A A A A A

ದೇವರು: [ಆರ್ಥಿಕ ಆಶೀರ್ವಾದ]


ಸಮುವೇಲನು ೧ ೨:೭
ಕರ್ತನು ಬಡತನವನ್ನು ಐಶ್ವರ್ಯ ವನ್ನು ಕೊಡುವಾತನೂ ತಗ್ಗಿಸುವಾತನೂ ಉನ್ನತಮಾಡು ವಾತನೂ ಆಗಿದ್ದಾನೆ.

ಕೊರಿಂಥಿಯರಿಗೆ ೨ ೮:೯
ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.

ಯೊವಾನ್ನನು ಮೂರು ೧:೨
ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ.

ಉಪದೇಷಕ ೯:೧೦
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.

ಗಲಾತ್ಯರಿಗೆ ೬:೯
ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.

ಆದಿಕಾಂಡ ೧೩:೨
ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.

ಹೊಶೇಯನ ೪:೬
ನನ್ನ ಜನರು ತಿಳುವಳಿ ಕೆಯ ಕೊರತೆಯಿಂದ ನಾಶವಾಗಿದ್ದಾರೆ; ಆದಕಾರಣ ನೀನು ತಿಳುವಳಿಕೆಯನ್ನು ತಳ್ಳಿಬಿಟ್ಟದ್ದರಿಂದ ನಾನು ಸಹ ನನಗೆ ಯಾಜಕನಾಗದಂತೆ ನಿನ್ನನ್ನು ತಳ್ಳಿಬಿಡುತ್ತೇನೆ; ನೀನು ನಿನ್ನ ದೇವರ ನ್ಯಾಯಪ್ರಮಾಣವನ್ನು ಮರೆತು ಬಿಟ್ಟಿದ್ದರಿಂದ ನಾನು ಸಹ ನಿನ್ನ ಮಕ್ಕಳನ್ನು ಮರೆತು ಬಿಡುವೆನು.

ಯಕೋಬನು ೫:೧೨
ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.

ಯೊವಾನ್ನನು ೬:೧೨
ಅವರಿಗೆ ತೃಪ್ತಿಯಾದ ಮೇಲೆ ಯೇಸು ತನ್ನ ಶಿಷ್ಯರಿಗೆ--ಏನೂ ನಷ್ಟವಾಗ ದಂತೆ ಮಿಕ್ಕಿದ ತುಂಡುಗಳನ್ನು ಕೂಡಿಸಿರಿ ಅಂದನು.

ಲೂಕನು ೬:೩೮
ಕೊಡಿರಿ, ಆಗ ನಿಮಗೂ ಕೊಡ ಲ್ಪಡುವದು. ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು; ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು.

ಲೂಕನು ೧೨:೩೪
ಯಾಕಂದರೆ ನಿಮ್ಮ ಸಂಪತ್ತು ಇರುವಲ್ಲಿಯೇ ನಿಮ್ಮ ಹೃದಯವು ಸಹ ಇರುವದು.

ಜ್ಞಾನೋಕ್ತಿಗಳು ೧೦:೨೨
ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.

ಜ್ಞಾನೋಕ್ತಿಗಳು ೧೧:೧೪
ಆಲೋಚನೆ ಇಲ್ಲದಿರುವಲ್ಲಿ ಜನರು ಬೀಳುತ್ತಾರೆ; ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.

ಜ್ಞಾನೋಕ್ತಿಗಳು ೧೯:೧೭
ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.

ಜ್ಞಾನೋಕ್ತಿಗಳು ೨೧:೧೭
ಭೋಗಾಸ ಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ ತೈಲವನ್ನೂ ಅಪೇಕ್ಷಿಸುವವನು ನಿರ್ಭಾಗ್ಯನಾಗುವನು.

ಜ್ಞಾನೋಕ್ತಿಗಳು ೨೨:೯
ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.

ಜ್ಞಾನೋಕ್ತಿಗಳು ೨೮:೨೨-೨೭
[೨೨] ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.[೨೩] ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.[೨೪] ತನ್ನ ತಂದೆ ತಾಯಿಯನ್ನಾಗಲಿ ದೋಚಿಕೊಂಡು--ಇದು ದೋಷವಲ್ಲ ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.[೨೫] ಗರ್ವದ ಹೃದಯವುಳ್ಳವನು ಕಲಹ ವನ್ನೆಬ್ಬಿಸುವನು; ಕರ್ತನಲ್ಲಿ ಭರವಸವಿಡುವವನು ಪುಷ್ಟ ನಾಗುವನು.[೨೬] ತನ್ನ ಹೃದಯದಲ್ಲಿಯೇ ಭರವಸವಿ ಡುವವನು ಬುದ್ಧಿಹೀನನು; ಜ್ಞಾನದಿಂದ ನಡೆಯುವ ವನು ತಪ್ಪಿಸಿಕೊಳ್ಳುವನು.[೨೭] ಬಡವರಿಗೆ ದಾನಮಾಡು ವವರು ಕೊರತೆಪಡುವದಿಲ್ಲ; ತನ್ನ ಕಣ್ಣುಗಳನ್ನು ಮುಚ್ಚಿ ಕೊಳ್ಳುವವನಿಗೆ ಅನೇಕ ಶಾಪಗಳು.ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ. ಅವರು ನಾಶ ವಾದರೆ ನೀತಿವಂತರು ವೃದ್ಧಿಯಾಗುತ್ತಾರೆ.

ಕೀರ್ತನೆಗಳು ೨೪:೧
ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.

ಮತ್ತಾಯನು ೬:೩೩
ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

ಮತ್ತಾಯನು ೨೩:೨೩
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ

ಮತ್ತಾಯನು ೨೫:೨೧
ಆಗ ಅವನ ಯಜಮಾನನು ಅವನಿಗೆ--ನಂಬಿಗಸ್ತನಾದ ಒಳ್ಳೇ ಸೇವಕನೇ, ಒಳ್ಳೇದನ್ನು ಮಾಡಿದ್ದೀ. ಸ್ವಲ್ಪವಾದವುಗಳಲ್ಲಿ ನೀನು ನಂಬಿಗಸ್ತ ನಾದದ್ದರಿಂದ ನಾನು ನಿನ್ನನ್ನು ಬಹಳವಾದವುಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು; ನೀನು ನಿನ್ನ ಯಜಮಾನನ ಸಂತೋಷದಲ್ಲಿ ಪ್ರವೇಶಿಸು ಅಂದನು.

ರೋಮನರಿಗೆ ೧೩:೮
ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ಸಾಲವೂ ನಿಮಗೆ ಇರ ಬಾರದು. ಮತ್ತೊಬ್ಬರನ್ನು ಪ್ರೀತಿಸುವವನು ನ್ಯಾಯಪ್ರಮಾಣವನ್ನೆಲ್ಲಾ ನೆರವೇರಿಸಿದ್ದಾನೆ.

ಜ್ಞಾನೋಕ್ತಿಗಳು ೩:೯-೧೦
[೯] ನಿನ್ನ ಆಸ್ತಿಯಿಂದಲೂ ಅಭಿವೃದ್ಧಿಯ ಎಲ್ಲಾ ಪ್ರಥಮ ಫಲಗಳಿಂದಲೂ ಕರ್ತನನ್ನು ಸನ್ಮಾನಿಸು.[೧೦] ಹೀಗೆ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬಲ್ಪಡುವವು, ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿ ತುಳುಕುವವು.

ಕೀರ್ತನೆಗಳು ೧೨೧:೧-೨
[೧] ನಾನು ಕಣ್ಣೆತ್ತಿ ಬೆಟ್ಟಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವದು?[೨] ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನ ಬಳಿಯಿಂದಲೇ ನನ್ನ ಸಹಾ ಯವು ಬರುತ್ತದೆ.

ಮಾರ್ಕನು ೧೧:೨೨-೨೩
[೨೨] ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ.[೨೩] ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.

ಆದಿಕಾಂಡ ೧:೨೬-೨೭
[೨೬] ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.[೨೭] ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.

ಕೊರಿಂಥಿಯರಿಗೆ ೨ ೯:೬-೮
[೬] ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.[೭] ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.[೮] ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವದಕ್ಕೆ ಶಕ್ತನಾದ್ದರಿಂದ ನೀವು ಯಾವಾ ಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆ ಯುಳ್ಳವರಾಗಿ ಸಕಲಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರುವಿರಿ.

ಲೂಕನು ೧೪:೨೮-೩೦
[೨೮] ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ?[೨೯] ಒಂದು ವೇಳೆ ಹಾಗೆ ಲೆಕ್ಕ ಮಾಡದೆ ಅವನು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಅದನ್ನು ಪೂರೈಸದಿದ್ದರೆ ನೋಡುವವರೆಲ್ಲರೂ ಅವನಿಗೆ ಹಾಸ್ಯ ಮಾಡುವದಕ್ಕೆ ಆರಂಭಿಸಿ--[೩೦] ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು.

ಲೂಕನು ೬:೩೪-೩೬
[೩೪] ಯಾರಿಂದ ತಿರಿಗಿ ಪಡಕೊಳ್ಳಬೇಕೆಂದು ನಿರೀಕ್ಷಿಸುತ್ತಿರೋ ಅಂಥವರಿಗೆ ಸಾಲಕೊಟ್ಟರೆ ನಿಮಗೇನು ಹೊಗಳಿಕೆ ಬಂದೀತು? ಯಾಕಂದರೆ ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟಷ್ಟು ತಿರಿಗಿ ಪಡೆಯುವಂತೆ ಪಾಪಿಗಳಿಗೆ ಸಾಲ ಕೊಡುತ್ತಾರೆ.[೩೫] ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,[೩೬] ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರ ನೀವೂ ಕರುಣೆಯುಳ್ಳವರಾಗಿರ್ರಿ.

ಯಕೋಬನು ೫:೧-೩
[೧] ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ[೨] ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.[೩] ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ.

ಆದಿಕಾಂಡ ೧೨:೧-೨೦
[೧] ಆಗ ಕರ್ತನು ಅಬ್ರಾಮನಿಗೆ--ನೀನು ನಿನ್ನ ದೇಶದೊಳಗಿಂದಲೂ ಬಂಧು ಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರ ಬಂದು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು.[೨] ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.[೩] ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.[೪] ಹೀಗೆ ಕರ್ತನು ತನಗೆ ಹೇಳಿದ ಪ್ರಕಾರ ಅಬ್ರಾಮನು ಹೊರಟುಹೋದನು. ಲೋಟನೂ ಅವನ ಸಂಗಡ ಹೋದನು. ಅಬ್ರಾಮನು ಹಾರಾನಿ ನಿಂದ ಹೊರಟಾಗ ಎಪ್ಪತ್ತೈದು ವರುಷದವನಾಗಿದ್ದನು.[೫] ಇದಲ್ಲದೆ ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ಸಹೋದರನ ಮಗನಾದ ಲೋಟ ನನ್ನೂ ಅವರು ಕೂಡಿಸಿಕೊಂಡಿದ್ದ ಎಲ್ಲಾ ಸಂಪತ್ತನ್ನೂ ಹಾರಾನಿನಲ್ಲಿ ಅವರು ಸಂಪಾದಿಸಿಕೊಂಡವರನ್ನೂ ತಮ್ಮ ಸಂಗಡ ಕರಕೊಂಡು ಕಾನಾನ್‌ ದೇಶಕ್ಕೆ ಹೊರಟು ಅವರು ಕಾನಾನ್‌ ದೇಶಕ್ಕೆ ಬಂದರು.[೬] ಅಬ್ರಾಮನು ಆ ದೇಶದಲ್ಲಿ ಶೆಕೆಮ್‌ ಎಂಬ ಸ್ಥಳದ ಮೋರೆಯೆಂಬ ಮೈದಾನದ ವರೆಗೆ ಹಾದು ಹೋದನು. ಆಗ ಕಾನಾನ್ಯರು ದೇಶದಲ್ಲಿ ಇದ್ದರು.[೭] ಕರ್ತನು ಅಬ್ರಾಮನಿಗೆ ಕಾಣಿಸಿಕೊಂಡು--ನಿನ್ನ ಸಂತತಿಗೆ ನಾನು ಈ ದೇಶವನ್ನು ಕೊಡುವೆನು ಅಂದನು. ಆಗ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಕರ್ತನಿಗೆ ಬಲಿಪೀಠವನ್ನು ಕಟ್ಟಿದನು.[೮] ಅಲ್ಲಿಂದ ಅವನು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ ಪಶ್ಚಿಮದಲ್ಲಿ ಬೇತೇಲು ಪೂರ್ವದಲ್ಲಿ ಆಯಿಯು ಇರುವ ಹಾಗೆ ತನ್ನ ಗುಡಾರವನ್ನು ಹಾಕಿ ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡನು.[೯] ಅಬ್ರಾಮನು ಪ್ರಯಾಣ ಮಾಡಿ ದಕ್ಷಿಣದ ಕಡೆಗೆ ಇನ್ನೂ ಹೋಗುತ್ತಲೇ ಇದ್ದನು.[೧೦] ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ ಅಬ್ರಾಮನು ಐಗುಪ್ತದಲ್ಲಿ ಪ್ರವಾಸಿಯಾಗಿರುವದಕ್ಕೆ ಇಳಿದು ಹೋದನು. ಯಾಕಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.[೧೧] ಇದಾದ ಮೇಲೆ ಅವನು ಐಗುಪ್ತದ ಸವಿಾಪಕ್ಕೆ ಬಂದಾಗ ತನ್ನ ಹೆಂಡತಿಯಾದ ಸಾರಯಳಿಗೆ--ಇಗೋ, ನೀನು ನೋಡುವದಕ್ಕೆ ರೂಪವತಿ ಎಂದು ನನಗೆ ತಿಳಿದಿದೆ.[೧೨] ಹೀಗಿರುವದರಿಂದ ಐಗುಪ್ತ್ಯರು ನಿನ್ನನ್ನು ನೋಡಿ--ಈಕೆಯು ಅವನ ಹೆಂಡತಿ ಎಂದು ಹೇಳುವರು. ನನ್ನನ್ನು ಕೊಂದುಹಾಕಿ ನಿನ್ನನ್ನು ಜೀವದಲ್ಲಿ ಉಳಿಸುವರು.[೧೩] ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ಹೇಳಬೇಕು ಎಂದು ಕೇಳಿಕೊಳ್ಳುತ್ತೇನೆ ಅಂದನು.[೧೪] ಇದಾದ ಮೇಲೆ ಅಬ್ರಾಮನು ಐಗುಪ್ತಕ್ಕೆ ಬಂದಾಗ ಐಗುಪ್ತ್ಯರು ಆ ಸ್ತ್ರೀಯು ಬಹಳ ಸೌಂದರ್ಯ ವುಳ್ಳವಳೆಂದು ನೋಡಿದರು.[೧೫] ಫರೋಹನ ಪ್ರಧಾ ನರು ಸಹ ಆಕೆಯನ್ನು ನೋಡಿ ಫರೋಹನ ಮುಂದೆ ಆಕೆಯನ್ನು ಹೊಗಳಲಾಗಿ ಆ ಸ್ತ್ರೀಯು ಫರೋಹನ ಮನೆಗೆ ಒಯ್ಯಲ್ಪಟ್ಟಳು.[೧೬] ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.[೧೭] ಆದರೆ ಕರ್ತನು ಫರೋಹನನ್ನೂ ಅವನ ಮನೆ ಯನ್ನೂ ಅಬ್ರಾಮನ ಹೆಂಡತಿಯಾದ ಸಾರಯಳಿಗಾಗಿ ಮಹಾಬಾಧೆಗಳಿಂದ ಬಾಧಿಸಿದನು.[೧೮] ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ?[೧೯] ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು.ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.[೨೦] ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.

ಮತ್ತಾಯನು ೬:೧-೩೪
[೧] ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು.[೨] ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ.[೩] ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ.[೪] ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.[೫] ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ.[೬] ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.[೭] ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.[೮] ಆದದರಿಂದ ನೀವು ಅವರಂತೆ ಇರಬೇಡಿರಿ; ನಿಮ್ಮ ತಂದೆಯನ್ನು ಕೇಳುವದಕ್ಕಿಂತ ಮುಂಚೆಯೇ ನಿಮಗೆ ಅಗತ್ಯವಾಗಿ ರುವವುಗಳು ಯಾವವು ಎಂಬದು ಆತನಿಗೆ ತಿಳಿದದೆ.[೯] ಆದದರಿಂದ ನೀವು ಈ ರೀತಿಯಲ್ಲಿ ಪ್ರಾರ್ಥನೆ ಮಾಡಿರಿ--ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವಾಗಿರಲಿ. ನಿನ್ನ ರಾಜ್ಯವು ಬರಲಿ.[೧೦] ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.[೧೧] ನಮ್ಮ ಅನುದಿನದ ರೊಟ್ಟಿಯನ್ನು ಈ ದಿನವು ನಮಗೆ ದಯಪಾಲಿಸು.[೧೨] ನಮ್ಮ ಸಾಲಗಾರರನ್ನು ನಾವು ಕ್ಷಮಿಸುವಂತೆ ನಮ್ಮ ಸಾಲಗಳನ್ನು ನಮಗೆ ಕ್ಷಮಿಸು.[೧೩] ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್‌.[೧೪] ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು.[೧೫] ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.[೧೬] ಇದಲ್ಲದೆ ನೀವು ಉಪವಾಸ ಮಾಡುವಾಗ ಕಪಟಿಗಳ ಹಾಗೆ ವ್ಯಸನದ ಮುಖ ಮಾಡಿಕೊಳ್ಳ ಬೇಡಿರಿ. ಯಾಕಂದರೆ ತಾವು ಉಪವಾಸವಾಗಿ ದ್ದೇವೆಂದು ಜನರಿಗೆ ತೋರುವಂತೆ ಅವರು ತಮ್ಮ ಮುಖಗಳನ್ನು ವಿಕಾರ ಮಾಡಿಕೊಳ್ಳುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿ[೧೭] ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ.[೧೮] ಆಗ ನೀನು ಉಪವಾಸಮಾಡುತ್ತೀ ಎಂದು ಜನರಿಗೆ ಕಾಣದಿದ್ದರೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಕಾಣುವದು. ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು.[೧೯] ಭೂಲೋಕದಲ್ಲಿ ನಿಮಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಬೇಡಿರಿ; ಇಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳುಮಾಡುವದು; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವರು.[೨೦] ಆದರೆ ನಿಮ್ಮ ಗೋಸ್ಕರ ಪರಲೋಕದಲ್ಲಿ ಸಂಪತ್ತನ್ನು ಕೂಡಿಸಿಟ್ಟುಕೊಳ್ಳಿರಿ; ಅಲ್ಲಿ ನುಸಿಯೂ ಕಿಲುಬೂ ಅದನ್ನು ಹಾಳು ಮಾಡುವದಿಲ್ಲ; ಮತ್ತು ಕಳ್ಳರು ಕನ್ನಾ ಕೊರೆದು ಕದಿಯುವದೂ ಇಲ್ಲ.[೨೧] ಯಾಕಂದರೆ ನಿಮ್ಮ ಸಂಪತ್ತು ಎಲ್ಲಿ ಇದೆಯೋ ಅಲ್ಲಿ ನಿಮ್ಮ ಹೃದಯವೂ ಇರುವದು.[೨೨] ಕಣ್ಣು ಶರೀರದ ದೀಪವಾಗಿದೆ. ಆದಕಾರಣ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲಾ ಬೆಳಕಾಗಿರುವದು.[೨೩] ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.[೨೪] ಯಾವ ಮನುಷ್ಯನೂ ಇಬ್ಬರು ಯಜಮಾನರಿಗೆ ಸೇವೆ ಮಾಡಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಇನ್ನೊಬ್ಬನನ್ನು ಪ್ರೀತಿಮಾಡುವನು; ಇಲ್ಲವಾದರೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬ ನನ್ನು ಅಸಡ್ಡೆ ಮಾಡುವನು. ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ.[೨೫] ಆದಕಾರಣ ನಾನು ನಿಮಗೆ ಹೇಳುವದೇ ನಂದರೆ--ನಿಮ್ಮ ಪ್ರಾಣಕ್ಕೋಸ್ಕರ ನೀವು ಏನು ತಿನ್ನಬೇಕು ಮತ್ತು ಏನು ಕುಡಿಯಬೇಕು ಎಂಬದರ ವಿಷಯಕ್ಕಾಗಲೀ ಇಲ್ಲವೆ ನಿಮ್ಮ ಶರೀರಕ್ಕೆ ನೀವು ಏನು ಹೊದ್ದುಕೊಳ್ಳಬೇಕೆಂತಾಗಲೀ ಚಿಂತೆ ಮಾಡ ಬೇಡಿರಿ; ಊಟಕ್ಕಿಂತ ಪ್ರಾಣವೂ ಉಡುಪಿಗಿಂತ ಶರೀರವೂ ಹೆ[೨೬] ಆಕಾಶದ ಪಕ್ಷಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದೂ ಇಲ್ಲ, ಇಲ್ಲವೆ ಕಣಜದಲ್ಲಿ ಕೂಡಿಸಿಟ್ಟುಕೊಳ್ಳುವದೂ ಇಲ್ಲ; ಆದರೂ ಪರಲೋಕದ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಾದವರಲ್ಲವೇ?[೨೭] ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?[೨೮] ಮತ್ತು ಉಡುಪಿಗಾಗಿ ನೀವು ಯಾಕೆ ಚಿಂತೆ ಮಾಡುತ್ತೀರಿ? ಹೊಲದಲ್ಲಿ ತಾವರೆಗಳು ಹೇಗೆ ಬೆಳೆಯುತ್ತವೆ ಎಂಬದನ್ನು ಗಮನಿಸಿರಿ; ಅವು ಕಷ್ಟಪಡು ವದಿಲ್ಲ ಮತ್ತು ನೂಲುವದೂ ಇಲ್ಲ.[೨೯] ಆದರೂ ನಾನು ನಿಮಗೆ ಹೇಳುವದೇನಂದರೆ-- ಸೊಲೊಮೋನನು ಸಹ ತನ್ನ ಎಲ್ಲಾ ವೈಭವದಲ್ಲಿಯೂ ಇವುಗಳಲ್ಲಿ ಒಂದರಂತೆಯಾದರೂ ಧರಿಸಿರಲಿಲ್ಲ.[೩೦] ಆದದರಿಂದ ಈ ಹೊತ್ತು ಇದ್ದು ನಾಳೆ ಒಲೆಗೆ ಹಾಕಲ್ಪಡುವ ಹೊಲದ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ ಓ ಅಲ್ಪ ವಿಶ್ವಾಸಿಗಳೇ, ಆತನು ಇನ್ನೂ ಎಷ್ಟೋ ಹೆಚ್ಚಾಗಿ ನಿಮಗೆ ಉಡಿಸುವನಲ್ಲವೇ?[೩೧] ಆದಕಾರಣ--ನಾವು ಏನು ಊಟಮಾಡಬೇಕು? ಇಲ್ಲವೆ ಏನು ಕುಡಿಯಬೇಕು? ಇಲ್ಲವೆ ಯಾವದನ್ನು ಧರಿಸಿಕೊಳ್ಳಬೇಕು ಎಂದು ಹೇಳುತ್ತಾ ಚಿಂತೆಮಾಡ ಬೇಡಿರಿ.[೩೨] (ಯಾಕಂದರೆ ಇವೆಲ್ಲವುಗಳಿಗಾಗಿ ಅನ್ಯಜನರು ತವಕ ಪಡುತ್ತಾರೆ;) ಆದರೆ ಇವೆಲ್ಲವುಗಳು ನಿಮಗೆ ಅಗತ್ಯವಾಗಿವೆ ಎಂದು ಪರಲೋಕದ ನಿಮ್ಮ ತಂದೆಗೆ ತಿಳಿದದೆ.[೩೩] ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.[೩೪] ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

ಧರ್ಮೋಪದೇಷಕಾಂಡ ೨೮:೧-೬೮
[೧] ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಎಚ್ಚರಿಕೆಯಿಂದ ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಂಡರೆ ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಎಲ್ಲಾ ಜನಾಂಗಗಳಿಗಿಂತ ಉನ್ನತದಲ್ಲಿರಿಸುವನು.[೨] ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.[೩] ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ,[೪] ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.[೫] ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ.[೬] ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ.[೭] ನಿನಗೆ ವಿರೋಧವಾಗಿ ಏಳುವ ನಿನ್ನ ಶತ್ರುಗಳನ್ನು ಕರ್ತನು ನಿನ್ನ ಮುಂದೆ ಹೊಡೆದು ಬಿಡುವನು; ಅವರು ಒಂದೇ ಮಾರ್ಗದಲ್ಲಿ ನಿನಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ನಿನ್ನ ಮುಂದೆ ಓಡಿಹೋಗುವರು.[೮] ನಿನ್ನ ಕಣಜಗಳಲ್ಲಿಯೂ ನೀನು ಕೈಹಾಕುವ ಎಲ್ಲಾದರಲ್ಲಿಯೂ ನಿನಗೆ ಆಶೀರ್ವಾದ ಬರುವ ಹಾಗೆ ಕರ್ತನು ಅಪ್ಪಣೆಕೊಡುವನು; ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ಆಶೀರ್ವಾದ ಕೊಡುವನು.[೯] ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು.[೧೦] ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು;[೧೧] ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು.[೧೨] ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.[೧೩] ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ.[೧೪] ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.[೧೫] ಆದರೆ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ಕೈಕೊಳ್ಳದೆ ಹೋದರೆ ಈ ಎಲ್ಲಾ ಶಾಪಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.[೧೬] ಪಟ್ಟಣದಲ್ಲಿ ನಿನಗೆ ಶಾಪ; ಹೊಲದಲ್ಲಿ ನಿನಗೆ ಶಾಪ;[೧೭] ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ.[೧೮] ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಶಾಪ.[೧೯] ಬರು ವಾಗ ನಿನಗೆ ಶಾಪ; ಹೊರಡುವಾಗ ನಿನಗೆ ಶಾಪ.[೨೦] ನೀನು ನನ್ನನ್ನು ಬಿಟ್ಟು ನಿನ್ನ ದುಷ್ಕ್ರಿಯೆಗಳ ಕೆಟ್ಟತ ನದ ನಿಮಿತ್ತ ನೀನು ನಾಶವಾಗುವ ವರೆಗೂ ಶೀಘ್ರ ವಾಗಿ ಕೆಟ್ಟುಹೋಗುವ ವರೆಗೂ ನೀನು ಮಾಡುವ ಎಲ್ಲಾ ಕೈಕೆಲಸದಲ್ಲಿ ಶಾಪವನ್ನೂ ಗಾಬರಿಯನ್ನೂ ಗದರಿಕೆಯನ್ನೂ ಕರ್ತನು ನಿನ್ನ ಮೇಲೆ ಕಳುಹಿಸುವನು.[೨೧] ನೀನು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವ ವರೆಗೆ ವ್ಯಾಧಿಯು ನಿನಗೆ ಅಂಟಿಕೊಳ್ಳುವಂತೆ ಕರ್ತನು ಮಾಡುವನು.[೨೨] ಕ್ಷಯರೋಗದಿಂದಲೂ ಜ್ವರದಿಂದಲೂ ಉರಿಪಾತ ದಿಂದಲೂ ಮಹಾತಾಪದಿಂದಲೂ ಕತ್ತಿಯಿಂದಲೂ ಕಾಡಿಗೆಯಿಂದಲೂ ಬಾಣಂತಿ ರೋಗದಿಂದಲೂ ಕರ್ತನು ನಿನ್ನನ್ನು ಹೊಡೆಯುವನು; ನೀನು ನಾಶ ವಾಗುವ ಪರ್ಯಂತರ ಅವು ನಿನ್ನನ್ನು ಹಿಂದಟ್ಟುವವು.[೨೩] ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು.[೨೪] ಕರ್ತನು ನಿನ್ನ ದೇಶದ ಮಳೆಯನ್ನು ಹುಡಿಯೂ ಧೂಳೂ ಆಗುವಂತೆ ಮಾಡು ವನು; ನೀನು ನಾಶವಾಗುವ ವರೆಗೆ ಅದು ಆಕಾಶದಿಂದ ನಿನ್ನ ಮೇಲೆ ಇಳಿದು ಬರುವದು.[೨೫] ಕರ್ತನು ನಿನ್ನನ್ನು ನಿನ್ನ ಶತ್ರುಗಳ ಮುಂದೆ ಹೊಡೆದುಬಿಡುವನು; ನೀನು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ಹೊರಟು ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗಿ ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಿ.[೨೬] ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗು ವವು; ಯಾರೂ ಅವುಗಳನ್ನು ಬೆದರಿಸುವದಿಲ್ಲ.[೨೭] ಕರ್ತನು ನಿನ್ನನ್ನು ಐಗುಪ್ತದ ಹುಣ್ಣುಗಳಿಂದಲೂ ಗಡ್ಡೆವ್ಯಾಧಿಯಿಂದಲೂ ಕಜ್ಜಿಯಿಂದಲೂ ಇಸಬಿನಿಂದ ಲೂ ನೀನು ವಾಸಿಯಾಗಕೂಡದ ಹಾಗೆ ಹೊಡೆ ಯುವನು.[೨೮] ಕರ್ತನು ನಿನ್ನನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಹೊಡೆಯುವನು.[೨೯] ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.[೩೦] ಹೆಂಡತಿಯನ್ನು ನಿಶ್ಚಯಿಸಿಕೊಂಡರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳುವನು; ಮನೆಯನ್ನು ಕಟ್ಟಿದರೆ ಅದರಲ್ಲಿ ವಾಸಮಾಡುವದಿಲ್ಲ; ದ್ರಾಕ್ಷೇತೋಟವನ್ನು ನೆಟ್ಟರೆ ಅದರ ಫಲವನ್ನು ಕೂಡಿಸುವದಿಲ್ಲ.[೩೧] ನಿನ್ನ ಎತ್ತು ನಿನ್ನ ಕಣ್ಣುಗಳ ಮುಂದೆ ಕೊಯ್ಯಲ್ಪಟ್ಟಾಗ ನೀನು ಅದರಲ್ಲಿ ತಿನ್ನುವದಿಲ್ಲ; ನಿನ್ನ ಕತ್ತೆ ನಿನ್ನ ಕಣ್ಣುಗಳ ಮುಂದೆ ಬಲಾತ್ಕಾರವಾಗಿ ಒಯ್ಯಲ್ಪಟ್ಟು ನಿನಗೆ ಮತ್ತೆ ಸಿಕ್ಕುವದಿಲ್ಲ; ನಿನ್ನ ಕುರಿಗಳು ನಿನ್ನ ಶತ್ರುವಿಗೆ ಕೊಡಲ್ಪಡುವವು; ಅವುಗಳನ್ನು ರಕ್ಷಿಸುವದಕ್ಕೆ ಯಾರೂ ಇರುವದಿಲ್ಲ.[೩೨] ನಿನ್ನ ಕುಮಾರ ಕುಮಾರ್ತೆಯರು ಬೇರೆ ಜನಕ್ಕೆ ಕೊಡಲ್ಪಟ್ಟಿರಲಾಗಿ ನಿನ್ನ ಕಣ್ಣುಗಳು ಅದನ್ನು ನೋಡಿ ಅವರ ನಿಮಿತ್ತ ಕ್ಷೀಣಿಸುತ್ತಾ ಇರುವಾಗ ನಿನ್ನ ಕೈಯಲ್ಲಿ ಏನೂ ತ್ರಾಣವಿಲ್ಲದೆ ಇರುವದು.[೩೩] ನಿನ್ನ ಭೂಮಿಯ ಫಲವನ್ನೂ ನಿನ್ನ ಎಲ್ಲಾ ಆದಾಯವನ್ನೂ ನೀನರಿಯದ ಜನವು ತಿಂದುಬಿಡುವದು; ನೀನು ಯಾವಾ ಗಲೂ ಬಲಾತ್ಕಾರವನ್ನೂ ಸಂಕಟವನ್ನೂ ಅನುಭವಿ ಸುವಿ.[೩೪] ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ.[೩೫] ಕರ್ತನು ನಿನ್ನನ್ನು ಮೊಣಕಾಲುಗಳಲ್ಲಿಯೂ ಕಾಲು ಗಳಲ್ಲಿಯೂ ವಾಸಿಮಾಡಕೂಡದ ಕೆಟ್ಟ ಉರಿ ಹುಣ್ಣಿ ನಿಂದ ಅಂಗಾಲು ಮೊದಲುಗೊಂಡು ನೆತ್ತಿಯ ವರೆಗೆ ಹೊಡೆಯುವನು.[೩೬] ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.[೩೭] ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.[೩೮] ಬಹಳ ಬೀಜವನ್ನು ಹೊಲಕ್ಕೆ ತಂದು ಸ್ವಲ್ಪ ಕೂಡಿಸುವಿ; ಯಾಕಂದರೆ ಮಿಡತೆ ಅದನ್ನು ತಿಂದು ಬಿಡುವದು.[೩೯] ದ್ರಾಕ್ಷೇತೋಟಗಳನ್ನು ನೆಟ್ಟು ಕಾಪಾ ಡುವಿ; ಆದರೆ ದ್ರಾಕ್ಷಾರಸವನ್ನು ಕುಡಿಯುವದಿಲ್ಲ. ಹಣ್ಣು ಕೂಡಿಸುವದಿಲ್ಲ; ಯಾಕಂದರೆ ಹುಳ ಅದನ್ನು ತಿಂದುಬಿಡುವದು.[೪೦] ಎಣ್ಣೇ ಮರಗಳು ನಿನ್ನ ಎಲ್ಲಾ ಮೇರೆಗಳಲ್ಲಿ ಇರುವವು. ಆದರೆ ನೀನು ಎಣ್ಣೆ ಹಚ್ಚಿಕೊಳ್ಳುವದಿಲ್ಲ; ಯಾಕಂದರೆ ನಿನ್ನ ಎಣ್ಣೇ ಫಲಗಳು ಉದುರುವವು.[೪೧] ಕುಮಾರ ಕುಮಾರ್ತೆಯರನ್ನು ಪಡೆಯುವಿ; ಆದರೆ ಅವರ ಕೂಡ ಸಂತೋಷಿಸು ವದಿಲ್ಲ; ಯಾಕಂದರೆ ಅವರು ಸೆರೆಯಾಗಿ ಹೋಗು ವರು.[೪೨] ನಿನ್ನ ಎಲ್ಲಾ ಮರಗಳನ್ನೂ ಹೊಲದ ಪೈರನ್ನೂ ಈ ಮಿಡತೆ ತಿಂದುಬಿಡುವದು.[೪೩] ನಿನ್ನ ಮಧ್ಯದಲ್ಲಿರುವ ಪರವಾಸಿ ಮೇಲೆ ಮೇಲಕ್ಕೆ ನಿನ್ನ ಮೇಲೆ ಏರುವನು; ಆದರೆ ನೀನು ಕೆಳ ಕೆಳಗೆ ಇಳಿಯುವಿ.[೪೪] ಅವನು ನಿನಗೆ ಸಾಲಕೊಡುವನು; ನೀನು ಅವನಿಗೆ ಸಾಲ ಕೊಡುವದಿಲ್ಲ. ಅವನು ತಲೆಯಾಗುವನು, ನೀನು ಬಾಲವಾಗುವಿ.[೪೫] ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳದೆ ಆತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ನಿಯಮಗಳನ್ನೂ ಕೈಕೊಳ್ಳದೆ ಇದ್ದದರಿಂದ ಈ ಶಾಪಗಳೆಲ್ಲಾ ನಿನ್ನ ಮೇಲೆ ಬಂದು ನಿನ್ನನ್ನು ನಾಶಮಾಡುವ ವರೆಗೂ ನಿನ್ನನ್ನು ಹಿಂದಟ್ಟಿ ನಿನಗೆ ಪ್ರಾಪ್ತವಾಗುವವು.[೪೬] ಅವು ನಿನ್ನ ಮೇಲೆಯೂ ನಿನ್ನ ಸಂತತಿಯ ಮೇಲೆಯೂ ನಿತ್ಯವಾಗಿ ಗುರುತೂ ಅದ್ಭುತವೂ ಆಗಿರುವವು.[೪೭] ನೀನು ಎಲ್ಲವುಗಳ ಸಮೃದ್ಧಿಯಲ್ಲಿ ನಿನ್ನ ದೇವರಾದ ಕರ್ತನಿಗೆ ಸಂತೋಷದಿಂದಲೂ ಮನಸ್ಸಿನ ಸೌಖ್ಯ ದಿಂದಲೂ ಸೇವಿಸದೆ ಇದದ್ದರಿಂದ[೪೮] ಹಸಿವೆಯಲ್ಲಿ, ದಾಹದಲ್ಲಿ, ಬೆತ್ತಲೆಯಲ್ಲಿ, ಎಲ್ಲವುಗಳ ಕೊರತೆಯಲ್ಲಿ ದೇವರು ನಿನ್ನ ಮೇಲೆ ಕಳುಹಿಸುವ ನಿನ್ನ ಶತ್ರುಗಳನ್ನು ಸೇವಿಸಬೇಕು; ಆತನು ನಿನ್ನನ್ನು ನಾಶಮಾಡುವ ವರೆಗೆ ಕಬ್ಬಿಣದ ನೊಗವನ್ನು ನಿನ್ನ ಕುತ್ತಿಗೆಯ ಮೇಲೆ ಹೊರಿ ಸುವನು.[೪೯] ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ[೫೦] ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.[೫೧] ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು.[೫೨] ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು.[೫೩] ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.[೫೪] ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು.[೫೫] ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ.[೫೬] ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ[೫೭] ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.[೫೮] ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ[೫೯] ಕರ್ತನು ನಿನ್ನ ಬಾಧೆಗಳನ್ನೂ ನಿನ್ನ ಸಂತತಿಯ ಬಾಧೆಗಳನ್ನೂ ಆಶ್ಚರ್ಯವಾಗ ಮಾಡುವನು; ಅವು ದೊಡ್ಡದಾದ ಮತ್ತು ಸ್ಥಿರವಾದ ಬಾಧೆಗಳೂ ಘೋರ ವಾದ ಮತ್ತು ಸ್ಥಿರವಾದ ರೋಗಗಳೂ ಆಗುವವು.[೬೦] ಇದಲ್ಲದೆ ನೀನು ಹೆದರಿಕೊಂಡ ಐಗುಪ್ತದ ರೋಗ ಗಳನ್ನೆಲ್ಲಾ ಆತನು ತಿರಿಗಿ ನಿನ್ನ ಮೇಲೆ ಬರಮಾಡು ವನು; ಅವು ನಿನ್ನನ್ನು ಅಂಟಿಕೊಳ್ಳುವವು.[೬೧] ನೀನು ಪೂರ್ಣವಾಗಿ ನಾಶವಾಗುವ ವರೆಗೆ ಈ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ಕರ್ತನು ನಿನ್ನ ಮೇಲೆ ತರುವನು.[೬೨] ಆಗ ನೀನು ನಿನ್ನ ದೇವರಾದ ಕರ್ತನ ಮಾತನ್ನು ಕೇಳದೆ ಇರುವದರಿಂದ ನೀವು ಅಸಂಖ್ಯವಾದ ಆಕಾಶದ ನಕ್ಷತ್ರಗಳ ಹಾಗಿದ್ದದ್ದಕ್ಕೆ ಬದಲಾಗಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.[೬೩] ಆಗುವದೇನಂದರೆ, ಕರ್ತನು ಹೇಗೆ ನಿಮಗೆ ಒಳ್ಳೇದನ್ನು ಮಾಡುವದಕ್ಕೂ ನಿಮ್ಮನ್ನು ಹೆಚ್ಚಿಸು ವದಕ್ಕೂ ನಿಮಗೋಸ್ಕರ ಸಂತೋಷಿಸಿದನೋ ಹಾಗೆ ಕರ್ತನು ನಿಮ್ಮನ್ನು ಕೆಡಿಸುವದಕ್ಕೂ ನಿಮ್ಮನ್ನು ನಾಶ ಮಾಡುವದಕ್ಕೂ ನಿಮಗೆ ವಿರೋಧವಾಗಿ ಸಂತೋಷಿ ಸುವನು; ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಹೋಗುವ ದೇಶದಿಂದ ನೀನು ಕೀಳಲ್ಪಡುವಿ.[೬೪] ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.[೬೫] ಈ ಜನಾಂಗಗಳಲ್ಲಿ ನಿನಗೆ ನೆಮ್ಮದಿ ಇರುವದಿಲ್ಲ; ನಿನ್ನ ಅಂಗಾಲಿಗೆ ವಿಶ್ರಾಂತಿ ಆಗುವದಿಲ್ಲ; ಅಲ್ಲಿ ಕರ್ತನು ನಿನಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಗ್ಗಿದ ಮನಸ್ಸನ್ನೂ ಕೊಡು ವನು.[೬೬] ನಿನ್ನ ಜೀವವು ನಿನ್ನ ಮುಂದೆ ತೂಗಾಡುವದು. ರಾತ್ರಿ ಹಗಲು ನಿನ್ನ ಜೀವನಕ್ಕೆ ನಿಶ್ಚಯವಿಲ್ಲದೆ ಹೆದರುವಿ.[೬೭] ನಿನ್ನ ಹೃದಯದಲ್ಲಿ ಆಗುವ ಹೆದರಿಕೆಯ ನಿಮಿತ್ತವೂ ನಿನ್ನ ಕಣ್ಣುಗಳು ನೋಡುವ ನೋಟದ ನಿಮಿತ್ತವೂ ಮುಂಜಾನೆಯಲ್ಲಿ--ಅಯ್ಯೋ, ಸಂಜೆ ಆಗ ಬೇಕು ಅನ್ನುವಿ. ಸಂಜೆಯಲ್ಲಿ--ಅಯ್ಯೋ, ಮುಂಜಾನೆ ಆಗಬೇಕು ಅನ್ನುವಿ.ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.[೬೮] ಇದಲ್ಲದೆ ಕರ್ತನು--ನೀನು ಇನ್ನು ಮೇಲೆ ನೋಡುವದಿಲ್ಲವೆಂದು ನಾನು ಹೇಳಿದ ಮಾರ್ಗದಿಂದ ಹಡಗುಗಳಲ್ಲಿ ನಿನ್ನನ್ನು ಐಗುಪ್ತ್ಯಕ್ಕೆ ತಿರಿಗಿ ಬರಮಾಡುವೆನು; ಅಲ್ಲಿ ದಾಸ ರಾಗಿಯೂ ದಾಸಿಗಳಾಗಿಯೂ ನಿಮ್ಮ ಶತ್ರುಗಳಿಗೆ ಮಾರಲ್ಪಡುವಿರಿ. ಆದರೆ ಕೊಂಡುಕೊಳ್ಳುವವ ನೊಬ್ಬನೂ ಇರುವದಿಲ್ಲ.

Kannada Bible BSI 2016
Copyright © 2016 by The Bible Society of India. All rights reserved worldwide