A A A A A

ಏಂಜಲ್ಸ್ ಮತ್ತು ರಾಕ್ಷಸರು: [ಪ್ರಧಾನ ದೇವದೂತರು]


ಯೂದನು ೧:೯
ಆದರೂ ಪ್ರಧಾನ ದೇವದೂತನಾದ ಮಿಕಾಯೇಲನು ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ ಅವನು ಸೈತಾನನನ್ನು ದೂಷಿಸುವದಕ್ಕೆ ಧೈರ್ಯ ಗೊಳ್ಳದೆ--ಕರ್ತನು ನಿನ್ನನ್ನು ಗದರಿಸಲಿ ಅಂದನು.

ದಾನಿಯೇಲನ ೧೦:೧೩-೨೧
[೧೩] ಆದರೆ ಪಾರಸಿಯ ರಾಜ್ಯದ ಪ್ರಭುವು ಇಪ್ಪತ್ತೊಂದು ದಿವಸಗಳು ನನಗೆ ಎದುರು ನಿಂತನು; ಆದರೆ ಇಗೋ,ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ವಿಾಕಾಯೇಲನು ನನ್ನ ಸಹಾ ಯಕ್ಕೆ ಬಂದನು; ನಾನು ಆ ಪಾರಸೀಯ ಅರಸರ ಬಳಿಯಲ್ಲಿ ಉಳಿದುಕೊಂಡು[೧೪] ಈ ಅಂತ್ಯದಿನಗಳಲ್ಲಿ ನಿನ್ನ ಜನರಿಗಾದ ಗತಿಯನ್ನು ನಿನಗೆ ತಿಳಿಸುವದಕ್ಕೋಸ್ಕರ ನಾನು ಬಂದೆನು. ಆ ಕಾಲದ ಸಂಗತಿಯನ್ನು ವ್ಯಕ್ತಪಡಿ ಸುವ ಹಾಗೆ ದರ್ಶನವು ಇನ್ನೂ ಅನೇಕ ದಿವಸಗಳ ವರೆಗೂ ಇದೆ.[೧೫] ಅವನು ಯಾವಾಗ ನನಗೆ ಇಂಥ ಮಾತುಗಳನ್ನು ಹೇಳಿದನೋ ಆಗ ನಾನು ನನ್ನ ಮುಖ ವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.[೧೬] ಆಗ ಇಗೋ, ಮನುಷ್ಯಕುಮಾರನ ಹೋಲಿಕೆಯ ಹಾಗಿ ರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ಆಗ ನಾನು ಬಾಯಿತೆರೆದು ಮಾತನಾಡಿ ನನ್ನ ಮುಂದೆ ನಿಂತಿದ್ದವನಿಗೆ ಹೇಳಿದ್ದೇನಂದರೆ--ಓ ನನ್ನ ಒಡೆಯನೇ, ಆ ದರ್ಶನದ ನಿಮಿತ್ತ ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ; ನಾನು ತ್ರಾಣವನ್ನು ಉಳಿಸಿಕೊಳ್ಳ ಲಿಲ್ಲ.[೧೭] ಈ ನಿನ್ನ ಒಡೆಯನ ಸೇವಕನು ನನ್ನ ಒಡೆಯನ ಸಂಗಡ ಹೇಗೆ ಮಾತನಾಡುವನು? ನನ್ನ ವಿಷಯ ವಾದರೋ ಆಗಿನಿಂದಲೂ ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ; ಉಸಿರು ಸಹ ನನ್ನಲ್ಲಿ ಉಳಿಯಲಿಲ್ಲ.[೧೮] ಆಮೇಲೆ ಮತ್ತೆ ಅದೇ ಆಕಾರದ ಹಾಗೆ ಇದ್ದ ಒಬ್ಬ ಮನುಷ್ಯನು ನನ್ನನ್ನು ಬಲಪಡಿಸಿ[೧೯] ಹೇಳಿದ್ದೇ ನಂದರೆ--ಓ ಅತಿಪ್ರಿಯನಾದ ಮನುಷ್ಯನೇ, ಭಯಪಡ ಬೇಡ; ನಿನಗೆ ಸಮಾಧಾನವಾಗಲಿ; ಬಲವಾಗಿರು; ಹೌದು ಬಲವಾಗಿರು; ಯಾವಾಗ ಅವನು ನನ್ನ ಸಂಗಡ ಹೀಗೆ ಮಾತನಾಡಿದನೋ ನಾನು ನನ್ನ ಬಲವನ್ನು ಹೊಂದಿ--ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ ಎಂದು ಹೇಳಿದೆನು.[೨೦] ಅವನು ಹೇಳಿದ್ದೇನಂದರೆ--ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ? ಈಗ ನಾನು ಪಾರಸಿಯ ಪ್ರಭುವಿನ ಸಂಗಡ (ಕಾದಾಡಲು) ತಿರುಗಿ ಹೋಗುತ್ತೇನೆ; ನಾನು ಹೋದ ಮೇಲೆ ಇಗೋ, ಗ್ರೀಕ್‌ ಪ್ರಭುವು ಬರುವನು.ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.[೨೧] ಆದರೆ ಸತ್ಯದ ಬರಹದಲ್ಲಿ ಸೂಚಿಸಲ್ಪಟ್ಟದ್ದನ್ನು ನಿನಗೆ ತಿಳಿಸುತ್ತೇನೆ; ನಿಮ್ಮ ಪ್ರಭುವಾದ ವಿಾಕಾಯೇಲನೇ ಹೊರತು ಮತ್ತೆ ಯಾರೂ ನನ್ನ ಸಂಗಡ ಈ ಸಂಗತಿಗಳಲ್ಲಿ ಬಲಗೊಳ್ಳಲಿಲ್ಲ.

ದಾನಿಯೇಲನ ೧೨:೧
ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.

ಥೆಸೆಲೋನಿಯರಿಗೆ ೧ ೪:೧೬
ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು;

ದಾನಿಯೇಲನ ೯:೨೧
ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.

ದಾನಿಯೇಲನ ೮:೧೧-೧೬
[೧೧] ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು;[೧೨] ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು.[೧೩] ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ[೧೪] ಅವನು ನನಗೆ--ಎರಡು ಸಾವಿರದ ಮುನ್ನೂರು ದಿನಗಳ ವರೆಗೂ ನಡೆಯುವವು; ಅನಂತರ ಪರಿಶುದ್ಧ ಸ್ಥಳವು ಶುದ್ಧೀಕರಿಸಲ್ಪಡುವದು ಎಂದು ಹೇಳಿದನು.[೧೫] ನಾನು, ಹೌದು, ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ ಅದರ ಅರ್ಥವನ್ನು ಶೋಧಿಸಿ ದಾಗ, ಇಗೋ, ಮನುಷ್ಯನ ರೂಪದಂತೆ ಇದ್ದದ್ದು ನನ್ನ ಮುಂದೆ ನಿಂತಿತು;[೧೬] ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ--ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.

ಪ್ರಕಟನೆ ೧೨:೭-೯
[೭] ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.[೮] ಆಗ ಪರಲೋಕದಲ್ಲಿ ಅವರಿಗೆ ಸ್ಥಾನವು ಇನ್ನೆಂದಿಗೂ ಇಲ್ಲದೆ ಹೋಯಿತು.[೯] ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.

ಲೂಕನು ೧:೨೬
ಆರನೆಯ ತಿಂಗಳಿನಲ್ಲಿ ಗಲಿಲಾಯ ಪಟ್ಟಣದ ನಜರೇತೆಂಬ ಊರಿಗೆ ದೇವರಿಂದ ಗಬ್ರಿಯೇಲನೆಂಬ ದೂತನು

ಹಿಬ್ರಿಯರಿಗೆ ೧:೧೪
ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?

ಯೊಹೋಶುವ ೫:೧೩-೧೫
[೧೩] ಇದಾದ ಮೇಲೆ ಯೆಹೋಶುವನು ಯೆರಿ ಕೋವಿನ ಬಳಿಯಲ್ಲಿ ಇದ್ದಾಗ ಆದದ್ದೇನಂದರೆ, ತನ್ನ ಕಣ್ಣುಗಳನ್ನೆತ್ತಿ ನೋಡಿದಾಗ ಇಗೋ, ಒಬ್ಬ ಮನು ಷ್ಯನು ಅವನಿಗೆದುರಾಗಿ ನಿಂತಿದ್ದನು; ಆತನ ಕೈಯಲ್ಲಿ ಬಿಚ್ಚುಕತ್ತಿ ಇತ್ತು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ--ನೀನು ನಮಗೋಸ್ಕರವೋ? ನಮ್ಮ ವೈರಿಗಳಿಗೋಸ್ಕರವೋ? ಅಂದನು.[೧೪] ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.[೧೫] ಅದಕ್ಕೆ ಕರ್ತನ ಸೈನ್ಯದ ಅಧಿಪತಿಯು ಯೆಹೋಶುವನಿಗೆ--ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು; ನೀನು ನಿಂತಿರುವ ಸ್ಥಳವು ಪರಿಶುದ್ಧ ವಾದದ್ದು ಅಂದನು. ಹಾಗೆಯೇ ಯೆಹೋಶುವನು ಮಾಡಿದನು.

ಮತ್ತಾಯನು ೧೮:೧೦
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ; ಯಾಕಂದರೆ ನಾನು ನಿಮಗೆ ಹೇಳುವದೇನಂದರೆ--ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ.

ವಿಮೋಚನಾಕಾಂಡ ೩:೨
ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.

ಪ್ರಕಟನೆ ೧:೪
ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ

ಮತ್ತಾಯನು ೨೨:೩೦
ಯಾಕಂದರೆ ಪುನರುತ್ಥಾನದಲ್ಲಿ ಅವರು ಮದುವೆಯಾಗುವದಿಲ್ಲ ಮತ್ತು ಮದುವೆ ಮಾಡಿಕೊಡುವದೂ ಇಲ್ಲ; ಆದರೆ ಅವರು ಪರಲೋಕ ದಲ್ಲಿರುವ ದೇವದೂತರಂತೆ ಇರುತ್ತಾರೆ.

ಯೋಬನ ೧:೬
ಒಂದು ದಿನ ದೇವರ ಪುತ್ರರು ಕರ್ತನ ಮುಂದೆ ನಿಂತುಕೊಳ್ಳುವದಕ್ಕೆ ಬಂದಾಗ ಸೈತಾನನು ಸಹ ಅವ ರೊಂದಿಗೆ ಬಂದನು.

ಲೂಕನು ೨೦:೩೬
ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ.

Kannada Bible BSI 2016
Copyright © 2016 by The Bible Society of India. All rights reserved worldwide