ಪ್ರತಿಯೊಂದನ್ನೂ ಕೊಡಬೇಕಾಗಬಹುದು! ಆದರೆ ಬೇರೆಯವರು ಅವನನ್ನು ಅರ್ಥಮಾಡಿಕೊಳ್ಳುತ್ತಾರೆ; ಅವನ ಬಗ್ಗೆ ಅವರಿಗಿರುವ ಗೌರವವು ಕಳೆದು ಹೋಗುವುದಿಲ್ಲ. (Verses 30-31)[೩೧] See verse 30[೩೨] ಆದರೆ ವ್ಯಭಿಚಾರ ಮಾಡುವವನು ಮೂರ್ಖನಾಗಿದ್ದಾನೆ. ಅದನ್ನು ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುತ್ತಾನೆ.[೩೩] ಅವನಿಗೆ ಹೊಡೆತಬೀಳುವುದು; ಅವಮಾನವಾಗುವುದು. ಆ ನಾಚಿಕೆಯು ಅವನನ್ನು ಬಿಟ್ಟುಹೋಗುವುದೇ ಇಲ್ಲ.[೩೪] ಆಕೆಯ ಗಂಡನು ಮತ್ಸರದಿಂದ ಬಹು ಕೋಪಗೊಳ್ಳುವನು; ಕರುಣೆತೋರದೆ ಅವನ ಮೇಲೆ ಸೇಡುತೀರಿಸಿಕೊಳ್ಳುವನು.[೩೫] ಏನೇ ಕೊಟ್ಟರೂ, ಎಷ್ಟೇ ಹಣ ಕೊಟ್ಟರೂ ಅವನ ಕೋಪವನ್ನು ತಡೆಯಲಾಗುವುದಿಲ್ಲ.

ಜ್ಞಾನೋಕ್ತಿಗಳು ೫:೩-೨೨
[೩] ಮತ್ತೊಬ್ಬನ ಹೆಂಡತಿಯ ಮಾತುಗಳು ಜೇನಿನಂತೆ ಸಿಹಿಯಾಗಿವೆ; ಎಣ್ಣೆಗಿಂತ ನಯವಾಗಿವೆ.[೪] ಆದರೆ ಕೊನೆಗೆ ಆಕೆಯು ವಿಷದಂತೆ ಕಹಿಯಾಗುವಳು; ಖಡ್ಗದಂತೆ ತೀಕ್ಷ್ಣವಾಗುವಳು.[೫] ಆಕೆಯ ಹೆಜ್ಜೆಗಳು ಮರಣದ ಕಡೆಗೆ ಹೋಗುತ್ತವೆ. ಆಕೆ ನಿನ್ನನ್ನು ನೇರವಾಗಿ ಪಾತಾಳಕ್ಕೆ ನಡೆಸುತ್ತಾಳೆ![೬] ಆಕೆಯನ್ನು ಹಿಂಬಾಲಿಸಬೇಡ! ಆಕೆ ನೀತಿಮಾರ್ಗವನ್ನು ಬಿಟ್ಟುಹೋಗಿದ್ದಾಳೆ; ಅದು ಆಕೆಗೆ ಗೊತ್ತೇ ಇಲ್ಲ. ಎಚ್ಚರಿಕೆಯಿಂದಿರು! ಜೀವ ಮಾರ್ಗವನ್ನು ಹಿಂಬಾಲಿಸು![೭] ಇಂತಿರಲು, ನನ್ನ ಮಗನೇ, ನನಗೆ ಕಿವಿಗೊಡು, ನನ್ನ ಮಾತುಗಳನ್ನು ಮರೆಯಬೇಡ.[೮] ವ್ಯಭಿಚಾರಿಣಿಯಿಂದ ದೂರವಾಗಿರು. ಅವಳ ಮನೆಯ ಬಾಗಿಲ ಸಮೀಪಕ್ಕೂ ಹೋಗಬೇಡ.[೯] ಒಂದುವೇಳೆ ನೀನು ಹೋದರೆ, ನಿನ್ನ ಮೇಲೆ ಜನರಿಗಿರುವ ಗೌರವವನ್ನು ಕಳೆದುಕೊಳ್ಳುವಿ; ಕ್ರೂರಿಗಳಿಂದ ಯೌವನದಲ್ಲಿಯೇ ಸಾವಿಗೀಡಾಗುವಿ.[೧೦] ನಿನಗೆ ಗೊತ್ತಿಲ್ಲದವರು ನಿನ್ನ ಐಶ್ವರ್ಯವನ್ನೆಲ್ಲಾ ತೆಗೆದುಕೊಳ್ಳುವರು; ನೀನು ದುಡಿದು ಸಂಪಾದಿಸಿದ್ದನ್ನು ಬೇರೆಯವರು ಪಡೆದುಕೊಳ್ಳುವರು.[೧೧] ಕೊನೆಯಲ್ಲಿ, ನಿನ್ನ ಆರೋಗ್ಯವೆಲ್ಲಾ ಕೆಟ್ಟುಹೋಗಿ ನಿನ್ನಲ್ಲಿರುವುದನ್ನೆಲ್ಲಾ ಕಳೆದುಕೊಂಡು ನೀನು ಗೋಳಾಡುವಿ.[೧೨] ಆಗ ನೀನು, “ನಾನೇಕೆ ನನ್ನ ತಂದೆತಾಯಿಗಳ ಮಾತನ್ನು ಕೇಳಲಿಲ್ಲ? ನಾನೇಕೆ ನನ್ನ ಉಪದೇಶಕರ ಮಾತಿಗೆ ಕಿವಿಗೊಡಲಿಲ್ಲ? ನಾನು ಅವರ ಸದುಪದೇಶವನ್ನು ದ್ವೇಷಿಸಿದ್ದರಿಂದಲೂ ಅವರ ಬುದ್ಧಿಮಾತನ್ನು ತಳ್ಳಿಬಿಟ್ಟಿದ್ದರಿಂದಲೂ (Verses 12-13)[೧೩] See verse 12[೧೪] ನಾನು ಜನರೆಲ್ಲರ ಎದುರಿನಲ್ಲಿ ನಾಚಿಕೆಗೀಡಾಗಿದ್ದೇನೆ” ಎಂದು ಹೇಳುವಿ.[೧೫] ನಿನ್ನ ಸ್ವಂತ ಹೆಂಡತಿಗೆ ನಂಬಿಗಸ್ತನಾಗಿರು; ನಿನ್ನ ಪ್ರೀತಿಯು ಆಕೆಗೆ ಮಾತ್ರ ಸಲ್ಲಲಿ.[೧೬] ಬೇರೆ ಸ್ತ್ರೀಯರಲ್ಲಿ ನೀನು ಮಕ್ಕಳನ್ನು ಪಡೆಯುವುದು ಒಳ್ಳೆಯದಲ್ಲ.[೧೭] ನಿನ್ನ ಮಕ್ಕಳು ನಿನ್ನವರೇ ಆಗಿರಲಿ; ಪರರು ನಿನ್ನೊಂದಿಗೆ ಪಾಲುಗಾರರಾಗದಿರಲಿ.[೧೮] ಆದ್ದರಿಂದ ಯೌವನಪ್ರಾಯದಲ್ಲಿ ನೀನು ಮದುವೆಮಾಡಿಕೊಂಡ ಸ್ತ್ರೀಯೊಡನೆ ಸಂತೋಷಿಸು.[೧೯] ಆಕೆ ಸುಂದರವಾದ ಜಿಂಕೆಯಂತೆಯೂ ಅಂದವಾದ ಕಾಡುಮೇಕೆಯಂತೆಯೂ ಇದ್ದಾಳೆ. ಆಕೆಯ ಸ್ತನಗಳು ನಿನ್ನನ್ನು ಸಂಪೂರ್ಣವಾಗಿ ತೃಪ್ತಿಪಡಿಸಲಿ. ಆಕೆಯ ಪ್ರೀತಿಯಲ್ಲೇ ಲೀನವಾಗಿರು.[೨೦] ಪರಸ್ತ್ರೀಯಲ್ಲಿ ಮೋಹಗೊಂಡು ಆಕೆಯನ್ನು ಅಪ್ಪಿಕೊಳ್ಳಬೇಡ.[೨೧] ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ; ಯೆಹೋವನು ಅವುಗಳನ್ನು ಪರೀಕ್ಷಿಸುತ್ತಾನೆ.[೨೨] ಕೆಡುಕನ ದುಷ್ಕೃತ್ಯಗಳು ಅವನನ್ನೇ ಹಿಡಿಯುತ್ತವೆ. ಅವನ ಪಾಪಗಳು ಹಗ್ಗದಂತೆ ಅವನನ್ನೇ ಬಂಧಿಸುತ್ತವೆ.

ಕೊರಿಂಥಿಯರಿಗೆ ೧ ೭:೧-೪೦
[೧] ನೀವು ಬರೆದು ಕೇಳಿರುವ ಸಂಗತಿಗಳ ಬಗ್ಗೆ ಈಗ ನಾನು ಚರ್ಚಿಸುತ್ತೇನೆ. ಪುರುಷನು ಮದುವೆ ಮಾಡಿಕೊಳ್ಳದಿರುವುದು ಒಳ್ಳೆಯದೇ ಸರಿ.[೨] ಆದರೆ ಲೈಂಗಿಕ ಪಾಪ ಅಪಾಯಕರವಾದದ್ದು. ಆದ್ದರಿಂದ ಪ್ರತಿಯೊಬ್ಬ ಪುರುಷನಿಗೂ ಸ್ವಂತ ಹೆಂಡತಿ ಇದ್ದರೆ ಮತ್ತು ಪ್ರತಿಯೊಬ್ಬ ಸ್ತ್ರೀಗೂ ಸ್ವಂತ ಗಂಡನು ಇದ್ದರೆ ಒಳ್ಳೆಯದು.[೩] ಗಂಡನು ತನ್ನ ಹೆಂಡತಿಗೆ ದಾಂಪತ್ಯ ಜೀವನದಲ್ಲಿ ಸಲ್ಲತಕ್ಕದ್ದನ್ನೆಲ್ಲ ಸಲ್ಲಿಸಲಿ. ಮತ್ತು ಹೆಂಡತಿಯು ತನ್ನ ಗಂಡನಿಗೆ ದಾಂಪತ್ಯ ಜೀವನದಲ್ಲಿ ಸಲ್ಲತಕ್ಕದ್ದನ್ನೆಲ್ಲ ಸಲ್ಲಿಸಲಿ.[೪] ಹೆಂಡತಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಆಕೆಯ ಗಂಡನಿಗೆ ಆಕೆಯ ದೇಹದ ಮೇಲೆ ಅಧಿಕಾರವಿದೆ. ಅದೇರೀತಿ, ಗಂಡನಿಗೆ ತನ್ನ ಸ್ವಂತ ದೇಹದ ಮೇಲೆ ಅಧಿಕಾರವಿಲ್ಲ. ಅವನ ಹೆಂಡತಿಗೆ ಅವನ ದೇಹದ ಮೇಲೆ ಅಧಿಕಾರವಿದೆ.[೫] ಆದ್ದರಿಂದ ಗಂಡ ಮತ್ತು ಹೆಂಡತಿ ಒಬ್ಬರಿಗೊಬ್ಬರು ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಅವರು ತಮ್ಮ ಸಮಯವನ್ನು ಪ್ರಾರ್ಥನೆಯಲ್ಲಿ ವಿನಿಯೋಗಿಸುವುದಕ್ಕಾಗಿ ಸ್ವಲ್ಪಕಾಲ ಲೈಂಗಿಕ ಸಂಬಂಧದಿಂದ ದೂರವಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿಯಿರಬೇಕು. ಬಳಿಕ ಮತ್ತೆ ಒಂದಾಗಬೇಕು, ಇಲ್ಲವಾದರೆ ನಿಮ್ಮ ಬಲಹೀನತೆಯನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋಧಿಸಬಹುದು.[೬] ಸ್ವಲ್ಪಕಾಲ ಅಗಲಿ ದೂರವಿರುವುದಕ್ಕೆ ಅನುಮತಿ ಕೊಡಲು ನಾನು ಇದನ್ನು ಹೇಳುತ್ತಿದ್ದೇನೆ. ಇದು ಆಜ್ಞೆಯಲ್ಲ.[೭] ಎಲ್ಲಾ ಜನರು ನಮ್ಮಂತೆ ಇರಬೇಕೆಂದು ನಮ್ಮ ಅಭಿಲಾಷೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ದೇವರಿಂದ ತನ್ನದೇ ಆದ ವರವನ್ನು ಹೊಂದಿದ್ದಾನೆ. ಒಬ್ಬ ವ್ಯಕ್ತಿಗೆ ಒಂದು ವರವಿದ್ದರೆ ಮತ್ತೊಬ್ಬನಿಗೆ ಇನ್ನೊಂದು ವರವಿದೆ.[೮] ವಿವಾಹವಾಗಿಲ್ಲದ ಜನರಿಗೆ ಮತ್ತು ವಿಧವೆಯರಿಗೆ ನಾನು ಹೇಳುವುದೇನೆಂದರೆ: ಅವರು ನನ್ನಂತೆ ಒಬ್ಬಂಟಿಗರಾಗಿ ಇರುವುದೇ ಅವರಿಗೆ ಒಳ್ಳೆಯದು.[೯] ಆದರೆ ಅವರು ತಮ್ಮ ದೇಹಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಲಾಗದಿದ್ದರೆ, ಅವರು ಮದುವೆಯಾಗಬೇಕು. ಲೈಂಗಿಕ ಆಸೆಯಿಂದ ಬೆಂದು ಹೋಗುವುದಕ್ಕಿಂತಲೂ ಮದುವೆ ಮಾಡಿಕೊಳ್ಳುವುದೇ ಉತ್ತಮವಾಗಿದೆ.[೧೦] ಮದುವೆಯಾಗಿರುವವರಿಗೆ ನಾನು ಈ ಆಜ್ಞೆಯನ್ನು ಕೊಡುತ್ತೇನೆ. (ಈ ಆಜ್ಞೆಯು ನನ್ನದಲ್ಲ. ಪ್ರಭುವಿನದು.) ಹೆಂಡತಿಯು ತನ್ನ ಗಂಡನನ್ನು ಬಿಟ್ಟುಬಿಡಬಾರದು.[೧೧] ಹೆಂಡತಿಯು ತನ್ನ ಗಂಡನನ್ನು ಬಿಟ್ಟುಬಿಟ್ಟರೆ ಆಕೆಯು ಮತ್ತೆ ಮದುವೆ ಮಾಡಿಕೊಳ್ಳಕೂಡದು, ಇಲ್ಲವಾದರೆ ಆಕೆ ತನ್ನ ಗಂಡನ ಸಂಗಡ ಮತ್ತೆ ಒಂದಾಗಬೇಕು. ಇದೇ ರೀತಿ, ಗಂಡನು, ತನ್ನ ಹೆಂಡತಿಯನ್ನು ಬಿಟ್ಟುಬಿಡಬಾರದು.[೧೨] ಉಳಿದೆಲ್ಲ ಜನರ ವಿಷಯದಲ್ಲಿ ನಾನು ಹೇಳುವುದೇನೆಂದರೆ (ಈ ಸಂಗತಿಗಳನ್ನು ಹೇಳುತ್ತಿರುವವನು ನಾನೇ ಹೊರತು ಪ್ರಭುವಲ್ಲ.) ಕ್ರಿಸ್ತನಲ್ಲಿ ಸಹೋದರನಾದ ಒಬ್ಬನಿಗೆ ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯಿದ್ದರೆ ಮತ್ತು ಆಕೆ ಅವನೊಂದಿಗೆ ಬಾಳ್ವೆಮಾಡಲು ಇಚ್ಛಿಸಿದರೆ ಅವನು ಆಕೆಗೆ ವಿವಾಹವಿಚ್ಛೇದನ ಕೊಡಕೂಡದು.[೧೩] ಅದೇರೀತಿ, ಸ್ತ್ರೀಯೊಬ್ಬಳಿಗೆ ಕ್ರಿಸ್ತ ವಿಶ್ವಾಸಿಯಲ್ಲದ ಗಂಡನು ಇದ್ದರೆ ಮತ್ತು ಅವನು ಆಕೆಯೊಂದಿಗೆ ಬಾಳ್ವೆಮಾಡಲು ಇಚ್ಛಿಸಿದರೆ ಆಕೆ ಅವನಿಗೆ ವಿವಾಹವಿಚ್ಛೇದನ ಕೊಡಕೂಡದು.[೧೪] ಕ್ರಿಸ್ತ ವಿಶ್ವಾಸಿಯಲ್ಲದ ಗಂಡನು ತನ್ನ ಕ್ರೈಸ್ತ ಹೆಂಡತಿಯ ಮೂಲಕ ಪವಿತ್ರನಾಗುತ್ತಾನೆ. ಅದೇರೀತಿ, ಕ್ರಿಸ್ತ ವಿಶ್ವಾಸಿಯಲ್ಲದ ಹೆಂಡತಿಯು ತನ್ನ ಕ್ರೈಸ್ತ ಗಂಡನ ಮೂಲಕ ಪವಿತ್ರಳಾಗುತ್ತಾಳೆ. ಇದು ಸತ್ಯವಾಗಿಲ್ಲದಿದ್ದರೆ, ನಿಮ್ಮ ಮಕ್ಕಳು ಪವಿತ್ರರಾಗುತ್ತಿರಲಿಲ್ಲ. ಆದರೆ ಈಗ ನಿಮ್ಮ ಮಕ್ಕಳು ಪವಿತ್ರರಾಗಿದ್ದಾರೆ.[೧೫] ಆದರೆ ಕ್ರಿಸ್ತ ವಿಶ್ವಾಸಿಯಲ್ಲದ ವ್ಯಕ್ತಿಯು ಬಿಟ್ಟು ಹೋಗಲು ನಿರ್ಧರಿಸಿದರೆ, ಆ ವ್ಯಕ್ತಿಯು ಬಿಟ್ಟು ಹೋಗಲಿ. ಈ ರೀತಿ ಸಂಭವಿಸಿದರೆ, ಕ್ರೈಸ್ತ ಸಹೋದರನಾಗಲಿ ಕ್ರೈಸ್ತ ಸಹೋದರಿಯಾಗಲಿ ವಿವಾಹ ಬಂಧನದಿಂದ ಬಿಡುಗಡೆಯಾಗಿದ್ದಾರೆ. ದೇವರು ನಮ್ಮನ್ನು ಸಮಾಧಾನದ ಜೀವಿತಕ್ಕೆ ಕರೆದನು.[೧೬] ಹೆಂಡತಿಯರೇ, ನೀವು ನಿಮ್ಮ ಗಂಡಂದಿರನ್ನು ರಕ್ಷಿಸಬಹುದು. ಗಂಡಂದಿರೇ, ನೀವು ನಿಮ್ಮ ಹೆಂಡತಿಯರನ್ನು ರಕ್ಷಿಸಬಹುದು. ಆದರೆ ಮುಂದೆ ಏನಾಗುವುದೋ ನಮಗೆ ಗೊತ್ತಿಲ್ಲ.[೧೭] ಆದರೂ ದೇವರು ಪ್ರತಿಯೊಬ್ಬನಿಗೆ ಜೀವನದಲ್ಲಿ ಯಾವ ಸ್ಥಿತಿಯನ್ನು ನೇಮಿಸಿದ್ದಾನೋ ಅಂದರೆ ದೇವರು ನಿಮ್ಮನ್ನು ಕರೆದಾಗ ನೀವು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ಮುಂದುವರಿಯಬೇಕು. ನಾನು ಎಲ್ಲಾ ಸಭೆಗಳಿಗೂ ಇದನ್ನೇ ಆಜ್ಞಾಪಿಸುತ್ತೇನೆ.[೧೮] ದೇವರಿಂದ ಕರೆಯಲ್ಪಟ್ಟ ವ್ಯಕ್ತಿಯು ಮೊದಲೇ ಸುನ್ನತಿ ಮಾಡಿಸಿಕೊಂಡವನಾಗಿದ್ದರೆ, ಅವನು ಸುನ್ನತಿಯಿಲ್ಲದಂಥವನಾಗಬಾರದು. ದೇವರಿಂದ ಕರೆಯಲ್ಪಟ್ಟ ವ್ಯಕ್ತಿಯು ಸುನ್ನತಿಯನ್ನು ಹೊಂದಿಲ್ಲದವನಾಗಿದ್ದರೆ, ಅವನು ಸುನ್ನತಿಯನ್ನು ಮಾಡಿಸಿಕೊಳ್ಳಬಾರದು.[೧೯] ಸುನ್ನತಿಯನ್ನು ಮಾಡಿಸಿಕೊಳ್ಳುವುದಾಗಲಿ ಮಾಡಿಸಿಕೊಳ್ಳದಿರುವುದಾಗಲಿ ಮುಖ್ಯವಲ್ಲ. ದೇವರ ಆಜ್ಞೆಗಳಿಗೆ ವಿಧೇಯರಾಗುವುದೇ ಮುಖ್ಯವಾದದ್ದು.[೨೦] ದೇವರು ಕರೆದಾಗ ಪ್ರತಿಯೊಬ್ಬನು ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ಇರಬೇಕು.[೨೧] ದೇವರು ನಿನ್ನನ್ನು ಕರೆದಾಗ ನೀನು ಗುಲಾಮನಾಗಿದ್ದರೆ, ಚಿಂತಿಸಬೇಡ. ಆದರೆ ನೀನು ಬಿಡುಗಡೆಯಾಗಲು ಸಾಧ್ಯವಿದ್ದರೆ, ಬಿಡುಗಡೆಯಾಗು.[೨೨] ದೇವರು ಕರೆದಾಗ ಗುಲಾಮನಾಗಿದ್ದವನು ಪ್ರಭುವಿನಲ್ಲಿ ಬಿಡುಗಡೆಯಾಗಿದ್ದಾನೆ. ಅವನು ಪ್ರಭುವಿಗೆ ಸೇರಿದವನಾಗಿದ್ದಾನೆ. ಅದೇರೀತಿಯಲ್ಲಿ ದೇವರು ಕರೆದಾಗ ಸ್ವತಂತ್ರನಾಗಿದ್ದವನು ಈಗ ಕ್ರಿಸ್ತನ ಗುಲಾಮನಾಗಿದ್ದಾನೆ.[೨೩] ನಿಮ್ಮನ್ನು ಕ್ರಯಕ್ಕೆ ಕೊಂಡುಕೊಳ್ಳಲಾಗಿದೆ. ಆದ್ದರಿಂದ ನೀವು ಮನುಷ್ಯರ ಗುಲಾಮರಾಗಬೇಡಿ.[೨೪] ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನಿಮ್ಮಲ್ಲಿ ಪ್ರತಿಯೊಬ್ಬರು ಯಾವ ಸ್ಥಿತಿಯಲ್ಲಿದ್ದಿರೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಹೊಸ ಜೀವನದಲ್ಲಿ ಮುಂದುವರಿಯಬೇಕು.[೨೫] ಮದುವೆಯಾಗಿಲ್ಲದ ಜನರ ಬಗ್ಗೆ ಈಗ ನಾನು ಬರೆಯುತ್ತೇನೆ. ಇದರ ಬಗ್ಗೆ ಪ್ರಭುವಿನಿಂದ ಬಂದ ಯಾವ ಆಜ್ಞೆಯೂ ನನ್ನಲ್ಲಿಲ್ಲ. ಆದರೆ ನಾನು ನನ್ನ ಅಭಿಪ್ರಾಯವನ್ನು ನಿಮಗೆ ಕೊಡುತ್ತೇನೆ. ನಾನು ಪ್ರಭುವಿನಿಂದ ಕರುಣೆಯನ್ನು ಹೊಂದಿಕೊಂಡಿರುವುದರಿಂದ ನಂಬಿಕೆಗೆ ಅರ್ಹನಾಗಿದ್ದೇನೆ.[೨೬] ಇದು ಕಷ್ಟಕಾಲವಾಗಿದೆ. ಆದ್ದರಿಂದ, ನೀವು ಯಾವ ಸ್ಥಿತಿಯಲ್ಲಿದ್ದೀರೋ ಅದೇ ಸ್ಥಿತಿಯಲ್ಲಿರುವುದು ಒಳ್ಳೆಯದೆಂಬುದು ನನ್ನ ಆಲೋಚನೆ.[೨೭] ನಿನಗೆ ಹೆಂಡತಿಯಿದ್ದರೆ, ಆಕೆಯಿಂದ ಬಿಡುಗಡೆ ಹೊಂದಲು ಪ್ರಯತ್ನಿಸಬೇಡ. ನಿನಗೆ ಮದುವೆಯಾಗಿಲ್ಲದಿದ್ದರೆ, ಹೆಂಡತಿಯನ್ನು ಹುಡುಕಲು ಪ್ರಯತ್ನಿಸಬೇಡ.[೨೮] ಆದರೆ ನೀನು ಮದುವೆಯಾಗಲು ನಿರ್ಧರಿಸಿದರೆ, ಅದು ಪಾಪವೇನಲ್ಲ. ಮದುವೆಯಾಗಿಲ್ಲದ ಹುಡುಗಿಯು ಮದುವೆಯಾಗುವುದು ಪಾಪವಲ್ಲ. ಆದರೆ ಮದುವೆಯಾಗುವ ಜನರಿಗೆ ಈ ಲೋಕದಲ್ಲಿ ಕಷ್ಟವಿದೆ. ನೀವು ಈ ಕಷ್ಟದಿಂದ ವಿಮುಕ್ತರಾಗಿರಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.[೨೯] ಸಹೋದರ ಸಹೋದರಿಯರೇ, ನನ್ನ ಅಭಿಪ್ರಾಯ ಇದು: ನಮಗೆ ಹೆಚ್ಚು ಸಮಯ ಉಳಿದಿಲ್ಲ. ಆದ್ದರಿಂದ, ಹೆಂಡತಿಯರನ್ನು ಹೊಂದಿರುವ ಜನರು ಹೆಂಡತಿಯರಿಲ್ಲದವರಂತೆ ಪ್ರಭುವಿನ ಸೇವೆಗಾಗಿ ತಮ್ಮ ಸಮಯವನ್ನು ಉಪಯೋಗಿಸಬೇಕು.[೩೦] ದುಃಖದಿಂದಿರುವ ಜನರು ದುಃಖವಿಲ್ಲದವರಂತೆ ಜೀವಿಸಬೇಕು. ಸಂತೋಷದಿಂದ ಇರುವ ಜನರು ಸಂತೋಷವಿಲ್ಲದ ಜನರಂತೆ ಜೀವಿಸಬೇಕು. ವಸ್ತುಗಳನ್ನು ಕೊಂಡುಕೊಳ್ಳುವ ಜನರು ಏನೂ ಇಲ್ಲದವರಂತೆ ಜೀವಿಸಬೇಕು.[೩೧] ಈ ಲೋಕದ ವಸ್ತುಗಳನ್ನು ಉಪಯೋಗಿಸುವ ಜನರು ತಮಗೆ ಆ ವಸ್ತುಗಳು ಮುಖ್ಯವಲ್ಲವೆಂಬಂತೆ ಜೀವಿಸಬೇಕು. ಏಕೆಂದರೆ, ಈ ಲೋಕದ ಇಂದಿನ ಸ್ಥಿತಿಯು ಬಹು ಬೇಗನೆ ಗತಿಸಿಹೋಗುವುದು.[೩೨] ನೀವು ಚಿಂತೆ ಇಲ್ಲದೆ ಇರಬೇಕೆಂಬುದೇ ನನ್ನ ಬಯಕೆಯಾಗಿದೆ. ಮದುವೆಯಾಗಿಲ್ಲದ ವ್ಯಕ್ತಿಯು ಪ್ರಭುವಿನ ಸೇವೆಯಲ್ಲಿ ನಿರತನಾಗಿರುತ್ತಾನೆ. ಅವನು ಪ್ರಭುವನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ.[೩೩] ಆದರೆ ಮದುವೆಯಾಗಿರುವ ವ್ಯಕ್ತಿಯು ಈ ಲೋಕದ ಕಾರ್ಯಗಳಲ್ಲಿ ನಿರತನಾಗಿರುತ್ತಾನೆ. ಅವನು ತನ್ನ ಹೆಂಡತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾನೆ.[೩೪] ಅವನು ತನ್ನ ಹೆಂಡತಿಯನ್ನು ಮತ್ತು ಪ್ರಭುವನ್ನು ಮೆಚ್ಚಿಸುವುದರ ಬಗ್ಗೆ ಆಲೋಚಿಸಬೇಕಾಗುತ್ತದೆ. ಮದುವೆಯಾಗಿಲ್ಲದ ಸ್ತ್ರೀಯಾಗಲಿ ಹುಡುಗಿಯಾಗಲಿ ಪ್ರಭುವಿನ ಸೇವೆಯಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ದೇಹ ಮತ್ತು ಆತ್ಮಗಳನ್ನು ಸಂಪೂರ್ಣವಾಗಿ ಪ್ರಭುವಿಗೆ ಕೊಡಲು ಬಯಸುತ್ತಾಳೆ. ಆದರೆ ಮದುವೆಯಾದ ಸ್ತ್ರೀಯು ಈ ಲೋಕದ ಕಾರ್ಯಗಳಲ್ಲಿ ನಿರತಳಾಗಿರುತ್ತಾಳೆ. ಆಕೆ ತನ್ನ ಗಂಡನನ್ನು ಮೆಚ್ಚಿಸಲು ಪ್ರಯತ್ನಿಸುತ್ತಿರುತ್ತಾಳೆ.[೩೫] ನಿಮಗೆ ಸಹಾಯವಾಗಲೆಂದು ಈ ಸಂಗತಿಗಳನ್ನು ಹೇಳುತ್ತಿದ್ದೇನೆ. ನಾನು ನಿಮ್ಮನ್ನು ನಿಯಂತ್ರಿಸುವುದಕ್ಕೆ ಪ್ರಯತ್ನಿಸುತ್ತಿಲ್ಲ. ಆದರೆ ನೀವು ಸರಿಯಾದ ಮಾರ್ಗದಲ್ಲಿ ಜೀವಿಸಬೇಕೆಂಬುದೇ ನನ್ನ ಬಯಕೆಯಾಗಿದೆ. ನೀವು ನಿಮ್ಮ ಸಮಯವನ್ನು ಬೇರೆ ಕಾರ್ಯಗಳಿಗೆ ಕೊಡದೆ ನಿಮ್ಮನ್ನು ಸಂಪೂರ್ಣವಾಗಿ ಪ್ರಭುವಿಗೆ ಅರ್ಪಿಸಿಕೊಳ್ಳಬೇಕೆಂಬುದು ನನ್ನ ಅಪೇಕ್ಷೆಯಾಗಿದೆ.[೩೬] ತನ್ನ ಮಗಳ (ಕನ್ನಿಕೆಯ) ಮದುವೆಯ ವಯಸ್ಸು ಮೀರಿ ಹೋಗುವಂತೆ ಬಿಟ್ಟುಕೊಡುವುದು ಒಳ್ಳೆಯದಲ್ಲವೆಂದೂ, ಆಕೆಗೆ ಮದುವೆ ಮಾಡಿಸುವುದು ಅವಶ್ಯಕವೆಂದೂ ಒಬ್ಬನು ಭಾವಿಸಿದರೆ, ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲಿ. ಅವನು ಅವರಿಗೆ ಮದುವೆ ಮಾಡಿಕೊಡಲಿ. ಅದು ಪಾಪವಲ್ಲ.[೩೭] ಆದರೆ ಮತ್ತೊಬ್ಬನು ಮದುವೆಯ ಅಗತ್ಯವಿಲ್ಲವೆಂದು ತನ್ನ ಮನಸ್ಸಿನಲ್ಲಿ ದೃಢವಾಗಿ ನಿಶ್ಚಯಿಸಿಕೊಂಡಿದ್ದರೆ ಅವನು ತನ್ನ ಇಚ್ಛೆಗನುಸಾರವಾಗಿ ಮಾಡಲು ಸ್ವತಂತ್ರನಾಗಿದ್ದಾನೆ. ಅವನು ತನ್ನ ಮಗಳಿಗೆ ಮದುವೆ ಮಾಡುವುದಿಲ್ಲವೆಂದು ತನ್ನ ಹೃದಯದಲ್ಲಿ ನಿರ್ಧರಿಸಿದ್ದರೆ ಅವನು ಒಳ್ಳೆಯದನ್ನೇ ಮಾಡುತ್ತಿದ್ದಾನೆ.[೩೮] ಆದ್ದರಿಂದ ಒಬ್ಬನು ತನ್ನ ಮಗಳಿಗೆ ಮದುವೆ ಮಾಡಿಕೊಡುವುದು ಒಳ್ಳೆಯದಾಗಿದೆ. ಅಲ್ಲದೆ ತನ್ನ ಮಗಳಿಗೆ ಮದುವೆ ಮಾಡಿಕೊಡದಿರುವುದು ಮತ್ತಷ್ಟು ಒಳ್ಳೆಯದಾಗಿದೆ[೩೯] ಗಂಡನು ಬದುಕಿರುವ ತನಕ ಹೆಂಡತಿಯು ಅವನೊಂದಿಗೆ ಬಾಳ್ವೆ ನಡೆಸಬೇಕು. ಆದರೆ ಗಂಡನು ಸತ್ತುಹೋದರೆ, ಆ ಸ್ತ್ರೀಯು ತಾನು ಬಯಸಿದವರನ್ನು ಮದುವೆಯಾಗಲು ಸ್ವತಂತ್ರಳಾಗಿದ್ದಾಳೆ. ಆದರೆ ಅವನು ಪ್ರಭುವನ್ನು ಅನುಸರಿಸುವವನಾಗಿರಬೇಕು.[೪೦] ಆಕೆಯು ಮತ್ತೆ ಮದುವೆ ಮಾಡಿಕೊಳ್ಳದಿದ್ದರೆ ಹೆಚ್ಚು ಸಂತೋಷದಿಂದಿರುವಳು. ಇದು ನನ್ನ ಅಭಿಪ್ರಾಯವಾಗಿದೆ. ದೇವರಾತ್ಮನು ನನ್ನೊಳಗಿದ್ದಾನೆಂದು ನಾನು ನಂಬುತ್ತೇನೆ.

Kannada Bible 1934
Public Domain: 1934