A A A A A

ಜೀವನ: [ಮಗುವನ್ನು ದತ್ತು ತೆಗೆದುಕೊಳ್ಳುವುದು]


ಸಮುವೇಲನು ೧ ೧:೨೭
ನಾನು ಕರ್ತನಿಗೆ ಮಾಡಿದ ವಿಜ್ಞಾಪನೆಯಂತೆ ಆತನು ನನಗೆ ಕೊಟ್ಟನು.ಆದದರಿಂದ ನಾನು ಅವನನ್ನು ಕರ್ತನಿಗೆ ಒಪ್ಪಿಸಿದ್ದೇನೆ; ಅವನು ಜೀವಿಸಿರುವ ವರೆಗೆ ಕರ್ತನಿಗೆ ಒಪ್ಪಿಸಲ್ಪಟ್ಟಿರುವನು ಅಂದಳು. ಅವನು ಅಲ್ಲಿ ಕರ್ತನನ್ನು ಆರಾಧಿಸಿದನು.

ಕೊರಿಂಥಿಯರಿಗೆ ೨ ೬:೧೮
ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.

ಧರ್ಮೋಪದೇಷಕಾಂಡ ೧೦:೧೮
ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ.

ಹೊಶೇಯನ ೧೪:೩
ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ.

ಯೆಶಾಯನ ೪೦:೩೧
ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.

ಯಕೋಬನು ೧:೨೭
ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.

ಯೆರೆಮೀಯನ ಗ್ರಂಥ ೨೯:೧೧
ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.

ಮತ್ತಾಯನು ೨೫:೪೦
ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು.

ಜ್ಞಾನೋಕ್ತಿಗಳು ೧೩:೧೨
ತಡವಾದ ನಿರೀಕ್ಷೆ ಹೃದಯವನ್ನು ಅಸ್ವಸ್ಥತೆ ಮಾಡುತ್ತದೆ; ಆಶೆಯು ಸಫಲವಾದರೆ ಅದು ಜೀವಕರವಾದ ವೃಕ್ಷವು.

ಕೀರ್ತನೆಗಳು ೮೨:೩
ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ.

ಕೀರ್ತನೆಗಳು ೧೪೬:೯
ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.

ಕೀರ್ತನೆಗಳು ೬೮:೫-೬
[೫] ದೇವರು ತನ್ನ ಪರಿಶುದ್ಧಸ್ಥಾನದಲ್ಲಿ ದಿಕ್ಕಿಲ್ಲದವರಿಗೆ ತಂದೆಯೂ ವಿಧವೆಯರಿಗೆ ನ್ಯಾಯಾಧಿಪತಿಯೂ ಆಗಿದ್ದಾನೆ.[೬] ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.

ಜ್ಞಾನೋಕ್ತಿಗಳು ೩೧:೮-೯
[೮] ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ.[೯] ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.

ಯೊವಾನ್ನನು ೧:೧೨-೧೩
[೧೨] ಆದರೆ ಯಾರಾರು ಆತನನ್ನು ಅಂಗೀಕರಿಸಿದರೋ ಅವರಿಗೆ ಅಂದರೆ ಆತನ ಹೆಸರಿನ ಮೇಲೆ ನಂಬಿಕೆಯಿಡುವವರಿಗೆ ದೇವರ ಪುತ್ರರಾಗುವ ಅಧಿಕಾರವನ್ನು ಆತನು ಕೊಟ್ಟನು.[೧೩] ಇವರು ರಕ್ತದಿಂದಾಗಲಿ ಇಲ್ಲವೆ ಶರೀರದ ಇಚ್ಛೆಯಿಂದಾಗಲಿ ಇಲ್ಲವೆ ಮನುಷ್ಯನ ಇಚ್ಛೆಯಿಂದಾ ಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.

ಗಲಾತ್ಯರಿಗೆ ೪:೪-೫
[೪] ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ[೫] ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು.

ರೋಮನರಿಗೆ ೮:೧೪-೧೭
[೧೪] ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.[೧೫] ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.[೧೬] ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.[೧೭] ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.

ಕೀರ್ತನೆಗಳು ೧೦:೧೪-೧೮
[೧೪] ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.[೧೫] ದುಷ್ಟನ ಮತ್ತು ಕೆಡುಕನ ತೋಳನ್ನು ಮುರಿ; ಅದು ಸಿಕ್ಕದೆ ಹೋಗುವ ವರೆಗೂ ಅವನ ದುಷ್ಟತ್ವ ವನ್ನು ನೀನು ಹುಡುಕು.[೧೬] ಕರ್ತನು ಯುಗ ಯುಗಾಂತರಗಳಿಗೂ ಅರಸನಾಗಿದ್ದಾನೆ; ಅನ್ಯಜನಾಂಗಗಳು ಆತನ ದೇಶದೊ ಳಗಿಂದ ನಾಶವಾದರು.[೧೭] ಕರ್ತನೇ, ದೀನರ ಆಶೆ ಯನ್ನು ಕೇಳಿದ್ದೀ; ನೀನು ಅವರ ಹೃದಯವನ್ನು ಸಿದ್ಧ ಪಡಿಸಿ ಅವರ ಮೊರೆಗೆ ಕಿವಿಗೊಡುತ್ತೀ.ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.[೧೮] ಭೂಮಿಯ ಮನುಷ್ಯನು ಇನ್ನು ಭಯಪಡಿಸದ ಹಾಗೆ ದಿಕ್ಕಿಲ್ಲದ ವರಿಗೂ ಕುಗ್ಗಿದವರಿಗೂ ನ್ಯಾಯತೀರಿಸುವದಕ್ಕೆ ಕಿವಿಗೊಟ್ಟಿದ್ದೀ.

Kannada Bible BSI 2016
Copyright © 2016 by The Bible Society of India. All rights reserved worldwide