A A A A A

ಗಣಿತ ಚಿಹ್ನೆಗಳು: [ಸಂಖ್ಯೆ ೫]


ಪ್ರಕಟನೆ ೧೩:೫-೧೮
[೫] ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.[೬] ಆಗ ಅದು ದೇವರ ಹೆಸರನ್ನೂ ಆತನ ಗುಡಾರವನ್ನೂ ಪರಲೋಕದಲ್ಲಿ ವಾಸವಾಗಿರುವವರನ್ನೂ ದೂಷಿಸಿ ದ್ದಲ್ಲದೆ ದೇವರಿಗೆ ವಿರೋಧವಾದ ದೂಷಣೆಗೆ ತನ್ನ ಬಾಯಿಯನ್ನು ತೆರೆಯಿತು.[೭] ಇದಲ್ಲದೆ ಪರಿಶುದ್ಧರ ಮೇಲೆ ಯುದ್ಧಮಾಡಿ ಅವರನ್ನು ಗೆಲ್ಲುವಂತೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು. ಸಕಲ ಕುಲ ಭಾಷೆ ಜನಾಂಗಗಳ ಮೇಲೆ ಅವನಿಗೆ ಅಧಿಕಾರವು ಕೊಡಲ್ಪಟ್ಟಿತು.[೮] ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.[೯] ಕಿವಿಯುಳ್ಳವನು ಕೇಳಲಿ.[೧೦] ಸೆರೆಗೆ ನಡಿಸುವವನು ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗಬೇಕು. ಇದರಲ್ಲಿ ಪರಿ ಶುದ್ಧರ ತಾಳ್ಮೆಯೂ ನಂಬಿಕೆಯೂ ಇರುತ್ತದೆ.[೧೧] ಮತ್ತೊಂದು ಮೃಗವು ಭೂಮಿಯೊಳಗಿಂದ ಬರು ವದನ್ನು ನಾನು ಕಂಡೆನು. ಇದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು; ಇದು ಘಟಸರ್ಪದಂತೆ ಮಾತನಾಡಿತು.[೧೨] ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಮುಂದೆಯೇ ನಡಿಸುತ್ತದೆ. ಮರಣಕರವಾದ ಗಾಯ ವಾಸಿಯಾದ ಮೊದಲನೆಯ ಮೃಗಕ್ಕೆ ಭೂಲೋಕವೂ ಭೂನಿವಾಸಿಗಳೂ ಆರಾಧಿಸು ವಂತೆ ಇದು ಮಾಡುವಂಥದ್ದಾಗಿದೆ.[೧೩] ಇದು ಮಹ ತ್ತಾದ ಸೂಚಕಕಾರ್ಯಗಳನ್ನು ನಡಿಸುವಂಥದ್ದಾಗಿ ಜನರ ಮುಂದೆ ಬೆಂಕಿಯು ಆಕಾಶದಿಂದ ಭೂಮಿಗೆ ಇಳಿದು ಬರುವಂತೆ ಮಾಡುತ್ತದೆ.[೧೪] ಮೃಗದ ಮುಂದೆ ಇಂಥಾ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರ ವನ್ನು ಹೊಂದಿ ಭೂಮಿಯ ಮೇಲೆ ವಾಸಿಸುವ ಜನರನ್ನು ಮೋಸಗೊಳಿಸುವದಲ್ಲದೆ ಕತ್ತಿಯಿಂದ ಗಾಯಹೊಂದಿ ಬದುಕಿದ ಮೃಗಕ್ಕಾಗಿ ವಿಗ್ರಹವನ್ನು ಮಾಡಿಕೊಳ್ಳ ಬೇಕೆಂದು ಅವರಿಗೆ ಹೇಳುತ್ತದೆ.[೧೫] ಮೃಗದ ವಿಗ್ರಹವು ಮಾತನಾಡುವಂತೆಯೂ ಆ ಮೃಗದ ವಿಗ್ರಹವನ್ನು ಯಾರಾರು ಆರಾಧಿಸುವದಿಲ್ಲವೋ ಅವರನ್ನು ಕೊಲ್ಲಿಸು ವಂತೆಯೂ ಆ ಮೃಗದ ವಿಗ್ರಹಕ್ಕೆ ಜೀವ ಕೊಡುವ ಅಧಿಕಾರವು ಅದಕ್ಕೆ ಇತ್ತು.[೧೬] ಅದು ಚಿಕ್ಕವರು ದೊಡ್ಡ ವರು ಐಶ್ವರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಗಳ ಮೇಲಾಗಲಿ ಗುರುತು ಹೊಂದಬೇಕೆಂತಲೂ[೧೭] ಆ ಗುರುತಾಗಲಿ ಮೃಗದ ಹೆಸರಾಗಲಿ ಅದರ ಹೆಸರಿನ ಅಂಕೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುತ್ತದೆ.ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.[೧೮] ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.

ಮತ್ತಾಯನು ೧೯:೯
ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣದಿಂ ದಲ್ಲದೆ ಯಾವನಾದರೂ ತನ್ನ ಹೆಂಡತಿಯನ್ನು ಬಿಟು ಮತ್ತೊಬ್ಬಳನ್ನು ಮದುವೆಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡುತ್ತಾನೆ.

ಪ್ರಕಟನೆ ೧೧:೨-೩
[೨] ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.[೩] ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.

ಮತ್ತಾಯನು ೫:೩೨
ಆದರೆ ನಾನು ನಿಮಗೆ ಹೇಳುವದೇನಂದರೆ--ಹಾದರದ ಕಾರಣ ದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಆಕೆಯು ವ್ಯಭಿಚಾರ ಮಾಡುವಂತೆ ಕಾರಣನಾಗುವನು; ಮತ್ತು ಬಿಡಲ್ಪಟ್ಟವಳನ್ನು ಯಾವನಾದರೂ ಮದುವೆ ಯಾದರೆ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.

ತಿಮೊಥೇಯನಿಗ ೨ ೩:೧೬
ಬರಹಗಳನ್ನು ತಿಳಿದವನಾಗಿದ್ದೀಯಲ್ಲಾ; ಆ ಬರಹಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆ ಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.

ಪ್ರಕಟನೆ ೪:೬-೮
[೬] ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.[೭] ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.[೮] ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ

ಸಂಖ್ಯಾಕಾಂಡ ೫:೧೧-೩೧
[೧೧] ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ--[೧೨] ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ವಿರೋಧವಾದ ಕೃತ್ಯವನ್ನು ಮಾಡಿ ದರೆ[೧೩] ಇಲ್ಲವೆ ಒಬ್ಬನು ಅವಳ ಸಂಗಡ ಮಲಗಿ ಸಂಗಮ ಮಾಡಿದ್ದು ಅವಳ ಗಂಡನ ಕಣ್ಣುಗಳಿಗೆ ಮರೆಯಾಗಿದ್ದರೆ, ಅವಳು ಅಶುದ್ಧಳೆಂಬದು ಗುಪ್ತವಾಗಿ ದ್ದರೆ, ಅವಳಿಗೆ ವಿರೋಧವಾಗಿ ಸಾಕ್ಷಿ ಇಲ್ಲದೆ ಅವಳು ಹಿಡಿಯಲ್ಪಡದಿದ್ದರೆ,[೧೪] ಗಂಡನ ಮೇಲೆ ರೋಷದ ಆತ್ಮ ಬಂದು ಅವನು ಅಶುದ್ಧಳಾದ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ ಇಲ್ಲವೆ ರೋಷದ ಆತ್ಮವು ಅವನ ಮೇಲೆ ಬಂದು ಅಶುದ್ಧಳಾಗದೆ ಇರುವ ತನ್ನ ಹೆಂಡತಿಯ ಮೇಲೆ ರೋಷಗೊಂಡರೆ,[೧೫] ಆ ಮನು ಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತಂದು ಅವಳಿಗೋಸ್ಕರ ಕಾಣಿಕೆಯಾಗಿ ಏಫದ ಹತ್ತನೇ ಪಾಲನ್ನು ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕ ಬಾರದು; ಅದು ರೋಷದ ಕಾಣಿಕೆಯೂ ಅಪರಾಧ ವನ್ನು ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.[೧೬] ಯಾಜಕನು ಅವಳನ್ನು ಸವಿಾಪಕ್ಕೆ ಕರೆದು ಕರ್ತನ ಸಮ್ಮುಖದಲ್ಲಿ ನಿಲ್ಲಿಸಬೇಕು.[೧೭] ಆಗ ಯಾಜಕನು ಪವಿತ್ರ ವಾದ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದು ಕೊಳ್ಳಬೇಕು; ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತಕ್ಕೊಂಡು ಆ ನೀರಿನೊಳಗೆ ಹಾಕಬೇಕು.[೧೮] ಯಾಜಕನು ಆ ಸ್ತ್ರೀಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಿ ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು ಅವಳ ಕೈಗಳಲ್ಲಿ ರೋಷದ ಕಾಣಿಕೆಯಾಗಿರುವ ಜ್ಞಾಪಕದ ಕಾಣಿಕೆಯನ್ನು ಇಡಬೇಕು. ಆದರೆ ಯಾಜಕನ ಕೈಯಲ್ಲಿ ಶಪಿಸುವಂತ ಕಹಿಯಾದ ನೀರು ಇರಬೇಕು.[೧೯] ಆಗ ಯಾಜಕನು ಅವಳನ್ನು ಪ್ರಮಾಣಮಾಡಿಸಿ ಹೇಳಬೇಕಾದದ್ದು: ಒಬ್ಬ ಮನುಷ್ಯನು ನಿನ್ನ ಸಂಗಡ ಮಲಗದೆ ನೀನು ಅಪವಿತ್ರಳಾಗಿ ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡದೆ ಇದ್ದರೆ ಶಪಿಸುವ ಈ ಕಹಿಯಾದ ನೀರಿಗೆ ನಿರಪರಾಧಿಯಾಗು.[೨೦] ಆದರೆ ನೀನು ನಿನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ ನಿನ್ನ ಗಂಡನನ್ನು ಬಿಟ್ಟು ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ[೨೧] ಯಾಜಕನು ಶಾಪದ ಪ್ರಮಾಣ ದಿಂದ ಆ ಸ್ತ್ರೀಗೆ ಹೇಳಬೇಕಾದದ್ದೇನಂದರೆ--ಕರ್ತನು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವದರಿಂದ ಕರ್ತನು ನಿನ್ನನ್ನು ನಿನ್ನ ಜನರೊಳಗೆ ಶಾಪವನ್ನಾಗಿಯೂ ದೂಷಣೆಯನ್ನಾಗಿಯೂ ಇಡಲಿ.[೨೨] ಶಪಿಸುವಂಥ ಈ ನೀರು ಹೊಟ್ಟೆಯನ್ನು ಉಬ್ಬಿಸುವದಕ್ಕೂ ತೊಡೆಯನ್ನು ಕ್ಷೀಣಿಸುವದಕ್ಕೂ ನಿನ್ನ ಕರುಳುಗಳ ಒಳಗೆ ಹೋಗು ವದು; ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣದಿಂದ ಪ್ರಮಾಣ ಮಾಡಿಸಬೇಕು. ಅದಕ್ಕೆ ಆ ಸ್ತ್ರೀಯು--ಹಾಗೆಯೇ ಆಗಲಿ ಅನ್ನಬೇಕು.[೨೩] ಯಾಜ ಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ಅಳಿಸಿ,[೨೪] ಆ ಸ್ತ್ರೀಗೆ ಶಪಿಸುವಂತ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವದು.[೨೫] ಯಾಜಕನು ಆ ಸ್ತ್ರೀಯ ಕೈಯಿಂದ ರೋಷದ ಕಾಣಿಕೆಯನ್ನು ತಕ್ಕೊಂಡು ಆ ಕಾಣಿಕೆಯನ್ನು ಕರ್ತನ ಸಮ್ಮುಖದಲ್ಲಿ ಅಲ್ಲಾಡಿಸಿ ಬಲಿ ಪೀಠದ ಸವಿಾಪಕ್ಕೆ ತರಬೇಕು.[೨೬] ಆಗ ಯಾಜಕನು ಕಾಣಿಕೆಯಿಂದ ಜ್ಞಾಪಕಭಾಗವಾಗಿ ಒಂದು ಹಿಡಿ ತಕ್ಕೊಂಡು ಯಜ್ಞವೇದಿಯ ಮೇಲೆ ಸುಟ್ಟು ಸ್ತ್ರೀಗೆ ಆ ನೀರನ್ನು ಕುಡಿಸಬೇಕು.[೨೭] ಆಕೆಗೆ ಆ ನೀರನ್ನು ಕುಡಿಸಿದ ಮೇಲೆ ಆಕೆಯು ಅಶುದ್ಧಳಾಗಿ ತನ್ನ ಗಂಡನಿಗೆ ಅಪರಾಧ ಮಾಡಿದ್ದಾಗಿದ್ದರೆ ಶಪಿಸುವ ನೀರು ಆಕೆ ಯೊಳಗೆ ಸೇರಿ ಕಹಿಯಾಗುವದು; ಅವಳ ಹೊಟ್ಟೆ ಉಬ್ಬಿ ತೊಡೆ ಕ್ಷೀಣವಾಗುವದು. ಆಗ ಆ ಸ್ತ್ರೀ ತನ್ನ ಜನರ ಮಧ್ಯದಲ್ಲಿ ಶಾಪವಾಗಿರುವಳು.[೨೮] ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ ಅವಳು ನಿರಪರಾಧಿ ಯಾಗಿದ್ದು ಸಂತಾನವನ್ನು ಪಡೆಯುವಳು.[೨೯] ರೋಷಕ್ಕೆ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವಮಾಡಿ ಅಶುದ್ಧಳಾಗಿದ್ದರೆ[೩೦] ಅಥವಾ ಪುರುಷನ ಮೇಲೆ ರೋಷದ ಆತ್ಮ ಬಂದು ಅವನು ತನ್ನ ಹೆಂಡತಿಯ ಮೇಲೆ ರೋಷಗೊಂಡಿದ್ದರೆ ಅವನು ತನ್ನ ಹೆಂಡತಿಯನ್ನು ಕರ್ತನ ಸಮ್ಮುಖದಲ್ಲಿ ನಿಲ್ಲಿಸಲಿ; ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆ ಪ್ರಕಾರ ಮಾಡುವನು.ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.[೩೧] ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.

ಅರಸುಗಳು ೧ ೭:೨೩
ಇದಲ್ಲದೆ ಎರಕದ ಸಮುದ್ರವನ್ನು ಮಾಡಿದನು. ಅದು ದುಂಡಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳವೂ ಅದರ ಎತ್ತರ ಐದು ಮೊಳವೂ ಸುತ್ತಳತೆ ಮೂವತ್ತು ಮೊಳವೂ ಆಗಿತ್ತು. ಅದರ ಅಂಚಿನ ಕೆಳ ಭಾಗದಲ್ಲಿ ಅದರ ಸುತ್ತಲೂ ಮೊಗ್ಗುಗಳಿದ್ದವು.

ಧರ್ಮೋಪದೇಷಕಾಂಡ ೬:೪
ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.

ಮಲಾಕಿಯನ ೩:೧೦
ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಕೀರ್ತನೆಗಳು ೧೦೪:೯
ಅವು ದಾಟದ ಹಾಗೆಯೂ ಭೂಮಿಯನ್ನು ಮುಚ್ಚುವದಕ್ಕೆ ತಿರಿಗಿ ಬಾರದ ಹಾಗೆಯೂ ಮೇರೆಯನ್ನು ಇಟ್ಟಿದ್ದೀ.

ಆದಿಕಾಂಡ ೬:೧೨
ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು.

ಆದಿಕಾಂಡ ೭:೨೦
ನೀರುಗಳು ಬೆಟ್ಟಗಳನ್ನು ಮುಚ್ಚಿ ಅವುಗಳ ಮೇಲೆ ಹದಿನೈದು ಮೊಳದ ವರೆಗೆ ಏರಿತು.

ಆದಿಕಾಂಡ ೮:೫-೯
[೫] ಹತ್ತನೆಯ ತಿಂಗಳಿನ ವರೆಗೆ ನೀರು ಕ್ರಮವಾಗಿ ಕಡಿಮೆಯಾಗುತ್ತಾ ಬಂತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ತುದಿಗಳು ಕಾಣ ಬಂದವು.[೬] ನಾಲ್ವತ್ತು ದಿವಸಗಳಾದ ತರುವಾಯ ಆದದ್ದೇ ನಂದರೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು[೭] ಒಂದು ಕಾಗೆಯನ್ನು ಹೊರಗೆ ಬಿಟ್ಟನು; ಅದು ಹೊರಟು ಭೂಮಿಯ ಮೇಲಿದ್ದ ಜಲವು ಆರಿಹೋಗುವ ವರೆಗೆ ಹೋಗುತ್ತಾ ಬರುತ್ತಾ ಇತ್ತು.[೮] ಭೂಮುಖದ ಮೇಲೆ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ನೋಡುವಂತೆ ಒಂದು ಪಾರಿವಾಳವನ್ನು ಬಿಟ್ಟನು.[೯] ಆದರೆ ನೀರು ಭೂಮುಖದಲ್ಲೆಲ್ಲಾ ಇದ್ದದ್ದರಿಂದ ಪಾರಿವಾಳದ ಅಂಗಾಲಿಗೆ ವಿಶ್ರಮಿಸುವದಕ್ಕೆ ಸ್ಥಳವು ಸಿಕ್ಕದೆ ಅದು ತಿರಿಗಿ ಅವನ ಬಳಿಗೆ ನಾವೆಗೆ ಬಂತು. ಅವನು ಕೈಚಾಚಿ ಅದನ್ನು ಹಿಡಿದು ನಾವೆಯೊಳಗೆ ಸೇರಿಸಿ ಕೊಂಡನು.

ಆದಿಕಾಂಡ ೯:೧೧
ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡ ಸ್ಥಾಪಿಸುತ್ತೇನೆ. ಅದೇನಂದರೆ, ಇನ್ನು ಮೇಲೆ ಜಲಪ್ರಳಯದಿಂದ ಶರೀರಗಳಾವವೂ ನಾಶವಾಗುವದಿಲ್ಲ. ಭೂಮಿಯನ್ನು ಹಾಳುಮಾಡುವದಕ್ಕೆ ಇನ್ನು ಜಲಪ್ರಳಯವು ಇರುವ ದಿಲ್ಲ ಎಂಬದೇ.

ಆದಿಕಾಂಡ ೧:೩೧
ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.

ಆದಿಕಾಂಡ ೩:೧೫
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.

ಕೊರಿಂಥಿಯರಿಗೆ ೧ ೧೦:೧೩
ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ

ವಿಮೋಚನಾಕಾಂಡ ೨೦:೧೩
ಕೊಲೆ ಮಾಡಬಾರದು.

Kannada Bible BSI 2016
Copyright © 2016 by The Bible Society of India. All rights reserved worldwide