A A A A A

ಹೆಚ್ಚುವರಿ: [ಅಸಹ್ಯ]


ದಾನಿಯೇಲನ ೧೧:೩೧
ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.

ದಾನಿಯೇಲನ ೧೨:೧೧
ಪ್ರತಿದಿನದ ಯಜ್ಞವು ಸಕಾಲಕ್ಕೆ ತೆಗೆದುಹಾಕಲ್ಪಟ್ಟು ಹಾಳುಮಾಡುವಂಥ ಅಸಹ್ಯವು ಇರಿಸಲ್ಪಡುವ ವರೆಗೂ ಸಾವಿರದ ಇನ್ನೂರ ತೊಂಭತ್ತೊಂಭತ್ತು ದಿನಗಳು ಇರುವವು.

ಧರ್ಮೋಪದೇಷಕಾಂಡ ೨೨:೫
ಸ್ತ್ರೀಯು ಪುರುಷನ ಉಡಿಗೆ ಉಟ್ಟುಕೊಳ್ಳಬಾರದು; ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು; ಇವುಗಳನ್ನು ಮಾಡುವವರೆಲ್ಲಾ ಕರ್ತನಿಗೆ ಅಸಹ್ಯ.

ಧರ್ಮೋಪದೇಷಕಾಂಡ ೨೩:೧೮
ಸೂಳೆಯ ಕೂಲಿಯನ್ನು ಇಲ್ಲವೆ ನಾಯಿಯ ಕ್ರಯವನ್ನು ಯಾವದೊಂದು ಪ್ರಮಾಣವಾಗಿ ನಿನ್ನ ದೇವರಾದ ಕರ್ತನ ಮನೆಗೆ ತರಬಾರದು. ಅವೆರಡು ನಿನ್ನ ದೇವರಾದ ಕರ್ತನಿಗೆ ಅಸಹ್ಯ.

ಧರ್ಮೋಪದೇಷಕಾಂಡ ೨೪:೪
ಅವಳನ್ನು ಕಳುಹಿಸಿಬಿಟ್ಟ ಮೊದಲನೇ ಗಂಡನು ಅವಳು ಅಶುದ್ಧವಾದ ಮೇಲೆ ಅವಳನ್ನು ತಿರಿಗಿ ತನ್ನ ಹೆಂಡತಿಯಾಗಿ ತಕ್ಕೊಳ್ಳಬಾರದು; ಅದು ಕರ್ತನ ಮುಂದೆ ಅಸಹ್ಯವೇ. ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇಲೆ ಪಾಪವನ್ನು ತರಬಾರದು.

ಯೆಶಾಯನ ೧:೧೩
ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು.

ಯಾಜಕಕಾಂಡ ೭:೧೮
ತನ್ನ ಸಮಾಧಾನ ಬಲಿ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಸಮರ್ಪಣೆಯಾಗುವದಿಲ್ಲ ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರಿಸಲ್ಪಡುವದಿಲ್ಲ. ಅದು ಹೊಲೆಯಾಗಿರುವದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.

ಯಾಜಕಕಾಂಡ ೧೮:೨೨
ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರು ಷನೊಂದಿಗೆ ಮಲಗಬಾರದು; ಅದು ಅಸಹ್ಯವಾದದ್ದು.

ಜ್ಞಾನೋಕ್ತಿಗಳು ೧೧:೧
ಮೋಸದ ತಕ್ಕಡಿ ಕರ್ತನಿಗೆ ಅಸಹ್ಯವಾಗಿದೆ; ನ್ಯಾಯದ ತೂಕ ಆತನ ಆನಂದವು.

ಜ್ಞಾನೋಕ್ತಿಗಳು ೧೧:೨೦
ಮೂರ್ಖ ಹೃದಯವುಳ್ಳವರು ಕರ್ತನಿಗೆ ಅಸಹ್ಯವಾದವರು; ತಮ್ಮ ಮಾರ್ಗದಲ್ಲಿ ಯಥಾರ್ಥವಾಗಿ ಇರುವವರು ಆತನ ಆನಂದವಾಗಿ ದ್ದಾರೆ.

ಜ್ಞಾನೋಕ್ತಿಗಳು ೧೨:೨೨
ಸುಳ್ಳಾ ಡುವ ತುಟಿಗಳು ಕರ್ತನಿಗೆ ಅಸಹ್ಯವಾಗಿವೆ. ಸತ್ಯದಿಂದ ನಡೆದುಕೊಳ್ಳುವವರು ಆತನ ಆನಂದವಾಗಿದ್ದಾರೆ.

ಜ್ಞಾನೋಕ್ತಿಗಳು ೧೫:೮
ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.

ಜ್ಞಾನೋಕ್ತಿಗಳು ೧೫:೨೬
ದುಷ್ಟರ ಆಲೋಚನೆಯು ಕರ್ತನಿಗೆ ಅಸಹ್ಯವಾಗಿದೆ; ಶುದ್ಧನ ಮಾತುಗಳು ಸಂತೋಷಕರ ವಾದ ಮಾತುಗಳೇ.

ಜ್ಞಾನೋಕ್ತಿಗಳು ೧೬:೫
ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಕರ್ತನಿಗೆ ಅಸಹ್ಯ. ಕೈಗೆ ಕೈ ಕೊಟ್ಟರೂ ದುಷ್ಟನು ಶಿಕ್ಷಿಸಲ್ಪಡದೆ ಇರುವದಿಲ್ಲ.

ಜ್ಞಾನೋಕ್ತಿಗಳು ೧೭:೧೫
ದುಷ್ಟರನ್ನು ನೀತಿ ವಂತರೆಂದು ನಿರ್ಣಯಿಸುವವನೂ ನೀತಿವಂತನನ್ನು ದಂಡನೆಗೆ ಗುರಿಮಾಡುವವನೂ ಇವರಿಬ್ಬರೂ ಕರ್ತ ನಿಗೆ ಅಸಹ್ಯರು.

ಜ್ಞಾನೋಕ್ತಿಗಳು ೨೦:೧೦
ವಿಧ ವಿಧವಾದ ತೂಕಗಳೂ ತರತರವಾದ ಅಳತೆಗಳೂ ಇವೆರಡೂ ಸಮವಾಗಿಯೇ ಕರ್ತನಿಗೆ ಅಸಹ್ಯ.

ಜ್ಞಾನೋಕ್ತಿಗಳು ೨೦:೨೩
ವಿಧವಿಧವಾದ ತೂಕ ಗಳು ಕರ್ತನಿಗೆ ಅಸಹ್ಯವಾಗಿವೆ; ಮೋಸದ ತಕ್ಕಡಿಯು ಒಳ್ಳೇದಲ್ಲ.

ಜ್ಞಾನೋಕ್ತಿಗಳು ೨೮:೯
ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.

ಪ್ರಕಟನೆ ೨೧:೨೭
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.

ಮಾರ್ಕನು ೧೩:೧೪
ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.

ಮತ್ತಾಯನು ೨೪:೧೫
ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)

ರೋಮನರಿಗೆ ೧:೨೬-೨೭
[೨೬] ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು.[೨೭] ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು.

ಯಾಜಕಕಾಂಡ ೨೦:೧೨-೧೩
[೧೨] ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸ ಬೇಕು; ಅವರು ಗಲಿಬಿಲಿಯನ್ನುಂಟುಮಾಡಿದ್ದಾರೆ; ಅವರ ರಕ್ತವು ಅವರ ಮೇಲೆ ಇರುವದು.[೧೩] ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.

ಜ್ಞಾನೋಕ್ತಿಗಳು ೬:೧೬-೨೦
[೧೬] ಈ ಆರು ವಿಷಯಗಳನ್ನು ಕರ್ತನು ಹಗೆಮಾಡುತ್ತಾನೆ; ಹೌದು, ಏಳು ಆತನಿಗೆ ಅಸಹ್ಯವಾಗಿವೆ; ಯಾವವಂದರೆ:[೧೭] ಹೆಮ್ಮೆಯ ದೃಷ್ಟಿ, ಸುಳ್ಳಾ ಡುವ ನಾಲಿಗೆ, ನಿರ್ದೋಷ ರಕ್ತವನ್ನು ಸುರಿಸುವ ಕೈಗಳು,[೧೮] ದುಷ್ಟ ಭಾವನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ಓಡಾಡುವದರಲ್ಲಿ ತ್ವರೆಪಡುವ ಕಾಲುಗಳು,[೧೯] ಅಸತ್ಯಗಳನ್ನು ಆಡುವ ಸುಳ್ಳು ಸಾಕ್ಷಿ ಮತ್ತು ಸಹೋ ದರರಲ್ಲಿ ವೈಷಮ್ಯವನ್ನು ಬಿತ್ತುವವನು.[೨೦] ನನ್ನ ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಕಟ್ಟಳೆಯನ್ನು ತ್ಯಜಿಸಬೇಡ.

Kannada Bible BSI 2016
Copyright © 2016 by The Bible Society of India. All rights reserved worldwide