A A A A A

ಹೆಚ್ಚುವರಿ: [ಆಲ್ಕೋಹಾಲ್]


ಪೇತ್ರನು ೧ ೪:೩
ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.

ತಿಮೊಥೇಯನಿಗ ೧ ೫:೨೩
ಇನ್ನು ಮೇಲೆ ನೀರನ್ನು ಮಾತ್ರ ಕುಡಿಯುವವನಾಗಿರದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾ ಗುವ ಬಲಹೀನತೆಗಳಿಗಾಗಿಯೂ ದ್ರಾಕ್ಷಾರಸವನ್ನು ಸ್ವಲ್ಪವಾಗಿ ತೆಗೆದುಕೋ.

ಉಪದೇಷಕ ೯:೭
ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.

ಎಫೆಸಿಯರಿಗೆ ೫:೧೮
ಮದ್ಯಪಾನ ಮಾಡಿ ಮತ್ತರಾಗಬೇಡಿರಿ, ಯಾಕಂದರೆ ಅದರಿಂದ ಪಟಿಂಗತನವು ಹುಟ್ಟುತ್ತದೆ. ಪವಿತ್ರಾತ್ಮನಿಂದ ತುಂಬಿದವರಾಗಿರ್ರಿ.

ಜ್ಞಾನೋಕ್ತಿಗಳು ೨೦:೧
ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ.

ಜ್ಞಾನೋಕ್ತಿಗಳು ೨೩:೩೧
ದ್ರಾಕ್ಷಾರಸವು ಕೆಂಪಾಗಿದ್ದು ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ ಅದನ್ನು ನೋಡಬೇಡ.

ರೋಮನರಿಗೆ ೧೩:೧೩
ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ನೀವು ದೇಹದ ಆಶೆಗಳನ್ನು ಪೂರೈಸುವದಕ್ಕಾಗಿ ಚಿಂತಿಸದೆ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.

ಜ್ಞಾನೋಕ್ತಿಗಳು ೩೧:೪-೫
[೪] ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ;[೫] ಕುಡಿದರೆ ಅವರು ಕಟ್ಟಿಳೆಯನ್ನು ಮರೆತು ಬಾಧಿತರಲ್ಲಿ ಯಾವನಿಗಾದರೂ ನ್ಯಾಯತೀರ್ಪನ್ನು ವ್ಯತ್ಯಾಸಮಾಡುತ್ತಾರೆ.

ಕೀರ್ತನೆಗಳು ೧೦೪:೧೪-೧೫
[೧೪] ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ.[೧೫] ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.

ಕೊರಿಂಥಿಯರಿಗೆ ೧ ೧೦:೨೩-೨೪
[೨೩] ನನಗೆ ಎಲ್ಲಾ ವಿಷಯಗಳು ನ್ಯಾಯಸಮ್ಮತ ವಾಗಿವೆ; ಆದರೆ ಎಲ್ಲವೂ ವಿಹಿತವಾಗಿರುವದಿಲ್ಲ; ಎಲ್ಲಾ ವಿಷಯಗಳು ನನಗೆ ನ್ಯಾಯಸಮ್ಮತವಾಗಿವೆ; ಆದರೆ ಎಲ್ಲವೂ ಭಕ್ತಿವೃದ್ಧಿಯನ್ನುಂಟು ಮಾಡುವದಿಲ್ಲ.[೨೪] ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರ ಹಿತವನ್ನು ಚಿಂತಿಸಲಿ.

ಯೆಶಾಯನ ೬೨:೮-೯
[೮] ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;[೯] ಆದರೆ ಅದನ್ನು ಕೂಡಿಸಿದವರು ಅದನ್ನು ತಿಂದು ಕರ್ತನನ್ನು ಸ್ತುತಿಸುವರು; ಅದನ್ನು ಸೇರಿಸಿ ತಂದವರು ನನ್ನ ಪರಿಶುದ್ಧ ಅಂಗಳಗಳಲ್ಲಿ ಅದನ್ನು ಕುಡಿಯುವರು.

ಗಲಾತ್ಯರಿಗೆ ೫:೧೯-೨೧
[೧೯] ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ[೨೦] ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು[೨೧] ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.

ಕೊರಿಂಥಿಯರಿಗೆ ೧ ೯:೧೯-೨೩
[೧೯] ಎಲ್ಲರಿಂದಲೂ ನಾನು ಸ್ವತಂತ್ರನಾಗಿದ್ದರೂ ಇನ್ನೂ ಹೆಚ್ಚು ಜನರನ್ನು ಸಂಪಾದಿಸಿಕೊಳ್ಳುವದಕ್ಕೋಸ್ಕರ ನನ್ನನ್ನು ಎಲ್ಲರಿಗೂ ಸೇವಕನನ್ನಾಗಿ ಮಾಡಿಕೊಂಡಿದ್ದೇನೆ.[೨೦] ಇದಲ್ಲದೆ ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ನಾನು ಯೆಹೂದ್ಯನಾಗಿಯೂ ನ್ಯಾಯ ಪ್ರಮಾಣದ ಅಧೀನದಲ್ಲಿರುವವರನ್ನು ಸಂಪಾದಿಸಿ ಕೊಳ್ಳುವಂತೆ ನ್ಯಾಯಪ್ರಮಾಣಕ್ಕೆ ಅಧೀನರಾಗಿರು ವವರಿಗೆ ನ್ಯಾಯಪ್ರಮಾಣಕ್ಕೆ ಅಧೀನನಾಗಿಯೂ[೨೧] (ನಾನು ದೇವರ ನ್ಯಾಯಪ್ರಮಾಣವಿಲ್ಲದವ ನಂತಲ್ಲ, ಕ್ರಿಸ್ತನ ನ್ಯಾಯಪ್ರಮಾಣಕ್ಕೆ ಒಳಗಾದವನೇ;) ನ್ಯಾಯಪ್ರಮಾಣವಿಲ್ಲದವರನ್ನು ಸಂಪಾದಿಸಿಕೊಳ್ಳು ವದಕ್ಕಾಗಿ ಅವರಿಗೆ ನ್ಯಾಯಪ್ರಮಾಣವಿಲ್ಲದವ ನಂತೆಯೂ ಆದೆನು.[೨೨] ಬಲವಿಲ್ಲದವರನ್ನು ಸಂಪಾದಿಸು ವದಕ್ಕೆ ಅವರಿಗೆ ಬಲವಿಲ್ಲದವನಂತಾದೆನು; ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಯಾರಾರಿಗೆ ಎಂಥೆಂಥವನಾಗಬೇಕೋ ಅಂಥವನಾಗಿದ್ದೇನೆ.[೨೩] ನಾನು ನಿಮ್ಮೊಂದಿಗೆ ಸುವಾರ್ತೆಯ ಫಲದಲ್ಲಿ ಪಾಲುಗಾರನಾಗಬೇಕೆಂದು ಸುವಾರ್ತೆ ಗೋಸ್ಕರವೇ ಇದನ್ನು ಮಾಡುತ್ತೇನೆ.

ರೋಮನರಿಗೆ ೧೪:೧೫-೨೧
[೧೫] ನಿನ್ನ ಆಹಾರದಿಂದ ನಿನ್ನ ಸಹೋದರನ ಮನಸ್ಸಿಗೆ ನೋವಾದರೆ ಪ್ರೀತಿಗೆ ತಕ್ಕಂತೆ ನೀನು ಇನ್ನು ನಡೆಯುವ ವನಲ್ಲ. ಯಾವನಿಗೋಸ್ಕರ ಕ್ರಿಸ್ತನು ಸತ್ತನೋ ಅವನನ್ನು ನಿನ್ನ ಆಹಾರದಿಂದ ಕೆಡಿಸಬಾರದು.[೧೬] ನಿಮಗಿರುವ ಮೇಲು ದೂಷಣೆಗೆ ಆಸ್ಪದವಾಗಬಾರದು.[೧೭] ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.[೧೮] ಕ್ರಿಸ್ತನ ಸೇವೆಯನ್ನು ಮಾಡುವವನು ಈ ವಿಷಯಗಳಲ್ಲಿ ದೇವರಿಗೆ ಮೆಚ್ಚಿಕೆಯಾದವನಾಗಿಯೂ ಮನುಷ್ಯರಿಗೆ ಸಂಭಾವಿತನಾಗಿಯೂ ಇರುವನಷ್ಟೆ.[೧೯] ಆದದರಿಂದ ನಾವು ಸಮಾಧಾನವನ್ನುಂಟು ಮಾಡುವವುಗಳನೂ ಪರಸ್ಪರ ಭಕ್ತಿವೃದ್ಧಿಯನ್ನುಂಟು ಮಾಡುವವುಗಳನ್ನೂ ಅನುಸರಿಸೋಣ.[೨೦] ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.[೨೧] ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.

ಯೊವಾನ್ನನು ೨:೩-೧೧
[೩] ಆಗ ಅವರಿಗೆ ದ್ರಾಕ್ಷಾರಸವು ಸಾಲದೆ ಹೋದ ದ್ದರಿಂದ ಯೇಸುವಿನ ತಾಯಿಯು ಆತನಿಗೆ--ಅವರಿಗೆ ದ್ರಾಕ್ಷಾರಸವು ಇಲ್ಲ ಅಂದಳು.[೪] ಯೇಸು ಆಕೆಗೆ-- ಸ್ತ್ರೀಯೇ, ನನ್ನ ಗೊಡವೆ ನಿನಗೆ ಯಾಕೆ? ನನ್ನ ಗಳಿಗೆ ಯು ಇನ್ನೂ ಬಂದಿಲ್ಲ ಅಂದನು.[೫] ಆತನ ತಾಯಿಯು ಸೇವಕರಿಗೆ--ಆತನು ನಿಮಗೆ ಏನು ಹೇಳುತ್ತಾನೋ ಅದನ್ನು ಮಾಡಿರಿ ಅಂದಳು.[೬] ಯೆಹೂದ್ಯರ ಶುದ್ಧೀ ಕರಣದ ಪ್ರಕಾರ ಅಲ್ಲಿ ಪ್ರತಿಯೊಂದು ಎರಡು ಇಲ್ಲವೆ ಮೂರು ಕೊಳಗ ನೀರು ಹಿಡಿಯುವಷ್ಟು ಆರು ಕಲ್ಲಿನ ಬಾನೆಗಳು ಇದ್ದವು.[೭] ಯೇಸು ಅವರಿಗೆ--ಆ ಬಾನೆ ಗಳಲ್ಲಿ ನೀರು ತುಂಬಿರಿ ಅಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದ್ದರು.[೮] ಆತನು ಅವರಿಗೆ--ಈಗ ಇದನ್ನು ತೋಡಿಕೊಂಡು ಹೋಗಿ ಔತಣದ ಪಾರುಪತ್ಯಗಾರನಿಗೆ ಕೊಡಿರಿ ಎಂದು ಹೇಳಲು ಅವರು ತಕ್ಕೊಂಡು ಹೋಗಿ ಕೊಟ್ಟರು.[೯] ಔತಣದ ಪಾರುಪತ್ಯ ಗಾರನು ದ್ರಾಕ್ಷಾರಸವಾದ ನೀರನ್ನು ರುಚಿ ನೋಡಿದಾಗ ಅದು ಎಲ್ಲಿಂದ ಬಂತೆಂದು ತಿಳಿಯದವನಾಗಿ (ನೀರನ್ನು ತೋಡಿಕೊಂಡ ಸೇವಕರಿಗೆ ತಿಳಿದಿತ್ತು) ಮದಲಿಂಗನನ್ನು ಕರೆದು[೧೦] ಅವನಿಗೆ--ಪ್ರತಿ ಮನುಷ್ಯನು ಮೊದಲು ಒಳ್ಳೇ ದ್ರಾಕ್ಷಾರಸವನ್ನು ಕೊಟ್ಟು ಜನರು ಚೆನ್ನಾಗಿ ಕುಡಿದ ಮೇಲೆ ಕನಿಷ್ಠವಾದದ್ದನ್ನು ಕೊಡುತ್ತಾನೆ; ಆದರೆ ನೀನು ಇದು ವರೆಗೆ ಒಳ್ಳೇ ದ್ರಾಕ್ಷಾರಸವನ್ನು ಇಟ್ಟು ಕೊಂಡಿದ್ದೀ ಅಂದನು.[೧೧] ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.

Kannada Bible BSI 2016
Copyright © 2016 by The Bible Society of India. All rights reserved worldwide