A A A A A

ಕೆಟ್ಟ ಅಕ್ಷರ: [ದೂರು]


ಕೀರ್ತನೆಗಳು ೧೪೪:೧೪
ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ.ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.

ನೆಹೆಮೀಯಾ ೮:೧
ಜನರೆಲ್ಲರು ಏಕವಾಗಿ ನೀರು ಬಾಗಲಿಗೆ ಎದುರಾಗಿರುವ ಬೀದಿಯಲ್ಲಿ ಕೊಡಿ ಕೊಂಡು ಕರ್ತನು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ ಮೋಶೆಯ ನ್ಯಾಯ ಪ್ರಮಾಣದ ಪುಸ್ತಕವನ್ನು ತಕ್ಕೊಂಡು ಬರಲು ಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.

ಯೆಶಾಯನ ೨೪:೧೧
ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.

ಯೆರೆಮೀಯನ ಗ್ರಂಥ ೧೪:೨
ಅವರು ನಿನಗೆ--ನಾವು ಎಲ್ಲಿ ಹೋಗಬೇಕು ಎಂದು ಹೇಳಿದರೆ, ನೀನು ಅವ ರಿಗೆ--ಕರ್ತನು ಹೀಗೆ ಹೇಳುತ್ತಾನೆ--ಮರಣಕ್ಕೆ ಇರುವವರು ಮರಣಕ್ಕೆ; ಕತ್ತಿಗೆ ಇರುವವರು ಕತ್ತಿಗೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ, ಸೆರೆಗೆ ಇರು ವವರು ಸೆರೆಗೆ ಎಂದು ಹೇಳಬೇಕು.

ಜ್ಞಾನೋಕ್ತಿಗಳು ೨೩:೨೯
ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?

ಫಿಲಿಪಿಯರಿಗೆ ೪:೬-೭
[೬] ಯಾವ ಸಂಬಂಧ ವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆ ಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯ ಪಡಿಸಿರಿ.[೭] ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.

Kannada Bible BSI 2016
Copyright © 2016 by The Bible Society of India. All rights reserved worldwide