A A A A A

ಜೀವನ: [ವಯಸ್ಸಾದ]


ತಿಮೊಥೇಯನಿಗ ೧ ೫:೮
ಯಾವನಾದರೂ ಸ್ವಂತದವರನ್ನು, ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆ ದವನು ನಂಬದವನಿಗಿಂತ ಕೆಟ್ಟವನೂ ಆಗಿದ್ದಾನೆ.

ಕೊರಿಂಥಿಯರಿಗೆ ೨ ೪:೧೬
ಈ ಕಾರಣದಿಂದ ನಾವು ಧೈರ್ಯಗೆಡುವದಿಲ್ಲ; ಆದರೆ ನಮ್ಮ ಹೊರಮನುಷ್ಯನು ನಾಶವಾಗುತಾ ಇದ್ದರೂ ನಮ್ಮ ಒಳಮನುಷ್ಯನು ದಿನೇದಿನೇ ಹೊಸಬ ನಾಗುತ್ತಾ ಇರುವನು.

ಧರ್ಮೋಪದೇಷಕಾಂಡ ೩೨:೭
ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊ; ತಲ ತಲಾಂತರಗಳ ವರುಷಗಳನ್ನು ಗ್ರಹಿಸಿಕೊ; ನಿನ್ನ ತಂದೆ ಯನ್ನು ಕೇಳು, ಅವನು ನಿನಗೆ ತಿಳಿಸುವನು. ನಿನ್ನ ಹಿರಿಯರನ್ನು ಕೇಳು, ಅವರು ನಿನಗೆ ಹೇಳುವರು.

ಧರ್ಮೋಪದೇಷಕಾಂಡ ೩೪:೭
ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ.

ಉಪದೇಷಕ ೭:೧೦
ಹಿಂದಿನ ದಿವಸಗಳು ಈ ದಿವಸಗಳಿಗಿಂತ ಮೇಲಾ ಗಿರುವದಕ್ಕಾಗಿ ಕಾರಣವೇನು ಎಂದು ನೀನು ಹೇಳ ಬೇಡ. ಈ ವಿಷಯದಲ್ಲಿ ನೀನು ಜ್ಞಾನದಿಂದ ವಿಚಾರಿ ಸುವದಿಲ್ಲ.

ವಿಮೋಚನಾಕಾಂಡ ೨೦:೧೨
ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು.

ಆದಿಕಾಂಡ ೬:೩
ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.

ಆದಿಕಾಂಡ ೨೫:೮
ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.

ಯೆಶಾಯನ ೪೦:೨೯
ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.

ಯೆಶಾಯನ ೪೬:೪
ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.

ಯೋಬನ ೫:೨೬
ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.

ಯೋಬನ ೧೨:೧೨-೨೦
[೧೨] ಮುದುಕರಲ್ಲಿ ಜ್ಞಾನವೂ ದಿನಗಳುದ್ದಕ್ಕೂ ಗ್ರಹಿ ಕೆಯೂ ಇವೆ.[೧೩] ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ.[೧೪] ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.[೧೫] ಇಗೋ, ಆತನು ಜಲಗಳನ್ನು ಬಿಗಿ ಹಿಡಿಯುತ್ತಾನೆ; ಅವು ಬತ್ತಿಹೋಗುತ್ತವೆ; ಆತನು ಅವುಗಳನ್ನು ಹೊರಗೆ ಕಳುಹಿಸಿದಾಗ ಅವು ಭೂಮಿ ಯನ್ನು ಬುಡಮೇಲು ಮಾಡುತ್ತವೆ.[೧೬] ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.[೧೭] ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ.[೧೮] ಆತನು ಅರಸರ ಬಂಧನಗಳನ್ನು ಬಿಡಿಸಿ ಅವರ ನಡುಗಳಿಗೆ ನಡುಕಟ್ಟನ್ನು ಕಟ್ಟುತ್ತಾನೆ.[೧೯] ಆತನು ಪ್ರಧಾನರನ್ನು ಕೇಡಿಗೆ ನಡಿಸು ತ್ತಾನೆ; ಬಲಿಷ್ಠರನ್ನು ಕೆಡವಿಬಿಡುತ್ತಾನೆ.[೨೦] ನಂಬಿಕೆಯು ಳ್ಳವರ ಮಾತನ್ನು ತೆಗೆದುಹಾಕುತ್ತಾನೆ; ವೃದ್ಧರ ವಿವೇಕ ವನ್ನು ಇಲ್ಲದಾಗಿ ಮಾಡುತ್ತಾನೆ.

ಯೋಬನ ೩೨:೭
ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು.

ಯೊವೇಲನ ೨:೨೮
ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.

ಯಾಜಕಕಾಂಡ ೧೯:೩೨
ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.

ಫಿಲೆಮೋನನಿಗೆ ೧:೯
ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.

ಕೀರ್ತನೆಗಳು ೭೧:೯
ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.

ಕೀರ್ತನೆಗಳು ೭೧:೧೮
ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.

ಕೀರ್ತನೆಗಳು ೭೩:೨೬
ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.

ಕೀರ್ತನೆಗಳು ೯೦:೧೦-೧೨
[೧೦] ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.[೧೧] ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.[೧೨] ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.

ಕೀರ್ತನೆಗಳು ೯೧:೧೬
ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.

ಜ್ಞಾನೋಕ್ತಿಗಳು ೧೭:೬
ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ.

ಜ್ಞಾನೋಕ್ತಿಗಳು ೨೦:೨೯
ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.

ಜ್ಞಾನೋಕ್ತಿಗಳು ೨೩:೨೨
ನಿನ್ನನ್ನು ಪಡೆದ ತಂದೆಯ ಮಾತಿಗೆ ಕಿವಿಗೊಡು; ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆಮಾಡಬೇಡ.

ಕೀರ್ತನೆಗಳು ೩೭:೩೫
ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.

ಕ್ರಾನಿಕಲ್ಸ್ ೧ ೨೯:೨೮
ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು.

ಅರಸುಗಳು ೧ ೩:೧೪
ನೀನು ನಿನ್ನ ತಂದೆಯಾದ ದಾವೀದನು ನಡೆದ ಪ್ರಕಾರ ನನ್ನ ಮಾರ್ಗಗಳಲ್ಲಿ ನಡೆದು ಕಟ್ಟಳೆಗಳನ್ನೂ ಆಜ್ಞೆಗಳನ್ನೂ ಕೈಕೊಂಡರೆ ನಿನ್ನ ದಿವಸಗಳನ್ನು ಹೆಚ್ಚಿಸುವೆನು ಅಂದನು.

ಕೀರ್ತನೆಗಳು ೧೦೩:೫
ನಿನ್ನ ಯೌವನವು ಹದ್ದಿನಂತೆ ಹೊಸದಾಗುವ ಹಾಗೆ ನಿನ್ನ ಬಾಯಿಯನ್ನು ಒಳ್ಳೇದ ರಿಂದ ತೃಪ್ತಿಪಡಿಸುತ್ತಾನೆ.

ತೀತನಿಗೆ ೨:೩
ಅದೇ ಪ್ರಕಾರ ವೃದ್ಧಸ್ತ್ರೀಯರು ನಡತೆಯಲ್ಲಿ ಪರಿಶುದ್ಧತೆಗೆ ತಕ್ಕ ಹಾಗೆ ಇರುವವರಾಗಿದ್ದು ಸುಳ್ಳಾಗಿ ದೂರುವವರೂ ಹೆಚ್ಚಾಗಿ ಮದ್ಯಪಾನ ಮಾಡುವವರೂ ಆಗಿರದೆ

ತಿಮೊಥೇಯನಿಗ ೧ ೫:೧-೨
[೧] ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಸಹೋದರರೆಂದೂ[೨] ವೃದ್ಧಸ್ತ್ರೀಯರನ್ನು ತಾಯಂದಿ ರೆಂದೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆ ಯಿಂದ ಸಹೋದರಿಯರೆಂದೂ ಎಣಿಸಿ ಅವರವರಿಗೆ ಬುದ್ಧಿಹೇಳು.

ಕೀರ್ತನೆಗಳು ೭೧:೮-೯
[೮] ನನ್ನ ಬಾಯಿ ನಿನ್ನ ಸ್ತೋತ್ರದಿಂದಲೂ ದಿನವೆಲ್ಲಾ ನಿನ್ನ ಗೌರವದಿಂದಲೂ ತುಂಬಿರಲಿ.[೯] ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡ. ನನ್ನ ಶಕ್ತಿಯು ಕುಂದಿಹೋಗುವಾಗ ನನ್ನನ್ನು ಕೈಬಿಡ ಬೇಡ.

ಫಿಲಿಪಿಯರಿಗೆ ೩:೨೦-೨೧
[೨೦] ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.[೨೧] ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.

ಯೆಶಾಯನ ೪೬:೩-೪
[೩] ಓ ಯಾಕೋಬನ ಮನೆತನದವರೇ, ಇಸ್ರಾ ಯೇಲ್‌ ಮನೆತನದಲ್ಲಿ ಉಳಿದಿರುವವರೆಲ್ಲರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ವಹಿಸುತ್ತಿದ್ದಾತನ ಮಾತನ್ನು ಕೇಳಿರಿ--[೪] ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.

ಕೀರ್ತನೆಗಳು ೯೨:೧೨-೧೫
[೧೨] ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.[೧೩] ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು.[೧೪] ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.[೧೫] ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.

ಉಪದೇಷಕ ೧೨:೧-೭
[೧] ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ.[೨] ಸೂರ್ಯನೂ ಬೆಳಕೂ ಚಂದ್ರನೂ ನಕ್ಷತ್ರಗಳೂ ಕತ್ತಲಾಗದಿರುವಾಗಲೇ ಮಳೆಯ ಮೋಡ ಗಳು ತಿರಿಗಿ ಬರುವದಕ್ಕಿಂತ ಮುಂಚೆಯೇ ಆತನನ್ನು ಸ್ಮರಿಸು.[೩] ಆ ದಿನದಲ್ಲಿ ಮನೆ ಕಾಯುವವರು ನಡುಗು ವರು; ಬಲವಾದ ಮನುಷ್ಯರು ತಾವಾಗಿಯೇ ಬೊಗ್ಗು ವರು; ಅರೆಯುವವರು ಸ್ವಲ್ಪ ಇರುವದರಿಂದ ಸುಮ್ಮನಿ ರುವರು; ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು.[೪] ಅರೆಯುವ ಶಬ್ದವು ಕಡಿಮೆಯಾ ದಾಗ ಬೀದಿಯಲ್ಲಿ ಬಾಗಲುಗಳು ಮುಚ್ಚಿರುವವು. ಅವನು ಪಕ್ಷಿಯ ಶಬ್ದವಾದಾಗ ಎದ್ದೇಳುವನು. ಗಾನದ ಕುಮಾರ್ತೆಯರೆಲ್ಲಾ ಕುಗ್ಗುವರು.[೫] ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.[೬] ಬೆಳ್ಳಿಯ ಸರಿಗೆ ಬಿಚ್ಚಲ್ಪಡುವದು; ಇಲ್ಲವೆ ಬಂಗಾರದ ಬಟ್ಟಲು ಒಡೆದು ಹೋಗುವದು. ಮಣ್ಣಿನ ಮಡಿಕೆಯು ಬುಗ್ಗೆಯ ಬಳಿಯಲ್ಲಿ ಒಡೆದು ಹೋಗುವದು. ಇಲ್ಲವೆ ಕೊಳದ ಹತ್ತಿರ ರಾಟೆ ಮುರಿಯುವದು.[೭] ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.

Kannada Bible BSI 2016
Copyright © 2016 by The Bible Society of India. All rights reserved worldwide