A A A A A

ಚರ್ಚ್: [ಚರ್ಚ್‌ಗೆ ಹಾಜರಾಗುವುದು]


ಹಿಬ್ರಿಯರಿಗೆ ೧೦:೨೪-೨೫
[೨೪] ನಾವು ಪರಸ್ಪರ ಹಿತಚಿಂತಕರಾಗಿದ್ದು ಪ್ರೀತಿಸುವದ ಕ್ಕಾಗಿಯೂ ಸತ್ಕಾರ್ಯ ಮಾಡುವದಕ್ಕಾಗಿಯೂ ಒಬ್ಬರ ನ್ನೊಬ್ಬರು ಪ್ರೇರೇಪಿಸೋಣ.[೨೫] ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.

ಮತ್ತಾಯನು ೧೮:೨೦
ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.

ಕೊಲೊಸ್ಸೆಯರಿಗೆ ೩:೧೬
ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ.

ಎಫೆಸಿಯರಿಗೆ ೪:೧೧-೧೩
[೧೧] ಪರಿಶುದ್ಧರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸೇವೆಯ ಕೆಲಸಕ್ಕೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೂಸ್ಕರವೂ[೧೨] ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.[೧೩] ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.

ಪ್ರೇಷಿತರ ೨:೪೨
ಅವರು ಅಪೊಸ್ತಲರ ಬೋಧನೆ ಯಲ್ಲಿಯೂ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿ ಯುವದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿ ಸ್ಥಿರಚಿತ್ತರಾಗಿದ್ದರು.

ರೋಮನರಿಗೆ ೧೦:೧೭
ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.

ಮತ್ತಾಯನು ೧೬:೧೮
ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.

ಪ್ರೇಷಿತರ ೯:೩೧-೩೨
[೩೧] ಹೀಗಿರಲಾಗಿ ಯೂದಾಯ ಗಲಿಲಾಯ ಸಮಾ ರ್ಯ ಸೀಮೆಗಳಲ್ಲಿದ್ದ ಸಭೆಗಳು ಭಕ್ತಿವೃದ್ಧಿ ಹೊಂದಿದವು; ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಆದರಣೆ ಹೊಂದಿ ಹೆಚ್ಚುತ್ತಾ ಬಂದವು.[೩೨] ಇದಾದಮೇಲೆ ಪೇತ್ರನು ಎಲ್ಲಾ ಕಡೆಯೂ ಸಂಚಾರಮಾಡುತ್ತಿರುವಾಗ ಲುದ್ದದಲ್ಲಿ ವಾಸವಾಗಿದ್ದ ಪರಿಶುದ್ಧರ ಬಳಿಗೂ ಬಂದನು.

ಮತ್ತಾಯನು ೬:೩೩
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

ಯಕೋಬನು ೧:೨೨
ನೀವು ವಾಕ್ಯದ ಪ್ರಕಾರ ನಡೆಯುವವರಾಗಿರ್ರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸ ಬೇಡಿರಿ.

ತಿಮೊಥೇಯನಿಗ ೨ ೪:೨
ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.

ಮತ್ತಾಯನು ೨೮:೧೯-೨೦
[೧೯] ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.[೨೦] ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

Kannada Bible BSI 2016
Copyright © 2016 by The Bible Society of India. All rights reserved worldwide