A A A A A

ಜೀವನ: [ಜನ್ಮದಿನ]


ಎಫೆಸಿಯರಿಗೆ ೨:೧೦
ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.

ಯೆರೆಮೀಯನ ಗ್ರಂಥ ೨೯:೧೧
ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.

ಯೊವಾನ್ನನು ೧೬:೨೧
ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ.

ಜ್ಞಾನೋಕ್ತಿಗಳು ೯:೧೧
ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು.

ಕೀರ್ತನೆಗಳು ೧೬:೧೧
ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.

ಕೀರ್ತನೆಗಳು ೨೦:೪
ನಿನ್ನ ಸ್ವಂತ ಹೃದಯದ ಪ್ರಕಾರ ನಿನಗೆ ಕೊಡಲಿ; ನಿನ್ನ ಆಲೋ ಚನೆಯನ್ನೆಲ್ಲಾ ಪೂರೈಸಲಿ.

ಕೀರ್ತನೆಗಳು ೨೭:೪-೭
[೪] ಒಂದ ನ್ನೇ ಕರ್ತನಿಂದ ಬಯಸಿದೆನು, ಅದನ್ನೇ ಹುಡುಕುವೆನು; ಕರ್ತನ ರಮ್ಯತೆಯನ್ನು ದೃಷ್ಟಿಸುವದೂ ಆತನ ಮಂದಿರ ದಲ್ಲಿ ವಿಚಾರಿಸುವದೂ ನನ್ನ ಜೀವನದ ದಿನಗಳಲ್ಲೆಲ್ಲಾ ಕರ್ತನ ಆಲಯದಲ್ಲಿ ವಾಸಮಾಡುವದೂ ಆಗಿದೆ.[೫] ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.[೬] ಈಗ ನನ್ನ ಸುತ್ತಲಿರುವ ಶತ್ರುಗಳ ಮೇಲೆ ನನ್ನ ತಲೆಯು ಎತ್ತಲ್ಪಟ್ಟಿರುವದು. ಆದದರಿಂದ ಆತನ ಗುಡಾರದಲ್ಲಿ ಉತ್ಸಾಹದ ಬಲಿಗಳನ್ನು ಅರ್ಪಿ ಸುವೆನು; ಹೌದು, ಕರ್ತನಿಗೆ ಹಾಡಿ ಕೀರ್ತಿಸುವೆನು.[೭] ಓ ಕರ್ತನೇ, ನಾನು ಕೂಗುವ ಸ್ವರವನ್ನು ಕೇಳು; ನನ್ನನ್ನು ಕರುಣಿಸಿ ನನಗೆ ಉತ್ತರಕೊಡು.

ಕೀರ್ತನೆಗಳು ೯೦:೧೨
ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.

ಕೀರ್ತನೆಗಳು ೯೧:೧೧
ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.

ಕೀರ್ತನೆಗಳು ೯೧:೧೬
ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.

ಕೀರ್ತನೆಗಳು ೧೧೮:೨೪
ಕರ್ತನು ಮಾಡಿದ ದಿನವು ಇದೇ; ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡುವೆವು.

ಜೆಫನ್ಯನ ೩:೧೭
ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.

ಕೀರ್ತನೆಗಳು ೩೭:೪-೫
[೪] ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.[೫] ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.

ಪ್ರಲಾಪಗಳು ೩:೨೨-೨೩
[೨೨] ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ.[೨೩] ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.

ಸಂಖ್ಯಾಕಾಂಡ ೬:೨೪-೨೬
[೨೪] ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ.[೨೫] ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ.[೨೬] ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್‌ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.

ಕೀರ್ತನೆಗಳು ೧೩೯:೧-೨೪
[೧] ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ;[೨] ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ;[೩] ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ.[೪] ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ.[೫] ನೀನು ಹಿಂದೆಯೂ ಮುಂದೆಯೂ ನನ್ನನ್ನು ಸುತ್ತಿಕೊಂಡು ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ.[೬] ಇಂಥ ತಿಳುವಳಿಕೆಯು ನನಗೆ ಅತಿ ಅದ್ಭುತವಾಗಿದೆ; ಅದು ನನಗೆ ನಿಲುಕದಷ್ಟು ಉನ್ನತವಾಗಿದೆ.[೭] ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿನ್ನ ಸನ್ನಿಧಿಯಿಂದ ತಪ್ಪಿಸಿಕೊಂಡು ಎಲ್ಲಿಗೆ ಓಡಲಿ?[೮] ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ.[೯] ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ[೧೦] ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.[೧೧] ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.[೧೨] ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.[೧೩] ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.[೧೪] ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ;[೧೫] ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ.[೧೬] ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.[೧೭] ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ.[೧೮] ಅವುಗಳನ್ನು ಲೆಕ್ಕಿಸಿದರೆ ಮರಳು ಗಿಂತ ಹೆಚ್ಚಾಗಿವೆ; ನಾನು ಎಚ್ಚರವಾದಾಗ ಇನ್ನೂ ನಿನ್ನ ಬಳಿಯಲ್ಲಿಯೇ ಇದ್ದೇನೆ.[೧೯] ಓ ದೇವರೇ, ನಿಶ್ಚಯವಾಗಿ ನೀನು ದುಷ್ಟನನ್ನು ಕೊಂದುಹಾಕುವಿ; ರಕ್ತ ಪ್ರಿಯರೇ, ನನ್ನಿಂದ ತೊಲ ಗಿರಿ.[೨೦] ಅವರು ನಿನಗೆ ವಿರೋಧವಾಗಿ ಕೆಟ್ಟತನದಿಂದ ಮಾತನಾಡುತ್ತಾರೆ; ನಿನ್ನ ವೈರಿಗಳು ನಿನ್ನ ಹೆಸರನ್ನು ವ್ಯರ್ಥವಾಗಿ ಎತ್ತುತ್ತಾರೆ.[೨೧] ಓ ಕರ್ತನೇ, ನಾನು ನಿನ್ನನ್ನು ದ್ವೇಷಿಸುವವರನ್ನು ಹಗೆಮಾಡುವದಿಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವ ದಿಲ್ಲವೋ?[೨೨] ಪೂರ್ಣ ದ್ವೇಷದಿಂದ ಅವರನ್ನು ನಾನು ಹಗೆಮಾಡುತ್ತೇನೆ; ಅವರು ನನ್ನ ಶತ್ರುಗಳೆಂದು ನಾನು ಎಣಿಸುತ್ತೇನೆ.[೨೩] ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.[೨೪] ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.

Kannada Bible BSI 2016
Copyright © 2016 by The Bible Society of India. All rights reserved worldwide