A A A A A

ಗಣಿತ ಚಿಹ್ನೆಗಳು: [ಸಂಖ್ಯೆ ೮]


ಪ್ರಕಟನೆ ೧೩:೧೮
ಇದರಲ್ಲಿ ಜ್ಞಾನವಿದೆ. ತಿಳುವಳಿಕೆಯುಳ್ಳವನು ಆ ಮೃಗದ ಅಂಕೆಯನ್ನು ಎಣಿಸಲಿ; ಯಾಕಂದರೆ ಅದು ಒಬ್ಬ ಮನುಷ್ಯನ ಅಂಕೆಯಾಗಿದೆ; ಅವನ ಅಂಕೆಯು ಆರುನೂರ ಅರವತ್ತಾರು.

ಧರ್ಮೋಪದೇಷಕಾಂಡ ೬:೪
ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.

ಯಾಜಕಕಾಂಡ ೨೦:೧೩
ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ ಅವರಿಬ್ಬರೂ ಅಸಹ್ಯ ವಾದದ್ದನ್ನು ಮಾಡಿದವರಾಗಿದ್ದಾರೆ; ಅವರಿಗೆ ನಿಶ್ಚಯ ವಾಗಿಯೂ ಮರಣದಂಡನೆ ವಿಧಿಸಬೇಕು; ಅವರ ರಕ್ತವು ಅವರ ಮೇಲೆ ಇರುವದು.

ಕೊರಿಂಥಿಯರಿಗೆ ೧ ೬:೯-೧೧
[೯] ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು[೧೦] ಕಳ್ಳರು ಲೋಭಿಗಳು ಕುಡುಕರು ಬೈಯುವವರು ಸುಲು ಕೊಳ್ಳುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.[೧೧] ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮನಲ್ಲಿಯೂ ತೊಳೆಯಲ್ಪಟ್ಟಿರಿ; ಶುದ್ಧೀಕರಿಸಲ್ಪಟ್ಟಿರಿ ಮತ್ತು ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.

ಪ್ರಕಟನೆ ೧೧:೨-೩
[೨] ಆದರೆ ಆಲಯದ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಯಾಕಂದರೆ ಅದು ಅನ್ಯ ಜನರಿಗೆ ಕೊಡಲ್ಪಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.[೩] ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣಿತಟ್ಟನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಅವರಿಗೆ ಅಧಿಕಾರ ಕೊಡುವೆನು.

ಯಾಜಕಕಾಂಡ ೨೦:೨೭
ಮನುಷ್ಯನಾಗಲಿ ಸ್ತ್ರೀಯಾಗಲಿ ಮಂತ್ರವಾದಿ ಇಲ್ಲವೆ ಮಾಟಗಾರರಾಗಿರುವದಾಗಿದ್ದರೆ ಅವರನ್ನು ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು; ಅವರ ರಕ್ತವು ಅವರ ಮೇಲೆ ಇರುವದು.

ಧರ್ಮೋಪದೇಷಕಾಂಡ ೧೮:೧೦-೧೨
[೧೦] ತನ್ನ ಮಗನನ್ನು ಇಲ್ಲವೆ ಮಗಳನ್ನು ಬೆಂಕಿದಾಟಿಸುವವನೂ ಕಣಿಹೇಳುವವನೂ ಮೇಘಮಂತ್ರದವನೂ ಸರ್ಪಮಂತ್ರದವನೂ ಮಾಟಗಾರನೂ[೧೧] ಗಾರಡಿಗಾರನೂ ಯಕ್ಷಿಣಿಗಾರನೂ ಮಂತ್ರಜ್ಞನೂ ಸತ್ತವರ ಹತ್ತಿರ ವಿಚಾರಿಸುವವನೂ ನಿನ್ನಲ್ಲಿ ಸಿಕ್ಕಬಾರದು.[೧೨] ಇಂಥವುಗಳನ್ನು ಮಾಡುವ ವರೆಲ್ಲಾ ಕರ್ತನಿಗೆ ಅಸಹ್ಯ; ಈ ಅಸಹ್ಯ ಕಾರ್ಯಗಳ ನಿಮಿತ್ತ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.

ಅರಸುಗಳು ೨ ೨೧:೬
ಅವನು ತನ್ನ ಮಗನನ್ನು ಬೆಂಕಿಯಲ್ಲಿ ದಾಟುವಂತೆ ಮಾಡಿದನು; ಮೇಘ ಮಂತ್ರ ಗಳನ್ನೂ ಸರ್ಪಮಂತ್ರಗಳನ್ನೂ ಮಾಡಿದನು; ಯಕ್ಷಿಣಿ ಗಾರರ ಬಳಿಯಲ್ಲೂ ಮಂತ್ರಜ್ಞರ ಬಳಿಯಲ್ಲೂ ವಿಚಾರಿ ಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸಲು ಆತನ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿದನು.

ಮೀಕನ ೫:೧೨
ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ.

ಯೆಶಾಯನ ೪೭:೧೨
ನಿನ್ನ ಮಾಟಗಳ ಸಂಗಡ ನಿಂತುಕೋ ನಿನ್ನ ಯೌವನದಾರಭ್ಯ ಬೇಸತ್ತು ಅಭ್ಯಾಸಿಸಿರುವ ನಿನ್ನ ಮಂತ್ರತಂತ್ರಗಳನ್ನೂ ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು; ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ನೀನು ಎದು ರಾಗಿ ನಿಲ್ಲಬಹುದು.

ಪ್ರೇಷಿತರ ೮:೧೧-೨೪
[೧೧] ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು.[೧೨] ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು.[೧೩] ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು.[೧೪] ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.[೧೫] ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು.[೧೬] (ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು).[೧೭] ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು.[೧೮] ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು--[೧೯] ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು.[೨೦] ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.[೨೧] ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.[೨೨] ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.[೨೩] ಯಾಕಂದರೆ ನೀನು ಹಾನಿಕರ ವಾದ ವಿಷದಲ್ಲಿಯೂ ದುಷ್ಟತ್ವದ ಬಂಧನದಲ್ಲಿಯೂ ಇರುತ್ತೀಯೆಂದು ನನಗೆ ಕಾಣುತ್ತದೆ ಅಂದನು.[೨೪] ಅದಕ್ಕೆ ಸೀಮೋನನು--ನೀವು ಹೇಳಿರುವ ವಿಷಯ ಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು.

ಆದಿಕಾಂಡ ೧:೨೪-೩೧
[೨೪] ದೇವರು--ಆಯಾ ಜಾತಿಯ ಜೀವಜಂತುಗಳನ್ನೂ ಪಶುಗಳನ್ನೂ ಹರಿದಾಡುವ ಕ್ರಿಮಿಗಳನ್ನೂ ತನ್ನ ಜಾತಿಗನುಸಾರವಾದ ಭೂಮೃಗಗಳನ್ನೂ ಭೂಮಿಯು ಬರಮಾಡಲಿ ಅಂದನು; ಅದು ಹಾಗೆಯೇ ಆಯಿತು.[೨೫] ದೇವರು ಅದರ ಜಾತಿಗನುಸಾರವಾಗಿ ಭೂಮೃಗಗಳನ್ನೂ ಅವುಗಳ ಜಾತಿಗನುಸಾರವಾಗಿ ಪಶುಗಳನ್ನೂ ತನ್ನ ಜಾತಿಗನುಸಾರವಾಗಿ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದನ್ನೂ ಮಾಡಿದನು. ದೇವರು ಅದನ್ನು ಒಳ್ಳೆಯದೆಂದು ನೋಡಿದನು.[೨೬] ತರುವಾಯ ದೇವರು--ನಮ್ಮ ರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯನನ್ನು ಮಾಡೋಣ; ಅವರು ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯ ಮೇಲೆಯೂ ದೊರೆತನಮಾಡಲಿ ಅಂದನು.[೨೭] ಹೀಗೆ ದೇವರು ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಸೃಷ್ಟಿಸಿದನು, ದೇವರರೂಪದಲ್ಲಿ ಆತನು ಅವನನ್ನು ಸೃಷ್ಟಿಸಿದನು. ಆತನು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿಸಿದನು.[೨೮] ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.[೨೯] ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು.[೩೦] ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.[೩೧] ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.

ಕೊರಿಂಥಿಯರಿಗೆ ೧ ೬:೯
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂಬದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ; ಜಾರರು ವಿಗ್ರಹಾರಾಧಕರು ವ್ಯಭಿಚಾರಿಗಳು ವಿಟರು ಪುರುಷಗಾಮಿಗಳು

ಯೊವಾನ್ನನು ೧:೮
ಅವನು ಆ ಬೆಳಕಲ್ಲ. ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡು ವದಕ್ಕೆ ಕಳುಹಿಸಲ್ಪಟ್ಟನು.

ಪ್ರಕಟನೆ ೪:೬-೮
[೬] ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಇತ್ತು. ಸಿಂಹಾಸನದ ಮಧ್ಯದಲ್ಲಿ ಮತ್ತು ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.[೭] ಮೊದಲನೆಯ ಜೀವಿಯು, ಸಿಂಹದಂತಿತ್ತು, ಎರಡ ನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯರ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.[೮] ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಅವುಗಳಿಗೆ ತುಂಬಾ ಕಣ್ಣುಗಳಿದ್ದವು; ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ-- ಇದ್ದಾತನು ಇರುವಾತನೂ ಬರುವಾತನೂ ಸರ್ವಶಕ್ತ ನಾಗಿರುವ ದೇವರಾದ ಕರ್ತನು ಪರಿಶುದ್ಧನು ಪರಿ ಶುದ್ಧನು ಪರಿಶುದ್ಧನು ಎಂದು ಹೇ

ಆದಿಕಾಂಡ ೩:೧೫
ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.

ಪ್ರಕಟನೆ ೧೩:೫
ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

ವಿಮೋಚನಾಕಾಂಡ ೭:೧೧
ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು.

Kannada Bible BSI 2016
Copyright © 2016 by The Bible Society of India. All rights reserved worldwide